ಉಳ್ಳಾಲ್ ನ್ಯೂಸ್ ನೆಟ್ ವರ್ಕ್
ತೊಕ್ಕೊಟ್ಟು : ವಿಭಿನ್ನ ಮತಕ್ಕೆ ಸೇರಿದ ವಿದ್ಯಾರ್ಥಿ ಜೋಡಿ ಐಸ್ ಕ್ರೀಂ ಪಾರ್ಲರಿನಲ್ಲಿರುವ ಬಗ್ಗೆ ಇರುವ ಮಾಹಿತಿ ಪಡದ ಉಳ್ಳಾಲ ಪೊಲೀಸರು ಹಿಂದು ಸಂಘಟನೆಗಳು ದಾಳಿನಡೆಸುವ ಮುನ್ನ ವಶಕ್ಕೆ ಪಡೆದುಕೊಂಡಿರುವ ಘಟನೆ ತೊಕ್ಕೊಟ್ಟು ಜಂಕ್ಷನ್ನಿನಲ್ಲಿ ಬುಧವಾರ ನಡೆದಿದೆ.
ಈ ಬಗ್ಗೆ ಮಾಹಿತಿ ಪಡೆದ ಹಿಂದು ಸಂಘಟನೆ ಕಾರ್ಯಕರ್ತರು ಪಾರ್ಲರ್ ಹೊರಗಡೆ ಜಮಾಯಿಸಲು ಆರಂಭಿಸುತ್ತಿದ್ದಂತೆ ಉಳ್ಳಾಲ ಪೊಲೀಸರಿಗೆ ಮಾಹಿತಿ ರವಾನೆಯಾಗಿತ್ತು. ತಕ್ಷಣ ಕಾರ್ಯಪ್ರವೃತ್ತರಾದ ಉಳ್ಳಾಲ ಪೊಲೀಸರು ಸ್ಥಳಕ್ಕಾಗಮಿಸಿ ಇಬ್ಬರನ್ನು ವಿಚಾರಿಸಿ, ಎಚ್ಚರಿಕೆ ನೀಡಿ ಬಿಟ್ಟು ಬಿಟ್ಟಿದ್ದಾರೆ.