Site icon Ullalavani

ರಿಕ್ಷಾ ಪಲ್ಟಿ: ಚಾಲಕ ಸ್ಥಳದಲ್ಲೇ ಮೃತ್ಯು

ಕೊಣಾಜೆ: ರಿಕ್ಷಾ ಅಪಘಾತಕ್ಕೀಡಾಗಿ ಚಾಲಕ ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಕೊಣಾಜೆ ಠಾಣಾ ವ್ಯಾಪ್ತಿಯ ತೌಡುಗೋಳಿ ಕ್ರಾಸಿನಲ್ಲಿ ಸೋಮವಾರ ಸಂಜೆ ವೇಳೆ ನಡೆದಿದೆ.

ತೌಡುಗೋಳಿ ನಿವಾಸಿ ರಾಜೇಶ್ (39) ಮೃತರು. ಪತ್ನಿ ಹಾಗೂ ಮಗುವಿನ ಜತೆಗೆ ರಿಕ್ಷಾ ಚಲಾಯಿಸಿಕೊಂಡು ತೆರಳುತ್ತಿದ್ದ ರಾಜೇಶ್ ಅವರ ನಿಯಂತ್ರಣ ತಪ್ಪಿ ತೌಡುಗೋಳಿ ಕ್ರಾಸ್ ಸಮೀಪ ರಿಕ್ಷಾ ಪಲ್ಟಿಯಾಗಿದೆ. ಪರಿಣಾಮ ಚಾಲಕ ರಾಜೇಶ್ ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಾಯಾಳು ಪತ್ನಿ ಹಾಗೂ ಮಗುವನ್ನು ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೊಣಾಜೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Exit mobile version