ಬಂಟ್ವಾಳ,ಡಿ. 05 ಪರವಾನಗಿ ಇಲ್ಲದೆ ಕಾನೂನು ಬಾಹಿರವಾಗಿ ಅಕ್ರಮವಾಗಿ ಲಾರಿಯಲ್ಲಿ ಕೆಂಪುಕಲ್ಲು ಸಾಗಾಟ ನಡೆಸುತ್ತಿರುವುದನ್ನು ಪತ್ತೆ ಹಚ್ಚಿ ವಿಟ್ಲ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬಂಟ್ವಾಳ, ಕೊಳ್ನಾಡು ಗ್ರಾಮದ ಕೂಡ್ತಮುಗೇರು ಎಂಬಲ್ಲಿ, ವಿಟ್ಲ ಪೊಲೀಸ್ ಠಾಣೆಯ ರತ್ನಕುಮಾರ್ ಪೊಲೀಸ್ ಉಪ ನಿರೀಕ್ಷಕರು, (ತನಿಖೆ-01) ಸಿಬ್ಬಂದಿಗಳೊಂದಿಗೆ ವಾಹನ ತಪಾಸಣೆ ಮಾಡುವ ವೇಳೆ, ಬೋಳ್ಪದೆ ಕಡೆಯಿಂದ ಕೂಡ್ತಮುಗೇರು ಕಡೆಗೆ ಬರುತ್ತಿದ್ದ KA-12-A-9095 ನೋಂದಣಿಯ ಲಾರಿಯನ್ನು ನಿಲ್ಲಿಸಿ ತಪಾಸಣೆ ನಡೆಸಿದಾಗ, ಲಾರಿಯಲ್ಲಿ ಕೆಂಪು ಕಲ್ಲು ತುಂಬಿಸಿಕೊಂಡು ಸಾಗಿಸುತ್ತಿರುವುದು ಕಂಡುಬಂದಿದೆ,ತಕ್ಷಣ ಕಲ್ಲುಗಳ ಸಾಗಾಟದ ಬಗ್ಗೆ ಲಾರಿ ಚಾಲಕ ಎನ್.ಸಿ.ಶರೀಪ್ (42) ಎಂಬಾತನಲ್ಲಿ ವಿಚಾರಿಸಿದಾಗ, ಯಾವುದೇ ಪರವಾನಿಗೆ ಅಥವಾ ದಾಖಲಾತಿ ಇಲ್ಲದೆ, ಅಕ್ರಮವಾಗಿ ಕೆಂಪು ಕಲ್ಲುಗಳನ್ನು ಕಳ್ಳತನದಿಂದ ತುಂಬಿಸಿಕೊಂಡು ಸಾಗಿಸುತ್ತಿರುವುದು ಬೆಳಕಿಗೆ ಬಂದಿದೆ.ಮುಂದಿನ ಕಾನೂನು ಕ್ರಮಕ್ಕಾಗಿ ಲಾರಿ ಚಾಲಕನನ್ನು ಹಾಗೂ ಲಾರಿಯನ್ನು ಲೋಡ್ ಸಮೇತ ವಶಕ್ಕೆ ಪಡೆದು, ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ: 179/2025, ಕಲಂ: 303(2) BNS 2023 U/s-4(1),21 MMDR (MINES AND MINERALS REGULATION OF DEVELOPMENTACT…
Author: UllalaVani
ಉಡುಪಿ, ಡಿ. 05 : ಉಡುಪಿ ಬೋರ್ಡಿಂಗ್ ಹಾಸ್ಟೆಲ್‌ನಿಂದ ಕಾಣೆಯಾಗಿದ್ದ 13 ವರ್ಷದ ಬಾಲಕನನ್ನು ಮಂಗಳೂರು ವಿಭಾಗದ ಮುಖ್ಯ ಟಿಟಿಇ (ಹೆಡ್ ಟಿಟಿಇ) ರಾಘವೇಂದ್ರ ಶೆಟ್ಟಿ ಅವರು ಮಂಗಳೂರು ಎಕ್ಸ್‌ಪ್ರೆಸ್ ರೈಲಿನಲ್ಲಿ ಗುರುವಾರ ಸುರಕ್ಷಿತವಾಗಿ ರಕ್ಷಿಸಿದ್ದಾರೆ. ಕೋಚ್ S3 ನಲ್ಲಿ ಬಾಲಕ ಒಬ್ಬನೇ ಪ್ರಯಾಣಿಸುತ್ತಿದ್ದಾಗ, ಟಿಕೆಟ್ ತಪಾಸಣೆ ವೇಳೆ ರಾಘವೇಂದ್ರ ಶೆಟ್ಟಿ ಅವರಿಗೆ ಬಾಲಕನ ಪ್ರತಿಕ್ರಿಯೆಯಲ್ಲಿ ವ್ಯತ್ಯಾಸ ಕಂಡುಬಂದಿದೆ. ಆತನ ಬ್ಯಾಗ್ ಪರಿಶೀಲಿಸಿದಾಗ, ಶಾಲೆಯ ಐಡಿ ಕಾರ್ಡ್ ದೊರೆತಿದೆ. ತಕ್ಷಣವೇ ಅವರು ಶಾಲಾ ಅಧಿಕಾರಿಗಳನ್ನು ಸಂಪರ್ಕಿಸಿದರು. ಆಗ, ಬಾಲಕ ಹಾಸ್ಟೆಲ್‌ನಿಂದ ಓಡಿಹೋಗಿರುವುದು ದೃಢಪಟ್ಟಿದೆ. ಆತನ ತಾಯಿಗೆ ಮಗ ಸುರಕ್ಷಿತವಾಗಿರುವ ಬಗ್ಗೆ ಮಾಹಿತಿ ನೀಡಲಾಯಿತು. ಆತ ತಾಯಿಯೊಂದಿಗೆ ವಾಸಿಸುತ್ತಿದ್ದು, ಆಕೆ ಮನೆಗೆಲಸ ಮಾಡಿ ಮಗನನ್ನು ಓದಿಸುತ್ತಿದ್ದರು.ಉಡುಪಿ ನಿಲ್ದಾಣದಲ್ಲಿ ಬಾಲಕನನ್ನು ರೈಲ್ವೆ ಸಂರಕ್ಷಣಾ ಪಡೆ (ಆರ್‌ಪಿಎಫ್)ಗೆ ಹಸ್ತಾಂತರಿಸಲಾಯಿತು. ಪೊಲೀಸರು ಬಾಲಕ ಸುರಕ್ಷಿತವಾಗಿ ಮನೆ ಸೇರುವ ವರೆಗೆ ಆತನನ್ನು ಉಡುಪಿಯ ಮಕ್ಕಳ ಪಾಲನಾ ಕೇಂದ್ರದಲ್ಲಿ ಇರಿಸಿದರು.ರಾಘವೇಂದ್ರ ಶೆಟ್ಟಿ ಅವರ ಕ್ಷಿಪ್ರ ಮತ್ತು ಕರ್ತವ್ಯಪ್ರಜ್ಞೆಯನ್ನು ಶ್ಲಾಘಿಸಿ, ಕೊಂಕಣ ರೈಲ್ವೆಯ…
ಈರೋಡ್, ಡಿ. 05 : ಬಾಳೆಹಣ್ಣು ಗಂಟಲಲ್ಲಿ ಸಿಲುಕಿ 5 ವರ್ಷದ ಬಾಲಕ ಸಾವನ್ನಪ್ಪಿರುವ ದಾರುಣ ಘಟನೆ ತಮಿಳುನಾಡಿನ ಈರೋಡ್‌ನಲ್ಲಿ ನಡೆದಿದೆ. ಈರೋಡ್‌ನ ಅನ್ನೈ ಸತ್ಯ ನಗರದ ಎಂ. ಸಾಯಿಶರಣ್(5) ಮೃತ ಬಾಲಕ.ಬಾಲಕ ಮನೆಯಲ್ಲಿ ಬಾಳೆಹಣ್ಣು ತಿನ್ನುವಾಗ ಅದು ಗಂಟಲಲ್ಲಿ ಸಿಕ್ಕಿಹಾಕಿಕೊಂಡು, ಉಸಿರಾಟದ ತೊಂದರೆ ಕಾಣಿಸಿಕೊಂಡಿತು. ತಕ್ಷಣ ಆತನ ಪೋಷಕರಾದ ಮಾಣಿಕ್ ಮತ್ತು ಮಹಾಲಕ್ಷ್ಮಿ ನೆರೆಹೊರೆಯವರ ಸಹಾಯದಿಂದ ಆ ಮಗುವನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ಕರೆದೊಯ್ದರು.ಆಸ್ಪತ್ರೆಯಲ್ಲಿ ಮಗುವನ್ನು ಪರೀಕ್ಷಿಸಿದ ವೈದ್ಯರು, ಆತನ ಶ್ವಾಸನಾಳದಲ್ಲಿ ಬಾಳೆಹಣ್ಣಿನ ತುಂಡು ಸಿಲುಕಿಕೊಂಡಿರುವುದಾಗಿ ತಿಳಿಸಿದ್ದಾರೆ. ನಂತರ ವೈದ್ಯರು ಆ ಮಗುವನ್ನು ಚಿಕಿತ್ಸೆಗಾಗಿ ಈರೋಡ್ ಸರ್ಕಾರಿ ಆಸ್ಪತ್ರೆಗೆ ಕಳುಹಿಸಿದರು. ಆದರೆ, ಅಲ್ಲಿ ಮಗುವನ್ನು ಪರೀಕ್ಷಿಸಿದ ವೈದ್ಯರು ಮಗು ಉಸಿರಾಡಲಾಗದೆ ಮೃತಪಟ್ಟಿದೆ ಎಂದು ಘೋಷಿಸಿದ್ದಾರೆ. ನಂತರ ಬಾಳೆಹಣ್ಣಿನ ತುಂಡನ್ನು ಮಗುವಿನ ಶ್ವಾಸನಾಳದಿಂದ ತೆಗೆದುಹಾಕಲಾಯಿತು. ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.ಮಾಣಿಕ್ಕಂ-ಮಹಾಲಕ್ಷ್ಮಿ ದಂಪತಿಗೆ 5 ವರ್ಷದ ಸಾಯಿಶರಣ್ ಎಂಬ ಮಗ ಮತ್ತು 2 ವರ್ಷದ ಮಗಳಿದ್ದಾರೆ. ದಂಪತಿಗಳಿಬ್ಬರೂ ಕೂಲಿ ಕೆಲಸಕ್ಕೆ…
ಮಂಗಳೂರು, ಡಿ. 05 : ಕಿನ್ನಿಗೋಳಿಯಲ್ಲಿ ವೃದ್ದ ದಂಪತಿಯನ್ನು ಗುರಿಯಾಗಿಸಿ ನಡೆದ ‘ಡಿಜಿಟಲ್ ಅರೆಸ್ಟ್’ ಪ್ರಕರಣ ಬೆಳಕಿಗೆ ಬಂದಿದ್ದು, ಬ್ಯಾಂಕ್ ಮ್ಯಾನೇಜರ್ ಅವರ ಸಮಯಪ್ರಜ್ಞೆಯಿಂದಾಗಿ 84 ಲಕ್ಷ ರೂ. ಬೃಹತ್ ವಂಚನೆ ತಪ್ಪಿದೆ. ಡಿಸೆಂಬರ್ 1 ರ ಸಂಜೆ, ವಂಚಕರ ತಂಡವೊಂದು ಕಿನ್ನಿಗೋಳಿಯ ದಾಮಸ್ ಕಟ್ಟೆಯ ವೃದ್ಧ ದಂಪತಿಗೆ ಕರೆ ಮಾಡಿ ಡಿಜಿಟಲ್ ಅರೆಸ್ಟ್ ಮಾಡಿದೆ. ಈ ವೇಳೆ ವೃದ್ಧ ದಂಪತಿಯನ್ನು ತಂಡವು ಹಣ ನೀಡುವಂತೆ ಬೆದರಿಸಿದೆ. ಜೊತೆಗೆ ತಮ್ಮ ಮಾತನ್ನು ಕೇಳದಿದ್ದರೆ ಕೆಟ್ಟ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಬೆದರಿಕೆ ಹಾಕಿದೆ.ಯಾವುದೇ ಕಾರಣಕ್ಕೂ ಮನೆಯಿಂದ ಹೊರಗೆ ಬರಬೇಡಿ. ಒಂದು ವೇಳೆ ನೀವು ಮನೆಯಿಂದ ಹೊರಗೆ ಕಾಲಿಟ್ಟರೆ ನಮ್ಮ ಸಿಬ್ಬಂದಿ ಗುಂಡು ಹಾರಿಸುತ್ತಾರೆ ಎಂದು ವಂಚಕರು ದಂಪತಿಗೆ ಎಚ್ಚರಿಕೆ ನೀಡಿದ್ದರು. ಇದರಿಂದ ಗಾಬರಿಗೊಂಡ ದಂಪತಿಗಳು ಕಿನ್ನಿಗೋಳಿಯ ತಮ್ಮ ಬ್ಯಾಂಕ್ ಮ್ಯಾನೇಜರ್‌ಗೆ ಕರೆ ಮಾಡಿ, ತಮ್ಮ ಎಫ್ ಡಿ ಯಲ್ಲಿದ್ದ 84 ಲಕ್ಷ ರೂ.ವನ್ನು ತಕ್ಷಣವೇ ಉಳಿತಾಯ ಖಾತೆಗೆ ವರ್ಗಾಯಿಸುವಂತೆ ಮನವಿ ಮಾಡಿದ್ದಾರೆ.ಡಿಸೆಂಬರ್ 3 ರಂದು…
ಮಂಗಳೂರು:ಡಿಸೆಂಬರ್ 3, 2025 ರಂದು ‘ಶ್ರೀ ಮಹಾಗುರುವಿನ ಮಹಾ ಸಮಾಧಿ ಶತಾಬ್ದಿ ಸರ್ವಮತ ಸಮ್ಮೇಳನ’ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ, ಮಂಗಳೂರು ವಿಶ್ವವಿದ್ಯಾನಿಲಯದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (SC/ST) ಸ್ನಾತಕೋತ್ತರ ಮತ್ತು ಸಂಶೋಧನಾ ವಿದ್ಯಾರ್ಥಿಗಳ ನಿಯೋಗವು ಮನವಿ ಸಲ್ಲಿಸಿತು. ಪ್ರಮುಖ ಬೇಡಿಕೆಗಳಾದ ಶೈಕ್ಷಣಿಕ ಶುಲ್ಕ ಮತ್ತು ಶಿಷ್ಯವೇತನ (Fellowship) ವಿಳಂಬ ಮತ್ತು SCSP-TSP ನಿಧಿ ಬಿಡುಗಡೆ ಕುರಿತು ಮನವಿ ನೀಡಲಾಯಿತು. ನಿಯೋಗವು ಇದೇ ಸಂದರ್ಭದಲ್ಲಿ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಮತ್ತು ಲೋಕೋಪಯೋಗಿ ಸಚಿವ ಶ್ರೀ ಸತೀಶ್ ಜಾರಕಿಹೊಳಿ ಅವರನ್ನೂ ಪ್ರತ್ಯೇಕವಾಗಿ ಭೇಟಿ ಮಾಡಿ ಮನವಿ ಪ್ರತಿಗಳನ್ನು ಹಸ್ತಾಂತರಿಸಿತು. ಎಲ್ಲಾ ಗಣ್ಯರು ಸಮಸ್ಯೆಗಳನ್ನು ಪರಿಶೀಲಿಸಿ, ತಕ್ಷಣದ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ. ಈ ಸಂದರ್ಭದಲ್ಲಿ APSA–MU ಅಂಬೇಡ್ಕರ್ ಫುಲೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಅವಿನಾಶ ಕಾಂಬಳೆ, ವಿದ್ಯಾರ್ಥಿ ನಾಯಕ ಅಭಿಷೇಕ ವಾಲ್ಮೀಕಿ, ಅಮರೇಶ್, ರಘುದಾಸ, ಗಣೇಶ, ದಿವಾಕರ ಸೇರಿದಂತೆ ಹಲವು ಸದಸ್ಯರು ಉಪಸ್ಥಿತರಿದ್ದರು.
ತೊಕ್ಕೊಟ್ಟು: ಬಿಸಿಲಿನ ಧಗೆಗೆ ನಮ್ಮ ಕಣ್ಣು ಹುಡುಕುವುದೇ ಐಸ್ ಕ್ರೀಮ್ ಪಾರ್ಲರ್. ಅದರಲ್ಲೂ ರಸಸ್ವಾದ ಸ್ವಾದೀಷ್ಟದ, ಬಾಯಲ್ಲಿ ಇಟ್ಟ ತಕ್ಷಣ ಕರಗುವ ರುಚಿಯಾದ ಐಸ್ ಕ್ರೀಮ್ ಅಂದರೆ ನೆನಪಾಗೋದು ಭಾರತದ ದೊಡ್ಡ ಫ್ಯಾಶನಿಕ್ ಬ್ರಾಂಡ್ ಅಮೂಲ್ ಐಸ್‌ಕ್ರೀಮ್ ಪಾರ್ಲರ್. ಸೀಸನ್ ಯಾವುದೇ ಇರಲಿ ಐಸ್ ಕ್ರೀಮ್ ಪ್ರಿಯರು ಹುಡುಕಾಟ ನಡೆಸಿ ಅಮೂಲ್ ಐಸ್‌ಕ್ರೀಮ್ ಸವಿಯುತ್ತಾರೆ. ಅದಕ್ಕೆ ಕಾರಣ ಅಮೂಲ್ ಅವರ ನಗುಮೊಗದ ಸೇವೆಗಳು. ಇದೀಗ ಅಮೂಲ್ ಪ್ರೇಮಿಗಳಿಗಾಗಿt ಅಮೂಲ್ ತನ್ನ 6ನೇ ವರ್ಷದ ಸಂಭ್ರಮಾಚರಣೆಯ ಪ್ರಯುಕ್ತ ಬಿಗ್ ಆಫರ್ ಇಟ್ಟಿದೆ. ತೊಕ್ಕೊಟ್ಟುವಿನಲ್ಲಿ ಕಾರ್ಯಾಚರಿಸುತ್ತಿರುವ ಅಮೂಲ್ ಐಸ್‌ಕ್ರೀಮ್ ಪಾರ್ಲರ್‌ಗೆ ಬಂದು ರೂಪಾಯಿ 500ರ ರುಚಿ-ಶುಚಿಯಾದ ಕೂಲ್ ಕೂಲ್ ಐಸ್‌ಕ್ರೀಮ್ ಸವಿದರೆ, ನಿಮಗೆ ಫ್ರೀ ಕೂಪನ್ ನೀಡಲಾಗುವುದು. ಸಿಕ್ಕ ಕೂಪನ್‌ನಲ್ಲಿ ನಿಮ್ಮ ಹೆಸರಿನೊಂದಿಗೆ ಮೊಬೈಲ್ ನಂಬರ್ ನಮೊದಿಸಿ, ಪಾರ್ಲರ್‌ನಲ್ಲಿರುವ ಬಾಕ್ಸ್ಗೆ ಹಾಕಬೇಕಾಗುತ್ತದೆ. ಡಿ.22ರಂದು ಲಕ್ಕಿ ಡ್ರಾ ನಡೆಯಲಿದ್ದು, ಡ್ರಾ ದಲ್ಲಿ ಗೆದ್ದ ಮೊದಲ ಮೂರು ಅದೃಷ್ಟಶಾಲಿ ಗ್ರಾಹಕರಿಗೆ ರೇಫ್ರಿಜೇಟರ್, ವಾಟರ್ ಪ್ಯೂರಿಫಯರ್, ಮಿಕ್ಸಿ ಬಹುಮಾನವಾಗಿ…
ದೇರಳಕಟ್ಟೆ ವಿದ್ಯಾರತ್ನ ಆಂಗ್ಲ ಮಾಧ್ಯಮ ಶಾಲೆಯ ವಾರ್ಷಿಕ ಕ್ರಿಡೋತ್ಸವ ಮಂಗಳೂರು ವಿಶ್ವ ವಿದ್ಯಾನಿಲಯದ ಮಂಗಳ ಕ್ರೀಡಾಂಗಣದಲ್ಲಿ ನಡೆಯಿತು. ಕೋಣಾಜೆ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಪುನೀತ್ ಗಾವ್0ಕರ್ ಕ್ರಿಡೋತ್ಸವವನ್ನು ಉದ್ಘಾಟಿಸಿ ವಿದ್ಯಾರ್ಥಿಗಳು ಪಠ್ಯ ಮತ್ತು ಪಠಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡರೆ ನಿಮ್ಮ ವ್ಯಕ್ತಿತ್ವ ವಿಕಸನಗೊಳ್ಳಲು ಸಾಧ್ಯ ಎಂದರು ಅದರಲ್ಲೂ ಕ್ರೀಡೆಯು ನಿಮ್ಮಲ್ಲಿ ಮಾನಸಿಕ, ದೈಹಿಕವಾಗಿ ಸದೃಢವಾಗಲು ಸಹಕಾರಿಯಾಗುತ್ತದೆ ಎಂದು ಕಾರ್ಯಕ್ರಮಕ್ಕೆ ಶುಭ ಕೋರಿದರು. ಈ ಸಂಧರ್ಭ ಕೋಣಾಜೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಗೀತಾ ದಾಮೋದರ್, ಸಂಸ್ಥೆಯ ಆಡಳಿತ ನಿರ್ದೇಶಕ ಕೆ. ರವೀಂದ್ರ ಶೆಟ್ಟಿ ಉಳಿದೊಟ್ಟು, ಶಾಲಾ ವಿದ್ಯಾರ್ಥಿ ನಾಯಕ ಭವಿತ್ ಸುವರ್ಣ ಉಪಸ್ಥಿತರಿದ್ದರು ಸಂಸ್ಥೆಯ ಕಾರ್ಯದರ್ಶಿ ಸೌಮ್ಯ ಆರ್ ಶೆಟ್ಟಿ ಸ್ವಾಗತಿಸಿ,ಶಾಲಾ ಮುಖ್ಯ್ಯೊಪಾಧ್ಯಾಯಾರು ನಯೀಮ್ ಹಮೀದ್ ವಂದನಾರ್ಪಣೆ ಗೈದರು ಶಿಕ್ಷಕರಾದ ರಮೇಶ್ ಪೆರಾಡಿ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರತ್ನ ಆಂಗ್ಲ ಮಾಧ್ಯಮ ಶಾಲೆಯು ಈ ವರ್ಷ ರಜತ ಮಹೋತ್ಸವವನ್ನು ಆಚರಿಸುವುದರಿಂದ ವಿದ್ಯಾರ್ಥಿಗಳ ಪೋಷಕರಿಗೂ ಕ್ರೀಡಾ ಕೂಟವನ್ನು ಏರ್ಪಡಿಸಲಾಗಿತ್ತು ಪೋಷಕರು ಬಹಳ ಖುಷಿಯಿಂದ ಕ್ರೀಡಾ…
ಉಳ್ಳಾಲ: ಪ್ರತಿಷ್ಠಿತ ಬೆಂಗಳೂರು ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಪದವಿ ಹಾಗೂ ಭಾರತ್ ಸೌಟ್ಸ್ ಮತ್ತು ಗೈಡ್ಸ್ ನೀಡುವ ಸಿಲ್ವರ್ ಎಲಿಫೆಂಟ್ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿಗೆ ಪಾತ್ರರಾಗಿರುವ ಸ್ಪೀಕರ್ ಡಾ. ಯು.ಟಿ. ಖಾದರ್ ಅವರಿಗೆ ದ.ಕ. ಮತ್ತು ಉಡುಪಿ ಜಿಲ್ಲಾ ಮುಸ್ಲಿಂ ಸೆಂಟ್ರಲ್ ಕಮಿಟಿಯ ವತಿಯಿಂದ ಸಂಸ್ಥೆಯ ಅಧ್ಯಕ್ಷರು ಹಾಗೂ ಮಾಜಿ ವಿಧಾನ ಪರಿಷತ್ ಸದಸ್ಯರಾದ ಅಲ್ ಹಾಜ್ ಕೆ ಎಸ್ ಮೊಹಮ್ಮದ್ ಮಸೂದ್ ರವರು ಅವರ ನಿವಾಸದಲ್ಲಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ಉಪಾಧ್ಯಕ್ಷರುಗಳಾದ ಮಾಜಿ ಮೇಯರ್ ಕೆ ಅಶ್ರಫ್, ಹಾಜಿ ಎಸ್. ಎಂ. ರಶೀದ್, ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಹನೀಫ್, ಕಾರ್ಯದರ್ಶಿಗಳಾದ ಹಾಜಿ ಅಹಮದ್ ಬಾವ ಪಡೀಲ್, ಹಾಜಿ ಬಿ ಅಬೂಬಕ್ಕರ್, ಡಿ.ಎಂ. ಅಸ್ಲಂ, ಡಾ. ಮೊಹಮ್ಮದ್ ಆರಿಫ್ ಮಸೂದ್, ಹಾಜಿ ರಿಯಾಝುದ್ದೀನ್, ಹಾಜಿ ಐ. ಮೊಯಿದಿನಬ್ಬ ಸಿ.ಎಂ. ಹನೀಫ್, ನ್ಯಾಯವಾದಿ ನೂರುದ್ದೀನ್ ಸಾಲ್ಮರ, ಅಬ್ಬಾಸ್ ಉಚ್ಚಿಲ್, ಮಾಜಿ ಕಾರ್ಪೊರೇಟ್ ಗಳಾದ ಅಬ್ದುಲ್ ಲತೀಫ್ ಕಂದಕ್, ಹಾಜಿ ಶಂಸುದ್ದೀನ್ ಹೆಚ್.ಬಿ.ಟಿ, ಶಂಸುದ್ದೀನ್…
ಮಂಗಳೂರು, ಡಿ.3: ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ ಮಂಗಳೂರಿನಲ್ಲಿ ಸ್ಥಾಪಿಸಲು ಅಗತ್ಯ ಇರುವ ಐದು ಎಕರೆ ಜಮೀನನ್ನು ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಶ್ರೀ ನಾರಾಯಣ ಗುರು-ಗಾಂಧೀಜಿ ಸಂವಾದ ಶತಮಾನೋತ್ಸವದ ಪ್ರಯುಕ್ತ ಶಿವಗಿರಿ ಮಠ, ವರ್ಕಲ ಮತ್ತು ಬ್ರಹ್ಮಶ್ರೀ ನಾರಾಯಣ ಗುರು ಅಧ್ಯಯನ ಪೀಠ, ಮಂಗಳೂರು ವಿಶ್ವವಿದ್ಯಾನಿಲಯದ ಆಶ್ರಯದಲ್ಲಿ ಕೊಣಾಜೆಯ ಮಂಗಳೂರು ವಿಶ್ವವಿದ್ಯಾನಿಲಯ ಕ್ಯಾಂಪಸ್ ನಲ್ಲಿ ಆಯೋಜಿಸಿರುವ ಶ್ರೀ ಮಹಾಗುರುವಿನ ಮಹಾ ಸಮಾಧಿ ಶತಾಬ್ದಿ ಸರ್ವಮತ ಸಮ್ಮೇಳನ ಶತಮಾನೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ಶಿವಗಿರಿ ಮಠದಿಂದ ಮನವಿ ಮಾಡಿದಂತೆ ಐದು ಎಕರೆ ಭೂಮಿಗೆ ಬಿ.ಕೆ.ಹರಿಪ್ರಸಾದ್ ಮತ್ತು ಇತರ ನಾಯಕರು ಭೂಮಿ ಗುರುತಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ನಾರಾಯಣ ಗುರು ಮತ್ತು ಗಾಂಧಿ ಸಮಾಗಮ ಬಗ್ಗೆ ಪ್ರಧಾನ ಸಂದೇಶ ಭಾಷಣ ಮಾಡಿದ ಲೋಕಸಭೆ ಸಾರ್ವಜನಿಕ ಲೆಕ್ಕ ಪತ್ರ ಸಮಿತಿ ಅಧ್ಯಕ್ಷ ಕೆ. ಸಿ. ವೇಣುಗೋಪಾಲ್, ಮಹಾತ್ಮ ಗಾಂಧಿ, ಬಸವಣ್ಣ, ನಾರಾಯಣ ಗುರು ತತ್ವಗಳು ದೇಶದ ಸಂವಿಧಾನದಲ್ಲಿ ಅಡಕವಾಗಿವೆ.…
ಮಂಗಳೂರು : ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕರ್ನಾಟಕ ರಾಜ್ಯ ಕುಲಾಲ ಕುಂಬಾರರ ಯುವ ವೇದಿಕೆ ಮತ್ತು ಮಹಿಳಾ ಸಂಘಟನೆಗಳ ಒಕ್ಕೂಟ (ರಿ) ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಹಾಗೂ ದಾಸ್ ಚಾರಿಟೇಬಲ್ ಸೇವಾ ಟ್ರಸ್ಟ್ (ರಿ) ಮಂಗಳೂರು ಇದರ ಸಹಯೋಗದಲ್ಲಿ “ಕುಂಭಕಲಾವಳಿ ಕುಲಾಲ ಕಲಾ ಸೇವಾಂಜಲಿ” ಕಾಯ೯ಕ್ರಮ ಮಂಗಳೂರಿನ ಕುದ್ಮುಲ್ ರಂಗರಾವ್, ಪುರಭವನದಲ್ಲಿ ಜ. 04ರಂದು ನಡೆಯಲಿದೆ. ಬೆಳಿಗ್ಗೆ 09 ಗಂಟೆಗೆ ಪದಗ್ರಹಣ ನಡೆಯಲಿದ್ದು, ಬಳಿಕ ಮಧ್ಯಾಹ್ನ 12.00 ಗಂಟೆಗೆ ಸಭಾ ಕಾರ್ಯಕ್ರಮ ನಡೆಯಲಿದೆ. ನಡುಬೊಟ್ಟು ಶ್ರೀ ಉದ್ಭವ ರೌದ್ರನಾಥೇಶ್ವರ ದೇವಸ್ಥಾನದ ಧಮ೯ದಶಿ೯ ಡಾ. ರವಿ.ಎನ್ ದೀಪ ಪ್ರಜ್ವಲಿಸಿ ಈ ಕಾರ್ಯಕ್ರಮ ಉದ್ಘಾಟಿಸಲಿದ್ದು ಮುಳಿಯ ಶ್ರೀ ವೈಷ್ಣವಿ ಕ್ಷೇತ್ರದ ಶ್ರೀ ಶ್ರೀ ಶಿವಾನಂದ ಸರಸ್ವತೀ ಸ್ವಾಮೀಜಿ ದಿವ್ಯ ಉಪಸ್ಥಿತಿವಹಿಸಲಿದ್ದಾರೆ. ಶ್ರೀ ಧಾಮ ಮಾಣಿಲ, ಶ್ರೀ ಮಹಾಲಕ್ಷ್ಮೀ ಕ್ಷೇತ್ರದ ಶ್ರೀಶ್ರೀಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ.ಮುಖ್ಯ ಅತಿಥಿಗಳಾಗಿ ಮೈಸೂರು ಸಂಸ್ಥಾನದ ಮಹಾರಾಜರಾದ ಶ್ರೀ ಯಧುವೀರ್ ಒಡೆಯರ್, ಸಂಸದ ಕ್ಯಾಪ್ಟನ್ ಬ್ರಿಜೇಶ್…

