Author: UllalaVani

Kannada News From Coastal Karnataka

ಸಲಹೆ ಮತ್ತು ಆಕ್ಷೇಪಗಳಿದ್ದರೆ 30 ದಿನಗಳ ಅವಕಾಶ: ಸೋಮೇಶ್ವರ ಪುರಸಭೆಉಳ್ಳಾಲ: ಜಾನಪದ ವಿದ್ವಾಂಸರು, ಸಾಹಿತಿ, ಯಕ್ಷಗಾನ ವಿಮರ್ಶಕ ದಿ.ಅಮೃತ ಸೋಮೇಶ್ವರ ಅವರ ಹೆಸರನ್ನು sಸೋಮೇಶ್ವರ-ಬಟ್ಟಪ್ಪಾಡಿ ರಸ್ತೆಗೆ ಇಡಲು ಸಾಮಾನ್ಯ ಸಭೆಯಲ್ಲಿ ಪಡೆದುಕೊಂಡ ನಿರ್ಣಯದಂತೆ ಸೋಮೇಶ್ವರ ಪುರಸಭೆ ನಿರ್ಧರಿಸಿದೆ. ಸಾರ್ವಜನಿಕರಿಂದ ಸಲಹೆ ಮತ್ತು ಆಕ್ಷೇಪಗಳಿದ್ದರೆ ಜು.2ರಿಂದ  30 ದಿನಗಳೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ.ಸೋಮೇಶ್ವರ ಪುರಸಭಾ ವ್ಯಾಪ್ತಿಯ ಶಿವಶಕ್ತಿನಗರದಲ್ಲಿ ವಾಸಿಸುತ್ತಿದ್ದ ದಿ.ಅಮೃತ ಸೋಮೇಶ್ವರರವರು ಜಾನಪದ ವಿದ್ವಾಂಸರು, ಸಾಹಿತಿಗಳು, ಯಕ್ಷಗಾನ ವಿಮರ್ಶರಾಗಿ ವಿಶೇಷ ಸಾಧನೆ ಮಾಡಿದವರಾಗಿದ್ದಾರೆ. ಸಾಹಿತ್ಯ ಮತ್ತು ಸಾಂಸ್ಕೃತಿಕ ಲೋಕಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ಕೇಂದ್ರ ಹಾಗೂ ರಾಜ್ಯ ಮಟ್ಟದಲ್ಲಿ ಹಲವಾರು ಪ್ರಶಸ್ತಿಗಳನ್ನು ತಂದು ಈ ನಾಡಿಗೆ ಹಿರಿಮೆ ತಂದು ಕೊಟ್ಟವರು. ಈ ಗ್ರಾಮದ ಹೆಸರನ್ನು ರಾಷ್ಟಾçದ್ಯಂತ ಪಸರಿಸಿದ್ದು ಇಡೀ ಊರಿಗೆ ಗೌರವ ಸಲ್ಲುತ್ತದೆ. ಸನ್ಮಾನ್ಯರ ಸೇವೆಯನ್ನು ಜನಮನಗಳಲ್ಲಿ ಉಳಿಸುವ ನೆಲೆಯಲ್ಲಿ ಸೋಮೇಶ್ವರ ಪುರಸಭೆಯ ಜೂ.13ರಂದು  ಸಾಮಾನ್ಯ ಸಭೆಯ ನಡವಳಿ ಸಂಖ್ಯೆ: 115/2025-26 ರಲ್ಲಿ ನಿರ್ಣಯಿಸಿದಂತೆ ಸೋಮೇಶ್ವರದಿಂದ ಬಟ್ಟಪಾಡಿ ರಸ್ತೆಗೆ “ಅಮೃತ ಸೋಮೇಶ್ವರ ರಸ್ತೆ”ಯೆಂದು…

Read More

ಕೊಲ್ಯ : ಕೊಲ್ಯ ಆಸುಪಾಸಿನ ಭಕ್ತರು, ಸಮಾಜಬಾಂಧವರು, ಕೇರಳ ಯಾದವ ಸಭೆಯ ಪ್ರಮುಖರು, ಕ್ಷೇತ್ರದ ಅಭಿಮಾನಿಗಳ ಅಭಿಪ್ರಾಯದಂತೆ ಕೊಲ್ಯ ಮಠಕ್ಕೆ ಉತ್ತರಾಧಿಕಾರಿ ಆಯ್ಕೆ ಸೂಕ್ತ ಎಂದು ಕೇಮಾರು ಸಾಂದೀಪನಿ ಸಾಧನಾಶ್ರಮದ ಶ್ರೀ ಈಶ ವಿಠಲದಾಸ ಸ್ವಾಮೀಜಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.ಕೊಲ್ಯ ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ಹಮ್ಮಿಕೊಳ್ಳಲಾಗಿದ್ದ ದೇವಸ್ಥಾನ ಅಭಿವೃದ್ಧಿ ಕುರಿತ ಪೂರ್ವಭಾವಿ ಸಭೆಯಲ್ಲಿ ಆಶೀರ್ವಚನಗೈದು ಮಾತನಾಡಿದರು.ಸಾಮಾಜಿಕ ಸೇವೆ, ಭಕ್ತಿ ಜೀವನ ಮತ್ತು ಮಠದಲ್ಲಿನ ಆಧ್ಯಾತ್ಮಿಕ ಮಾರ್ಗದರ್ಶನದ ಮೂಲಕ ಹಲವರಿಗೆ ದಾರಿ ತೋರಿದ ಗುರು ಕೊಲ್ಯ ಕೀರ್ತಿಶೇಷ ಶ್ರೀ ರಮಾನಂದ ಸ್ವಾಮಿಗಳು. 2016 ರ ಮೇ 23 ರಂದು ಅಸ್ತಂಗತರಾಗಿಯೂ, ಅವರ 66 ವರ್ಷಗಳ ಜೀವನಾವಧಿಯಲ ಸೇವೆಗಳು ಮತ್ತು ಜನಪ್ರಿಯತೆ ಸ್ಮರಣಾರ್ಥವಾಗಿ ಉಳಿದಿವೆ. ಮುಂಬರುವ ದಿನಗಳಲ್ಲಿ ಅಜೀರ್ಣಾವಸ್ಥೆಯಲ್ಲಿರುವ ಕ್ಷೇತ್ರದ ಅಭಿವೃದ್ಧಿ ಬಹುಮುಖ್ಯ, ಕ್ಷೇತ್ರದ ಭಕ್ತಾಭಿಮಾನಿಗಳಿಗೂ ಸ್ವಾಮಿಗಳ ಆದರ್ಶವನ್ನು ಪಾಲಿಸುತ್ತಾ, ಪ್ರತೀ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಾ ಬಂದಿದ್ದಾರೆ. ಮುಂದಿನ ದಿನಗಳಲ್ಲಿ ಭಕ್ತರಿಗೆ ಅನುಕೂಲವಾಗುವ ರೀತಿಯಲ್ಲಿ, ದೇವಸ್ಥಾನದ ಅಭಿವೃದ್ಧಿಯ ದೃಷ್ಟಿಯಿಂದಲೂ ಕ್ಷೇತ್ರಕ್ಕೆ ಉತ್ತರಾಧಿಕಾರಿಗಳ ಆಯ್ಕೆ ಸೂಕ್ತ. ಅವರ…

Read More

ಕೋಟೆಕಾರು: ಇಲ್ಲಿನ ಬೀರಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಪ್ರಯಾಣಿಕರನ್ನು ಹತ್ತಿಸಲು ನಿಂತ ಕೇರಳ ಸಾರಿಗೆ ಬಸ್ಸಿನ ಹಿಂಬದಿಗೆ ಬಿಂಬದಿಯಲ್ಲಿ ಬರುತ್ತಿದ್ದ ಎಕ್ಸ್ ಯುವಿ ಕಾರು ಢಿಕ್ಕಿ ಹೊಡೆದ ಘಟನೆ ಸಂಜೆ ವೇಳೆ ನಡೆದಿದೆ. ಕಾಸರಗೋಡು ಕಡೆಯತ್ತ ತೆರಳುವ ಬಸ್ ಹಾಗೂ ಅದೇ ಕಡೆಯತ್ತ ತೆರಳುತ್ತಿದ್ದ ಕಾರು ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ಕಾರು ಹಾಗೂ ಬಸ್ ನ ಹಿಂಭಾಗ ಸಂಪೂರ್ಣ ನುಜ್ಜುಗುಜ್ಜಾಗಿದೆ. ಯಾರಿಗೂ ಗಾಯಗಳಾಗಿಲ್ಲ. ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಘಟನಾ ಸ್ಥಳಕ್ಕಾಗಮಿಸಿದ್ದಾರೆ.

Read More

ಉಳ್ಳಾಲ : ಮನುಷ್ಯನ ಅಂತಃಕರಣ ಶುದ್ಧವಾದರೆ ಬಾಹ್ಯವೂ ಶುದ್ದವಾಗುತ್ತದೆ. ಈ ಸ್ಪರ್ಧೆಯಲ್ಲಿ ಕೆಲವು ತಂಡ ಗೆದ್ದರೆ ಯಾರಿಗೂ ಸೋಲಿಲ್ಲ ಯಾಕೆಂದರೆ ಇಲ್ಲಿ ಭಜನೆ ಸಂಕೀರ್ತನೆ ಇರುವುದರಿಂದ ನೀವೆಲ್ಲರೂ ದೇವರ ಅನುಗ್ರಹಕ್ಕೆ ಪಾತ್ರರಾಗುತ್ತೀರಿ ಉಪ್ಪಳ ಕೊಂಡೆವೂರು ಶ್ರೀ ಯೋಗಾನಂದ ಸರಸ್ವತಿ ಸ್ವಾಮೀಜಿ ನುಡಿದರು. ಅವರು ತೊಕ್ಕೊಟ್ಟಿನ ಶ್ರೀ ಸಾಯಿ ಪರಿವಾ‌ರ್ ಟ್ರಸ್ಟ್ ಆಶ್ರಯದಲ್ಲಿ ತೊಕ್ಕೊಟ್ಟು ಅಂಬಿಕಾರಸ್ತೆಯ ಗಟ್ಟಿಸಮಾಜಭವನದಲ್ಲಿ ರವಿವಾರ ನಡೆದ ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು ಜಿಲ್ಲೆಯನ್ನೊಳಗೊಂಡ ಎರಡನೇ ವರ್ಷದ ಸುಗಿತ್ ನಲಿಪುಗ 18 ವರ್ಷದ ಒಳಗಿನ ವಯೋಮಾನದವರ ಕುಣಿತ ಭಜನಾ ಸ್ಪರ್ಧೆಗೆ ಚಾಲನೆ ನೀಡಿ ಆಶೀರ್ವಚನ ನೀಡಿದರು. ಸಮಾಜ ಸೇವೆಯೊಂದಿಗೆ ಸಂಸ್ಕೃತಿ, ಸಂಸ್ಕಾರ ಭಕ್ತಿಯ ಕಾರ್ಯ ನಡೆಸುವುದರೊಂದಿಗೆ ಕುಣಿತ ಭಜನಾ ಸ್ಪರ್ಧೆಯನ್ನು ಆಯೋಜಿ ಸುತ್ತಿರುವ ಪರಿವಾರ ಇಂದು ಸಹಾಯ ಪರಿವಾರವಾಗಿ ಸಮಾಜದಲ್ಲಿ ಮೇಲ್ಪಂಕ್ತಿಯ ಕಾರ್ಯಕ್ರಮ ಆಯೋಜಿಸುತ್ತಾ ಬಂದಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಸಮಾಜಮುಖಿ ಕಾರ್ಯಗಳನ್ನು ನಡೆಸಿ ಇತರ ಸಂಘ- ಸಂಸ್ಥೆಗಳಿಗೆ ಮಾದರಿಯಾಗಿ ಸಮಾಜದ ಉನ್ನತ ಸ್ಥರದಲ್ಲಿ ಗುರುತಿಸಿಕೊಳ್ಳುವಂತಾಗಲಿ ಎಂದರು. ಜ್ಯೋತಿಷಿ ಗೋಪಾಲಕೃಷ್ಣ…

Read More

ಮಂಗಳೂರು : ಮೂರು ತಿಂಗಳಲ್ಲಿ ಸರ್ಕಾರ ಬಿದ್ದು ಹೋಗುತ್ತೆ ಎಂದು ಬಿಜೆಪಿಯವರು ಹೇಳುತ್ತಿದ್ದಾರೆ. ಅದು ತಿರುಕನ ಕನಸು, ಜನ ಅವರನ್ನು ಮನೆಗೆ ಕಳುಹಿಸಿದ್ದಾರೆ. ನಮ್ಮ ಪಕ್ಷ ಸುಭದ್ರವಾಗಿದೆ ಎಂದು ದ.ಕ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಇಂದು ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಅವರ ಪಕ್ಷದಲ್ಲಿ ಏನು ಸರಿ ಇದೆ? ನಮ್ಮ ಬಟ್ಟಲಲ್ಲಿ ಸೊಳ್ಳೆ ಇದ್ರೆ ಅವರ ಬಟ್ಟಲಲ್ಲಿ ಹೆಗ್ಗಣ ಇದೆ. ಅವರನ್ನು ಅವರು ಉಳಿಸುವುದನ್ನು ನೋಡಿಕೊಳ್ಳಲಿ ಎಂದರು. ಸುರ್ಜೆವಾಲ ಅವರು ರಾಜ್ಯದ ಎಲ್ಲಾ ಶಾಸಕರನ್ನು ಭೇಟಿಯಾಗಲಿದ್ದಾರೆ. ಅವರಲ್ಲಿರುವ ಅಭಿಪ್ರಾಯಗಳನ್ನು ಸಂಗ್ರಹಿಸಿ ನಂತರ ಮುಂದಿನ ಕ್ರಮ ಏನು ಮಾಡಬೇಕೋ ಅದನ್ನು ಮಾಡುತ್ತಾರೆ. ರಾಜಕೀಯದಲ್ಲಿ ಅತ್ಯಂತ ದೊಡ್ಡ ಪಕ್ಷ ಹಲವರ ಅಭಿಪ್ರಾಯಗಳು ಬೇರೆ ಬೇರೆಯಾಗಿರುತ್ತವೆ. ನಾನು ಅವರನ್ನು ಭೇಟಿಯಾಗುತ್ತೇನೆ, ನಮ್ಮ ಆಂತರಿಕ ಸಮಸ್ಯೆ ನಮ್ಮಲ್ಲೇ ಬಗೆಹರಿಸುತ್ತೇವೆ ಎಂದು ಹೇಳಿದರು. ಮನೆಯ ಹಂಚಿಕೆ ವಿಚಾರದಲ್ಲಿ ಭ್ರಷ್ಟಾಚಾರ ಆಗಿದ್ದರೆ ಅ ಬಗ್ಗೆ ಮಾಹಿತಿ ಕೊಡಲಿ. ಬಿ ಆರ್ ಪಾಟೀಲ್ ಅವರು ಹೇಳಿಕ ಕೊಟ್ಟಿದ್ದಾರೆ, ಸಿ…

Read More

ಬಂಟ್ವಾಳ : ರಾಷ್ಟ್ರೀಯ ಹೆದ್ದಾರಿ 75ರ ಮಂಗಳೂರು- ಬಿ.ಸಿ.ರೋಡು ಹೆದ್ದಾರಿಯನ್ನು ತ್ಯಾಜ್ಯ ಮುಕ್ತಗೊಳಿಸುವ ನಿಟ್ಟಿನಲ್ಲಿ ಸ್ವಚ್ಛತೆಗಾಗಿ ನಿಮ್ಮೊಂದಿಗೆ ನಾವು, ನಮ್ಮೊಂದಿಗೆ ನೀವು ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಇದರ ಭಾಗವಾಗಿ ಅಡ್ಯಾರ್ ನಿಂದ ಫರಂಗಿಪೇಟೆ ಮೂಲಕ ಕಡೆಗೋಳಿವರೆಗೆ ಸ್ವಚ್ಛತಾ ಅಭಿಯಾನ ನಡೆಸಲಾಯಿತು. ದ.ಕ.ಜಿಲ್ಲಾಡಳಿತ, ದ.ಕ.ಜಿ.ಪಂ.ಸ್ವಚ್ಛ ಭಾರತ್ ಮಿಷನ್, ಪುದು ಗ್ರಾ.ಪಂ., ಅಡ್ಯಾರ್ ಗ್ರಾ.ಪಂ. ಹಾಗೂ ಹಸಿರು ದಳ ಮಂಗಳೂರು ಆಶ್ರಯದಲ್ಲಿ ದ.ಕ.ಜಿ.ಪಂ.ಉಪಕಾರ್ಯದರ್ಶಿ ಜಯಲಕ್ಷ್ಮೀ ರಾಯಕೋಡ್ ಮಾರ್ಗದರ್ಶನದಲ್ಲಿ ಹೆದ್ದಾರಿ ಬದಿಯ ತ್ಯಾಜ್ಯಗಳನ್ನು ತೆರವು ಮಾಡಲಾಯಿತು. ಎರಡು ಗ್ರಾ.ಪಂ.ತಂಡದ ಜತೆಗೆ ಸ್ವಚ್ಛ ಭಾರತ್ ಮಿಷನ್(ಗ್ರಾಮೀಣ) ತಂಡ, ಹಸಿರು ದಳದ ಕಾರ್ಯಕರ್ತರು, ಮಂಗಳೂರು ಸಂತ ಅಲೋಶಿಯಸ್ ಕಾಲೇಜು, ಸಂತ ಆ್ಯಗ್ನೇಸ್ ಕಾಲೇಜು ಹಾಗೂ ಸ್ಕೂಲ್ ಆಫ್ ಸೋಶಿಯಲ್ ವರ್ಕ್ ರೋಶನಿ ನಿಲಯದ ಎನ್.ಎಸ್.ಎಸ್.ಘಟಕಗಳ ಸ್ವಯಂಸೇವಕರು ಸ್ವಚ್ಛತಾ ಕಾರ್ಯ ನಡೆಸಿದರು. ಪುದು ಗ್ರಾ.ಪಂ.ಅಧ್ಯಕ್ಷೆ ರಶೀದಾ ಬಾನು, ಅಭಿವೃದ್ಧಿ ಅಧಿಕಾರಿ ಹರೀಶ್ ಕೆ.ಎ, ಅಡ್ಯಾರ್ ಗ್ರಾ.ಪಂ.ಅಧ್ಯಕ್ಷ ಅಬ್ದುಲ್ ಜಲೀಲ್, ಅಭಿವೃದ್ಧಿ ಅಧಿಕಾರಿ ಕೃಷ್ಣ ನಾಯ್ಕ್, ಹಸಿರು ದಳದ ನಾಗರಾಜ್, ಪಂಚಾಯತ್ ಸಿಬಂದಿ,…

Read More

ಮಂಗಳೂರು : ಕರಾವಳಿ ಪ್ರದೇಶದಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರ ಮಳೆಯಾಗುತ್ತಿರುವುದರಿಂದ ಶೀತ ಮತ್ತು ಜ್ವರದಂತಹ ಕಾಲೋಚಿತ ಸೋಂಕುಗಳು ಹೆಚ್ಚಾಗಿವೆ. ಮಳೆಗಾಲದಲ್ಲಿ ಸಾರ್ವಜನಿಕರು ಜಾಗರೂಕರಾಗಿರಬೇಕು ಮತ್ತು ಮುನ್ನೆಚ್ಚರಿಕೆ ವಹಿಸಬೇಕು ಎಂದು ಆರೋಗ್ಯ ಅಧಿಕಾರಿಗಳು ಒತ್ತಾಯಿಸಿದ್ದಾರೆ. ಪ್ರಸ್ತುತ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿದ್ದು, ಮೋಡ ಕವಿದ ವಾತಾವರಣ ಮತ್ತು ಬಿಸಿಲಿನ ವಾತಾವರಣವಿದೆ. ಆದಾಗ್ಯೂ, ವಿರಳ ಮಳೆ ಮತ್ತು ನಿಂತ ನೀರು ವೈರಲ್ ಸೋಂಕು ಹರಡಲು ಅನುಕೂಲಕರ ಪರಿಸ್ಥಿತಿಗಳನ್ನು ಸೃಷ್ಟಿಸಿದೆ. ಜ್ವರ, ಶೀತ ಮತ್ತು ಕೆಮ್ಮಿನಂತಹ ಲಕ್ಷಣಗಳೊಂದಿಗೆ ಚಿಕಿತ್ಸಾಲಯಗಳಿಗೆ ಭೇಟಿ ನೀಡುವ ಮಕ್ಕಳ ಸಂಖ್ಯೆ ಹೆಚ್ಚುತ್ತಿದೆ. ಇದಕ್ಕೆ ಪ್ರತಿಕ್ರಿಯೆಯಾಗಿ, ಆರೋಗ್ಯ ಇಲಾಖೆಯು ಜಾಗೃತಿ ಮೂಡಿಸಲು ಮತ್ತು ಸಾಂಕ್ರಾಮಿಕ ರೋಗಗಳ ಆರಂಭಿಕ ಲಕ್ಷಣಗಳನ್ನು ಪತ್ತೆಹಚ್ಚಲು ಮನೆ-ಮನೆಗೆ ಸಮೀಕ್ಷೆಗಳನ್ನು ಪ್ರಾರಂಭಿಸಿದೆ. ಶಾಲೆಗಳು ಸ್ವಚ್ಛತೆಯನ್ನು ಖಚಿತಪಡಿಸಿಕೊಳ್ಳಲು ಸೂಚನೆ ನೀಡಲಾಗಿದೆ. ಮತ್ತು ಶಿಕ್ಷಕರು ಯಾವುದೇ ಅನಾರೋಗ್ಯದ ಲಕ್ಷಣಗಳಿಗಾಗಿ ವಿದ್ಯಾರ್ಥಿಗಳನ್ನು ನಿಕಟವಾಗಿ ಮೇಲ್ವಿಚಾರಣೆ ಮಾಡುತ್ತಿದ್ದಾರೆ. ವಲಸೆ ಕಾರ್ಮಿಕರ ಬಗ್ಗೆಯೂ ವಿಶೇಷ ಗಮನ ನೀಡಲಾಗುತ್ತಿದ್ದು, ಕಟ್ಟಡ ಮಾಲೀಕರಿಗೆ ಕಡ್ಡಾಯ…

Read More

ಪುತ್ತೂರು : ಕುಸ್ಮಾರ್ ಗ್ರಾಮದ ಕೂರತ್ ಮಸೀದಿಯಲ್ಲಿ ಕೂರತ್ ತಂಙಳ್‌ರ ಹೆಸರಿನಲ್ಲಿ ನಡೆಯುತ್ತಿದ್ದ ಉರೂಸ್ ಕಾರ್ಯಕ್ರಮದ ಅಂತಿಮ ದಿನವಾದ ರವಿವಾರ ಭಾರೀ ಸಂಖ್ಯೆಯಲ್ಲಿ ಜನರು ಆಗಮಿಸಿದ್ದರಿಂದ ಜನದಟ್ಟಣೆ ಉಂಟಾಗಿ ಆರು ಮಂದಿ ಅಸ್ವಸ್ಥಗೊಂಡ ಘಟನೆ ವರದಿಯಾಗಿದೆ. ಉರೂಸ್ ಕಾರ್ಯಕ್ರಮಕ್ಕೆ ವಿವಿಧ ಸ್ಥಳಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸಿದ್ದರು. ಭಾರೀ ಜನದಟ್ಟಣೆಯ ಕಾರಣ ಆರು ಮಂದಿ ದೈಹಿಕವಾಗಿ ನಿತ್ರಾಣಗೊಂಡಿದ್ದರು. ಅವರನ್ನು ತಕ್ಷಣ ಸ್ಥಳದಲ್ಲಿದ್ದ ಆರೋಗ್ಯ ಇಲಾಖೆಯ ಸಿಬ್ಬಂದಿ ಉಪಚರಿಸಿದ್ದು ಇಬ್ಬರ ಆರೋಗ್ಯ ಸ್ಥಳದಲ್ಲೇ ಸುಧಾರಿಸಿದೆ. ಉಳಿದ ನಾಲ್ವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಸರಕಾರಿ ಆಸ್ಪತ್ರೆಗೆ ಕಳುಹಿಸಲಾಗಿತ್ತು. ಅವರು ಆಸ್ಪತ್ರೆಯಲ್ಲಿ ಹೊರರೋಗಿಗಳಾಗಿ ಚಿಕಿತ್ಸೆ ಪಡೆದು ತೆರಳಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕುಮಾರ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ. ಸಾರ್ವಜನಿಕರು ಯಾವುದೇ ಸುಳ್ಳು ವದಂತಿಗಳನ್ನು ಹರಡಬಾರದು ಹಾಗೂ ಸುಳ್ಳು ವದಂತಿಗಳಿಗೆ ಕಿವಿಗೊಡಬಾರದು ಎಂದು ಎಸ್ಪಿ ವಿನಂತಿ ಮಾಡಿದ್ದಾರೆ.ರವಿವಾರ ಮುಂಜಾನೆಯಿಂದಲೂ ಭಾರೀ ಸಂಖ್ಯೆಯಲ್ಲಿ ಜನರು ವಾಹನಗಳಲ್ಲಿ ಆಗಮಿಸಿದ್ದರಿಂದ ಉರೂಸ್ ನಡೆಯುವ ಪ್ರದೇಶದ ಎಲ್ಲಾ ರಸ್ತೆಗಳಲ್ಲೂ ಸಂಚಾರ ದಟ್ಟಣೆ ಉಂಟಾಗಿತ್ತು

Read More

ಮಂಗಳೂರು : ಮಂಗಳೂರು ಅಂತರ್‌ರಾಷ್ಟ್ರೀಯ ವಿಮಾನ ನಿಲ್ದಾಣ ಸೇರಿದಂತೆ ರಾಜ್ಯದ 4 ವಿಮಾನ ನಿಲ್ದಾಣಗಳ ನಿರ್ದೇಶಕರಿಗೆ ವಿಮಾನ ನಿಲ್ದಾಣದಲ್ಲಿ ಬಾಂಬ್ ಸ್ಫೋಟಿಸುವ ಕುರಿತು ರವಿವಾರ ಬೆಳಗ್ಗೆ ಇಮೇಲ್ ಮೂಲಕ ಬೆದರಿಕೆಯ ಸಂದೇಶ ಬಂದಿದೆ ಎಂದು ವರದಿಯಾಗಿದೆ. ಮಂಗಳೂರು, ಹುಬ್ಬಳ್ಳಿ, ಬೆಳಗಾವಿ, ಮತ್ತು ಬೆಂಗಳೂರು ವಿಮಾನ ನಿಲ್ದಾಣಗಳಿಗೆ ಇಮೇಲ್ ಮೂಲಕ ಬೆದರಿಕೆಯ ಸಂದೇಶ ಬಂದಿದೆ. ಮುಂಜಾಗ್ರತಾ ಕ್ರಮವಾಗಿ ನಿಲ್ದಾಣಗಳಲ್ಲಿ ಬಿಗಿ ಭದ್ರತೆ ಹೆಚ್ಚಿಸಲಾಗಿದೆ. ಬಜ್ಪೆಯ ಮಂಗಳೂರು ಅಂತರ್‌ರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಇಮೇಲ್ ಮೂಲಕ ಬೆದರಿಕೆ ಬಂದಿದ್ದು ಈ ಬಗ್ಗೆ ಪೊಲೀಸರು ಭದ್ರತೆಯ ಬಗ್ಗೆ ನಿಗಾವಹಿಸಿದ್ದಾರೆ ಎಂದು ಬಜ್ಪೆ ಪೋಲೀಸರು ತಿಳಿಸಿದ್ದಾರೆ. ವಿಮಾನ ನಿಲ್ದಾಣದ ಆವರಣ ಪ್ರವೇಶಿಸುವ ಪ್ರತಿಯೊಬ್ಬ ಪ್ರಯಾಣಿಕರನ್ನು ಮತ್ತು ಸಾರ್ವಜನಿಕರನ್ನು ತೀವ್ರ ತಪಾಸಣೆಗೆ ಒಳಪಡಿಸಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.ಬಾಂಬ್ ನಿಷ್ಕ್ರಿಯ ದಳ, ಶ್ವಾನ ದಳ, ಪೊಲೀಸ್, ಅಂತರಿಕ ಭದ್ರತಾ ಸಿಬ್ಬಂದಿ ಮತ್ತು ಗುಪ್ತಚರ ಇಲಾಖೆ ನಿಗಾ ವಹಿಸಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

Read More

ಸುರತ್ಕಲ್ : ಬಂಟರ ಸಂಘ (ರಿ) ಸುರತ್ಕಲ್ ಇದರ 2025-27 ನೇ ಸಾಲಿನ ನಿರ್ದೇಶಕರ ಸಭೆ ಸುರತ್ಕಲ್ ಬಂಟರ ಭವನದಲ್ಲಿ ನಡೆಯಿತು. ಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು. ಅಧ್ಯಕ್ಷರಾಗಿ ಹಿರಿಯ ಪತ್ರಕರ್ತ ಬಾಳ ಜಗನ್ನಾಥ ಶೆಟ್ಟಿ ಆಯ್ಕೆಗೊಂಡಿದ್ದಾರೆ. ಉಪಾಧ್ಯಕ್ಷರಾಗಿ ಪ್ರವೀಣ್ ಪಿ ಶೆಟ್ಟಿ , ಪ್ರಧಾನ ಕಾರ್ಯದರ್ಶಿಯಾಗಿ ಲೀಲಾಧರ್ ಶೆಟ್ಟಿ ಕಟ್ಲ , ಕೋಶಾಧಿಕಾರಿಯಾಗಿ ರತ್ನಾಕರ ಶೆಟ್ಟಿ ಸುರತ್ಕಲ್, ಸಹಕಾರ್ಯದರ್ಶಿಯಾಗಿ ಮೀರಾ ವಾಣಿ ಶೆಟ್ಟಿ ಕಾಟಿಪಳ್ಳ, ಸಂಘಟನಾ ಕಾರ್ಯದರ್ಶಿಯಾಗಿ ಪುಷ್ಪರಾಜ್ ಶೆಟ್ಟಿ ಕುಡುಂಬೂರು , ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ದೇವೇಂದ್ರ ಕೆ ಶೆಟ್ಟಿ ಕ್ರೀಡಾ ಕಾರ್ಯದರ್ಶಿಯಾಗಿ ಪುಷ್ಪರಾಜ್ ಶೆಟ್ಟಿ ಮದ್ಯ ಆಯ್ಕೆಯಾಗಿದ್ದಾರೆ. ಕಾರ್ಯಕಾರಿ ಸಮಿತಿ ಸದಸ್ಯರಾಗಿ ಶ್ರೀಕಾಂತ್ ಶೆಟ್ಟಿ ಕಾಟಿಪಳ್ಳ, ಸುಜೀರ್ ಶೆಟ್ಟಿ ಸೂರಿಂಜೆ, ಗಿರೀಶ್ ಎಂ ಶೆಟ್ಟಿ ಪೆರ್ಮುದೆ, ಪ್ರಮೋದ್ ಶೆಟ್ಟಿ ಹೊಸಬೆಟ್ಟು, ಸುಕೇಶ್ ಶೆಟ್ಟಿ ಚೇಳಾರ್, ರಾಮಚಂದ್ರ ಶೆಟ್ಟಿ ಕುಳಾಯಿ, ದಾಮೋದರ ಶೆಟ್ಟಿ ತೋಕೂರು, ಪದ್ಮನಾಭ ಶೆಟ್ಟಿ ಕುತ್ತೆತ್ತೂರು, ಸವಿತಾ ಭವಾನಿ ಶಂಕರ್ ಶೆಟ್ಟಿ ಬಾಳ, ಜ್ಯೋತಿ…

Read More