Site icon Ullalavani

ಭೀಕರ ಸರಣಿ ಅಪಘಾತ: ಬೈಕ್ ಸವಾರ ಸಾವು

ಉಳ್ಳಾಲ್ ನ್ಯೂಸ್ನೆಟ್ ವರ್ಕ್

ಅಡ್ಕ: ಕಾರು, ಬಸ್ಸು ಮತ್ತು ಬೈಕ್ ಮಧ್ಯೆ ನಡೆದ ಭೀಕರ ಸರಣಿ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಕೋಟೆಕಾರು ಬಳಿಯ ಅಡ್ಕ ಎಂಬಲ್ಲಿ ಶುಕ್ರವಾರ ಬೆಳಿಗ್ಗೆ ಸಂಭವಿಸಿದೆ.

ಮಾಡೂರು ಕೊಂಡಾಣದ ಸಾಯಿಧಾಮ ಬಡಾವಣೆಯ ನಿವಾಸಿ ನವೀನ್(51) ಮೃತ ದುರ್ದೈವಿ. ಮಂಗಳೂರು ಕಡೆಯಿಂದ ಕೇರಳದ ಕಡೆಗೆ ಅತೀ ವೇಗವಾಗಿ ತೆರಳುತ್ತಿದ್ದ ಇನೋವಾ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ವಿಭಾಜಕಕ್ಕೆ ಹೊಡೆದು ಪಲ್ಟಿಯಾಗಿ ರಸ್ತೆಯ ಇನ್ನೊಂದು ಬದಿಯಲ್ಲಿಚಲಿಸುತ್ತಿದ್ದ ಬೈಕಿಗೆ ಡಿಕ್ಕಿಯಾಗಿದೆ. ಈ ವೇಳೆ ತಲಪಾಡಿಯಿಂದ ಸ್ಟೇಟ್‍ಬ್ಯಾಂಕಿಗೆ ತೆರಳುತ್ತಿದ್ದ ಬಸ್ಸಿನ ಚಕ್ರದಡಿಗೆ ಬೈಕ್ ಬಿದ್ದು ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ನವೀನ್ ಮಂಗಳೂರಿನಲ್ಲಿ ಈಜು ತರಬೇತುದಾರರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಚಾಲಕ ಸಹಿತÀ ಮೂರು ಮಂದಿ ಇದ್ದು, ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಉಳ್ಳಾಲ ಠಾಣಾ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.

Exit mobile version