ಉಳ್ಳಾಲ್ ನ್ಯೂಸ್ ನೆಟ್ ವರ್ಕ್
ಉಳ್ಳಾಲ: ಉಳ್ಳಾಲದ ಮೊಗವೀರಪಟ್ನ ನಿವಾಸಿ ಮೀನುಗಾರ ರಾಜು ಕೊಟ್ಯಾನ್ ಕೊಲೆ ಪ್ರಕರಣದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಉಳ್ಳಾಲ ಮತ್ತು ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಮೊಹಮ್ಮದ್ ಅಸ್ವೀರ್ ಯಾನೆ ಅಚ್ಚು (19), ಅಬ್ದುಲ್ ಮುತ್ತಾಲಿಪ್ ಯಾನೆ ಮುತ್ತು (20) ಹಾಗೂ ಇನ್ನೋರ್ವ ಅಪ್ರಾಪ್ತ ಬಾಲಕ ಬಂಧಿತ ಆರೋಪಿಗಳು.
ಎ.12 ಉಳ್ಳಾಲ ಕೋಟೆಪುರ ಜೆಟ್ಟಿಗೆ ಮೀನುಗಾರಿಕೆಗೆಂದು ತೆರಳುತ್ತಿದ್ದ ಸಂದರ್ಭ ಉಳ್ಳಾಲ ಕೋಟೆಪುರ ಬರಕಾ ಓವರ್ ಸೀಸ್ ಪ್ಯಾಕ್ಟರಿಯ ಸಮೀಪ ದುಷ್ಕರ್ಮಿಗಳು ಬಲವಾದ ಆಯುಧದಿಂದ ತಲೆಗೆ ಜಜ್ಜಿ ಹತ್ಯೆಗೈದಿದ್ದರು. ಆಟವಾಡುತ್ತಿದ್ದ ಮಕ್ಕಳು ಮೃತದೇಹ ಕಂಡು ಪ್ರಕರಣ ಬೆಳಕಿಗೆ ಬಂದಿತ್ತು.
ಮುಂದುವರಿಯುವುದು…………..


