Site icon Ullalavani

ಮಂಗಳೂರು ವಿಶ್ವವಿದ್ಯಾಲಯದಲ್ಲಿ ನೂತನ ಕೋರ್ಸ್ ಆರಂಭ

ಉಳ್ಳಾಲ್ ನ್ಯೂಸ್ ನೆಟ್ ವರ್ಕ್

ಕೊಣಾಜೆ: ಎಂಐಎಯು ವಿಕಿರಣ ತಂತ್ರಜ್ಞಾನದ ಕುರಿತೂ ಡಿಪೆÇ್ಲಮಾ ಶಿಕ್ಷಣವನ್ನು ಆರಂಭಿಸಲು ಮತ್ತು ರೇಡಿಯೊಐಸೊಟೋಪ್ ಅಪ್ಲಿಕೇಶನ್ ಮತ್ತು ವಿಕಿರಣ ತಂತ್ರಜ್ಞಾನ ಕೇಂದ್ರದಲ್ಲಿ ಲಭ್ಯವಿರುವ ಸೌಕರ್ಯಗಳನ್ನು ಬಳಸಿಕೊಂಡು ಮಂಗಳೂರು ವಿಶ್ವವಿದ್ಯಾಲಯದ ಸಹಯೋಗದೊಂದಿಗೆ ಸಂಶೋಧನಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಆಸಕ್ತಿಹೊಂದಿದೆ. ಮುಂದಿನ ದಿನಗಳಲ್ಲಿ ಪ್ರತಿಷ್ಠಿತ ರಾಷ್ಟ್ರೀಯ ಸಂಸ್ಥೆಗಳೊಂದಿಗೆ ಸೇರಿಕೊಂಡು ಅವುಗಳ ಸಹಯೋಗದೊಂದಿಗೆ ಶೈಕ್ಷಣಿಕ ಮತ್ತು ಸಂಶೋಧನಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಮಂಗಳೂರು ವಿಶ್ವವಿದ್ಯಾಲಯ ಯೋಜನೆ ರೂಪಿಸುತ್ತಿದೆ. ನೂತನ ಕೋರ್ಸನ್ನು ಆರಂಭಿಸಲು ಸಿದ್ಧತೆಗಳು ನಡೆಯುತ್ತಿದ್ದು ಮುಂಬೈಯ ಬಾಬಾ ಪರಮಾಣು ಸಂಶೋಧನಾ ಕೇಂದ್ರದ ಅನುಮತಿ ದೊರೆತ ತಕ್ಷಣ ಆರಂಭಿಸಲಾಗುವುದು ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಉಪಕುಲಪತಿ ಪ್ರೊ. ಕೆ. ಬೈರಪ್ಪ ಹೇಳಿದ್ದಾರೆ.

ಅವರು ವೈದ್ಯಕೀಯ ಭೌತಶಾಸ್ತ್ರ ವಿಭಾಗದ ಎಂಎಸ್ಸಿ ವಿದ್ಯಾರ್ಥಿಗಳಿಗೆ ತರಬೇತಿ ಪಡೆಯಲು ಮತ್ತು ಇಂಟರ್ನ್‍ಶಿಪ್‍ಗೆ ಸೇರಿಸಿಕೊಳ್ಳುವ ಸಲುವಾಗಿ ಮಂಗಳೂರು ವಿಶ್ವವಿದ್ಯಾಲಯವು ಮಂಗಳೂರು ಇನ್ಸ್ಟಿಟ್ಯೂಟ್ ಆಫ್ ಓಂಕೋಲೊಜಿಯೊಂದಿಗೆ ಪರಸ್ಪರ ಹೊಂದಾಣಿಕೆಯ ಒಪ್ಪಂದದ ವೇಳೆ ಭಾಗವಹಿಸಿ ಮಾತನಾಡಿದರು.

ಮಂಗಳೂರು ವಿಶ್ವವಿದ್ಯಾಲಯದ ನೋಂದಣಾಧಿಕಾರಿ ಪೆÇ್ರ. ಟಿ.ಡಿ ಕೆಂಪರಾಜು ಮತ್ತು ಎಂಐಎಯ ಕಾರ್ಯಕಾರಿ ನಿರ್ದೇಶಕ ಡಾ. ಸುರೇಶ್ ರಾವ್ ಮಂಗಳೂರು ವಿಶ್ವವಿದ್ಯಾಲಯದ ಉಪಕುಲಪತಿ ಉಪಸ್ಥಿತಿಯಲ್ಲಿ ಸಹಿ ಮಾಡಿದರು.

Exit mobile version