Author: UllalaVani

Kannada News From Coastal Karnataka

ಉಳ್ಳಾಲ : ಕುಡಿತದ ನಶೆಯಲ್ಲಿ ಮನೆಯ ಷೋಕೇಸ್ ಗಾಜು ಕೈಯ್ಯಲ್ಲೇ ಹೊಡೆದು ಒಡೆದ ಪರಿಣಾಮ ವಿವಾಹಿತನೋರ್ವ ತೀವ್ರ ರಕ್ತಸ್ರಾವ ಉಂಟಾಗಿ‌ ಸಾವನ್ನಪ್ಪಿರುವ ಘಟನೆ ಮಾಡೂರು ಸೈಟ್ ನಲ್ಲಿ ನಿನ್ನೆ ತಡರಾತ್ರಿ ವೇಳೆ ಸಂಭವಿಸಿದೆ. ಮಾಡೂರ್ ಸೈಟ್ ನಿವಾಸಿ ಸತೀಶ್ ನಾಯಕ್ ಎಂಬವರ ಪುತ್ರ ನಿತೇಶ್ ನಾಯಕ್‌ (38) ಸಾವನ್ನಪ್ಪಿದವರು. ಕೋಟೆಕಾರು ಬೀರಿ ಜಂಕ್ಷನ್ ಸಮೀಪವೇ ತಂದೆ, ಸಹೋದರನ ಜೊತೆಗೆ ಗಲಾಟೆ ನಡೆಸುತ್ತಾ ಬಂದಿದ್ದ ನಿತೇಶ್, ಮನೆಯಲ್ಲಿಯೂ ಸಹ ನಿತ್ಯದಂತೆ ಗಲಾಟೆ ನಡೆಸುತ್ತಿದ್ದರೆಂದು ತಿಳಿದುಬಂದಿದೆ. ಈ ವೇಳೆ ಆಕ್ರೋಶದಿಂದ ಮನೆಯೊಳಗಿರುವ ಷೋಕೇಸ್ ಗಾಜನ್ನು ಒಡೆದಿದ್ದರಿಂದಾಗಿ, ಷೋಕೇಸ್ ಗಾಜು ಒಡೆದು ಕೈ ಪ್ರಮುಖ ನರಕ್ಕೆ ತಗಲಿ ತೀವ್ರ ರಕ್ತಸ್ರಾವ ಉಂಟಾಗಿ ಮೃತಪಟ್ಟಿದ್ದಾರೆ. ನಿತೇಶ್, ಸಹೋದರ ಇಬ್ಬರೂ ತಿಂಡಿ ಲೈನ್ ಸೇಲ್ ನಡೆಸುತ್ತಿದ್ದರು. ನಿನ್ನೆಯೂ ಕರ್ತವ್ಯ ಮುಗಿಸಿ ಮನೆಗೆ ವಾಪಾಸ್ಸಾದ ಬಳಿಕ ಗಲಾಟೆ ನಡೆಸಿದ್ದರು.ವಿವಾಹಿತರಾಗಿದ್ದ ಅವರು ಪತ್ನಿ ಜೊತೆಗೆ ವಿಚ್ಛೇದನ ಹೊಂದಿದ್ದರು.ಮೃತರ ತಾಯಿ ನೀಡಿದ ದೂರಿನಂತೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಉಳ್ಳಾಲ : ಭಾರತ್ ಕಿಶೋರ್ ಟೈಟಲ್ ವಿಜೇತ ದೇಹದಾರ್ಡ್ಯ ಪಟು ರೈಲ್ವೇ ಉದ್ಯೋಗಿ ಜಲ್ಲಿಗುಡ್ಡೆ ನಿವಾಸಿ ಸಂತೋಷ್ ಕುಮಾರ್ ಉಳ್ಳಾಲ್ (52) ಹುಬ್ಬಳ್ಳಿಯಲ್ಲಿ ಗುರುವಾರ ಹೃದಯಾಘಾತದಿಂದ ನಿಧನ ಹೊಂದಿದರು. ಮೃತರು ಪತ್ನಿ , ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಮೂಲತಃ ಉಳ್ಳಾಲ ಉಳಿಯ ನಿವಾಸಿಯಾಗಿದ್ದ ಸಂತೋಷ್ ಕುಮಾರ್ ತೊಕ್ಕೊಟ್ಟಿನ ಶಕ್ತಿಭಾರತ್ ವ್ಯಾಯಾಮ ಶಾಲೆಯಲ್ಲಿ ತರವೇತಿ ಪಡೆದು ರಾಜ್ಯ ರಾಷ್ಟ್ರ ಮಟ್ಟದ ದೇಹದಾರ್ಡ್ಯ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಶಸ್ತಿಯನ್ನು ಪಡೆದಿದ್ದ ಅವರು ಕರ್ನಾಟಕ ಉದಯ, ಭಾರತ್ ಕಿಶೋರ್ ಟೈಟಲ್ ವಿಜೇತರಾಗಿದ್ದರು. ರೈಲ್ವೇ ಇಲಾಖೆಯಲ್ಲಿ ಉದ್ಯೋಗದಲ್ಲಿದ್ದ ಅವರು ದೇಹದಾರ್ಡ್ಯಪಟುವಾಗಿ ರೈಲ್ವೇಯನ್ನು ಪ್ರತಿನಿಧಿಸಿದ್ದರು. ಮಂಗಳೂರು ರೈಲ್ವೇ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಅವರು ಹುಬ್ಬಳ್ಳಿಯಲ್ಲಿ ಮೀಟಿಂಗ್‌ನಲ್ಲಿ ಭಾಗವಹಿಸಲು ತನ್ನ ಸಹೋದ್ಯೋಗಿಯೊಂದಿಗೆ ತೆರಳುತ್ತಿದ್ದಾಗ ಹೃದಯಾಘಾತದಿಂದ ನಿಧನ ಹೊಂದಿದರು. ಅನೇಕ ಸಂಘ ಸಂಸ್ಥೆಗಳಲ್ಲಿ ತೊಡಗಿಸಿಕೊಂಡಿದ್ದರು.

Read More

ಕೊಣಾಜೆ : ಹಲವು ಪ್ರಕರಣಗಳಲ್ಲಿ ವಾರೆಂಟ್ ಎದುರಿಸುತ್ತಾ ಪೊಲೀಸರಿಗೆ ಬೇಕಾಗಿದ್ದ ಆರೋಪಿ ಕಸಬಾ ಬೆಂಗ್ರೆ ನಿವಾಸಿ ಅಬ್ದುಲ್ ಕಬೀರ್ ಯಾನೆ ಪಾರಿವಾಳ ಕಬೀರ್ (35) ಎಂಬಾತನನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದು ಕೊಣಾಜೆ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ.ಆರೋಪಿ ಬಳಿಯಿಂದ 12 ಗ್ರಾಂ ತೂಕದ ಎಂಡಿಎಂಎ ವಶಕ್ಕೆ ಪಡೆದುಕೊಳ್ಳಲಾಗಿದೆ. ಆರೋಪಿ ವಿರುದ್ಧ ಉಳ್ಳಾಲ, ಕೊಣಾಜೆ, ಕಂಕನಾಡಿ, ಬಜಪೆ, ಪಣಂಬೂರು, ಮಂಗಳೂರು ದಕ್ಷಿಣ, ಮಂಗಳೂರು ಉತ್ತರ, ಮಂಗಳೂರು ಪಶ್ಚಿಮ, ಉಪ್ಪಿನಂಗಡಿ, ಪೊಲೀಸ್ ಠಾಣೆಗಳಲ್ಲಿ ಸೇರಿ ಜಾನುವಾರು ಕಳವಿಗೆ ಸಂಬಂಧಿಸಿ 14 ಪ್ರಕರಣಗಳಿವೆ. ದೇವಸ್ಥಾನವೊಂದರ ಹಸು ಕದ್ದ ಪ್ರಕರಣಕ್ಕೆ ಸಂಬಂಧಿಸಿ ಮಂಗಳೂರು ದಕ್ಷಿಣ ಮತ್ತು ಉತ್ತರ ಠಾಣೆಗಳಲ್ಲಿ ಪ್ರಕರಣವಿದೆ. 2019ರ ಜೂ.30 ರಂದು ಕಸಬಾ ಬೆಂಗ್ರೆಯಿಂದ ಆರೋಪಿಯನ್ನು ಬಂಧಿಸಿ ಉಳ್ಳಾಲ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿತ್ತು. 2022 ರಲ್ಲಿ ಆ.22 ರಂದು ಸಿಸಿಬಿ ಪೊಲೀಸರು ಬಂಧಿಸಿದ್ದರು. ಇದೇ ವೇಳೆ ಸಿಸಿಬಿ ಪೊಲೀಸರ ಮೇಲೆ ದಾಳಿ ನಡೆಸಿದ ಪ್ರಕಣಕ್ಕೆ ಸಂಬಂಧಿಸಿ ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಟೋರಿಯಸ್ ಆರೋಪಿ…

Read More

ಮಂಗಳೂರು : ಪುತ್ತೂರಿನ ಸಂಘ ಪರಿವಾರದ ನೇತಾರ ಬಿಜೆಪಿ ನಾಯಕನ ಪುತ್ರ ಪ್ರೀತಿಯ ನಾಟಕವಾಡಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿ ಸಂತ್ರಸ್ತೆಗೆ ನ್ಯಾಯ ಸಿಗುವವರೆಗೂ ಕಾನೂನಾತ್ಮಕ ಹೋರಾಟದಲ್ಲಿ ಯುವತಿಯ ಕುಟುಂಬಕ್ಕೆ ಸಹಕಾರ ನೀಡುವುದಾಗಿ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾದ ದ.ಕ. ಜಿಲ್ಲಾ ಸಮಿತಿ ಹೇಳಿದೆ. ನಗರದ ಪ್ರೆಸ್‌ಕ್ಲಬ್‌ನಲ್ಲಿ ಗುರುವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಸಮಿತಿಯ ಅಧ್ಯಕ್ಷ ಎಂ. ದಿವಾಕರ ರಾವ್‌, ಸಂತ್ರಸ್ತೆಯ ಹೊಟ್ಟೆಯಲ್ಲಿದ್ದ ಮಗುವನ್ನು ಕೊಲ್ಲಲು ಪ್ರೇರಣೆ ನೀಡಿದ್ದಾರೆನ್ನಲಾದ ಆರೋಪಿಯ ತಂದೆ, ಹಾಗೂ ಸಂತ್ರಸ್ತೆಯ ತಾಯಿ ಆರೋಪಿಸಿದ ವೈದ್ಯರ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿದರು.‌ ಭೂಗತನಾಗಿರುವ ಆರೋಪಿ ಯುವಕ ಸಂತ್ರಸ್ತ ಯುವತಿಯ ಬೇಡಿಕೆಯಂತೆ ಆಕೆಯನ್ನು ವಿವಾಹವಾಗಲು ಒಪ್ಪಿಕೊಳ್ಳಬೇಕು. ಸ್ಥಳೀಯ ಶಾಸಕರು ಈ ವಿವಾಹದ ಜವಾಬ್ದಾರಿ ವಹಿಸಬೇಕು. ಇಲ್ಲವಾದಲ್ಲಿ ಆರೋಪಿಯ ತಂದೆ ಬಿಜೆಪಿಯ ಮುಖಂಡ ಜಗನ್ನಿವಾಸ್ ರಾವ್ ಅವರ ಮನೆಯ ಎದುರು ನ್ಯಾಯ ಬಯಸುವ ಸಂಘಟನೆಗಳನ್ನು ಜತೆಗೂಡಿಸಿಕೊಂಡು ಪ್ರತಿಭಟನೆ ನಡೆಸುವುದಾಗಿ ಹೇಳಿದರು. ಜಿಲ್ಲೆಯಲ್ಲಿ ಯಾವುದೇ ಘಟನೆ ನಡೆದರೆ, ಪ್ರತಿಭಟನೆ, ಬಂದ್ ಮೊದಲಾದ ಪ್ರತಿಭಟನೆ ನಡೆಸುವ…

Read More

ದ.ಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ತೊಕ್ಕೊಟ್ಟಿನ ಶ್ರೀ ಸಾಯಿ ಪರಿವಾರ್ ಟ್ರಸ್ಟ್ ಅಂಬಿಕಾರೋಡ್ ಗಟ್ಟಿ ಸಮಾಜ ಭವನದಲ್ಲಿ ಆಯೋಜಿಸಿದ ಅದ್ದೂರಿ ತ್ರಿವಳಿ ಜಿಲ್ಲಾ ಮಟ್ಟದ ಕುಣಿತ ಭಜನಾ ಸ್ಪರ್ಧೆ ಸುಗಿತ್ ನಲಿಪುಗ ಎಸಲ್ 2 ಇದರ ಪ್ರಥಮ ಸ್ಥಾನಿಯಾಗಿ ಹೊಸಬೆಟ್ಟಿನ ಶ್ರೀ ಬಾಲವಿಕಾಸ ಭಜನಾ ಮಂಡಳಿ ಪ್ರಶಸ್ತಿ ಗಳಿಸಿದೆ. ದ್ವಿತೀಯ ಶ್ರೀ ಈಶ್ವರಿ ಭಜನಾ‌ ಮಂಡಳಿ ಪೊಳಲಿ, ತೃತೀಯ ಶ್ರೀ ರಾಮ‌ ಮುಖ್ಯಪ್ರಾಣ ಕುಣಿತ ಭಜನಾ ತಂಡ ಕೋಡಿಕಲ್, ಚತುರ್ಥ, ಶ್ರೀ ಅಯ್ಯಪ್ಪ ಭಜನಾ ಮಂಡಳಿ ಮುಂಡ್ಕೂರು ಆಕರ್ಷಕ ಫಲಕ ಹಾಗು ನಗದು ಬಹುಮಾನ ಪಡೆದುಕೊಂಡಿದೆ.ಹಾಗೆಯೇ 5 ತಂಡಗಳು ಸಮಾಧಾನಕರ ಬಹುಮಾನಗಳು ಶ್ರೀರಾಮ ಮಕ್ಕಳ ಕುಣಿತ ಭಜನಾ ತಂಡ ಕೋಡಿಕಲ್, ಶ್ರೀ ಶೇಷಶಯನ ಭಜನಾ ಮಂಡಳಿ ಕೋಡಿಕಲ್, ಶ್ರೀ ಮಹಾಲಿಂಗೇಶ್ವರ ಭಜನಾ ಮಂಡಳಿ, ಕಲ್ಲಮುಂಡ್ಕೂರು ಮೂಡಬಿದ್ರೆ, ಶ್ರೀನಿವಾಸ ಮಕ್ಕಳ ಕುಣಿತ ಭಜನಾ ತಂಡ ಕೊಡೆತ್ತೂರು ಕಟೀಲು, ಸೀತರಾಮ ಭಜನಾ‌ ಮಂಡಳಿ, ನಾರಾಳ.ಸುಮಾರು 32 ತಂಡಗಳು ಭಾಗವಹಿಸಿದ್ದವು.

Read More

ಮಂಗಳೂರು : 1975ರಲ್ಲಿ ಅಸ್ತಿತ್ವಕ್ಕೆ ಬಂದು ಐದು ದಶಕಗಳ ಯಶಸ್ವಿ ಪಯಣವನ್ನು ಪೂರ್ಣಗೊಳಿಸುತ್ತಿರುವ ಮಂಗಳೂರು ಆಟೋರಿಕ್ಷಾ ಮತ್ತು ಕಾರು ಚಾಲಕರ ಸಹಕಾರಿ ಸಂಘ ನಿಯಮಿತ (MACO) ತನ್ನ ಸುವರ್ಣ ಮಹೋತ್ಸವದ ಅಂಗವಾಗಿ ತೊಕ್ಕೊಟ್ಟು – ಪೆರ್ಮನ್ನೂರು ಪ್ರದೇಶದಲ್ಲಿ ಹೊಸ ಶಾಖೆಯನ್ನು ಅತೀ ಶೀಘ್ರದಲ್ಲಿ ಪ್ರಾರಂಭಿಸಲು ಸಿದ್ಧತೆ ನಡೆಸುತ್ತಿದೆ. ಹೊಸ ಶಾಖೆ ಸಂತ ಸೆಬಾಸ್ಟಿಯನ್ ಚರ್ಚ್ ಆಡಿಟೋರಿಯಂ ವಾಣಿಜ್ಯ ಕಟ್ಟಡದಲ್ಲಿ, ತೊಕ್ಕೊಟ್ಟು ಒಳಪೇಟೆಯಲ್ಲಿ ಕಾರ್ಯಾರಂಭ ಮಾಡುವುದಾಗಿ ಸಂಘ ತಿಳಿಸಿದೆ. (ಸಂಪರ್ಕ: 8762597057) ಸಂಘದ ಇತಿಹಾಸ ಮತ್ತು ವಿಸ್ತರಣೆ:1975ರ ಡಿಸೆಂಬರ್‌ನಲ್ಲಿ ಸಂತ ಕ್ರಿಸ್ಟೋಫರ್ ಅಸೋಸಿಯೇಶನ್ ಕಟ್ಟಡದಲ್ಲಿ ಸ್ಥಾಪನೆಯಾದ ಈ ಸಹಕಾರಿ ಸಂಘವು ಕಳೆದ 50 ವರ್ಷಗಳಲ್ಲಿ ಸದಸ್ಯರ ಸಹಕಾರದಿಂದ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ತಾಲೂಕುಗಳಿಗೆ ತನ್ನ ಸೇವೆಯನ್ನು ವಿಸ್ತರಿಸಿದೆ. ಮಂಗಳೂರು, ಬಂಟ್ವಾಳ, ಪುತ್ತೂರು, ಕಡಬ, ಸುಳ್ಯ, ಮುಡುಬಿದ್ರೆ, ಮೂಲ್ಕಿ ಸೇರಿದಂತೆ ಹಲವೆಡೆ ಸಹಕಾರ ಸಂಘಗಳ ಉಪನಿಬಂಧಕರ ಅನುಮತಿಯಿಂದ ಕಾರ್ಯಕ್ಷೇತ್ರ ವಿಸ್ತರಣೆಗೊಂಡಿದೆ. ಸಂಘದ ಸೇವೆಗಳು:ಸಂಘವು ಸದಸ್ಯರಿಗೆ ಕಡಿಮೆ ಬಡ್ಡಿದರದಲ್ಲಿ ಬಿಕ್ಕಟ್ಟು ಸಾಲ, ಚಿನ್ನಾಭರಣ ಈಡಿನ…

Read More

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಹೆಸರು ಬದಲಾವಣೆಗೆ ಜನಾಗ್ರಹ ಹೆಚ್ಚಾಗುತ್ತಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಅಭಿಯಾನ ತೀವ್ರಗೊಳ್ಳುತ್ತಿದೆ. ತುಳು ಭಾಷಿಗರನ್ನು ಒಳಗೊಂಡ ಭೌಗೋಳಿಕ ಪ್ರದೇಶವನ್ನು ತುಳುನಾಡು’ ಎಂಬ ಪ್ರತ್ಯೇಕ ರಾಜ್ಯವನ್ನಾಗಿ ಮಾಡಬೇಕೆಂಬ ಜನಾಗ್ರಹದದ ಮಧ್ಯದಲ್ಲಿ ಈ ಭಾಗದ ತುಳುನಾಡು ಜಿಲ್ಲೆಗೆ ‘ದಕ್ಷಿಣ ಕನ್ನಡ’ ಎಂದು ಹೆಸರಿಟ್ಟವರು ಯಾರು ಎಂಬ ಕುತೂಹಲಕಾರಿ ಪ್ರಶ್ನೆಯೊಂದು ಎಲ್ಲೆಡೆ ಟಿಸಿಲೊಡೆಯಲು ಆರಂಭವಾಗಿದೆ. ಅಲ್ಲದೆ ದಕ್ಷಿಣ ಕನ್ನಡ ಹೆಸರು ಬದಲಾವಣೆಗೆ ಇಲ್ಲಿನ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಕೂಡಾ ಬ್ಯಾಟ್ ಬೀಸಿದ್ದು, ಅವರು ‘ಮಂಗಳೂರು ಜಿಲ್ಲೆ’ ಹೆಸರಿಡುವುದು ಸೂಕ್ತ ಎಂದು ನನ್ನ ವೈಯಕ್ತಿಕ ಅಭಿಪ್ರಾಯ ಎಂದು ಸೋಷಿಯಲ್ ಮೀಡಿಯಾದಲ್ಲಿ ಅಪ್‌ಲೋಡ್ ಮಾಡಿದ ವಿಡಿಯೋದಲ್ಲಿ ತಿಳಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಗೆ ಈ ಹೆಸರು ಬರುವ ಮುಂಚೆ ಸೌತ್ ಕೆನರಾ ಎಂದು ಕರೆಯಲಾಗುತ್ತಿತ್ತು. ಅದು ಕಾಲ ಕ್ರಮೇಣ ದಕ್ಷಿಣ ಕನ್ನಡ ಎಂದು ಬದಲಾಯಿತು. ಈ ಹೆಸರು ಹೇಗೆ ಬಂತೆಂದು ನನಗೆ ಇಂದಿಗೂ ಗೊತ್ತಿಲ್ಲ ಮಂಗಳಾದೇವಿ ದೇವಿಯಿಂದಾಗಿ ಇಲ್ಲಿಗೆ ಮಂಗಳೂರು ಜಿಲ್ಲೆ ಎಂದು…

Read More

ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಸಮಿತಿಯ ಹಿಂದುಳಿದ ವರ್ಗಗಳ ಘಟಕಕ್ಕೆ ಅಧ್ಯಕ್ಷರಾಗಿ ವಿವೇಕಾನಂದ ಸನಿಲ್ ಅವರನ್ನು ಆಯ್ಕೆ ಮಾಡಿ ಜಿಲ್ಲಾ ಕಾಂಗ್ರೆಸ್ ಹಾಗೂ ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಆದೇಶ ಹೊರಡಿಸಿದೆ. ಕ್ಷೇತ್ರದಲ್ಲಿ ಅನೇಕ ವರ್ಷಗಳಿಂದ ಸಮಾಜ ಸೇವೆ, ಸಂಘಟನಾ ಕಾರ್ಯಗಳಲ್ಲಿ ಸಕ್ರಿಯರಾಗಿದ್ದು, ಹಿಂದುಳಿದ ವರ್ಗದ ಜನರ ಹಕ್ಕು, ಕಲ್ಯಾಣಕ್ಕಾಗಿ ಶ್ರಮಿಸಿದ್ದಾರೆ. ಅವರ ನೇತೃತ್ವದಲ್ಲಿ ಹಿಂದುಳಿದ ವರ್ಗದ ಸಂಘಟನೆಯು ಹೆಚ್ಚು ಸಕ್ರಿಯವಾಗುವ ಹಾಗೂ ಸಮುದಾಯದ ಸಮಸ್ಯೆಗಳಿಗೆ ಸ್ಪಂದಿಸುವ ನಿರೀಕ್ಷೆಯಿದೆ.ಈ ಸಂದರ್ಭದಲ್ಲಿ ವಿಧಾನಸಭಾ ಸ್ಪೀಕರ್ ಯು.ಟಿ.ಖಾದರ್ , ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಶೆಟ್ಟಿ ಬೋಳಿಯಾರ್  ಸೇರಿದಂತೆ  ಅನೇಕ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಅವರನ್ನು ಅಭಿನಂದಿಸಿ ಶುಭ ಕೋರಿದ್ದಾರೆ. ಪಕ್ಷದ ಬಲವರ್ಧನೆ ಹಾಗೂ ಹಿಂದುಳಿದ ವರ್ಗದ ಅಭಿವೃದ್ಧಿಗೆ ಅವರ ಒಲವು ಅತ್ಯಂತ ಉಪಯುಕ್ತವಾಗಲಿದೆ ಎಂದು ಅಭಿಪ್ರಾಯಪಟ್ಟರು.

Read More

ಮಂಗಳೂರು : ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದಶಿಯಾಗಿದ್ದು ತಮಿಳುನಾಡು ಹಾಗೂ ಗೋವಾದ ಉಸ್ತುವಾರಿ ವಹಿಸಿದ್ದ ಸಂದರ್ಭದಲ್ಲಿ ಸಿ.ಟಿ. ರವಿಯವರು ಕಪ್ಪ ಪಡೆದ ನೆನಪಿನಲ್ಲಿ ಕಾಂಗ್ರೆಸ್‌ನ ಹಿರಿಯ ನಾಯಕ ರಣದೀಪ್ ಸಿಂಗ್ ಸುರ್ಜೇವಾರನ್ನು ಲೇವಡಿ ಮಾಡುವ ಧಾಟಿಯಲ್ಲಿ ಮಾತನಾಡಿದ್ದಾರೆಯೇ ಎಂದು ಕೆಪಿಸಿಸಿ ಮಾಜಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ ಪ್ರಶ್ನಿಸಿದ್ದಾರೆ. ದ.ಕ. ಜಿಲ್ಲಾ ಕಾಂಗ್ರೆಸ್‌ನ ಕಚೇರಿಯಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿಯ ಪ್ರಧಾನ ಕಾರ್ಯದರ್ಶಿಯಾಗಿರುವ ಧರ್ಮೇಂದ್ರ ಪ್ರದಾನ್, ರಾಧಾ ಮೋಹನ್‌ರವರು ಕರ್ನಾಟಕಕ್ಕೆ ಆಗಾಗ್ಗೆ ಬರುತ್ತಿರುತ್ತಾರೆ. ಪಕ್ಷದ ಕಾರ್ಯ ಚಟುವಟಿಕೆಗಳ ಬಗ್ಗೆ ತಿಳಿಯಲು ಅವರು ಬರುತ್ತಿರಬಹುದು ಆದರೆ ಸಿಟಿಯವರ ಹೇಳಿಕೆ ನೋಡಿದರೆ ಬಿಜೆಪಿಯ ಆ ನಾಯಕರು ಕೂಡಾ ಕಪ್ಪ ಸ್ವೀಕರಿಸಲು ಬರುತ್ತಾರೆಯೇ ಎಂಬ ಸಂಶಯ ಮೂಡುತ್ತದೆ ಎಂದರು. ಸುರ್ಜೇವಾಲರಿಗೆ ಜನರ ಕಷ್ಟ ಅರಿಯುವ ಆಸಕ್ತಿ ಇಲ್ಲ ಎಂಬುದಾಗಿಯೂ ಸಿ.ಟಿ. ರವಿ ಟೀಕಿಸಿದ್ದಾರೆ. ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿ ಸುರ್ಜೇವಾಲರು ಪಕ್ಷ ಅಧಿಕಾರಕ್ಕೆ ಬರುವಲ್ಲಿ ಹಗಲಿರುಳು ದುಡಿದವರು. ಯುವ ಕಾಂಗ್ರೆಸ್‌ನಿಂದ ಬಂದ ಅವರು,…

Read More

ಕೊಣಾಜೆ: ಆಧುನಿಕತೆಯ ಭರಾಟೆಯಲ್ಲಿ ಬದುಕನ್ನು ಕಳೆದುಕೊಳ್ಳದೆ ಪಾರಂಪರಿಕ ಜೀವನದ ಮಹತ್ವವನ್ನು ಅರಿತುಕೊಳ್ಳಬೇಕು. ನಗರ ಜೀವನಕ್ಕೂ ಗ್ರಾಮೀಣ ಜೀವನಕ್ಕೂ ವ್ಯತ್ಯಾಸ ಇದೆ. ವಿದ್ಯಾರ್ಥಿಗಳು ಮೊಬೈಲ್ ನಿಂದ ದೂರವಿದ್ದು, ಪರಿಸರ ಹಾಗೂ ಕೃಷಿಯ ಬಗ್ಗೆ ಅರಿವು ಹೆಚ್ಚಿಸಿಕೊಳ್ಳಲು ಇಂತಹ ಕಾರ್ಯಕ್ರಮ ಪೂರಕವಾಗಿದೆ ಎಂದು ವಿಜಯ ಗ್ರಾಮೀಣ ಪ್ರತಿಷ್ಠಾನದ ಪ್ರಸಾದ್ ರೈ ಕಲ್ಲಿಮಾರ್ ಅವರು ಹೇಳಿದರು.ಮಂಗಳ ಗ್ರಾಮೀಣ ಯುವಕ ಸಂಘ(ರಿ) ಕೊಣಾಜೆ, ನಾಗ ಬ್ರಹ್ಮ ಸ್ವಸಹಾಯ ಸಂಘ ಕೆಳಗಿನ ಮನೆ, ಬ್ಯಾಂಕ್ ಆಫ್ ಬರೋಡ ಪ್ರವರ್ತಿತ ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ ಹಾಗೂ ಕೊಣಾಜೆ ಪದವು ಶಾಲಾಭಿವೃದ್ಧಿ ಸಮಿತಿ ಕೊಣಾಜೆ ಪ್ರೌಢಶಾಲಾ ರಾಷ್ಟ್ರೀಯ ಸೇವಾ ಯೋಜನೆಯ ಜಂಟಿ ಆಶ್ರಯದಲ್ಲಿ ಕೊಣಾಜೆ‌ ಪದವು ಶಾಲೆಯ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಮಂಗಳವಾರ ಕೆಳಗಿನ ಮನೆ ಬಳಿ ‘ಕೆಸರು ಗದ್ದೆಯಲ್ಲೊಂದು ದಿನ ಹಾಗೂ ಕೃಷಿ ಖುಷಿ’ ಎಂಬ ವಿಶೇಷ ಮಾಹಿತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.ನಿವೃತ್ತ ಮುಖ್ಯೋಪಾಧ್ಯಾಯರಾದ ರವೀಂದ್ರ ರೈ ಕಲ್ಲಿಮಾರ್ ಮಾತನಾಡಿ, ಒಂದು ಅರ್ಥಪೂರ್ಣ ಕಾರ್ಯಕ್ರಮ. ಮಾನವ…

Read More