Site icon Ullalavani

ಅಕ್ರಮ ಮರಳು ಸಾಗಾಟ:ಇಬ್ಬರ ಬಂಧನ

ಉಳ್ಳಾಲ್ ನ್ಯೂಸ್ ನೆಟ್ ವರ್ಕ್

ಕೊಣಾಜೆ:ಅಕ್ರಮವಾಗಿ ಕೇರಳ ರಾಜ್ಯಕ್ಕೆ ಮರಳು ಸಾಗಾಟ ನಡೆಸುತ್ತಿದ್ದ ಇಬ್ಬರು ಆರೋಪಿಗಳ ಸಹಿತ ಮೂರು ಟಿಪ್ಪರ್ ಲಾರಿಗಳನ್ನು ಕೊಣಾಜೆ ಪೊಲೀಸರು ಗಡಿಪ್ರದೇಶ ನಂದಪಡ್ಪುವಿನಲ್ಲಿ ವಶಕ್ಕೆ ಪಡೆದುಕೊಂಡಿದ್ದಾರೆ.

ದೀಪೇಶ್ ಮತ್ತು ಲಕ್ಷ್ಮಣ ನಾಯ್ಕ್ ಬಂಧಿತರು. ಆರೋಪಿಗಳು ಅಕ್ರಮವಾಗಿ ಮೂರು ಲಾರಿಗಳಲ್ಲಿ ಅಕ್ರಮವಾಗಿ ಮರಳು ಸಾಗಾಟ ನಡೆಸುತ್ತಿದ್ದ ಖಚಿತ ಮಾಹಿತಿ ಪಡೆದ ಕೊಣಾಜೆ ಪೊಲೀಸರು ನಂದರಪಡ್ಪುವಿನಲ್ಲಿ ತಪಾಸಣೆ ನಡೆಸಿ ವಶಕ್ಕೆ ಪಡೆದುಕೊಂಡಿದ್ದಾರೆ.

ಲಾರಿಗಳಲ್ಲಿದ್ದ ಹಲವು ಟನ್ ಗಳಷ್ಟು ಮರಳನ್ನು ಪೊಲೀಸರು ಮುಟ್ಟುಗೋಲು ಹಾಕಿದ್ದಾರೆ. ಕೊಣಾಜೆ ಠಾಣಾಧಿಕಾರಿ ಅಶೋಕ್ ಮತ್ತು ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬಂಧಿಸಿ ವಶಕ್ಕೆ ಪಡೆದುಕೊಂಡಿದ್ದಾರೆ.

Exit mobile version