Author: UllalaVani

Kannada News From Coastal Karnataka

ಉಳ್ಳಾಲ, ಜು.16: ರಾಜ್ಯದ ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಉಳ್ಳಾಲ ದರ್ಗಾ ಅಧ್ಯಕ್ಷ ಹನೀಫ್ ಹಾಜಿ ಅವರು ವಿಧಾನಸೌಧದಲ್ಲಿ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಉಳ್ಳಾಲ ದರ್ಗಾಕ್ಕೆ ಭೇಟಿ ನೀಡುವಂತೆ ಮುಖ್ಯಮಂತ್ರಿ ಅವರಿಗೆ ಆಹ್ವಾನ ನೀಡಿದ ಹನೀಫ್ ಹಾಜಿ, ದರ್ಗಾದ ಸಮಗ್ರ ಅಭಿವೃದ್ಧಿಗೆ ಸರ್ಕಾರದಿಂದ ಅಗತ್ಯ ಸಹಕಾರ ಹಾಗೂ ಅನುದಾನ ಒದಗಿಸುವಂತೆ ಮನವಿ ಮಾಡಿದರು. ಮುಖ್ಯಮಂತ್ರಿಯವರು ಮನವಿಯನ್ನು ಸಕಾರಾತ್ಮಕವಾಗಿ ಪರಿಗಣಿಸುವ ಭರವಸೆ ನೀಡಿದರು ಎಂದು ತಿಳಿದುಬಂದಿದೆ. ಈ ವೇಳೆ ಉಳ್ಳಾಲ ದರ್ಗಾ ಉಪಾಧ್ಯಕ್ಷ ಯು.ಎಂ. ಅಶ್ರಫ್ ಅಹ್ಮದ್, ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಶಿಹಾಬುದ್ದೀನ್ ಸಖಾಫಿ, ಕೋಶಾಧಿಕಾರಿ ನಾಝಿಂ ರಹ್ಮಾನ್ ಸೇರಿದಂತೆ ದರ್ಗಾದ ಪದಾಧಿಕಾರಿಗಳು ಉಪಸ್ಥಿತರಿದ್ದರು.

Read More

ಸೋಮೇಶ್ವರ: ಲೈಫ್ ಲೈನ್ ಫೌಂಡೇಶನ್ ಉಚ್ಚಿಲ ವತಿಯಿಂದ ಸಾಧಕ ವಿದ್ಯಾರ್ಥಿಗಳನ್ನು ಸ್ಮರಣಿಕೆ ನೀಡಿ ಗೌರವಪೂರ್ಣವಾಗಿ ಸನ್ಮಾನಿಸಲಾಯಿತು. ಮಜಲ್ ರೆಸಿಡೆನ್ಸಿಯಲ್ಲಿ ನಡೆದ ಸಮಾರಂಭವನ್ನು ಕೆ.ಎಸ್.ಶೇಖ್ ಕರ್ನಿರೆ (Expertise Group COO ಸೌದಿ ಅರೇಬಿಯಾ) ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ಸಲಹೆ, ಮಾರ್ಗದರ್ಶನ ನೀಡಿದರು. ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರು ಮುಖ್ಯ ಅಥಿತಿಯಾಗಿದ್ದರು. ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನ ನಿರ್ವತ್ತ ಪ್ರಿನ್ಸಿಪಾಲ್ ಡಾ. ಉದಯ ಕುಮಾರ್ ದಿಕ್ಸೂಚಿ ಭಾಷಣ ಮಾಡಿದರು. ಮುಹಮ್ಮದ್‌ ಅನಸ್ ಅವರ ಕುರ್‌ಆನ್ ಪಠಣದೊಂದಿಗೆ ಆರಂಭವಾದ ಸಮಾರಂಭದಲ್ಲಿ‌ ಫೌಂಡೇಶನ್ ಅಧ್ಯಕ್ಷ ಅಬ್ಬಾಸ್ ಪಿ. ಉಚ್ಚಿಲ್ ಅಧ್ಯಕ್ಷತೆ ವಹಿಸಿದ್ದರು.ಮುಹಮ್ಮದ್ ಅಲಿ ಉಚ್ಚಿಲ್ ಪ್ರಾಸ್ತಾವಿಕ ಭಾಷಣ ಮಾಡಿ, ಅತಿಥಿಗಳನ್ನು ಸ್ವಾಗತಿಸಿದರು. ಕಾರ್ಯದರ್ಶಿ ಇಲ್ಯಾಸ್ ಉಚ್ಚಿಲ್ ಸಭಾ ಕಾರ್ಯಕ್ರಮ ನಡೆಸಿಕೊಟ್ಟರು. ಜಮಾಅತ್ ಅಧ್ಯಕ್ಷ ಇಸ್ಮಾಯಿಲ್ ಹಾಜಿ, ಫೌಂಡೇಶನ್ ಜನರಲ್ ಸೆಕ್ರೆಟರಿ ಹಮೀದ್ ಉಚ್ಚಿಲ್ ಮತ್ತು ಗೌರವಾಧ್ಯಕ್ಷ ಅಬ್ದುಲ್ ಮಜೀದ್ ಹಾಜಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಫೌಂಡೇಶನ್ ಪದಾಧಿಕಾರಿಗಳಾದ ಅಬ್ಬಾಸ್ ಮಜಲ್, ಅಬ್ದುಲ್ ರಝಾಕ್ ಎಂ.ಆರ್., ಅಬ್ದುಲ್ ಹಮೀದ್, ನಾಸಿರ್ ಖಾನ್,…

Read More

ಉಳ್ಳಾಲ; ಗಿಡ ನೆಡುವುದಷ್ಟೇ ಸಾಕಾಗುವುದಿಲ್ಲ, ಅವುಗಳನ್ನು ಸಂರಕ್ಷಿಸುವ ಜವಾಬ್ದಾರಿಯೂ ಪ್ರತಿಯೊಬ್ಬರ ಮೇಲಿದೆ. ಇತ್ತೀಚಿನ ದಿನಗಳಲ್ಲಿ ಗಿಡ-ಮರಗಳ ನಾಶದಿಂದ ಮಳೆ ಸರಿಯಾದ ಸಮಯಕ್ಕೆ ಆಗುತ್ತಿಲ್ಲ. ಪ್ರಕೃತಿ ವಿಕೋಪಗಳು ಹೆಚ್ಚಾಗುತ್ತಿದ್ದು, ಪರಿಸರದ ಸಮತೋಲನ ಕಾಪಾಡಲು ಪ್ರತಿಯೊಬ್ಬರೂ ತಮ್ಮ ಹುಟ್ಟುಹಬ್ಬದಂತಹ ವಿಶೇಷ ದಿನಗಳಲ್ಲಿ ಕನಿಷ್ಠ ಒಂದು ಗಿಡವನ್ನು ನೆಟ್ಟು ಬೆಳೆಸುವ ಸಂಕಲ್ಪ ಮಾಡಬೇಕು ಎಂದು ಭಾರತ್ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಯಶವಂತ್ ಅಮೀನ್ ಅಭಿಪ್ರಾಯಪಟ್ಟರು. ಇವರು ಭಾರತ್ ಸಮೂಹ ಶಿಕ್ಷಣ ಸಂಸ್ಥೆ, ಸಹ್ಯಾದ್ರಿ ಸಂಚಯ, ಗ್ಲೋಬಲ್ ಗ್ರೀನ್ ಟೈರ್ಸ್ ಮಂಗಳೂರು ಹಾಗೂ ರಾಷ್ಟ್ರೀಯ ಪರಿಸರ ಸಂರಕ್ಷಣಾ ಒಕ್ಕೂಟದ ಸಂಯುಕ್ತ ಆಶ್ರಯದಲ್ಲಿ ಮಾಸ್ತಿಕಟ್ಟೆಯಲ್ಲಿ ನಡೆದ ದಿನೇಶ್ ಹೊಳ್ಳ ಅವರ 60ನೇ ಜನ್ಮದಿನದ ಅಂಗವಾಗಿ, ಅವರ ತಾಯಿ ಯಮುನಾ ಹೊಳ್ಳ ಅವರ ಸ್ಮರಣಾರ್ಥ 60 ಗಿಡಗಳನ್ನು ನೆಡುವ ವಿಶೇಷ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ಭಾರತ್ ಶಿಕ್ಷಣ ಸಮೂಹ ಸಂಸ್ಥೆಯ ಸಂಚಾಲಕ ರೋಹಿದಾಸ್ ಬಂಗೇರ ಮಾತನಾಡಿ, ತಾಯಿಯ ಸ್ಮರಣಾರ್ಥ 60 ಗಿಡಗಳನ್ನು ನೆಡುವ ಕಾರ್ಯಕ್ರಮ ಅತ್ಯಂತ…

Read More

ಮಂಗಳೂರು: ಸ್ಕೂಟರ್‌ನಲ್ಲಿ ಅಪಾಯಕಾರಿಯಾಗಿ ಸ್ಟಂಟ್ ಮಾಡುತ್ತಿದ್ದ ಯುವಕನಿಗೆ ಮಂಗಳೂರು ನಗರ ಸಂಚಾರ ಠಾಣೆಯ ಪೊಲೀಸರು 7000 ರೂ. ದಂಡ ವಿಧಿಸಿದ್ದಾರೆ. ಕೊಣಾಜೆ ಬಳಿ ವಿದ್ಯಾರ್ಥಿಯೋರ್ವ ಕಳೆದ ಮಾರ್ಚ್‌ ನಲ್ಲಿ ಸ್ಕೂಟರ್ ಸ್ಟಂಟ್ ಮಾಡಿದ್ದ. ಇದರ ವೀಡಿಯೋ ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಅದರಂತೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ದಂಡ ವಿಧಿಸಿದ್ದಾರಲ್ಲದೆ ಚಾಲನಾ ಪರವಾನಿಗೆ ರದ್ದತಿಗೆ ಸಾರಿಗೆ ಪ್ರಾಧಿಕಾರಕ್ಕೆ ಶಿಫಾರಸ್ಸು ಮಾಡಿದ್ದಾರೆ ಎಂದು ತಿಳಿದು ಬಂದಿದೆ.

Read More

ಮಂಗಳೂರು: ಮಂಗಳೂರು ನಗರದ ಕೈಕಂಬ ಬಳಿ ವಾಸವಾಗಿರುವ ಮಹಿಳೆಯೊಬ್ಬರಿಗೆ ಕೌಟುಂಬಿಕ ವಿಷಯಗಳನ್ನು ದುರುಪಯೋಗಪಡಿಸಿಕೊಂಡು ನಿರಂತರವಾಗಿ ಫೋನ್ ಮೂಲಕ ಕಿರುಕುಳ ನೀಡಿ, ಮಾನಸಿಕ ಹಿಂಸೆ ಮತ್ತು ಜೀವ ಬೆದರಿಕೆ ಹಾಕಿದ ಆರೋಪದ ಮೇಲೆ ಇಬ್ಬರು ವ್ಯಕ್ತಿಗಳ ವಿರುದ್ಧ ಮಂಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಳಲಿ‌ ನಿವಾಸಿಗಳಾದ ಕಿರಣ್ ಕೊಟ್ಟಾರಿ ಮತ್ತು ರಾಜ್ ಮಾರ್ಲ ಪ್ರಕರಣದ ಆರೋಪಿಗಳು. ಇವರಿಬ್ಬರೂ ಹಿಂದೂ ಸಂಘಟನೆಗಳಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡಿದ್ದಾರೆ ಎನ್ನಲಾಗಿದೆ.ದೂರುದಾರರು ಮಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದು, ಅವರ ಪತಿ ವಿದೇಶದಲ್ಲಿ ಉದ್ಯೋಗದಲ್ಲಿದ್ದಾರೆ. ದೂರುದಾರರ ಪತಿಯ ಸ್ನೇಹಿತನಾಗಿದ್ದು ಸುಮಾರು ಐದು ವರ್ಷಗಳಿಂದ ಪರಿಚಿತರಿದ್ದ ಕಿರಣ್ ಕೊಟ್ಟಾರಿ, ಸಂತ್ರಸ್ತೆಯ ಮೊಬೈಲ್ ಸಂಖ್ಯೆಯನ್ನು ಪಡೆದು ಮಾರ್ಚ್ 10, 2026 ರಿಂದ ನಿರಂತರವಾಗಿ ಕರೆ ಮಾಡುತ್ತಿದ್ದನು. ಪ್ರೀತಿಯ ಹೆಸರಿನಲ್ಲಿ ಆಮಿಷವೊಡ್ಡಿ, ದೂರುದಾರರನ್ನು ಹಿಂಬಾಲಿಸಿ ಮಾನಸಿಕ ಕಿರುಕುಳ ನೀಡುತ್ತಿದ್ದನು. ಈ ವಿಷಯವನ್ನು ದೂರುದಾರರು ವಿದೇಶದಲ್ಲಿರುವ ತಮ್ಮ ಪತಿಗೆ ತಿಳಿಸಿ, ನಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.ಆರೋಪಿಗಳಿಬ್ಬರೂ ಸಂಘಟಿತವಾಗಿ ದೂರುದಾರರ ವಿರುದ್ಧ ಅಪಪ್ರಚಾರ ನಡೆಸುತ್ತಿದ್ದಾರೆ ಎಂದು…

Read More

ಕಾಸರಗೋಡು, ಜು. 15 : ಕಾಸರಗೋಡಿನ ಕರಂದಕ್ಕಾಡ್ ಜಂಕ್ಷನ್‌ನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದ ಸಿಸಿಟಿವಿ ದೃಶ್ಯಾವಳಿಗಳು ಇದೀಗ ಹೊರಬಿದ್ದಿದ್ದು, ಅಪಘಾತದ ತೀವ್ರತೆ ನೋಡುಗರಲ್ಲಿ ಆತಂಕ ಮೂಡಿಸಿದೆ. ನಿಯಂತ್ರಣ ತಪ್ಪಿದ ಇನ್ನೋವಾ ಕಾರು ಹಲವು ಬಾರಿ ಪಲ್ಟಿಯಾಗಿ ಸುಮಾರು 300 ಮೀಟರ್‌ಗಳಷ್ಟು ದೂರ ಉರುಳಿದರೂ, ಕಾರಿನಲ್ಲಿದ್ದ ಏರ್‌ಬ್ಯಾಗ್‌ಗಳು ತೆರೆದ ಪರಿಣಾಮ ಪ್ರಯಾಣಿಕರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಭಾನುವಾರ ಮಧ್ಯರಾತ್ರಿ ನಡೆದ ಈ ಅಪಘಾತದಲ್ಲಿ ಮಂಗಳೂರು ಕಡೆಯಿಂದ ಕರಂದಕ್ಕಾಡ್ ಜಂಕ್ಷನ್ ಕಡೆಗೆ ಬರುತ್ತಿದ್ದ ಇನ್ನೋವಾ ಕಾರು, ಮಧೂರು ಭಾಗದಿಂದ ಬಂದ ಮತ್ತೊಂದು ಕಾರಿಗೆ ಡಿಕ್ಕಿಯಾಗುವುದನ್ನು ತಪ್ಪಿಸಲು ಚಾಲಕ ಹಠಾತ್ ವಾಹನವನ್ನು ತಿರುಗಿಸಲು ಯತ್ನಿಸಿದ್ದಾನೆ. ಈ ವೇಳೆ ಕಾರಿನ ನಿಯಂತ್ರಣ ತಪ್ಪಿ ರಸ್ತೆ ಮಧ್ಯೆ ಹಲವು ಬಾರಿ ಪಲ್ಟಿಯಾಗುತ್ತಾ ದೂರದವರೆಗೆ ಉರುಳಿದೆ.ಅಪಘಾತದ ಸಂಪೂರ್ಣ ದೃಶ್ಯ ಸಮೀಪದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ವೇಗವಾಗಿ ಬರುತ್ತಿದ್ದ ಕಾರು ಕ್ಷಣಾರ್ಧದಲ್ಲಿ ಪಲ್ಟಿಯಾಗುವ ದೃಶ್ಯಗಳು ಅಪಘಾತದ ಭೀಕರತೆಯನ್ನು ಬಿಂಬಿಸುತ್ತವೆ. ಈ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿಯೂ ವ್ಯಾಪಕವಾಗಿ ಹರಿದಾಡುತ್ತಿದೆ. ಅಪಘಾತದ ತೀವ್ರತೆ ಅಪಾರವಾಗಿದ್ದರೂ,…

Read More

ಬಂಟ್ವಾಳ, ಜು. 15 : ಗಲ್ಫ್ ಪ್ರದೇಶದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ನಡುವೆಯೇ, ಒಮಾನ್ ಕರಾವಳಿಯ ಸಮೀಪ ಸಂಚರಿಸುತ್ತಿದ್ದ ವಾಣಿಜ್ಯ ಹಡಗಿನ ಮೇಲೆ ಜುಲೈ ೧೨ರ ಮಧ್ಯರಾತ್ರಿ ಕ್ಷಿಪಣಿ ದಾಳಿ ನಡೆದಿತತು. ಹಡಗಿನಿಂದ ಸುರಕ್ಷಿತವಾಗಿ ರಕ್ಷಿಸಲ್ಪಟ್ಟ ಭಾರತೀಯ ಸಿಬ್ಬಂದಿಗಳಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ರಚನ್ ಆರ್.ಕೆ.(25) ಕೂಡ ಒಬ್ಬರಾಗಿದ್ದಾರೆ. ಪ್ರಸ್ತುತ ರಚನ್ ಅವರು ಒಮಾನ್‌ನಲ್ಲಿ ತಮ್ಮ ಶಿಪ್ಪಿಂಗ್ ಕಂಪನಿಯ ಅಧಿಕಾರಿಗಳ ಮೇಲ್ವಿಚಾರಣೆಯಲ್ಲಿ ಸುರಕ್ಷಿತರಾಗಿದ್ದು, ತಾವು ದುಬೈಗೆ ತೆರಳುತ್ತಿರುವುದಾಗಿ ಕುಟುಂಬದವರಿಗೆ ಮಾಹಿತಿ ನೀಡಿದ್ದಾರೆ.ಬಂಟ್ವಾಳ ತಾಲೂಕಿನ ಬಿಳಿಯೂರು ಗ್ರಾಮದ ರೋಹಿತಾಕ್ಷ ಬಾಣಬೆಟ್ಟು ಅವರ ಮೂವರು ಮಕ್ಕಳಲ್ಲಿ ಕಿರಿಯವರಾದ ರಚನ್, ಪುತ್ತೂರಿನ ವಿವೇಕಾನಂದ ಕಾಲೇಜಿನಲ್ಲಿ ಪದವಿ ಶಿಕ್ಷಣ ಪೂರ್ಣಗೊಳಿಸಿದ ಬಳಿಕ ಮುಂಬೈನಲ್ಲಿ ಮೆರೈನ್ ಕೋರ್ಸ್ ಮಾಡಿ ಹಡಗು ಸೇವೆಗೆ ಸೇರಿದ್ದರು.ಘಟನೆಯ ಕುರಿತು ತಂದೆಯೊಂದಿಗೆ ಮಾತನಾಡಿದ ರಚನ್, ಹಡಗಿನ ಮೇಲೆ ದಾಳಿ ಸಂಭವಿಸುವ ಸಾಧ್ಯತೆ ಬಗ್ಗೆ ಮೊದಲೇ ಎಚ್ಚರಿಕೆ ನೀಡಲಾಗಿತ್ತು. ಆದರೂ ಹಡಗು ಒಮಾನ್ ಕರಾವಳಿಯುದ್ದಕ್ಕೂ ತನ್ನ ಸಂಚಾರ ಮುಂದುವರಿಸಿತ್ತು. ಭಾನುವಾರ ಮುಂಜಾನೆ ಸುಮಾರು 2.05 ಗಂಟೆಗೆ ಕ್ಷಿಪಣಿಯೊಂದು…

Read More

ಬೆಳ್ಮ: ಶ್ರೀಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ ಬೆಳ್ಮ ಅಣ್ಣಿಬೆಟ್ಟುವಿನಲ್ಲಿ ಸೆಪ್ಟೆಂಬರ್ 4ರಂದು ನಡೆಯಲಿರುವ 6ನೇ ವರ್ಷದ ಮೊಸರು ಕುಡಿಕೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಲಾಯಿತು. ಕಾರ್ಯಕ್ರಮದ ಅಂಗವಾಗಿ ಆಗಸ್ಟ್ 30ರಂದು ಮಕ್ಕಳು, ಮಹಿಳೆಯರು ಹಾಗೂ ಪುರುಷರಿಗಾಗಿ ವಿವಿಧ ವಿಶೇಷ ಆಟೋಟ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮದಲ್ಲಿ ಶ್ರೀ ಅರಸು ಪೈಂದೊಷ್ಣಯ ಪೊಸಭೂತ ಬಂಟ ದೈವಗಳ ಆಡಳಿತ ಮೊಕ್ತೇಸರರಾದ ಅಶೋಕ್ ರೈ ಬರಿಕೆ, ಸೋಮನಾಥ ಫ್ರೆಂಡ್ಸ್ ಬೆಳ್ಮ ಅಣ್ಣಿಬೆಟ್ಟು ಅಧ್ಯಕ್ಷರಾದ ಡಾ. ಬಿ. ಎಸ್. ವೇಣುಗೋಪಾಲ್, ಸಂಘದ ಸದಸ್ಯರಾದ ಉದಯ್ ಪೂಜಾರಿ, ಯೋಗಿಶ್ ಆಚಾರ್ಯ, ಪ್ರವೀಣ್, ಭವಿಷ್, ನೈತಿಕ್, ಪ್ರಜ್ವಲ್, ಸಂಭ್ರಮ್, ಮನ್ವಿತ್, ಆಯುಷ್ ಆಚಾರ್ಯ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Read More

ಮಂಗಳೂರು, ಜು. 14 : ನಗರದ ಕೊಡ್ಯಾಲಬೈಲಿನ ಜಿಲ್ಲಾ ಕಾರಾಗೃಹದಲ್ಲಿ ಹೊರಗಿನಿಂದ ಮೊಬೈಲ್‌ ಫೋನ್‌ಗಳು, ಮಾದಕ ವಸ್ತುಗಳು ಹಾಗೂ ಇತರ ನಿಷೇಧಿತ ಸಾಮಗ್ರಿಗಳನ್ನು ಎಸೆಯುವ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಭದ್ರತೆಯನ್ನು ಮತ್ತಷ್ಟು ಬಿಗಿಗೊಳಿಸುವ ಉದ್ದೇಶದಿಂದ ಜೈಲಿನ ಆವರಣ ಗೋಡೆಯ ಮೇಲ್ಭಾಗದಲ್ಲಿ 12 ಅಡಿ ಎತ್ತರದ ತಂತಿ ಬೇಲಿ ಅಳವಡಿಸುವ ಕಾಮಗಾರಿ ಆರಂಭವಾಗಿದೆ. ಕಾರಾಗೃಹ ಇಲಾಖೆಯ ರೂ. 50 ಲಕ್ಷ ಅನುದಾನದಲ್ಲಿ ಲೋಕೋಪಯೋಗಿ ಇಲಾಖೆ ಈ ಕಾಮಗಾರಿಯನ್ನು ಕೈಗೆತ್ತಿಕೊಂಡಿದ್ದು, ಟೆಂಡರ್‌ ಸೇರಿದಂತೆ ವಿವಿಧ ಆಡಳಿತಾತ್ಮಕ ಪ್ರಕ್ರಿಯೆಗಳು ಪೂರ್ಣಗೊಂಡ ಬಳಿಕ ಕಳೆದ ಕೆಲ ದಿನಗಳಿಂದ ಕಾಮಗಾರಿ ಆರಂಭವಾಗಿದೆ. ಪ್ರಸ್ತುತ ಜೈಲಿನ ಸುತ್ತ ಸುಮಾರು 15 ಅಡಿ ಎತ್ತರದ ಕಲ್ಲಿನ ಆವರಣ ಗೋಡೆ ಹಾಗೂ ಅದರ ಮೇಲ್ಭಾಗದಲ್ಲಿ ಸುಮಾರು ಎರಡು ಅಡಿ ತಂತಿ ಬೇಲಿ ಇದೆ. ಆದರೂ ಕೆಲವರು ಹೊರ ರಸ್ತೆಯಲ್ಲಿ ನಿಂತು ಗಾಂಜಾ, ಮೊಬೈಲ್‌ ಹಾಗೂ ಇತರ ವಸ್ತುಗಳನ್ನು ಪ್ಲಾಸ್ಟಿಕ್‌ ಪೊಟ್ಟಣಗಳಲ್ಲಿ ಕಲ್ಲು ಕಟ್ಟಿ ಜೈಲಿನೊಳಗೆ ಎಸೆಯುತ್ತಿರುವ ಘಟನೆಗಳು ಪದೇ ಪದೇ ವರದಿಯಾಗುತ್ತಿವೆ.ಹೊಸದಾಗಿ ನಿರ್ಮಿಸಲಾಗುತ್ತಿರುವ ತಂತಿ…

Read More

ಬೆಂಗಳೂರು, ಜು. 15 : ಆಂಧ್ರಪ್ರದೇಶದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ಇದೀಗ ರಾಜ್ಯದಲ್ಲೂ 32ಕ್ಕೂ ಹೆಚ್ಚು ಜನರಲ್ಲಿ ಕೊರೋನಾ ಸೋಂಕು ದೃಢಪಟ್ಟಿರುವುದು ಆತಂಕ ಮೂಡಿಸಿದೆ. ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ನಿಧಾನಗತಿಯಲ್ಲಿ ಏರಿಕೆಯಾಗುತ್ತಿದೆ. ಜೂನ್ ತಿಂಗಳಲ್ಲಿ ಕೇವಲ 14 ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದವು. ಆದರೆ ಜುಲೈ ತಿಂಗಳ ಕೇವಲ ಹತ್ತು ದಿನಗಳಲ್ಲೇ ಈ ಸಂಖ್ಯೆ 32ಕ್ಕೆ ತಲುಪಿದೆ. ಒಟ್ಟು 193 ಶಂಕಿತರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದ್ದು, 32 ಜನರಲ್ಲಿ ಸೋಂಕು ಇರುವುದು ದೃಢಪಟ್ಟಿದೆ.”ಆಂಧ್ರಪ್ರದೇಶದ ಕಡಪಾದಲ್ಲಿ ಸಂಭವಿಸಿರುವ ಸಾವುಗಳು ಸದ್ಯಕ್ಕೆ ಶಂಕಿತ ಪ್ರಕರಣಗಳಾಗಿದ್ದು, ಈ ಬಗ್ಗೆ ಅಲ್ಲಿನ ಸರ್ಕಾರದೊಂದಿಗೆ ಮಾಹಿತಿ ವಿನಿಮಯ ಮಾಡಿಕೊಳ್ಳಲಾಗುತ್ತಿದೆ. ರಾಜ್ಯದಲ್ಲಿ ಸದ್ಯ ಪತ್ತೆಯಾಗಿರುವ ಪ್ರಕರಣಗಳು ಅಷ್ಟೊಂದು ಗಂಭೀರ ಸ್ವರೂಪದ್ದಲ್ಲ. ಶಸ್ತ್ರಚಿಕಿತ್ಸೆಗೆ ಮುನ್ನ ನಡೆಸಲಾಗುವ ಕಡ್ಡಾಯ ತಪಾಸಣೆಯ ಸಂದರ್ಭದಲ್ಲಿ ಯಾವುದೇ ರೋಗಲಕ್ಷಣಗಳಿಲ್ಲದ ಈ ಸೋಂಕು ಪತ್ತೆಯಾಗುತ್ತಿದೆ. ಆರೋಗ್ಯ ಇಲಾಖೆಯು ಪ್ರತಿದಿನದ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದು, ಸಾರ್ವಜನಿಕರು ಯಾರೂ ಅನಗತ್ಯವಾಗಿ ಆತಂಕ ಪಡುವ ಅಗತ್ಯವಿಲ್ಲ” ಎಂದು ಆರೋಗ್ಯ ಇಲಾಖೆಯ ಆಯುಕ್ತರಾದ ಗುರುದತ್…

Read More