ಮಂಗಳೂರು : ಪ್ರಪಂಚದಾದ್ಯಂತದ ತುಳು ನಾಯಕರನ್ನು ಒಟ್ಟುಗೂಡಿಸುವ ಸಂಘಟನೆಯಾದ ಗ್ಲೋಬಲ್ ಅಲೈಯನ್ಸ್ ಆಫ್ ತುಳು ಅಸೋಸಿಯೇಷನ್ (GATA), ಸೆಪ್ಟೆಂಬರ್ 21 ರಂದು ತನ್ನ ಮೊದಲ ತುಳು ಲಿಪಿ ಕಲಿಕಾ ಕಾರ್ಯಕ್ರಮವನ್ನು ಪ್ರಾರಂಭಿಸಲಿದೆ. ಉದ್ಘಾಟನಾ ಅಧಿವೇಶನವು ಸಂಜೆ 7 ಗಂಟೆಗೆ ಜೂಮ್ ವೇದಿಕೆಯಲ್ಲಿ ವರ್ಚುವಲ್ ಆಗಿ ನಡೆಯಲಿದೆ. ಈ ಸಂದರ್ಭದಲ್ಲಿ ಒಡಿಯೂರು ಸ್ವಾಮೀಜಿ ಆಶೀರ್ವಚನ ನೀಡಲಿದ್ದು, ಹಿರಿಯ ನಾಯಕರಾದ ಡಿ.ಕೆ. ಶೆಟ್ಟಿ ಮತ್ತು ಸರ್ವೋತ್ತಮ ಶೆಟ್ಟಿ (ಅಬುಧಾಬಿ) ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಈ ತರಗತಿಗಳನ್ನು ಅಮೆರಿಕದ ಫ್ಲೋರಿಡಾದ ಶ್ರೀವಲ್ಲಿ ರೈ ಮಾರ್ಟೆಲ್ ನಡೆಸಿಕೊಡಲಿದ್ದು, ಅವರಿಗೆ ಪ್ರಭಾಕರ್ ಭಟ್ (ಯುಎಸ್ಎ), ಸುರೇಶ್ ಪೂಂಜಾ (ಆಸ್ಟ್ರೇಲಿಯಾ), ಶುಭಶ್ರೀ ಕೆಎಂ (ಭಾರತ), ಸರಿತಾ ಅರುಣ್ ಶೆಟ್ಟಿ (ಯುಕೆ), ಶ್ರುತಾ ಶೆಟ್ಟಿ (ಯುಕೆ), ಮತ್ತು ಚಂದ್ರಹಾಸ ಶೆಟ್ಟಿ (ಮಸ್ಕತ್) ಬೆಂಬಲ ನೀಡಲಿದ್ದಾರೆ. ಕಾರ್ಯಕ್ರಮಕ್ಕೆ ತಾಂತ್ರಿಕ ಬೆಂಬಲವನ್ನು ಟೀಮ್ ಇಲೇಸಾ ಒದಗಿಸಲಿದೆ. ತುಳು ಲಿಪಿ ಕಲಿಯಲು ಆಸಕ್ತಿ ಇರುವವರು ಫಾರ್ಮ್ ಅನ್ನು ಭರ್ತಿ ಮಾಡಲು ಸಹಾಯಕ್ಕಾಗಿ, ಭಾಗವಹಿಸುವವರು ಸೂರಿ ಮಾರ್ನಾಡ್ ಅವರನ್ನು…
Author: UllalaVani
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮತ್ತೆ ಭಾರಿ ವರ್ಷಧಾರೆ ಮುಂದುವರೆದಿದೆ. ಈ ಬಗ್ಗೆ ರಾಜ್ಯ ಹವಾಮಾನ ಇಲಾಖೆಯು ಮುನ್ಸೂಚನೆ ಕೊಟ್ಟಿರುವ ಮಾಹಿತಿ ಇಲ್ಲಿದೆ. ಬೆಂಗಳೂರು: ರಾಜ್ಯದಲ್ಲಿ ಮತ್ತೆ ಮಳೆ ಚುರುಕಾಗಲಿದ್ದು, 14 ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಲರ್ಟ್ ಘೋಷಣೆ : ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಮೈಸೂರು, ಮಂಡ್ಯ, ಕೊಡಗು, ಹಾಸನ, ಯಾದಗಿರಿ, ವಿಜಯಪುರ, ರಾಯಚೂರು, ಕಲಬುರಗಿ, ಬೀದರ್, ಬೆಳಗಾವಿ ಹಾಗೂ ಬಾಗಲಕೋಟೆ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಶಿವಮೊಗ್ಗ, ತುಮಕೂರು, ಚಿಕ್ಕಮಗಳೂರು, ಚಿತ್ರದುರ್ಗ, ಚಿಕ್ಕಬಳ್ಳಾಪುರ, ದಾವಣಗೆರೆ, ಕೋಲಾರ, ಧಾರವಾಡ, ಗದಗ, ಹಾವೇರಿ, ಚಾಮರಾಜನಗರ ಹಾಗೂ ವಿಜಯನಗರ ಜಿಲ್ಲೆಗಳಲ್ಲಿಯೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಎಲ್ಲೆಲ್ಲಿ ಮಳೆ : ಕ್ಯಾಸಲ್ರಾಕ್, ನೆಲೋಗಿ, ಗಂಗಾಪುರ, ಬಿಳಗಿ, ಆಲಮಟ್ಟಿ, ತಾಳಿಕೋಟೆ, ಸುಳ್ಯ, ರಾಯಲ್ಪಾಡು, ಕೋಲಾರ, ಗುಬ್ಬಿ, ಗೋಕರ್ಣ, ಚಿಕ್ಕಬಳ್ಳಾಪುರ, ಅಥಣಿ, ಯಡ್ರಾಮಿ, ಉಡುಪಿ, ಶಕ್ತಿನಗರ, ಸಂಕೇಶ್ವರ, ಪುತ್ತೂರು, ಪೊನ್ನಂಪೇಟೆ, ಕುಂದಾಪುರ, ಕೊಟ್ಟಿಗೆಹಾರ, ಹುಣಸಗಿ,…
ಅಂತರ್ಜಾತಿ ವಿವಾಹವನ್ನು ಉತ್ತೇಜಿಸಲು ರಾಜ್ಯ ಸರ್ಕಾರ ವಿವಾಹ ಪ್ರೋತ್ಸಾಹ ಧನ ಯೋಜನೆ ಜಾರಿಗೆ ತಂದಿದೆ. ಪರಿಶಿಷ್ಟ ಜಾತಿ-ಪರಿಶಿಷ್ಟ ಪಂಗಡ ಸಮುದಾಯದವರನ್ನು ಬೇರೆ ವರ್ಗದ ವ್ಯಕ್ತಿ ವಿವಾಹವಾದರೆ ಆ ದಂಪತಿಗಳಿಗೆ ₹5.50 ಲಕ್ಷ ಪ್ರೋತ್ಸಾಹ ಧನವನ್ನು ನೀಡಲಾಗುವುದು. ವಧುವಿಗೆ ₹3ಲಕ್ಷ ಹಾಗೂ ವರನಿಗೆ ₹2.5ಲಕ್ಷ ಪ್ರೋತ್ಸಾಹ ಧನ ನೀಡಲಾಗುತ್ತದೆ. ಅರ್ಹತೆಗಳು ದಂಪತಿಗಳು ಕರ್ನಾಟಕದಲ್ಲಿ ವಾಸಿಸುತ್ತಿರಬೇಕು. ಜೋಡಿಗಳು ಹಿಂದೂ ಧರ್ಮದವರಾಗಿರಬೇಕು. ಒಬ್ಬ ಸಂಗಾತಿಯು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದರೆ, ಇನ್ನೊಬ್ಬರು ಬೇರೆ ಸಮುದಾಯಕ್ಕೆ ಸೇರಿರಬೇಕು. ದಂಪತಿಗಳ ಒಟ್ಟು ವಾರ್ಷಿಕ ಆದಾಯ ₹5ಲಕ್ಷಕ್ಕಿಂತ ಕಡಿಮೆ ಇರಬೇಕು. ವಿವಾಹವಾಗಿ 18 ತಿಂಗಳ ಒಳಗಾಗಿ ಅರ್ಜಿ ಸಲ್ಲಿಸಿದವರು ಮಾತ್ರ ಯೋಜನೆಗೆ ಅರ್ಹರು. ಅರ್ಜಿ ಸಲ್ಲಿಸುವ ಪ್ರಕ್ರಿಯೆ : ಹಂತ 1: ಕರ್ನಾಟಕ ಸರ್ಕಾರದ ಸಮಾಜ ಕಲ್ಯಾಣ ಇಲಾಖೆಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ.https://swdservices.karnataka.gov.in/SWIncentive/ICM/ICMHome.aspx ಹಂತ 2: ‘ವಿವಾಹಕ್ಕೆ ಪ್ರೋತ್ಸಾಹ ಧನ’ ಎಂಬ ಗುಂಡಿಯನ್ನು ಒತ್ತಿ. ನಂತರ ‘ಅಂತರ್-ಜಾತಿ ವಿವಾಹಕ್ಕೆ ಪ್ರೋತ್ಸಾಹ ಧನ’ ಯೋಜನೆಯನ್ನು ಆಯ್ಕೆಮಾಡಿ. ಹಂತ…
ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಅವರ ಜೀವನಾಧರಿತ ಚಿತ್ರ ತೆರೆಗೆ ಬರಲಿದೆ. ಸಿಲ್ವರ್ ಕ್ಯಾಸ್ಟ್ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ವೀರ್ ರೆಡ್ಡಿ ಎಂ. ನಿರ್ಮಿಸುತ್ತಿರುವ ಈ ಚಿತ್ರಕ್ಕೆ ‘ಮಾ ವಂದೇ’ ಎಂದು ಹೆಸರಿಡಲಾಗಿದೆ. ಅವರ ಜನ್ಮ ದಿನದ ಅಂಗವಾಗಿ ಸಿನಿಮಾದ ಪೋಸ್ಟರ್ ಅನ್ನು ರಿವೀಲ್ ಮಾಡಲಾಗಿದೆ. ಚಿತ್ರದಲ್ಲಿ ಮಲಯಾಳದ ನಟ ಉಣ್ಣಿ ಮುಕುಂದನ್ ನರೇಂದ್ರ ಮೋದಿ ಅವರ ಪಾತ್ರದಲ್ಲಿ ನಟಿಸಲಿದ್ದಾರೆ. ಈ ಬಗ್ಗೆ ನಟ ಉಣ್ಣೆ ಮುಕುಂದನ್ ಅವರು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ. ಕ್ರಾಂತಿ ಕುಮಾರ್ ನಿರ್ದೇಶನದ ‘ಮಾ ವಂದೇ’ ಚಿತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಪಾತ್ರವನ್ನು ನಾನು ನಿರ್ವಹಿಸುತ್ತಿದ್ದೇನೆ ಎಂಬ ವಿಚಾರವನ್ನು ಹಂಚಿಕೊಳ್ಳಲು ನನಗೆ ಹರ್ಷವಾಗುತ್ತಿದೆ. ಅಹಮದಾಬಾದ್‌ನಲ್ಲಿ ಬೆಳೆದ ನನಗೆ, ಬಾಲ್ಯದಲ್ಲಿ ಅವರು(ಮೋದಿ) ನಮ್ಮ ಮುಖ್ಯಮಂತ್ರಿ ಎಂದು ತಿಳಿದಿತ್ತು. ವರ್ಷಗಳ ನಂತರ, 2023ರ ಏಪ್ರಿಲ್‌ನಲ್ಲಿ ಅವರನ್ನು ವೈಯಕ್ತಿಕವಾಗಿ ಭೇಟಿಯಾಗುವ ಸೌಭಾಗ್ಯ ಸಿಕ್ಕಿತು. ಅದು ನನ್ನ ಪಾಲಿಗೆ ಮರೆಯಲಾಗದ ಕ್ಷಣ ಎಂದಿದ್ದಾರೆ. ಒಬ್ಬ ನಟನಾಗಿ, ಈ ಪಾತ್ರವನ್ನು…
ಪಟ್ನಾ : ಪ್ರಧಾನಿ ನರೇಂದ್ರ ಮೋದಿ ಅವರ ಕನಸಿನಲ್ಲಿ ಅವರ ತಾಯಿ ಬಂದು ‘ಬಿಹಾರದಲ್ಲಿ ನನ್ನ ಹೆಸರು ಹೇಳಿಕೊಂಡು ರಾಜಕಾರಣ ಮಾಡುತ್ತಿದ್ದೀಯಾ’ ಎಂದು ಗದರಿಸುವಂತೆ ಸಾಮಾಜಿಕ ಮಾಧ್ಯಗಳಲ್ಲಿ ಹಂಚಿಕೊಂಡಿದ್ದ ಎಐ ಆಧಾರಿತ ವಿಡಿಯೊವನ್ನು ಕೂಡಲೇ ತೆಗೆಯುವಂತೆ ಕಾಂಗ್ರೆಸ್‌ನ ಬಿಹಾರ ಘಟಕಕ್ಕೆ ಹೈಕೋರ್ಟ್ ಮಂಗಳವಾರ ನಿರ್ದೇಶಿಸಿದೆ. ವಿವೇಕಾನಂದ ಸಿಂಗ್ ಎಂಬುವವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಪಿ.ಬಿ.ಬೈಜಂತ್ರಿ ಅವರಿದ್ದ ಪೀಠವು ಈ ನಿರ್ದೇಶನ ನೀಡಿದೆ. ಅರ್ಜಿಯಲ್ಲಿ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ಕೇಂದ್ರ ಸರ್ಕಾರ ಮತ್ತು ಚುನಾವಣಾ ಆಯೋಗವನ್ನು ಪಕ್ಷಗಾರರನ್ನಾಗಿ ಮಾಡಲಾಗಿತ್ತು. ವಿಡಿಯೊ ತೆಗೆದುಹಾಕಲು ಸೂಚಿಸಿದ ಪೀಠವು ರಾಹುಲ್ ಗಾಂಧಿ, ಫೇಸ್‌ಬುಕ್, ಟ್ವಿಟರ್ ಮತ್ತು ಗೂಗಲ್‌ಗೆ ನೋಟಿಸ್ ಜಾರಿ ಮಾಡಿದೆ ಎಂದು ಚುನಾವಣಾ ಆಯೋಗದ ಪರ ವಕೀಲ ಸಿದ್ದಾರ್ಥ ಪ್ರಸಾದ್ ತಿಳಿಸಿದ್ದಾರೆ. ಇದೇ ವರ್ಷಾಂತ್ಯದಲ್ಲಿ ಬಿಹಾರದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ಹೀಗಾಗಿ ರಾಜ್ಯದಲ್ಲಿ ರಾಜಕೀಯ ಸಂಚಲನ ಜೋರಾಗಿದ್ದು. ಸೆಪ್ಟೆಂಬರ್ 10 ರಂದು ಕಾಂಗ್ರೆಸ್ ಈ ವಿಡಿಯೊ ಹಂಚಿಕೊಂಡಿತ್ತು. ಕಾಂಗ್ರೆಸ್‌ನ…
ಮಂಗಳೂರು : ಕೈಯಲ್ಲೇ ಸಂಪೂರ್ಣ ಕುರ್‌ಆನ್‌ನ್ನು ಬರೆದು ಸಾಧನೆಗೈದ ಕುಂಬ್ರ ಮರ್ಕಝುಲ್ ಹುದಾ ವುಮನ್ ಕಾಲೇಜು ವಿದ್ಯಾರ್ಥಿನಿ ಫಾತಿಮಾ ಸಜ್‌ಲಾ ಹಾಗೂ ಮಿತ್ತ್ ಬೈಲ್ ಕಾಲೇಜು ವಿದ್ಯಾರ್ಥಿನಿ ಫಾತಿಮತ್ ಅಬೀರಾ ಅವರನ್ನು ಮುಸ್ಲಿಮ್ ಸೆಂಟ್ರಲ್ ಕಮಿಟಿಯ ವತಿಯಿಂದ ಮಂಗಳವಾರ ಸನ್ಮಾನಿಸಲಾಯಿತು. ದಿ ಮುಸ್ಲಿಂ ಸೆಂಟ್ರಲ್ ಕಮಿಟಿ ಅಧ್ಯಕ್ಷ ಅಲ್‌ಹಾಜ್ ಕೆ ಎಸ್ ಮುಹಮ್ಮದ್ ಮಸೂದ್‌ರ ಸೊಸೆ ಗುಲ್ಸನ್ ಫರ್ವಿನ್ ಅವರು ಸಾಧಕಿಯರನ್ನು ಶಾಲು ಹೊದಿಸಿ ಸನ್ಮಾನಿಸಿದರು. ಸಭೆಯ ಅಧ್ಯಕ್ಷತೆಯನ್ನು ಅಲ್ ಹಾಜ್ ಕೆ ಎಸ್ ಮುಹಮ್ಮದ್ ಮಸೂದ್ ವಹಿಸಿದ್ದರು. ಈ ಸಭೆಯಲ್ಲಿ ಉಪಾಧ್ಯಕ್ಷರುಗಳಾದ ಹಾಜಿ ಸಿ ಮಹಮೂದ್, ಹಾಜಿ ಇಬ್ರಾಹೀಂ ಕೋಡಿಜಾಲ್, ಕೆ. ಅಶ್ರಫ್, ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಹನೀಫ್, ಕೋಶಾಧಿಕಾರಿ ಹಾಜಿ ಮೂಸ ಮೊಯ್ದೀನ್, ಕಾರ್ಯದರ್ಶಿಗಳಾದ ಹಾಜಿ ಅಹ್ಮದ್ ಬಾವ ಪಡೀಲ್, ಡಿ.ಎಂ. ಅಸ್ಲಾಂ, ಡಾ. ಮುಹಮ್ಮದ್ ಆರಿಫ್ ಮಸೂದ್, ಸಿ.ಎಂ. ಹನೀಫ್, ಎಂ.ಎ. ಅಶ್ರಫ್, ನ್ಯಾಯವಾದಿ ನೂರುದ್ದೀನ್ ಸಾಲ್ಮರ, ಹಾಜಿ ಬಿ ಅಬೂಬಕರ್, ಹಾಜಿ ರಿಯಾಝುದ್ದೀನ್, ಎನ್.ಕೆ. ಅಬೂಬಕರ್,…
ಮಂಗಳೂರು : ಹೊನ್ನೆಕಟ್ಟೆ-ಕಾನ ರೈಲ್ವೆ ಮೇಲ್ಸೇತುವೆಯ ಮೇಲೆ ಸೆಪ್ಟೆಂಬರ್ 17 ರಿಂದ ಅಕ್ಟೋಬರ್ 16ರ ವರೆಗೆ 30 ದಿನಗಳ ಕಾಲ ವಾಹನ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಸೇತುವೆಯ ಮೇಲೆ ಕಾಂಕ್ರೀಟಿಕರಣ ಕಾಮಗಾರಿ ನಡೆಯುತ್ತಿರುವುದರಿಂದ ಈ ಕ್ರಮ ಕೈಗೊಳ್ಳಲಾಗಿದೆ. ಈ ಅವಧಿಯಲ್ಲಿ ಈ ಕೆಳಗಿನಂತೆ ಸಂಚಾರ ಮಾರ್ಗಗಳನ್ನು ಬದಲಾಯಿಸಲಾಗಿದೆ: ಸಂಚಾರಕ್ಕೆ ಸಹಕರಿಸುವಂತೆ ಮಂಗಳೂರು ಮಹಾನಗರ ಪಾಲಿಕೆ ಸಾರ್ವಜನಿಕರಲ್ಲಿ ಮನವಿ ಮಾಡಿದೆ. ಸುಗಮ ಸಂಚಾರಕ್ಕೆ ಅನುಕೂಲವಾಗುವಂತೆ ನಿಗದಿತ ಅವಧಿಯೊಳಗೆ ಕಾಮಗಾರಿ ಪೂರ್ಣಗೊಳ್ಳುವ ನಿರೀಕ್ಷೆ ಇದೆ ಎಂದು ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಾಸರಗೋಡು : ಹತ್ತನೇ ತರಗತಿ ವಿದ್ಯಾರ್ಥಿನಿಯೋರ್ವಳು ಮನೆಯ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಬಂದಡ್ಕದಲ್ಲಿ ನಡೆದಿದೆ. ಬಂದಡ್ಕ ಊಙತಡ್ಕದ ಸವಿತಾ ಎಂಬವರ ಪುತ್ರಿ ದೇವಿಕಾ (15) ಮೃತಪಟ್ಟವರು. ಕುಂಡಂಗುಳಿ ಹಯರ್ ಸೆಕೆಂಡರಿ ಶಾಲೆಯ ವಿದ್ಯಾರ್ಥಿನಿಯಾಗಿದ್ದಳು. ಮಂಗಳವಾರ ದೇವಿಕಾಳ ತಂದೆ ಸತೀಶ್ ರ ಪುಣ್ಯತಿಥಿ ದಿನದಂದೇ ಕೃತ್ಯ ನಡೆಸಲಾಗಿದೆ. ಬೆಳಿಗ್ಗೆ ಅಜ್ಜಿ ಮತ್ತು ಸಹೋದರ ಮಾತ್ರ ಮನೆಯಲ್ಲಿದ್ದಾಗ ಘಟನೆ ನಡೆದಿದೆ. ತಾಯಿ ಸವಿತಾ ಬಂದಡ್ಕ ಗ್ರಾಮೀಣ ಬ್ಯಾಂಕ್ ಸಮೀಪ ಹೊಟೇಲ್ ನಡೆಸುತ್ತಿದ್ದಾರೆ. ಬೆಳಿಗ್ಗೆ ದೇವಿಕಾ ನಾಪತ್ತೆಯಾದ ಹಿನ್ನಲೆಯಲ್ಲಿ ಸಹೋದರ ಶೋಧ ನಡೆಸಿದಾಗ ಸೀರೆಯಿಂದ ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ದೇವಿಕಾ ಬಾಲ ಸಂಘದ ಸದಸ್ಯೆಯಾಗಿದ್ದಳು. ಬೇಡಡ್ಕ ಠಾಣಾ ಪೊಲೀಸರು ಮಹಜರು ನಡೆಸಿದರು. ಫಾರೆನ್ಸಿಕ್ ತಜ್ಞರು ಸ್ಥಳಕ್ಕೆ ಆಗಮಿಸಿ ಮಾಹಿತಿ ಕಲೆ ಹಾಕಿದ್ದಾರೆ.
ಸುಳ್ಯ:ತೆಂಗಿನ ಮರದಿಂದ ಕಾಯಿ ಕೀಳುತ್ತಿದ್ದಾಗ ಅಲ್ಯೂಮೀನಿಯಂ ಗಳೆ ವಿದ್ಯುತ್ ಲೈನಿಗೆ ತಗುಲಿ ಕಾಯಿ ಕೊಯ್ಯುತ್ತಿದ್ದ ವ್ಯಕ್ತಿ ಮೃತಪಟ್ಟ ಘಟನೆ ಬೆಳ್ಳಾರೆ ಬಳಿಯ ಅಯ್ಯನಕಟ್ಟೆಯಿಂದ ಸಂಭವಿಸಿದೆ. ಮೃತರಾದ ವ್ಯಕ್ತಿ ತಂಬಿನಮಕ್ಕಿಯ ರಾಮ ಎಂದು ಗುರುತಿಸಲಾಗಿದೆ.. ಅಯ್ಯನಕಟ್ಟೆಯ ಗೋಕುಲಂ ಎದುರುಗಡೆ ಇರುವ ಸಿದ್ದಿಕ್ ಎಂಬರಿಗೆ ಸೇರಿದ ತೆಂಗಿನ ಮರದಿಂದ ಕಾಯಿ ಕೀಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಬೆಳ್ಳಾರೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮಂಗಳೂರು: ದೀರ್ಘಕಾಲದ ಕೆಂಪು ಕಲ್ಲಿನ ಸಮಸ್ಯೆಯನ್ನು ಪರಿಹರಿಸಲಾಗಿದೆ ಎಂದು ಸ್ಪೀಕರ್ ಯುಟಿ ಖಾದರ್ ಘೋಷಿಸಿದ್ದು, ಮುಂದಿನ ದಿನಗಳಲ್ಲಿ ಪ್ರಮಾಣಿತ ಕಾರ್ಯಾಚರಣಾ ಕಾರ್ಯವಿಧಾನ (ಎಸ್‌ಒಪಿ) ಬಿಡುಗಡೆಯಾಗಲಿದೆ. ಸುದ್ದಿಗಾರರೊಂದಿಗೆ ಮಾತನಾಡಿದ ಖಾದರ್, ಕಳೆದ ಸಚಿವ ಸಂಪುಟ ಸಭೆಯಲ್ಲಿ, ಹಿಂದೆ ಸ್ಪಷ್ಟ ಪರವಾನಗಿಗಳ ಕೊರತೆಯಿಂದ ಉಂಟಾದ ಗೊಂದಲ, ದುರುಪಯೋಗ ಮತ್ತು ಪರಿಹರಿಸಲು ಶಾಶ್ವತ ಪರಿಹಾರವನ್ನು ರೂಪಿಸಲಾಗಿತ್ತು ಎಂದು ಹೇಳಿದರು. ಈಗ ಹೊಸ ಕಾನೂನು ಚೌಕಟ್ಟನ್ನು ಸ್ಥಾಪಿಸಲಾಗಿದ್ದು, ಕೆಂಪು ಕಲ್ಲು ಮಾರಾಟಗಾರರು ಕಾನೂನುಬದ್ಧವಾಗಿ ಕಾರ್ಯನಿರ್ವಹಿಸಲು ಅನುವು ಮಾಡಿಕೊಟ್ಟಿದೆ. ಇನ್ನೂ ಯಾರು ವ್ಯಾಪಾರ ಮಾಡಿದರು ಪರವಾನಿಗೆ ಪಡೆದು ಮಾಡಬೇಕು ಎಂದರು. ಹೊಸ ನೀತಿಗೆ ಸಚಿವ ಸಂಪುಟ ಅನುಮೋದನೆ ನೀಡಿದ್ದು, ಮುಖ್ಯಮಂತ್ರಿ ಕೂಡ ಒಪ್ಪಿಗೆ ನೀಡಿದ್ದಾರೆ. ಕೆಂಪು ಕಲ್ಲು ವ್ಯವಹಾರಕ್ಕಾಗಿ 53 ಅರ್ಜಿಗಳಲ್ಲಿ 25 ಅರ್ಜಿದಾರರಿಗೆ ಈಗಾಗಲೇ ಹೊಸ ಕಾನೂನು ಚೌಕಟ್ಟಿನಡಿಯಲ್ಲಿ ಪರವಾನಗಿ ನೀಡಲಾಗಿದೆ ಎಂದರು. ಕೆಂಪು ಕಲ್ಲು ದರ ನಿಗದಿ ಕೆಂಪು ಕಲ್ಲಿಗೆ ದರ ನಿಗದಿ ಬಗ್ಗೆ ಚರ್ಚೆ ನಡೆಸಲಾಗುವುದು. ಜನ ಸಾಮಾನ್ಯರಿಗೆ ಸುಲಭ ಮತ್ತು ಕಡಿಮೆ ದರದಲ್ಲಿ…

