Author: UllalaVani

Kannada News From Coastal Karnataka

ಬಂಟ್ವಾಳ,ನ.17: ಅರಣ್ಯ, ಆರೋಗ್ಯ, ಆಯುಷ್ ಔಷಧಿಗಳು ಮತ್ತು ಕೆಂಪು ಗ್ರಾನೈಟ್ ಗಣಿಗಾರಿಕೆ ಸಮಸ್ಯೆಗಳನ್ನು ಪರಿಹರಿಸುವುದರ ಜೊತೆಗೆ, ನಿಗದಿತ ಪ್ರದೇಶಗಳಲ್ಲಿ ಬೀದಿ ನಾಯಿಗಳ ಸರಿಯಾದ ಪುನರ್ವಸತಿಗೆ ಕ್ರಮಕೈಗೊಳ್ಳುವಂತೆ ಹಿರಿಯ ಅಧಿಕಾರಿಗಳಿಗೆ ಸಮಗ್ರ ಪರಿಶೀಲನಾ ಸಭೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು,ನಿರ್ದೇಶನ ನೀಡಿದ್ದಾರೆ. ಜಿಲ್ಲಾ ಪಂಚಾಯತ್‌ನ ನೇತ್ರಾವತಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ತ್ರೈಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಗುಂಡೂರಾವ್, ಸುಪ್ರೀಂ ಕೋರ್ಟ್ ನಿರ್ದೇಶನಗಳಿಗೆ ಅನುಗುಣವಾಗಿ ಬೀದಿ ನಾಯಿಗಳನ್ನು ಸೂಕ್ತ ಸ್ಥಳಗಳಿಗೆ ಸ್ಥಳಾಂತರಿಸಬೇಕು ಎಂದು ಒತ್ತಿ ಹೇಳಿದರು. “ನಾವು ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಸೂಕ್ತ ಸ್ಥಳಗಳನ್ನು ಗುರುತಿಸಬೇಕು ಮತ್ತು ಅವುಗಳ ಶಾಶ್ವತ ವಸತಿಗಾಗಿ ವ್ಯವಸ್ಥೆ ಮಾಡಬೇಕು” ಎಂದು ಅವರು ಹೇಳಿದರು. ಕುಂಪಲದಲ್ಲಿ ಇತ್ತೀಚೆಗೆ ಬೀದಿ ನಾಯಿಯೊಂದು ಸ್ಥಳೀಯ ನಿವಾಸಿಯ ಮೇಲೆ ದಾಳಿ ಮಾಡಿ ಹಲ್ಲೆ ನಡೆಸಿ ಸಾವಿಗೆ ಕಾರಣವಾದ ಘಟನೆಯನ್ನು ವಿಧಾನ ಪರಿಷತ್ ಸದಸ್ಯ ಐವಾನ್ ಡಿ’ಸೋಜಾ ಪ್ರಸ್ತಾಪಿಸಿ ಸಂತ್ರಸ್ತೆಯ ಕುಟುಂಬಕ್ಕೆ ಸೂಕ್ತ ಪರಿಹಾರ…

Read More

ಮಂಗಳೂರು: ಭಾನುವಾರ ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ನಡೆದ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮದಲ್ಲಿ ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘಕ್ಕೆ ದಕ್ಷಿಣ ಕನ್ನಡ ಜಿಲ್ಲೆಯ ಉತ್ತಮ ಸಹಕಾರ ಸಂಘ ಪ್ರಶಸ್ತಿ ಪ್ರದಾನ ಮಾಡಲಾಯಿತು. ಸಂಘದ ಅಧ್ಯಕ್ಷರಾದ ಕೃಷ್ಣ ಶೆಟ್ಟಿ ಕೆಳಗಿನ ಕೋಟೆಕಾರುಗುತ್ತು ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹರ್ಷವರ್ಧನ್ ಪುರಸ್ಕಾರ ಸ್ವೀಕರಿಸಿದರು. ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ ಅಧ್ಯಕ್ಷರಾದ ಡಾ.ಎಂ.ಎನ್ ರಾಜೇಂದ್ರ ಕುಮಾರ್, ವಿಧಾನಸಭಾ ಸ್ಪೀಕರ್ ಯು.ಟಿ ಖಾದರ್, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಲದ ಅಧ್ಯಕ್ಷರಾದ ಜಿ.ಟಿ ದೇವೇಗೌಡ, ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿ, ಕಿಶೋರ್ ಕುಮಾರ್ ಬೊಟ್ಯಾಡಿ, ಐವನ್ ಡಿಸೋಜ, ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್‌, ಉಡುಪಿ ಶಾಸಕ, ಮೀನು ಮಾರಾಟ ಮಹಾಮಂಡಳದ ಅಧ್ಯಕ್ಷ ಯಶ್‌ಪಾಲ್‌ ಸುವರ್ಣ, ವಿಧಾನ ಪರಿಷತ್‌ ಸದಸ್ಯರಾದ ಐವನ್‌ ಡಿಸೋಜ, ಕಿಶೋರ್‌ ಕುಮಾರ್‌ ಬೊಟ್ಯಾಡಿ, ದ.ಕ. ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ರವಿರಾಜ್‌ ಹೆಗ್ಡೆ, ನಬಾರ್ಡ್‌ ಮುಖ್ಯ…

Read More

ಗುಲ್ಬರ್ಗಾ: ಉತ್ತರ ಕರ್ನಾಟಕದ ಗುಲ್ಬರ್ಗಾದಲ್ಲಿ ನಡೆದ SSF ರಾಷ್ಟ ಮಟ್ಟದ ಸಾಹಿತ್ಯೋತ್ಸವವು ದೇಶದ ಮೂಲೆಮೂಲೆಗಳಿಂದ ಬಂದ 2,000 ಕ್ಕೂ ಹೆಚ್ಚು ಯುವ ಪ್ರತಿಭೆಗಳ ಭಾಗವಹಿಸುವಿಕೆಯಿಂದ ಯಶಸ್ವಿಯಾಗಿ ಸಂಪನ್ನವಾಯಿತು. ವಿವಿಧ ಕಲೆ ಹಾಗೂ ಸಾಹಿತ್ಯ ಸ್ಪರ್ಧೆಗಳಲ್ಲಿ ಅತೀ ಹೆಚ್ಚು ಅಂಕಗಳೊಂದಿಗೆ ಕರ್ನಾಟಕವು ಚಾಂಪಿಯನ್ ಪಟ್ಟ ಗಳಿಸಿತು. ಕೇರಳ ಮತ್ತು ಜಮ್ಮು-ಕಾಶ್ಮೀರ ಕ್ರಮವಾಗಿ ದ್ವಿತೀಯ ಮತ್ತು ತೃತೀಯ ಸ್ಥಾನಗಳನ್ನು ಪಡೆದವು. ವೈಯಕ್ತಿಕ ವಿಭಾಗಗಳಲ್ಲಿ ದೆಹಲಿಯ ಮುಹಮ್ಮದ್ ಅಶ್ಹಾದ್ ಅವರು ಕ್ಯಾಂಪಸ್ ಬಾಯ್ಸ್ ವಿಭಾಗದ “ಪೆನ್ ಆಫ್ ದ ಫೆಸ್ಟ್” ಆಗಿ ಆಯ್ಕೆಯಾದರೆ ಅಬ್ದುರ್ ರಶೀದ್ ಅವರನ್ನು ಸಾಮಾನ್ಯ ವಿಭಾಗದ “ಸ್ಟಾರ್ ಆಫ್ ದ ಫೆಸ್ಟ್” ಆಗಿ ಘೋಷಿಸಲಾಯಿತು. ಕಾರ್ಯಕ್ರಮದ ಅಂಗವಾಗಿ ಆಯೋಜಿಸಿದ್ದ ಕಲಾ ಶಾಲೆ ವೇದಿಕೆಯಲ್ಲಿ ಕಲೆ, ಸಾಹಿತ್ಯ ಹಾಗೂ ಸಂಸ್ಕೃತಿ ಕ್ಷೇತ್ರಗಳ ಗಣ್ಯ ವ್ಯಕ್ತಿಗಳಿಂದ ಹಲವು ಕಲಿಕಾ ಕಾರ್ಯಾಗಾರಗಳು ನಡೆದವು. ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತ ಮದನಗೂಡು ಚಿನ್ನಸ್ವಾಮಿ, ಸಮಾಜಸೇವಕ ಮತ್ತು ಸಾಹಿತ್ಯಕಾರ ಮುಹಮ್ಮದ್ ಅಮ್ಜದ್ ಹುಸೈನ್ ಉರ್ದು ಲೇಖಕ ಸಯ್ಯದ್…

Read More

ಮಂಗಳೂರು: ಮಂಗಳೂರು ಯಾಂತ್ರಿಕ ಮೀನುಗಾರರ ಪ್ರಾಥಮಿಕ ಸಹಕಾರ ಸಂಘ ನಿಯಮಿತ (ನಂ. 6740), ಸೌತ್‌ವಾರ್ಫ್‌, ಬಂದರು, ಮಂಗಳೂರು ಇವರ ಆಶ್ರಯದಲ್ಲಿ ನವೀಕೃತ ಮಂಜುಗಡ್ಡೆ ಸ್ಥಾವರದ ಉದ್ಘಾಟನಾ ಸಮಾರಂಭ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನವೆಂಬರ್ 16, 2025, ಆದಿತ್ಯವಾರ, ಸಂಜೆ 4 ಗಂಟೆಗೆ ಲೋಕನಾಥ ಬೋಳಾರ್ ವೇದಿಕೆಯಲ್ಲಿ ಜರಗಲಿದೆ.ಕಾರ್ಯಕ್ರಮವನ್ನು ಭಾರತ್ ಪೆಟ್ರೋಲಿಯಂ ಕಾರ್ಪೋರೇಶನ್ ಲಿಮಿಟೆಡ್ ಮಂಗಳೂರಿನ ವನ್ಸಾಲ್ ಟೆೆರಿಟರಿ ಮ್ಯಾನೇಜರ್ ವಿಪಿಎನ್ ದಾಸ್ ಉದ್ಘಾಟಿಸಲಿದ್ದಾರೆ.ಸಂಘದ ಅಧ್ಯಕ್ಷ ವರದ್‌ರಾಜ್ ಬಂಗೇರ ಅಧ್ಯಕ್ಷತೆ ವಹಿಸಲಿದ್ದಾರೆ.ಕಾರ್ಯಕ್ರಮಕ್ಕೆ ಪ್ರಮುಖ ಅತಿಥಿಗಳಾಗಿ–ತ್ರಿವೇಣಿ ರಾವ್ ಕೆ., ಸಹಕಾರ ಸಂಘಗಳ ಸಹಾಯಕ ನಿಬಂಧಕರು, ಮಂಗಳೂರು ಉಪವಿಭಾಗಸಿದ್ಧಯ್ಯ ಡಿ., ಜಂಟಿ ನಿರ್ದೇಶಕರು, ಮೀನುಗಾರಿಕಾ ಇಲಾಖೆ, ಮಂಗಳೂರುಸುಮನ ಸುಧಾಕರ್ ಬೋಳಾರ್, ಸಹಾಯಕ ಮಹಿಳಾ ಪ್ರಾಧ್ಯಾಪಕರು, ಸರಕಾರಿ ಪ್ರಥಮ ದರ್ಜೆ ಕಾಲೇಜು, ಬಲ್ಮಠರೇವತಿ ಜೆ.ಎ., ಮೀನುಗಾರಿಕೆ ಉಪ ನಿರ್ದೇಶಕರು, ಮೀನುಗಾರಿಕೆ ಬಂದರು, ಮಂಗಳೂರುಭಾಗವಹಿಸಲಿದ್ದಾರೆ .ನವೀಕೃತ ಮಂಜುಗಡ್ಡೆ ಸ್ಥಾವರದ ಉದ್ಘಾಟನೆಯೊಂದಿಗೆ, 210 ವಿದ್ಯಾರ್ಥಿಗಳಿಗೆ ಎಸ್ ಎಸ್ ಎಲ್ ಸಿ, ಪಿಯುಸಿ, ಡಿಗ್ರೀ ಇಂಜಿನಿಯರಿಂಗ್ ಸೇರಿದಂತೆ ಉನ್ನತ ವ್ಯಾಸಾಂಗ…

Read More

ಮಂಗಳೂರು: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಪ್ರಧಾನ ಕಚೇರಿ ಆತ್ಮಶಕ್ತಿ ಸೌಧದಲ್ಲಿ 72ನೇ ಅಖಿಲ ಭಾರತ ಸಹಕಾರ ಸಪ್ತಾಹದ ಪ್ರಯುಕ್ತ ಧ್ವಜಾರೋಹಣ ಕಾರ್ಯಕ್ರಮ ನೆರವೇರಿತು. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್‌ರವರು ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷರಾದ ನೇಮಿರಾಜ್ ಪಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಸೌಮ್ಯ ವಿಜಯ್ ಹಾಗೂ ಸಿಬ್ಬಂದಿ ವರ್ಗದವರು ಹಾಜರಿದ್ದರು.

Read More

ಮಂಗಳೂರು, ನ. 15; ಸರಣಿ ಅಪಘಾತ ಸಂಭವಿಸಿ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ಪಣಂಬೂರು ರಾಷ್ಟ್ರೀಯ ಹೆದ್ದಾರಿ 66ರ ಪಣಂಬೂರು ಸಿಗ್ನಲ್ ಬಳಿ ಶನಿವಾರ ಬೆಳಿಗ್ಗೆ ನಡೆದಿದೆ. ಣಂಬೂರು ಸಿಗ್ನಲ್ ನಲ್ಲಿ ವಾಹನಗಳು ನಿಂತಿತ್ತು ಎಂದು ಹೇಳಲಾಗಿದೆ. ಎದುರಿನಲ್ಲಿ ಒಂದು ಟ್ಯಾಂಕರ್ ನಿಂತಿದ್ದು, ಅದರ ಹಿಂಭಾಗದಲ್ಲಿ ಆಟೊ ರಿಕ್ಷಾ ನಿಂತಿತ್ತು. ಅದರ ಹಿಂದಿನಿಂದ ಬಂದ ಟ್ಯಾಂಕರ್ ಆಟೋ ರಿಕ್ಷಾಕ್ಕೆ ಡಿಕ್ಕಿಯಾಗಿ ರಿಕ್ಷಾ ಎದುರಿನಲ್ಲಿ ನಿಂತಿದ್ದ ಕಾರಿಗೆ ಅಪ್ಪಳಿಸಿ ಬಳಿಕ ಮುಂದೆ ನಿಂತಿದ್ದ ಮತ್ತೊಂದು ಟ್ಯಾಂಕರ್ ಗೆ ಅಪ್ಪಳಿಸಿದೆ ಎನ್ನಲಾಗಿದೆ. ಘಟನೆಯಿಂದ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಪ್ರಯಾಣಿಕರು ಹಾಗೂ ರಿಕ್ಷಾ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತದೇಹಗಳನ್ನು ನಗರದ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದುಬಂದಿದೆ.ಘಟನಾ ಸ್ಥಳಕ್ಕೆ ಮಂಗಳೂರು ಉತ್ತರ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Read More

ಉಳ್ಳಾಲ ತಾಲೂಕಿನ ಕುಂಪಲ ಮೂರುಕಟ್ಟೆಯ ನಿವಾಸಿ ದಯಾನಂದ (60) ಅವರ ಸಾವಿಗೆ ಕಾರಣವಾದ ಶ್ವಾನ ಸಾವನ್ನಪ್ಪಿದೆ. ಕುಂಪಲ ಬೈಪಾಸ್ ಸಮೀಪ ದಯಾನಂದ ಅವರ ಮೃತದೇಹ ರಕ್ತದ ಮಡುವಿನಲ್ಲಿ ಮನೆ ಅಂಗಳದಲ್ಲಿ ಪತ್ತೆಯಾಗಿತ್ತು. ಸ್ಥಳೀಯ ಚಿಕನ್ ಅಂಗಡಿ ಬದಿಯಲ್ಲಿ ಗಾಯವಾಗಿ ಕಣ್ಣೊಂದು ಹೊರಬಿದ್ದು ಮನೆ ಅಂಗಳಕ್ಕೆ ಓಡಿ ಅಲ್ಲೆ ಸಾವನ್ನಪ್ಪಿರುವುದು ಬೆಳಕಿಗೆ ಬಂದಿತ್ತು. ಬಳಿಕ ಹಲವಾರು ಅನುಮಾನಗಳು ಹುಟ್ಟಿಕೊಂಡವು. ಸ್ಥಳೀಯರೊಬ್ಬರು ನೋಡಿದ ಪ್ರಕಾರ ಮೃತದೇಹದ ಮೇಲೆ ನಾಯಿ ಕುಳಿತ್ತಿತ್ತು ಎಂದಿದ್ದರು. ಬಳಿಕ ಸ್ಥಳಕ್ಕೆ ಉಳ್ಳಾಲ ಪೊಲೀಸರು, ಇದರ ಜೊತೆಗೆ ಫಾರೆನ್ಸಿಕ್ ತಂಡವೂ ಆಗಮಿಸಿ, ಪರಿಶೀಲನೆ ನಡೆಸಿತ್ತು. ತದನಂತರ ನಾಯಿಯೇ ದಯಾನಂದ ಅವರನ್ನು ಕೊಂದಿದೆ ಎಂಬುವುದು ದೃಡಪಟ್ಟಿತ್ತು. ಇದೀಗ ಒರ್ವನನ್ನು ಕಚ್ಚಿ ಸಾಯಿಸಿದ ಶ್ವಾನವೂ ಸಾವನ್ನಪ್ಪಿದೆ. ಈ ಘಟನೆ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದ್ದು, ದಯವಿಟ್ಟು ಅಧಿಕಾರಿಗಳು ಬೀದಿ ನಾಯಿಗಳ ಹಾವಳಿಯನ್ನು ತಡೆಗಟ್ಟುವಂತೆ ಸಾರ್ವಜನಿಕರು ವಿನಂತಿಸಿಕೊAಡಿದ್ದಾರೆ.

Read More

ಮಂಗಳೂರು, ನ. 15: ಸಿಎನ್‌ಜಿ ಟ್ಯಾಂಕರ್‌ನಲ್ಲಿ ಸೋರಿಕೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸ್ಥಳೀಯ ನಿವಾಸಿಗಳಲ್ಲಿ ಕೆಲಕಾಲ ಆತಂಕದ ವಾತಾವರಣ ಸೃಷ್ಟಿಯಾದ ಘಟನೆ ಸುರತ್ಕಲ್ ಜಂಕ್ಷನ್ ಬಳಿಯ ಹರ್ಷಾ ಶೋರೂಂ ಸಮೀಪ ಶುಕ್ರವಾರ ರಾತ್ರಿ ಸಂಭವಿಸಿದೆ. ಬೈಕಂಪಾಡಿಯ ಗೇಲ್ ಪಂಪ್‌ನಿಂದ ಸಿಎನ್‌ಜಿ ತುಂಬಿಸಿಕೊಂಡು ಸುರತ್ಕಲ್ ಕಡೆಗೆ ಸಾಗುತ್ತಿದ್ದ ಟ್ಯಾಂಕರ್‌ನಲ್ಲಿ ಸೋರಿಕೆ ಆರಂಭವಾಗಿದೆ ಎಂದು ವರದಿಯಾಗಿದೆ. ಕೂಡಲೇ ಚಾಲಕ ರಾಷ್ಟ್ರೀಯ ಹೆದ್ದಾರಿಯ ಬದಿಗೆ ವಾಹನವನ್ನು ನಿಲ್ಲಿಸಿ, ಉಂಟಾದ ಅಪಾಯದ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.ಮುನ್ನೆಚ್ಚರಿಕೆ ಕ್ರಮವಾಗಿ, ರಾಷ್ಟ್ರೀಯ ಹೆದ್ದಾರಿಯನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗಿತ್ತು ಮತ್ತು ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಯಿತು.ಸಿಎನ್‌ಜಿ ಅಡುಗೆ ಅನಿಲದಷ್ಟು ಅಪಾಯಕಾರಿಯಲ್ಲದಿದ್ದರೂ, ಇದು ನೈಸರ್ಗಿಕ ಅನಿಲದ ಭಾಗವಾಗಿದೆ. ಒಂದು ವೇಳೆ ದೊಡ್ಡ ಪ್ರಮಾಣದ ಬೆಂಕಿ ಅವಘಡ ಸಂಭವಿಸಿದರೆ ಸಿಲಿಂಡರ್ ಸ್ಫೋಟಗೊಳ್ಳುವ ಸಾಧ್ಯತೆ ಇರುತ್ತದೆ ಎಂದು ತಜ್ಞರು ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಯಾವುದೇ ಅಪಾಯಕ್ಕೆ ಅವಕಾಶ ನೀಡದೆ ತಕ್ಷಣವೇ ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಯಿತು.

Read More

ಬಿ.ಸಿ.ರೋಡ್;ಬಿ.ಸಿ.ರೋಡಿನ ಸರ್ಕಲ್‌ನಲ್ಲಿ ನಡೆದ ಭೀಕರ ಅಪಘಾತದಲ್ಲಿ ಮೂವರು ಮೃತಪಟ್ಟು ಆರು ಮಂದಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೆಂಗಳೂರು ಪೀಣ್ಯ ನಿವಾಸಿಗಳಾದ (64), ರಮ್ಯ (23) ಹಾಗೂ ನಂಜಮ್ಮ (75) ಸಾವನ್ನಪ್ಪಿದವರಾಗಿದ್ದಾರೆ. ಉಳಿದಂತೆ ಕೀರ್ತಿ, ಸುಶೀಲಾ, ಬಿಂದು ಹಾಗೂ ಪ್ರಶಾಂತ್ ಅವರು ಗಂಭೀರವಾಗಿ ಗಾಯಗೊಂಡಿದ್ದು, ಚಿಂತಾಜನಕ ಸ್ಥಿತಿಯಲ್ಲಿ ತುರ್ತು ಚಿಕಿತ್ಸಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಚಾಲಕ ಸುಬ್ರಹ್ಮಣ್ಯ ಹಾಗೂ ಕಿರಣ್ ಅವರು ಅಲ್ಪಸ್ವಲ್ಪ ಗಾಯಗಳೊಂದಿಗೆ ಯಾವುದೇ ಅಪಾಯವಿಲ್ಲದೆ ಪಾರಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗಿದೆ. ಬೆಂಗಳೂರಿನಿAದ ಇನ್ನೋವಾ ಕಾರಿನಲ್ಲಿ ಉಡುಪಿ ಶ್ರೀಕೃಷ್ಣ ಮಠಕ್ಕೆ ಕೃಷ್ಣನ ದರ್ಶನಕ್ಕೆಂದು ಹೊರಟಿದ್ದವರು ಎಂದು ತಿಳಿದು ಬಂದಿದೆ. ಇಂದು ಮುಂಜಾನೆ ಸುಮಾರು 4.40ರ ಸಮಯದಲ್ಲಿ ಬೆಂಗಳೂರಿನ ಕಡೆಯಿಂದ ಬರುತ್ತಿದ್ದ ಕಾರು ಬಿ.ಸಿ.ರೋಡಿನ ಎನ್.ಜಿ ಸರ್ಕಲ್‌ಗೆ ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ಜಖಂಗೊAಡಿದ್ದು, ಒರ್ವ ಸ್ಥಳದಲ್ಲಿಯೇ ಮೃತಪಟ್ಟಿದ್ದು, ಉಳಿದಂತೆ ಇಬ್ಬರು ಆಸ್ಪತ್ರೆಯಲ್ಲಿ ಅಸುನೀಗಿದ್ದಾರೆ. ಅವೈಜ್ಷಾನಿಕ ಮಾದರಿಯ ಸರ್ಕಲ್ ಅಪಘಾತಕ್ಕೆ ಕಾರಣ ಎಂಬ ಆರೋಪಗಳು ಸಾರ್ವಜನಿಕರ ವಲಯಗಳಲ್ಲಿ…

Read More

ಉಳ್ಳಾಲ ತಾಲೂಕಿನ ಕುಂಪಲ ಮೂರುಕಟ್ಟೆಯಲ್ಲಿ ನಾಯಿ ಕಚ್ಚಿದ ಪರಿಣಾಮ ದಯಾನಂದ (60) ಅವರ ದಾರುಣ ಸಾವು ನಡೆದಿರುವುದು ಕೇವಲ ಒಂದು ಅಪಘಾತವಲ್ಲ—ಈದುರಂತವು ಸ್ಥಳೀಯ ಆಡಳಿತದ ಗಂಭೀರ ನಿರ್ಲಕ್ಷ್ಯದ ಕಳಂಕವನ್ನು ಹೊತ್ತು ಬಂದಿದೆ. ಸದ್ಯಕ್ಕೆ ಪೋಲೀಸರು ಯು.ಡಿ.ಆರ್ (ಅಸಹಜ ಸಾವು ಪ್ರಕರಣ) ದಾಖಲಿಸಿದ್ದು, ಇಂದು ಸಂಜೆ ಪೋಸ್ಟ್ ಮಾರ್ಟಮ್ ವರದಿ ಉಳ್ಳಾಲ ಪೋಲಿಸ್ ಠಾಣೆಗೆ ತಲುಪಲಿದೆ ಎಂದು ಉಳ್ಳಾಲ ಪೋಲೀಸರು ಉಳ್ಳಾಲವಾಣಿಗೆ ತಿಳಿಸಿದ್ದಾರೆ. ಆದರೆ ಇದು ಕೇವಲ ವೈದ್ಯಕೀಯ ವರದಿ ವಿಷಯವಲ್ಲ; ಇದು ಕಾನೂನು, ಆಡಳಿತ ಮತ್ತು ಮಾನವ ಜೀವದ ಮೌಲ್ಯಗಳ ಪ್ರಶ್ನೆ. ಆಡಳಿತದ ನಿರ್ಲಕ್ಷ್ಯ – ಈಗ ಕಾನೂನು ಕ್ರಮದ ಸಾಧ್ಯತೆ ಈ ಘಟನೆ ನಾಯಿ ಕಚ್ಚುವಿಕೆಯಿಂದ ಸಂಭವಿಸಿದ್ದಾಗಿ ದೃಢಪಟ್ಟರೆ, BNS ಸೆಕ್ಷನ್ 105 (ಸಾರ್ವಜನಿಕ ಸುರಕ್ಷತೆಯಲ್ಲಿ ಆಡಳಿತದ ನಿರ್ಲಕ್ಷ್ಯ) ಮತ್ತು 106 (ಅಪಾಯ ತಿಳಿದಿದ್ದರೂ ಕ್ರಮ ಕೈಗೊಳ್ಳದ ಹೊಣೆಗಾರಿಕೆ)ರಂತೆ ಆಡಳಿತಾಧಿಕಾರಿಗಳ ವಿರುದ್ಧ ಕೇಸ್ ದಾಖಲಿಸುವ ಅವಕಾಶವಿದೆ. ಪ್ರಮುಖವಾಗಿ, BNS 105 ಅನ್ವಯಿಸಲು ಕಾರಣವೇನೆಂದರೆ ಉಳ್ಳಾಲವಾಣಿ ಈಗಾಗಲೇ 2025ರ ಅಕ್ಟೋಬರ್ 27ರಂದು“ಉಳ್ಳಾಲದಲ್ಲಿ…

Read More