ಶ್ರೀ ಕೃಷ್ಣ ಭಜನಾ ಮಂದಿರ (ರಿ) ಸುದರ್ಶನ ನಗರ ಪಜೀರು ಇದರ 2025- 2026ರ ಸಾಲಿಗೆ ನೂತನ ಅಧ್ಯಕ್ಷರಾಗಿ ನಾಲ್ಕನೇ ಅವಧಿಗೆ ವಿಜೇತ್ ಪಜೀರು ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಜಯಾನಂದ ಶೆಟ್ಟಿ ಪ್ರಧಾನ ಕಾರ್ಯದರ್ಶಿಯಾಗಿ ಶಿವ ಪ್ರಸಾದ್ ಚೌಟ, ಜತೆ ಕಾರ್ಯದರ್ಶಿಯಾಗಿ ಮಿಥುನ್ ಪಜೀರು, ಕೋಶಾಧಿಕಾರಿಯಾಗಿ ಯಶೋಧರ ಜೆ., ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ನಿರ್ಮಲ್ ಭಟ್ ವೈ., ಲೆಕ್ಕ ಪರಿಶೋಧಕರಾಗಿ ತಾರನಾಥ ವರ್ಮ, ಗೌರವ ಸಲಹೆಗಾರರಾಗಿ ಲಕ್ಷ್ಮಣ್ ಸಾಲ್ಯಾನ್, ಸೀತಾರಾಮ ಶೆಟ್ಟಿ, ಸೇಸಪ್ಪ ಪೂಜಾರಿ, ಆಂಡಿ, ಜಯರಾಮ ಶೆಟ್ಟಿ, ಸುಂದರ ಸಪಲ್ಯ, ತುಕ್ಕೋಜಿ ರಾವ್, ಭಜನ ಸಂಚಾಲಕರಾಗಿ ವಸಂತ್ ಜಿ., ಪಿ.ಕೆ.ರಾಮ, ಗಂಗಾಧರ ಪೂಜಾರಿ,. ಸಂಘಟನ ಕಾರ್ಯದರ್ಶಿಗಳಾಗಿ ಪುಷ್ಪ ರಾಜ್, ಮನೋಜ್, ಸತೀಶ್, ರವಿ ಭಂಡಾರಿ, ಭವಾನಿ ಶಂಕರ್, ಅನೂಪ್ ಮತ್ತು ಕಾರ್ಯಕಾರಿ ಸಮಿತಿ ಸದಸ್ಯರನ್ನು ಆಯ್ಕೆ ಮಾಡಲಾಯಿತು.
Author: UllalaVani
ಉಳ್ಳಾಲ: ಜು. 2 ರಂದು ರಾತ್ರಿ ಮಲಗುವ ಕೊಠಡಿ ಯಿಂದ ನಾಪತ್ತೆಯಾದ ಬೀರಿ ನಿವಾಸಿ ಯುವಕನ ಮೃತ ದೇಹ ಉಚ್ಚಿಲ ರೈಲ್ವೇ ಗೇಟ್ ಸಮೀಪ ಪತ್ತೆಯಾಗಿದೆ. ಮೇಲ್ನೋಟಕ್ಕೆ ಇದೊಂದು ಆತ್ಮಹತ್ಯೆ ಪ್ರಕರಣ ಎಂದು ತಿಳಿದು ಬಂದಿದೆ. ಕೋಟೆಕಾರು ಬೀರಿ ನಿವಾಸಿ ಮೋಹದಾಸ್ ಅಮೀನ್ ಎಂಬವರ ಪುತ್ರ ತೇಜಸ್(25) ಜು.2ರಂದು ರಾತ್ರಿ ಮಲಗುವ ಕೋಣೆಯಿಂದ ನಾಪತ್ತೆಯಾಗಿದ್ದನು.ಈ ಕುರಿತು ತಂದೆಯವರು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದರು. ಇಂದು ಬೆಳಿಗ್ಗೆ ರೈಲ್ವೇ ಹಳಿಯಲ್ಲಿ ಮೃತ ದೇಹ ಪತ್ತೆಯಾಗಿದೆ. ರೈಲ್ವೇ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.ಮೃತ ಯುವಕ ಮಣಿಪಾಲ ಶಿಕ್ಷಣ ಸಂಸ್ಥೆಯೊಂದರ ವಿದ್ಯಾರ್ಥಿಯಾಗಿದ್ದಾರೆ ಎಂದು ತಿಳಿದು ಬಂದಿದ್ದು ಘಟನೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ.
ಮಂಗಳೂರು : ಮೆಟ್ರಿಕ್ ನಂತರದ ಹಾಗೂ ಮೆರಿಟ್ -ಕಂ-ಮೀನ್ಸ್ ಕೋರ್ಸ್‌ಗಳಲ್ಲಿ ವ್ಯಾಸಂಗ ಮಾಡುತ್ತಿರುವ ರಾಜ್ಯದ ಅರ್ಹ ಅಲ್ಪಸಂಖ್ಯಾತರ ಮುಸ್ಲಿಮ್, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ ವಿದ್ಯಾರ್ಥಿಗಳಿಂದ 2025-26ನೇ ಸಾಲಿಗೆ ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶ(SSP)ದಲ್ಲಿ ಶುಲ್ಕ ಮರು ಪಾವತಿ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ.ವಿದ್ಯಾರ್ಥಿಗಳು ಕರ್ನಾಟಕದ ನಿವಾಸಿಯಾಗಿರಬೇಕು. ಹಿಂದಿನ ವರ್ಷದ ವಾರ್ಷಿಕ ಪರೀಕ್ಷೆಯಲ್ಲಿ ಕನಿಷ್ಠ ಶೇ.50 ಅಂಕಗಳನ್ನು ಪಡೆದಿರಬೇಕು ಹಾಗೂ ಕುಟುಂಬದ ವಾರ್ಷಿಕ ಆದಾಯ ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ 2 ಲಕ್ಷ ರೂ. ಹಾಗೂ ಮೆರಿಟ್-ಕಂ-ಮೀನ್ಸ್ ವಿದ್ಯಾರ್ಥಿಗಳಿಗೆ 2.50 ಲಕ್ಷ ಒಳಗಿರಬೇಕು. SSP 5 https://ssp.postma- tric.karnataka.gov.in ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಇಲಾಖೆಯ ವೆಬ್‌ಸೈಟ್ https://dom. karnataka.gov.in SSP https:// ssp.postmatric.karnataka.gov.in : 8277799990 ಅಥವಾ ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರವನ್ನು ಸಂಪರ್ಕಿಸಬಹುದು ಎಂದು ಪ್ರಕಟನೆ ತಿಳಿಸಿದೆ.
ಉಳ್ಳಾಲ : ಕುಡಿತದ ನಶೆಯಲ್ಲಿ ಮನೆಯ ಷೋಕೇಸ್ ಗಾಜು ಕೈಯ್ಯಲ್ಲೇ ಹೊಡೆದು ಒಡೆದ ಪರಿಣಾಮ ವಿವಾಹಿತನೋರ್ವ ತೀವ್ರ ರಕ್ತಸ್ರಾವ ಉಂಟಾಗಿ ಸಾವನ್ನಪ್ಪಿರುವ ಘಟನೆ ಮಾಡೂರು ಸೈಟ್ ನಲ್ಲಿ ನಿನ್ನೆ ತಡರಾತ್ರಿ ವೇಳೆ ಸಂಭವಿಸಿದೆ. ಮಾಡೂರ್ ಸೈಟ್ ನಿವಾಸಿ ಸತೀಶ್ ನಾಯಕ್ ಎಂಬವರ ಪುತ್ರ ನಿತೇಶ್ ನಾಯಕ್ (38) ಸಾವನ್ನಪ್ಪಿದವರು. ಕೋಟೆಕಾರು ಬೀರಿ ಜಂಕ್ಷನ್ ಸಮೀಪವೇ ತಂದೆ, ಸಹೋದರನ ಜೊತೆಗೆ ಗಲಾಟೆ ನಡೆಸುತ್ತಾ ಬಂದಿದ್ದ ನಿತೇಶ್, ಮನೆಯಲ್ಲಿಯೂ ಸಹ ನಿತ್ಯದಂತೆ ಗಲಾಟೆ ನಡೆಸುತ್ತಿದ್ದರೆಂದು ತಿಳಿದುಬಂದಿದೆ. ಈ ವೇಳೆ ಆಕ್ರೋಶದಿಂದ ಮನೆಯೊಳಗಿರುವ ಷೋಕೇಸ್ ಗಾಜನ್ನು ಒಡೆದಿದ್ದರಿಂದಾಗಿ, ಷೋಕೇಸ್ ಗಾಜು ಒಡೆದು ಕೈ ಪ್ರಮುಖ ನರಕ್ಕೆ ತಗಲಿ ತೀವ್ರ ರಕ್ತಸ್ರಾವ ಉಂಟಾಗಿ ಮೃತಪಟ್ಟಿದ್ದಾರೆ. ನಿತೇಶ್, ಸಹೋದರ ಇಬ್ಬರೂ ತಿಂಡಿ ಲೈನ್ ಸೇಲ್ ನಡೆಸುತ್ತಿದ್ದರು. ನಿನ್ನೆಯೂ ಕರ್ತವ್ಯ ಮುಗಿಸಿ ಮನೆಗೆ ವಾಪಾಸ್ಸಾದ ಬಳಿಕ ಗಲಾಟೆ ನಡೆಸಿದ್ದರು.ವಿವಾಹಿತರಾಗಿದ್ದ ಅವರು ಪತ್ನಿ ಜೊತೆಗೆ ವಿಚ್ಛೇದನ ಹೊಂದಿದ್ದರು.ಮೃತರ ತಾಯಿ ನೀಡಿದ ದೂರಿನಂತೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಳ್ಳಾಲ : ಭಾರತ್ ಕಿಶೋರ್ ಟೈಟಲ್ ವಿಜೇತ ದೇಹದಾರ್ಡ್ಯ ಪಟು ರೈಲ್ವೇ ಉದ್ಯೋಗಿ ಜಲ್ಲಿಗುಡ್ಡೆ ನಿವಾಸಿ ಸಂತೋಷ್ ಕುಮಾರ್ ಉಳ್ಳಾಲ್ (52) ಹುಬ್ಬಳ್ಳಿಯಲ್ಲಿ ಗುರುವಾರ ಹೃದಯಾಘಾತದಿಂದ ನಿಧನ ಹೊಂದಿದರು. ಮೃತರು ಪತ್ನಿ , ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಮೂಲತಃ ಉಳ್ಳಾಲ ಉಳಿಯ ನಿವಾಸಿಯಾಗಿದ್ದ ಸಂತೋಷ್ ಕುಮಾರ್ ತೊಕ್ಕೊಟ್ಟಿನ ಶಕ್ತಿಭಾರತ್ ವ್ಯಾಯಾಮ ಶಾಲೆಯಲ್ಲಿ ತರವೇತಿ ಪಡೆದು ರಾಜ್ಯ ರಾಷ್ಟ್ರ ಮಟ್ಟದ ದೇಹದಾರ್ಡ್ಯ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಶಸ್ತಿಯನ್ನು ಪಡೆದಿದ್ದ ಅವರು ಕರ್ನಾಟಕ ಉದಯ, ಭಾರತ್ ಕಿಶೋರ್ ಟೈಟಲ್ ವಿಜೇತರಾಗಿದ್ದರು. ರೈಲ್ವೇ ಇಲಾಖೆಯಲ್ಲಿ ಉದ್ಯೋಗದಲ್ಲಿದ್ದ ಅವರು ದೇಹದಾರ್ಡ್ಯಪಟುವಾಗಿ ರೈಲ್ವೇಯನ್ನು ಪ್ರತಿನಿಧಿಸಿದ್ದರು. ಮಂಗಳೂರು ರೈಲ್ವೇ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಅವರು ಹುಬ್ಬಳ್ಳಿಯಲ್ಲಿ ಮೀಟಿಂಗ್‌ನಲ್ಲಿ ಭಾಗವಹಿಸಲು ತನ್ನ ಸಹೋದ್ಯೋಗಿಯೊಂದಿಗೆ ತೆರಳುತ್ತಿದ್ದಾಗ ಹೃದಯಾಘಾತದಿಂದ ನಿಧನ ಹೊಂದಿದರು. ಅನೇಕ ಸಂಘ ಸಂಸ್ಥೆಗಳಲ್ಲಿ ತೊಡಗಿಸಿಕೊಂಡಿದ್ದರು.
ಕೊಣಾಜೆ : ಹಲವು ಪ್ರಕರಣಗಳಲ್ಲಿ ವಾರೆಂಟ್ ಎದುರಿಸುತ್ತಾ ಪೊಲೀಸರಿಗೆ ಬೇಕಾಗಿದ್ದ ಆರೋಪಿ ಕಸಬಾ ಬೆಂಗ್ರೆ ನಿವಾಸಿ ಅಬ್ದುಲ್ ಕಬೀರ್ ಯಾನೆ ಪಾರಿವಾಳ ಕಬೀರ್ (35) ಎಂಬಾತನನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದು ಕೊಣಾಜೆ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ.ಆರೋಪಿ ಬಳಿಯಿಂದ 12 ಗ್ರಾಂ ತೂಕದ ಎಂಡಿಎಂಎ ವಶಕ್ಕೆ ಪಡೆದುಕೊಳ್ಳಲಾಗಿದೆ. ಆರೋಪಿ ವಿರುದ್ಧ ಉಳ್ಳಾಲ, ಕೊಣಾಜೆ, ಕಂಕನಾಡಿ, ಬಜಪೆ, ಪಣಂಬೂರು, ಮಂಗಳೂರು ದಕ್ಷಿಣ, ಮಂಗಳೂರು ಉತ್ತರ, ಮಂಗಳೂರು ಪಶ್ಚಿಮ, ಉಪ್ಪಿನಂಗಡಿ, ಪೊಲೀಸ್ ಠಾಣೆಗಳಲ್ಲಿ ಸೇರಿ ಜಾನುವಾರು ಕಳವಿಗೆ ಸಂಬಂಧಿಸಿ 14 ಪ್ರಕರಣಗಳಿವೆ. ದೇವಸ್ಥಾನವೊಂದರ ಹಸು ಕದ್ದ ಪ್ರಕರಣಕ್ಕೆ ಸಂಬಂಧಿಸಿ ಮಂಗಳೂರು ದಕ್ಷಿಣ ಮತ್ತು ಉತ್ತರ ಠಾಣೆಗಳಲ್ಲಿ ಪ್ರಕರಣವಿದೆ. 2019ರ ಜೂ.30 ರಂದು ಕಸಬಾ ಬೆಂಗ್ರೆಯಿಂದ ಆರೋಪಿಯನ್ನು ಬಂಧಿಸಿ ಉಳ್ಳಾಲ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿತ್ತು. 2022 ರಲ್ಲಿ ಆ.22 ರಂದು ಸಿಸಿಬಿ ಪೊಲೀಸರು ಬಂಧಿಸಿದ್ದರು. ಇದೇ ವೇಳೆ ಸಿಸಿಬಿ ಪೊಲೀಸರ ಮೇಲೆ ದಾಳಿ ನಡೆಸಿದ ಪ್ರಕಣಕ್ಕೆ ಸಂಬಂಧಿಸಿ ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಟೋರಿಯಸ್ ಆರೋಪಿ…
ಮಂಗಳೂರು : ಪುತ್ತೂರಿನ ಸಂಘ ಪರಿವಾರದ ನೇತಾರ ಬಿಜೆಪಿ ನಾಯಕನ ಪುತ್ರ ಪ್ರೀತಿಯ ನಾಟಕವಾಡಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿ ಸಂತ್ರಸ್ತೆಗೆ ನ್ಯಾಯ ಸಿಗುವವರೆಗೂ ಕಾನೂನಾತ್ಮಕ ಹೋರಾಟದಲ್ಲಿ ಯುವತಿಯ ಕುಟುಂಬಕ್ಕೆ ಸಹಕಾರ ನೀಡುವುದಾಗಿ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾದ ದ.ಕ. ಜಿಲ್ಲಾ ಸಮಿತಿ ಹೇಳಿದೆ. ನಗರದ ಪ್ರೆಸ್‌ಕ್ಲಬ್‌ನಲ್ಲಿ ಗುರುವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಸಮಿತಿಯ ಅಧ್ಯಕ್ಷ ಎಂ. ದಿವಾಕರ ರಾವ್, ಸಂತ್ರಸ್ತೆಯ ಹೊಟ್ಟೆಯಲ್ಲಿದ್ದ ಮಗುವನ್ನು ಕೊಲ್ಲಲು ಪ್ರೇರಣೆ ನೀಡಿದ್ದಾರೆನ್ನಲಾದ ಆರೋಪಿಯ ತಂದೆ, ಹಾಗೂ ಸಂತ್ರಸ್ತೆಯ ತಾಯಿ ಆರೋಪಿಸಿದ ವೈದ್ಯರ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿದರು. ಭೂಗತನಾಗಿರುವ ಆರೋಪಿ ಯುವಕ ಸಂತ್ರಸ್ತ ಯುವತಿಯ ಬೇಡಿಕೆಯಂತೆ ಆಕೆಯನ್ನು ವಿವಾಹವಾಗಲು ಒಪ್ಪಿಕೊಳ್ಳಬೇಕು. ಸ್ಥಳೀಯ ಶಾಸಕರು ಈ ವಿವಾಹದ ಜವಾಬ್ದಾರಿ ವಹಿಸಬೇಕು. ಇಲ್ಲವಾದಲ್ಲಿ ಆರೋಪಿಯ ತಂದೆ ಬಿಜೆಪಿಯ ಮುಖಂಡ ಜಗನ್ನಿವಾಸ್ ರಾವ್ ಅವರ ಮನೆಯ ಎದುರು ನ್ಯಾಯ ಬಯಸುವ ಸಂಘಟನೆಗಳನ್ನು ಜತೆಗೂಡಿಸಿಕೊಂಡು ಪ್ರತಿಭಟನೆ ನಡೆಸುವುದಾಗಿ ಹೇಳಿದರು. ಜಿಲ್ಲೆಯಲ್ಲಿ ಯಾವುದೇ ಘಟನೆ ನಡೆದರೆ, ಪ್ರತಿಭಟನೆ, ಬಂದ್ ಮೊದಲಾದ ಪ್ರತಿಭಟನೆ ನಡೆಸುವ…
ದ.ಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ತೊಕ್ಕೊಟ್ಟಿನ ಶ್ರೀ ಸಾಯಿ ಪರಿವಾರ್ ಟ್ರಸ್ಟ್ ಅಂಬಿಕಾರೋಡ್ ಗಟ್ಟಿ ಸಮಾಜ ಭವನದಲ್ಲಿ ಆಯೋಜಿಸಿದ ಅದ್ದೂರಿ ತ್ರಿವಳಿ ಜಿಲ್ಲಾ ಮಟ್ಟದ ಕುಣಿತ ಭಜನಾ ಸ್ಪರ್ಧೆ ಸುಗಿತ್ ನಲಿಪುಗ ಎಸಲ್ 2 ಇದರ ಪ್ರಥಮ ಸ್ಥಾನಿಯಾಗಿ ಹೊಸಬೆಟ್ಟಿನ ಶ್ರೀ ಬಾಲವಿಕಾಸ ಭಜನಾ ಮಂಡಳಿ ಪ್ರಶಸ್ತಿ ಗಳಿಸಿದೆ. ದ್ವಿತೀಯ ಶ್ರೀ ಈಶ್ವರಿ ಭಜನಾ ಮಂಡಳಿ ಪೊಳಲಿ, ತೃತೀಯ ಶ್ರೀ ರಾಮ ಮುಖ್ಯಪ್ರಾಣ ಕುಣಿತ ಭಜನಾ ತಂಡ ಕೋಡಿಕಲ್, ಚತುರ್ಥ, ಶ್ರೀ ಅಯ್ಯಪ್ಪ ಭಜನಾ ಮಂಡಳಿ ಮುಂಡ್ಕೂರು ಆಕರ್ಷಕ ಫಲಕ ಹಾಗು ನಗದು ಬಹುಮಾನ ಪಡೆದುಕೊಂಡಿದೆ.ಹಾಗೆಯೇ 5 ತಂಡಗಳು ಸಮಾಧಾನಕರ ಬಹುಮಾನಗಳು ಶ್ರೀರಾಮ ಮಕ್ಕಳ ಕುಣಿತ ಭಜನಾ ತಂಡ ಕೋಡಿಕಲ್, ಶ್ರೀ ಶೇಷಶಯನ ಭಜನಾ ಮಂಡಳಿ ಕೋಡಿಕಲ್, ಶ್ರೀ ಮಹಾಲಿಂಗೇಶ್ವರ ಭಜನಾ ಮಂಡಳಿ, ಕಲ್ಲಮುಂಡ್ಕೂರು ಮೂಡಬಿದ್ರೆ, ಶ್ರೀನಿವಾಸ ಮಕ್ಕಳ ಕುಣಿತ ಭಜನಾ ತಂಡ ಕೊಡೆತ್ತೂರು ಕಟೀಲು, ಸೀತರಾಮ ಭಜನಾ ಮಂಡಳಿ, ನಾರಾಳ.ಸುಮಾರು 32 ತಂಡಗಳು ಭಾಗವಹಿಸಿದ್ದವು.
ಮಂಗಳೂರು : 1975ರಲ್ಲಿ ಅಸ್ತಿತ್ವಕ್ಕೆ ಬಂದು ಐದು ದಶಕಗಳ ಯಶಸ್ವಿ ಪಯಣವನ್ನು ಪೂರ್ಣಗೊಳಿಸುತ್ತಿರುವ ಮಂಗಳೂರು ಆಟೋರಿಕ್ಷಾ ಮತ್ತು ಕಾರು ಚಾಲಕರ ಸಹಕಾರಿ ಸಂಘ ನಿಯಮಿತ (MACO) ತನ್ನ ಸುವರ್ಣ ಮಹೋತ್ಸವದ ಅಂಗವಾಗಿ ತೊಕ್ಕೊಟ್ಟು – ಪೆರ್ಮನ್ನೂರು ಪ್ರದೇಶದಲ್ಲಿ ಹೊಸ ಶಾಖೆಯನ್ನು ಅತೀ ಶೀಘ್ರದಲ್ಲಿ ಪ್ರಾರಂಭಿಸಲು ಸಿದ್ಧತೆ ನಡೆಸುತ್ತಿದೆ. ಹೊಸ ಶಾಖೆ ಸಂತ ಸೆಬಾಸ್ಟಿಯನ್ ಚರ್ಚ್ ಆಡಿಟೋರಿಯಂ ವಾಣಿಜ್ಯ ಕಟ್ಟಡದಲ್ಲಿ, ತೊಕ್ಕೊಟ್ಟು ಒಳಪೇಟೆಯಲ್ಲಿ ಕಾರ್ಯಾರಂಭ ಮಾಡುವುದಾಗಿ ಸಂಘ ತಿಳಿಸಿದೆ. (ಸಂಪರ್ಕ: 8762597057) ಸಂಘದ ಇತಿಹಾಸ ಮತ್ತು ವಿಸ್ತರಣೆ:1975ರ ಡಿಸೆಂಬರ್‌ನಲ್ಲಿ ಸಂತ ಕ್ರಿಸ್ಟೋಫರ್ ಅಸೋಸಿಯೇಶನ್ ಕಟ್ಟಡದಲ್ಲಿ ಸ್ಥಾಪನೆಯಾದ ಈ ಸಹಕಾರಿ ಸಂಘವು ಕಳೆದ 50 ವರ್ಷಗಳಲ್ಲಿ ಸದಸ್ಯರ ಸಹಕಾರದಿಂದ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ತಾಲೂಕುಗಳಿಗೆ ತನ್ನ ಸೇವೆಯನ್ನು ವಿಸ್ತರಿಸಿದೆ. ಮಂಗಳೂರು, ಬಂಟ್ವಾಳ, ಪುತ್ತೂರು, ಕಡಬ, ಸುಳ್ಯ, ಮುಡುಬಿದ್ರೆ, ಮೂಲ್ಕಿ ಸೇರಿದಂತೆ ಹಲವೆಡೆ ಸಹಕಾರ ಸಂಘಗಳ ಉಪನಿಬಂಧಕರ ಅನುಮತಿಯಿಂದ ಕಾರ್ಯಕ್ಷೇತ್ರ ವಿಸ್ತರಣೆಗೊಂಡಿದೆ. ಸಂಘದ ಸೇವೆಗಳು:ಸಂಘವು ಸದಸ್ಯರಿಗೆ ಕಡಿಮೆ ಬಡ್ಡಿದರದಲ್ಲಿ ಬಿಕ್ಕಟ್ಟು ಸಾಲ, ಚಿನ್ನಾಭರಣ ಈಡಿನ…
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಹೆಸರು ಬದಲಾವಣೆಗೆ ಜನಾಗ್ರಹ ಹೆಚ್ಚಾಗುತ್ತಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಅಭಿಯಾನ ತೀವ್ರಗೊಳ್ಳುತ್ತಿದೆ. ತುಳು ಭಾಷಿಗರನ್ನು ಒಳಗೊಂಡ ಭೌಗೋಳಿಕ ಪ್ರದೇಶವನ್ನು ತುಳುನಾಡು’ ಎಂಬ ಪ್ರತ್ಯೇಕ ರಾಜ್ಯವನ್ನಾಗಿ ಮಾಡಬೇಕೆಂಬ ಜನಾಗ್ರಹದದ ಮಧ್ಯದಲ್ಲಿ ಈ ಭಾಗದ ತುಳುನಾಡು ಜಿಲ್ಲೆಗೆ ‘ದಕ್ಷಿಣ ಕನ್ನಡ’ ಎಂದು ಹೆಸರಿಟ್ಟವರು ಯಾರು ಎಂಬ ಕುತೂಹಲಕಾರಿ ಪ್ರಶ್ನೆಯೊಂದು ಎಲ್ಲೆಡೆ ಟಿಸಿಲೊಡೆಯಲು ಆರಂಭವಾಗಿದೆ. ಅಲ್ಲದೆ ದಕ್ಷಿಣ ಕನ್ನಡ ಹೆಸರು ಬದಲಾವಣೆಗೆ ಇಲ್ಲಿನ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಕೂಡಾ ಬ್ಯಾಟ್ ಬೀಸಿದ್ದು, ಅವರು ‘ಮಂಗಳೂರು ಜಿಲ್ಲೆ’ ಹೆಸರಿಡುವುದು ಸೂಕ್ತ ಎಂದು ನನ್ನ ವೈಯಕ್ತಿಕ ಅಭಿಪ್ರಾಯ ಎಂದು ಸೋಷಿಯಲ್ ಮೀಡಿಯಾದಲ್ಲಿ ಅಪ್‌ಲೋಡ್ ಮಾಡಿದ ವಿಡಿಯೋದಲ್ಲಿ ತಿಳಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಗೆ ಈ ಹೆಸರು ಬರುವ ಮುಂಚೆ ಸೌತ್ ಕೆನರಾ ಎಂದು ಕರೆಯಲಾಗುತ್ತಿತ್ತು. ಅದು ಕಾಲ ಕ್ರಮೇಣ ದಕ್ಷಿಣ ಕನ್ನಡ ಎಂದು ಬದಲಾಯಿತು. ಈ ಹೆಸರು ಹೇಗೆ ಬಂತೆಂದು ನನಗೆ ಇಂದಿಗೂ ಗೊತ್ತಿಲ್ಲ ಮಂಗಳಾದೇವಿ ದೇವಿಯಿಂದಾಗಿ ಇಲ್ಲಿಗೆ ಮಂಗಳೂರು ಜಿಲ್ಲೆ ಎಂದು…

