ನವದೆಹಲಿ, ಡಿ. 24 : ಅಮೆರಿಕಾದ ಸಂವಹನ ಉಪಗ್ರಹ ‘ಬ್ಲೂಬರ್ಡ್ ಬ್ಲಾಕ್-2’ ಅನ್ನು ಇಸ್ರೋದ ಅತ್ಯಂತ ಭಾರವಾದ ಎಲ್‌ವಿಎಂ3-ಎಂ ರಾಕೆಟ್ ನಭಕ್ಕೆ ಯಶಸ್ವಿಯಾಗಿ ಸೇರಿಸಿದೆ. ಇದರ ಬೆನ್ನಲ್ಲೇ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ. ಬ್ಲೂಬರ್ಡ್ -2 ಯಶಸ್ವಿ ಉಡಾವಣೆಯ ವಿಡಿಯೋವನ್ನು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಶೇರ್ ಮಾಡಿರುವ ಪ್ರಧಾನಿ ಮೋದಿ, “ಇಸ್ರೋ ಸಾಧನೆಯನ್ನು ಶ್ಲಾಘಿಸಿದ್ದಾರೆ. ಇದು ಭಾರತದ ಬಾಹ್ಯಾಕಾಶ ಕ್ಷೇತ್ರದ ಒಂದು ಪ್ರಮುಖ ಸಾಧನೆಯಾಗಿದೆ. ಇದರೊಂದಿಗೆ ದೇಶದ ಅತಿ ಭಾರದ ಉಡ್ಡಯನ ಸಾಮರ್ಥ್ಯವನ್ನು ಮತ್ತಷ್ಟು ಬಲಗೊಳಿಸಿದೆ. ಜಾಗತಿಕ ವಾಣಿಜ್ಯ ಉಡ್ಡಯನ ಮಾರುಕಟ್ಟೆಯಲ್ಲಿ ನಮ್ಮ ಪ್ರಗತಿಯನ್ನು ಬಲಿಷ್ಠಗೊಳಿಸುತ್ತಿದೆ” ಎಂದು ತಿಳಿಸಿದ್ದಾರೆ. “ಆತ್ಮನಿರ್ಭರ ಭಾರತ ಉಪಕ್ರಮದತ್ತ ನಮ್ಮ ಪ್ರಯತ್ನಗಳನ್ನು ಪ್ರತಿಬಿಂಬಿಸುತ್ತದೆ. ಇದರ ಹಿಂದೆ ಶ್ರಮ ವಹಿಸಿರುವ ನಮ್ಮ ಬಾಹ್ಯಾಕಾಶ ವಿಜ್ಞಾನಿಗಳು ಹಾಗೂ ಇಂಜಿನಿಯರ್‌ಗಳಿಗೆ ಅಭಿನಂದನೆಗಳು. ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತ ಮತ್ತಷ್ಟು ಎತ್ತರಕ್ಕೆ ಬೆಳೆಯುತ್ತಲೇ ಇದೆ” ಎಂದು ಹೇಳಿದ್ದಾರೆ.”ಯುವಜನರ ಪ್ರಯತ್ನದಿಂದ ಭಾರತದ ಬಾಹ್ಯಾಕಾಶ ಕಾರ್ಯಕ್ರಮವು ಹೆಚ್ಚು ಪರಿಣಾಮಕಾರಿಯೆನಿಸಿದೆ. ಅತಿ…
Author: UllalaVani
ಮಂಗಳೂರು, ಡಿ. 24: ನಮೋ ಖೇಲ್ ಸರಣಿ ಅಡಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದ ಸಂಸದ್ ಖೇಲ್ ಮಹೋತ್ಸವದ ಸಮಾರೋಪ ಸಮಾರಂಭ ಡಿ. 25ರಂದು ಮಂಗಳೂರಿನಲ್ಲಿ ನಡೆಯಲಿದ್ದು, ಇದೇ ಸಂದರ್ಭದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ದೇಶದ ಯುವ ಸಮೂಹ ಹಾಗೂ ಕ್ರೀಡಾಪಟುಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ತಿಳಿಸಿದ್ದಾರೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿಕಸಿತ ಭಾರತಕ್ಕಾಗಿ ಫಿಟ್ ಯುವ ಪರಿಕಲ್ಪನೆಯಡಿ ಜಿಲ್ಲೆಯಲ್ಲಿ ನ. 23 ರಿಂದ ಈ ಸಂಸದ್ ಕ್ರೀಡಾ ಮಹೋತ್ಸವವನ್ನು ಆಯೋಜಿಸಲಾಗಿತ್ತು. ಈ ಕ್ರೀಡಾ ಮಹೋತ್ಸವದಲ್ಲಿ ಚೆಸ್, ಕಬ್ಬಡ್ಡಿ, ಕ್ರಿಕೆಟ್, ವಾಲಿಬಾಲ್, ತ್ರೋಬಾಲ್, ಕುಸ್ತಿ, ಬ್ಯಾಡ್ಮಿಂಟನ್ ಮುಂತಾದ ಸ್ಪರ್ಧೆಗಳು ನಡೆದಿದ್ದು, ಜಿಲ್ಲೆಯ ವಿವಿಧ ಭಾಗಗಳಿಂದ ಮಕ್ಕಳು, ಮಹಿಳೆಯರು ಯುವಕರು ಸೇರಿ ಸಾವಿರಾರು ಕ್ರೀಡಾಸಕ್ತರು ಆಸಕ್ತರು ಈ ಮಹೋತ್ಸವದಲ್ಲಿ ಭಾಗಿಯಾಗಿದ್ದರು ಎಂದು ಅವರು ಹೇಳಿದ್ದಾರೆ.ಇದೀಗ ಈ ಕ್ರೀಡೋತ್ಸವದ ಸಮಾರೋಪವು ಭಾರತದ ಹೆಮ್ಮೆಯ ಪುತ್ರ, ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನದಂದೇ…
ಮಂಗಳೂರು, ಡಿ. 24 : ಕ್ರಿಸ್‌ಮಸ್ ಹಬ್ಬಕ್ಕೆ ಇನ್ನು ಕೆಲವೇ ದಿನಗಳು ಬಾಕಿ ಇರುವಂತೆಯೇ ಮಂಗಳೂರು ನಗರದಲ್ಲಿ ಹಬ್ಬದ ಸಂಭ್ರಮ ಮನೆಮಾಡಿದೆ. ನಕ್ಷತ್ರಗಳು, ಗೋದಲಿ ಮತ್ತು ಅಲಂಕಾರಿಕ ವಸ್ತುಗಳನ್ನು ಖರೀದಿಸಲು ಜನರು ಮಾರುಕಟ್ಟೆ ಹಾಗೂ ರಸ್ತೆಬದಿಯ ಅಂಗಡಿಗಳಿಗೆ ಮುಗಿಬೀಳುತ್ತಿದ್ದಾರೆ. ನಗರದ ಜನನಿಬಿಡ ಸೆಂಟ್ರಲ್ ಮಾರ್ಕೆಟ್‌ನಿಂದ ಹಂಪನಕಟ್ಟೆಯವರೆಗೆ ಎಲ್ಲಾ ಅಂಗಡಿಗಳಲ್ಲೂ ಸಂಜೆಯ ವೇಳೆ ಗ್ರಾಹಕರ ಸಂಖ್ಯೆ ಹೆಚ್ಚಾಗಿ ಕಂಡುಬರುತ್ತಿದೆ. ವಿವಿಧ ಗಾತ್ರದ ವರ್ಣರಂಜಿತ ಕಾಗದ ಮತ್ತು ಪ್ಲಾಸ್ಟಿಕ್ ನಕ್ಷತ್ರಗಳು, ಎಲ್‌ಇಡಿ ನಕ್ಷತ್ರಗಳು, ವಿದ್ಯುತ್ ದೀಪದ ಸರಗಳು ಮತ್ತು ಲಾಟೀನುಗಳು ಈ ಬಾರಿ ಹೆಚ್ಚು ಮಾರಾಟವಾಗುತ್ತಿವೆ. ಬಾಲ ಯೇಸು, ಮರಿಯಮ್ಮ, ಜೋಸೆಫ್, ದೇವದೂತರು ಮತ್ತು ಪ್ರಾಣಿಗಳ ಪ್ರತಿಮೆಗಳನ್ನೊಳಗೊಂಡ ಯೇಸುವಿನ ಜನನದ ದೃಶ್ಯ ಪ್ರದರ್ಶಿಸುವ ಅಂಗಡಿಗಳು ಕುಟುಂಬಗಳ ಗಮನ ಸೆಳೆಯುತ್ತಿವೆ. ಸಾಂಪ್ರದಾಯಿಕ ಬೆಥ್ ಲೆಹೆಮ್ ದೃಶ್ಯವನ್ನು ಮರುಸೃಷ್ಟಿಸಲು ಬೇಕಾದ ಒಣಹುಲ್ಲು, ಪಾಚಿ, ಥರ್ಮಕೋಲ್ ಬೆಟ್ಟಗಳು, ಸಣ್ಣ ಮನೆಗಳು ಮತ್ತು ಕೃತಕ ಕ್ರಿಸ್‌ಮಸ್ ಮರಗಳನ್ನು ಅಂಗಡಿಗಳಲ್ಲಿ ಸಂಗ್ರಹಿಸಲಾಗಿದೆ.ಮನೆಯ ಮುಂದೆ ನಕ್ಷತ್ರಗಳನ್ನು ನೇತುಹಾಕುವುದು ಮತ್ತು ಮನೆಯಲ್ಲಿ ಗೋದಲಿ ನಿರ್ಮಿಸುವುದು ಹಬ್ಬದ…
ಅಸೈಗೋಳಿ; ಹಿಂದೆ ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿದ್ದ ಹಿರಿಯ ಕಾಂಗ್ರೆಸ್ ಮುಖಂಡ ಸಂತೋಷ್ ಶೆಟ್ಟಿ ಅಸೈಗೋಳಿ ಮರಳಿ ಕಾಂಗ್ರೆಸ್ಸಿಗೆ ಬರುವ ಎಲ್ಲಾ ಲಕ್ಷಣಗಳು ಗೋಚರಿಸಿವೆ. ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿದ್ದುಕೊಂಡು ಕಾಂಗ್ರೆಸ್ಸಿನಲ್ಲಿ ಸಕ್ರಿಯವಾಗಿದ್ದ ಸಂತೋಷ್ ಶೆಟ್ಟಿ ಅಸೈಗೋಳಿ, ಬಳಿಕ ಕಾಂಗ್ರೆಸ್ಸನ್ನು ತೊರೆದು ಉಳ್ಳಾಲ ಶಾಸಕರ ವಿರುದ್ಧ ಮಂಗಳೂರಿನಲ್ಲಿ ಸುದ್ಧಿಗೋಷ್ಠಿ ನಡೆಸಿ ಆರೋಪಗಳ ಸುರಿಮಳೆಯನ್ನೇ ಗೈದಿದ್ದರು. ತದನಂತರ ಮಂಗಳೂರು ಮಂಡಲ ಬಿಜೆಪಿ ಹಮ್ಮಿಕೊಂಡಿದ್ದ ಸಭೆಯಲ್ಲಿ ಅಧಿಕೃತವಾಗಿ ಸೇರ್ಪಡೆಗೊಂಡು ಬಿಜೆಪಿಯಲ್ಲಿಯೂ ಪಕ್ಷದ ಜವಾಬ್ದಾರಿಯನ್ನು ಪಡೆದುಕೊಂಡಿದ್ದರು. ಇದೀಗ ಪಟ್ಟೋರಿಯಲ್ಲಿ ನಡೆದ ವರ್ಷಾವಧಿ ಜಾತ್ರೆ ಪ್ರಯುಕ್ತ ವಿಧಾನಸಭಾಧ್ಯಕ್ಷರು ಯು.ಟಿ.ಖಾದರ್, ಸಹೋದರ ಯು.ಟಿ.ಇಫ್ತಿಕಾರ್ ಆಲಿ ಸೇರಿದಂತೆ ಕಾಂಗ್ರೆಸ್ ಮುಖಂಡರು ಸಂತೋಷ್ ಶೆಟ್ಟಿ ಅಸೈಗೋಳಿ ಅವರ ಮನಗೆ ಭೇಟಿ ನೀಡಿದ್ದಾರೆ. ಇದರಿಂದ ಮತ್ತೊಮ್ಮೆ ಸಂತೋಷ್ ಶೆಟ್ಟಿ ಅಸೈಗೋಳಿ ಶಾಸಕರ ಜತೆಗಿದ್ದ ಮುನಿಸು ಮರೆತು ಕಾಂಗ್ರೆಸ್ಸಿನತ್ತ ವಾಲಿರುವುದು ಸ್ಪಷ್ಟ ಅನ್ನುವ ಮಾತುಗಳು ಸಾರ್ವಜನಿಕ ವಲಯದಿಂದ ಕೇಳಿಬಂದಿದೆ. ಇನ್ನು ಮುನಿಸಿನ ಸಂದರ್ಭದಲ್ಲಿ ಇವರ ಜೊತೆಗೆ ಬಿಜೆಪಿ ಪಕ್ಷದಲ್ಲಿದ್ದವರ ನಡೆ ಏನೆಂಬುವುದು ಕುತೂಹಲ ಮೂಡಿಸಿದೆ.
ಕೊಣಾಜೆ: ನರಿಂಗಾನ ಸಾಮರಸ್ಯದ ಗ್ರಾಮವಾಗಿ ರೂಪುಗೊಂಡು ಇದೀಗ ಗ್ರಾಮಕ್ಕೆ ಪೂರಕವಾಗಿ ಅನೇಕ ಅಭಿವೃದ್ಧಿ ಕಾಮಗಾರಿಗಳು ನಡೆದು ಇಡೀ ರಾಜ್ಯಕ್ಕೆ ಮಾದರಿಯಾಗಿದೆ ಎಂದು ವಿಧಾನಸಭಾ ಅಧ್ಯಕ್ಷರಾದ ಯು.ಟಿ.ಖಾದರ್ ಅವರು ಹೇಳಿದರು. ನರಿಂಗಾನ ಗ್ರಾಮ ಪಂಚಾಯತ್ ವಠಾರದಲ್ಲಿ ಗಾಂಧಿ ಪ್ರತಿಮೆ ಅನಾವರಣ,ಗ್ರಾಮ ವ್ಯಾಪ್ತಿಯ ಬೋಳದಲ್ಲಿ ನಿರ್ಮಿಸಲಾದ ಸ್ವಚ್ಛ ಸಂಕೀರ್ಣ ಮತ್ತು ಮಲತ್ಯಾಜ್ಯ ಘಟಕ ಉದ್ಘಾಟನೆ,ಆಶಾ ಕಾರ್ಯಕರ್ತೆಯರಿಗೆ ಸ್ಕೂಟರ್ ಹಸ್ತಾಂತರ,ಹಕ್ಕುಪತ್ರ ವಿತರಣೆ,ನೀರಿನ ಟ್ಯಾಂಕ್ ಉದ್ಘಾಟನೆ,ವಿಶೇಷ ಚೇತನರಿಗೆ ಚೆಕ್ ವಿತರಣೆ ಸೇರಿದಂತೆ ನರಿಂಗಾನ ಗ್ರಾಮದಲ್ಲಿ ಐದು ಕೋಟಿ ಅನುದಾನದ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳನ್ನು ಮಂಗಳವಾರದಂದು ಉದ್ಘಾಟಿಸಿ ಅವರು ಮಾತನಾಡಿದರು. ಉಳ್ಳಾಲ ಕ್ಷೇತ್ರದಲ್ಲಿ 20 ಕೋಟಿ ಅನುದಾನದಲ್ಲಿ ಸೈಬರ್ ಸೆಕ್ಯೂರಿಟಿ ಜಾರಿಗೆ ತರಲು ಯೋಚಿಸಲಾಗಿದ್ದು ಉನ್ನತ ಅಧಿಕಾರಿಗಳ ಜೊತೆ ಚರ್ಚಿಸಲಾಗಿದೆ.ಇದು ಜಾರಿಯಾದಲ್ಲಿ ಅಪರಾಧ ಸಹಿತ ಎಲ್ಲಾ ರೀತಿಯ ಸಮಸ್ಯೆಗಳಿಗೂ ಕಡಿವಾಣ ಹಾಕಲು ಸಾಧ್ಯ. ನರಿಂಗಾನ ಗ್ರಾಮಸ್ಥರಿಗೆ ಈ ಮೊದಲು ನೀಡಿದ ಭರವಸೆಯಂತೆ 24 ಗಂಟೆ ಕುಡಿಯುವ ನೀರು, ರಸ್ತೆ, ಶಿಕ್ಷಣ ಸೇರಿದಂತೆ ಇನ್ನಿತರ ಅಭಿವೃದ್ಧಿ ಕೆಲಸಗಳು ನರಿಂಗಾನ ಗ್ರಾಮದಲ್ಲಿ…
ಉಳ್ಳಾಲ : ಕಾಂತಾರ ಖ್ಯಾತಿಯ ರಿಷಬ್ ಶೆಟ್ಟಿ ವಾರಾಹಿ ಪಂಜುರ್ಲಿಗೆ ನೀಡಿದ್ದ ಹರಕೆ ನೇಮೋತ್ಸವದ ವಿವಾದದಲ್ಲಿ ದೈವಾರಾಧನೆಯ ಚಿಂತಕ ತಮ್ಮಣ್ಣ ಶೆಟ್ಟಿಯವರು ಕೊಂಡಾಣ ಕ್ಷೇತ್ರದ ದೈವದ ಬಂಗಾರ ಅಡವಿಟ್ಟ ಬಗ್ಗೆ ವೈಯಕ್ತಿಕ ಆರೋಪ ಮಾಡಿದ್ದ ಕದ್ರಿ ಬಾರೆಬೈಲಿನ ಜಾರಂದಾಯ, ಬಂಟ ಮತ್ತು ವಾರಾಹಿ ಪಂಜುರ್ಲಿ ದೈವಸ್ಥಾನದ ಆಡಳಿತ ಕಮಿಟಿಯ ಗೌರವಾಧ್ಯಕ್ಷ ರವಿ ಪ್ರಸನ್ನ ಅವರು ಕೋಟೆಕಾರು ಗ್ರಾಮದ ಕಾರಣಿಕ ಕ್ಷೇತ್ರ ಕೊಂಡಾಣ ಪಿಲಿಚಾಮುಂಡಿ, ಬಂಟ, ಮುಂಡತ್ತಾಯ ಕ್ಷೇತ್ರಕ್ಕೆ ಸುಮಾರು ನಲ್ವತ್ತರಷ್ಟು ಬೆಂಬಲಿಗರೊಂದಿಗೆ ಭೇಟಿ ನೀಡಿ ದೈವಗಳೆದುರು ಕ್ಷಮೆ ಯಾಚಿಸಿ ತಪ್ಪು ಕಾಣಿಕೆ ಹಾಕಿದ್ದಾರೆ. ಈ ವೇಳೆ ಕುಡ್ಲ ರಾಂಪೇಜ್ ನ ಅಜಯ್ ಅಂಚನ್ ಮೇಲೆ ರವಿ ಪ್ರಸನ್ನ ಬೆಂಬಲಿಗರು ಹಲ್ಲೆಗೆ ಯತ್ನಿಸಿದ ಘಟನೆ ನಡೆದಿದೆ. ರಿಷಬ್ ಶೆಟ್ಟಿ ವಾರಾಹಿ ಪಂಜುರ್ಲಿಗೆ ಸಲ್ಲಿಸಿದ್ದ ಹರಕೆ ನೇಮ ಮತ್ತು ನೇಮದಲ್ಲಿ ದೈವ ನರ್ತಕ ಅತಿರೇಕವಾಗಿ ವರ್ತಿಸಿದ್ದಾರೆಂದು ಸಾಮಾಜಿಕ ಜಾಲತಾಣದಲ್ಲಿ ಟೀಕೆ ಕೇಳಿಬಂದು ವಿವಾದ ರೂಪ ಪಡೆದ ವಿಚಾರದಲ್ಲಿ ಸ್ವತಃ ಕದ್ರಿ ಬಾರೆಬೈಲಿನ ಜಾರಂದಾಯ, ಬಂಟ…
ಬೆಂಗಳೂರು, ಡಿಸೆಂಬರ್ 23: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಮಾಜಿ ಸಚಿವ ಕೆ.ಎನ್. ರಾಜಣ್ಣ ಮತ್ತೊಂದು ಪತ್ರ ಬರೆದಿದ್ದಾರೆ. ವೋಟ್ ಚೋರಿ ಅಭಿಯಾನದ ಬಗ್ಗೆ ತಮ್ಮ ಹೇಳಿಕೆಯನ್ನು ಹೇಗೆ ತಪ್ಪಾಗಿ ಅರ್ಥೈಸಲಾಗಿದೆ ಎಂಬುದರ ಬಗ್ಗೆ ಸಂಭಾಷಣೆ ಸಮೇತ ಪತ್ರದಲ್ಲಿ ಉಲ್ಲೇಖಿಸಲಾಗಿದ್ದು, ಭೇಟಿಗೂ ಸಮಯ ಕೇಳಿದ್ದಾರೆ. ಈಗಾಗಲೇ ನಾಲ್ಕು ಪತ್ರಗಳನ್ನು ಬರೆದಿರುವ ರಾಜಣ್ಣ, ರಾಜ್ಯದಲ್ಲಿನ ವಿದ್ಯಮಾನದಿಂದ ಪಕ್ಷಕ್ಕೆ ಆಗುತ್ತಿರುವ ಡ್ಯಾಮೇಜ್ ಬಗ್ಗೆಯೂ ಅವುಗಳಲ್ಲಿ ಉಲ್ಲೇಖಿಸಿದ್ದರು. ಸಿದ್ದರಾಮಯ್ಯರನ್ನು ಸಿಎಂ ಸ್ಥಾನದಿಂದ ಕೈ ಬಿಟ್ಟರೆ ಆಗುವ ಡ್ಯಾಮೇಜ್ ಬಗ್ಗೆಯೂ ಮನವರಿಕೆ ಯತ್ನ ಮಾಡಿದ್ದರು. ರಾಜಣ್ಣ ಬರೆದ ಪತ್ರದಲ್ಲೇನಿದೆ? ತಾನು ತುಮಕೂರು ಜಿಲ್ಲೆಯ ಮಧುಗಿರಿ ವಿಧಾನಸಭಾ ಕ್ಷೇತ್ರದ ಪ್ರಸ್ತುತ ಶಾಸಕನಾಗಿದ್ದು, ಕರ್ನಾಟಕ ಸರ್ಕಾರದಲ್ಲಿ ಸಹಕಾರ ಸಚಿವನಾಗಿಯೂ ಹಾಗೂ ಹಾಸನ ಜಿಲ್ಲಾ ಉಸ್ತುವಾರಿ ಸಚಿವನಾಗಿಯೂ ಈ ಹಿಂದೆ ಸೇವೆ ಸಲ್ಲಿಸಿದ್ದೇನೆ. ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರ ಸಚಿವ ಸಂಪುಟದಿಂದ ತನ್ನನ್ನು ಕೈಬಿಟ್ಟಿರುವ ಹಿನ್ನೆಲೆಯಲ್ಲಿ, ಕೆಲ ಪ್ರಮುಖ ವಿಷಯಗಳನ್ನು ಗಮನಕ್ಕೆ ತರುತ್ತಿದ್ದೇನೆ ಎಂದು ಪತ್ರದಲ್ಲಿ ರಾಜಣ್ಣ ಹೇಳಿದ್ದಾರೆ. ವೋಟ್ ಚೋರಿ ಕಾರ್ಯಕ್ರಮವನ್ನು ತಾನು…
ಮಂಗಳೂರು,ಡಿ.23: ಮಂಗಳೂರು ಜಿಲ್ಲಾ ಕಾರಾಗೃಹಕ್ಕೆ ರಾಜ್ಯಾದ್ಯಂತ ಕಾರಾಗೃಹಗಳಲ್ಲಿ ಸುಧಾರಣೆಗಳನ್ನು ತರುವ ನಿಟ್ಟಿನಲ್ಲಿ ಹೊಸದಾಗಿ ನೇಮಕಗೊಂಡ ಪೊಲೀಸ್ ಮಹಾನಿರ್ದೇಶಕ (ಕಾರಾಗೃಹ) ಅಲೋಕ್ ಕುಮಾರ್ ಭೇಟಿ ನೀಡಿ ಸಮಗ್ರವಾಗಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಮಾತನಾಡಿದ ಅಲೋಕ್ ಕುಮಾರ್, ರಾಜ್ಯದ ಎಲ್ಲಾ ಜೈಲುಗಳನ್ನು ಹಂತ ಹಂತವಾಗಿ ಪರಿಶೀಲಿಸಲಾಗುವುದು ಎಂದು ಹೇಳಿದರು. ಮಂಗಳೂರು ಜೈಲು ಸೂಕ್ಷ್ಮ ಪ್ರದೇಶದಲ್ಲಿದೆ ಮತ್ತು ಆದ್ದರಿಂದ ಅದರ ಭದ್ರತಾ ವ್ಯವಸ್ಥೆಗಳಿಗೆ ವಿಶೇಷ ಆದ್ಯತೆ ನೀಡಲಾಗಿದೆ ಎಂದು ಅವರು ಹೇಳಿದರು. ಜೈಲಿನೊಳಗೆ ಶಿಸ್ತು ಉಲ್ಲಂಘಿಸುವ ಮತ್ತು ಗಲಭೆಯಲ್ಲಿ ತೊಡಗಿರುವ ಕೈದಿಗಳನ್ನು ಈಗಾಗಲೇ ಗುರುತಿಸಿ ಇತರ ಜಿಲ್ಲೆಗಳ ಜೈಲುಗಳಿಗೆ ಸ್ಥಳಾಂತರಿಸಲಾಗಿದೆ ಎಂದು ಅವರು ಹೇಳಿದರು. ಜೈಲಿನೊಳಗೆ ಮೊಬೈಲ್ ಫೋನ್‌ಗಳನ್ನು ಹೇಗೆ ಪೂರೈಸಲಾಗುತ್ತಿದೆ ಎಂಬುದರ ಕುರಿತು ವಿವರವಾದ ತನಿಖೆ ನಡೆಸಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಡಿಜಿಪಿ ಹೇಳಿದರು. ಮೊಬೈಲ್ ಜಾಮರ್‌ಗಳ ಸಮಸ್ಯೆಗಳ ಕುರಿತು ದೂರುಗಳನ್ನು ಉಲ್ಲೇಖಿಸಿದ ಅವರು, ಸಮಸ್ಯೆಯನ್ನು ಪರಿಹರಿಸಲು ಮತ್ತು ಆಧುನಿಕ ತಂತ್ರಜ್ಞಾನವನ್ನು ಬಳಸಿಕೊಂಡು ಸುಧಾರಣೆಗಳನ್ನು ತರುವ ನಿಟ್ಟಿನಲ್ಲಿ ಶೀಘ್ರದಲ್ಲೇ ಸಭೆ ನಡೆಸಲಾಗುವುದು ಎಂದರು.…
ಹಳೇಕೋಟೆ;ಸರಕಾರವು ಇಂದು ಸರಕಾರಿ ಶಾಲೆಗಳ ಎಲ್ಲಾ ವ್ಯವಸ್ಥೆಗಳೊಂದಿಗೆ ಉತ್ತಮವಾದ ಬೆಳವಣಿಗೆಗೆ ಪೂರಕವಾದ ವ್ಯವಸ್ಥೆಗಳನ್ನು ಕೈಗೊಳ್ಳುತ್ತಿದೆ. ಈ ನಿಟ್ಟಿನಲ್ಲಿ ಸಯ್ಯದ್ ಮದನಿ ಚಾರಿಟೇಬಲ್ ಟ್ರಸ್ಟ್ ತನ್ನ ಕನ್ನಡ ಮಾಧ್ಯಮ ಶಾಲೆಗಳಿಗೆ ಬಹಳಷ್ಟು ವ್ಯವಸ್ಥೆಯನ್ನು ಮಾಡುವುದು ಶ್ಲಾಘನೀಯ ಎಂದು ದಕ್ಷಿಣ ಕನ್ನಡ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಶಶಿಧರ್ ಅವರು ಹೇಳಿದರು. ಇವರು ಸಯ್ಯದ್ ಮದನಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಹಳೇಕೋಟೆಯಲ್ಲಿ ನಡೆಸಲ್ಪಾಡುತಿರುವ ಸಯ್ಯದ್ ಮದನಿ ಉರ್ದು ಹಿರಿಯ ಪ್ರಾಥಮಿಕ ಶಾಲೆ ಮತ್ತು ಸಯ್ಯದ್ ಮದನಿ ಪ್ರೌಢ ಶಾಲೆಗಳ ವಾರ್ಷಿಕೋತ್ಸವದ ಮುಖ್ಯ ಶಿಕ್ಷರಾಗಿ ಮಾತನಾಡಿದರು. ಈ ಅನುದಾನಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗೆ ಉಚಿತ ಬಸ್ಸಿನ ವ್ಯವಸ್ಥೆ, ಉಚಿತ ಸಮವಸ್ತ್ರ ಹಾಗು ಇತರ ಶೈಕ್ಷಣಿಕ ಸಲಕರಣೆಯನ್ನು ಒದಗಿಸುವುದು ಶ್ಲಾಘನೀಯ ಎಂದರು. ಸಯ್ಯದ್ ಮದನಿ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷರಾದ ಜನಾಬ್ ಬಿ. ಜಿ. ಹನೀಫ್ ಹಾಜಿಯವರ ಅಧ್ಯಕ್ಷತೆಯಲ್ಲಿ ನಡೆದ ಸಮಾರಂದಲ್ಲಿ ಯುವ ಉದ್ಯಮಿ ಅಲೈನ್ಸ್ ಪ್ರಾಪರ್ಟಿಸ್ ಮಾಲಕರಾದ ಹನೀಫ್ ಮೈಸೂರ್, ದಕ್ಷಿಣ ಕನ್ನಡ ಜಿಲ್ಲಾ…
ಕಣಚೂರು;ವೈದ್ಯರನ್ನು ದೇವರ ಸ್ಥಾನದಲ್ಲಿ ನೋಡುವ ಸಂಸ್ಕೃತಿ ಭಾರತೀಯರದ್ದು. ಭಾರತೀಯ ವೈದ್ಯರ ಸಾಮರ್ಥ್ಯ ಹಾಗೂ ವೃತ್ತಿ ನಿಷ್ಠೆ ಬೇರೆ ಯಾವ ದೇಶದಲ್ಲೂ ಕಾಣಲು ಸಾಧ್ಯವಿಲ್ಲ. ಇಂತಹ ಭಾರತೀಯ ವೈದ್ಯ ಪರಂಪರೆಯ ಮಹತ್ವವನ್ನು ಅರಿತುಕೊಂಡು ಆ ಪರಂಪರೆಯನ್ನು ಮುನ್ನಡೆಸಿಕೊಂಡು ಹೋಗುವ ಜವಬ್ದಾರಿ ಇಂದಿನ ಯುವ ವೈದ್ಯರಿಗಿದೆ ಎಂದು ಸಂಸದರಾದ ಕ್ಯಾ.ಬ್ರಿಜೇಶ್ ಚೌಟ ಹೇಳಿದ್ದಾರೆ. ಇವರು ದೇರಳಕಟ್ಟೆಯ ಕಣಚೂರು ಮೆಡಿಕಲ್ ಕಾಲೇಜಿನ ಎಂಬಿಬಿಎಸ್‌ನ ಪ್ರಥಮ ವರ್ಷದ ವೈದ್ಯಕೀಯ ವಿದ್ಯಾರ್ಥಿಗಳಿಗೆ ವೈಟ್‌ಕೋಟ್ ವಿತರಣಾ ಸಮಾರಂಭದಲ್ಲಿ ಮಾತನಾಡಿದರು. ವೈದ್ಯಕೀಯ ವೃತಿ ಕೇವಲ ವೃತ್ತಿ ಮಾತ್ರವಲ್ಲ ಜನರ ಆರೋಗ್ಯ ಜೀವದ ರಕ್ಷಣೆಯೊಂದಿಗೆ ನಮ್ಮ ಸಮಾಜಕ್ಕೆ ರಾಷ್ಟçಕ್ಕೆ ಅವರ ಕೊಡುಗೆ ಅಪಾರವಾದುದು. ಈ ವೃತ್ತಿ ಬದುಕಿಗೆ ಸ್ಪೂರ್ತಿಯೂ ಹೌದು, ತಪಸ್ಸು ಕೂಡಾ ಆಗಿದೆ ಎಂದರು. ನರೇಂದ್ರ ಮೋದಿಯವರು ಪ್ರಧಾನಮಂತ್ರಿಯಾದ ಬಳಿ ದೇಶದ ಜನರ ವೈದ್ಯಕೀಯ ಕ್ಷೇತ್ರ ಮತ್ತು ಆರೋಗ್ಯ ಸಂರಕ್ಷಣೆಯ ವಲಯಗಳಲ್ಲಿ ಅನೇಕ ಮಹತ್ತರವಾದ ಬದಲಾವಣೆಗಳಾಗಿವೆ. ಆಯುಷ್ಮಾನ್ ಭಾರತ್, ಪ್ರಧಾನಮಂತ್ರಿ ಜನೌಷಧಿ ಯೋಜನೆ, ಇಂದ್ರಧನುಷ್ ಸೇರಿದಂತೆ ಅನೇಕ ಯೋಜನೆಗಳ ಮೂಲಕ ಹೆಲ್ತ್…

