ಮೂಡುಬಿದಿರೆ, ಜು. 23 :ಮೂಡುಬಿದಿರೆ ಪಟ್ಟಣದ ರತನ್ ಗ್ಯಾರೇಜ್ ಬಳಿ ಬುಧವಾರ ಸಂಜೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ನಿವೃತ್ತ ಶಿಕ್ಷಕರೊಬ್ಬರು ಸಾವನ್ನಪ್ಪಿದ್ದಾರೆ. ಮೃತರನ್ನು ವೇಣುಗೋಪಾಲ್ ಕಾಲೋನಿಯ ನಿವಾಸಿ ಜಿ.ಕೆ. ಭಟ್ (ಗೋಪಾಲ್ ಕೃಷ್ಣ ಭಟ್) ಎಂದು ಗುರುತಿಸಲಾಗಿದೆ.ಪ್ರತ್ಯಕ್ಷದರ್ಶಿಗಳ ಪ್ರಕಾರ, ಭಟ್ ಇತರ ಪ್ರಯಾಣಿಕರೊಂದಿಗೆ ಮೂಡುಬಿದಿರೆಯ ಕಡೆಗೆ ಆಟೋರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದಾಗ, ಚಾಲಕ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹಠಾತ್ತನೆ ಬ್ರೇಕ್ ಹಾಕಿದ್ದಾನೆ ಎಂದು ವರದಿಯಾಗಿದೆ. ಹಠಾತ್ ಬ್ರೇಕ್ ಹಾಕಿದ್ದರಿಂದ ಆಟೋರಿಕ್ಷಾ ಪಲ್ಟಿಯಾಗಿದೆ.ಪರಿಣಾಮ ಭಟ್ ವಾಹನದಿಂದ ಹೊರಗೆ ಎಸೆಯಲ್ಪಟ್ಟರು, ಅವರಿಗೆ ಗಂಭೀರ ಗಾಯಗಳಾಗಿದ್ದವು. ಅವರನ್ನು ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಆದರೆ ವೈದ್ಯಕೀಯ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟರು. ಭಟ್ ನಿವೃತ್ತ ಶಿಕ್ಷಕ ಮತ್ತು ಹಿರಿಯ ಆರ್‌ಎಸ್‌ಎಸ್ ಕಾರ್ಯಕರ್ತರಾಗಿದ್ದರು. ಅವರು ಪತ್ನಿ ಮತ್ತು ಮಗಳನ್ನು ಅಗಲಿದ್ದಾರೆ.ಆಟೋರಿಕ್ಷಾವನ್ನು ಮರಿಯಾಡಿ ನಿವಾಸಿ ಅಹ್ಮದ್ ಚಲಾಯಿಸುತ್ತಿದ್ದರು. ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.
Author: UllalaVani
ಸುಳ್ಯ: ಕೌಟುಂಬಿಕ ಕಿರುಕುಳ ಹಾಗೂ ಮನಸ್ತಾಪದ ಆರೋಪ ಹಿನ್ನೆಲೆಯಲ್ಲಿ ವಿವಾಹಿತೆಯೊಬ್ಬಳು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಪ್ರಕರಣದಲ್ಲಿ ಕೊಲೆ ಮಾಡಿರುವ ದೂರಿನ ಮೇರೆಗೆ, ಆಕೆಯ ಮಾವ, ಅತ್ತೆ ಹಾಗೂ ನಾದಿನಿ ಸೇರಿ ಮೂವರು ಆರೋಪಿಗಳನ್ನು ಸುಳ್ಯ ಠಾಣೆ ಪೊಲೀಸರು ಬುಧವಾರ ಬಂಧಿಸಿದ್ದಾರೆ. ಪುತ್ತೂರು ತಾಲೂಕಿನ ಕೆದಂಬಾಡಿ ನಿವಾಸಿ ಜುಬೈದಾ (43) ಎಂಬುವರ ಮಗಳು ಫಾತಿಮತ್ ನಿಶಾನ ಮೃತರು. ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತಳ ಮಾವ ಸಿ.ಪಿ. ಅಲವಿ (54), ಅತ್ತೆ ಅಯಿಷಾ ಸಿ.ಎ. ಹಾಗೂ ನಾದಿನಿ ಫಸಿಲಾ ಸಿ.ಎ. (29) ಎಂಬುವರನ್ನು ಪೊಲೀಸರು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ. ಪ್ರಕರಣದ ಹಿನ್ನೆಲೆ: ನಾಲ್ಕು ವರ್ಷಗಳ ಹಿಂದೆ ಫಾತಿಮತ್ ನಿಶಾನ ಅವರ ವಿವಾಹ ನೆರವೇರಿತ್ತು. ಜುಲೈ 18, 2026ರಂದು ರಾತ್ರಿ ನಿಶಾನ ಅವರು ತಮ್ಮ ತಾಯಿ ಜುಬೈದಾ ಅವರಿಗೆ ಫೋನ್ ಮಾಡಿ ಮಾತನಾಡುವಾಗ, ಗಂಡನ ಮನೆಯಲ್ಲಿ ಮಾವ ಅಲವಿ, ಅತ್ತೆ ಆಯಿಷಾ ಹಾಗೂ ನಾದಿನಿ ಫಸೀಲಾ ತನಗೆ ಮಾನಸಿಕ ಮತ್ತು ದೈಹಿಕವಾಗಿ ತೀವ್ರ ಕಿರುಕುಳ ನೀಡುತ್ತಿದ್ದಾರೆಂದು ಅಳಲು ತೋಡಿಕೊಂಡಿದ್ದರು. ತಾಯಿ-ಮಗಳ ಸಂಭಾಷಣೆ ನಡೆಯುತ್ತಿದ್ದಂತೆಯೇ…
ಬಂಟ್ವಾಳ, ಜು. 23 ; ಬರಿಮಾರು ಸಮೀಪದ ಕಲ್ಲೆಟ್ಟಿ ಶ್ರೀ ಕನಲ್ತಾಯ ದೈವಸ್ಥಾನದ ಬಳಿ ಬುಧವಾರ ಸಂಜೆ ಚಲಿಸುತ್ತಿದ್ದ ಶಾಲಾ ಬಸ್ ಮೇಲೆ ಬೃಹತ್ ಮರವೊಂದು ಉರುಳಿ ಬಿದ್ದ ಪರಿಣಾಮ ಯುಕೆಜಿ ವಿದ್ಯಾರ್ಥಿನಿಯೊಬ್ಬಳು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಮೃತ ವಿದ್ಯಾರ್ಥಿನಿಯನ್ನು ಕಲ್ಲಡ್ಕದ ಶ್ರೀ ರಾಮ ಶಾಲೆಯ ವಿದ್ಯಾರ್ಥಿನಿ ಪೆರ್ನೆ ನಿವಾಸಿ ಚಂದ್ರಶೇಖರ್ ಅವರ ಪುತ್ರಿ ಚಿರನ್ವಿ (5) ಎಂದು ಗುರುತಿಸಲಾಗಿದೆ. ಪ್ರಾಥಮಿಕ ವರದಿಗಳ ಪ್ರಕಾರ, ಇತರ ನಾಲ್ಕು ಮಕ್ಕಳು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.ಶಾಲಾ ಸಮಯದ ನಂತರ ವಿದ್ಯಾರ್ಥಿಗಳನ್ನು ಮನೆಗೆ ಕರೆದೊಯ್ಯುತ್ತಿದ್ದಾಗ ಈ ದುರಂತ ಸಂಭವಿಸಿದೆ. ಬಲವಾದ ಗಾಳಿ ಮತ್ತು ಭಾರೀ ಮಳೆಯಿಂದಾಗಿ ರಸ್ತೆ ಬದಿಯ ಬೃಹತ್ ಮರವು ಇದ್ದಕ್ಕಿದ್ದಂತೆ ಬಸ್ ಮೇಲೆ ಬಿದ್ದು, ಅದರ ಮುಂಭಾಗ ಸಂಪೂರ್ಣವಾಗಿ ಜಖಂ ಆಗಿದೆ.ಘಟನೆ ಸಂಭವಿಸಿದ ತಕ್ಷಣ, ಸ್ಥಳೀಯರು ಸ್ಥಳಕ್ಕೆ ಧಾವಿಸಿ, ರಕ್ಷಣಾ ಕಾರ್ಯಾಚರಣೆಯನ್ನು ಆರಂಭಿಸಿ, ಮಕ್ಕಳನ್ನು ನಜ್ಜುಗುಜ್ಜಾದ ವಾಹನದಿಂದ ಹೊರತೆಗೆಯಲಾಗಿದೆ. ತೀವ್ರವಾಗಿ ಗಾಯಗೊಂಡ ಚಿರನ್ವಿಯನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಚಿಕಿತ್ಸೆಗೆ ಸ್ಪಂದಿಸದೆ ಬಾಲಕಿ ಕೊನೆಯುಸಿರೆಳೆದಿದ್ದಾಳೆ. ಗಾಯಗೊಂಡ…
ಮಂಗಳೂರು : ತ್ಯಾಖಾ ಅಹ್ಮದ್ ಮುಸ್ಲಿಯಾರ್ ಅವರ ನಿಧನದಿಂದ ತೆರವಾದ ದಕ್ಷಿಣ ಕನ್ನಡ ಜಿಲ್ಲಾ ಖಾಝಿ ಹುದ್ದೆಗೆ ಪಾಣಕ್ಕಾಡ್ ಸೈಯ್ಯದ್ ನಾಸರ್ ಅಬ್ದುಲ್ ಹಯ್ ಶಿಹಾಬುದ್ದೀನ್ ತಂಙಳ್ ಅವರು ಬುಧವಾರ ಅಧಿಕಾರ ಸ್ವೀಕರಿಸಿದರು. ಕೇರಳದ ಮಲಪ್ಪುರಂ ಜಿಲ್ಲೆಯ ಪೂವಾಡ್ ಮೂಲದ ತಂಜಳ್ ಅವರು ಧಾರ್ಮಿಕ ಶಿಕ್ಷಣ ಕ್ಷೇತ್ರದಲ್ಲಿ ದೀರ್ಘ ಅನುಭವ ಹೊಂದಿದ್ದು, ಹಲವು ಮಸೀದಿಗಳು ಹಾಗೂ ಶಿಕ್ಷಣ ಸಂಸ್ಥೆಗಳಲ್ಲಿ ಖತೀಬ್, ಮುದರ್ರಿಸ್ ಮತ್ತು ಖಾಝಿಯಾಗಿ ಸೇವೆ ಸಲ್ಲಿಸಿದ್ದಾರೆ. 2009ರಿಂದ ಕಲ್ಲಿಕೋಟೆಯ ಗ್ರಾಂಡ್ ಖಾಝಿಯಾಗಿ ಕಾರ್ಯನಿರ್ವಹಿಸುತ್ತಿರುವ ಅವರು, ಪ್ರಸ್ತುತ ಕಲ್ಲಿಕೋಟೆ, ಮಲಪ್ಪುರಂ, ಪಾಲಕ್ಕಾಡ್ ಹಾಗೂ ತ್ರಿಶೂರ್ ಜಿಲ್ಲೆಗಳ 370ಕ್ಕೂ ಹೆಚ್ಚು ಮೊಹಲ್ಲಾಗಳ ಖಾಝಿಯಾಗಿದ್ದಾರೆ. ವಯನಾಡಿನ ಇಮಾಮ್ ಗಝಾಲಿ ಅಕಾಡೆಮಿ ಹಾಗೂ ರಶೀದಿಯಾ ಅರಬಿಕ್ ಕಾಲೇಜಿನ ಪ್ರಾಂಶುಪಾಲರಾಗಿರುವ ತಂಜಳ್ ಅವರು, ಸುನ್ನಿ ಮಹಲ್ಸ್ ಫೆಡರೇಶನ್, ಜಿಲ್ಲಾ ಮಸ್ಲಹತ್ ಸಮಿತಿ ಸೇರಿದಂತೆ ಹಲವು ಧಾರ್ಮಿಕ ಹಾಗೂ ಸಾಮಾಜಿಕ ಸಂಘಟನೆಗಳಲ್ಲಿ ಪ್ರಮುಖ ಜವಾಬ್ದಾರಿಗಳನ್ನು ನಿರ್ವಹಿಸುತ್ತಿದ್ದಾರೆ. ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಸಯ್ಯದುಲ್ ಉಮ್ಮ ಸ್ವಾಧಿಕ್ ಅಲಿ ಶಿಹಾಬ್ ತಂಜಳ್, ಸಮಸ್ತ…
ಚಿಕ್ಕಬಳ್ಳಾಪುರ, ಜು. 22 : ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂಪೂರ್ಣ ಜವಾಬ್ದಾರಿ ಹೊರಬೇಕು ಎಂದು ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಆಗ್ರಹಿಸಿದರು. ಚಿಕ್ಕಬಳ್ಳಾಪುರ ಜಿಲ್ಲಾ ಪ್ರವಾಸದ ವೇಳೆ ಜಿಲ್ಲಾ ಯೂತ್ ಕಾಂಗ್ರೆಸ್ ವತಿಯಿಂದ ಹಮ್ಮಿಕೊಂಡಿದ್ದ ʼನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ’ ಪ್ರತಿಭಟನೆಯಲ್ಲಿ ಅವರು ಭಾಗವಹಿಸಿ ಮಾತನಾಡಿದ ಅವರು, ಪ್ರಶ್ನೆಪತ್ರಿಕೆಗಳು ಸೋರಿಕೆಯಾಗುತ್ತವೆ ಎಂದರೆ ಏನರ್ಥ? ಇದರಿಂದ ವಿದ್ಯಾರ್ಥಿಗಳ ಭವಿಷ್ಯ ಹಾಳಾಗುತ್ತದೆ ಎಂಬ ಅರಿವಿಲ್ಲವೇ? ಇದನ್ನು ಪ್ರಶ್ನಿಸುವುದು ನಮ್ಮ ಹಕ್ಕು ಎಂದು ಎಂದು ಆಕ್ರೋಶ ಹೊರಹಾಕಿದ್ದಾರೆ. ನಿನ್ನೆ ನವದೆಹಲಿಯಲ್ಲಿ ಶಾಂತಿಯುತವಾಗಿ ಪ್ರತಿಭಟಿಸುತ್ತಿದ್ದ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಸೇರಿದಂತೆ ಇತರೆ ಕಾಂಗ್ರೆಸ್ ಮುಖಂಡರನ್ನು ಬಂಧಿಸಿದ್ದಾರೆ. ವಿದ್ಯಾರ್ಥಿಗಳ ಪರವಾಗಿ ನಿಂತು ಪ್ರಶ್ನಿಸುವವರನ್ನೇ ಬಂಧಿಸುವುದು ಎಷ್ಟರ ಮಟ್ಟಿಗೆ ಸರಿ ಎಂದು ಪ್ರಶ್ನಿಸಿದರು.ಮೊದಲು CET ಪರೀಕ್ಷೆಯನ್ನು ರಾಜ್ಯ ಸರ್ಕಾರವೇ ನಡೆಸುತ್ತಿತ್ತು. ಆ ಸಮಯದಲ್ಲಿ ಯಾವುದೇ ಸಮಸ್ಯೆಯಾಗದಂತೆ ಪರೀಕ್ಷೆ ನಡೆಯುತ್ತಿತ್ತು. ನಾನು ಉನ್ನತ ಶಿಕ್ಷಣ ಸಚಿವನಾಗಿದ್ದಾಗಲೂ ಅನೇಕ ವಿದ್ಯಾರ್ಥಿಗಳು…
ಮಂಗಳೂರು, ಜು.22: ದೆಹಲಿಯಲ್ಲಿ ‘ಸಂಸತ್ ಮಾರ್ಚ್’ ನಡೆಸುತ್ತಿದ್ದ ಶಾಂತಿಯುತ ವಿದ್ಯಾರ್ಥಿಗಳ ಮೇಲೆ ಪೊಲೀಸರು ಲಾಠಿಚಾರ್ಜ್ ನಡೆಸಿ ಕಣ್ಣೀರಿನ ಅನಿಲ ಪ್ರಯೋಗ ಮಾಡಿರುವ ಘಟನೆಗೆ ಅಖಿಲ ಭಾರತ ಕ್ರೈಸ್ತ ಒಕ್ಕೂಟ (AICU) ಕರ್ನಾಟಕ ರಾಜ್ಯ ಘಟಕ ತೀವ್ರ ಖಂಡನೆ ವ್ಯಕ್ತಪಡಿಸಿದೆ. ಎಐಸಿಯು ಕರ್ನಾಟಕ ರಾಜ್ಯದ ಅಧ್ಯಕ್ಷ ಅಲ್ವಿನ್ ಡಿ’ಸೋಜಾ, ಪಾನೀರ್ ಅವರು ಪ್ರಕಟಣೆ ನೀಡಿ, ಶಿಕ್ಷಣ ವ್ಯವಸ್ಥೆಯಲ್ಲಿ ಅಗತ್ಯ ಸುಧಾರಣೆಗಳನ್ನು ಒತ್ತಾಯಿಸಿ ಪ್ರಜಾಪ್ರಭುತ್ವದ ರೀತಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಬಲಪ್ರಯೋಗ ನಡೆಸಿರುವುದು ಪ್ರಜಾಪ್ರಭುತ್ವದ ಮೌಲ್ಯಗಳಿಗೆ ವಿರುದ್ಧವಾದ ಕ್ರಮ ಎಂದು ಹೇಳಿದ್ದಾರೆ. ದೇಶದ ಭವಿಷ್ಯವಾಗಿರುವ ವಿದ್ಯಾರ್ಥಿಗಳು ತಮ್ಮ ನ್ಯಾಯಸಮ್ಮತ ಬೇಡಿಕೆಗಳನ್ನು ಶಾಂತಿಯುತವಾಗಿ ಮುಂದಿಟ್ಟಿರುವಾಗ, ಅವರ ಧ್ವನಿಯನ್ನು ಸಂವಾದದ ಮೂಲಕ ಆಲಿಸುವ ಬದಲು ಬಲಪ್ರಯೋಗದಿಂದ ಹತ್ತಿಕ್ಕಿರುವುದು ಅತ್ಯಂತ ದುಃಖಕರ ಬೆಳವಣಿಗೆಯಾಗಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಘಟನೆಯಲ್ಲಿ ಗಾಯಗೊಂಡ ಹಾಗೂ ದಮನಕ್ಕೆ ಒಳಗಾದ ಎಲ್ಲಾ ವಿದ್ಯಾರ್ಥಿಗಳೊಂದಿಗೆ ಎಐಸಿಯು ಕರ್ನಾಟಕ ಸಂಪೂರ್ಣ ಐಕ್ಯತೆ ವ್ಯಕ್ತಪಡಿಸುತ್ತಿದ್ದು, ಪಾರದರ್ಶಕ ಹಾಗೂ ನ್ಯಾಯಯುತ ಶಿಕ್ಷಣ ವ್ಯವಸ್ಥೆಗಾಗಿ ವಿದ್ಯಾರ್ಥಿಗಳು ನಡೆಸುತ್ತಿರುವ ಹೋರಾಟಕ್ಕೆ ತಮ್ಮ…
ನವದೆಹಲಿ: ಸೌಜನ್ಯ ಕೊಲೆ ಪ್ರಕರಣದ ವಿಚಾರಣೆಯಲ್ಲಿ ಸುಪ್ರೀಂ ಕೋರ್ಟ್ ವಿಭಾಗೀಯ ಪೀಠವು ಕೇಂದ್ರ ಸರ್ಕಾರದ ನೇತೃತ್ವದ ಸಿಬಿಐಗೆ ತೀವ್ರ ತರಾಟೆ ತೆಗೆದುಕೊಂಡಿದೆ. ಇಂದು ನಡೆದ ವಿಚಾರಣೆ ಕೇವಲ 23 ನಿಮಿಷಗಳಲ್ಲಿ ಮುಗಿದಿದೆ. ಸೌಜನ್ಯ ತಾಯಿ ಕುಸುಮಾವತಿ ಅವರು ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ SIT ರಚಿಸುವಂತೆ ಕೋರಿದ್ದಾರೆ. ರಾಜ್ಯ ಸರ್ಕಾರದ ಗೃಹ ಇಲಾಖೆ ತನ್ನ ಎಲ್ಲಾ ತನಿಖಾ ಲೋಪದೋಷಗಳ ಜವಾಬ್ದಾರಿಯನ್ನು ಸಿಬಿಐ ಮೇಲೆ ಹಾಕಿದ್ದು, ಸೌಜನ್ಯ ಕೊಲೆ ಪ್ರಕರಣದ ಸಂಪೂರ್ಣ ವೈಫಲ್ಯಕ್ಕೆ ಕೇಂದ್ರ ಸರ್ಕಾರ ಮತ್ತು ಸಿಬಿಐಯೇ ಹೊಣೆ ಹೊರಬೇಕಾಗುವ ಲಕ್ಷಣಗಳು ಕಾಣಿಸುತ್ತಿವೆ ಎಂದು ನ್ಯಾಯಾಲಯದಲ್ಲಿ ಚರ್ಚೆಯಾಗಿದೆ. ಕೊಲೆ ನಡೆದ ಸ್ಥಳದಲ್ಲಿ ಪ್ರಥಮ ಸ್ಥಳ ತನಿಖೆಯನ್ನು ಸಿಬಿಐ ಮಾಡಲೇ ಇಲ್ಲ ಎಂದು ಸುಪ್ರೀಂ ಕೋರ್ಟ್ ತೀವ್ರವಾಗಿ ವಿಮರ್ಶಿಸಿದೆ. ಆರೋಪಿಗಳು ಹೈಕೋರ್ಟ್‌ನಲ್ಲಿ ತಮ್ಮ ಮೇಲಿನ ಆರೋಪಗಳ ರದ್ದುಗೊಳಿಸುವ ಅರ್ಜಿ ಸಲ್ಲಿಸಿದಾಗ ಸಿಬಿಐ ಅಕ್ಷೇಪ ತಕರಾರು ಸಲ್ಲಿಸದಿದ್ದುದಕ್ಕೆ ನ್ಯಾಯಮೂರ್ತಿಗಳು ಸಿಬಿಐಗೆ ತರಾಟೆ ತೆಗೆದುಕೊಂಡಿದ್ದಾರೆ. ಈ ಪ್ರಕರಣದಲ್ಲಿ ಸಿಬಿಐ ತನಿಖೆಯಲ್ಲಿ ಗಂಭೀರ ಲೋಪಗಳಿದ್ದು, ಸುಪ್ರೀಂ ಕೋರ್ಟ್‌ನಿಂದ ಕಠಿಣ…
ಉಳ್ಳಾಲ, ಜು. 22: ಮಹಾರಾಷ್ಟ್ರದ ಛತ್ರಪತಿ ಸಾಂಬಾಜಿ ನಗರದ ಗರ್ಕಡೆ ಸ್ಟೇಡಿಯಂನಲ್ಲಿ ಜುಲೈ 18ರಿಂದ 24ರವರೆಗೆ ನಡೆಯುತ್ತಿರುವ ರಾಷ್ಟ್ರಮಟ್ಟದ ಮಾಸ್ಟರ್ಸ್ ಕ್ಲಾಸಿಕ್ ಪವರ್ ಲಿಫ್ಟಿಂಗ್ ಚಾಂಪಿಯನ್‌ಶಿಪ್‌ನಲ್ಲಿ 74 ಕೆ.ಜಿ. ವಿಭಾಗದಲ್ಲಿ ಸ್ಪರ್ಧಿಸಿದ ಹೇಮಚಂದ್ರ ಬಬ್ಬುಕಟ್ಟೆ ಅವರು ಎರಡು ಚಿನ್ನ, ಒಂದು ಬೆಳ್ಳಿ ಹಾಗೂ ಒಂದು ಕಂಚಿನ ಪದಕಗಳನ್ನು ಗೆದ್ದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಶ್ರೀ ಶಕ್ತಿ ಭಾರತ್ ವ್ಯಾಯಾಮ ಶಾಲೆ, ತೊಕ್ಕೊಟ್ಟಿನ ಸದಸ್ಯರಾಗಿರುವ ಹೇಮಚಂದ್ರ ಬಬ್ಬುಕಟ್ಟೆ ಅವರು ವಿವಿಧ ವಿಭಾಗಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ಈ ಸಾಧನೆ ಮಾಡಿದ್ದಾರೆ. ಇವರು ದಿವಂಗತ ಶೇಖರ್ ಬಂಗೇರ ಅವರ ಶಿಷ್ಯರಾಗಿದ್ದು, ತಮ್ಮ ಗುರುಗಳ ಮಾರ್ಗದರ್ಶನದಲ್ಲಿ ಪವರ್ ಲಿಫ್ಟಿಂಗ್ ಕ್ಷೇತ್ರದಲ್ಲಿ ನಿರಂತರ ಸಾಧನೆ ಮಾಡುತ್ತಿದ್ದಾರೆ. ಅವರ ಈ ಸಾಧನೆಗೆ ಕ್ರೀಡಾಭಿಮಾನಿಗಳು, ವ್ಯಾಯಾಮ ಶಾಲೆಯ ಸದಸ್ಯರು ಹಾಗೂ ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಅಭಿನಂದನೆ ಸಲ್ಲಿಸಿದ್ದಾರೆ.
ಕಾಸರಗೋಡು, ಜು. 22: ತೆಲಂಗಾಣ ರಾಜ್ಯದ ರಾಜಧಾನಿ ಹೈದರಾಬಾದ್‌ನಲ್ಲಿ ನಡೆದ ದಕ್ಷಿಣ ಭಾರತದ ಯುವ ಬರಹಗಾರರ ಸಾಹಿತ್ಯೋತ್ಸವದಲ್ಲಿ ತುಳು ಕವಿತೆ ವಾಚಿಸುವ ಮೂಲಕ ಗಡಿನಾಡಿನ ಪ್ರತಿಭೆ ದಿವ್ಯಾ ಗಟ್ಟಿ ಪರಕ್ಕಿಲ ಸಾವಿರಾರು ಸಾಹಿತ್ಯಾಸಕ್ತರ ಮೆಚ್ಚುಗೆ ಮತ್ತು ಭರ್ಜರಿ ಕರತಾಡನ ಗಳಿಸಿದ್ದಾರೆ. ಕೇಂದ್ರ ಸಾಹಿತ್ಯ ಅಕಾಡೆಮಿ ಹಾಗೂ ತೆಲಂಗಾಣ ಸರ್ಕಾರದ ಭಾಷಾ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಹೈದರಾಬಾದ್‌ನ ರವೀಂದ್ರ ಭಾರತಿ ಸಭಾಂಗಣದಲ್ಲಿ ಆಯೋಜಿಸಲಾದ ಈ ಸಾಹಿತ್ಯೋತ್ಸವದಲ್ಲಿ ದಕ್ಷಿಣ ಭಾರತದ ವಿವಿಧ ಭಾಷೆಗಳ ಯುವ ಬರಹಗಾರರು ಭಾಗವಹಿಸಿ ತಮ್ಮ ಸಾಹಿತ್ಯ ಪ್ರತಿಭೆಯನ್ನು ಅನಾವರಣಗೊಳಿಸಿದರು. ಈ ಸಂದರ್ಭದಲ್ಲಿ ದಿವ್ಯಾ ಗಟ್ಟಿ ಪರಕ್ಕಿಲ ಅವರು ತುಳುನಾಡಿನ ಸಂಸ್ಕೃತಿ, ಪರಂಪರೆ ಹಾಗೂ ಜೀವನಶೈಲಿಯನ್ನು ಪ್ರತಿಬಿಂಬಿಸುವ ತುಳು ಕವಿತೆಯನ್ನು ವಾಚಿಸಿದರು. ಬಳಿಕ ಅದರ ಆಶಯವನ್ನು ಆಂಗ್ಲ ಭಾಷೆಯಲ್ಲಿಯೂ ವಿವರಿಸಿ ಸಭಿಕರ ಮೆಚ್ಚುಗೆಗೆ ಪಾತ್ರರಾದರು. ಇದೇ ವೇಳೆ ತುಳು ಭಾಷೆಗೆ ರಾಷ್ಟ್ರೀಯ ಮಾನ್ಯತೆ ನೀಡುವಂತೆ ಹಾಗೂ ಭಾರತೀಯ ಸಂವಿಧಾನದ ಎಂಟನೇ ಅನುಸೂಚಿಯಲ್ಲಿ ತುಳು ಭಾಷೆಯನ್ನು ಸೇರ್ಪಡೆಗೊಳಿಸುವಂತೆ ಕೇಂದ್ರ ಸರ್ಕಾರವನ್ನು ಆಗ್ರಹಿಸಿದರು.…
ಉಡುಪಿ, ಜು. 21 : 2002ರಲ್ಲಿ ನಡೆದ ಭೀಕರ ರಸ್ತೆ ಅಪಘಾತ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ ಕಳೆದ 23 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಲಾರಿ ಚಾಲಕನನ್ನು ಪಡುಬಿದ್ರಿ ಪೊಲೀಸರು ಮಹಾರಾಷ್ಟ್ರದ ಪುಣೆಯಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯನ್ನು ಮಹಾರಾಷ್ಟ್ರದ ಪುಣೆ ಜಿಲ್ಲೆಯ ಭೋರ್ ನಿವಾಸಿ ವಿಲಾಸ್ ಶಿಂಧೆ ಎಂದು ಗುರುತಿಸಲಾಗಿದೆ.2002ರ ಸೆಪ್ಟೆಂಬರ್ 7ರಂದು ಬೆಳಿಗ್ಗೆ ರಾಷ್ಟ್ರೀಯ ಹೆದ್ದಾರಿ 66ರ ಪಡುಬಿದ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ಬಡಾ ಗ್ರಾಮದ ಮೂಳೂರು ಮಸೀದಿ ಸಮೀಪ ಅಪಘಾತ ಸಂಭವಿಸಿತ್ತು. ಮಂಗಳೂರಿನಿಂದ ಉಡುಪಿಯತ್ತ ಅತಿ ವೇಗ ಹಾಗೂ ನಿರ್ಲಕ್ಷ್ಯದಿಂದ ಮಿನಿ ಸರಕು ಲಾರಿಯನ್ನು ಚಲಾಯಿಸುತ್ತಿದ್ದ ವಿಲಾಸ್ ಶಿಂಧೆ, ರಸ್ತೆಯ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಶಾಲಾ ಬಾಲಕನಿಗೆ ಡಿಕ್ಕಿ ಹೊಡೆದಿದ್ದನು. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಬಾಲಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದನು.ಘಟನೆಯ ಬಳಿಕ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಪೂರ್ಣಗೊಳಿಸಿ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಸಲಾಗಿತ್ತು. ವಿಚಾರಣೆ ನಡೆಸಿದ ನ್ಯಾಯಾಲಯವು ಆರೋಪಿಯ ವಿರುದ್ಧದ ಆರೋಪಗಳು ಸಾಬೀತಾಗಿರುವುದಾಗಿ ತೀರ್ಪು ನೀಡಿ, ಮೂರು ತಿಂಗಳ ಜೈಲು…

