Site icon Ullalavani

ಕ್ರೀಡೆಯಿಂದ ಆತ್ಮವಿಶ್ವಾಸ ಹೆಚ್ಚುತ್ತ್ತದೆ: ಖಾದರ್

ಉಳ್ಳಾಲ್ ನ್ಯೂಸ್ ನೆಟ್ ವರ್ಕ್

ದೇರಳಕಟ್ಟೆ: ಕ್ರೀಡೆಯಿಂದ ಆತ್ಮವಿಶ್ವಾಸದ ಜೊತೆ ಸಮಾಜದಲ್ಲಿ ಎಲ್ಲರನ್ನೂ ಒಗ್ಗೂಡಿಸುವ ಕೆಲಸ ಮಾಡುತ್ತದೆ. ದೇಶದ ಶಕ್ತಿಯಾಗಿರುವ ಯುವಜನತೆ ಜಾತಿ, ಧರ್ಮ, ಬೇಧ ಮರೆತು ಸಾಮರಸ್ಯದ ಜೊತೆ ಸಮಾಜ ಸೇವೆಯೊಂದಿಗೆ ಮುನ್ನಡೆದರೆ ಸೌಹಾರ್ದಯುತ ಸಮಾಜ ಕಟ್ಟಲು ಸಾಧ್ಯ. ಎಂದು ಆರೊಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ.ಖಾದರ್ ಅಭಿಪ್ರಾಯಪಟ್ಟರು.

ಅವರು ಮಂಗಳೂರು ವಿಧಾನ ಸಭಾ ಕ್ಷೇತ್ರ ಯುವ ಕಾಂಗ್ರೆಸ್ ಹಾಗೂ ಡಿಎಫ್‍ಸಿ ದೇರಳಕಟ್ಟೆ ಇದರ ಜಂಟಿ ಆಶ್ರಯದಲ್ಲಿ ಮಾಜಿ ಶಾಸಕ ಯು.ಟಿ.ಫರೀದ್ ಅವರ ಸ್ಮರಣಾರ್ಥ ದೇರಳಕಟ್ಟೆಯಲ್ಲಿ ಆಯೋಜಿಸಿದ್ದ ಮೈಸೂರು ಟ್ರೋಫಿ ಹೊನಲು ಬೆಳಕಿನ ಕ್ರಿಕೆಟ್ ಪಂದ್ಯಾಟದ ಸಭಾ ಕಾರ್ಯಕ್ರಮದಲ್ಲಿ ಬಡರೋಗಿಗಳಿಗೆ ಸಹಾಯ ಧನ ಹಾಗೂ ಸ್ವ ಉದ್ಯೋಗಕ್ಕೆ ಪೆÇ್ರೀತ್ಸಾಹ ನೀಡುವ ನಿಟ್ಟಿನಲ್ಲಿ ಟೈಲರಿಂಗ್ ಯಂತ್ರ ಮತ್ತು ಅಂಗವೈಕಲ್ಯ ಹೊಂದಿದ ವ್ಯಕ್ತಿಗೆ ಗಾಲಿಕುರ್ಚಿ ವಿತರಿಸಿ ಮಾತನಾಡಿದರು.

ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಇಬ್ರಾಹಿಂ ಕೋಡಿಜಾಲ್ ಅದ್ಯಕ್ಷತೆ ವಹಿಸಿದ್ದರು.

ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ, ಉದ್ಯಮಿ ಅಝೀಝ್ ಮೈಸೂರು ಬಾವ, ಕಾಂಗ್ರೆಸ್ ಮುಖಂಡರಾದ ಸದಾಶಿವ ಉಳ್ಳಾಲ್,ಹರ್ಷರಾಜ್ ಮುದ್ಯ, ಶ್ರೀನಿವಾಸ್ ಶೆಟ್ಟಿ, ಸಿ.ಎಂ ಫಾರೂಕ್, ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಸಂತೋಷ್ ಶೆಟ್ಟಿ, ಪ್ರ. ಕಾರ್ಯದರ್ಶಿ ಅಬ್ದುಲ್ ರಹಿಮಾನ್ ಕೋಡಿಜಾಲ್, ಮಂಗಳೂರು ಕ್ಷೇತ್ರ ಯುವ ಕಾಂಗ್ರೆಸ್ ಅಧ್ಯಕ್ಷ ನಝರ್ ಷಾ ಪಟ್ಟೋರಿ, ಮುಡಿಪು ಬ್ಲಾಕ್ ಕಾಂಗ್ರಸ್ ಪ್ರ. ಕಾರ್ಯದರ್ಶಿ ಅಬ್ದುಲ್ ಜಲೀಲ್ ಮೋಂಟುಗೋಳಿ, ತಾಲೂಕು ಪಂಚಾಯತ್ ಮಾಜಿ ಸದಸ್ಯರಾದ ಇಬ್ರಾಹಿಂ ಮೈಸೂರು, ಸತ್ತಾರ್, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಎನ್.ಎಸ್. ಕರೀಂ, ಬೆಳ್ಮ ಗ್ರಾ.ಪಂ.ಅಧ್ಯಕ್ಷೆ ವಿಜಯ ಕೃಷ್ಣ, ಉಪಾಧ್ಯಕ್ಷ ಬಿ.ಎಂ. ಅಬ್ದುಲ್ ಸತ್ತಾರ್, ಸದಸ್ಯ ಕಬೀರ್ ಡಿ, ಸತೀಶ್ ಕುಮಾರ್, ತಾಲೂಕು ಪಂಚಾಯತ್ ಸದಸ್ಯರಾದ ಮಹಮ್ಮದ್ ಮೋನು, ಸಿದ್ದೀಕ್ ತಲಪಾಡಿ, ಅಂಬ್ಲಮೊಗರು ಗ್ರಾಮ ಪಂಚಾಯತ್ ಅಧ್ಯಕ್ಷ ಎಂ.ಎಸ್. ಮಹಮ್ಮದ್ ರಫೀಕ್, ಕೊಣಾಜೆ ಗ್ರಾ.ಪಂ.ಅಧ್ಯಕ್ಷ ಶೌಕತ್ ಆಲಿ, ಸದಸ್ಯ ಚಂದ್ರ, ಬಾಳೆಪುಣಿ ಗ್ರಾ.ಪಂ ಸದಸ್ಯ ಶರೀಫ್, ಸಾಯಿ ಫ್ರೆಂಡ್ಸ್ ಅಧ್ಯಕ್ಷ ಸುನೀಲ್, ಡಿಎಫ್‍ಸಿ ಅಧ್ಯಕ್ಷ ರವಿರಾಜ್ ಶೆಟ್ಟಿ, ಉದ್ಯಮಿ ಸಿದ್ದೀಕ್ ಗ್ಲಾಡ್, ಡಿಎಫ್‍ಸಿಯ ಅಬುಸಾಲಿ, ಆಶ್ರಫ್, ಹಾರೀಸ್ ರೆಂಜಾಡಿ, ಕೋಟೆಕಾರು ಪಟ್ಟಣ ಪಂಚಾಯತ್ ಸದಸ್ಯ ಮೊೈದಿನ್ ಬಾವ, ಝಕಾರಿಯಾ ಮಲಾರ್, ನಿಸಾರ್ ಅಹಮ್ಮದ್ ಉಪಸ್ಥಿತರಿದ್ದರು.
ಸಚಿವ ಯು.ಟಿ.ಖಾದರ್ ಹಾಗೂ ಮೈಸೂರು ಅಝೀಝ್ ಅವರ ತಂಡಗಳ ನಡುವೆ 4 ಓವರ್‍ಗಳ ಕ್ರಿಕೆಟ್ ಪಂದ್ಯಾಟ ಹಮ್ಮಿಕೊಳ್ಳಲಾಗಿತ್ತು. ಸಚಿವರ ತಂಡವು ಕೊನೆಯ ಒಂದು ಬಾಲ್‍ಗೆ ಒಂದು ರನ್ ಅವಶ್ಯಕತೆುತ್ತು. ಈ ಸಂದರ್ಭ ಸಚಿವರು ಆಕರ್ಷಕ ಬ್ಯಾಟಿಂಗ್ ಮೂಲಕ ಒಂದು ರನ್‍ಗಳಿಸಿ ತಂಡಕ್ಕೆ ಜಯಗಳಿಸಿಕೊಟ್ಟರು.

ತಾಲೂಕು ಪಂಚಾಯತ್ ಮಾಜಿ ಸದಸ್ಯ ಮಹಮ್ಮದ್ ಮುಸ್ತಾಫಾ ಸ್ವಾಗತಿಸಿ ಕಾರ್ಯಕ್ರಮ ನಿರ್ವಹಿಸಿದರು.

Exit mobile version