ಮಂಗಳೂರು, ಜು. 11: ಮಂಗಳೂರಿನ ಶಕ್ತಿನಗರದ ಶ್ರೀ ಕೃಷ್ಣ ಭಜನಾ ಮಂದಿರದಲ್ಲಿ ಕಳೆದ ವರ್ಷ ನಡೆದ ಧಾರ್ಮಿಕ ಕಾರ್ಯಕ್ರಮದ ವೇಳೆ ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಹಲ್ಲೆ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ವೇದವ್ಯಾಸ ಕಾಮತ್ ಹಾಗೂ ಇತರರ ವಿರುದ್ಧ ದಾಖಲಾಗಿದ್ದ ಪ್ರಥಮ ಮಾಹಿತಿ ವರದಿ (ಎಫ್‌ಐಆರ್)ಯನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ. ಕಳೆದ ವರ್ಷದ ಮಾರ್ಚ್‌ನಲ್ಲಿ ನಡೆದ ಘಟನೆಗೆ ಸಂಬಂಧಿಸಿ ಕಂಕನಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಎಫ್‌ಐಆರ್ ಅನ್ನು ಪ್ರಶ್ನಿಸಿ ಶಾಸಕ ವೇದವ್ಯಾಸ ಕಾಮತ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ವೇಳೆ ಕಾಮತ್ ಪರ ಹಿರಿಯ ವಕೀಲ ಅರುಣ್ ಶ್ಯಾಮ್ ವಾದ ಮಂಡಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ಹೈಕೋರ್ಟ್, ಶಾಸಕ ವೇದವ್ಯಾಸ ಕಾಮತ್ ಹಾಗೂ ಇತರ ಆರೋಪಿಗಳ ವಿರುದ್ಧ ದಾಖಲಿಸಲಾಗಿದ್ದ ಎಫ್‌ಐಆರ್ ಅನ್ನು ರದ್ದುಗೊಳಿಸಿ ಆದೇಶ ಹೊರಡಿಸಿದೆ. ಆದರೆ, ಎಫ್‌ಐಆರ್ ರದ್ದುಗೊಳಿಸಲು ನ್ಯಾಯಾಲಯ ಅನುಸರಿಸಿದ ಕಾನೂನು ಆಧಾರಗಳನ್ನು ಆದೇಶದಲ್ಲಿ ವಿವರಿಸಿಲ್ಲ.ತೀರ್ಪಿನ ಕುರಿತು ಪ್ರತಿಕ್ರಿಯಿಸಿರುವ ಶಾಸಕ ವೇದವ್ಯಾಸ ಕಾಮತ್, “ಇದು…
Author: UllalaVani
ದೇರಳಕಟ್ಟೆ: ಕೆ.ಎಸ್ ಹೆಗ್ಡೆ ಚಾರಿಟೇಬಲ್ ಆಸ್ಪತ್ರೆಯ ತಜ್ಞ ವೈದ್ಯರು ಮೇದೋಜ್ಜೀರಕ ಗ್ರಂಥಿ (ಪ್ಯಾಂಕ್ರಿಯಾಟಿಕ್) ಕ್ಯಾನ್ಸರ್‌ನಿಂದ ಬಳಲುತ್ತಿದ್ದ 57 ವರ್ಷದ ರೋಗಿಗೆ ಅತ್ಯಾಧುನಿಕ ರೋಬೋಟಿಕ್ ವಿಪ್ಪಲ್ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ನಡೆಸುವ ಮೂಲಕ ಮತ್ತೊಂದು ಮಹತ್ವದ ವೈದ್ಯಕೀಯ ಸಾಧನೆ ಮಾಡಿದ್ದಾರೆ.ಹೊಟ್ಟೆನೋವು, ಕಾಮಾಲೆ ಹಾಗೂ ತೂಕ ಇಳಿಕೆಯ ಸಮಸ್ಯೆಯಿಂದ ಬಳಲುತ್ತಿದ್ದ ರೋಗಿಯು ಕೆ. ಎಸ್. ಹೆಗ್ಡೆ ಆಸ್ಪತ್ರೆಗೆ ದಾಖಲಾಗಿದ್ದರು. ವೈದ್ಯಕೀಯ ಗ್ಯಾಸ್ಟ್ರೋಎಂಟರಾಲಜಿ ಮತ್ತು ಹೆಪಟಾಲಜಿ ವಿಭಾಗದ ಮುಖ್ಯಸ್ಥರಾದ ಡಾ. ಚಂದ್ರಶೇಖರ್ ಸೊರಕೆ ಅವರು ಪರೀಕ್ಷಿಸಿದ ಬಳಿಕ ಸಿಟಿ ಸ್ಕ್ಯಾನ್, ಎಂಡೋಸ್ಕೋಪಿಕ್ ಅಲ್ಟ್ರಾಸೌಂಡ್ ಹಾಗೂ ಬಯಾಪ್ಸಿ ಪರೀಕ್ಷೆಗಳನ್ನು ನಡೆಸಲಾಯಿತು. ಈ ಪರೀಕ್ಷೆಗಳಲ್ಲಿ ರೋಗಿಗೆ ಮುಂದುವರಿದ ಹಂತದ ಪ್ಯಾಂಕ್ರಿಯಾಟಿಕ್ ಕ್ಯಾನ್ಸರ್ ಇರುವುದು ದೃಢಪಟ್ಟಿತು.ಈ ರೀತಿಯ ಕ್ಯಾನ್ಸರ್ ಚಿಕಿತ್ಸೆಗೆ ವಿವಿಧ ವಿಭಾಗಗಳ ತಜ್ಞ ವೈದ್ಯರ ಸಮನ್ವಯ ಅತ್ಯಗತ್ಯವಾಗಿದ್ದು, ವೈದ್ಯಕೀಯ ಹಾಗೂ ಶಸ್ತ್ರಚಿಕಿತ್ಸಾ ಗ್ಯಾಸ್ಟ್ರೋಎಂಟರಾಲಜಿ, ಆಂಕಾಲಜಿ, ರೇಡಿಯಾಲಜಿ, ಪೆಥಾಲಜಿ ಸೇರಿದಂತೆ ವಿವಿಧ ವಿಭಾಗಗಳ ವೈದ್ಯರು ರೋಗಿಯ ಸ್ಥಿತಿಯನ್ನು ಸಮಗ್ರವಾಗಿ ಪರಿಶೀಲಿಸಿದರು. ಕ್ಯಾನ್ಸರ್ ಮುಂದುವರಿದ ಹಂತದಲ್ಲಿದ್ದ ಕಾರಣ, ಶಸ್ತ್ರಚಿಕಿತ್ಸೆಗೆ ಮುನ್ನ ಗಡ್ಡೆಯ ಗಾತ್ರವನ್ನು…
ಕಡಬ, ಜು.10: ಸುಬ್ರಹ್ಮಣ್ಯ ಸಮೀಪದ ಅಜ್ಜಿಹಿತ್ಲು ಪ್ರದೇಶದ ಖಾಸಗಿ ಲಾಡ್ಜ್‌ನಲ್ಲಿ ತಂಗಿದ್ದ ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಮೃತರನ್ನು ರಾಮನಗರ ಜಿಲ್ಲೆಯ ಉಚ್ಚಮ್ಮನ ದೊಡ್ಡಿ ನಿವಾಸಿ ಮಧು ಎಸ್. (30) ಎಂದು ಗುರುತಿಸಲಾಗಿದೆ. ಪೊಲೀಸರ ಮಾಹಿತಿ ಪ್ರಕಾರ, ಮಧು ಎಸ್. ಅವರು ಜುಲೈ 8ರಂದು ಅಜ್ಜಿಹಿತ್ಲುವಿನ ಖಾಸಗಿ ಲಾಡ್ಜ್‌ನಲ್ಲಿ ಕೊಠಡಿ ಬಾಡಿಗೆಗೆ ಪಡೆದಿದ್ದರು. ಜುಲೈ 9ರಂದು ಸಂಜೆ ಲಾಡ್ಜ್ ಸಿಬ್ಬಂದಿ ಕೊಠಡಿ ಬಾಗಿಲು ತೆರೆಯುವಂತೆ ಹಲವು ಬಾರಿ ಕರೆದರೂ ಯಾವುದೇ ಪ್ರತಿಕ್ರಿಯೆ ದೊರಕಿಲ್ಲ. ಅನುಮಾನಗೊಂಡ ಸಿಬ್ಬಂದಿ ಕಿಟಕಿಯಿಂದ ಪರಿಶೀಲಿಸಿದಾಗ, ಕೊಠಡಿಯೊಳಗೆ ಮಧು ಎಸ್. ಅವರು ನೇಣು ಬಿಗಿದ ಸ್ಥಿತಿಯಲ್ಲಿ ಮೃತಪಟ್ಟಿರುವುದು ಕಂಡುಬಂದಿದೆ. ಈ ಕುರಿತು ಲಾಡ್ಜ್‌ನ ಅರ್ಜಿದಾರ ಜಗದೀಶ್ ಶಾಪಪಡ್ಪು ಅವರು ನೀಡಿದ ದೂರಿನ ಮೇರೆಗೆ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಯುಡಿಆರ್ ಸಂಖ್ಯೆ 15/2026 ದಾಖಲಿಸಲಾಗಿದೆ.
ಮಂಗಳೂರು, ಜು. 10:ಕರ್ನಾಟಕ ರಾಜ್ಯ ವಕೀಲರ ಪರಿಷತ್ತು ಬೆಂಗಳೂರು ಇದಕ್ಕೆ ನಡೆದ ಚುನಾವಣೆಯಲ್ಲಿ ಶ್ಯಾಮಲಾ ಭಂಡಾರಿ ಕುಂದಾಪುರ ಜಯಗಳಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಮತ್ತು ಉಡುಪಿ ಜಿಲ್ಲೆಯ ಇತಿಹಾಸ ದಲ್ಲೇ ಮಹಿಳಿಯೊಬ್ಬರು ರಾಜ್ಯ ವಕೀಲರ ಪರಿಷತ್ತಿಗೆ ಚುನಾಯಿತರಾಗಿ ಆಯ್ಕೆಯಾದದ್ದು ಇದೆ ಮೊದಲು. ಹಿರಿಯ ವಕೀಲರಾಗಿ ಸಾಮಾಜಿಕ ಹೋರಾಟಗಳ ಮೂಲಕ ಮಹಿಳಾ ರಾಜಕಾರಣದಲ್ಲಿ ವಿಶಿಷ್ಟ ವಾಗಿ ಸಾಮಾಜಿಕ ಶೈಕ್ಷಣಿಕ ಕಾನೂನು ಕ್ಷೇತ್ರಗಳು ಸೇರಿದಂತೆ ಹಲವಾರು ಸಂಘ ಸಂಸ್ಥೆ ಗಳಲ್ಲಿ ಗುರುತಿಸಿಕೊಂಡಿದ್ದಾರೆ.ಅಲ್ಲದೆ ಕರ್ನಾಟಕ ರಾಜ್ಯ ನೋಟರಿ ವಕೀಲರ ಸಂಘ ದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ
ಮಂಗಳೂರು: ಗ್ರಾಮ ಪಂಚಾಯತ್‌ಗಳಲ್ಲಿ ಹೆಚ್ಚುತ್ತಿರುವ ಹಸಿ ಕಸದ ಸಮಸ್ಯೆಗೆ ಶಾಶ್ವತ ಹಾಗೂ ಪರಿಸರ ಸ್ನೇಹಿ ಪರಿಹಾರ ಕಲ್ಪಿಸುವ ಉದ್ದೇಶದಿಂದ ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಂಗಳೂರು ಮಹಾನಗರ ಪಾಲಿಕೆ, ಸ್ವಚ್ಛ ಭಾರತ್ ಮಿಷನ್ (ಗ್ರಾಮೀಣ)–ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಹಸಿರು ದಳ, ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಬಲ್ಮಠದ ಸಹೋದಯ ಸಭಾಭವನದಲ್ಲಿ ಸಾವಯವ ಗೊಬ್ಬರ ತಯಾರಿ ತರಬೇತಿ ಕಾರ್ಯಕ್ರಮ ನಡೆಯಿತು. ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಜಯಲಕ್ಷ್ಮಿ ರಾಯಕೋಡ ಮಾತನಾಡಿ, ಹಸಿ ಕಸವನ್ನು ಮೂಲದಲ್ಲಿಯೇ ಪ್ರತ್ಯೇಕಿಸಿ ವೈಜ್ಞಾನಿಕವಾಗಿ ನಿರ್ವಹಿಸುವ ಮೂಲಕ ಸ್ವಚ್ಛ ಹಾಗೂ ಸುಸ್ಥಿರ ಗ್ರಾಮಗಳನ್ನು ನಿರ್ಮಿಸಬಹುದೆಂದು ತಿಳಿಸಿದರು. ಕೊಣಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ಗೀತಾ ದಾಮೋದರ್ ಹಾಗೂ ಪುದು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ರಮೀಝ್ ಬಾನು ಗ್ರಾಮ ಮಟ್ಟದಲ್ಲಿ ಹಸಿ ಕಸ ನಿರ್ವಹಣೆಯಲ್ಲಿ ಸಾರ್ವಜನಿಕರ ಸಕ್ರಿಯ ಸಹಭಾಗಿತ್ವ ಅಗತ್ಯವೆಂದು ಹೇಳಿದರು. ಸಂಪನ್ಮೂಲ ವ್ಯಕ್ತಿಗಳಾದ ರಮೇಶ್ ನೂಜಿಪ್ಪಾಡಿ ಹಾಗೂ ಅಶ್ವಿನಿ ಕೆ. ಭಟ್ ಅವರು ಎರೆಹುಳ…
ಉಡುಪಿ : ಶಾಲಾ ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಖಾಸಗಿ ಶಾಲಾ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ತೋಡಿಗೆ ಉರುಳಿ ಬಿದ್ದ ಪರಿಣಾಮ ಏಳು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಶುಕ್ರವಾರ ಬೆಳಗ್ಗೆ ಸರಳೆಬೆಟ್ಟು–ಕೊಡಂಗೆ ದೇವಸ್ಥಾನದ ಸಮೀಪ ನಡೆದಿದೆ. ಮಣಿಪಾಲದ ಕ್ರೈಸ್ಟ್ ಆಂಗ್ಲ ಮಾಧ್ಯಮ ಶಾಲೆಗೆ ಸೇರಿದ ಬಸ್ ಎಂದಿನಂತೆ ವಿದ್ಯಾರ್ಥಿಗಳನ್ನು ಶಾಲೆಗೆ ಕರೆದೊಯ್ಯುತ್ತಿದ್ದ ವೇಳೆ, ಕೊಡಂಗೆ ದೇವಸ್ಥಾನದ ಸಮೀಪದ ಕಿರಿದಾದ ತಿರುವಿನಲ್ಲಿ ಚಾಲಕ ಬಸ್‌ನ್ನು ರಿವರ್ಸ್ ತೆಗೆಯುವಾಗ ನಿಯಂತ್ರಣ ತಪ್ಪಿ ಪಕ್ಕದ ತೋಡಿಗೆ ಉರುಳಿದೆ ಎಂದು ತಿಳಿದುಬಂದಿದೆ. ಅಪಘಾತದ ವೇಳೆ ಬಸ್‌ನಲ್ಲಿ ಸುಮಾರು 20 ವಿದ್ಯಾರ್ಥಿಗಳು ಇದ್ದರು. ಬಸ್ ಉರುಳುತ್ತಿದ್ದಂತೆ ಮಕ್ಕಳು ಭಯದಿಂದ ಕಿರುಚಾಡಿದ್ದು, ಸ್ಥಳೀಯರು ತಕ್ಷಣ ಸ್ಥಳಕ್ಕೆ ಧಾವಿಸಿ ಮಕ್ಕಳನ್ನು ಸುರಕ್ಷಿತವಾಗಿ ಹೊರತೆಗೆದರು. ಘಟನೆಯಲ್ಲಿ ಏಳು ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಎಲ್ಲ ವಿದ್ಯಾರ್ಥಿಗಳು ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಮಣಿಪಾಲ ಪೊಲೀಸ್ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕ್ರೇನ್…
ಪುತ್ತೂರು, ಜು. 10: ಪುರುಷರಕಟ್ಟೆಯಲ್ಲಿ ನಡೆದ ಇತ್ತೀಚಿನ ಘಟನೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ಕೋಮು ಸೌಹಾರ್ದತೆಯನ್ನು ಕದಡುವ ರೀತಿಯಲ್ಲಿ ಸುಳ್ಳು ಮಾಹಿತಿಯನ್ನು ಪ್ರಸಾರ ಮಾಡಿ ಸಮಾಜಕ್ಕೆ ತಪ್ಪು ಸಂದೇಶವನ್ನು ನೀಡಿದ ಆರೋಪದ ಮೇಲೆ, ಪುತ್ತೂರು ನಗರ ಪೊಲೀಸರು ಏಳು ವೆಬ್ ನ್ಯೂಸ್ ಪೋರ್ಟಲ್‌ಗಳು ಮತ್ತು ಸಾಮಾಜಿಕ ಜಾಲತಾಣಗಳ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಪುತ್ತೂರು ಪುರುಷರಕಟ್ಟೆಯಲ್ಲಿ ಘಟನೆಯೊಂದು ನಡೆದಿತ್ತು. ಈ ಘಟನೆಯನ್ನು ವಾಸ್ತವಿಕವಾಗಿ ವರದಿ ಮಾಡುವ ಬದಲು, ಆರೋಪಿತ ಮಾಧ್ಯಮಗಳು ಕೋಮು ಬಣ್ಣ ಬಳಿದು ಹಿಂದೂ ಮತ್ತು ಮುಸ್ಲಿಂ ಸಮುದಾಯಗಳ ನಡುವೆ ವಿಭಜನೆ ಉಂಟುಮಾಡುವ ಪ್ರಯತ್ನ ಮಾಡಿವೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಕೋಮು ಸೌಹಾರ್ದತೆಯನ್ನು ಕದಡಲು ಈ ವೇದಿಕೆಗಳು ಸುಳ್ಳು ಮಾಹಿತಿಯನ್ನು ಹರಡುತ್ತಿವೆ ಎಂದು ಸಾರ್ವಜನಿಕರು ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ.ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್), 2023ರ ಸೆಕ್ಷನ್ 353(2) ಅಡಿಯಲ್ಲಿ ಪುತ್ತೂರು ಚಾವಡಿ (Instagram), ಹೊಸ ದಿಗಂತ, Zoomintv. online, News focuskannada. com, ಉದಯವಾಣಿ, Prakharanews. com ಮತ್ತು…
ಮಂಗಳೂರು, ಜು. 10: ತೊಕ್ಕೊಟ್ಟು-ಮಂಗಳೂರು ನಡುವಿನ ನೇತ್ರಾವತಿ ಸೇತುವೆಯ ರಸ್ತೆ ಹಾಳಾಗಿದ್ದು, ದಿನನಿತ್ಯ ಸಂಚರಿಸುವ ವಾಹನ ಸವಾರರಿಗೆ ಭಾರಿ ಅಡಚಣೆಯುಂಟಾಗುತ್ತಿದೆ. ರಸ್ತೆಯುದ್ದಕ್ಕೂ ಗುಂಡಿಗಳು ಮತ್ತು ಹಾನಿಗೊಳಗಾದ ಭಾಗಗಳು ವಾಹನ ಸವಾರರಿಗೆ, ವಿಶೇಷವಾಗಿ ದ್ವಿಚಕ್ರ ವಾಹನ ಸವಾರರಿಗೆ ಪ್ರಾಣಾಪಾಯವನ್ನು ತಂದೊಡ್ಡಿದೆ. ರಸ್ತೆಯಲ್ಲಿನ ಗುಂಡಿಗಳನ್ನು ತಪ್ಪಿಸಲು ವಾಹನ ಸವಾರರು ಅನಿವಾರ್ಯವಾಗಿ ವಾಹನಗಳ ವೇಗವನ್ನು ಇದ್ದಕ್ಕಿದ್ದಂತೆ ತಗ್ಗಿಸಬೇಕಾಗುತ್ತಿದೆ ಅಥವಾ ದಿಕ್ಕನ್ನು ಬದಲಿಸಬೇಕಾಗುತ್ತಿದೆ. ಇದರಿಂದ ಸಂಚಾರ ದಟ್ಟಣೆ ಉಂಟಾಗುತ್ತಿದ್ದು, ಅಪಘಾತಗಳ ಭೀತಿಯೂ ಹೆಚ್ಚಾಗಿದೆ. ಬಸ್ಸುಗಳು, ಕಾರುಗಳು ಮತ್ತು ಘನ ಲಾರಿಗಳು ಸೇರಿದಂತೆ ಸಾವಿರಾರು ವಾಹನಗಳು ಪ್ರತಿದಿನ ಈ ಮಾರ್ಗದಲ್ಲಿ ಸಂಚರಿಸುತ್ತಿದ್ದು, ತಕ್ಷಣವೇ ದುರಸ್ತಿ ಕಾರ್ಯ ಕೈಗೊಳ್ಳದಿದ್ದರೆ ಪರಿಸ್ಥಿತಿ ಇನ್ನಷ್ಟು ಹದಗೆಡಲಿದೆ ಎಂದು ಪ್ರಯಾಣಿಕರು ಆತಂಕ ವ್ಯಕ್ತಪಡಿಸಿದ್ದಾರೆ.ಇದರೊಂದಿಗೆ, ಈ ಭಾಗದಲ್ಲಿ ಸೂಕ್ತ ಸಿಸಿಟಿವಿ ಕಣ್ಗಾವಲು ಇಲ್ಲದಿರುವುದು ಮತ್ತೊಂದು ಆತಂಕದ ವಿಷಯವಾಗಿದೆ. ಸೂಕ್ತ ನಿಗಾ ಇಲ್ಲದಿರುವುದು ಟ್ರಾಫಿಕ್ ನಿರ್ವಹಣೆಗೆ ಅಡ್ಡಿಯಾಗುವುದಲ್ಲದೆ, ಅಪಘಾತ ಅಥವಾ ಇತರೆ ಅಹಿತಕರ ಘಟನೆಗಳು ನಡೆದಾಗ ತನಿಖೆ ನಡೆಸುವುದಕ್ಕೂ ಕಷ್ಟವಾಗುತ್ತದೆ ಎಂದು ಸಾರ್ವಜನಿಕರು ಅಭಿಪ್ರಾಯಪಟ್ಟಿದ್ದಾರೆ.ನೇತ್ರಾವತಿ ಸೇತುವೆಯು ತೊಕ್ಕೊಟ್ಟು ಮತ್ತು…
ವಯನಾಡು, ಜು. 10: ಕೇರಳದ ವಯಾನಾಡಿನಲ್ಲಿ ಸಂಭವಿಸಿದ ಭೀಕರ ಭೂಕುಸಿತದ ದುರಂತ ಸ್ಥಳದಿಂದ ಗುರುವಾರ ಮೂರು ಶವವನ್ನು ಹೊರತೆಗೆಯಲಾಗಿದ್ದು, ಅವಘಡದಲ್ಲಿ ಮೃತಪಟ್ಟವರ ಸಂಖ್ಯೆ 6ಕ್ಕೆ ಏರಿಕೆಯಾಗಿದೆ. ಈ ಬಗ್ಗೆ ಕೇರಳ ಸಚಿವರಾದ ಎ.ಪಿ.ಅನಿಲ್ ಕುಮಾರ್ ಮತ್ತು ಟಿ.ಸಿದ್ದಿಕ್ ಮಾಹಿತಿ ನೀಡಿದ್ದು, “ಶೋಧ ಕಾರ್ಯಾಚರಣೆಯ ವಲಯ 1ರಲ್ಲಿ ಇಂದು ಬೆಳಗ್ಗೆ ಒಂದು ಶವ ಪತ್ತೆಯಾಗಿದೆ. ಮತ್ತೊಂದು ಶವ ದುರಂತ ಸ್ಥಳದ ಸಮೀಪ ಹರಿಯುವ ನದಿಯಲ್ಲಿ ಪತ್ತೆಯಾಗಿದೆ. ಸದ್ಯ ವಲಯ 1 ಮತ್ತು 2ರಲ್ಲಿ ಹಾಗೂ ನದಿಯ ಆಸುಪಾಸಿನಲ್ಲಿ ಶೋಧ ಕಾರ್ಯವನ್ನು ತೀವ್ರಗೊಳಿಸಲಾಗಿದೆ” ಎಂದಿದ್ದಾರೆ.”ಪತ್ತೆಯಾದ ಮೃತದೇಹಗಳನ್ನು ಉತ್ತರ ಪ್ರದೇಶದ ಸರ್ವೇಯರ್ ಅಜರುದ್ದೀನ್ ಅನ್ಸಾರಿ, ಹಿಮಾಚಲ ಪ್ರದೇಶದ ಎಂಜಿನಿಯರ್ ರಾಹುಲ್ ಶರ್ಮಾ ಹಾಗೂ ಬಿಹಾರದ ಆಪರೇಟರ್ ಮೊಹಮ್ಮದ್ ಇಮ್ರಾನ್ ಎಂದು ಗುರುತಿಸಲಾಗಿದೆ. ಸದ್ಯ ಮೃತದೇಹಗಳನ್ನು ವೈತಿರಿ ತಾಲೂಕು ಆಸ್ಪತ್ರೆಗೆ ರವಾನಿಸಲಾಗಿದ್ದು, ಮರಣೋತ್ತರ ಪರೀಕ್ಷೆ ನಡೆಸಲಾಗುವುದು. ಬಳಿಕ ಅವುಗಳನ್ನು ಕೋಝಿಕ್ಕೋಡ್ ಸರ್ಕಾರಿ ವೈದ್ಯಕೀಯ ಆಸ್ಪತ್ರೆಯಲ್ಲಿ ಇಡಲಾಗುವುದು” ಎಂದು ತಿಳಿಸಿದ್ದಾರೆ.
ಪಶ್ಚಿಮ ಬಂಗಾಳದ ಬರೂಯಿಪುರದಲ್ಲಿ ಹೊಸದಾಗಿ ನಿರ್ಮಾಣಗೊಂಡಿರುವ ಚರ್ಚ್ ಮೇಲೆ ದಾಳಿ ನಡೆಸಿ ಪವಿತ್ರ ಶಿಲುಬೆಯನ್ನು ಧ್ವಂಸಗೊಳಿಸಿರುವ ಘಟನೆ ಅತ್ಯಂತ ಖಂಡನೀಯವಾಗಿದ್ದು ಧಾರ್ಮಿಕ ಸೌಹಾರ್ದತೆಗೆ ಧಕ್ಕೆ ತರುವ ಇಂತಹ ಕೃತ್ಯಗಳನ್ನು ಯಾವುದೇ ಕಾರಣಕ್ಕೂ ಸಹಿಸಲು ಸಾಧ್ಯವಿಲ್ಲ ಎಂದು ಅಖಿಲ ಭಾರತ ಕ್ರೈಸ್ತ ಒಕ್ಕೂಟ (AICU) ಕರ್ನಾಟಕ ರಾಜ್ಯಾಧ್ಯಕ್ಷ ಅನ್ ಡಿಸೋಜ ಪಾನೀರ್ ತೀವ್ರವಾಗಿ ಖಂಡಿಸಿದ್ದಾರೆ. ಈ ಕುರಿತು ಇಂದು ಜುಲಾಯ್ 9ರಂದು ಗುರುವಾರ ಪತ್ರಿಕಾ ಹೇಳಿಕೆ ನೀಡಿರುವ ಅವರು, “ಯೇಸು ಕ್ರಿಸ್ತರು ಕೇವಲ ಚರ್ಚ್ ಗೋಡೆಗಳಲ್ಲಿ ಮಾತ್ರವಲ್ಲ; ಜನರ ಹೃದಯಗಳಲ್ಲಿ ಅವರ ಸೇವೆಯಲ್ಲಿ ಹಾಗೂ ಕರ್ತವ್ಯಗಳಲ್ಲಿ ಸದಾ ಜೀವಂತವಾಗಿದ್ದಾರೆ. ಶಿಲುಬೆಯನ್ನು ಧ್ವಂಸಗೊಳಿಸುವ ಮೂಲಕ ನಂಬಿಕೆಯನ್ನು ನಾಶಪಡಿಸಲು ಸಾಧ್ಯವಿಲ್ಲ “ಎಂದು ಹೇಳಿದ್ದಾರೆ. ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟುಮಾಡುವ ಇಂತಹ ಕೃತ್ಯಗಳು ಸಮಾಜದಲ್ಲಿ ಅಶಾಂತಿ, ದ್ವೇಷ ಮತ್ತು ವೈಮನಸ್ಸನ್ನು ಹರಡುವ ದುರುದ್ದೇಶಪೂರಿತ ಪ್ರಯತ್ನಗಳಾಗಿವೆ. ಶಾಂತಿ ಮತ್ತು ಸೌಹಾರ್ದತೆಯನ್ನು ಬಯಸುವ ಯಾವುದೇ ನಾಗರಿಕ ಸಮಾಜದಲ್ಲಿ ಇಂತಹ ಕೃತ್ಯಗಳಿಗೆ ಸ್ಥಾನವಿಲ್ಲ ಎಂದು ಅವರು ತಿಳಿಸಿದ್ದಾರೆ. ಘಟನೆಯಲ್ಲಿ ಭಾಗಿಯಾಗಿರುವ ಎಲ್ಲಾ…

