Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
ಗ್ರಾಮ

ಉಳ್ಳಾಲ,ಉಚ್ಚಿಲ ಕಡಲ್ಕೊರೆತಕ್ಕೆ ಶೀಘ್ರ ತಾತ್ಕಾಲಿಕ ಪರಿಹಾರ

UllalaVaniBy UllalaVaniJuly 1, 2016No Comments3 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಉಳ್ಳಾಲ್ ನ್ಯೂಸ್ ನೆಟ್ ವರ್ಕ್

ಉಚ್ಚಿಲ: ಉಚ್ಚಿಲ ಪ್ರದೇಶಕ್ಕೆ ಶಾಶ್ವತ ಬ್ರೇಕ್‍ವಾಟರ್ ಕಾಮಗಾರಿ ವಿಸ್ತರಣೆಗೆ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಮುಂದಿನ ವರ್ಷದಲ್ಲಿ ಅಲ್ಲಿಯೂ ಕಾಮಗಾರಿಯನ್ನು ಆರಂಭಿಸಲಾಗುವುದು. ಹಾನಿಗೊಳಗಾದವರಿಗೆ ತಕ್ಷಣ ಪರಿಹಾರ ಒದಗಿಸಲು ಜಿಲ್ಲಾಡಳಿತಕ್ಕೆ ಸೂಚಿಸಲಾಗಿದೆ ಎಂದು ನಾಗರಿಕ ಮತ್ತು ಆಹಾರ ಪೂರೈಕೆ ಸಚಿವ ಯು.ಟಿ.ಖಾದರ್ ಹೇಳಿದ್ದಾರೆ.

ಅವರು ಉಚ್ಚಿಲದ ನ್ಯೂಉಚ್ಚಿಲ ಹಾಗೂ ಉಳ್ಳಾಲದ ಕೋಟೆಪುರ, ಕೋಡಿ, ಮೊಗವೀರಪಟ್ನ. ಕೈಕೋ, ಹಿಲೇರಿಯಾನಗರ ಕಡಲ್ಕೊರೆತ ಪ್ರದೇಶಕ್ಕೆ ಗುರುವಾರ ಭೇಟಿ ನೀಡಿ ಮಾತನಾಡಿದರು.

30ullal1

30ullal2

30ullal3

30ullal4

30ullal51983 ರಿಂದ ಉಳ್ಳಾಲದ ಕೋಟೆಪುರ, ಕೈಕೋ, ಮೊಗವೀರಪಟ್ನದಲ್ಲಿ ಕಡಲ್ಕೊರೆತ ಸಂಭವಿಸುತ್ತಲೇ ಬಂದಿದೆ. ಅದಕ್ಕಾಗಿ ಗಾರ್ಬನ್ ಬಾಕ್ಸ್, ಬ್ಲಾಕ್ ಹಾಕುವುದು, ಮಣ್ಣು ಹಾಕುವುದು, ಗನೀ ಬ್ಯಾಗ್‍ನಂತಹ ತಾತ್ಕಾಲಿಕ ಪರಿಹಾರವನ್ನು ಸರಕಾರ ನಡೆಸುತ್ತಲೇ ಬಂದಿತ್ತು. ಆದರೆ ಇಲ್ಲಿನ ಸಮುದ್ರದ ಹೊಡೆತಕ್ಕೆ ಯಾವುದೇ ಪರಿಹಾರ ಫಲಕಾರಿಯಾಗಲಿಲ್ಲ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿಯೇ ಮಾದರಿಯಾದ ಎಡಿಬಿ ಯೋಜನೆಯಡಿ ಶಾಶ್ವತ ತಡೆಗೋಡೆ ಕಾಮಗಾರಿಯನ್ನು ಆರಂಭಿಸಲಾಗಿದೆ.

ಉಳ್ಳಾಲದಲ್ಲಿ ಮಾತ್ರ ಇದ್ದ ಕೊರೆತ ಸದ್ಯ ಸೋಮೇಶ್ವರದ ಉಚ್ಚಿಲದಲ್ಲಿಯೂ ಆರಂಭವಾಗಿದೆ. ಇಲ್ಲಿ ಬಿದ್ದಿರುವ, ಬೀಳುವ ಹಂತದಲ್ಲಿರುವ ಮನೆಗಳ ರಕ್ಷಣೆಗೆ ನಾಳೆಯಿಂದಲೇ ತಾತ್ಕಾಲಿಕ ಪರಿಹಾರ ಕಾಮಗಾರಿಯನ್ನು ಆರಂಭಿಸಲಾಗುವುದು. ನೆಲಸಮವಾಗಿರುವ ಮನೆಗಳಿಗೆ ಸೂಕ್ತ ಪರಿಹಾರ ಒದಗಿಸಲಾಗುವುದು.
ಕೇಂದ್ರಕ್ಕೆ ಪ್ರಸ್ತಾವನೆ: ಶಾಶ್ವತ ತಡೆಗೋಡೆ ಕಾಮಗಾರಿಯ ಯೋಜನೆಯನ್ನು ಸೋಮೇಶ್ವರ ಉಚ್ಚಿಲ ಪ್ರದೇಶಕ್ಕೆ ವಿಸ್ತರಿಸಲು ರೂ.16 ಕೋಟಿಯ ಪ್ರಸ್ತಾವನೆಯನ್ನು ರಾಜ್ಯದಿಂದ ಕೇಂದ್ರಕ್ಕೆ ಕಳುಹಿಸಲಾಗಿದೆ. ಸಿಪಿಡಬ್ಲ್ಯು ಸ್ಕೀಂ ನಡಿ ಯೋಜನೆಗೆ ಒಪ್ಪಿಗೆ ಸಿಕ್ಕ ತಕ್ಷಣ ಕಾಮಗಾರಿಯನ್ನು ವಿಸ್ತರಿಸಲಾಗುವುದು. ಮುಂದಿನ ವರ್ಷದಲ್ಲಿ ಒಪ್ಪಿಗೆ ಸಿಗುವ ವಿಶ್ವಾಸವಿದ್ದು, ಅಲ್ಲಿಯವರೆಗೆ ತಾತ್ಕಾಲಿಕ ಪರಿಹಾರವನ್ನು ಒದಗಿಸಲಾಗುವುದು. ಅಗತ್ಯ ಬಿದ್ದಲ್ಲಿ ನಗರಸಭೆ ಗುರುತಿಸಿ ಇಟ್ಟಿರುವಂತಹ ಪ್ರದೇಶದಲ್ಲಿ ಗಂಜಿ ಕೇಂದ್ರವನ್ನು ತೆರೆಯಲಾಗುವುದು.

ಬೆಂಗರೆ ಬ್ರೇಕ್ ವಾಟರ್‍ನಿಂದ ಸಮಸ್ಯೆ:

ಮಂಗಳೂರಿನ ಬೆಂಗರೆಯಲ್ಲಿ ಬ್ರೇಕ್ ವಾಟರ್ ನಿರ್ಮಾಣವಾದ ಬಳಿಕ ಉಳ್ಳಾಲದಲ್ಲಿ ಕೊರೆತ ದ ಸಮಸ್ಯೆ ಉದ್ಭವಿಸಿದೆ. ಉಳ್ಳಾಲದಲ್ಲಿ ಶಾಶ್ವತ ತಡೆಗೋಡೆ ಕಾವiಗಾರಿ ಆರಂಭಿಸುವ ಮುನ್ನ ಉಳ್ಳಾಲ ಮತ್ತು ಬೆಂಗರೆ ಎರಡು ಕಡೆಗೆ ಹೊಯ್ಗೆ ಹೋಗುವಂತೆ ಮಾಡಿ ಕಾಮಗಾರಿಯನ್ನು ಆರಂಭಿಸಲಾಗಿದೆ. ಕಾಮಗಾರಿಗಳಲ್ಲಿ ಅವ್ಯವಹಾರ ಕಂಡುಬಂದಲ್ಲಿ ತನಿಖೆಗೆ ಆದೇಶಿಸಲಾಗುವುದು. ಪುಣೆ ಸೆಂಟರಿನ ತಜ್ಞರ ತಂಡದ ಆದೇಶದಂತೆ ಹಂತಹಂತವಾಗಿ ಕಾಮಗಾರಿ ನಡೆಯುತ್ತಿದೆ. ಕಾಮಗಾರಿಯಲ್ಲಿ ವಸ್ತುಗಳು ವ್ಯರ್ಥವಾದರೂ ಅದರಿಂದ ಕಂಪೆನಿಗೆ ನಷ್ಟವೇ ಹೊರತು ಸರಕಾರಕ್ಕೆ ನಷ್ಟವಿಲ್ಲ.

ಕಾರವಾರವರೆಗೂ ವಿಸ್ತರಣೆ: ಉಳ್ಳಾಲದಲ್ಲಿ ಶಾಶ್ವತ ಬ್ರೇಕ್ ವಾಟರ್ ಕಾಮಗಾರಿ ಯಶಸ್ವಿಗೊಂಡಲ್ಲಿ ಸುರತ್ಕಲ್, ಕಾಪು, ಕಾರವಾರದವರೆಗೂ ಕಾಮಗಾರಿಯನ್ನು ವಿಸ್ತರಿಸಲಾಗುವುದು.

ಏಷಿಯನ್ ಡೆವಲಪ್‍ಮೆಂಟ್ ಬ್ಯಾಂಕಿನ ಇಂಜಿನಿಯರ್ಸ್ ತಯಾರಿಸಿದ ರೂಪುರೇಷೆಯಂತೆ ರೂಪುರೇಷೆ ತಯಾರಿಸಲಾಗಿದೆ. ಅವರ ರೂಪುರೇಷೆಗೆ ಪುಣೆ ಸೆಂಟರಿನ ತಜ್ಞರ ಸಮಿತಿ ಪರಿಶೀಲನೆ ನಡೆಸಿ ಕೇಂದ್ರ ಸರಕಾರಕ್ಕೆ ವರದಿಯನ್ನು ಸಲ್ಲಿಸುತ್ತದೆ. ಅಲ್ಲಿ ಯೋಜನೆಗೆ ಒಪ್ಪಿಗೆ ಸಿಕ್ಕ ಬಳಿಕ ಕಾಮಗಾರಿ ಆರಂಭವಾಗುತ್ತದೆ. ಪುಣೆ ಸೆಂಟರಿನ ತಜ್ಞರು ಆದೇಶದಂತೆ ಕಾಮಗಾರಿ ನಡೆಸಲಾಗುತ್ತಿದೆ. ಉಳ್ಳಾಲದಲ್ಲಿ ಕಾಮಗಾರಿ ಯಶಸ್ವಿಗೊಂಡಲ್ಲಿ ಸುರತ್ಕಲ್, ಕಾಪು ಹಾಗೂ ಕಾರವಾರದವರೆಗೂ ಯೋಜನೆ ವಿಸ್ತರಣೆಯಾಗುತ್ತದೆ ಎಂದರು.

ಜಿಲ್ಲಾಧಿಕಾರಿ ಎ.ಬಿ.ಇಬ್ರಾಹಿಂ ಮಾತನಾಡಿ ಪ್ರಾಕೃತಿಕ ವಿಕೋಪ ಪರಿಹಾರಕ್ಕಾಗಿ ಸರಕಾರಕ್ಕೆ 5 ಕೋಟಿ ಪ್ರಸ್ತಾವನೆಯನ್ನು ಸಲ್ಲಿಸಲಾಗಿದೆ. ಉಳ್ಳಾಲ ಮತ್ತು ಉಚ್ಚಿಲ ಭಾಗದಲ್ಲಿ ಪರಿಹಾರ ಕಾಮಗಾರಿ ಇಂದಿನಿಂದಲೇ ಆರಂಭವಾಗಲಿದೆ. ತುರ್ತು ಅವಶ್ಯಕತೆ ಇದ್ದಲ್ಲಿ ತಕ್ಷಣ ಅವರಿಗೆ ಬದಲಿ ವ್ಯವಸ್ಥೆಯನ್ನು ಮಾಡಲಾಗುವುದು. ಹಿಂದಿನ ವರ್ಷ ನಡೆಸಿದ ಗಂಜಿ ಕೇಂದ್ರ ಯಾವುದೇ ಉಪಯೋಗಕ್ಕೆ ಬಂದಿರಲಿಲ್ಲ ಎಂದರು.

ಈ ಸಂದರ್ಭ ಉಳ್ಳಾಲ ನಗರಸಭೆ ಅಧ್ಯಕ್ಷ ಹುಸೈನ್ ಕುಂಞÂಮೋನು, ತಾಲೂಕು ಪಂಚಾಯಿತಿ ಸದಸ್ಯ ರವಿಶಂಕರ್, ನಗರಸಭೆ ಪೌರಾಯುಕ್ತೆ ರೂಪ.ಟಿ.ಶೆಟ್ಟಿ, ಬಂದರು ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಮೂರೇ ದಿನದಲ್ಲಿ ರೇಷನ್ ಕಾರ್ಡು
ಸದ್ಯ ರೇಷನ್ ಕಾರ್ಡು ವಿತರಣೆಯಲ್ಲಿ ಜನ ಗೊಂದಲವಾಗಿದ್ದಾರೆ. ಕರೆಂಟ್ ಬಿಲ್, ಆರ್.ಆರ್ ನಂಬರ್ ಸಹಿತ ಹಲವು ದಾಖಲೆಗಳು ನೀಡಿ ಅರ್ಜಿ ಕೊಟ್ಟರೂ ಕಾಯುವ ಸ್ಥಿತಿಯಿತ್ತು. ಆದರೆ ಮುಂದಿನ ಮೂರು ತಿಂಗಳಲ್ಲಿ ಮೂರೇ ದಿನದಲ್ಲಿ ಪಡಿತರ ಚೀಟಿ ಸಿಗುವಂತಹ ಯೋಜನೆ ರೂಪಿಸಲಾಗುವುದು. ಕೇವಲ ಆಧಾರ್ ಕಾರ್ಡಿನ ಲಿಂಕ್‍ನಡಿ ಮೂರು ದಿನಗಳಲ್ಲಿ ಅರ್ಜಿ ನೀಡಿ ಸಿಗುವಂತಹ ವ್ಯವಸ್ಥೆ ಕಲ್ಪಿಸಲಾಗುವುದು. ಎಪಿಎಲ್ ಕಾರ್ಡು ಪಡೆಯುವವರು ಖುದ್ದು ಅವರೇ ಆನ್ ಲೈನ್ ಮೂಲಕ ಪಡೆಯುವ ವ್ಯವಸ್ಥೆ ಹಾಗೂ ಬಿಪಿಎಲ್ ಕಾರ್ಡುದಾರರಿಗೆ ಆರ್ಥಿಕತೆಯನ್ನು ಪರಿಶೀಲಿಸಿ ಕಾರ್ಡನ್ನು ವಿತರಿಸಲಾಗುವುದು. ಬೋಗಸ್ ಕಾರ್ಡುಗಳನ್ನು ಹಾಗೂ ಪಡಿತರದಲ್ಲಿ ನಡೆಯುವ ಅವ್ಯವಹಾರಗಳನ್ನು ನಿಲ್ಲಿಸಲು ಜನಸಾಮಾನ್ಯರು ಕೈಜೋಡಿಸಬೇಕಿದೆ. ಕಿಡ್ನಿ ಹಾಗೂ ಕ್ಯಾನ್ಸರ್ ರೋಗಿಗಳಿಗೆ ಬಿಪಿಎಲ್ ಕಾರ್ಡಿನ ವ್ಯವಸ್ಥೆಯನ್ನು ಮಾಡಲಾಗುವುದು ಎಂದು ಖಾತೆ ಬದಲಾಯಿಸಿಕೊಂಡು ಸ್ವಕ್ಷೇತ್ರಕ್ಕೆ ಪ್ರಥಮ ಬಾರಿ ಭೇಟಿ ನೀಡಿದ ಸಚಿವ ಖಾದರ್ ರಾಜ್ಯಕ್ಕೆ ಭರವಸೆ ನೀಡಿದರು.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

June 23, 2026

ಸ್ವಸ್ತಿಕಾ ಅವಾರ್ಡ್ಸ್ ನೈಟ್–2026ರಲ್ಲಿ ‘ಬ್ರಿಲಿಯಂಟ್ ಸ್ವಸ್ತಿಕನ್’ ಪ್ರಶಸ್ತಿ ಪಡೆದ ಉಳ್ಳಾಲದ ಯುವ ಪ್ರತಿಭೆ ತನ್ಮಯಿ

June 23, 2026

ಖಾಜಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನಕ್ಕೆ ಉಳ್ಳಾಲ ಸೆಂಟ್ರಲ್ ಕಮಿಟಿ ಟ್ರಸ್ಟ್ ಸಂತಾಪ

June 23, 2026
Leave A Reply

Advertise
ಸಂಪರ್ಕಿಸಿ

ಕರ್ನಾಟಕದಾದ್ಯಂತ ಆರೋಗ್ಯ ಇಲಾಖೆಯಲ್ಲಿ ಮೆಗಾ ನೇಮಕಾತಿ: ಸಾರ್ವಜನಿಕ ಆರೋಗ್ಯ ಸೇವೆ ಬಲಪಡಿಸಲು ಮಹತ್ವದ ಹೆಜ್ಜೆ

June 11, 2026

ರಾಜ್ಯದಲ್ಲಿ ಖಾಸಗಿ ಅಸ್ಪತ್ರೆಯಲ್ಲಿ ಆಯುಷ್ಮಾನ್ ಯೋಜನೆ ಸಮರ್ಪಕ ಜಾರಿಗೆ ಜ್ಯಾರಿ ಆಗದಿದ್ದರೆ ಜಿಲ್ಲೆಯ ಅರೋಗ್ಯಧಾರಿಗಳ ಮೇಲೆ ಕ್ರಮ :- ಅರೋಗ್ಯ ಸಚಿವ ಯು.ಟಿ ಖಾದರ್

June 9, 2026

ಫೀಲ್ಡ್ ಗೆ ಇಳಿದ ಯು.ಟಿ. ಖಾದರ್ – ಸರ್ಕಾರಿ ಆಸ್ಪತ್ರೆ ವೈದ್ಯರಿಗೆ ಕ್ಲಾಸ್…!

June 5, 2026

ವೆನ್ಲಾಕ್ ಆಸ್ಪತ್ರೆಯಲ್ಲಿ ಮನೋವೈದ್ಯರು ಮತ್ತು ಕ್ಲಿನಿಕಲ್ ಸೈಕಾಲಜಿಸ್ಟ್‌ಗಳ ತೀವ್ರ ಕೊರತೆ – ಬಡ ರೋಗಿಗಳ ನಿರ್ಲಕ್ಷ್ಯ ಯಾಕೆ ಎಂದು ಸಾರ್ವಜನಿಕರ ಪ್ರಶ್ನೆ

May 26, 2026
All News

By UllalaVaniJune 23, 20260

ಜೂನ್ 25ರಂದು ಮಂಗಳೂರಿಗೆ ಬಾಲಿವುಡ್ ಬಾದ್‌ಶಾ ಶಾರುಖ್ ಖಾನ್; ರೋಹನ್ ಕಾರ್ಪೊರೇಷನ್‌ನ ‘ಅನ್ ಈವಿನಿಂಗ್ ವಿತ್ ಶಾರುಖ್ ಖಾನ್’ ಕಾರ್ಯಕ್ರಮ…

ಸ್ವಸ್ತಿಕಾ ಅವಾರ್ಡ್ಸ್ ನೈಟ್–2026ರಲ್ಲಿ ‘ಬ್ರಿಲಿಯಂಟ್ ಸ್ವಸ್ತಿಕನ್’ ಪ್ರಶಸ್ತಿ ಪಡೆದ ಉಳ್ಳಾಲದ ಯುವ ಪ್ರತಿಭೆ ತನ್ಮಯಿ

June 23, 2026

ತಮಿಳುನಾಡು ವಿಧಾನಸಭೆಯಲ್ಲಿ ವಿಜಯ್ ಅವರ ಕೈ ಸನ್ನೆ- ಡಿಎಂಕೆ ಸಭಾತ್ಯಾಗ

June 23, 2026

ಉಡುಪಿಯಲ್ಲಿ ದೇವಾಡಿಗ ಸಮಾಜದ ಮಹಾ ಅಧಿವೇಶನ-2026: ಪಾವಂಜೆಯಲ್ಲಿ ಪೂರ್ವಭಾವಿ ಸಭೆ

June 23, 2026
1 2 3 … 1,978 Next
Automatic YouTube Gallery

ಉಡುಪಿಯಲ್ಲಿ ದೇವಾಡಿಗ ಸಮಾಜದ ಮಹಾ ಅಧಿವೇಶನ 2026-ಪೂರ್ವಬಾವಿ ಸಭೆ

ಉಡುಪಿಯಲ್ಲಿ ನಡೆಯಲಿದೆ ದೇವಾಡಿಗ ಸಮಾಜದ ಮಹಾ ಅಧಿವೇಶನ 2026; ಇದರ ಹಿನ್ನಲೆ ಪಾವಂಜೆಯಲ್ಲಿ ಪೂರ್ವಬಾವಿ ಸಭೆ

ಜನಬಲವೇ ಸಂಘಟನೆಯ ದೊಡ್ಡ ಶಕ್ತಿ: ರವಿ ದೇವಾಡಿಗ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ...
ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಉಡುಪಿಯಲ್ಲಿ ದೇವಾಡಿಗ ಸಮಾಜದ ಮಹಾ ಅಧಿವೇಶನ 2026-ಪೂರ್ವಬಾವಿ ಸಭೆ
Now Playing
ಉಡುಪಿಯಲ್ಲಿ ದೇವಾಡಿಗ ಸಮಾಜದ ಮಹಾ ಅಧಿವೇಶನ 2026-ಪೂರ್ವಬಾವಿ ಸಭೆ
ಉಡುಪಿಯಲ್ಲಿ ನಡೆಯಲಿದೆ ದೇವಾಡಿಗ ಸಮಾಜದ ಮಹಾ ಅಧಿವೇಶನ 2026; ಇದರ ಹಿನ್ನಲೆ ...
ಉಡುಪಿಯಲ್ಲಿ ನಡೆಯಲಿದೆ ದೇವಾಡಿಗ ಸಮಾಜದ ಮಹಾ ಅಧಿವೇಶನ 2026; ಇದರ ಹಿನ್ನಲೆ ಪಾವಂಜೆಯಲ್ಲಿ ಪೂರ್ವಬಾವಿ ಸಭೆ

ಜನಬಲವೇ ಸಂಘಟನೆಯ ದೊಡ್ಡ ಶಕ್ತಿ: ರವಿ ದೇವಾಡಿಗ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ...
ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಚಾಲಕ ಅಸ್ವಸ್ಥಗೊಂಡ ಪರಿಣಾಮ ದೇರಳಕಟ್ಟೆಯಲ್ಲಿ ಬಸ್ ಅ#ಪಘಾ*ತ..!!
Now Playing
ಚಾಲಕ ಅಸ್ವಸ್ಥಗೊಂಡ ಪರಿಣಾಮ ದೇರಳಕಟ್ಟೆಯಲ್ಲಿ ಬಸ್ ಅ#ಪಘಾ*ತ..!!
ದೇರಳಕಟ್ಟೆಯಲ್ಲಿ ಬಸ್ ಅ#ಪಘಾ*ತ; ಚಾಲಕ ಅಸ್ವಸ್ಥಗೊಂಡ ಪರಿಣಾಮ ಡಿವೈಡರ್ ಏರಿದ ಖಾಸಗಿ ...
ದೇರಳಕಟ್ಟೆಯಲ್ಲಿ ಬಸ್ ಅ#ಪಘಾ*ತ; ಚಾಲಕ ಅಸ್ವಸ್ಥಗೊಂಡ ಪರಿಣಾಮ

ಡಿವೈಡರ್ ಏರಿದ ಖಾಸಗಿ ಬಸ್..!

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected ...
with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version