ಉಳ್ಳಾಲ್ ನ್ಯೂಸ್ ನೆಟ್ ವರ್ಕ್
ಉಳ್ಳಾಲ: ಉಳ್ಳಾಲ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳೆದ ಕೆಲವು ದಿನಗಳಿಂದ ನಡೆಯುತ್ತಿರುವ ಅಹಿತಕರ ಘಟನೆಗಳಿಗೆ ಕಾರಣರಾಗುವ ಎಲ್ಲಾ ಆರೋಪಿಗಳಿಗೆ ಗೂಂಡಾ ಕಾಯ್ದೆಯಡಿ ಕೇಸು ದಾಖಲಿಸಲು ಪೆÇಲೀಸ್ ಇಲಾಖೆಗೆ ಮನವಿ ಮಾಡಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ.ಖಾದರ್ ತಿಳಿಸಿದರು.
ಅವರು ಉಳ್ಳಾಲದ ಅಹಿತಕರ ಘಟನೆಗೆ ಸಂಬಂ„ಸಿದಂತೆ ತಲವಾರು ಹಲ್ಲೆಯಿಂದ ಮೃತಪಟ್ಟ ಚೆಂಬುಗುಡ್ಡೆಯ ಸಫ್ವಾನ್ ಮನೆಗೆ ಮತ್ತು ಹಲ್ಲೆಗೊಳಗಾದ ಧನರಾಜ್ ಮನೆಗೆ ಭೇಟಿ ನೀಡಿ ಮಾತನಾಡಿದರು.
ಉಳ್ಳಾಲ ಕೋಮು ಸಾಮರಸ್ಯವನ್ನು ಕದಡುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವಂತೆ ಸಂಬಂ„ ಪಟ್ಟ ಅ„ಕಾರಿಗಳಿಗೆ ಸೂಚಿಸಿದ್ದು, ಜನರು ಯಾವುದೇ ವದಂತಿಗಳಿಗೆ ಕಿವಿಕೊಡದೆ ಶಾಂತಿ ಕಾಪಾಡಬೇಕು ಮತ್ತು ಸಮಾಜದಲ್ಲಿ ಶಾಂತಿ ಕದಡುವವರ ವಿರುದ್ಧ ಇಲಾಖೆಗೆ ಮಾಹಿತಿ ನೀಡುವ ಕಾರ್ಯ ಮಾಡಬೇಕು ಎಂದರು.


