Author: UllalaVani

Kannada News From Coastal Karnataka

ಪುತ್ತೂರು : ಹೌದು… ಸೋಮವಾರ ಪುತ್ತೂರು ಶಾಸಕ ಅಶೋಕ್ ರೈ ಅವರು ತಮ್ಮ ಕಚೇರಿಗೆ ಬಂದಿದ್ದರು, ನೂರಾರು ಮಂದಿಯಿಂದ ಅಹವಾಲು ಸ್ವೀಕರಿಸಿದರು, ಸಂಕಷ್ಟ ಆಲಿಸಿದರು, ಬಹುತೇಕರ ಸಮಸ್ಯೆಗೆ ಸ್ಪಂದಿಸಿದರು, ಸ್ಥಳದಿಂದಲೇ ಅಧಿಕಾರಿಗಳಿಗೆ ಕರೆ ಮಾಡಿ ಸಮಸ್ಯೆ ಪರಿಹರಿಸಿದರು ನಗುತ್ತಲೇ ಇವರು ತಮ್ಮ ಬಳಿ ಬಂದ ಪ್ರತೀಯೊಬ್ಬರಲ್ಲೂ ಮಾತನಾಡಿಸಿದರು. ಬೆಳಗ್ಗೆ 12ರಿಂದಯಿಂದ ರಾತ್ರಿ 7.15 ರ ತನಕ ಕಚೇರಿಯಲ್ಲೇ ಇದ್ದರು. ಆದರೆ ಶಾಸಕ ಅಶೋಕ್ ರೈ ಅವರು ಭಾರವಾದ ನೋವನ್ನು ತನ್ನ ಮನಸ್ಸಿನಲ್ಲಿ ಅದುಮಿಟ್ಟು ಇಷ್ಟೆಲ್ಲಾ ಕೆಲಸವನ್ನು ಮಾಡುತ್ತಿದ್ದರು ಎಂದು ಅಲ್ಲಿ ಸೇರಿದ್ದ ಯಾರಿಗೂ ಗೊತ್ತಾಗಲಿಲ್ಲ, ಸಂಕಷ್ಟದ ನಡುವೆ ಜನರ ಸಮಸ್ಯೆಗೆ ಸ್ಪಂದನೆ ಮಾಡಿದ್ದಾರೆ ಎಂದು ಕಚೇರಿಗೆ ಬಂದ ಯಾವ ಸಾರ್ವಜನಿಕರಿಗೂ ಗೊತ್ತಾಗಲಿಲ್ಲ.ಶಾಸಕರ ಪುತ್ರ ಭಾನುವಾರ ಬೆಂಗಳೂರಿನಲ್ಲಿ ನಡೆದ ಬಾಸ್ಕೆಟ್ ಬಾಲ್ ಪಂದ್ಯಾಟದಲ್ಲಿ ಭಾಗವಹಿಸಿದ್ದರು. ಜಿಲ್ಲೆಯಿಂದ ಮೂವರು ಬಾಸ್ಕೆಟ್ ಬಾಲ್ ಪಟುಗಳು ಬೆಂಗಳೂರಿನಲ್ಲಿ ನಡೆದ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದರು. ಆಟವಾಡುತ್ತಿದ್ದವೇಳೆ ಶಾಸಕ ಪುತ್ರನ ಕಾಲು ಟ್ವಿಸ್ಟ್ ಆಗಿ ಎಲುಬುತುಂಡರಿಸಿತ್ತು. ಪುತ್ರನನ್ನು ಮಂಗಳೂರಿಗೆ ಕರೆದುಕೊಂಡು ಬಂದು…

Read More

ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ನ ದೆಹಲಿ ಘಟಕದ ದಶಮ ಸಂಭ್ರಮ ದೆಹಲಿಯ ಕರ್ನಾಟಕ ಸಂಘದ ಸಭಾಂಗಣದಲ್ಲಿ ನೆರವೇರಿತು. ದೆಹಲಿಯ ಸಂಸದರಾದ ಭಾನ್ಸುರಿ ಸ್ವರಾಜ್ ಸಮಾರಂಭವನ್ನು ಉದ್ಘಾಟಿಸಿ ಯಕ್ಷಧ್ರುವ ಪಟ್ಲ ಫೌಂಡೇಶನ್ನಿನ ಕಾರ್ಯ ಯೋಜನೆಗಳನ್ನು ಮತ್ತು ಪಟ್ಲ ಸತೀಶ್ ಶೆಟ್ಟಿಯವರಿಗೆ ಕಲಾವಿದರ ಮೇಲಿರುವ ಕಾಳಜಿಯನ್ನು ಮುಕ್ತ ಕಂಠದಿಂದ ಪ್ರಶಂಸಿಸಿ ತನ್ನ ಅಧಿಕಾರ ವ್ಯಾಪ್ತಿಯಲ್ಲಿ ಪಟ್ಲ ಟ್ರಸ್ಟ್ ಫೌಂಡೇಶನ್ ಗೆ ಪೂರ್ಣ ಪ್ರಮಾಣದ ಸಹಕಾರದ ಭರವಸೆಯನ್ನು ನೀಡಿದರು. ಪಟ್ಲ ಫೌಂಡೇಶನ್ ನ ದೆಹಲಿ ಘಟಕದ ಅಧ್ಯಕ್ಷರಾದ ವಸಂತ ಶೆಟ್ಟಿ ಬೆಳ್ಳಾರೆಯವರು ಅಧ್ಯಕ್ಷತೆ ವಹಿಸಿದ್ದರು. ಸಮಾರಂಭದಲ್ಲಿ ಅತಿಥಿಗಳಾಗಿ ಜಮ್ಮು ಕಾಶ್ಮೀರ ಸರ್ಕಾರದ ಪ್ರಿನ್ಸಿಪಾಲ್ ಸೆಕ್ರೆಟರಿ ರಾಜೇಶ್ ಪ್ರಸಾದ್ ಐಎಎಸ್ ಸಿಬಿಐಯ ಜಂಟಿ ನಿರ್ದೇಶಕ ಅಶ್ವಿನ್ ಶೇನ್ವಿ ಐಪಿಎಸ್, ಸುಳ್ಯ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ, ಪಟ್ಲ ಟ್ರಸ್ಟಿ್ ನ ಮಹಾದಾನಿ ಶಶಿಧರ ಶೆಟ್ಟಿ ಬರೋಡ, ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ, ದೆಹಲಿಯ ಪ್ರಸಿಧ್ಧ ಉದ್ಯಮಿಗಳಾದ ವಿವೇಕ್ ಅಗರ್ವಾಲ್, ಶ್ರೀಮತಿ ದೀಪ್ತಿ ಶರ್ಮ, ದೆಹಲಿ ಕರ್ನಾಟಕ…

Read More

ಕೊಣಾಜೆ : ಮಂಗಳೂರು ವಿಶ್ವವಿದ್ಯಾನಿಲಯದ ದೈಹಿಕ ಶಿಕ್ಷಕ ಶಿಕ್ಷಣ ವಿಭಾಗದಲ್ಲಿ ದೈಹಿಕ ಶಿಕ್ಷಣ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದ ಡಾ.ಕಿಶೋರ್ ಕುಮಾರ್ ಸಿ.ಕೆ (60)ಅವರು ಭಾನುವಾರ ಮುಂಜಾನೆ ನಿಧನರಾದರು.ಇವರು ಕಳೆದ ಕೆಲವು ದಿನಗಳಿಂದ ಅಸೌಖ್ಯದಿಂದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆಯನ್ನು ಪಡೆಯುತ್ತಿದ್ದರು. ಭಾನುವಾರಂದು ಮುಂಜಾನೆ‌ ಚಿಕಿತ್ಸೆ‌ ಫಲಕಾರಿಯಾಗದೆ‌ ನಿಧನ ಹೊಂದಿದ್ದಾರೆ. ಇವರಿಗೆ ಪತ್ನಿ ಹಾಗೂ ಇಬ್ಬರು ಪುತ್ರರಿದ್ದಾರೆ. ಮಂಗಳೂರು ವಿವಿಯ ಧೈಹಿಕ ಶಿಕ್ಷಕ‌ ಶಿಕ್ಷಣ‌ ವಿಭಾಗದಲ್ಲಿ‌ ನಿರ್ದೆಶಕರಾಗಿ, ವಿಭಾಗದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿರುವ ಇವರು ಮಂಗಳೂರು ವಿವಿಯ ಪ್ರಭಾರ ಕುಲಪತಿಯಾಗಿ, ಕುಲಸಚಿವರಾಗಿ ಹಲವು ವರ್ಷಗಳ ಕಾಲ‌ ಕಾರ್ಯನಿರ್ವಹಿಸಿದ್ದರು.‌ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಕ್ರೀಡಾನೀತಿ‌ ಅನುಷ್ಠಾನ ಸೇರಿದಂತೆ ಕ್ರೀಡಾ ಕ್ಷೇತ್ರದಲ್ಲಿ ಮಂಗಳೂರು‌ ವಿವಿಯು ರಾಷ್ಟ್ರ ಮಟ್ಟದಲ್ಲಿ ಸಾಧನೆ ಮಾಡಿರುವುದರಲ್ಲಿ ಇವರ ಪಾತ್ರ ಪ್ರಮುಖವಾಗಿತ್ತು. ವಾಲಿಬಾಲ್, ಕ್ರಿಕೆಟ್, ಬ್ಯಾಡ್ಮಿಂಟನ್ ಸೇರಿದಂತೆ ವಿವಿಧ ಕ್ರೀಡೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಉತ್ತಮ ಕ್ರೀಡಾಪಟುವಾಗಿ ಗುರುತಿಸಿದ್ದರು.

Read More

ಕೊಣಾಜೆ : ಕಲಾವಿದ ಆಯಾ ಕ್ಷೇತ್ರದ ಸೂಕ್ಷ್ಮತೆಗಳನ್ನು ಅರ್ಥೈಸುವುದರೊಂದಿಗೆ ಸೃಜನಶೀಲತೆಯನ್ನು ಬೆಳೆಸಿಕೊಳ್ಳಬೇಕು. ಕಲಾವಿದನಿಗೆ ಪ್ರಶಸ್ತಿಗಿಂತ ಕಲಾ ಸಾಧನೆಯೇ ಮೌಲಿಕವಾದುದು ಎಂದು ಹಿರಿಯ ಕಲಾವಿದರಾದ‌ ರಮೇಶ್ ರಾವ್ ಅವರು ಹೇಳಿದರು. ಅವರು‌ ಮಂಗಳೂರು ವಿಶ್ವವಿದ್ಯಾನಿಲಯದ ಎನ್. ಜಿ. ಪಾವಂಜೆ ಲಲಿತಕಲಾ ಪೀಠ ಇದರ ವತಿಯಿಂದ ‌ಕರಾವಳಿ ಚಿತ್ರಕಲಾ ಚಾವಡಿ (ರಿ) ಮಂಗಳೂರು ಇವರ ಸಹಕಾರದೊಂದಿಗೆ ಎರಡು ದಿನಗಳ ಕಾಲ ನಡೆದ “ಕಲಾ‌ದರ್ಪಣ” ಭಾವಚಿತ್ರ ರಚನೆ ಮತ್ತು ಸೃಜನಾತ್ಮಕ ಚಿತ್ರಕಲಾ ಶಿಬಿರದ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು. ಮಂಗಳೂರು ವಿವಿಯ ಹಣಕಾಸು ಅಧಿಕಾರಿ‌ ಪಂಚಲಿಂಗೇಶ್ವರ ಸ್ವಾಮಿ, ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ, ಕಲೆಯು ಕೈಯಿಂದ ಮಾತ್ರವಲ್ಲ ಹೃದಯದಿಂದ ಹುಟ್ಟಬೇಕು.‌ ಎರಡು ದಿನದ ಶಿಬಿರದಿಂದ ಬಹಳಷ್ಟು ವಿದ್ಯಾರ್ಥಿಗಳಿಗೆ ಪ್ರಯೋಜನವಾಗಿದೆ ಎಂದರು.ಗೌರವಾಧ್ಯಕ್ಷರಾದ ಗಣೇಶ್ ಸೋಮಯಾಜಿ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ, ಶಿಬಿರಲ್ಲಿ ರಾಷ್ಟ್ರಮಟ್ಟದ ಕಲಾವಿದರು ಸೇರಿದಂತೆ ನಾಡಿನ ಖ್ಯಾತ ಕಲಾವಿದರು‌ ಭಾಗವಹಿಸುವ ಮೂಲಕ ಶಿಬಿರದ ಮೆರುಗನ್ನು ಹೆಚ್ಚಿಸಿದೆ. ವಿವಿಯಲ್ಲಿ ಪಾವಂಜೆ ಪೀಠದಲ್ಲಿ ಕಲಾ‌ಚಟುವಟಿಕೆಗೆ…

Read More

ಕೊಣಾಜೆ : ಪಂಪ ಪ್ರಶಸ್ತಿ ಪುರಸ್ಕೃತ, ವಿಶ್ರಾಂತ ಕುಲಪತಿಗಳಾದ ಪ್ರೊ.ಬಿ.ಎ ವಿವೇಕ ರೈ ಅವರಿಂದ ಪಂಪನ ಕಾವ್ಯಗಳ ಕುರಿತು ಮೂರು ಉಪನ್ಯಾಸಗಳನ್ನು ಮಂಗಳೂರು ವಿಶ್ವವಿದ್ಯಾನಿಲಯ ಮತ್ತು ಎಸ್ ವಿ ಪಿ ಕನ್ನಡ ಅಧ್ಯಯನ ಸಂಸ್ಥೆ ಏರ್ಪಡಿಸಿದೆ. ಅಕ್ಟೋಬರ್ 13, 14 ಮತ್ತು 15 ರಂದು ಮಂಗಳೂರಿನ ಹಂಪನಕಟ್ಟೆಯಲ್ಲಿರುವ ವಿಶ್ವವಿದ್ಯಾನಿಲಯ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ಸಂಜೆ 5.30 ರಿಂದ 7 ಗಂಟೆಯವರೆಗೆ ಈ ಉಪನ್ಯಾಸ ಕಾರ್ಯಕ್ರಮ ನಡೆಯಲಿದೆ.ಶ್ರೀಸಾಮಾನ್ಯರಿಗೆ ಪ್ರಾಚೀನ ಕನ್ನಡ ಸಾಹಿತ್ಯ ಎಂಬ ಉದ್ದೇಶದೊಂದಿಗೆ ನಡೆಯುವ ಈ ಕಾರ್ಯಕ್ರಮದಲ್ಲಿ ಭಾಗವಹಿಸುವವರು ಮುಂಚಿತವಾಗಿ 8904628052 ಆಥವಾ 8310300875 ಈ ಸಂಖ್ಯೆಯನ್ನು ಸಂಪರ್ಕಿಸಿ ನೋಂದಣಿ ಮಾಡಿಕೊಳ್ಳಬಹುದಾಗಿದೆ. ನೋಂದಣಿ ಉಚಿತವಾಗಿದ್ದು ಭಾಗವಹಿಸಿದವರಿಗೆ ಕೊನೆಯ ದಿನ ಪ್ರಮಾಣಪತ್ರವನ್ನು ನೀಡಲಾಗುವುದು.

Read More

ದೇರಳಕಟ್ಟೆ : ಬ್ಯಾರಿ ಎಲ್ತ್‌ಕಾರ್-ಕಲಾವಿದಮಾರೊ ಕೂಟ (ಮೇಲ್ತೆನೆ) ಇದರ ವತಿಯಿಂದ ಬ್ಯಾರಿ ಭಾಷಾ ದಿನವನ್ನು ನಾಟೆಕಲ್‌ನಲ್ಲಿರುವ ಎಲೈಟ್ ಟ್ಯೂಶನ್ ಸೆಂಟರ್‌ನಲ್ಲಿ ಶುಕ್ರವಾರ ಆಚರಿಸಲಾಯಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಮೇಲ್ತೆನೆಯ ಗೌರವಾಧ್ಯಕ್ಷ ಆಲಿಕುಂಞಿ ಪಾರೆ ಆಧುನಿಕ ಭರಾಟೆಯ ಮಧ್ಯೆಯೂ ಜನಸಾಮಾನ್ಯರ ದಿನಬಳಕೆಯ ಆಡುಮಾತುಗಳಿಂದ ಈವತ್ತು ಪ್ರಾದೇಶಿಕ ಭಾಷೆಗಳು ಉಳಿಯಲು ಸಾಧ್ಯವಾಗಿದೆ. ಉನ್ನತ ಶಿಕ್ಷಣ ಪಡೆದ ಹೆಚ್ಚಿನವರಲ್ಲಿ ಆಂಗ್ಲ ಭಾಷೆಯ ಮೇಲೆ ವ್ಯಾಮೋಹ ಹೆಚ್ಚಿದೆ. ಆದರೆ ಕೂಲಿ ಕಾರ್ಮಿಕರು, ಸಣ್ಣಪುಟ್ಟ ಕೆಲಸ ಮಾಡುವವರು ಮಾತೃಭಾಷೆಯಲ್ಲೇ ದಿನನಿತ್ಯ ವ್ಯವಹರಿಸುತ್ತಾರೆ. ಹಾಗಾಗಿ ಭಾಷಾ ದಿನಾಚರಣೆಯ ಸಂದರ್ಭ ಅಂತಹವರನ್ನು ಗುರುತಿಸಿ ಗೌರವಿಸುವ ಪ್ರಯತ್ನ ಆಗಬೇಕಿದೆ ಎಂದರು.ಪ್ರಾಸ್ತಾವಿಕವಾಗಿ ಮಾತನಾಡಿದ ಪ್ರಧಾನ ಕಾರ್ಯದರ್ಶಿ ಹಂಝ ಮಲಾರ್‌ ಭಾಷೆಯ ಬೆಳವಣಿಗೆಯಲ್ಲಿ ತಾಯಂದಿರ ಪಾತ್ರ ಅಪಾರವಿದೆ. ತಾಯಿಯಿಂದಲೇ ಮಕ್ಕಳು ಮಾತೃಭಾಷೆಯನ್ನು ಕಲಿಯುತ್ತಾರೆ. ಹಾಗಾಗಿ ತಾಯಂದಿರಿಲ್ಲದ ಭಾಷಾ ದಿನಾಚರಣೆಯು ಅರ್ಥಪೂರ್ಣವಾಗದು. ಮುಂದಿನ ದಿನಗಳಲ್ಲಿ ಎಲ್ಲಾ ಬ್ಯಾರಿ ಸಂಘಟನೆಗಳು ತಾಯಂದಿರನ್ನು ಒಳಗೊಂಡಂತೆ ಕಾರ್ಯಕ್ರಮಗಳು ಆಯೋಜಿಸಲು ಕ್ರಮ ವಹಿಸಬೇಕು ಎಂದು ಅಭಿಪ್ರಾಯಪಟ್ಟರು. ಮೇಲ್ತೆನೆಯ ಅಧ್ಯಕ್ಷ ವಿ. ಇಬ್ರಾಹಿಂ ನಡುಪದವು…

Read More

ತೊಕ್ಕೊಟ್ಟು : ಸ್ವಾತಂತ್ರ್ಯ ಹೋರಾಟಗಾರ ನರಿಂಗಾನ ಗ್ರಾಮದ ಸೌರ್ಕುಡೇಲು ದಿವಂಗತ ಮಹಾಬಲೇಶ್ವರ ಭಟ್ ಅವರ ಧರ್ಮಪತ್ನಿ ಸರಸ್ವತಿ ಭಟ್ (95) ಗುರುವಾರ ಮಂಗಳೂರಿನಲ್ಲಿರುವ ಮಗಳ ಮನೆಯಲ್ಲಿ ವಯೋ ಸಹಜ ಸಾವಿಗೀಡಾದರು. ಪತಿಯ ಆದರ್ಶ ಪರಿಪಾಲಿಸುತ್ತ ಮಹಿಳೆಯರು ಸ್ವಾವಲಂಬಿ ಬದುಕು ಕಲ್ಪಿಸಿಕೊಳ್ಳುವ ನಿಟ್ಟಿನಲ್ಲಿ ನರಿಂಗಾನ ಗ್ರಾಮ ಪಂಚಾಯಿತಿ ಸಹಕಾರದೊಂದಿಗೆ ಹೊಲಿಗೆ ತರಬೇತಿ ಕೇಂದ್ರ, ಮಹಿಳಾ ಮಂಡಲ ಸ್ಥಾಪನೆ, ನರಿಂಗಾನ ಶಾಲೆ ಸೇರಿದಂತೆ ವಿವಿಧ ಭಾಗದಲ್ಲಿ ಸಮಾಜ ಮುಖಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದ ಕೀರ್ತಿ ಸರಸ್ವತಿ ಭಟ್ ಅವರಿಗೆ ಸಲ್ಲುತ್ತದೆ.ಮಕ್ಕಳಾದ ಡಾ. ಉದಯ ಶಂಕರ ಭಟ್, ಡಾ. ಮಾಧವಿ ಭಟ್, ಡಾ. ಗಾಯತ್ರಿ ಭಟ್ , ಡಾ. ವೈಜಯಂತಿ ಭಟ್ , ಡಾ. ವಿನಯ ಪೂರ್ಣಿಮ ಭಟ್ ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

Read More

ಬೆಂಗಳೂರು : ವಿಧಾನಸಭೆಯ ಸ್ಪೀಕರ್ ಯು.ಟಿ.ಖಾದರ್ ಸಹಿತ ಮೂವರು ಸಾಧಕರನ್ನು ಗೌರವ ಡಾಕ್ಟರೇಟ್ ಪದವಿಗೆ ಆಯ್ಕೆ ಮಾಡಲಾಗಿದೆ ಎಂದು ಬೆಂಗಳೂರು ವಿಶ್ವವಿದ್ಯಾನಿಲಯವು ತಿಳಿಸಿದೆ. ವಿಧಾನ ಪರಿಷತ್‌ ಮಾಜಿ ಸದಸ್ಯ ಹಾಗೂ ಸಮಾಜ ಸೇವಕ ಡಿ.ಮಾದೇಗೌಡ ಹಾಗೂ ಜೆ.ಪಿ.ಅಗ್ರಿ ಜೆನೆಟಿಕ್ಸ್ ಪ್ರೈವೇಟ್ ಲಿಮಿಟೆಡ್‌ ಸಂಸ್ಥಾಪಕ ಹಾಗೂ ವ್ಯವಸ್ಥಾಪಕ ನಿರ್ದೇಶಕ ಡಾ.ಟಿ.ಬಿ.ಪ್ರಸನ್ನ ಗೌರವ ಡಾಕ್ಟರೇಟ್ ಪದವಿಗೆ ಆಯ್ಕೆಯಾಗಿದ್ದಾರೆ. ಅ.8ರಂದು ಸೆಂಟ್ರಲ್ ಕಾಲೇಜು ಆವರಣದಲ್ಲಿರುವ ಜ್ಞಾನಜ್ಯೋತಿ ಸಭಾಂಗಣದಲ್ಲಿ 60ನೇ ವಾರ್ಷಿಕ ಘಟಿಕೋತ್ಸವ ನಡೆಯಲಿದ್ದು, ಈ ಕಾರ್ಯಕ್ರಮದಲ್ಲಿ ಪದವಿ ಪ್ರದಾನ ಮಾಡಲಾಗುವುದು ಎಂದು ವಿವಿ ಹೇಳಿದೆ. ರಾಜ್ಯಪಾಲ ಥಾವರ್‌ಚಂದ್ ಗೆಹೋಟ್ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದು, ಪದ್ಮಶ್ರೀ ಪುರಸ್ಕೃತ ಡಾ.ಪ್ರಹ್ಲಾದ ರಾಮರಾವ್, ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಯು.ಟಿ.ಖಾದರ್ : ಕಾನೂನು ಪದವೀಧರರಾಗಿರುವ ಯು.ಟಿ.ಖಾದರ್ ಅವರು ಮಾಜಿ ಶಾಸಕ ದಿವಂಗತ ಯು.ಟಿ.ಫರೀದ್ ಅವರ ಪುತ್ರ. ಎನ್‌ಎಸ್ ಯುಐ, ಯುವ ಕಾಂಗ್ರೆಸ್ ಹಾಗೂ ಸೇವಾದಳಗಳ ಮೂಲಕ ಸಾರ್ವಜನಿಕ ಜೀವನ ಪ್ರವೇಶಿಸಿದ ಯು.ಟಿ.ಖಾದರ್, ಇದೀಗ ಮಂಗಳೂರು ಕ್ಷೇತ್ರ ಎಂದಾಗಿರುವ…

Read More

ಸೀತಾಂಗೋಳಿ : ಬದಿಯಡ್ಕ ನಿವಾಸಿ ಮೀನು ವ್ಯಾಪಾರಿ ಯುವಕನಿಗೆ ಸೀತಾಂಗೋಳಿಯಲ್ಲಿ ತಂಡವೊಂದು ಮಾರಣಾಂತಿಕವಾಗಿ ಇರಿದ ಘಟನೆ ನಡೆದಿದೆ. ಬದಿಯಡ್ಕ ಬಳಿಯ ವಳಮಲೆ ನಿವಾಸಿ ಅನಿಲ್ ಕುಟ್ಟನ್ ಅವರನ್ನು ಗಂಭೀರ ಗಾಯಗಳೊಂದಿಗೆ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ನಿನ್ನೆ (ಅದಿತ್ಯವಾರ) ರಾತ್ರಿ 11.30 ರ ವೇಳೆ ಸೀತಾಂಗೋಳಿ ಪೇಟೆಯಲ್ಲಿ ಈ ಘಟನೆ ನಡೆದಿದೆ.ಮಹೇಶ್ ನೇತೃತ್ವದ ತಂಡ ಇರಿದಿರುವುದಾಗಿ ಅನಿಲ್ ಕುಟ್ಟನ್ ಪೊಲೀಸರಿಗೆ ಹೇಳಿಕೆ ನೀಡಿದ್ದಾರೆ. ಈ ಬಗ್ಗೆ ಹಲವರನ್ನು ಎರಡು ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ ಎ೦ದು ಕುಂಬಳೆ ಪೊಲೀಸರು ಹೇಳಿದ್ದಾರೆ. ಅನಿಲ್ ಕುಟ್ಟನ್ ಅವರಿಗೆ ಮಂಗಳೂರು ಆಸ್ಪತ್ರೆಯಲ್ಲಿ ಇಂದು ಬೆಳಗ್ಗೆ ತುರ್ತು ಶಸ್ತ್ರಕ್ರಿಯೆ ನಡೆಸಲಾಗಿದೆ

Read More

ಪೀಣ್ಯ ದಾಸರಹಳ್ಳಿ : ಬೃಹತ್ ಮರ ಸ್ಕೂಟರ್‌ನಲ್ಲಿ ತೆರಳುತ್ತಿದ್ದ ವೇಳೆ ಉರುಳಿ ಬಿದ್ದು ಯುವತಿ ಸಾವನ್ನಪ್ಪಿದ್ದು, ಮತ್ತೊಂದು ಬೈಕ್‌ನಲ್ಲಿ ಹೋಗುತ್ತಿದ್ದ ಸವಾರ ಗಾಯಗೊಂಡಿರುವ ಘಟನೆ ಸೋಲದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಭಾನುವಾರ(ಅ.5) ರಾತ್ರಿ ನಡೆದಿದೆ. ಹೆಬ್ಬಾಳದ ಕೀರ್ತನ (24) ಮೃತ ಯುವತಿ. ಮತ್ತೂಂದು ಬೈಕ್ ಚಾಲನೆ ಮಾಡುತ್ತಿದ್ದ ಭಾಸ್ಕರ್ ಎಂಬಾತನಿಗೆ ಗಾಯಗಳಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ರಾತ್ರಿ 8 ಗಂಟೆ ಸುಮಾರಿಗೆ ಸೋಲದೇವನಹಳ್ಳಿ ರಸ್ತೆಯಲ್ಲಿ ಯುವತಿ ತೆರಳುತ್ತಿದ್ದ ಏಕಾಏಕಿ ಹಳೆಯ ಬೃಹತ್ ಮರ ಬುಡ ಸಮೇತ ಬಿದ್ದ ಪರಿಣಾಮ ಯುವತಿ ಸ್ಥಳದಲ್ಲೇ ಮೃತಪಟ್ಟು, ಮತ್ತೂಂದು ಬೈಕ್ ನಲ್ಲಿ ಬರುತ್ತಿದ್ದ ವ್ಯಕ್ತಿಗೂ ಗಂಭೀರ ಗಾಯಗಳಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ಥಳಕ್ಕೆ ಸೋಲದೇವನಹಳ್ಳಿ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು, ಮೃತ ಯುವತಿಯ ಶವವನ್ನು ಸಪ್ತಗಿರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಅಧಿಕಾರಿಗಳಿಂದ ಮರ ತೆರವು ಕಾರ್ಯಾಚರಣೆ ಮಾಡಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ

Read More