ಉಳ್ಳಾಲ್ ನ್ಯೂಸ್ ನೆಟ್ ವರ್ಕ್
ಉಳ್ಳಾಲ: ಕೇಂದ್ರ ಸರಕಾರದ ಸುತ್ತೋಲೆಯಂತೆ ಸರಕಾರಿ ಇಲಾಖೆಗಳ ಜಂಟಿ ಆಶ್ರಯದೊಂದಿಗೆ ಉಳ್ಳಾಲದಾದ್ಯಂತ ಸರಕಾರಿ ಕಚೇರಿ, ಆಸ್ಪತ್ರೆಗಳನ್ನು ಸ್ವಚ್ಛಗೊಳಿಸಿ, ಅದರ ಮೌಲ್ಯಮಾಪನ ನಡೆಸಲಾಗಿದೆ ಎಂದು ಉಳ್ಳಾಲ ನಗರಸಭೆ ಪೌರಾಯುಕ್ತೆ ರೂಪಾ.ಟಿ.ಶೆಟ್ಟಿ ಹೇಳಿದ್ದಾರೆ.
ಅವರು ಸ್ವಚ್ಛ ಭಾರತ ಅಭಿಯಾನದ ಅಂಗವಾಗಿ ಉಳ್ಳಾಲ ನಗರಸಭೆ ಮತ್ತು ಉಳ್ಳಾಲ ಪೊಲೀಸ್ ಠಾಣೆ ಜಂಟಿ ಆಶ್ರಯದಲ್ಲಿ ಸೋಮವಾರ ಆಯೋಜಿಸಿದ್ದ ಸ್ವಚ್ಛತಾ ಅಭಿಯಾನದಲ್ಲಿ ಭಾಗವಹಿಸಿ ಮಾತನಾಡಿದರು.
ಉಳ್ಳಾಲ ನಗರಸಭೆ ಅಧ್ಯಕ್ಷ ಹುಸೈನ್ ಕುಂಞÂಮೋನು ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷೆ ಚಿತ್ರಾ ಚಂದ್ರಕಾಂತ್, ಎಸಿಪಿ ಕಲ್ಯಾಣಿ ಶೆಟ್ಟಿ, ಉಳ್ಳಾಲ ಎಸ್.ಐ ಭಾರತಿ, ನಗರಸಭೆ ಸದಸ್ಯೆ ಮುಸ್ತಾಫ, ಹಿರಿಯ ಆರೋಗ್ಯ ನಿರೀಕ್ಷಕ ಜಯಶಂಕರ್, ಕಿರಿಯ ಆರೋಗ್ಯ ನಿರೀಕ್ಷಕ ರಾಜೇಶ್, ಆರೋಗ್ಯ ನಿರೀಕ್ಷಕ ಸಾಜಿತ್, ಪೌರ ಕಾರ್ಮಿಕ ಅಂಗಾರ ಮೊದಲಾದವರು ಉಪಸ್ಥಿತರಿದ್ದರು.