ಜಾನಪದ ವಿದ್ವಾಂಸ ಹಾಗೂ ಹಾವೇರಿಯ ಜಾನಪದ ವಿಶ್ವವಿದ್ಯಾನಿಲಯದ ಕುಲಪತಿಯಾಗಿರುವ ಪ್ರೊ.ಕೆ.ಚಿನ್ನಪ್ಪ ಗೌಡ ಅವರು ಬೆಂಗಳೂರಿನ ಆರ್ಯಭಟ ಸಾಂಸ್ಕøತಿಕ ಸಂಘ(ರಿ) ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ನೀಡುವ ಆರ್ಯಭಟ ಅಂತರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ದೇಶದ ಸಾಧಕರು ಮಾತ್ರವಲ್ಲದೆ ವಿದೇಶಗಳಲ್ಲಿ ನೆಲೆಸಿರುವ ಭಾರತೀಯರ ಸಾಧನೆಯನ್ನು ಗುರುತಿಸಿ ಪ್ರತಿ ವರ್ಷ ಸುಮಾರು 60 ಸಾಧಕರಿಗೆ ಈ ಪ್ರಶಸ್ತಿಯನ್ನು ನೀಡಲಾಗುತ್ತಿದೆ. ಹೀಗೆ ಶಿಕ್ಷಣ ಮತ್ತು ಸಂಶೋಧನಾ ಕ್ಷೇತ್ರದಲ್ಲಿ ಸಾಧನೆಗೈದವರಲ್ಲಿ ಪ್ರೊ.ಕೆ.ಚಿನ್ನಪ್ಪ ಗೌಡ ಅವರನ್ನು ಈ ಪಶಸ್ತಿಗೆ ಆಯ್ಕೆ ಮಾಡಲಾಗಿದ್ದು, ಮೇ.18ರಂದು ಬೆಂಗಳೂರಿನ ಕಲಾಕ್ಷೇತ್ರದಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿಯನ್ನು ನೀಡಲಾಗುವುದು ಎಂದು ಆರ್ಯಭಟ ಸಾಂಸ್ಕøತಿಕ ಸಂಘದ ಸ್ಥಾಪಕ ಅಧ್ಯಕ್ಷರಾದ ಡಾ.ಎಚ್.ಎಲ್.ಎನ್. ರಾವ್ ಅವರು ತಿಳಿಸಿದ್ದಾರೆ.