ಮಂಗಳೂರು: ಸೈಬರ್ ಅಪರಾಧದ ವಿರುದ್ಧ ಜಾಗೃತಿ ಮೂಡಿಸುವ ಉದ್ದೇಶದಿಂದ ನಿರ್ಮಾಣಗೊಂಡಿರುವ ಭಾವನಾತ್ಮಕ ಥ್ರಿಲ್ಲರ್ ಕಥಾಹಂದರ ಹೊಂದಿರುವ ಪ್ಯಾನ್ ಇಂಡಿಯಾ ʻಅಚ್ಚುತ ಅವತಾರಂ ʼ ಚಲನಚಿತ್ರವು ಜುಲೈ 17ರಂದು ದೇಶಾದ್ಯಂತ ಕನ್ನಡ, ತೆಲುಗು, ತಮಿಳು, ಮಲಯಾಳಂ ಹಾಗೂ ಹಿಂದಿ ಸೇರಿದಂತೆ ಐದು ಭಾಷೆಗಳಲ್ಲಿ ಭರ್ಜರಿಯಾಗಿ ಬಿಡುಗಡೆಯಾಗಲಿದೆ ಎಂದು ಚಿತ್ರದ ನಿರ್ಮಾಪಕ ರುದ್ರಮೂರ್ತಿ ತಿಳಿಸಿದರು.ನಗರದ ಬಿಗ್ ಸಿನಿಮಾಸ್ನಲ್ಲಿ ಮಾಧ್ಯಮಗಳ ಜತೆಗೆ ಮಾತನಾಡಿದ ಅವರು, ಈ ಚಿತ್ರವು ಕೇವಲ ಮನರಂಜನೆಗೆ ಸೀಮಿತವಾಗಿಲ್ಲ. ಇಂದಿನ ಡಿಜಿಟಲ್ ಯುಗದಲ್ಲಿ ಹೆಚ್ಚುತ್ತಿರುವ ಸೈಬರ್ ವಂಚನೆಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸುವ ಸಮಾಜಮುಖಿ ಸಂದೇಶವನ್ನು ಒಳಗೊಂಡಿದೆ ಎಂದರು.ಚಿತ್ರದ ಕಥೆಯಲ್ಲಿ ಸಂಪ್ರದಾಯಬದ್ಧ ಕುಟುಂಬದಲ್ಲಿ ಬೆಳೆದ ಯುವತಿಯೊಬ್ಬಳು ಸೈಬರ್ ಅಪರಾಧದಿಂದ ತನ್ನ ಆತ್ಮೀಯ ವ್ಯಕ್ತಿಯನ್ನು ಕಳೆದುಕೊಳ್ಳುತ್ತಾಳೆ. ಈ ದುರ್ಘಟನೆಯಿಂದ ಕುಗ್ಗದೆ, ಧೈರ್ಯದಿಂದ ಎದ್ದು ನಿಂತು ಸೈಬರ್ ವಂಚಕರ ವಿರುದ್ಧ ಹೋರಾಟ ಆರಂಭಿಸುತ್ತಾಳೆ. ಆಕೆಯ ಜೀವನದಲ್ಲಿ ನಡೆಯುವ ಪರಿವರ್ತನೆ, ನ್ಯಾಯಕ್ಕಾಗಿ ನಡೆಸುವ ಹೋರಾಟ ಹಾಗೂ ಸಮಾಜವನ್ನು ಡಿಜಿಟಲ್ ವಂಚನೆಗಳಿಂದ ರಕ್ಷಿಸುವ ಸಂಕಲ್ಪವೇ ಚಿತ್ರದ ಪ್ರಮುಖ ಕಥಾವಸ್ತುವಾಗಿದೆ.ಆಧ್ಯಾತ್ಮ,…
Author: UllalaVani
ಉಳ್ಳಾಲ: ಕಲ್ಲಾಪು ಬುರ್ದುಗೋಳಿಯ ಶ್ರೀ ಗುಳಿಗ ಕೊರಗಜ್ಜ ಉದ್ಭವ ಶಿಲೆಯ ಆದಿಸ್ಥಳಕ್ಕೆ ಮಾಜಿ ಸಚಿವ, ಕಾರ್ಕಳ ಶಾಸಕ ವಿ.ಸುನಿಲ್ ಕುಮಾರ್ ಕುಟುಂಬ ಸಮೇತರಾಗಿ ಸೋಮವಾರ ಭೇಟಿ ನೀಡಿ ತಮ್ಮ ಹರಕೆಯ ಕೋಲದಲ್ಲಿ ಭಾಗವಹಿಸಿದರು.ಈ ಸಂದರ್ಭ ವಿಧಾನಪರಿಷತ್ ಸದಸ್ಯ ಕಿಶೋರ್ ಕುಮಾರ್ ಬೊಟ್ಯಾಡಿ, ಕೊಲ್ಯ ಮೂಕಾಂಬಿಕಾ ದೇವಸ್ಥಾನದ ಟ್ರಸ್ಟ್ ಅಧ್ಯಕ್ಷ ಚಂದ್ರಹಾಸ್ ಪಂಡಿತ್‌ಹೌಸ್, ಬಿಲ್ಲವ ಬ್ರಿಗೇಡ್ ಸಂಚಾಲಕ ಸದಾನಂದ ಪೂಜಾರಿ, ಬಿಜೆಪಿ ಕ್ಷೇತ್ರ ಅಧ್ಯಕ್ಷ ಜಗದೀಶ್ ಕುವೆತ್ತಬೈಲ್, ಹಿಂದುಳಿದ ವರ್ಗಗಳ ಆಯೋಗದ ಮಾಜಿ ನಿರ್ದೇಶಕ ಕೆ.ಟಿ.ಸುವರ್ಣ, ಮುಖಂಡರುಗಳಾದ ಚಂದ್ರಹಾಸ್ ಉಳ್ಳಾಲ್, ಚಂದ್ರಹಾಸ್ ಅಡ್ಯಂತಾಯ, ಚಂದ್ರಶೇಖರ್ ಉಚ್ಚಿಲ್, ಶ್ರೀ ಬುರ್ದುಗೋಳಿ ಟ್ರಸ್ಟ್ ಅಧ್ಯಕ್ಷ ವಿಶ್ವನಾಥ ನಾಯಕ್, ಕ್ಷೇತ್ರದ ಮಧ್ಯಸ್ಥರಾದ ದೇವದಾಸ್ ಕಾಯಂಗಳ, ವಿ.ಹಿಂ.ಪ ಮುಖಂಡ ಶರಣ್ ಪಂಪ್ವೆಲ್, ಬಜರಂಗದಳದ ಪುನೀತ್ ಅತ್ತಾವರ್, ಬಿಜೆಪಿ ಕ್ಷೇತ್ರ ಪ್ರ.ಕಾ. ದಯಾನಂದ ತೊಕ್ಕೊಟ್ಟು, ಕಾರ್ಕಳದ ಮುಖಂಡರುಗಳಾದ ಉದಯ ಪೂಜಾರಿ ನಗ್ರಿಕಾಂಜಿಲ, ಸಂದೀಪ್ ಪೂಜಾರಿ, ಸೂರಜ್ ಕುಮಾರ್ ಕಲ್ಯ, ಯಶವಂತ್ ಕಡೇಶ್ವಾಲ್ಯ, ನಿಶಾಂತ್ ಪೂಜಾರಿ ಉಳ್ಳಾಲ, ಯಶವಂತ್ ದೇರಾಜೆ, ವಿವೇಕ್…
ಮಂಗಳೂರು: ದ. ಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬ್ರದರ್ಸ್ ಯುವಕ ಮಂಡಲದ ಅಧ್ಯಕ್ಷರು, ಉಳ್ಳಾಲ ಮೊಗವೀರ ಸಂಘದ ಮಾಜಿ ಜೊತೆ ಕಾರ್ಯದರ್ಶಿ, ಮೊಗವೀರ ಸಮುದಾಯದ ಯುವ ನಾಯಕರಾಗಿ ಮೂಡಿಬರುತ್ತಿರುವ ರಾಜೇಶ್ ಪುತ್ರನ್ ಉಳ್ಳಾಲ ಇವರು ಮಂಗಳೂರು ಟ್ರಾಲ್ ಬೋಟ್ ಮೀನುಗಾರರ ಸಂಘ (ರಿ) ದ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿರುತ್ತಾರೆ. ಈ ಹಿಂದೆ ಉಳ್ಳಾಲ ಬ್ರದರ್ಸ್ ಯುವಕ ಮಂಡಲದ ಅಧ್ಯಕ್ಷರಾಗಿ ಯಶಸ್ವಿಯಾಗಿ ಕಾರ್ಯನಿರ್ವಹಿಸಿ ಸಮಾಜಮುಖಿ ಚಟುವಟಿಕೆಗಳ ಮೂಲಕ ಉತ್ತಮ ನಾಯಕತ್ವವನ್ನು ಪ್ರದರ್ಶಿಸಿದ್ದಾರೆ. ಸಂಘದ ಅಭಿವೃದ್ಧಿ, ಮೀನುಗಾರರ ಹಿತಾಸಕ್ತಿ ಹಾಗೂ ಸಮಸ್ಯೆಗಳ ಪರಿಹಾರಕ್ಕೆ ಸದಾ ಶ್ರಮಿಸುತ್ತಿರುವ ಅವರು ಇದೀಗ ಟ್ರಾಲ್ ಬೋಟ್ ಮೀನುಗಾರರ ಸಂಘದ ಅಧ್ಯಕ್ಷರಾಗಿ ಆಯ್ಕೆಯಾಗಿರುವುದು ಮೀನುಗಾರ ಸಮುದಾಯಕ್ಕೆ ಸಂತಸದ ವಿಚಾರವಾಗಿದೆ. ಅವರ ಅಧಿಕಾರಾವಧಿಯಲ್ಲಿ ಮೀನುಗಾರರಿಗೆ ಇನ್ನಷ್ಟು ಸೌಲಭ್ಯಗಳು, ಸರ್ಕಾರಿ ಯೋಜನೆಗಳ ಸಮರ್ಪಕ ಅನುಷ್ಠಾನ ಹಾಗೂ ಸಂಘದ ಅಭಿವೃದ್ಧಿಗೆ ಹೊಸ ಆಯಾಮಗಳು ದೊರೆಯಲಿ ಎಂದು ಸದಸ್ಯರು ಆಶಯ ವ್ಯಕ್ತಪಡಿಸಿದ್ದಾರೆ.
ಬೆಳ್ತಂಗಡಿ,ಜು. 14 : ದಿಡುಪೆಯ ಜಲಪಾತದಲ್ಲಿ ನಡೆದ ನೈತಿಕ ಪೊಲೀಸ್‌ಗಿರಿ ಘಟನೆಯ ನಂತರ ಬೆಳ್ತಂಗಡಿ ಪೊಲೀಸರು ಐವರನ್ನು ಮತ್ತು ಇತರ ಕೆಲವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಜಲಪಾತ ನೋಡಲು ಮಂಗಳೂರಿನಿಂದ ಬಂದಿದ್ದ ಯುವಕ ಹಾಗೂ ಯುವತಿಗೆ ರಸ್ತೆಯಲ್ಲಿ ತಡೆದು ಜೀವ ಬೆದರಿಕೆ ಹಾಕಿರುವ ಬಗ್ಗೆ ಯುವತಿ ನೀಡಿದ ದೂರಿನಂತೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ದಿಡುಪೆ ನಿವಾಸಿಗಳಾದ ರಂಜಿತ್, ಸುದರ್ಶನ್, ಸ್ವಸ್ತಿಕ್, ಪ್ರದೀಪ್, ದೀಕ್ಷಿತ್ ಹಾಗೂ ಇತರರ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಮಂಗಳೂರಿನಿಂದ ಯುವತಿ ತನ್ನ ಸ್ನೇಹಿತನೊಂದಿಗೆ ಜಲಪಾತ ನೋಡಲು ಜು.12 ರಂದು ದಿಡುಪೆಗೆ ಹೋಗಿದ್ದು, ಅರಣ್ಯ ಇಲಾಖೆಯ ಚೆಕ್ ಪೋಸ್ಟ್ ನಲ್ಲಿ ಅನುಮತಿ ಪಡೆದು ಜಲಪಾತಕ್ಕೆ ತೆರಳಿ ಹಿಂತಿರುಗಿ ಬರವು ವೇಳೆ ಯುವತಿಯನ್ನು ತಡೆದ ಸ್ಥಳೀಯ ಯುವಕರ ತಂಡ ಅವಾಚ್ಯವಾಗಿ ನಿಂದಿಸಿ, ಜೀವಬೆದರಿಕೆ ಹಾಕಿದ್ದಾರೆ ಎಂದು ದೂರು ನೀಡಲಾಗಿದೆ.ಯುವತಿಯ ದೂರಿನಂತೆ ಪೊಲೀಸರು ಭಾರತೀಯ ದಂಡ ಸಂಹಿತೆ 126(2), 352, 351(2) ಸೆಕ್ಷನ್ ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು ಪೊಲೀಸರು ತನಿಖೆ…
ಕಾಸರಗೋಡು, ಜು. 14 : ಮಳೆಗಾಲದಲ್ಲಿ ತುಂಬಿ ಹರಿಯುತ್ತಿರುವ ಜಲಮೂಲಗಳು ಮಕ್ಕಳ ಮೋಜಿನ ತಾಣವಾಗಿದ್ದರೆ, ಪೋಷಕರಿಗೆ ಆತಂಕ ತಂದಿಟ್ಟಿವೆ. ಮಂಜೇಶ್ವರ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಾಚಲಿಕೆ, ಇಡಿಯ ಪಾಪಿಲ ಹಾಗೂ ಗೋವಿಂದ ಪೈ ಡ್ಯಾಂ ಪ್ರದೇಶಗಳಲ್ಲಿ ಯುವಕರು ಯಾವುದೇ ಮುನ್ನೆಚ್ಚರಿಕೆ ಇಲ್ಲದೆ ಅಪಾಯಕಾರಿ ರೀತಿಯಲ್ಲಿ ಈಜು ಪ್ರದರ್ಶನ ನೀಡುತ್ತಿರುವುದು ಸ್ಥಳೀಯರಲ್ಲಿ ಭೀತಿ ಮೂಡಿಸಿದೆ. ಸ್ಥಳೀಯರು ಮಾತ್ರವಲ್ಲದೆ ದೂರದ ಊರುಗಳಿಂದಲೂ ಯುವಕರು ಇಲ್ಲಿಗೆ ಆಗಮಿಸುತ್ತಿದ್ದು, ಎತ್ತರದ ಜಾಗದಿಂದ ನೀರಿಗೆ ಜಿಗಿಯುವುದು, ಪೈಪೋಟಿಗಿಳಿಯುವುದು ನಿರಂತರವಾಗಿದೆ. ಇದರ ಜೊತೆಗೆ, ಈ ನಿರ್ಜನ ಪ್ರದೇಶಗಳಲ್ಲಿ ಮಾದಕ ದಂಧೆಯಂತಹ ಅಕ್ರಮ ಚಟುವಟಿಕೆಗಳು ನಡೆಯುತ್ತಿವೆ ಎಂಬ ಗಂಭೀರ ಆರೋಪವೂ ಕೇಳಿಬಂದಿದೆ. ಈ ಪ್ರದೇಶಗಳಲ್ಲಿ ಈಜುವುದನ್ನು ನಿಷೇಧಿಸಿ ಪೊಲೀಸ್ ಇಲಾಖೆ ಈಗಾಗಲೇ ಆದೇಶ ಹೊರಡಿಸಿದ್ದರೂ, ನಿಯಮಗಳನ್ನು ಗಾಳಿಗೆ ತೂರಿ ಬರುವವರ ಸಂಖ್ಯೆ ಹೆಚ್ಚಾಗುತ್ತಿದೆ.ಸದ್ಯ ಮಂಜೇಶ್ವರ ಪೊಲೀಸರು ಬಾಚಲಿಕೆ ಕೆರೆಗೆ ದಾಳಿ ನಡೆಸಿ, ಅಪಾಯಕಾರಿ ಕೃತ್ಯದಲ್ಲಿ ತೊಡಗಿದ್ದ ಕೆಲವರನ್ನು ವಶಕ್ಕೆ ಪಡೆದಿದ್ದಾರೆ. ಪೊಲೀಸರ ಕ್ರಮದ ಹೊರತಾಗಿಯೂ, ಪೋಷಕರು ತಮ್ಮ ಮಕ್ಕಳ ಚಟುವಟಿಕೆಗಳ ಮೇಲೆ ತೀವ್ರ…
ಮೆರ್ಸಿನ್ ಮಾತೆಯ ಇಗರ್ಜಿ, ಪಾನೀರು ಇದರ ಮುಂದಾಳತ್ವದಲ್ಲಿ, ಭಾರತೀಯ ಅಂಚೆ ಇಲಾಖೆ, ಮಂಗಳೂರು ಇವರ ಸಹಯೋಗದಲ್ಲಿ ಹಾಗೂ ಕಥೊಲಿಕ್ ಸಭಾ ಪಾನೀರು ಘಟಕ, ಆರೋಗ್ಯ ಆಯೋಗ, ಕುಟುಂಬ ಆಯೋಗ, ಕಾರ್ಮಿಕ ಆಯೋಗ, ಸಾಮಾಜಿಕ ಅಭಿವೃದ್ಧಿ ಆಯೋಗ, ಐ.ಸಿ.ವೈ.ಎಂ. ಪಾನೀರು ಘಟಕ, ಎಸ್.ವಿ.ಪಿ. ಹಾಗೂ ಸ್ತ್ರೀ ಸಂಘಟನೆ ಇವರ ಸಹಕಾರದೊಂದಿಗೆ ಆಧಾರ್ ನೋಂದಣಿ ಮತ್ತು ತಿದ್ದುಪಡಿ, ಆರೋಗ್ಯ ವಿಮೆ ಹಾಗೂ ಅಪಘಾತ ವಿಮೆ ಜನಜಾಗೃತಿ ಅಭಿಯಾನವು ಪಾನೀರು ಚರ್ಚ್ ಸಭಾಂಗಣದಲ್ಲಿ ಯಶಸ್ವಿಯಾಗಿ ನಡೆಯಿತು. ಕಾರ್ಯಕ್ರಮವನ್ನು ಮೆರ್ಸಿನ್ ಮಾತೆಯ ಇಗರ್ಜಿಯ ಧರ್ಮಗುರು ವಂದನೀಯ ಫಾ. ವಿಕ್ಟರ್ ಡಿಮೆಲ್ಲೋ ಅವರು ಉಪಾಧ್ಯಕ್ಷ ಶ್ರೀ ಉರ್ಬನ್ ಫೆರಾಂವೋ ಅವರಿಗೆ ಆಧಾರ್ ಕಾರ್ಡ್ ಹಾಗೂ ಕಾರ್ಯದರ್ಶಿ ವಿನ್ನಿ ಕುಟಿನ್ಹಾ ಅವರಿಗೆ ಆರೋಗ್ಯ ವಿಮೆ ಪಾಲಿಸಿಯನ್ನು ವಿತರಿಸುವ ಮೂಲಕ ಉದ್ಘಾಟಿಸಿದರು. ಚರ್ಚಿನ ವಿವಿಧ ಆಯೋಗಗಳ ಸಂಯೋಜಕರಾದ ಆಲ್ವಿನ್ ಡಿಸೋಜಾ ಅವರು ಎಲ್ಲರನ್ನು ಆತ್ಮೀಯವಾಗಿ ಸ್ವಾಗತಿಸಿದರು. ಕಾರ್ಯಕ್ರಮವನ್ನು ಚರ್ಚ್ ಪಾಲನಾ ಪರಿಷತ್ ಸದಸ್ಯರಾದ ರೊನಾಲ್ಡ್ ಡಿಸೋಜಾ ಅವರು ನಿರೂಪಿಸಿದರು. ಭಾರತೀಯ ಅಂಚೆ…
ಉಳ್ಳಾಲ ;ತಲಪಾಡಿ ದೇವಿನಗರ ಶಾಲೆ ಬಳಿ ಉಲಾಯಿ ಪಿದಾಯಿ ಆಡುತ್ತಿದ್ದ ಒಂಭತ್ತು ಮಂದಿಯನ್ನು ಉಳ್ಳಾಲ ಪೊಲೀಸರು ಬಂಧಿಸಿ, ಆಟಕ್ಕಾಗಿ ಉಪಯೋಗಿಸುವ ಸ್ವತ್ತು ಹಾಗೂ ಹಣವನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ನಿವೃತ್ತ ಸರಕಾರಿ ಉದ್ಯೋಗಿ ತಲಪಾಡಿ ದೇವಿಪುರದ ನಾರಾಯಣ (63), ಅದೇ ಊರಿನವರಾದ ರವಿ(47), ರತೀಶ್(39), ನಾಗೇಶ್(37), ಸತೀಶ್(46), ಮನೋಜ್ ಕುಮಾರ್ (53), ಭರತ್ ರಾಜ್ ಟಿ. (37), ಗಣೇಶ್ ಕುಮಾರ್, ಭರತ್ ರಾಜ್(37), ಧನರಾಜ್ (37), ಗಣೇಶ್ ಕುಮಾರ್ ಬಂಧಿತರಾಗಿದ್ದಾರೆ. ಆರೋಪಿತರಿಂದ ಮೊಬೈಲ್, ಆಟಕ್ಕೆ ಬಳಸಲಾದ ಸ್ವತ್ತು ಹಾಗೂ ನಗದು ವಶಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರು, ಜು. 14: ನಗರದ ಉರ್ವಾ ಪೊಲೀಸ್ ಠಾಣಾ ವ್ಯಾಪ್ತಿಯ ಎರಡು ಪ್ರತ್ಯೇಕ ಕಟ್ಟಡ ನಿರ್ಮಾಣ ಪ್ರದೇಶಗಳಲ್ಲಿ ಅಕ್ರಮವಾಗಿ ನೆಲೆಸಿದ್ದ ಒಟ್ಟು 11 ಮಂದಿ ಬಾಂಗ್ಲಾದೇಶಿ ಪ್ರಜೆಗಳನ್ನು ಬಂಧಿಸಲಾಗಿದೆ. ಬಂಧಿತ ವಿದೇಶಿ ಪ್ರಜೆಗಳ ಪೈಕಿ ಒಂದು ನಿರ್ಮಾಣ ಹಂತದ ಜಾಗದಲ್ಲಿ ಮೂವರು ಹಾಗೂ ಮತ್ತೊಂದು ಜಾಗದಲ್ಲಿ ಎಂಟು ಮಂದಿ ಅಕ್ರಮವಾಗಿ ಕೆಲಸ ಮಾಡುತ್ತಿರುವುದು ಪತ್ತೆಯಾಗಿದೆ ಎಂದಿದ್ದಾರೆ. ಬಂಧಿತರೆಲ್ಲರೂ ಬಾಂಗ್ಲಾದೇಶದ ಢಾಕಾ ವಿಭಾಗದ ‘ರಾಜಶಾಹಿ’ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಸೇರಿದವರಾಗಿದ್ದಾರೆ.ಮೊಹಮ್ಮದ್ ಕೌಸರ್ ಅಲಿ (21 ವರ್ಷ), ಮೊಹಮ್ಮದ್ ನೂರ್ ಅಮೀನ್ (34 ವರ್ಷ), ಮೊಹಮ್ಮದ್ ನಾಹಿದುಲ್ ಇಸ್ಲಾಂ (22 ವರ್ಷ), ಮೊಹಮ್ಮದ್ ಹುಮಾಯೂನ್ ಕಬೀರ್ (22 ವರ್ಷ), ಮೊಹಮ್ಮದ್ ರಂಜಾನ್ ಅಲಿ (23 ವರ್ಷ), ಮೊಹಮ್ಮದ್ ಅಬ್ದುಲ್ ರಹಮಾನ್ ರಾಯೆಲ್ (19 ವರ್ಷ), ಮೊಹಮ್ಮದ್ ನೋಯಾನ್ (24 ವರ್ಷ) ಬಂಧಿತರು. ಬಂಧಿತರಲ್ಲಿ ನಾಲ್ವರು ಅಪ್ರಾಪ್ತರಿದ್ದಾರೆ.ಪೊಲೀಸರು ಬಿಡುಗಡೆ ಮಾಡಿರುವ ಅಧಿಕೃತ ಪಟ್ಟಿಯ ಪ್ರಕಾರ, ಬಂಧಿತ 11 ಮಂದಿಯಲ್ಲಿ 15, 16 ಹಾಗೂ 17 ವರ್ಷ ಪ್ರಾಯದ…
ಮಂಗಳೂರು, ಜುಲೈ 13: ದಕ್ಷಿಣ ಕನ್ನಡ ಜಿಲ್ಲೆಯ ಮಂಜನಾಡಿ ಗ್ರಾಮದಲ್ಲಿ ರಸ್ತೆ ಕಾಮಗಾರಿಯ ಬಳಿಕ ಸಂಭವಿಸಿದ ಭೀಕರ ಭೂಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ರಾಜ್ಯ ಸರ್ಕಾರ ಹಾಗೂ ಸಂಬಂಧಪಟ್ಟ ಇಲಾಖೆಗಳಿಗೆ ತುರ್ತು ನೋಟಿಸ್ ಜಾರಿಗೊಳಿಸಿದೆ. 30 ಮೇ 2025ರಂದು ಬೆಳಿಗ್ಗೆ ಸುಮಾರು 4 ಗಂಟೆಗೆ ಸಂಭವಿಸಿದ ಈ ದುರಂತದಲ್ಲಿ ಅಶ್ವಿನಿ ಅವರ ಇಬ್ಬರು ಮಕ್ಕಳು ಹಾಗೂ ಅತ್ತೆ ಮೃತಪಟ್ಟಿದ್ದು, ಅಶ್ವಿನಿ ಅವರು ತಮ್ಮ ಎರಡೂ ಕಾಲುಗಳನ್ನು ಕಳೆದುಕೊಂಡು ಶಾಶ್ವತ ಅಂಗವೈಕಲ್ಯಕ್ಕೆ ಒಳಗಾಗಿದ್ದಾರೆ. ಅವರ ಮಾವ ಕೂಡ ಒಂದು ಕಾಲನ್ನು ಕಳೆದುಕೊಂಡಿದ್ದಾರೆ. ಈ ದುರಂತಕ್ಕೆ ರಸ್ತೆ ಕಾಮಗಾರಿಯಲ್ಲಿನ ನಿರ್ಲಕ್ಷ್ಯವೇ ಕಾರಣವೆಂದು ಆರೋಪಿಸಿ, ತಪ್ಪಿತಸ್ಥ ಇಂಜಿನಿಯರ್‌ಗಳು ಮತ್ತು ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ಸಂತ್ರಸ್ತರಿಗೆ ಗರಿಷ್ಠ ಮತ್ತು ನ್ಯಾಯಯುತ ಪರಿಹಾರ ನೀಡುವಂತೆ ಕೋರಿ ಕರ್ನಾಟಕ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ. ಈ ಅರ್ಜಿಯಲ್ಲಿ ರಾಜ್ಯದ ಮುಖ್ಯ ಕಾರ್ಯದರ್ಶಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪ್ರಧಾನ ಕಾರ್ಯದರ್ಶಿ, ಗ್ರಾಮೀಣಾಭಿವೃದ್ಧಿ…
ಉಳ್ಳಾಲ : ಇಎಸ್‌ಐ ಆಸ್ಪತ್ರೆಗಳಲ್ಲಿ ಇನ್ನಷ್ಟು ಆಧುನಿಕ ಸೌಲಭ್ಯಗಳನ್ನು ಕಲ್ಪಿಸುವುದು, ತಜ್ಞ ವೈದ್ಯರ ತಂಡಗಳನ್ನು ನಿಯೋಜಿಸುವುದು ಸೇರಿದಂತೆ ಆರೋಗ್ಯ ಸೇವೆಗಳನ್ನು ಬಲಪಡಿಸಲಾಗುತ್ತಿದೆ. ಸುಮಾರು ₹10 ಕೋಟಿ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದ್ದು, ಕಣಚೂರು ಆಸ್ಪತ್ರೆಯೊಂದಿಗೆ ಇನ್ನಷ್ಟು ಸಹಭಾಗಿತ್ವ ಬೆಳೆಸುವ ಉದ್ದೇಶವೂ ಇದೆ ಎಂದು ಕರ್ನಾಟಕ ಸರ್ಕಾರದ ನೌಕರರ ರಾಜ್ಯ ವಿಮಾ (ಇಎಸ್‌ಐ) ವೈದ್ಯಕೀಯ ಸೇವೆಗಳ ಆಯುಕ್ತರಾದ ಡಾ. ದಿನೇಶ್ ಕುಮಾರ್ ವೈ.ಕೆ. (ಐಎಫ್‌ಎಸ್) ಅಭಿಪ್ರಾಯಪಟ್ಟರು. ಅವರು ಕಣಚೂರು ಇಸ್ಲಾಮಿಕ್ ಎಜುಕೇಶನ್ ಟ್ರಸ್ಟ್ ವತಿಯಿಂದ ಸೋಮವಾರ ನಾಟೆಕಲ್ ಕಣಚೂರು ಸಭಾಂಗಣದಲ್ಲಿ ಆಯೋಜಿಸಲಾದ ಸಂಸ್ಥಾಪಕರ ದಿನದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ನೌಕರರ ರಾಜ್ಯ ವಿಮಾ (ಇಎಸ್‌ಐ) ಯೋಜನೆಯು ಕೇಂದ್ರ ಸರ್ಕಾರದ ಅನುದಾನಿತ ಯೋಜನೆಯಾಗಿದ್ದು, ಇಎಸ್‌ಐ ಕಾರ್ಡ್ ಹೊಂದಿರುವ ಉದ್ಯೋಗಿಗಳಿಗೆ ಮಾತ್ರವಲ್ಲದೆ ಅವರ ಕುಟುಂಬ ಸದಸ್ಯರಿಗೂ ಸಂಪೂರ್ಣ ಉಚಿತ ವೈದ್ಯಕೀಯ ಸೇವೆಯನ್ನು ಒದಗಿಸುತ್ತದೆ. ಕರ್ನಾಟಕದಲ್ಲಿ ಸುಮಾರು 36.5 ಲಕ್ಷ ಇಎಸ್‌ಐ ಫಲಾನುಭವಿಗಳಿದ್ದು, ರಾಜ್ಯದ ಸುಮಾರು ಮೂರನೇ ಒಂದು ಭಾಗದ ಜನಸಂಖ್ಯೆ ಈ ಯೋಜನೆಯ…

