ಉಳ್ಳಾಲ.ನ.14: ಉಳ್ಳಾಲ ತಾಲೂಕಿನಲ್ಲಿ ಬೀದಿ ನಾಯಿಗಳ ಹಾವಳಿ ಜೋರಾಗಿದೆ, ತುರ್ತು ಕ್ರಮ ಕೈಗೊಳ್ಳಿ ಎಂದು ಜಿಲ್ಲಾಡಳಿತಕ್ಕೆ ಎಚ್ಚರಿಕೆಯ ಗಂಟೆಯಾಗಿ ಉಳ್ಳಾಲವಾಣಿ ಮಾಧ್ಯಮ 2025ರ ಅಕ್ಟೋಬರ್ 27ರಂದು ಸುದ್ದಿಯನ್ನು ಪ್ರಕಟಿಸಿತ್ತು. ಆದರೆ ಅಧಿಕಾರಿಗಳು ಎಚ್ಚೆತ್ತುಕೊಳ್ಳಲೇ ಇಲ್ಲ. ಇದರ ಪರಿಣಾಮವಾಗಿ ಇಂದು ಒಂದು ಅಮಾಯಕ ಜೀವ ಬಲಿಯಾಗಿದೆ. ಉಳ್ಳಾಲ ಭಾಗದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದೆ. ಇದರಿಂದ ಸಾರ್ವಜನಿಕರು, ವಿಶೇಷವಾಗಿ ಮಕ್ಕಳು, ವೃದ್ಧರು ಮತ್ತು ವಿದ್ಯಾರ್ಥಿಗಳು ಭಯಭೀತರಾಗಿ ಓಡಾಡುವ ಪರಿಸ್ಥಿತಿ ಉಂಟಾಗಿದೆ ಎಂದು ವರದಿ ಬಿತ್ತರಿಸಿದ ಸಂದರ್ಭವೇ ಜಿಲ್ಲಾಡಳಿತ ಎಚೆತ್ತುಕೊಂಡು ಬೀದಿ ನಾಯಿ ಹಾವಳಿಯನ್ನು ತಡೆಗಟ್ಟುವಲ್ಲಿ ಸರಿಯಾದ ಕ್ರಮವನ್ನು ಕೈಗೊಂಡಿದ್ದರೆ ಇಂದು ಅಮಾಯಕ ಜೀವ ಬಲಿಯಾಗುತ್ತಿರಲ್ಲಿಲ್ಲ. ಇಲ್ಲಿ ಅಧಿಕಾರಿಗಳ ತಾತ್ಸರ, ನಿರ್ಲಕ್ಷö್ಯತನ ಎದ್ದು ಕಾಣುತ್ತಿದೆ. ಇವರುಗಳ ಉದಾಸೀನತೆಗೆ ಇಂದುಬೀದಿ ನಾಯಿಯ ದಾಳಿಗೆ ಕುಂಪಲ ಮೂರುಕಟ್ಟೆ ನಿವಾಸಿ ದಿ| ರಾಮ ಗಟ್ಟಿ ಎಂಬವರ ಪುತ್ರ ದಯಾನಂದ (60) ಮೃತಪಟ್ಟಿದ್ದಾರೆ. ಇವರ ಸಾವಿನ ಜವಾಬ್ದಾರಿಯನ್ನು ನೇರವಾಗಿ ಸ್ಥಳೀಯ ಜಿಲ್ಲಾಡಳಿತ ಹೊರಬೇಕಾಗಿದೆ. ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ…
Author: UllalaVani
ಕುತ್ತಾರು;ತುಳುನಾಡಿನ ಕಾರಣೀಕ ಕ್ಷೇತ್ರಗಳಲ್ಲಿ ಒಂದಾದ ಕುತ್ತಾರು ಕೊರಗಜ್ಜನ ಆದಿಸ್ಥಳಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ್ದಾರೆ. ಬಳಿಕ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕೊರಗಜ್ಜನ ಕ್ಷೇತ್ರಕ್ಕೆ ಬರಬೇಕು ಎಂದು ಅಂದುಕೊAಡಿದ್ದೆ. ಆದರೆ ಇಂದು ಕ್ಷೇತ್ರಕ್ಕೆ ಬಂದು ಪ್ರಾರ್ಥನೆ ಸಲ್ಲಿಸಿದೆ ಎಂದರು. ಇದೇ ಸಂದರ್ಭ ಬಿಹಾರ ಫಲಿತಾಂಶದ ಬಗ್ಗೆ ಮಾತನಾಡಿ, ಬಿಹಾರದ ಚುನಾವಣೆಯಲ್ಲಿ ನಿರೀಕ್ಷೆಗೂ ಮೀರಿದ ಮತಗಳಿಂದ ಭಾರತೀಯ ಜನತಾ ಪಾರ್ಟಿ ಜಯಶಾಲಿಯಾಗಿದೆ. ಬಿಹಾರದ ಜನ ತಮ್ಮ ಅಮೂಲ್ಯವಾದ ಮತಗಳಿಂದ ಆಶೀರ್ವಾದ ಮಾಡಿದ್ದಾರೆ. ಇದರಿಂದ ರಾಹುಲ್ ಗಾಂಧಿ ಹಾಗೂ ತೇಜಸ್ವಿ ಯಾದವ್ ಅವರು, ಪ್ರಪಂಚದಾದ್ಯAತ ಬಿತ್ತರಿಸುತ್ತಿದ್ದ ಸುಳ್ಳಿಗೆ ದೊಡ್ಡಮಟ್ಟದ ಸೋಲಾಗಿದೆ ಎಂದು ಟಾಂಗ್ ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಉಪಾಧ್ಯಕ್ಷ ರವೀಂದ್ರ ಶೆಟ್ಟಿ ಉಳಿದೊಟ್ಟು, ಜಿಲ್ಲಾ ಮಹಿಳಾ ಮೋರ್ಛಾ ಪ್ರಧಾನ ಕಾರ್ಯದರ್ಶಿ ಸಂಧ್ಯಾ ವೆಂಕಟೇಶ್, ರಾಜ್ಯ ಮಹಿಳಾ ಮೋರ್ಚಾ ಕಾರ್ಯದರ್ಶಿ ಪೂಜಾ ಪೈ, ಜಿಲ್ಲಾ ಕಾರ್ಯದರ್ಶಿ ದಿನೇಶ್ ಅಮ್ಟೂರು, ಜಿ.ಪಂ ಮಾಜಿ ಸದಸ್ಯೆ ಧನಲಕ್ಷಿö್ಮÃ…
ಉಳ್ಳಾಲ,ನ.14: ರಾಜ್ಯದಲ್ಲಿ ಸರಕಾರಿ ಶಾಲೆಗಳಲ್ಲಿ ಮಕ್ಕಳ ಸಂಖ್ಯೆಯಲ್ಲಿ ಇಳಿಕೆ ಕಾಣುತ್ತಿದೆ. ಹಾಗಾಗಿ ರಾಜ್ಯ ಸರಕಾರ ಹಲವಾರು ಪೋತ್ಸಾಹ ನೀಡುವ ನಿಟ್ಟಿನಲ್ಲಿ ಹಲವಾರು ಕಾರ್ಯಕ್ರಮಗಳನ್ನು ಮಾಡುತ್ತಿದೆ. ಅದಕ್ಕೆ ಪೂರಕವಾದ ಕಾರ್ಯಕ್ರಮಗಳಲ್ಲಿ ಈ ಮಕ್ಕಳ ದಿನಾಚರಣೆಯೂ ಒಂದಾಗಿದೆ ಎಂದು ಉಳ್ಳಾಲ ತಾಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ರಫೀಕ್ ಅಂಬ್ಲಮೊಗರು ಹೇಳಿದರು. ಇವರು ಉಳ್ಳಾಲ ತಾಲೂಕಿನ ಅಂಬ್ಲಮೊಗರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಸಮ್ಮುಖದಲ್ಲಿ ನಡೆದ ಪೋಷಕ ಶಿಕ್ಷಕರ ಮಹಾಸಭೆ ಹಾಗೂ ಮಕ್ಕಳ ದಿನಾಚರಣೆ ಕಾರ್ಯಕ್ರವನ್ನು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿ ಮಾತನಾಡಿದರು. ಎಲ್‌ಕೆಜಿ, ಯುಕೆಜಿ ಸರಕಾರದಿಂದ ಅನುದಾನ ಬಿಡುಗಡೆಯಾದ ನಂತರ ಮಕ್ಕಳನ್ನು ಶಾಲೆಗೆ ಎಡ್ಮಿನೇಷನ್ ಮಾಡಿಕೊಳ್ಳುತ್ತದೆ. ಗ್ರಾಮಸ್ಥರ ಸಹಕಾರ ಅಂಬ್ಲಮೊಗರು ಶಾಲೆಗೆ ಸಂಪೂರ್ಣವಾಗಿದೆ. ಇದರ ಅರ್ಥವೆನೆಂದರೆ ಅಂಬ್ಲಮೊಗರು ಶಾಲೆ ಹಾಗೂ ಗ್ರಾಮದ ಹೆಸರು ಉನ್ನತ ಮಟ್ಟಕ್ಕೇರಿದೆ ಎಂದು ಅಭಿಪ್ರಾಯಪಟ್ಟರು. ಇದೇ ಸಂದರ್ಭ ಮಾತನಾಡಿದ ಕ್ಷೇತ್ರದ ಶಿಕ್ಷಣಾಧಿಕಾರಿಗಳು ಈಶ್ವರ್ ಅವರು, ಮಕ್ಕಳ ದಿನಾಚರಣೆ ಮಕ್ಕಳ ಹಬ್ಬ. ನಿಮಗಾಗಿ ಕಾರ್ಯಕ್ರಮವನ್ನು ಹಬ್ಬವನ್ನಾಗಿ…
ಮಂಗಳೂರು: ಆರ್ ಎಸ್ ಸಿನಿಮಾಸ್, ಶೂಲಿನ್ ಫಿಲಂಸ್, ಮುಗ್ರೋಡಿ ಪ್ರೊಡಕ್ಷನ್ ಲಾಂಛನದಲ್ಲಿ ತಯಾರಾದ ರೂಪೇಶ್ ಶೆಟ್ಟಿ ನಿರ್ದೇಶನದ ಜೈ ಸಿನಿಮಾ ಭಾರತ್ ಸಿನಿಮಾಸ್ ನಲ್ಲಿ ಶುಕ್ರವಾರ ಬಿಡುಗಡೆಗೊಂಡಿತು. ಅತಿಥಿಗಳು ದೀಪ ಬೆಳಗಿಸುವ ಮೂಲಕ ಸಿನಿಮಾ ಪ್ರದರ್ಶನಕ್ಕೆ ಚಾಲನೆ ನೀಡಿದರು. ಬಳಿಕ ಮಾತಾಡಿದ ಹಿರಿಯ ರಂಗಕರ್ಮಿ ಡಾ.ದೇವದಾಸ್ ಕಾಪಿಕಾಡ್ ಅವರು, “ರೂಪೇಶ್ ಶೆಟ್ಟಿ ನಿರ್ದೇಶನದಲ್ಲಿ ಜೈ ಸಿನಿಮಾ ಬಹಳ ಚೆನ್ನಾಗಿ ಮೂಡಿಬಂದಿದೆ. ಪ್ರತಿಯೊಂದು ತುಳು ಸಿನಿಮಾಕ್ಕೂ ಬೆಂಬಲ ನೀಡಬೇಕಾದ್ದು ನಮ್ಮೆಲ್ಲರ ಕರ್ತವ್ಯ. ತುಳುವರು ಸಿನಿಮಾ ನೋಡುವ ಮೂಲಕ ಚಿತ್ರತಂಡವನ್ನು ಪ್ರೋತ್ಸಾಹಿಸಬೇಕು” ಎಂದರು.ಚಿತ್ರ ನಿರ್ಮಾಪಕ ಪ್ರಕಾಶ್ ಪಾಂಡೇಶ್ವರ್ ಮಾತಾಡಿ, “ತುಳು ಸಿನಿಮಾಗಳಿಗೆ ಇಂದು ನಿರ್ದಿಷ್ಟ ಥಿಯೇಟರ್ ಗಳಿವೆ. ಹೀಗಾಗಿ ಸಿನಿಮಾಕ್ಕೆ ಬಂಡವಾಳ ಹಾಕಿದ ನಿರ್ಮಾಪಕರು ಗೆಲ್ಲಬೇಕಾದರೆ ತುಳುವರು ಥಿಯೇಟರ್ ಗಳಿಗೆ ಹೋಗಿ ಸಿನಿಮಾ ನೋಡಬೇಕು. ಜೈ ಸಿನಿಮಾ ಜನರ ನಿರೀಕ್ಷೆ ಹೆಚ್ಚಿಸಿದ್ದು ಸಿನಿಮಾ ಗೆಲ್ಲಲಿ“ ಎಂದು ಶುಭ ಹಾರೈಸಿದರು.ವೇದಿಕೆಯಲ್ಲಿ ನಟ ನಿರ್ದೇಶಕ ರೂಪೇಶ್ ಶೆಟ್ಟಿ, ಬಿಗ್ ಸಿನೆಮಾಸ್ ನ ಬಾಲಕೃಷ್ಣ ಶೆಟ್ಟಿ, ಭೋಜರಾಜ್ ವಾಮಂಜೂರ್,…
ಕುಂಪಲ : ಪ್ರಾಣಿ ದಾಳಿಯಿಂದ ಕುಂಪಲ ಮೂರುಕಟ್ಟೆ ನಿವಾಸಿ ದಿ| ರಾಮ ಗಟ್ಟಿ ಎಂಬವರ ಪುತ್ರ ದಯಾನಂದ (60) ಮೃತಪಟ್ಟಿರುವುದಾಗಿ ಪೊಲೀಸ್ ಕಮೀಷನರ್ ಸುಧೀರ್ ಕುಮಾರ್ ರೆಡ್ಡಿ ಸ್ಪಷ್ಟಪಡಿಸಿದ್ದು, ಸ್ಥಳಕ್ಕೆ ಭೇಟಿ ನೀಡಿದ ಫಾರೆನ್ಸಿಕ್ ವೈದ್ಯರು ಇದು ಪ್ರಾಣಿ ದಾಳಿಯಿಂದಾದ ಸಾವೇ ಎಂಬುದನ್ನು ದೃಢಪಡಿಸಿದ್ದಾರೆ ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಇಂದು ಬೆಳಗಿನ ಜಾವ ಕುಂಪಲ ಬೈಪಾಸ್ ಪ್ರದೇಶದ ಮನೆಯೊಂದರ ಅಂಗಳದಲ್ಲಿ ರಕ್ತದ ಮಡುವಿನಲ್ಲಿ ದಯಾನಂದ ಮೃತದೇಹಪತ್ತೆಯಾಗಿತ್ತು. ಸ್ಥಳದಲ್ಲಿ ರಕ್ತದ ಗುರುತುಗಳು ಕಂಡುಬಂದಿದ್ದು, ಸುಮಾರು ಬೆಳಿಗ್ಗೆ 3 ಗಂಟೆಯ ವೇಳೆ ಅವರು ಅಲ್ಲಿ ನಡೆದು ಹೋಗುತ್ತಿರುವುದನ್ನು ಸ್ಥಳೀಯರು ನೋಡಿದ್ದಾಗಿ ತಿಳಿಸಿದ್ದಾರೆ. ಫಾರೆನ್ಸಿಕ್ ತಂಡ ಹತ್ತಿರ ಕಂಡುಬಂದ ಗಾಯಗಳಿಂದ ಪ್ರಾಥಮಿಕವಾಗಿ ಪ್ರಾಣಿ ದಾಳಿ ಶಂಕೆ ವ್ಯಕ್ತವಾಗಿತ್ತು. ಸ್ಥಳಕ್ಕೆ ಭೇಟಿ ನೀಡಿದ ಫಾರೆನ್ಸಿಕ್ ವೈದ್ಯರು ಇದು ಪ್ರಾಣಿ ದಾಳಿಯಿಂದಾದ ಸಾವೇ ಎಂಬುದನ್ನು ದೃಢಪಡಿಸಿದ್ದಾರೆ. ಇದೇ ವೇಳೆ, ರಕ್ತ ಬಾಯಿಗೆ ತಗುಲಿರುವಂತೆ ಕಾಣುತ್ತಿದ್ದ ನಾಯಿಯೊಂದು ಅಲೆದಾಡಿರುವುದನ್ನು ಕೆಲವರು ಗಮನಿಸಿದ್ದಾಗಿ ತಿಳಿದುಬಂದಿದೆ. ನಾಯಿಯನ್ನು ಪ್ರಾಣಿ ದಯಾ ಸಂಘದ…
ಕೊಣಾಜೆ: ಶಿವಗಿರಿ ಮಠ ವರ್ಕಳ ಮತ್ತು ಶ್ರೀ ನಾರಾಯಣ ಗುರು ಅಧ್ಯಯನ ಪೀಠ ಮಂಗಳೂರು ವಿಶ್ವವಿದ್ಯಾನಿಲಯ ಇದರ ಆಶ್ರಯದಲ್ಲಿ ಶತಮಾನ ಮಹಾ ಪ್ರಸ್ಥಾನ ಶ್ರೀ ನಾರಾಯಣ ಗುರು – ಗಾಂಧೀಜಿ ಸಂವಾದ ಶತಮಾನೋತ್ಸವ ಕಾರ್ಯಕ್ರಮವು ಡಿಸೆಂಬರ್ ನಲ್ಲಿ ನಡೆಯಲಿದ್ದು ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಅವರು ಭಾಗವಹಿಸಲಿದ್ದು, ಇದರ ಪೂರ್ವಭಾವಿ ಸಭೆಯು ವಿಧಾನ ಸಭಾಧ್ಯಕ್ಷರಾದ ಯು.ಟಿ.ಖಾದರ್ ಅವರ ನೇತೃತ್ವದಲ್ಲಿ ಬುಧವಾರದಂದು ಅಸೈಗೋಳಿಯ ಬಂಟರಭವನದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಯು.ಟಿ.ಖಾದರ್ ಅವರು ಬ್ರಹ್ಮಶ್ರೀ ನಾರಾಯಣಗುರು ಹಾಗೂ ಗಾಂಧೀಜಿಯ ಸಂವಾದದ ಶತಮಾನೋತ್ಸವ ರಾಜ್ಯ ಮಟ್ಟದ ಐತಿಹಾಸಿಕ ಕಾರ್ಯಕ್ರಮವು ಡಿ.3ರಂದು ಕೊಣಾಜೆಯಲ್ಲಿ ನಡೆಯಲಿದ್ದು ಎಲ್ಲಾ ವರ್ಗದ ಜನರು ಭಾಗವಹಿಸಲಿದ್ದು, ಬಂಧುತ್ವದ ಸಹೋದರತೆ, ಸೌಹಾರ್ದತೆಯ ಕಾರ್ಯಕ್ರಮವಾಗಲಿದೆ ಎಂದರು. ಆರ್ಯ ಈಡಿಗ ಮಹಾಸಂಸ್ಥಾನದ ಪೀಠಾದಿಪತಿ ಶ್ರೀ ವಿಖ್ಯಾತನಂದ ಸ್ವಾಮೀಜಿ ಅವರು ಮಾತನಾಡಿ, ಮಹಾತ್ಮ ಗಾಂಧೀಜಿಯವರು ಮೂರು ಬಾರಿ ಶಿವಗಿರಿಗೆ ಬಂದಿದ್ದರು. ಗಾಂಧೀಜಿಯವರ ಸ್ವಾತಂತ್ರ್ಯದ ಹೋರಾಟದೊಂದಿಗೆ ಸಮಾಜದಲ್ಲಿದ್ದ ಅಸ್ಪೃಶ್ಯತೆಯನ್ನು ದೂರಗೊಳಿಸಲು ಪ್ರೇರಣೆಯಾದವರು ಬ್ರಹ್ಮಶ್ರೀ ನಾರಾಯಣಗುರುಗಳು. ಇದೀಗ ಅವರ ಸಮ್ಮಿಳನವು ಶತಮಾನೋತ್ಸವವನ್ನು ಆಚರಿಸುತ್ತಿದ್ದು,…
ಕೊಣಾಜೆ: ಮಂಗಳೂರು ವಿಶ್ವವಿದ್ಯಾಲಯದ ಗಣಿತಶಾಸ್ತ್ರ ವಿಭಾಗದ ವತಿಯಿಂದ ‘ಜಿಯೋಮೆಟ್ರಿಕಲ್ ಸ್ಟಕ್ಚರ್ಸ್ ಆಂಡ್ ಡಿಫರೆನ್ಸಿಯಲ್ ಅನಲೈಸಿಸ್ ‘ ವಿಷಯದ ಅಂತರಾಷ್ಟ್ರೀಯ ಕಾರ್ಯಾಗಾರವು ಗಣಿತಶಾಸ್ತ್ರ ವಿಭಾಗದ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಮಂಗಳೂರು ವಿಶ್ವವಿದ್ಯಾಲಯದ ಪರೀಕ್ಷಾಂಗ ಕುಲಸಚಿವರಾದ ಪ್ರೊ. ಎಚ್. ದೇವೇಂದ್ರಪ್ಪ ಅವರು ಉದ್ಘಾಟಿಸಿ, ಆಧುನಿಕ ಗಣಿತ ಸಂಶೋಧನೆಯಲ್ಲಿ ಜ್ಯಾಮಿತಿ ಮತ್ತು ವಿಶ್ಲೇಷಣೆಯ ಮಹತ್ವವನ್ನು ವಿವರಿಸಿದರು.ಕಾರ್ಯಾಗಾರದಲ್ಲಿ ಭಾರತ ಮತ್ತು ವಿದೇಶಗಳ ಖ್ಯಾತ ಗಣಿತಶಾಸ್ತ್ರ ವಿದ್ವಾಂಸರು ಉಪನ್ಯಾಸ ನೀಡಿದರು. ಸರ್ಬಿಯಾದ ಮ್ಯಾಥಮ್ಯಾಟಿಕ್ಸ್ ವಿಭಾಗದ ಡಾ.ಜುಬಿಕಾ, ರೋಮೇನಿಯಾ ಟೆಕ್ನಿಕಲ್ ವಿವಿಯ ಪ್ರಾಧ್ಯಾಪಕರಾದ ಡಾ.ಕಾರ್ನೆಲಿಯಾ ಭಾಗವಹಿಸಿ ಗಣಿತ ಭೌತಶಾಸ್ತ್ರ ಹಾಗೂ ಸಂಬಂಧಿತ ಕ್ಷೇತ್ರಗಳಲ್ಲಿ ಅನ್ವಯಗಳ ಇತ್ತೀಚಿನ ಬೆಳವಣಿಗೆಗಳು ಮತ್ತು ಹೊಸ ಪ್ರಕಾರಗಳ ಕುರಿತು ಮಾತನಾಡಿ, ಸಂವಾದ ನಡೆಸಿದರು. ಈ ಸಂದರ್ಭದಲ್ಲಿ ಕುವೆಂಪು ವಿಶ್ವವಿದ್ಯಾಲಯದ ಪ್ರಾಧ್ಯಾಪಕರಾದ ಪ್ರೊ. ಬಿ. ಜೆ. ಗಿರೀಶ, ದಾವಣಗೆರೆ ವಿಶ್ವವಿದ್ಯಾಲಯದ ಪ್ರೊ. ಡಿ. ಜಿ. ಪ್ರಕಾಶ್ ಅತಿಥಿಗಳಾಗಿ ಭಾಗವಹಿಸಿದ್ದರು. ಮಂಗಳೂರು ವಿಶ್ವವಿದ್ಯಾಲಯದ ಪ್ರಾಧ್ಯಾಪಕರಾದ ಪ್ರೊ. ಮೋಹನ ಕೆ. ಎಸ್., ಡಾ. ಚಂದ್ರು ಹೆಗಡೆ ಮತ್ತು ಪ್ರೊ. ಭಾರ್ಗವ…
ಮುಡಿಪು; ‘ಸಂಗೀತ, ನೃತ್ಯ, ಸಾಹಿತ್ಯ ಇವುಗಳ ಮೂಲಕ ಸಾಮಾಜಿಕ ಸ್ವಾಸ್ಥ್ಯ ಸಾಧ್ಯ. ಸಾಹಿತ್ಯಕ್ಷೇತ್ರ ಮತ್ತು ಸಮಾಜದಲ್ಲಿ ಪರಸ್ಪರ ಕೊಡುಕೊಳ್ಳುವಿಕೆ ನಡೆಯದೇ ಇದ್ದರೆ ಅದು ಅಪಾಯಕಾರಿ ಸಂಗತಿ’ ಎಂದು ಹೆಸರಾಂತ ಕಲಾವಿದೆ ಡಾ. ಕೆ.ಎಸ್ ಪವಿತ್ರ ಹೇಳಿದರು. ಅವರು ಮಂಗಳೂರು ವಿಶ್ವವಿದ್ಯಾಲಯ ಎಸ್.ವಿ.ಪಿ ಕನ್ನಡ ಅಧ್ಯಯನ ಸಂಸ್ಥೆಯ ವಿವೇಕ ರೈ ವಿಚಾರ ವೇದಿಕೆಯಲ್ಲಿ ಕನಕ ಜಯಂತಿ ಪ್ರಯುಕ್ತ ನಡೆದ ‘ಕನಕ ಕೀರ್ತನ ಗಂಗೋತ್ರಿ’ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ‘ಕನಕದಾಸರ ಕೀರ್ತನೆಗಳಲ್ಲಿ ವೈಚಾರಿಕತೆ, ಭಾವನಾತೀವ್ರತೆ ಇದೆ. ನಾವು ಅಹಂ ಬಿಟ್ಟು ಸಾಹಿತ್ಯ ಮತ್ತು ಸಾಂಸ್ಕೃತಿಕವಾಗಿ ಕೆಲಸ ಮಾಡದೇ ಇದ್ದರೆ ಸಮಾಜದಲ್ಲಿ ಎಲ್ಲಾ ಬಗೆಯ ಅಸಮಾನತೆ ಸೃಷ್ಟಿಯಾಗುವ ಅಪಾಯವಿದೆ’ ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಪ್ರೊ. ನಾಗಪ್ಪ ಗೌಡ ಆರ್ ಮಾತಾಡಿ, ಕರ್ನಾಟಕ ಸಾಹಿತ್ಯ, ಸಾಂಸ್ಕೃತಿಕ ಕ್ಷೇತ್ರದಲ್ಲಿ ಬಸವಣ್ಣನಂತೆ ಕನಕದಾಸರು ಪ್ರಮುಖರು. ಇಂದಿನ ಯುವ ಜನಾಂಗವು ಕನಕದಾಸರನ್ನು ಕೇವಲ ಭಕ್ತಿಯ ನೆಲೆಯಲ್ಲಿ ನೋಡದೆ ವೈಚಾರಿಕ ಹಿನ್ನೆಲೆಯಲ್ಲಿ ಅರ್ಥಮಾಡಿಕೊಳ್ಳಬೇಕಾಗಿದೆ ಎಂದರು.ಪ್ರಾಸ್ತಾವಿಕವಾಗಿ ಮಾತನಾಡಿದ ಕನಕದಾಸ ಸಂಶೋಧನ ಕೇಂದ್ರದ ಸಂಯೋಜಕರಾದ…
ಉಳ್ಳಾಲ: ಪಿಎಂಶ್ರೀ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಉಚ್ಚಿಲ ಗುಡ್ಡೆ ಇಲ್ಲಿನ ವಿದ್ಯಾರ್ಥಿಗಳ ಕ್ರೀಡಾ ಸಂಗಮ 2025 ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಈ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಉದ್ಯಮಿ ರಹೀಮ್ ಉಚ್ಚಿಲ ಅವರು, ಈ ಶಾಲೆಯಲ್ಲಿ ಕಲಿಯುವ ಐವರು ವಿದ್ಯಾರ್ಥಿಗಳು ಮೈಸೂರಿನ ಲ್ಲಿ ನಡೆದ ಕ್ರೀಡಾಕೂಟದಲ್ಲಿ ವಿಜೇತರಾದದ್ದು ಸಂತಸ ತಂದಿದೆ.ಪಾಠದೊಂದಿಗೆ ಆಟ ಬೇಕು .ಕಲಿಯಲು ಬೇಕಾಗಿ ಶಾಲೆಗೆ ಬರುವ ವಿದ್ಯಾರ್ಥಿಗಳು ಪಾಠದಲ್ಲಿ ಹಿಂದುಳಿಯಬಾರದು ಎಂದು ಕರೆ ನೀಡಿದರು.ಸಲಾಮ್ ಉಚ್ಚಿಲ ಮಾತನಾಡಿ ವಿದ್ಯಾರ್ಥಿಗಳ ಕಾರ್ಯ ಚಟುವಟಿಕೆಗಳ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿದರು.ಪತ್ರಕರ್ತ ಬಶೀರ್ ಕಲ್ಕಟ್ಟ ಮಾತನಾಡಿದರು.ಕೌನ್ಸಿಲರ್ ಇಸಾಕ್ ಅಜ್ಜಿನಡ್ಕ ಕ್ರೀಡಾ ಜ್ಯೋತಿ ಸ್ವೀಕರಿಸಿದರು. ಕ್ರೀಡಾ ಪ್ರತಿನಿಧಿ ಝಝ್ಮಾ ಪ್ರತಿಜ್ಞಾ ವಿಧಿ ಬೋಧಿಸಿದರು.ಈ ಕಾರ್ಯಕ್ರಮ ದಲ್ಲಿ ಎಸ್ ಡಿಎಂಸಿ ಉಪಾಧ್ಯಕ್ಷ ಬಶೀರ್,ಜಿ.ಐ. ಮೊಹಮ್ಮದ್ ಅಲಿ, ಸಲಾಮ್ ಉಚ್ಚಿಲ, ದೈಹಿಕ ಶಿಕ್ಷಕ ಮೋಹನ್ ಶಿರ್ಲಾಲ್, ಶಿಕ್ಷಕರಾದ ಚಂದ್ರ ಶೇಖರ್ ಸಿ.ಎಚ್., ಸಂಧ್ಯಾ ಕುಮಾರಿ, ಬಬಿತಾ, ಮಂಜುನಾಥ,ನಿರೀಕ್ಷಾ, ಅನುಷಾ , ಅಶ್ವಿನಿ, ಸವಿತಾ ಪ್ರಿಯಾ ವಿನುತಾ ಮತ್ತಿತರರು ಉಪಸ್ಥಿತರಿದ್ದರು.ಮುಖ್ಯ…
ಕೊಣಾಜೆ: ನಮ್ಮ ಭಾಷೆ, ದೇಶ ಹಾಗೂ ಹಿರಿಯರನ್ನು ಗೌರವಿಸುವುದೇ ಸಂಸ್ಕೃತಿ. ಕನ್ನಡ ಮತ್ತು ಕನಕದಾಸರಂತಹ ಮಹಾತ್ಮರನ್ನು ನೆನೆಯುವುದರಿಂದ ನಮಗೆ ಒಳಿತಾಗುವುದು ಎಂದು ದೇರಳಕಟ್ಟೆ ವಿದ್ಯಾರತ್ನ ವಿದ್ಯಾಸಂಸ್ಥೆಗಳ ಅಧ್ಯಕ್ಷ ರವೀಂದ್ರ ಶೆಟ್ಟಿ ಉಳಿದೊಟ್ಟು ಹೇಳಿದರು. ಅವರು ಸೋಮವಾರ ದ.ಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಉಳ್ಳಾಲ ತಾಲೂಕು ಘಟಕ, ತೋನ್ಸೆ ಸಾಂಸ್ಕೃತಿಕ ತರಬೇತಿ ಕೇಂದ್ರ ಕೊಲ್ಯ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ದ.ಕ, ಕನಕದಾಸ ಪೀಠ ಮಂಗಳೂರು ವಿವಿ ಸಂಯುಕ್ತ ಆಶ್ರಯದಲ್ಲಿ ದೇರಳಕಟ್ಟೆ ಬೆಳ್ಮ ಸೇವಾಶ್ರಮ ನಡೆದ ಕರ್ನಾಟಕ ರಾಜ್ಯೋತ್ಸವ ಮತ್ತು ಕನಕದಾಸ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕನ್ನಡ ಭಾಷೆಯಷ್ಟೇ ಅಲ್ಲ ಬದುಕುಕನ್ನಡ ನಮಗೆ ಭಾಷೆ, ನೆಲ, ಸಂಸ್ಕೃತಿಯಷ್ಟೇ ಅಲ್ಲ ಅದು ನಮಗೆ ಬದುಕು ಕೊಟ್ಟಿದೆ. ಬಸವಣ್ಣ, ಕನಕದಾಸರಂತಹ ಅನೇಕ ಸಂತರು ಬಾಳಿದ ಕನ್ನಡನಾಡು ಅನೇಕ ಮೌಲ್ಯ ಆದರ್ಶಗಳ ತವರೂರು ಎಂದು ಕಾರ್ಯಕ್ರಮವನ್ನು ಉದ್ಘಾಟಿಸಿದ ದ.ಕ ಜಿಲ್ಲಾ ಕಸಾಪ ಉಳ್ಳಾಲ ಘಟಕ ಅಧ್ಯಕ್ಷ ಡಾ.ಧನಂಜಯ ಕುಂಬ್ಳೆ ಹೇಳಿದರು.ಮುಖ್ಯ ಅತಿಥಿಯಾಗಿ ಪಾಲ್ಗೊಂಡ…

