ಉಳ್ಳಾಲ: ಪ್ರಸಕ್ತ ಸಾಲಿನ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಉಳ್ಳಾಲ ತಾಲೂಕಿನ ಅಂಬ್ಲಮೊಗರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕರಾದ ಗಡಿನಾಡು ಕೂಳೂರು ಎಲಿಯಾಣದ ನಿವಾಸಿ ಜಗದೀಶ್ ಶೆಟ್ಟಿ ಎ. ಇವರು ಆಯ್ಕೆಯಾಗಿದ್ದಾರೆ. 1988ರ ನವೆಂಬರ್ 30ರಂದು ಶಿಕ್ಷಕ ವೃತ್ತಿಗೆ ಕಾಲಿಟ್ಟ ಜಗದೀಶ್ ಶೆಟ್ಟಿ, ಒಟ್ಟು 37 ವರ್ಷಗಳ ಸೇವಾ ಅವಧಿಯಲ್ಲಿ 13 ವರ್ಷಗಳ ಕಾಲ ಮುಖ್ಯಶಿಕ್ಷಕರಾಗಿ ಕಾರ್ಯನಿರ್ವಹಿಸಿದ್ದಾರೆ. ಬಂಟ್ವಾಳದ ಇರಾ ಬಾಳೆಪುಣಿ ಶಾಲೆಯಿಂದ ವೃತ್ತಿ ಆರಂಭಿಸಿದ ಅವರು, ಅಂಬ್ಲಮೊಗರು ಶಾಲೆಯಲ್ಲಿ ಪ್ರಗತಿಪರ ಶಿಕ್ಷಣ ವಾತಾವರಣ ನಿರ್ಮಿಸಲು ಶ್ರಮಿಸಿದ್ದಾರೆ. ಅವರ ನೇತೃತ್ವದಲ್ಲಿ ಶಾಲೆಯ ಅಭಿವೃದ್ಧಿ ಕಾರ್ಯಗಳು ವಿಶಿಷ್ಟ ರೂಪ ಪಡೆದಿವೆ. ಸ್ಥಳೀಯ ದಾನಿಗಳು ಹಾಗೂ ಸಾರ್ವಜನಿಕರ ಸಹಕಾರದಲ್ಲಿ ಪ್ರೌಢಶಾಲೆ ಸ್ಥಾಪನೆ ಮತ್ತು 1.28 ಕೋಟಿ ರೂ. ವೆಚ್ಚದ ಕಟ್ಟಡ ನಿರ್ಮಾಣ, ಶಾಲಾ ದಾಖಲಾತಿಯನ್ನು 106ರಿಂದ 217ಕ್ಕೆ ಏರಿಕೆ, ಉಚಿತ ಬಸ್ ವ್ಯವಸ್ಥೆ, ಎಲ್‌ಕೆಜಿ–ಯುಕೇಜಿ ತರಗತಿಗಳ ಸ್ಥಾಪನೆ, ದ್ವಿಭಾಷಾ (ಕನ್ನಡ–ಆಂಗ್ಲ) ಮಾಧ್ಯಮ ತರಗತಿಗಳು, ಸ್ಮಾರ್ಟ್ ಟಿವಿ ಹಾಗೂ ಕಂಪ್ಯೂಟರ್ ಮೂಲಕ ಬೋಧನೆ,…
Author: UllalaVani
ಮಂಗಳೂರು : ರಾಷ್ಟ್ರಕ್ಕಾಗಿ ಮಧ್ಯಸ್ಥಿಕೆ ಎಂಬ 90 ದಿನಗಳ ವಿಶೇಷ ಮಧ್ಯಸ್ಥಿಕೆ ಅಭಿಯಾನ ಪ್ರಾರಂಭವಾಗಿದ್ದು, ಅ. 7ರ ವರೆಗೆ ನಡೆಯಲಿದೆ ಎಂದು ದ.ಕ ಜಿಲ್ಲಾ ಪ್ರಧಾನ ನ್ಯಾಯಾಧೀಶ ಬಸವರಾಜ್ ತಿಳಿಸಿದ್ದಾರೆ. ಎಲ್ಲಾ ನ್ಯಾಯಾಲಯಗಳಲ್ಲಿ ಬಾಕಿ ಇರುವ ಸಿವಿಲ್ ಪ್ರಕರಣಗಳು, ಮೋಟಾರು ಅಪಘಾತ ಪರಿಹಾರ ಪ್ರಕರಣಗಳು, ವೈವಾಹಿಕ ಹಾಗೂ ಕೌಟುಂಬಿಕ ನ್ಯಾಯಾಲಯದ ಪ್ರಕರಣಗಳು, ಚೆಕ್ ಅಮಾನ್ಯ ಪ್ರಕರಣಗಳು, ವಾಣಿಜ್ಯ ಮತ್ತು ಸೇವಾ ಪ್ರಕರಣಗಳು, ರಾಜಿಯಾಗಬಲ್ಲ ಅಪರಾಧಿಕ ಪ್ರಕರಣಗಳು, ಗ್ರಾಹಕರ ವ್ಯಾಜ್ಯ ಪ್ರಕರಣಗಳು, ಡಿ.ಆರ್.ಟಿ. ಪ್ರಕರಣಗಳು, ಭೂ-ಸ್ವಾಧೀನ ಪ್ರಕರಣಗಳು ಹಾಗೂ ಇತರ ಸಿವಿಲ್ ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಇತ್ಯರ್ಥಪಡಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ ಎಂದು ಅವರು ಹೇಳಿದರು. ಸಾರ್ವಜನಿಕರು ತಮ್ಮ ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಇತ್ಯರ್ಥಪಡಿಸಿಕೊಳ್ಳಲು ಇಚ್ಛಿಸಿದ್ದಲ್ಲಿ ನ್ಯಾಯಾಲಯಗಳಿಂದ ಪ್ರಕರಣಗಳನ್ನು ಮಧ್ಯಸ್ಥಿಕಾ ಕೇಂದ್ರಕ್ಕೆ ಸೂಚಿಸಲಾಗುತ್ತದೆ. ಆಗ ದಕ್ಷಿಣ ಕನ್ನಡ ನ್ಯಾಯಾಲಯ ಸಮುಚ್ಚಯದಲ್ಲಿರುವ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಹಾಗೂ ತಾಲೂಕು ನ್ಯಾಯಾಲಯಗಳ ಆವರಣಗಳಲ್ಲಿರುವ ಮಧ್ಯಸ್ಥಿಕಾ ಕೇಂದ್ರಗಳಿಗೆ ಉಭಯ ಪಕ್ಷದವರನ್ನು ಕರೆಯಿಸಲಿದ್ದು, ಚರ್ಚಿಸಿ ಇತ್ಯರ್ಥಪಡಿಸಿಕೊಳ್ಳಬಹುದು. ಹೈಕೋರ್ಟ್‌ಗಳಲ್ಲಿ…
ನವದೆಹಲಿ : ಜಿಎಸ್‌ಟಿ ಕೌನ್ಸಿಲ್ 8 ವರ್ಷದ ಬಳಿಕ ಜಿಎಸ್‌ಟಿ ಸ್ಲ್ಯಾಬ್ ಪರಿಷ್ಕರಣೆಗೆ ಒಪ್ಪಿಗೆ ಸೂಚಿಸಿದೆ. ಇನ್ಮುಂದೆ ದೇಶದಲ್ಲಿ 5%, 18% ಈ ಎರಡು ಜಿಎಸ್‌ಟಿ ಸ್ಲ್ಯಾಬ್ ಇರಲಿದ್ದು, ಸೆ.22 ರಿಂದ ನೂತನ ದರಗಳು ಅನ್ವಯವಾಗಲಿದೆ. ನಾಲ್ಕು ಸ್ಲ್ಯಾಬ್ ಬದಲಿಗೆ 5%, 18% ಸ್ಲ್ಯಾಬ್ ಗೆ ಸರ್ವಾನುಮತ ದೊರೆತಿದೆ. ಎರಡರ ಜೊತೆಗೆ ಐಷರಾಮಿ ವಸ್ತುಗಳಿಗೆ 40% ಜಿಎಸ್‌ಟಿಯ ಸ್ಲ್ಯಾಬ್ ಅನ್ವಯವಾಗಲಿದೆ. ದೆಹಲಿಯಲ್ಲಿ ಎರಡು ದಿನಗಳ ಕಾಲ ಜಿಎಸ್‌ಟಿ ಕೌನ್ಸಿಲ್ ಸಭೆ ನಡೆಯುತ್ತಿದೆ. ಮೊದಲ ದಿನದ ಸಭೆಯ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, “ಸಾಮಾನ್ಯ ಜನರನ್ನು ಗಮನದಲ್ಲಿಟ್ಟುಕೊಂಡು ಜಿಎಸ್‌ಟಿ ಸ್ಲ್ಯಾಬ್ ಬದಲಾವಣೆ ಮಾಡಲಾಗಿದೆ. ದಿನ ಬಳಕೆ ವಸ್ತುಗಳು, ಆರೋಗ್ಯ ವಲಯ ಸೇರಿ ಹಲವು ವಲಯಗಳಿಗೆ ಅನುಕೂಲವಾಗಲಿದೆ. ಸಾಕಷ್ಟು ಚರ್ಚೆ ಬಳಿಕ ನಿರ್ಧಾರಕ್ಕೆ ಬರಲಾಗಿದ್ದು ಎಲ್ಲರೂ ಒಮ್ಮತದಿಂದ ಬೆಂಬಲವನ್ನು ನೀಡಿದ್ದಾರೆ. ಇದಕ್ಕಾಗಿ ನಾನು ಜಿಎಸ್‌ಟಿ ಕೌನ್ಸಿಲ್ ನ ಎಲ್ಲ ಸದಸ್ಯರಿಗೂ ಅಭಾರಿಯಾಗಿದ್ದಾನೆ” ಎಂದು ಹೇಳಿದರು. ಯಾವ ವಸ್ತುಗಳು…
ಮಂಗಳೂರು : ‘ತುಳುನಾಡು, ನುಡಿ ಮತ್ತು ಸಂಪ್ರದಾಯಗಳ ರಕ್ಷಣೆಗಾಗಿ ಪಣತೊಟ್ಟು ಹೋರಾಡಿದ ಅನೇಕ ವ್ಯಕ್ತಿಗಳು ಮತ್ತು ಸಂಘಟನೆಗಳು ನಮ್ಮಲ್ಲಿವೆ. ತುಳು ಚಳುವಳಿಯ ವಿವಿಧ ಹಂತಗಳಲ್ಲಿ ಕೆಲಸ ಮಾಡಿದ ಹಿರಿಯರೆಲ್ಲ ಗತಿಸಿ ಹೋಗಿದ್ದಾರೆ. ಯಾವುದಕ್ಕೂ ಒಂದು ತಾರ್ಕಿಕ ಅಂತ್ಯ ಈ ವರೆಗೆ ಲಭಿಸಿಲ್ಲವಾದರೂ ತುಳು ಭಾಷೆ ಮತ್ತು ಸಂಸ್ಕೃತಿಯ ಪ್ರಸರಣಕ್ಕೆ ಪ್ರಾಮಾಣಿಕವಾಗಿ ದುಡಿದವರು ಸದಾ ಸ್ಮರಣೀಯರು ಎಂದು ಕರ್ನಾಟಕ ಜಾನಪದ, ಯಕ್ಷಗಾನ ಮತ್ತು ತುಳು ಸಾಹಿತ್ಯ ಅಕಾಡೆಮಿ ಮಾಜಿ ಸದಸ್ಯ ಪ್ರೊ. ಭಾಸ್ಕರ ರೈ ಕುಕ್ಕುವಳ್ಳಿ ಹೇಳಿದ್ದಾರೆ. ಬಿ.ದಾಮೋದರ ನಿಸರ್ಗ ಸಂಸ್ಮರಣ ಸಮಿತಿ ವತಿಯಿಂದ ಆ.31ರಂದು ಮಹತೋಭಾರ ಶ್ರೀ ಮಂಗಳಾದೇವಿ ದೇವಸ್ಥಾನದಲ್ಲಿ ಜರಗಿದ ದ್ವಿತೀಯ ಸಂಸ್ಮರಣ ಸಮಾರಂಭದಲ್ಲಿ ಅವರು ಸಂಸ್ಮರಣಾ ಭಾಷಣ ಮಾಡಿದರು. ಮಂಗಳಾದೇವಿ ದೇವಸ್ಥಾನದ ಮೊಕ್ತೇಸರ ಅರುಣ್ ಕುಮಾರ್ ಐತಾಳ್ ಸಂಸ್ಮರಣಾ ಜ್ಯೋತಿ ಬೆಳಗಿ ಕಾರ್ಯಕ್ರಮ ಉದ್ಘಾಟಿಸಿದರು. ಸಮಾರಂಭದಲ್ಲಿ ದಿ.ನಿಸರ್ಗ ಅವರ ಪತ್ನಿ ಹೇಮಾ ದಾಮೋದರ ನಿಸರ್ಗ ಮತ್ತು ಮಕ್ಕಳು ಸ್ಥಾಪಿಸಿದ ಎರಡನೇ ವರ್ಷದ ‘ಬಿ.ದಾಮೋದರ ನಿಸರ್ಗ ಪ್ರಶಸ್ತಿ’ಯನ್ನು ಕ.ಸಾ.ಪ ಮಾಜಿ…
ಮಂಗಳೂರು : ಪಿ.ಎ.ಪ್ರಥಮ ದರ್ಜೆ ಕಾಲೇಜು ಮತ್ತು ಸೆಂಟರ್ ಫಾರ್ ಮ್ಯಾನೇಜ್‌ಮೆಂಟ್ ಸ್ಟಡೀಸ್ ಅಂಡ್ ರಿಸರ್ಚ್ ಸೆಂಟರ್, ಸಂತ ಅಲೋಶಿಯಸ್ (ಪರಿಗಣಿತ ವಿವಿ) ಸಹಯೋಗದಲ್ಲಿ ಕನ್‌ವರ್ಜೆನ್ಸ್ – 2025 : ಸುಸ್ಥಿರ ಭವಿಷ್ಯದ ಕೃತಕ ಬುದ್ಧಿಮತ್ತೆಯ ಅಂತರ್‌ರಾಷ್ಟ್ರೀಯ ಸಮ್ಮೇಳನವು ಸೆ.27ರಂದು ನಡುಪದವು ಪಿ.ಎ. ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆಯಲಿದೆ ಎಂದು ಪಿ.ಎ. ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ಸರ್ಫ್ರಾಝ್ ಜೆ. ಹಾಸಿಮ್ ತಿಳಿಸಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಕೃತಕ ಬುದ್ಧಿಮತ್ತೆ ಅವಿಷ್ಕಾರಗಳನ್ನು ಹೇಗೆ ಮುನ್ನಡೆಸಬಹುದು ಮತ್ತು ಯುನೈಟೆಡ್ ನೇಷನ್‌ಗೆ ಸುಸ್ಥಿರ ಅಭಿವೃದ್ಧಿ ಗುರಿಗಳನ್ನು ಸಾಧಿಸುವಲ್ಲಿ ಹೇಗೆ ಸಹಕಾರಿಯಾಗಿತ್ತು ಎಂಬುದನ್ನು ಮುಕ್ತವಾಗಿ ಚರ್ಚಿಸಲು ವೇದಿಕೆಯನ್ನು ಕಲ್ಪಿಸಲಾಗುವುದು. ಪ್ರಮುಖ ವಿದ್ವಾಂಸರು, ಉದ್ಯಮ ತಜ್ಞರು ಹಾಗೂ ಸಂಶೋಧಕರು ಇದರಲ್ಲಿ ಪಾಲ್ಗೊಳ್ಳಲಿದ್ದಾರೆ. ಬಹರೈನ್‌ನ ಕಿಂಗ್‌ಡಮ್ ವಿವಿಯ ಕಾಲೇಜ್ ಆಫ್ ಬ್ಯುಸಿನೆಸ್ ಅಡ್ಮಿನಿಸ್ಟ್ರೇಶನ್‌ನ ಪ್ರೊ. ಇಕ್ಸಾಲ್ ತೋನ್ಸೆ ಹವಾಲ್ದಾರ್, ಯುಎಇ ವೆಸ್ಟ್ಟ್‌ಫೋರ್ಡ್ ಎಚ್‌ಈನ ಅಸೋಸಿಯೆಟ್ ಡೀನ್ ಡಾ.ಸೂಫಿ ಅನ್ವರ್ ಸಮ್ಮೇಳನದಲ್ಲಿ ಮುಖ್ಯ…
ಸುಳ್ಯ : ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕಲ್ಲುಗುಂಡಿ ಬಳಿಯ ಕಡೇಪಾಲ ಬಳಿ ಬುಧವಾರ ಬೆಳಿಗ್ಗೆ ಕಾರು ಮತ್ತು ಟ್ಯಾಂಕರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತರನ್ನು ಕೊಡಗು ಜಿಲ್ಲೆಯ ಸಿದ್ದಾಪುರದ ನೆಲ್ಲಿಹುದಿಕೇರಿಯ ನಿವಾಸಿ ಶೋಭಾ ಎಂದು ಗುರುತಿಸಲಾಗಿದೆ. ಪೊಲೀಸ್ ಮೂಲಗಳ ಪ್ರಕಾರ, ಟ್ಯಾಂಕರ್ ಮಡಿಕೇರಿಯಿಂದ ಸುಳ್ಯದ ಕಡೆಗೆ ಚಲಿಸುತ್ತಿತ್ತು, ಆದರೆ ಕಾರು ಮಡಿಕೇರಿ ಕಡೆಗೆ ವಿರುದ್ಧ ದಿಕ್ಕಿನಲ್ಲಿ ಸಾಗುತ್ತಿತ್ತು. ವಾಹನಗಳು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಕಾರಿನ ಮುಂಭಾಗ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಕಾರಿನಲ್ಲಿದ್ದ ಶೋಭಾ ಸ್ಥಳದಲ್ಲೇ ಸಾವನ್ನಪ್ಪಿದರು. ಅಪಘಾತದಲ್ಲಿ ವಾಹನದಲ್ಲಿದ್ದ ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಕಾರು ಸಿದ್ದಾಪುರದ ನೆಲ್ಲಿಹುದಿಕೇರಿಯ ನಿವಾಸಿಗಳದ್ದಾಗಿದೆ ಎಂದು ವರದಿಯಾಗಿದೆ . ಗಾಯಾಳುಗಳನ್ನು ತಕ್ಷಣ ಸುಳ್ಯದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪ್ರಸ್ತುತ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಅವರ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗುತ್ತಿದೆ. ಅಪಘಾತದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಡಿಕ್ಕಿಯ ಕಾರಣವನ್ನು ಕಂಡುಹಿಡಿಯಲು ತನಿಖೆ ಆರಂಭಿಸಿದ್ದಾರೆ.
ದೇರಳಕಟ್ಟೆ : ಯೆನೆಪೋಯ ಹೋಮಿಯೋಪತಿ ವೈದ್ಯಕೀಯ ಕಾಲೇಜಿನಲ್ಲಿ ದೇರಳಕಟ್ಟೆ ನಿವಾಸಿ ಹಸನ್ ಮತ್ತು ಆಯೇಷಾ ದಂಪತಿ ಪುತ್ರಿ ರಜಿಯಾ ಹಸನ್ ಇವರು ಐದು ವರ್ಷಗಳ ವೈದ್ಯಕೀಯ ಪದವಿಯನ್ನು ಪೂರೈಸಿ ವೈದ್ಯೆಯಾಗಿ ಹೊರಹೊಮ್ಮಿದ್ದಾರೆ. ವೈದ್ಯಕೀಯ ಕ್ಷೇತ್ರವು ಕೇವಲ ವೃತ್ತಿಯಾಗದೆ, ಸೇವೆಯ ಒಂದು ಉದಾತ್ತ ರೂಪವಾಗಿದೆ. ತನ್ನ ಛಲ ಹಾಗೂ ಶ್ರದ್ಧೆಯಿಂದ ಶಿಕ್ಷಣ ಪೂರೈಸಿರುವ ರಜಿಯಾ ಹಸನ್ ಸಮಾಜಕ್ಕೆ ಉತ್ತಮ ಕೊಡುಗೆಯನ್ನು ನೀಡಲು ಸಿದ್ಧರಾಗಿದ್ದಾರೆ. ಒಬ್ಬ ವೈದ್ಯೆಯಾಗಿ ರೋಗಿಗಳಿಗೆ ಚಿಕಿತ್ಸೆ ನೀಡುವುದರ ಜೊತೆಗೆ , ಆರೋಗ್ಯ ಜಾಗೃತಿ, ಶಿಕ್ಷಣ ಮತ್ತು ಸಾಮಾಜಿಕವಾಗಿಯೂ ಕಾರ್ಯನಿರ್ವಹಿಸುವ ಕುರಿತು ಇಂಗಿತ ವ್ಯಕ್ತಪಡಿಸಿದ್ದಾರೆ. ರಜಿಯಾ ಹಸನ್ ಅವರ ಸಾಧನೆಯನ್ನು ಬಿಜೆಪಿ ಮಂಗಳೂರು ಮಂಡಲ ಅಲ್ಪಸಂಖ್ಯಾತ ಮೋರ್ಛಾ ಅಭಿನಂದಿಸಿದೆ.
ಉಳ್ಳಾಲ : ಸಮಾಜದಲ್ಲಿ ವಿದ್ಯಾರ್ಥಿಗಳನ್ನು ಬಲಿಷ್ಠಗೊಳಿಸುವುದು ಅಗತ್ಯ, ಶಿಕ್ಷಕ ವರ್ಗ ದಾನಿಗಳ ನೆರವಿನಿಂದ ಶಾಲೆಗೆ ಬೇಕಾದ ವ್ಯವಸ್ಥೆ ಮಾಡಿ ಶಿಕ್ಷಣಕ್ಕೆ ಪೂರಕ ವ್ಯವಸ್ಥೆ ಕಲ್ಪಿಸುವ ಮೂಲಕ ಸಮಾಜ ಮತ್ತು ದೇಶಕ್ಕೆ ಕೊಡುವ ಅತ್ಯುತ್ತಮ ಕೊಡುಗೆ ನೀಡಿದ್ದಾರೆ ಎಂದು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಹೇಳಿದರು.ಬಬ್ಬುಕಟ್ಟೆ ಸರ್ಕಾರಿ ಪ್ರೌಢಶಾಲಾ ಅಂಗಳಕ್ಕೆ ದಾನಿಗಳ ನೆರವಿನಿಂದ ಅಳವಡಿಸಲಾದ ಇಂಟರ್ ಲಾಕ್ ಸಹಿತ ವಿವಿಧ ಕಾಮಗಾರಿಗಳನ್ನು ಮಂಗಳವಾರ ಉದ್ಘಾಟಿಸಿ ಮಾತನಾಡಿದರು. ಪ್ರಾಥಮಿಕ ಶಾಲೆಯಿಂದ ಪ್ರೌಢಶಾಲೆಯ ಉಳಿವು, ಈ ನಿಟ್ಟಿನಲ್ಲಿ ಎರಡೂ ಶಾಲೆಗಳ ಶಿಕ್ಷಕರು, ಹಳೆವಿದ್ಯಾರ್ಥಿಗಳು ಭೇದವಿಲ್ಲದೆ ಪ್ರಾಥಮಿಕ ಶಾಲೆಯ ಬಗ್ಗೆಯೂ ಮುತುವರ್ಜಿ ವಹಿಸಬೇಕು. ದಾನಿಗಳ ನೆರವು ಪಡೆದು ಶಿಕ್ಷಣಕ್ಕೆ ಪೂರಕ ವ್ಯವಸ್ಥೆ ಕಲ್ಪಿಸುವ ಮೂಲಕ ಶಿಕ್ಷಕ ವರ್ಗ ಅತ್ಯುತ್ತಮ ಕೊಡುಗೆ ನೀಡಿದೆ ಎಂದು ಶ್ಲಾಘಿಸಿದರು. ದಾನಿಗಳಾದ ಧಾರ್ಮಿಕ ಪರಿಷತ್ ಸದಸ್ಯ ಸುರೇಶ್ ಭಟ್ನಗರ, ನಿವೃತ್ತ ಶಿಕ್ಷಕಿ ಶಕೀಲಾ ಹಾಗೂ ಸಮಾಜ ಸೇವಕಿ ಸುಹಾಸಿನಿ ಬಬ್ಬುಕಟ್ಟೆ, ಕೆಲಸ ನಿರ್ವಹಿಸಿದ ರೋನಿ ಮತ್ತು ಇಮ್ತಿಯಾಝ್ ಇವರನ್ನು ಸನ್ಮಾನಿಸಲಾಯಿತು. ವಾಲಿಬಾಲ್ ಹೋಬಳಿ ಮಟ್ಟದ ಸ್ಪರ್ಧೆಯಲ್ಲಿ…
ಮಂಗಳೂರು : ಶಿಕ್ಷಕ ವೃತ್ತಿ ಶ್ರೇಷ್ಠ ಮಟ್ಟದ ಮತ್ತು ಅತ್ಯಂತ ಗೌರವ ಇರುವ ಸೇವಾ ವೃತ್ತಿಯಾಗಿದ್ದು, ಶಿಕ್ಷಕರು ಸಮಾಜದಲ್ಲಿ ವಿಶೇಷ ಸ್ಥಾನಮಾನವನ್ನು ಅಲಂಕರಿಸಿದ್ದಾರೆ. ಅವರು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಶಿಲ್ಪಿಗಳು ಎಂದು ರೋಟರಿ ಜಿಲ್ಲಾ ಮಾಜಿ ಗವರ್ನರ್ ಡಾ. ದೇವದಾಸ್ ರೈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ರೋಟರಾಕ್ಟ್ ಮಂಗಳೂರು ಸಿಟಿ ಸಂಸ್ಥೆಯ ಆಶ್ರಯದಲ್ಲಿ ನಗರದ ವುಡ್‌ಲ್ಯಾಂಡ್ಸ್ ಹೋಟೆಲ್ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಲಾದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು. ಶಿಕ್ಷಕರ ತ್ಯಾಗ, ನಿಸ್ವಾರ್ಥ ಸೇವಾ ಮನೋಭಾವ, ಕರ್ತವ್ಯನಿಷ್ಠೆ ಮತ್ತು ಸಮಯಪ್ರಜ್ಞೆಯಿಂದ ಕೂಡಿದ್ದು, ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಕಾರ್ಯ ಅನನ್ಯ ಎಂದು ಅವರು ಹೇಳಿದರು. ಈ ಸಂದರ್ಭದಲ್ಲಿ ನಗರದ ಬಲ್ಮಠ ಸರಕಾರಿ ಮಹಿಳಾ ಕಾಲೇಜಿನ ಪ್ರಾಂಶುಪಾಲ ಪ್ರೊ.ಡಾ. ಜಗದೀಶ್ ಬಾಳ ಅವರು ಶೈಕ್ಷಣಿಕ ಕ್ಷೇತ್ರದಲ್ಲಿ ಸಲ್ಲಿಸಿದ ಅನುಪಮ ಸೇವೆ, ನೀಡಿದ ಅಮೂಲ್ಯ ಕೊಡುಗೆ ಮತ್ತು ಸಾಧಿಸಿದ ಅಪಾರ ಸಾಧನೆಯನ್ನು ಪರಿಗಣಿಸಿ ಅವರಿಗೆ ‘ಆದರ್ಶ ಶಿಕ್ಷಕ’ ಪ್ರಶಸ್ತಿ ನೀಡಿ, ಸನ್ಮಾನಿಸಿ ಗೌರವಿಸಲಾಯಿತು. ಸನ್ಮಾನಕ್ಕೆ…
ಕೊಣಾಜೆ : ವಿದ್ಯಾದಾನ ಎಂಬುದು ಎಲ್ಲಕ್ಕಿಂತಲೂ ಮಿಗಿಲಾದುದು. ಮೌಲ್ಯಾಧಾರಿತ ಶಿಕ್ಷಣಕ್ಕೆ ಶಿಕ್ಷಣ ಸಂಸ್ಥೆಗಳು ಹೆಚ್ಚಿನ ಆದ್ಯತೆ ಕೊಡಬೇಕಿದೆ. ಆದರೆ ಇತ್ತೀಚೆಗೆ ಶಿಕ್ಷಣ ವ್ಯವಸ್ಥೆ ವ್ಯಾಪಾರೀಕರಣಗೊಳ್ಳುತ್ತಿರುವುದು ಕಳವಳಕಾರಿ ಸಂಗತಿಯಾಗಿದೆ ಎಂದು ಮಂಗಳೂರು ಲೋಕಾಯುಕ್ತ ಎಸ್ ಪಿ ಕುಮಾರ್ ಚಂದ್ರ ಅವರು ಹೇಳಿದರು. ಅವರು ಮುಡಿಪು ಸೂರಜ್ ಶಿಕ್ಷಣ ಸಂಸ್ಥೆಯಲ್ಲಿ ಉಳ್ಳಾಲ ತಾಲೂಕು ಪದವಿ ಪೂರ್ವ ಕಾಲೇಜು ಮಟ್ಟದ ವಾಲಿಬಾಲ್ ಪಂದ್ಯಾಟವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಎಚ್ ಡಿಎಫ್ ಸಿ ಬ್ಯಾಂಕ್ ಮಲ್ಲಣ್ಣ ಗೌಡ ಅವರು ಮಾತನಾಡಿ, ಗ್ರಾಮೀಣ ಪ್ರದೇಶದಲ್ಲಿ ಇಂತಹ ಕ್ರೀಡಾ ಆಯೋಜನೆ ವಿದ್ಯಾರ್ಥಿಗಳಲ್ಲಿ ಮತ್ತಷ್ಟು ಹುರುಪು ಮೂಡಿಸುತ್ತದೆ ಎಂದರು. ಸೂರಜ್ ಕಾಲೇಜಿನ ಸಲಹಾ ಸಮಿತಿ ಸದಸ್ಯರಾದ ರವೀಂದ್ರ ರೈ ಕಲ್ಲಿಮಾರ್ ಅವರು ಮಾತನಾಡಿ ಕ್ರೀಡೆಯು ದೈಹಿಕ ವ್ಯಾಯಾಮ ಮಾತ್ರವಲ್ಲ ನಮ್ಮಲ್ಲಿ ಶಿಸ್ತು, ಸಮಯಪಾಲನೆ, ಗುರಿ, ಸ್ಪರ್ಧಾತ್ಮಕ ಮನೋಭಾವನೆ, ಹೊಂದಾಣಿಕೆಯ ಭಾವವನ್ನು ಬೆಳೆಸುವಲ್ಲಿ ಸಹಕಾರಿಯಾಗಿದೆ ಎಂದರು. ಸೂರಜ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಡಾ.ಮಂಜುನಾಥ ರೇವಣ್ಕರ್ ಅವರು ಮುಖ್ಯ ಅತಿಥಿಯಾಗಿ…

