Site icon Ullalavani

ಸರಣಿ ಅಪಘಾತ:ಪವಾಡಸದೃಶವಾಗಿ ಪಾರಾದ ಮಹಿಳೆ

ಉಳ್ಳಾಲ್ ನ್ಯೂಸ್ ನೆಟ್ ವರ್ಕ್

ತೊಕ್ಕೊಟ್ಟು: ಸರಣಿ ಅಪಘಾತ ನಡೆದು ಬಸ್ಸಿಗೆ ನಿಂತ ಮಹಿಳೆಗ ರಿಕ್ಷಾ ಗುದ್ದಿ ಅವರು ಪವಾಡಸದೃಶವಾಗಿ ಪಾರಾದ ಘಟನೆ ರಾಷ್ಟ್ರೀಯ ಹೆದ್ದಾರಿ 66 ರ ತೊಕ್ಕೊಟ್ಟು ಜಂಕ್ಷನ್ನಿನಲ್ಲಿ ನಡೆದಿದೆ.

ತೊಕ್ಕೊಟ್ಟು ಜಂಕ್ಷನ್ನಿನಲ್ಲಿ ಹೆದ್ದಾರಿ ಕಾಮಗಾರಿ ನಡೆಯುತ್ತಿದ್ದು, ಕಿರಿದಾದ ರಸ್ತೆಯಲ್ಲಿ ವಾಹನಗಳು ತೆರಳಬೇಕಿದೆ. ಇಲ್ಲಿ ರಿಕ್ಷಾ, ಟಾಟ ಮ್ಯಾಜಿಕ್ ಮತ್ತು ಸರಕು ಸಾಗಾಟದಲಾರಿ ಜತೆಗೆ ಚಲಿಸಿದ ಪರಿಣಾಮ ಮೂರು ವಾಹನಗಳು ಪರಸ್ಪರ ಡಿಕ್ಕಿ ಹೊಡೆದು,ರಿಕ್ಷಾ ರಸ್ತೆಬದಿಯಲ್ಲಿ ಬಸ್ಸಿಗಾಗಿ ಕಾಯುತ್ತಿದ್ದ ಮಹಿಳೆಗೆ ತಾಗಿ ಮಹಿಳೆ ರಸ್ತೆಗೆಸೆಯಲ್ಪಟ್ಟು ಪವಾಡಸದೃಶವಾಗಿ ಪಾರಾಗಿದ್ದಾರೆ. ಘಟನೆಯಿಂದ ರಸ್ತೆಯಲ್ಲಿ ಕೆಲ ಕಾಲ ವಾಹನ ಸಂಚಾರಕ್ಕೆ ಅಡ್ಡಿಯುಂಟಾಗಿದ್ದು, ಉಳ್ಳಾಲ ಪೊಲೀಸರು ಸ್ಥಳಕ್ಕಾಗಮಿಸಿ ಸುಗಮ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

Exit mobile version