Author: UllalaVani

Kannada News From Coastal Karnataka

ಮಂಗಳೂರಿನಲ್ಲಿ ನಡೆಯುವ ಕೊಂಕಣಿ 5ನೇ ರಾಷ್ಟ್ರೀಯ ಚಾರೊಳಿ ಸಾಹಿತ್ಯ ಸಮ್ಮೇಳನದಲ್ಲಿ ಖ್ಯಾತ ಹಿರಿಯ ಕವಯತ್ರಿಯರಾದ ಮಂಗಳೂರಿನ ಅರುಂಧತಿ ವಿ ರಾವ್ ಮತ್ತು ಗೋವಾದ ಆನ್ನಿ ದೆ ಕೊಲ್ವಾಲೆ ಆಯ್ಕೆ ಆಗಿದ್ದಾರೆ ಎಂದು ಸಮ್ಮೇಳನದ ಅಧ್ಯಕ್ಷರಾದ ರೇಮಂಡ್ ಡಿಕೂನಾ ತಾಕೊಡೆ ಮಾಹಿತಿ ನೀಡಿದರು. ಅವರು ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ , ಜುಲೈ 19ರಂದು ಒಂದು ದಿನದ ಕೊಂಕಣಿ ಐದನೇ ಚಾರೊಳಿ ಸಾಹಿತ್ಯ ಸಮ್ಮೇಳನಕ್ಕೆ ದೆಹಲಿ, ಮಹಾರಾಷ್ಟ್ರ, ಗೋವಾ, ಕರ್ನಾಟಕ, ಕಾರವಾರ, ಕೇರಳ ಮತ್ತು ದುಬೈನ ಕವಿಗಳು ನೊಂದಾವಣೆ ಮಾಡಿದ್ದಾರೆ. ಹಿಂದಿನ ದಿನವೇ ಹೆಚ್ಚು ಜನರು ಬರುವುದರಿಂದ ಕವಿ ಗೋಷ್ಟಿ ಬೆಳಗ್ಗೆ ೮ ಗಂಟೆಗೇ ಖ್ಯಾತ ರಂಗಭೂಮಿ ತರಭೆತುದಾರ, ಕವಿ, ಕೊಂಕಣಿ ಶಿಕ್ಷಕ ಗೋವಾ ಕಾಣಕೋಣದ ಗೌರೀಶ ವರ್ಣೇಕರ್ ಚಾಲನೆ ಮಾಡಲಿದ್ದಾರೆ. ಉದ್ಘಾಟನೆ ಬೆಳಗ್ಗೆ ಹತ್ತು ಗಂಟೆಗೆ ಮಂಗಳೂರಿನ ಜಿಲ್ಲಾ ಪ್ರಧಾನ ನ್ಯಾಯವಾದಿ ಆಭಿಯೋಜಕ ಎಂಪಿ ನೊರೊನಾ ಅವರಿಂದ ನಡೆಯಲಿದೆ. ಮುಖ್ಯ ಅತಿಥಿ ಉದ್ಯಮಿ ವಿನ್ಸೆಂಟ್ ಕುತಿನೊ ಇರುತ್ತಾರೆ. ನಂತರ ಮತ್ತೆ ಕವಿಗೋಷ್ಟಿ…

Read More

ಬಂಟ್ವಾಳ; ಉಳ್ಳಾಲ ತಾಲೂಕು ಇರಾ ಕುಂಡಾವು ನಿವಾಸಿ ನಿವೃತ್ತ ಶಿಕ್ಷಕ ಗೋಪಾಲ ಮಾಸ್ಟರ್ (77) ಅವರು ಜುಲ್ಯ 10ರಂದು ನಿಧನ ಹೊಂದಿದರು. ಅವರು ಪತ್ನಿ ಹಾಗೂ ಮೂವರು ಪುತ್ರಿಯರನ್ನು ಆಗಲಿದ್ದಾರೆ. 1968 ರಲ್ಲಿ ಶಿಕ್ಷಕ ವೃತ್ತಿ ಆರಂಭಿಸಿದ ಅವರು ಸುಳ್ಯ, ನರಿಂಗಾನ, ಇರಾ, ಸುರಿಬೈಲ್, ಮುದುಂಗಾರುಕಟ್ಟೆ ಸರಕಾರಿ ಶಾಲೆಯಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸಿದ್ದರು. ಶಾಲಾ ಮುಖ್ಯೋಪಧ್ಯಾಯರಾಗಿ ಹಾಗೂ ಕ್ಷೇತ್ರ ಸಂಪನ್ಮೂಲ ವ್ಯಕ್ತಿಯಾಗಿ ಕರ್ತವ್ಯ ನಿರ್ವಹಿಸಿದ್ದರು. ಇರಾ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಅಭಿವೃದ್ಧಿಗಾಗಿ ಅವರು ವಿಶೇಷವಾಗಿ ಶ್ರಮಿಸಿದ್ದರು. ಶಿಸ್ತು ಹಾಗೂ ಅತ್ಯುತ್ತಮ ನಡತೆ ಬೋಧಿಸಿದ ಅವರ ಕಾರ್ಯವನ್ನು ಶ್ಲಾಘಿಸಿ ದ.ಕ ಜಿಲ್ಲಾ ಮಟ್ಟದಲ್ಲಿ ಉತ್ತಮ ಶಿಕ್ಷಕ ಪ್ರಶಸ್ತಿ ಸಹಿತ ಹಲವು ಗೌರವಗಳು ಅವರಿಗೆ ಸಂದಿವೆ. ಇರಾ ಶ್ರೀ ಸೋಮನಾಥೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಕಾರ್ಯದರ್ಶಿಯಾಗಿ ಹಾಗೂ ಕ್ಷೇತ್ರ ಅಭಿವೃದ್ಧಿ ಚಟುವಟಿಕೆಯಲ್ಲಿ ಅವರು ತೊಡಗಿಸಿಕೊಂಡಿದ್ದರು. ಇರಾ ಭಜನಾ ಮಂಡಳಿ ಸಹಿತ ಸ್ಥಳೀಯ ಸಂಘಸಂಸ್ಥೆಗಳಲ್ಲಿ ಅವರು ತೊಡಗಿಸಿಕೊಂಡಿದ್ದರು.

Read More

ಮಂಗಳೂರು, ಜು. 11: ಮಂಗಳೂರಿನ ಶಕ್ತಿನಗರದ ಶ್ರೀ ಕೃಷ್ಣ ಭಜನಾ ಮಂದಿರದಲ್ಲಿ ಕಳೆದ ವರ್ಷ ನಡೆದ ಧಾರ್ಮಿಕ ಕಾರ್ಯಕ್ರಮದ ವೇಳೆ ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಹಲ್ಲೆ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ವೇದವ್ಯಾಸ ಕಾಮತ್ ಹಾಗೂ ಇತರರ ವಿರುದ್ಧ ದಾಖಲಾಗಿದ್ದ ಪ್ರಥಮ ಮಾಹಿತಿ ವರದಿ (ಎಫ್‌ಐಆರ್)ಯನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ. ಕಳೆದ ವರ್ಷದ ಮಾರ್ಚ್‌ನಲ್ಲಿ ನಡೆದ ಘಟನೆಗೆ ಸಂಬಂಧಿಸಿ ಕಂಕನಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಎಫ್‌ಐಆರ್ ಅನ್ನು ಪ್ರಶ್ನಿಸಿ ಶಾಸಕ ವೇದವ್ಯಾಸ ಕಾಮತ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ವೇಳೆ ಕಾಮತ್ ಪರ ಹಿರಿಯ ವಕೀಲ ಅರುಣ್ ಶ್ಯಾಮ್ ವಾದ ಮಂಡಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ಹೈಕೋರ್ಟ್, ಶಾಸಕ ವೇದವ್ಯಾಸ ಕಾಮತ್ ಹಾಗೂ ಇತರ ಆರೋಪಿಗಳ ವಿರುದ್ಧ ದಾಖಲಿಸಲಾಗಿದ್ದ ಎಫ್‌ಐಆರ್ ಅನ್ನು ರದ್ದುಗೊಳಿಸಿ ಆದೇಶ ಹೊರಡಿಸಿದೆ. ಆದರೆ, ಎಫ್‌ಐಆರ್ ರದ್ದುಗೊಳಿಸಲು ನ್ಯಾಯಾಲಯ ಅನುಸರಿಸಿದ ಕಾನೂನು ಆಧಾರಗಳನ್ನು ಆದೇಶದಲ್ಲಿ ವಿವರಿಸಿಲ್ಲ.ತೀರ್ಪಿನ ಕುರಿತು ಪ್ರತಿಕ್ರಿಯಿಸಿರುವ ಶಾಸಕ ವೇದವ್ಯಾಸ ಕಾಮತ್, “ಇದು…

Read More

ದೇರಳಕಟ್ಟೆ: ಕೆ.ಎಸ್ ಹೆಗ್ಡೆ ಚಾರಿಟೇಬಲ್ ಆಸ್ಪತ್ರೆಯ ತಜ್ಞ ವೈದ್ಯರು ಮೇದೋಜ್ಜೀರಕ ಗ್ರಂಥಿ (ಪ್ಯಾಂಕ್ರಿಯಾಟಿಕ್) ಕ್ಯಾನ್ಸರ್‌ನಿಂದ ಬಳಲುತ್ತಿದ್ದ 57 ವರ್ಷದ ರೋಗಿಗೆ ಅತ್ಯಾಧುನಿಕ ರೋಬೋಟಿಕ್ ವಿಪ್ಪಲ್  ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ನಡೆಸುವ ಮೂಲಕ ಮತ್ತೊಂದು ಮಹತ್ವದ ವೈದ್ಯಕೀಯ ಸಾಧನೆ ಮಾಡಿದ್ದಾರೆ.ಹೊಟ್ಟೆನೋವು, ಕಾಮಾಲೆ ಹಾಗೂ ತೂಕ ಇಳಿಕೆಯ ಸಮಸ್ಯೆಯಿಂದ ಬಳಲುತ್ತಿದ್ದ ರೋಗಿಯು ಕೆ. ಎಸ್. ಹೆಗ್ಡೆ ಆಸ್ಪತ್ರೆಗೆ ದಾಖಲಾಗಿದ್ದರು. ವೈದ್ಯಕೀಯ ಗ್ಯಾಸ್ಟ್ರೋಎಂಟರಾಲಜಿ ಮತ್ತು ಹೆಪಟಾಲಜಿ ವಿಭಾಗದ ಮುಖ್ಯಸ್ಥರಾದ ಡಾ. ಚಂದ್ರಶೇಖರ್ ಸೊರಕೆ ಅವರು ಪರೀಕ್ಷಿಸಿದ ಬಳಿಕ ಸಿಟಿ ಸ್ಕ್ಯಾನ್, ಎಂಡೋಸ್ಕೋಪಿಕ್ ಅಲ್ಟ್ರಾಸೌಂಡ್ ಹಾಗೂ ಬಯಾಪ್ಸಿ ಪರೀಕ್ಷೆಗಳನ್ನು ನಡೆಸಲಾಯಿತು. ಈ ಪರೀಕ್ಷೆಗಳಲ್ಲಿ ರೋಗಿಗೆ ಮುಂದುವರಿದ ಹಂತದ ಪ್ಯಾಂಕ್ರಿಯಾಟಿಕ್ ಕ್ಯಾನ್ಸರ್ ಇರುವುದು ದೃಢಪಟ್ಟಿತು.ಈ ರೀತಿಯ ಕ್ಯಾನ್ಸರ್ ಚಿಕಿತ್ಸೆಗೆ ವಿವಿಧ ವಿಭಾಗಗಳ ತಜ್ಞ ವೈದ್ಯರ ಸಮನ್ವಯ ಅತ್ಯಗತ್ಯವಾಗಿದ್ದು, ವೈದ್ಯಕೀಯ ಹಾಗೂ ಶಸ್ತ್ರಚಿಕಿತ್ಸಾ ಗ್ಯಾಸ್ಟ್ರೋಎಂಟರಾಲಜಿ, ಆಂಕಾಲಜಿ, ರೇಡಿಯಾಲಜಿ, ಪೆಥಾಲಜಿ ಸೇರಿದಂತೆ ವಿವಿಧ ವಿಭಾಗಗಳ ವೈದ್ಯರು ರೋಗಿಯ ಸ್ಥಿತಿಯನ್ನು ಸಮಗ್ರವಾಗಿ ಪರಿಶೀಲಿಸಿದರು. ಕ್ಯಾನ್ಸರ್ ಮುಂದುವರಿದ ಹಂತದಲ್ಲಿದ್ದ ಕಾರಣ, ಶಸ್ತ್ರಚಿಕಿತ್ಸೆಗೆ ಮುನ್ನ ಗಡ್ಡೆಯ ಗಾತ್ರವನ್ನು…

Read More

ಕಡಬ, ಜು.10: ಸುಬ್ರಹ್ಮಣ್ಯ ಸಮೀಪದ ಅಜ್ಜಿಹಿತ್ಲು ಪ್ರದೇಶದ ಖಾಸಗಿ ಲಾಡ್ಜ್‌ನಲ್ಲಿ ತಂಗಿದ್ದ ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಮೃತರನ್ನು ರಾಮನಗರ ಜಿಲ್ಲೆಯ ಉಚ್ಚಮ್ಮನ ದೊಡ್ಡಿ ನಿವಾಸಿ ಮಧು ಎಸ್. (30) ಎಂದು ಗುರುತಿಸಲಾಗಿದೆ. ಪೊಲೀಸರ ಮಾಹಿತಿ ಪ್ರಕಾರ, ಮಧು ಎಸ್. ಅವರು ಜುಲೈ 8ರಂದು ಅಜ್ಜಿಹಿತ್ಲುವಿನ ಖಾಸಗಿ ಲಾಡ್ಜ್‌ನಲ್ಲಿ ಕೊಠಡಿ ಬಾಡಿಗೆಗೆ ಪಡೆದಿದ್ದರು. ಜುಲೈ 9ರಂದು ಸಂಜೆ ಲಾಡ್ಜ್ ಸಿಬ್ಬಂದಿ ಕೊಠಡಿ ಬಾಗಿಲು ತೆರೆಯುವಂತೆ ಹಲವು ಬಾರಿ ಕರೆದರೂ ಯಾವುದೇ ಪ್ರತಿಕ್ರಿಯೆ ದೊರಕಿಲ್ಲ. ಅನುಮಾನಗೊಂಡ ಸಿಬ್ಬಂದಿ ಕಿಟಕಿಯಿಂದ ಪರಿಶೀಲಿಸಿದಾಗ, ಕೊಠಡಿಯೊಳಗೆ ಮಧು ಎಸ್. ಅವರು ನೇಣು ಬಿಗಿದ ಸ್ಥಿತಿಯಲ್ಲಿ ಮೃತಪಟ್ಟಿರುವುದು ಕಂಡುಬಂದಿದೆ. ಈ ಕುರಿತು ಲಾಡ್ಜ್‌ನ ಅರ್ಜಿದಾರ ಜಗದೀಶ್ ಶಾಪಪಡ್ಪು ಅವರು ನೀಡಿದ ದೂರಿನ ಮೇರೆಗೆ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಯುಡಿಆರ್ ಸಂಖ್ಯೆ 15/2026 ದಾಖಲಿಸಲಾಗಿದೆ.

Read More

ಮಂಗಳೂರು, ಜು. 10:ಕರ್ನಾಟಕ ರಾಜ್ಯ ವಕೀಲರ ಪರಿಷತ್ತು ಬೆಂಗಳೂರು ಇದಕ್ಕೆ ನಡೆದ ಚುನಾವಣೆಯಲ್ಲಿ ಶ್ಯಾಮಲಾ ಭಂಡಾರಿ ಕುಂದಾಪುರ ಜಯಗಳಿಸಿದ್ದಾರೆ.  ದಕ್ಷಿಣ ಕನ್ನಡ ಜಿಲ್ಲೆ ಮತ್ತು ಉಡುಪಿ ಜಿಲ್ಲೆಯ ಇತಿಹಾಸ ದಲ್ಲೇ ಮಹಿಳಿಯೊಬ್ಬರು ರಾಜ್ಯ ವಕೀಲರ ಪರಿಷತ್ತಿಗೆ ಚುನಾಯಿತರಾಗಿ ಆಯ್ಕೆಯಾದದ್ದು ಇದೆ ಮೊದಲು. ಹಿರಿಯ ವಕೀಲರಾಗಿ ಸಾಮಾಜಿಕ ಹೋರಾಟಗಳ ಮೂಲಕ ಮಹಿಳಾ ರಾಜಕಾರಣದಲ್ಲಿ ವಿಶಿಷ್ಟ ವಾಗಿ ಸಾಮಾಜಿಕ ಶೈಕ್ಷಣಿಕ ಕಾನೂನು ಕ್ಷೇತ್ರಗಳು ಸೇರಿದಂತೆ ಹಲವಾರು ಸಂಘ ಸಂಸ್ಥೆ ಗಳಲ್ಲಿ ಗುರುತಿಸಿಕೊಂಡಿದ್ದಾರೆ.ಅಲ್ಲದೆ ಕರ್ನಾಟಕ ರಾಜ್ಯ ನೋಟರಿ ವಕೀಲರ ಸಂಘ ದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ

Read More

ಮಂಗಳೂರು: ಗ್ರಾಮ ಪಂಚಾಯತ್‌ಗಳಲ್ಲಿ ಹೆಚ್ಚುತ್ತಿರುವ ಹಸಿ ಕಸದ ಸಮಸ್ಯೆಗೆ ಶಾಶ್ವತ ಹಾಗೂ ಪರಿಸರ ಸ್ನೇಹಿ ಪರಿಹಾರ ಕಲ್ಪಿಸುವ ಉದ್ದೇಶದಿಂದ ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಂಗಳೂರು ಮಹಾನಗರ ಪಾಲಿಕೆ, ಸ್ವಚ್ಛ ಭಾರತ್ ಮಿಷನ್ (ಗ್ರಾಮೀಣ)–ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಹಸಿರು ದಳ, ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಬಲ್ಮಠದ ಸಹೋದಯ ಸಭಾಭವನದಲ್ಲಿ ಸಾವಯವ ಗೊಬ್ಬರ ತಯಾರಿ ತರಬೇತಿ ಕಾರ್ಯಕ್ರಮ ನಡೆಯಿತು. ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಜಯಲಕ್ಷ್ಮಿ ರಾಯಕೋಡ ಮಾತನಾಡಿ, ಹಸಿ ಕಸವನ್ನು ಮೂಲದಲ್ಲಿಯೇ ಪ್ರತ್ಯೇಕಿಸಿ ವೈಜ್ಞಾನಿಕವಾಗಿ ನಿರ್ವಹಿಸುವ ಮೂಲಕ ಸ್ವಚ್ಛ ಹಾಗೂ ಸುಸ್ಥಿರ ಗ್ರಾಮಗಳನ್ನು ನಿರ್ಮಿಸಬಹುದೆಂದು ತಿಳಿಸಿದರು. ಕೊಣಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ಗೀತಾ ದಾಮೋದರ್ ಹಾಗೂ ಪುದು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ರಮೀಝ್ ಬಾನು ಗ್ರಾಮ ಮಟ್ಟದಲ್ಲಿ ಹಸಿ ಕಸ ನಿರ್ವಹಣೆಯಲ್ಲಿ ಸಾರ್ವಜನಿಕರ ಸಕ್ರಿಯ ಸಹಭಾಗಿತ್ವ ಅಗತ್ಯವೆಂದು ಹೇಳಿದರು. ಸಂಪನ್ಮೂಲ ವ್ಯಕ್ತಿಗಳಾದ ರಮೇಶ್ ನೂಜಿಪ್ಪಾಡಿ ಹಾಗೂ ಅಶ್ವಿನಿ ಕೆ. ಭಟ್ ಅವರು ಎರೆಹುಳ…

Read More

ಉಡುಪಿ : ಶಾಲಾ ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಖಾಸಗಿ ಶಾಲಾ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ತೋಡಿಗೆ ಉರುಳಿ ಬಿದ್ದ ಪರಿಣಾಮ ಏಳು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಶುಕ್ರವಾರ ಬೆಳಗ್ಗೆ ಸರಳೆಬೆಟ್ಟು–ಕೊಡಂಗೆ ದೇವಸ್ಥಾನದ ಸಮೀಪ ನಡೆದಿದೆ. ಮಣಿಪಾಲದ ಕ್ರೈಸ್ಟ್ ಆಂಗ್ಲ ಮಾಧ್ಯಮ ಶಾಲೆಗೆ ಸೇರಿದ ಬಸ್ ಎಂದಿನಂತೆ ವಿದ್ಯಾರ್ಥಿಗಳನ್ನು ಶಾಲೆಗೆ ಕರೆದೊಯ್ಯುತ್ತಿದ್ದ ವೇಳೆ, ಕೊಡಂಗೆ ದೇವಸ್ಥಾನದ ಸಮೀಪದ ಕಿರಿದಾದ ತಿರುವಿನಲ್ಲಿ ಚಾಲಕ ಬಸ್‌ನ್ನು ರಿವರ್ಸ್ ತೆಗೆಯುವಾಗ ನಿಯಂತ್ರಣ ತಪ್ಪಿ ಪಕ್ಕದ ತೋಡಿಗೆ ಉರುಳಿದೆ ಎಂದು ತಿಳಿದುಬಂದಿದೆ. ಅಪಘಾತದ ವೇಳೆ ಬಸ್‌ನಲ್ಲಿ ಸುಮಾರು 20 ವಿದ್ಯಾರ್ಥಿಗಳು ಇದ್ದರು. ಬಸ್ ಉರುಳುತ್ತಿದ್ದಂತೆ ಮಕ್ಕಳು ಭಯದಿಂದ ಕಿರುಚಾಡಿದ್ದು, ಸ್ಥಳೀಯರು ತಕ್ಷಣ ಸ್ಥಳಕ್ಕೆ ಧಾವಿಸಿ ಮಕ್ಕಳನ್ನು ಸುರಕ್ಷಿತವಾಗಿ ಹೊರತೆಗೆದರು. ಘಟನೆಯಲ್ಲಿ ಏಳು ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಎಲ್ಲ ವಿದ್ಯಾರ್ಥಿಗಳು ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಮಣಿಪಾಲ ಪೊಲೀಸ್ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕ್ರೇನ್…

Read More

ಪುತ್ತೂರು, ಜು. 10: ಪುರುಷರಕಟ್ಟೆಯಲ್ಲಿ ನಡೆದ ಇತ್ತೀಚಿನ ಘಟನೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ಕೋಮು ಸೌಹಾರ್ದತೆಯನ್ನು ಕದಡುವ ರೀತಿಯಲ್ಲಿ ಸುಳ್ಳು ಮಾಹಿತಿಯನ್ನು ಪ್ರಸಾರ ಮಾಡಿ ಸಮಾಜಕ್ಕೆ ತಪ್ಪು ಸಂದೇಶವನ್ನು ನೀಡಿದ ಆರೋಪದ ಮೇಲೆ, ಪುತ್ತೂರು ನಗರ ಪೊಲೀಸರು ಏಳು ವೆಬ್ ನ್ಯೂಸ್ ಪೋರ್ಟಲ್‌ಗಳು ಮತ್ತು ಸಾಮಾಜಿಕ ಜಾಲತಾಣಗಳ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಪುತ್ತೂರು ಪುರುಷರಕಟ್ಟೆಯಲ್ಲಿ ಘಟನೆಯೊಂದು ನಡೆದಿತ್ತು. ಈ ಘಟನೆಯನ್ನು ವಾಸ್ತವಿಕವಾಗಿ ವರದಿ ಮಾಡುವ ಬದಲು, ಆರೋಪಿತ ಮಾಧ್ಯಮಗಳು ಕೋಮು ಬಣ್ಣ ಬಳಿದು ಹಿಂದೂ ಮತ್ತು ಮುಸ್ಲಿಂ ಸಮುದಾಯಗಳ ನಡುವೆ ವಿಭಜನೆ ಉಂಟುಮಾಡುವ ಪ್ರಯತ್ನ ಮಾಡಿವೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಕೋಮು ಸೌಹಾರ್ದತೆಯನ್ನು ಕದಡಲು ಈ ವೇದಿಕೆಗಳು ಸುಳ್ಳು ಮಾಹಿತಿಯನ್ನು ಹರಡುತ್ತಿವೆ ಎಂದು ಸಾರ್ವಜನಿಕರು ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ.ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್), 2023ರ ಸೆಕ್ಷನ್ 353(2) ಅಡಿಯಲ್ಲಿ ಪುತ್ತೂರು ಚಾವಡಿ (Instagram), ಹೊಸ ದಿಗಂತ, Zoomintv. online, News focuskannada. com, ಉದಯವಾಣಿ, Prakharanews. com ಮತ್ತು…

Read More

ಮಂಗಳೂರು, ಜು. 10: ತೊಕ್ಕೊಟ್ಟು-ಮಂಗಳೂರು ನಡುವಿನ ನೇತ್ರಾವತಿ ಸೇತುವೆಯ ರಸ್ತೆ ಹಾಳಾಗಿದ್ದು, ದಿನನಿತ್ಯ ಸಂಚರಿಸುವ ವಾಹನ ಸವಾರರಿಗೆ ಭಾರಿ ಅಡಚಣೆಯುಂಟಾಗುತ್ತಿದೆ. ರಸ್ತೆಯುದ್ದಕ್ಕೂ ಗುಂಡಿಗಳು ಮತ್ತು ಹಾನಿಗೊಳಗಾದ ಭಾಗಗಳು ವಾಹನ ಸವಾರರಿಗೆ, ವಿಶೇಷವಾಗಿ ದ್ವಿಚಕ್ರ ವಾಹನ ಸವಾರರಿಗೆ ಪ್ರಾಣಾಪಾಯವನ್ನು ತಂದೊಡ್ಡಿದೆ.  ರಸ್ತೆಯಲ್ಲಿನ ಗುಂಡಿಗಳನ್ನು ತಪ್ಪಿಸಲು ವಾಹನ ಸವಾರರು ಅನಿವಾರ್ಯವಾಗಿ ವಾಹನಗಳ ವೇಗವನ್ನು ಇದ್ದಕ್ಕಿದ್ದಂತೆ ತಗ್ಗಿಸಬೇಕಾಗುತ್ತಿದೆ ಅಥವಾ ದಿಕ್ಕನ್ನು ಬದಲಿಸಬೇಕಾಗುತ್ತಿದೆ. ಇದರಿಂದ ಸಂಚಾರ ದಟ್ಟಣೆ ಉಂಟಾಗುತ್ತಿದ್ದು, ಅಪಘಾತಗಳ ಭೀತಿಯೂ ಹೆಚ್ಚಾಗಿದೆ. ಬಸ್ಸುಗಳು, ಕಾರುಗಳು ಮತ್ತು ಘನ ಲಾರಿಗಳು ಸೇರಿದಂತೆ ಸಾವಿರಾರು ವಾಹನಗಳು ಪ್ರತಿದಿನ ಈ ಮಾರ್ಗದಲ್ಲಿ ಸಂಚರಿಸುತ್ತಿದ್ದು, ತಕ್ಷಣವೇ ದುರಸ್ತಿ ಕಾರ್ಯ ಕೈಗೊಳ್ಳದಿದ್ದರೆ ಪರಿಸ್ಥಿತಿ ಇನ್ನಷ್ಟು ಹದಗೆಡಲಿದೆ ಎಂದು ಪ್ರಯಾಣಿಕರು ಆತಂಕ ವ್ಯಕ್ತಪಡಿಸಿದ್ದಾರೆ.ಇದರೊಂದಿಗೆ, ಈ ಭಾಗದಲ್ಲಿ ಸೂಕ್ತ ಸಿಸಿಟಿವಿ ಕಣ್ಗಾವಲು ಇಲ್ಲದಿರುವುದು ಮತ್ತೊಂದು ಆತಂಕದ ವಿಷಯವಾಗಿದೆ. ಸೂಕ್ತ ನಿಗಾ ಇಲ್ಲದಿರುವುದು ಟ್ರಾಫಿಕ್ ನಿರ್ವಹಣೆಗೆ ಅಡ್ಡಿಯಾಗುವುದಲ್ಲದೆ, ಅಪಘಾತ ಅಥವಾ ಇತರೆ ಅಹಿತಕರ ಘಟನೆಗಳು ನಡೆದಾಗ ತನಿಖೆ ನಡೆಸುವುದಕ್ಕೂ ಕಷ್ಟವಾಗುತ್ತದೆ ಎಂದು ಸಾರ್ವಜನಿಕರು ಅಭಿಪ್ರಾಯಪಟ್ಟಿದ್ದಾರೆ.ನೇತ್ರಾವತಿ ಸೇತುವೆಯು ತೊಕ್ಕೊಟ್ಟು ಮತ್ತು…

Read More