ಮಂಗಳೂರು : ಮಂಗಳೂರಿನ ಶಾರದಾ ಆಯುರ್ವೇದ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಮಾನವ ಸಂಪನ್ಮೂಲ ಅಭಿವೃದ್ಧಿ ಕೋಶವು “ಉಜ್ವಲ ಭವಿಷ್ಯಕ್ಕಾಗಿ ಮಾರ್ಗದರ್ಶಕರು (ಮೆಂಟರ್) ಮತ್ತು ವಿದ್ಯಾರ್ಥಿಗಳ ಸಂಬಂಧಗಳನ್ನು ಪೋಷಿಸುವುದು” ಎಂಬ ವಿಷಯದ ಕುರಿತು ಅತಿಥಿ ಉಪನ್ಯಾಸ ನಡೆಯಿತು.ಉಡುಪಿಯ ಡಾ. ಎ.ವಿ. ಬಾಳಿಗಾ ಸ್ಮಾರಕ ಆಸ್ಪತ್ರೆಯ ಖ್ಯಾತ ಮನೋವೈದ್ಯರಾದ ಡಾ. ವಿರೂಪಾಕ್ಷ ದೇವರಮನೆ ಈ ಉಪನ್ಯಾಸವನ್ನು ನಡೆಸಿ ಕೊಟ್ಟರು. ವಿದ್ಯಾರ್ಥಿಗಳ ಶೈಕ್ಷಣಿಕ ಹಾಗೂ ವೈಯಕ್ತಿಕ ಸರ್ವತೋಮುಖ ಬೆಳವಣಿಗೆಗಾಗಿ ಮಾರ್ಗದರ್ಶಕರು (ಮೆಂಟರ್) ಮತ್ತು ವಿದ್ಯಾರ್ಥಿಗಳ ಸಂಬಂಧಗಳನ್ನು ಯಾವ ರೀತಿಯಲ್ಲಿ ಉತ್ತಮ ಪಡಿಸಬಹುದು ಎಂಬ ವಿಷಯದ ಬಗ್ಗೆ ಈ ಉಪನ್ಯಾಸದಲ್ಲಿ ಚರ್ಚಿಸಲಾಯಿತು.ಈ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಸಂದೀಪ್ ಬೇಕಲ್, ಡಾ.ಸಪ್ನ ಭಂಡಾರಿ, ಡಾ ಗಣೇಶ್ ನಾಯ್ಕ್ ಕೆ ಹಾಗೂ ಬೋಧಕ ವರ್ಗದ ಸಿಬ್ಬಂದಿಗಳು ಸಕ್ರಿಯವಾಗಿ ಪಾಲ್ಗೊಂಡರು.
Author: UllalaVani
ಮಂಗಳೂರು : ಸಂತ ಅಲೋಶಿಯಸ್ (ಪರಿಗಣಿಸಲ್ಪಟ್ಟ ವಿಶ್ವವಿದ್ಯಾನಿಲಯ) ಇಲ್ಲಿನ ಹಳೇ ವಿದ್ಯಾರ್ಥಿ, ಪತ್ರಕರ್ತ ಪೌಲೋಸ್ ಬೆಂಜಮಿನ್ ಸ್ಮರಣಾರ್ಥ ಕೆ.ಎಂ.ಸಿ ಆಸ್ಪತ್ರೆ ಅತ್ತಾವರ, ಪೌಲ್ಸ್ ಮೆಮೋರಿಯಲ್ ಪ್ರಾವಿಡೆನ್ಸ್ , ರಾಷ್ಟ್ರೀಯ ಸೇವಾ ಯೋಜನೆ (ಎನ್ ಎಸ್ ಎಸ್) ಸಹಯೋಗದೊಂದಿಗೆ ನಗರದ ಬಾವುಟಗುಡ್ಡೆಯ ಅಲೋಶಿಯಸ್ ಸಂಸ್ಥೆಯ ಅರ‍್ರುಪೆ ಬ್ಲಾಕ್ ಆಡಿಟೋರಿಯಂ (.ಎ.ಆರ್ 803) ನಲ್ಲಿ ಜು.12 ಬೆಳಿಗ್ಗೆ 9 ಕ್ಕೆ ರಕ್ತದಾನ ಶಿಬಿರ ನಡೆಯಲಿದೆ. ಅರ್ಥಪೂರ್ಣ ಶಿಬಿರವು 2013-15 ಬ್ಯಾಚಿನ ಎನ್ ಎಸ್ ಎಸ್‌ನ ನಿಷ್ಠಾವಂತ ಸ್ವಯಂಸೇವಕ ಪಾಲೋಸ್ ಬೆಂಜಮಿನ್ ಅವರ ಸ್ಮರಣಾರ್ಥವಾಗಿ ನಡೆಯುತ್ತಿದೆ. ಅವರ ಸೇವಾ ಮನೋಭಾವನೆಯನ್ನು ಗೌರವಿಸುವ ಹಾಗೂ ಅವರ ಪರಂಪರೆಯನ್ನು ಮುಂದುವರಿಸುವ ಉದ್ದೇಶದಿಂದ ಈ ಶಿಬಿರ ಹಮ್ಮಿಕೊಳ್ಳಲಾಗಿದೆ.ಈ ಕಾರ್ಯಕ್ರಮದಲ್ಲಿ ಕೆಎಂಸಿ ಬ್ಲಡ್ ಸೆಂಟರ್‌ನ ನಿರ್ದೇಶಕಿ ಡಾ. ದೀಪಾ ಅಡಿಗ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಸೆಂಟ್ ಅಲೋಶಿಯಸ್ ಕಾಲೇಜಿನ ರಿಜಿಸ್ಟ್ರಾರ್ ಡಾ. ಅಲ್ವಿನ್ ಡಿಸಾ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಪೌಲ್ಸ್ ಮೆಮೊರಿಯಲ್ ಪ್ರಾವಿಡೆನ್ಸ್ ನ ಪ್ರತಿನಿಧಿ ಜೀವನ್ ಅವರು ಗೌರವ ಅತಿಥಿಯಾಗಿ ಉಪಸ್ಥಿತರಿರುವರು.
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಪಕ್ಷಿಕೆರೆ ಶಾಖೆಯ ಪ್ರಥಮ ವಾರ್ಷಿಕೋತ್ಸವದ ಪ್ರಯುಕ್ತ ಗ್ರಾಹಕರ ಸಭೆಯು ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ಅಧ್ಯಕ್ಷತೆಯಲ್ಲಿ ಪಕ್ಷಿಕೆರೆ ಶಾಖೆಯಲ್ಲಿ ಜರುಗಿತು.ಕಾರ್ಯಕ್ರಮವನ್ನು ಸಂಘದ ಸದಸ್ಯರುಗಳಾದ ಶ್ರೀ ಸುಧಾಕರ್ ರಾವ್, ಶ್ರಿ ಯೋಗೀಶ್ ಶೆಟ್ಟಿ, ಶ್ರೀಮತಿ ಕುಶಾಲ ಎಸ್. ಕುಕ್ಯಾನ್, ಶ್ರೀ ಶಿವಪ್ಪ ಶೆಟ್ಟಿ, ಶ್ರೀಮತಿ ಪೂರ್ಣಿಮ ಹಾಗೂ ಶ್ರೀಮತಿ ಸಾರಿಕ ದೀಪ ಪ್ರಜ್ವಲನೆ ಮಾಡಿ ಉದ್ಘಾಟಿಸಿದರು.ಈ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸಂಘದ ಸದಸ್ಯರಾದ ಶ್ರೀ ಸುಧಾಕರ್ ರಾವ್ ಅವರು ಮಾತಾನಾಡಿ “ಪಕ್ಷಿಕೆರೆಯಲ್ಲಿ ಶಾಖೆ ತೆರೆದು ಬ್ಯಾಂಕಿಂಗ್, ವಿಮೆ , ಆರೋಗ್ಯ ಕಾರ್ಡ್ ಈ ಎಲ್ಲಾ ವ್ಯವಸ್ಥೆ ಒಂದೇ ಸೂರಿನಲ್ಲಿ ಕಲ್ಪಿಸಿದಕ್ಕೆ ಸಂಘಕ್ಕೆ ಧನ್ಯವಾದಗಳನ್ನು ಸಲ್ಲಿಸಿ, ಸಂಸ್ಥೆಯು ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಪ್ರಗತಿ ಹೊಂದಲಿ” ಎಂದು ಶುಭಹಾರೈಸಿದರು. ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ಮಾತನಾಡಿ “ಸಂಸ್ಥೆಯು 13 ವರ್ಷಗಳಲ್ಲಿ 33 ಶಾಖೆಗಳನ್ನು ತೆರೆದು, ರೂ. 2000 ಕೋಟಿಗೂ ಮಿಕ್ಕಿ…
ಇಂದು ಮಕ್ಕಳು ಮೊಬೈಲ್ ದಾಸರಾಗಿದ್ದಾರೆ ಕಾರಣ ಕೇವಲ ಪಠ್ಯಕ್ಕೆ ಸೀಮಿತವಾದ ಶಿಕ್ಷಣ. ಮಕ್ಕಳಿಗೆ ಓದಿನೊಂದಿಗೆ ಪಠ್ಯೇತರ ಚಟುವಟಿಕೆಗಳಿಗೆ ಹೆಚ್ಚಿನ ಒತ್ತನ್ನು ನೀಡಿದಾಗ ಸಮಯವನ್ನು ಕೂಡ ಸದುಪಯೋಗ ಪಡೆಸಿಕೊಳ್ಳುತ್ತಾರೆ. ಇದರಿಂದ ಮನೆಯಲ್ಲಿ ಮೊಬೈಲ್ ಮುಕ್ತ ವಾತಾವರಣ ಸೃಷ್ಟಿ ಯಾಗುತ್ತದೆ. ಯಕ್ಷಗಾನ ಕಲಿಯುವುದರಿಂದ ವಿದ್ಯಾರ್ಥಿಗಳಲ್ಲಿ ದೈಹಿಕ , ಮಾನಸಿಕ, ಆಧ್ಯಾತ್ಮಿಕ ಅಭಿವೃದ್ಧಿಯಾಗುವುದರೊಂದಿಗೆ ಸರ್ವತೋಮುಖ ಅಭಿವೃದ್ಧಿ ಸಾಧ್ಯ ಎಂದು ಯಕ್ಷಧ್ರುವ ಪಟ್ಲ ಫೌಂಡೇಶನ್ ಮುಡಿಪು ಘಟಕದ ಅಧ್ಯಕ್ಷರಾದ ಸಂತೋಷ್ ಕುಮಾರ್ ರೈ ಬೋಳಿಯಾರು ಅಭಿಪ್ರಾಯ ಪಟ್ಟರು. ಇವರು ಹರೇಕಳ ಶ್ರೀರಾಮಕೃಷ್ಣ ಅನುದಾನಿತ ಪ್ರೌಢಶಾಲೆಯಲ್ಲಿ ಯಕ್ಷದ್ರುವ ಪಟ್ಲ ಪೌಂಡೇಶನ್ ವತಿಯಿಂದ ನಡೆದ ಉಚಿತ ಯಕ್ಷದ್ರುವ ಯಕ್ಷ ಶಿಕ್ಷಣ ತರಬೇತಿಯ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದರು. ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ಯಕ್ಷಧ್ರುವ ಯಕ್ಷ ಶಿಕ್ಷಣದ ಪ್ರಧಾನ ಸಂಚಾಲಕರಾದ ವಾಸುದೇವ ಐತಾಳ್ ಇವರು ಯಕ್ಷಗಾನ ಕಲಿಕೆಯಿಂದ ವಿದ್ಯಾರ್ಥಿಗಳಲ್ಲಿ ಏಕಾಗ್ರತೆ ಹೆಚ್ಚಾಗುತ್ತದೆ . ಇದರಿಂದ ಪಠ್ಯಕ್ಕೂ ಪ್ರಯೋಜನ ಆಗುತ್ತದೆ. ಮಾತ್ರವಲ್ಲದೇ ವಿದ್ಯಾರ್ಥಿಗಳಲ್ಲಿ ನಾಟ್ಯ , ಮಾತುಗಾರಿಕೆ, ಸೃಜನಶೀಲತೆ, ಮುಂತಾದವುಗಳು ಅಭಿವೃದ್ಧಿ ಹೊಂದುವುದರೊಂದಿಗೆ ಸಂಸ್ಕಾರವೂ…
ಮುದ್ರಾಡಿ ನಾಟ್ಕದೂರು : ನಮ್ಮ ವಿವಿಧ ಧರ್ಮದ ಆಚರಣೆಗಳು ಬೇರೆಯಾದರೂ ಉದ್ದೇಶ ಒಂದೇ ಜಗತ್ತಿಗೆ ಒಳಿತು ಮಾಡುವ ಬೆಳಕು ನೀಡುವುದು, ಮುದ್ರಾಡಿ ಶ್ರೀಕ್ಷೇತ್ರವು ಅಂತಹ ಮಹತ್ವದ ಕಾರ್ಯವನ್ನು ನಡೆಸುತ್ತಿದೆ, ಮುದ್ರಾಡಿ ಕ್ಷೇತ್ರಕ್ಕೆ ಅದ್ಭುತ ಶಕ್ತಿಯಿದೆ, ಧರ್ಮ ಯೋಗಿ ಮತ್ತು ಕರ್ಮಯೋಗಿಯಾಗಿದ್ದ ಮೋಹನ ಸ್ವಾಮೀಜಿಯಿಂದ ಕ್ಷೇತ್ರವು ಬೆಳಗುತ್ತಿದೆ ಎಂದು ಗೌರಿಗದ್ದೆಯ ಶ್ರೀ ವಿನಯ್ ಗುರೂಜಿ ಹೇಳಿದರು.ಅವರು ಹೆಬ್ರಿಯ ಶ್ರೀ ಕ್ಷೇತ್ರ ಮುದ್ರಾಡಿ ಅಭಯಹಸ್ತೆ ಶ್ರೀ ಆದಿಶಕ್ತಿ ಮತ್ತು ನಂದಿಕೇಶ್ವರ ದೇವಸ್ಥಾನದಲ್ಲಿ ಮಂಗಳವಾರ ನಡೆದ ಧರ್ಮಯೋಗಿ ಮೋಹನ ಸ್ವಾಮೀಜಿಯವರ 4ನೇ ವರ್ಷದ ಆರಾಧನಾ ಮಹೋತ್ಸವದಲ್ಲಿ ಧರ್ಮಯೋಗಿ ಸಮ್ಮಾನ ಸ್ವೀಕರಿಸಿ ಮಾತನಾಡಿದರು. ಜಾತಿ ಮತ ಧರ್ಮವನ್ನು ನಾವು ಪ್ರೀತಿಸುತ್ತೇನೆ ಆಗ ಮಾತ್ರ ಧರ್ಮ ಬೆಳೆಯುತ್ತದೆ. ಕರಾವಳಿ ಜಿಲ್ಲೆ ತುಳುನಾಡಿನಲ್ಲಿ ನಾಗರಾಧನೆ ಮತ್ತು ದೈವನಾಧನೆಯ ಮೂಲಕ ಒಗ್ಗಟ್ಟು ಇದೆ, ಅದು ಸದೃಡ ಕುಟುಂಬದ ವ್ಯವಸ್ಥೆಗೆ ಕಾರಣವಾಗಿದೆ ಆ ಮೂಲಕ ಸಂಘಟಿತ ಸಮಾಜ ನಿರ್ಮಾಣವಾಗಿದೆ ಎಂದು ವಿನಯ ಗುರೂಜಿ ಹೇಳಿದರು.ಮುಖಂಡ ಮುದ್ರಾಡಿ ಮಂಜುನಾಥ ಪೂಜಾರಿ ಮಾತನಾಡಿ ಸರ್ವ ಧರ್ಮದವರೂ…
ಉಳ್ಳಾಲ : ಲೋ ಬಿಪಿಗೆ ಒಳಗಾಗಿ ಮಂಗಳೂರಿನ ಫಾರಮ್ ಮಾಲ್ ನಲ್ಲಿರುವ ಸ್ವಂತ ಮಳಿಗೆಯಲ್ಲಿ ಕುಸಿದುಬಿದ್ದಿದ್ದ ಮಂಜನಾಡಿ ನಿವಾಸಿ ನವವಿವಾಹಿತ ಇಂದು ಚಿಜಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.ಮಂಜನಾಡಿ ಮೊಂಟೆಪದವು ವೀರಮಾರುತಿ ಮಂದಿರ ಬಳಿಯ ಶಾಂತನಗರ ನಿವಾಸಿ ದಿ. ವೆಂಕಪ್ಪ ಟೈಲರ್ ಮತ್ತು ಪಾರ್ವತಿ ದಂಪತಿ ಪುತ್ರ ಭರತ್ (36) ಮೃತರು. ಜು.1 ರಂದು ಫಾರಮ್ ಮಾಲ್ ನಲ್ಲಿರುವ ಅಂಗಡಿಯಲ್ಲಿ ಇರುವಾಗ ಲೋ ಬಿಪಿಯಾಗಿ ಎಕಾಏಕಿ ಕುಸಿದುಬಿದ್ದಿದ್ದರು. ತಕ್ಷಣ ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು 9 ದಿನಗಳ ಬಳಿಕ ಚಿಕಿತ್ಸೆ ಫಲಕಾರಿಯಾಗದೆ ಭರತ್ ಸಾವನ್ನಾಪ್ಪಿದ್ದಾರೆ. ಏಪ್ರಿಲ್ 21 ರಂದು ವಿವಾಹವಾಗಿದ್ದರು . ಪತ್ನಿಯೂ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಉದ್ಯೋಗಿಯಾಗಿದ್ದಾರೆ.ಮೃತರು ತಾಯಿ , ಮೂವರು ಸಹೋದರಿಯರನ್ನು ಅಗಲಿದ್ದಾರೆ.
ಮಂಗಳೂರು : ಕಮಿಷನರೇಟ್ ವ್ಯಾಪ್ತಿಯಲ್ಲಿ ಇತ್ತೀಚೆಗೆ ಬೈಕ್ ಕಳವು ಪ್ರಕರಣಗಳು ಹೆಚ್ಚುತ್ತಿದ್ದು, ಜೂನ್ ತಿಂಗಳಲ್ಲೆ ಆರು ದ್ವಿಚಕ್ರ ವಾಹನ ಕಳವಾಗಿದೆ. ಹೆಚ್ಚಾಗಿ ಸ್ಕೂಟರ್ ಹಾಗು ಸ್ಪ್ಲೆಂಡರ್ ಬೈಕ್‌ಗಳೇ ಖದೀಮರ ಟಾರ್ಗೆಟ್ ಆಗಿದ್ದು, ನಾಲ್ಕು ಸ್ಕೂಟರ್ ಮತ್ತು ಎರಡು ಬೈಕ್‌ಗಳು ಕಳವಾಗಿದೆ. ಒಂದು ಕಡೆ ಪಾರ್ಕ್ ಮಾಡಿದ ಹತ್ತೇ ನಿಮಿಷದಲ್ಲಿ ಬೈಕ್ ಕಳವಾಗಿದ್ದು, ಇನ್ನೊಂದು ಕಡೆ 25 ನಿಮಿಷದಲ್ಲೇ ಕಳವು ಸಂಭವಿಸಿದೆ. ಬೈಕ್ ಪಾರ್ಕ್ ಮಾಡುವ ಸ್ಥಳದ ಸಮೀಪವೇ ಕಳ್ಳರು ಹೊಂಚು ಹಾಕಿ ಕಾದುಕೂರುತ್ತಿದ್ಡಾರೆ. ಸ್ಟೇಟ್ ಬ್ಯಾಂಕ್, ನಾಗುರಿ, ಉಳ್ಳಾಲ, ಮುನ್ನೂರು, ಕೇಂದ್ರ ರೈಲು ನಿಲ್ದಾಣಗಳು ಕಳ್ಳರ ಕೇಂದ್ರಗಳು. ಉಳ್ಳಾಲದ ಮುನ್ನೂರು ಗ್ರಾಮದ ಸಂತೋಷ್ ನಗರದಲ್ಲಿ ಪಾರ್ಕ್ ಮಾಡಿದ 10 ನಿಮಿಷಕ್ಕೆ ಕಳವಾದರೆ, ಮುನ್ನೂರಿನ ಮದನಿ ನಗರದಲ್ಲಿ ಗ್ಯಾರೇಜ್‌ನಲ್ಲಿಟ್ಟಿದ್ದ ಸ್ಕೂಟರ್ ಕಳವಾಗಿದೆ. ನಾಗುರಿಯಲ್ಲಿ ಪಾರ್ಕ್ ಮಾಡಿದ 35 ನಿಮಿಷದೊಳಗೆ ಡೆಲಿವರಿ ಬಾಯ್ ಯ ಸ್ಕೂಟರ್ ಕಳವುಗೊಂಡಿದೆ.
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಗೆ ಮಂಗಳೂರು ಜಿಲ್ಲೆ ಎಂದು ಮರು ನಾಮಕರಣ ಮಾಡಲು ಸರಕಾರವನ್ನು ಆಗ್ರಹಿಸುವುದಾಗಿ ಮಂಗಳೂರು ಜಿಲ್ಲೆ ತುಳುಪರ ಹೋರಾಟ ಸಮಿತಿಯ ಮುಖಂಡ ದಯಾನಂದ ಕತ್ತಲ್ ಸಾರ್ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಗೆ ‘ಮಂಗಳೂರು’ ಎಂದು ಮರು ನಾಮಕರಣ ಮಾಡುವ ಹೋರಾಟಕ್ಕೆ ಸಮಿತಿ ರಚಿಸಲಾಗಿದೆ. ಇದರಲ್ಲಿ ಪದಾಧಿಕಾರಿಗಳ ನೇಮಕ ಮಾಡಿಲ್ಲ ಪಕ್ಷಾತೀತವಾಗಿ ಎಲ್ಲರನ್ನೂ ಒಳಗೊಂಡ ಸಮಿತಿಯಾಗಿದೆ ಎಂದು ದಯಾನಂದ ಕತ್ತಲ್ ಸಾರ್ ತಿಳಿಸಿದ್ದಾರೆ. ಸಾರ್ವತ್ರಿಕವಾಗಿ ತುಳುನಾಡು ಎಂದು ಈಗಿನ ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡನ್ನು ಒಳಗೊಂಡ ಭೂಭಾಗಕ್ಕೆ ರಾಜಕೀಯ ಮತ್ತು ಸಾಂಸ್ಕೃತಿಕ ನೆಲೆಗಟ್ಟಿನಲ್ಲಿ ಹೆಸರು ಇತ್ತು. ಸುಮಾರು 2,000 ವರ್ಷಗಳ ಹಿಂದೆ ತಮಿಳಿನ ಸಂಗಂ ಸಾಹಿತ್ಯವಾದ ಅಗನಾನೂರು’ ಎಂಬ ಕಾವ್ಯಮಾಲೆಯ 13ನೇ ಪದ್ಯದಲ್ಲಿ ತುಳುನಾಡು ಎಂಬ ಉಲ್ಲೇಖವಿರುವುದು ನಮ್ಮ ಪ್ರದೇಶದ ಪುರಾತನ ದಾಖಲೆಯಾಗಿದೆ. ಮುಂದೆ ಅಳುಪರು, ಪಲ್ಲವರು, ಹೊಯ್ಸಳರು, ವಿಜಯನಗರ, ಕೆಳದಿ ರಾಜರು ತುಳು ವಿಷಯ, ತುಳು ದೇಶ, ತುಳು ರಾಜ್ಯ ಎಂದು ನಮ್ಮ ಅವಿಭಜಿತ…
ಕೊಣಾಜೆ : ಯುವವಾಹಿನಿ ಗ್ರಾಮಚಾವಡಿ ಕೊಣಾಜೆ ಘಟಕದ 2025-26ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಗ್ರಾಮಚಾವಡಿ ನಾರಾಯಣ ಗುರು ಸಮುದಾಯ ಭವನದಲ್ಲಿ ರವಿವಾರ ನಡೆಯಿತು. ಯುವವಾಹಿನಿ ಗ್ರಾಮಚಾವಡಿ-ಕೊಣಾಜೆ ಘಟಕದ ಅಧ್ಯಕ್ಷ ಹರೀಶ್ ಪೂಜಾರಿ ಕೊಣಾಜೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಗ್ರಾಮಚಾವಡಿ ಕೊಣಾಜೆ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘದ ಅಧ್ಯಕ್ಷ ರವೀಂದ್ರ ಬಂಗೇರ ಕೊಣಾಜೆ ಸಭಾ ಕಾರ್ಯಕ್ರಮ ಉದ್ಘಾಟಿಸಿದರು. ಪ್ರಥಮ ಉಪಾಧ್ಯಕ್ಷ ವಿಜೇತ್ ಪಜೀರ್ ಸ್ವಾಗತಿಸಿದರು. ಕಾರ್ಯದರ್ಶಿ ಅಜಿತ್ ಪೂಜಾರಿ ಪಜೀರ್ ವರದಿ ವಾಚಿಸಿದರು. ಯುವವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷ ಲೋಕೇಶ್ ಕೋಟ್ಯಾನ್ ಪ್ರತಿಜ್ಞಾ ವಿಧಿ ಬೋಧಿಸಿದರು. ಈ ಸಂದರ್ಭ ಮಂಜನಾಡಿ ದುರಂತ ಸಂತ್ರಸ್ತ ಕುಟುಂಬಕ್ಕೆ ಧನಸಹಾಯದ ಚೆಕ್ ಹಸ್ತಾಂತರಿಸಲಾಯಿತು. ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯಲ್ಲಿ ಅತ್ಯಧಿಕ ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ಕ್ರೀಡೆ ಸಾಂಸ್ಕೃತಿಕ ಹಾಗೂ ವಿವಿಧ ಕ್ಷೇತ್ರದ ಸಾಧಕರು ಸಮಾಜ ಸೇವಕರು, ನವದಂಪತಿಗಳನ್ನು ಸನ್ಮಾನಿಸಲಾಯಿತು. ಮಣಿಪಾಲ್ ಕಾಲೇಜ್ ಆಫ್…
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಮಂಗಳೂರು ಇದರ ವತಿಯಿಂದ ಅಪಘಾತದಿಂದ ಒಂದು ಕಾಲು ಮುರಿತಕ್ಕೆ ಒಳಗಾದ ಸಂಘದ ಸದಸ್ಯರಾದ ಲತೀಶ್ ಕುಮಾರ್ ಕೆ ಇವರಿಗೆ ನಿತ್ಯ ಸಂಚಾರಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ಕೊಡುಗೆಯಾಗಿ ಸ್ಕೂಟರ್‌ನ್ನು ಹಸ್ತಾಂತರಿಸುವ ಕಾರ್ಯಕ್ರಮವು ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ರವರ ಅಧ್ಯಕ್ಷತೆಯಲ್ಲಿ ಸಂಘದ ಪ್ರಧಾನ ಕಚೇರಿ “ಆತ್ಮಶಕ್ತಿ ಸೌಧ” ಬೈರಾಡಿಕೆರೆ, ಪಡೀಲ್‌ನಲ್ಲಿ ಜರುಗಿತು. ಸ್ಕೂಟರ್ ಹಸ್ತಾಂತರ ಕಾರ್ಯಕ್ರಮವನ್ನು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾ ಗ್ಯಾರೇಜ್ ಮಾಲಕರ ಸಂಘದ ಅಧ್ಯಕ್ಷರಾದ ದಿನಕರ್ ಕುಲಾಲ್ ರವರು ನಡೆಸಿಕೊಟ್ಟರು.ಈ ಕಾರ್ಯಕ್ರಮದಲ್ಲಿ ಸಂಘದ ಆಡಳಿತ ಮಂಡಳಿಯ ಉಪಾಧ್ಯಕ್ಷರಾದ ನೇಮಿರಾಜ್ ಪಿ, ನಿರ್ದೇಶಕರಾದ ಜಿ. ಪರಮೇಶ್ವರ ಪೂಜಾರಿ, ಸೀತಾರಾಮ್ ಎನ್, ರಮಾನಾಥ್ ಸನಿಲ್, ಮುದ್ದು ಮೂಡುಬೆಳ್ಳೆ, ಗೋಪಾಲ್ ಎಂ, ಮುಖ್ಯಕಾರ್ಯನಿರ್ವಹಣಾಧಿಕಾರಿ ಸೌಮ್ಯ ವಿಜಯ್, ಸಲಹೆಗಾರರಾದ ಅಶೋಕ್ ಕುಮಾರ್, ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಮತ್ತು ಪ್ರಕಾಶನ ಮತ್ತು ಚಾರಿಟೇಬಲ್ ಟ್ರಸ್ಟ್ ಇದರ ಗೌರವ ಅಧ್ಯಕ್ಷರಾದ ವಾಮನ್ ಕೆ., ದಕ್ಷಿಣ ಕನ್ನಡ ಗ್ಯಾರೇಜ್…

