Author: UllalaVani

Kannada News From Coastal Karnataka

ಉಳ್ಳಾಲ : ಸಾರ್ವಜನಿಕ ನವರಾತ್ರಿ ಶ್ರೀ ಶಾರದಾ ಉತ್ಸವ ಸಮಿತಿ ಹಾಗೂ ಶ್ರೀ ವಿದ್ಯಾಂಜನೇಯ ವ್ಯಾಯಾಮ ಶಾಲೆಯ ಆಶ್ರಯದಲ್ಲಿ ಉಳ್ಳಾಲ ತಾಲೂಕು ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಸಹಯೋಗದೊಂದಿಗೆ, ಸೆ,14 ಭಾನುವಾರ ಬೆಳಿಗ್ಗೆ 10ರಿಂದ ಉಳ್ಳಾಲದ ಪುರಸಭೆ ಮೈದಾನದಲ್ಲಿ ದಸರಾ ಕಬಡ್ಡಿ -2025 ಜರಗಲಿದೆ. ದಿ| ರವೀಂದ್ರ ಮರೋಳಿ ಸ್ಮರಣಾರ್ಥ ನಡೆಯಲಿರುವ ಈ ಪಂದ್ಯಾವಳಿ ಉಳ್ಳಾಲ ತಾಲೂಕು ಮಟ್ಟದಲ್ಲಿ ನಡೆಯಲಿದೆ. ಪ್ರಥಮ ಸ್ಥಾನ ವಿಜೇತರಿಗೆ ರೂ.10,000 ಮತ್ತು ಟ್ರೋಫಿ, ದ್ವಿತೀಯ ಸ್ಥಾನಿಗಳಿಗೆ ರೂ. 6000 ಮತ್ತು ಟ್ರೋಫಿ, ತೃತೀಯ ಹಾಗೂ ಚತುರ್ಥ ಸ್ಥಾನಿಗಳಿಗೆ ತಲಾ ರೂ.3000 ನಗದು ಹಾಗೂ ಟ್ರೋಫಿಯನ್ನು ನೀಡಲಾಗುವುದಲ್ಲದೆ, ಉತ್ತಮ ದಾಳಿಗಾರ, ಉತ್ತಮ ಹಿಡಿತಗಾರ, ಸವ್ಯಸಾಚಿ ಪ್ರಶಸ್ತಿಗಳನ್ನು ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ 8880462587 ಅಥವಾ 7899445010 ಮೊಬೈಲನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

Read More

ಪುತ್ತೂರು: ಕಾಲೇಜು ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ಪ್ರಕರಣದಲ್ಲಿ ಯುವಕನನ್ನು ಬೆಳ್ಳಾರೆ ಪೊಲೀಸರು ಬಂಧಿಸಿದ್ದಾರೆ. ಪೆರ್ಲಂಪಾಡಿ ನಿವಾಸಿ ಉದಯ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಕೆಲ ದಿನಗಳ ಹಿಂದೆ ವಿದ್ಯಾರ್ಥಿನಿ ಮನೆಗೆ ಹೋಗುತ್ತಿದ್ದ ಸಂದರ್ಭದಲ್ಲಿ ಬೈಕಿನಲ್ಲಿ ಆಗಮಿಸಿದ ಯುವಕನೋರ್ವ ಕಿರುಕುಳ ನೀಡಿದ್ದಾನೆಂದು ವಿದ್ಯಾರ್ಥಿನಿ ಪೊಲೀಸರಿಗೆ ಪೊಲೀಸರಿಗೆ ದೂರು ನೀಡಿದ್ದರು. ಕೇಸು ದಾಖಲಿಸಿಕೊಂಡ ಪೊಲೀಸರು ಘಟನೆಯ ಸ್ಥಳದ ಸುತ್ತಮುತ್ತ ಅಳವಡಿಸಲಾಗಿದ್ದ ಸುಮಾರು 15 ಸಿಸಿ ಕ್ಯಾಮೆರಾಗಳನ್ನು ಪರಿಶೀಲಿಸಿದ ಬಳಿಕ ಬೈಕ್‌ ನಂಬ‌ರ್ ಪತ್ತೆ ಹಚ್ಚಿದ್ದರು. ಅದರ ಆಧಾರದ ಮೇಲೆ ಬೆಳ್ಳಾರೆ ಠಾಣೆಯ ಎಸ್‌ಐ ಡಿ.ಎನ್. ಈರಯ್ಯ ನೇತೃತ್ವದ ಪೊಲೀಸ್ ತಂಡ ಕಾರ್ಯಾಚರಣೆ ನಡೆಸಿ ಆರೋಪಿ ಉದಯನನ್ನು ಬಂಧಿಸಿದ್ದಾರೆ.

Read More

ಮಂಗಳೂರು : ಬೆಂಗಳೂರು ವಿದ್ಯಾರಣ್ಯ ಪುರದ ಕಿಂಗ್ಸ್ ಮೇಯಾಡಿಸ್ ಹೋಟೆಲ್ ನಲ್ಲಿ ಇತ್ತೀಚೆಗೆ ನಡೆದ ರಾಷ್ಟ್ರ ಮಟ್ಟದ ಮಿಸ್ ಆ್ಯಂಡ್ ಮಿಸಸ್ ಇಂಡಿಯಾ ಆಸ್ಟ್ರಲ್ ಪೇಜಂಟ್ಸ್ – 2025ರ 9ನೇ ಆವೃತ್ತಿಯ ಗ್ರ್ಯಾಂಡ್ ಫಿನಾಲೆಯಲ್ಲಿ ಮಂಗಳೂರಿನ ಆದಿಶ್ (5) ಪ್ರಥಮ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ. ಮೂರು ದಿನಗಳ ಕಾಲ ವಿವಿಧ ಆಯಾಮಗಳಲ್ಲಿ ನಡೆದ ಗ್ರ್ಯಾಂಡ್ ಫಿನಾಲೆಯಲ್ಲಿ ಪಾಧ್ವೆ ಮಾಡಲಿಂಗ್ ಬಲ್ಲಾಳ್ ಬಾಗ್ ದೀಪಕ್ ಗಂಗೂಲಿ ಇವರ ಮಾರ್ಗದರ್ಶನದಲ್ಲಿ ಸ್ಪರ್ಧಿಸಿದ್ದಾರೆ. ವಿಜೇತ ಆದಿಶ್ ನಗರದ ಅಜಿತ್ ಮತ್ತು ಮಂಜುಶ ದಂಪತಿಯ ಪುತ್ರ, ಮಂಗಳೂರಿನ ಕ್ಯಾರ್ಮೆಲ್ ಶಾಲೆಯ ಯುಕೆಜಿ ವಿದ್ಯಾರ್ಥಿ.

Read More

ಮಂಗಳೂರು : ಮಂಗಳೂರಿನ ಫೆರಾರ್‌ನ ಆಶ್ನಾ ಜುವೆಲ್ ಡಿಸೋಜಾ, ಶನಿವಾರ ಬೆಂಗಳೂರಿನ ದಿ ಕಿಂಗ್ಸ್ ಮೀಡೋಸ್ನಲ್ಲಿ ನಡೆದ ವೈಭವಮಯ ಅಂತಿಮ ಸ್ಪರ್ಧೆಯಲ್ಲಿ ಮಿಸ್ ಇಂಡಿಯಾ ಆಸ್ಟ್ರಲ್ 2025ರಾಗಿ ಆಯ್ಕೆಯಾದರು. ದೇಶದ ವಿವಿಧ ಭಾಗಗಳಿಂದ ಬಂದ 45 ಸ್ಪರ್ಧಿಗಳ ನಡುವೆ ನಡೆದ ಈ ಸ್ಪರ್ಧೆ, ಮಿಸ್ & ಮಿಸೆಸ್ ಇಂಡಿಯಾ ಆಸ್ಟ್ರಲ್ ಪೇಜೆಂಟ್ಸ್‌ನ 9ನೇ ಆವೃತ್ತಿಯಾಗಿತ್ತು. ಅತ್ಯಂತ ಪ್ರತಿಷ್ಠಿತ ರಾಷ್ಟ್ರೀಯ ಕಿರೀಟದ ಜೊತೆಗೆ, ಆಶ್ನಾ ಹಲವು ಉಪಶೀರ್ಷಿಕೆಗಳನ್ನೂ ತಮ್ಮದಾಗಿಸಿಕೊಂಡರು. ಅವುಗಳಾದ ಮಿಸ್ ಬೆಸ್ಟ್ ಟಾಲೆಂಟ್, ಮಿಸ್ ಬೆಸ್ಟ್ ಸ್ಟೇಜ್ ಪ್ರೆಸೆನ್ಸ್, ಹಾಗೂ ಮಿಸ್ ಬೆಸ್ಟ್ ವಾಕ್ ಪ್ರಶಸ್ತಿಗಳು ಅವರನ್ನು ಈ ಸ್ಪರ್ಧೆಯ ಪ್ರಮುಖ ವಿಜೇತೆಯನ್ನಾಗಿ ಮಾಡಿತು. ಈ ಸಾಧನೆಯೊಂದಿಗೆ, ಆಶ್ನಾ ಮಿಸ್ ಯೂನಿವರ್ಸ್ ಸೆಲೆಸ್ಟಿಯಲ್ ಇಂಡಿಯಾ 2026 ಎಂಬ ಗೌರವಾನ್ವಿತ ಬಿರುದನ್ನೂ ಗಳಿಸಿದ್ದಾರೆ. ಇದರ ಮೂಲಕ ಅವರು ಮುಂದಿನ ಮಿಸ್ ಯೂನಿವರ್ಸ್ ಸೆಲೆಸ್ಟಿಯಲ್ ಅಂತಾರಾಷ್ಟ್ರೀಯ ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧಿಸಲಿದ್ದಾರೆ. ಮಿಸ್ & ಮಿಸೆಸ್ ಇಂಡಿಯಾ ಆಸ್ಟ್ರಲ್ ಪೇಜೆಂಟ್ಸ್ ಆಯೋಜಿಸಿದ ಈ ಕಾರ್ಯಕ್ರಮ ಅದ್ಭುತ…

Read More

ಮಂಗಳೂರು : ಅರೋಮಾಝೆನ್ ಪ್ರೈ. ಲಿಮಿಟೆಡ್ ಫ್ಯಾಕ್ಟರಿಯಲ್ಲಿ ಇಂದು ಮುಂಜಾನೆ ಬೆಂಕಿ ಕಾಣಿಸಿ‌ಕೊಂಡಿದ್ದು, ಇದನ್ನು ಗಮನಿಸಿದ ಎಂ.ಸಿ.ಎಫ್ ಸಂಸ್ಥೆಯ ಸಿಬ್ಬಂದಿಗಳು ಅಗ್ನಿಶಾಮಕ ದಳದವರಿಗೆ ಕರೆ ಮಾಡಿದ್ದು ನಂತರ ಅಲ್ಲಿಗೆ ಕದ್ರಿ ಅಗ್ನಿಶಾಮಕ ದಳದ ಸಿಬ್ಬಂದಿಗಳು ಹಾಗು ಅಧಿಕಾರಿಗಳ ಸಹಾಯದಿಂದ ಬೆಂಕಿಯನ್ನು ನಂದಿಸಲಾಯಿತು. ಮೇಲ್ನೋಟಕ್ಕೆ ಶಾರ್ಟ್ ಸರ್ಕ್ಯೂಟ್ ‌ನಿಂದಾಗಿ ಅನಾಹುತ ನಡೆದಿರಬಹುದೆಂಬ ಶಂಕೆ ವ್ಯಕ್ತವಾಗಿದ್ದು. ಇನ್ನು ಇದರ ಸಂಪೂರ್ಣ ತನಿಖೆ ನಡೆಯಬೇಕಾಗಿದೆ. ಸೋಪ್ ಹಾಗೂ ಪರ್ಫ್ಯೂಮ್ ಗೆ ಉಪಯೋಗಿಸುವ ಲಿಕ್ವೀಡ್ ತಯಾರಿಸುವ ಫ್ಯಾಕ್ಟರಿ ಇದಾಗಿತ್ತು. ಬೆಂಕಿ‌ ಆಹುತಿಯಿಂದ ಸರಿ ಸುಮಾರು 4 ಕೋಟಿ ನಷ್ಟ ಆಗಿರಬಹುದೆಂದು ಅಂದಾಜಿಸಲಾಗಿದೆ. ಮಂಗಳೂರಿನ ಬೈಕಂಪಾಡಿ‌ ಇಂಡಸ್ಟ್ರಿಯಲ್ ಪ್ರದೇಶದಲ್ಲಿರುವ ಫ್ಯಾಕ್ಟರಿ ಇದಾಗಿದೆ.

Read More

ಮಂಗಳೂರು : ಸಂತ ಮದರ್ ತೆರೇಸಾ ವಿಚಾರ ವೇದಿಕೆ ಮಂಗಳೂರು ಇದರ ಆಶ್ರಯದಲ್ಲಿ ‘ಪ್ರೀತಿ ಹರಡಲಿ ಎಲ್ಲೆಡೆ’ ಎಂಬ ಘೋಷವಾಕ್ಯದೊಂದಿಗೆ ಮಾನವೀಯತೆಯ ಪ್ರತಿರೂಪ ಸಂತ ಮದರ್ ತೆರೇಸಾರವರ 28ನೇ ಸಂಸ್ಮರಣಾ ದಿನಾಚರಣೆಯ ಅಂಗವಾಗಿ ಸೆಪ್ಟೆಂಬರ್ 11 ಗುರುವಾರದಂದು ಬೆಳಿಗ್ಗೆ 10ಕ್ಕೆ ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ‘ಸಹಬಾಳ್ವೆಗೆ ಎದುರಾಗಿರುವ ಅಪಾಯಗಳು; ಪ್ರಜಾಪ್ರಭುತ್ವದ ಮುಂದಿರುವ ಸವಾಲುಗಳು’ ಎಂಬ ವಿಷಯದಲ್ಲಿ ದ.ಕ. ಜಿಲ್ಲಾ ಮಟ್ಟದ ವಿಚಾರ ಸಂಕಿರಣವು ಜರುಗಲಿದೆ. ವಿಚಾರ ಸಂಕಿರಣವನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರ, ಬೆಂಗಳೂರು ಇದರ ಅಧ್ಯಕ್ಷರಾದ ಪ್ರೊ. ಪುರುಷೋತ್ತಮ ಬಿಳಿಮಲೆಯವರು ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ನಾಡಿನ ಖ್ಯಾತ ಸಾಹಿತಿಗಳಾದ ಡಾ. ಕೆ. ಶರೀಫಾ ಹಾಗೂ ಮಂಗಳೂರು ಧರ್ಮಪ್ರಾಂತ್ಯದ ವಿಶ್ರಾಂತ ಧರ್ಮಾಧ್ಯಕ್ಷರಾದ ಅತೀ. ವಂ. ಡಾ| ಎಲೋಶಿಯಸ್ ಪೌಲ್ ಡಿ’ಸೋಜರವರು ಭಾಗವಹಿಸಲಿದ್ದಾರೆ. ಸಭೆಯ ಅಧ್ಯಕ್ಷತೆಯನ್ನು ಸಂತ ಮದರ್ ತೆರೇಸಾ ವಿಚಾರ ವೇದಿಕೆಯ ಅಧ್ಯಕ್ಷರಾದ ರೋಯ್ ಕ್ಯಾಸ್ಟಲಿನೋರವರು ವಹಿಸಲಿದ್ದಾರೆ. ಅಂದು ಬೆಳಿಗ್ಗೆ 8.30ಕ್ಕೆ ಏಕತಾರಿ ಹಾಡುಗಾರರಾದ ನಾದಾ ಮಣಿನಾಲ್ಕೂರುರವರಿಂದ ‘ಪ್ರೀತಿಯ ಸಿಂಚನ’ ಎಂಬ…

Read More

ಮಂಗಳೂರು : ಮಂಗಳೂರಿನ ಪ್ರತಿಷ್ಠಿತ ರೋಹನ್ ಕಾರ್ಪೋರೇಶನ್ ರೇಶನ್ ಸಂಸ್ಥೆಯ ವತಿಯಿಂದ ರೋಹನ್ ಸಿಟಿ ಕಛೇರಿಯಲ್ಲಿ ಒಣಂ ಹಬ್ಬವನ್ನು ಆಚರಿಸಲಾಯಿತು. ಸಿಬ್ಬಂದಿಗಳು ಹಬ್ಬದ ಸಂಭ್ರಮದಲ್ಲಿ ಪಾಲ್ಗೊಂಡು, ಸಾಂಸ್ಕೃತಿಕ ವೈಭವವನ್ನು ಹಂಚಿಕೊಂಡರು.ಕಾರ್ಯಕ್ರಮವು ದೀಪಪ್ರಜ್ವಲನದೊಂದಿಗೆ ಆರಂಭಗೊಂಡಿತು. ಸಂಸ್ಥೆಯ ನಿರ್ದೇಶಕ ಡಿಯೋನ್ ಮೊಂತೆರೋ ಮತ್ತು ಜನರಲ್ ಮ್ಯಾನೇಜರ್ ಶ್ರೀಮತಿ ಸುಮನಾ ಅವರು ದೀಪ ಬೆಳಗುವ ಮೂಲಕ ಸಮಾರಂಭಕ್ಕೆ ಚಾಲನೆ ನೀಡಿದರು.ಓಣಂ ಹಬ್ಬದ ಹೂವಿನ ಅಲಂಕಾರ ( ಪೂಕಳಂ ), ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಸಂಸ್ಥೆಯ ಸಿಬ್ಬಂದಿಗಳ ಸಕ್ರಿಯ ಭಾಗವಹಿಸುವಿಕೆ ಕಾರ್ಯಕ್ರಮಕ್ಕೆ ಇನ್ನಷ್ಟು ಮೆರಗು ತಂದಿತು. ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ನಿರ್ದೇಶಕ ಡಿಯೋನ್ ಮೊಂತೆರೋ “ಒಣಂ ಹಬ್ಬವು ಏಕತೆ ಸಂಕೇತ. ಇಂತಹ ಆಚರಣೆಗಳು ನಮ್ಮ ಬಾಂಧವ್ಯವನ್ನು ಬಲಪಡಿಸುತ್ತವೆ” ಎಂದು ಹೇಳಿದರು.“ಎಲ್ಲರೂ ಒಗ್ಗಟ್ಟಿನಿಂದ ಒಂದು ಕುಟುಂಬದಂತೆ ಹಬ್ಬವನ್ನು ಆಚರಿಸುತ್ತಿರುವುದು ಸಂತೋಷಕರ. ಇಂತಹ ಸಂದರ್ಭಗಳು ಪರಸ್ಪರ ಗೌರವ ಮತ್ತು ಸ್ನೇಹವನ್ನು ಹೆಚ್ಚಿಸುತ್ತವೆ” ಎಂದು ಜನರಲ್ ಮ್ಯಾನೇಜರ್ ಶ್ರೀಮತಿ ಸುಮನಾ ಹೇಳಿದರು.ರೋಹನ್ ಕಾರ್ಪೋರೇಶನ್ ವತಿಯಿಂದ ಹಮ್ಮಿಕೊಂಡಿದ್ದ ಈ ಒಣಂ ಆಚರಣೆಯು ಕೇವಲ…

Read More

25ರ ಮಾರ್ಚ್ 22ನೇ ದಿನ ಪೋಲಿಸರಿಂದ ದೊರಕಿದ ಮಾಹಿತಿಯ ಮೇರೆಗೆ ಮಂಗಳೂರು ಸೆಂಟ್ರಲ್ ರೈಲ್ವೆ ನಿಲ್ದಾಣದಿಂದ ಸ್ನೇಹಾಲಯದ ರಕ್ಷಣಾ ತಂಡವು ಪೂಜಾ ಮತ್ತು ಆಕೆಯ ಎಂಟು ತಿಂಗಳಿನ ಮಗು ಆಯುಷನನ್ನು ರಕ್ಷಿಸಿ ತಾಯಿ–ಮಗುವನ್ನು ಮಂಜೇಶ್ವರದ ಸ್ನೇಹಾಲಯ ಮನೋ ಸಾಮಾಜಿಕ ಪುನಶ್ಚೇತನ ಸಂಸ್ಥೆಯ ಮಹಿಳೆಯರ ವಿಭಾಗದಲ್ಲಿ ದಾಖಲಿಸಿದರು. ದೊರೆತ ಮಾಹಿತಿಯ ಪ್ರಕಾರ ಪೂಜಾ ಓರ್ವ ಗೃಹಿಣಿಯಾಗಿದ್ದು, ಮಾನಸಿಕ ಅಸ್ವಸ್ಥತೆಯ ಕಾರಣದಿಂದ ಬಿಹಾರವನ್ನು ಬಿಟ್ಟು ಉದ್ಯೋಗಕ್ಕಾಗಿ ತಮಿಳುನಾಡಿಗೆ ಹೊರಟಿದ್ದರು. ಆದರೆ ದುರಾದೃಷ್ಟದಿಂದ ತಮ್ಮ ಕುಟುಂಬದೊಡನೆ ಸಂಪರ್ಕ ಕಳೆದುಕೊಂಡರು ಅವರಿಂದ ಬೇರ್ಪಟ್ಟರು. ಆದರೆ ಸ್ನೇಹಾಲಯದಲ್ಲಿ ಆವಳ ಜೀವನಕ್ಕೆ ಒಂದು ಹೊಸ ತಿರುವು ಬಂತು. ಸ್ನೇಹಾಲಯದಲ್ಲಿ ದೊರೆತ ಸಮಗ್ರ ಮಾನಸಿಕ ಶಾರೀರಿಕ ಚಿಕಿತ್ಸೆ, ಅತ್ತ್ಯುತ್ತಮ ಆರೈಕೆ ಮತ್ತು ಸಮಾಲೋಚನೆಗಳಿಂದ ಆಕೆಯು ತನ್ನ ಮಾನಸಿಕ ಆರೋಗ್ಯವನ್ನು ಪುನಃ ಪಡೆದುಕೊಂಡಳು. ತದನಂತರ ಅವರ ಪುನರ್ಮಿಲನ ಪ್ರಕ್ರಿಯೆ ಪ್ರಾರಂಭವಾಯಿತು. ಶ್ರದ್ಧಾ ಫೌಂಡೇಶನಿನ ಬಸವರಾಜ್ ಅವರ ನೇತ್ರತ್ವದಲ್ಲಿ ಪೂಜಾಳ ವಿಳಾಸವನ್ನು ಪತ್ತೆ ಹಚ್ಚುವ ಕಾರ್ಯ ನಡೆಯಿತು ಹಾಗೂ ದೂರದ ಬಿಹಾರದಲ್ಲಿ ವಾಸಿಸುತ್ತಿರುವ ಆಕೆಯ…

Read More

ಮಂಗಳೂರು : ಮೂರು ದಶಕಗಳ ಅನುಭವ ಹೊಂದಿರುವ ಭಾರತದ ಅತ್ಯಂತ ವಿಶ್ವಾಸಾರ್ಹ ರಿಯಲ್ ಎಸ್ಟೇಟ್ ಡೆವಲಪರ್‌ಗಳಲ್ಲಿ ಒಂದಾದ ಮಂಗಳೂರಿನ ರೋಹನ್ ಕಾರ್ಪೊರೇಷನ್, ತನ್ನ ಮಹತ್ವಾಕಾಂಕ್ಷಿ ಯೋಜನೆ – ರೋಹನ್ ಮರೀನಾ ಒನ್ ಅನ್ನು ಹೆಮ್ಮೆಯಿಂದ ಪರಿಚಯಿಸುತ್ತಿದೆ. ಭಾರತದ ರಿಯಲ್‌ ಎಸ್ಟೇಟ್‌ ಇತಿಹಾಸದಲ್ಲೇ ಒಂದು ವಿನೂತನ ಪ್ರಯೋಗವಾಗಿರುವ ರೋಹನ್ ಮರೀನಾ ಒನ್, ಅರಬ್ಬಿ ಸಮುದ್ರದ ಸುಂದರ ಕಡಲತೀರದ ದೃಶ್ಯವು ಪ್ರತಿಯೊಂದು ಅಪಾರ್ಟ್‌ಮೆಂಟ್ಗೂ ಕಾಣಿಸುವಂತೆ ಇರುವ ಉತ್ಕೃಷ್ಟ ವಸತಿ ಯೋಜನೆಯಾಗಿದೆ. ಮಂಗಳೂರಿನ ಸುರತ್ಕಲ್‌ NITK ಬೀಚ್ ರಸ್ತೆಯಲ್ಲಿರುವ ರೋಹನ್ ಮರೀನಾ ಒನ್, ಒಟ್ಟು 8.2 ಎಕರೆ ವಿಸ್ತರಿಸಿದ್ದು ಮತ್ತು ಕಡಲ ತೀರದಲ್ಲಿ ಐಷಾರಾಮಿ ಜೀವನಶೈಲಿಯನ್ನು ನೀಡಬಲ್ಲ 433 ಅಲ್ಟ್ರಾ-ಲಕ್ಷುರಿ ಅಪಾರ್ಟ್ಮೆಂಟ್‌ ಗಳನ್ನು ಹೊಂದಿದೆ. ಈ ಯೋಜನೆಯಲ್ಲಿ, 39 ಮಹಡಿಗಳಿರುವ “ದಿ ರಿಟ್ರೀಟ್” ಮತ್ತು 47 ಮಹಡಿಗಳಿರುವ “ದಿ ರಿಸಾರ್ಟ್” ಎಂಬ ಎರಡು ಟವರ್ ಗಳಿದ್ದು, ರೋಹನ್ ಮರೀನಾ ಒನ್ ಅನ್ನು ಭಾರತದ ರಿಯಲ್ ಎಸ್ಟೇಟ್ ಕ್ಷೇತ್ರದಲ್ಲೇ ಹೊಸ ಮೈಲಿಗಲ್ಲಾಗಿ ನಿಲ್ಲುವಂತೆ ಮಾಡಿದೆ. ಕರಾವಳಿ ಜೀವನಶೈಲಿಯಲ್ಲೇ…

Read More

ದೇರಳಕಟ್ಟೆ : ಆಳುವ ಸರಕಾರಗಳು ಉದ್ಯೋಗಗಳನ್ನು ಸೃಷ್ಟಿಸುವ ಜವಾಬ್ದಾರಿಯನ್ನು ಮರೆತು ಸಾರ್ವಜನಿಕ ಉದ್ದಿಮೆಗಳನ್ನು ಕಾರ್ಪೊರೇಟ್ ಕಂಪೆನಿಗಳಿಗೆ ವಹಿಸಿ ಅಲ್ಲಿ ಯುವಜನರನ್ನು ಗುತ್ತಿಗೆ ಅರೆಗುತ್ತಿಗೆ ದುಡಿಸಿಕೊಳ್ಳಲಾಗುತ್ತಿದೆ ಎಂದು ಡಿವೈಎಫ್‌ಐ ದ.ಕ ಜಿಲ್ಲಾ ಕಾರ್ಯದರ್ಶಿ ಸಂತೋಷ್ ಬಜಾಲ್ ಆರೋಪಿಸಿದ್ದಾರೆ. ಡಿವೈಎಫ್‌ಐ ದ.ಕ ಜಿಲ್ಲಾ ಸಮಿತಿ‌ ನೇತೃತ್ವದಲ್ಲಿ ನಡೆಯುತ್ತಿರುವ ಉದ್ಯೋಗದ ಹಕ್ಕಿಗಾಗಿ ಯುವಜನ ಜಾಥಾದ ಭಾಗವಾಗಿ ದೇರಳಕಟ್ಟೆಯಲ್ಲಿ ನಡೆದ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಸಂತೋಷ್ “ಇತ್ತೀಚೆಗೆ ಕೇಂದ್ರ ಸರಕಾರ ಇತ್ತೀಚೆಗಿನ ಬಜೆಟ್ ನಲ್ಲಿ ಇಎಲ್ಐ ಸ್ಕೀಮ್ ಎಂದು 2 ಲಕ್ಷ ಕೋಟಿ ಹಣವನ್ನು ಉದ್ಯೋಗ ಸೃಷ್ಟಿಯ ಹೆಸರಲ್ಲಿ 500 ಖಾಸಗೀ ಕಂಪನಿಗಳಿಗೆ ವಹಿಸುವ ಕಾರ್ಪೊರೇಟ್ ಪರವಾದ ನೀತಿಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸರಕಾರದ ಪ್ರತಿಯೊಂದು ಇಲಾಖೆಯಲ್ಲಿ ಸಾವಿರಾರು ಉದ್ಯೋಗಗಳು ಖಾಲಿ ಬಿದ್ದಿದ್ದೆ ಅವುಗಳನ್ನು ಭರ್ತಿಗೆ ಕ್ರಮಗಳೇ ಇಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇದೇ ಸಂದರ್ಭ ಮಾತನಾಡಿದ ಸಾಮಾಜಿಕ ಡಿವೈಎಫ್‌ಐ ರಾಜ್ಯ ಕಾರ್ಯದರ್ಶಿ ಬಸವರಾಜ್ ಪೂಜಾರ್ “ದೇಶದ ಯುವಜನತೆಗೆ ಸಮಾನ ಶಿಕ್ಷಣ ಸಮಾನ ಉದ್ಯೋಗವನ್ನು ಪಡೆಯುವ ಅವಕಾಶ…

Read More