Author: UllalaVani

Kannada News From Coastal Karnataka

ಕಾವೂರು : ವೀಣಾ ಡೆಕೋರ್ ಮತ್ತು ಈವೆಂಟ್ಸ್ ಮಾಲಕರಾದ ನವೀನ್ ಚಂದ್ರ ಸಾಲ್ಯಾನ್ ಮಾಲಕತ್ವದ ವಿ.ಡಿ. ಟ್ರೋಫಿ-2025ನ ಲೀಗ್ ಮಾದರಿಯ ಕ್ರಿಕೆಟ್ ಪಂದ್ಯಾಟ ಕರಂಬಾರು ಕೊಪ್ಪಲ ಕ್ರಿಡಾಂಗಣದಲ್ಲಿ ನಡೆಯಿತು.ಕ್ರಿಕೆಟ್ ಪಂದ್ಯಾಟ ಉದ್ಘಾಟನೆಯನ್ನು ದಕ್ಷಿಣ ಕನ್ನಡ ಜಿಲ್ಲಾ ಫ್ಲವರ್ ಡೆಕೋರೇಷನ್ ಮಾಲಕರ ಸಂಘದ ಅಧ್ಯಕ್ಷರಾದ ತುಷಾರ್ ಸುರೇಶ್ ಉದ್ಘಾಟಿಸಿ ಕ್ರೀಡಾ ಕೂಟಕ್ಕೆ ಶುಭ ಹ್ಯಾರೆಸಿದರು.ಕ್ರೀಡೆಯಲ್ಲಿ ಸೋಲು ಗೆಲುವು ಸಹಜ ಕ್ರೀಡಾ ಸ್ಫೂರ್ತಿ ಮುಖ್ಯ ಎಂದು ಹೇಳಿದರು.ಮುಖ್ಯ ಅತಿಥಿಗಳಾಗಿ ದ.ಕ ಜಿಲ್ಲಾ ಪ್ಲವರ್ ಡೆಕೋರೇಶನ್ ಯುನಿಯನ್ ಉಪಾಧ್ಯಕ್ಷರಾದ ಸುರೇಶ್ ಪೂಜಾರಿ, ಮಳವೂರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಸುರೇಶ್ ಪೂಜಾರಿ ಕೊಪ್ಪಲ, ಗಣೇಶ್ ಅರ್ಬಿ , ಕಾವೂರು ಕಚ್ಚೂರ ಮಾಲ್ದಿ ಕ್ಯಾಂಟೀನ್ ಮಾಲಕರಾದ ಶ್ರೀನಿವಾಸ , ಸುರೇಂದ್ರ ಕಾಮತ್ ಕೆಂಜಾರು, ಪ್ಲವರ್ ಡೇಕೋರೇಶನ್ ಮಾಲಕರಾದ ಸ್ಟಾನಿ ಅಂಚನ್ ಮುಂತಾದವರು ಉಪಸ್ಥಿತಿರಿದ್ದರು. ರಾಕೇಶ್ ಕುಂದರ್ ನಿರೂಪಿಸಿದರು. ವಿನಯ್ ಸಾಲ್ಯಾನ್ ವಂದಿಸಿದರು.

Read More

ಮಂಗಳೂರು : ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ನೀರುಮಾರ್ಗ ಶಾಖೆಯ ತೃತೀಯ ವಾರ್ಷಿಕೋತ್ಸವದ ಪ್ರಯುಕ್ತ ಉಚಿತ ವೈದ್ಯಕೀಯ, ನೇತ್ರ ಮತ್ತು ದಂತ ತಪಾಸಣಾ ಶಿಬಿರವು ಲಯನ್ಸ್ ಮತ್ತು ಲಿಯೋ ಕ್ಲಬ್ ಮಂಗಳೂರು, ಶ್ರೀ ಸುಬ್ರಹ್ಮಣ್ಯ ಭಜನಾ ಮಂಡಳಿ (ರಿ.) ನೀರುಮಾರ್ಗ, ಬ್ರಹ್ಮಶ್ರೀ ನಾರಾಯಣ ಗುರು ಬಿಲ್ಲವ ಸೇವಾ ಸಂಘ (ರಿ.) ಸುಬ್ರಹ್ಮಣ್ಯ ನಗರ, ನೀರುಮಾರ್ಗ ಇವರುಗಳ ಜಂಟಿ ಸಹಯೋಗದೊಂದಿಗೆ ಆಗಸ್ಟ್‌ 31ರಂದು ಆದಿತ್ಯವಾರ ಬೆಳಿಗ್ಗೆ 9.30 ರಿಂದ 12.30ರ ವರೆಗೆ ನೀರುಮಾರ್ಗದ ಶ್ರೀ ಸುಬ್ರಹ್ಮಣ್ಯ ಭಜನಾ ಮಂಡಳಿಯ ಸಭಾಭವನದಲ್ಲಿ ನಡೆಯಲಿದೆ ಈ ವೈದ್ಯಕೀಯ ಶಿಬಿರದಲ್ಲಿ ಸಮುದಾಯ ದಂತ ಆರೋಗ್ಯ ವಿಭಾಗ, ಯೆನೆಪೋಯ ಕಾಲೇಜು ಮತ್ತು ಆಸ್ಪತ್ರೆ, ದೇರಳಕಟ್ಟೆ. ಇವರ ನುರಿತ ವೈದ್ಯರ ತಂಡದವರಿಂದ ದಂತ ತಪಾಸಣೆ, ಅನಾರೋಗ್ಯಕರ ಹಲ್ಲುಗಳನ್ನು ಕೀಳುವುದು, ಹುಳುಕು ಹಲ್ಲುಗಳ ಭರ್ತಿ ಮಾಡುವುದು, ಹಲ್ಲುಗಳನ್ನು ಸ್ವಚ್ಚಗೊಳಿಸುವುದು, ಹಾಗೂ ಮಂಗಳ ಕಾಲೇಜು ,ಮಂಗಳ ಆಸ್ಪತ್ರೆ ಮತ್ತು ಮಂಗಳ ಕಿಡ್ನಿ ಫೌಂಡೇಶನ್ ಕದ್ರಿ, ಮಂಗಳೂರು ಇವರ ನುರಿತ ವೈದ್ಯರ ತಂಡದವರಿಂದ…

Read More

ಮಂಗಳೂರು : ಕರ್ನಾಟಕ-ಕೇರಳ ಗಡಿಯಲ್ಲಿರುವ ರಾಷ್ಟ್ರೀಯ ಹೆದ್ದಾರಿ 66ರ ತಲಪಾಡಿ ಬಳಿ ಗುರುವಾರ ಸಂಭವಿಸಿದ ಅಪಘಾತಕ್ಕೆ ಬಸ್‌ನ ಬ್ರೇಕ್ ವೈಫಲ್ಯ ಕಾರಣವಲ್ಲ, ಬದಲಾಗಿ ಚಾಲಕನ ನಿರ್ಲಕ್ಷ್ಯವೇ ಕಾರಣ ಎಂದು ಕೆಎಸ್‌ಆರ್‌ಟಿಸಿ ಸ್ಪಷ್ಟಪಡಿಸಿದೆ. ಅಧಿಕಾರಿಗಳ ಪ್ರಕಾರ, ಮಂಗಳೂರು-1ನೇ ಘಟಕದ ಚಾಲಕ ನಿಜಲಿಂಗಪ್ಪ ಚಲವಾದಿ ಅವರು ಕಾಸರಗೋಡಿನಿಂದ ಮಂಗಳೂರಿಗೆ ಬಸ್ ಚಲಾಯಿಸುತ್ತಿದ್ದರು. ಮಧ್ಯಾಹ್ನ 1:45ರ ಸುಮಾರಿಗೆ, ಇಳಿಜಾರಿನಲ್ಲಿ ತಲಪಾಡಿ ಟೋಲ್ ಗೇಟ್ ಸಮೀಪಿಸುತ್ತಿದ್ದಾಗ ಅವರು ಬಸ್ ಅನ್ನು ಅತಿ ವೇಗವಾಗಿ ಚಲಾಯಿಸಿದ್ದಾರೆ. ಆಟೋರಿಕ್ಷಾವೊಂದಕ್ಕೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಅವರು ಬ್ರೇಕ್ ಹಾಕಿದ್ದಾರೆ, ಆದರೆ ಬಸ್ ಆಟೋಗೆ ಡಿಕ್ಕಿ ಹೊಡೆದು, ಜಾರಿ ಪಲ್ಟಿಯಾಗಿದೆ.ಗಾಬರಿಗೊಂಡ ಚಾಲಕ ವಾಹನವನ್ನು ತೊರೆದು ಪರಾರಿಯಾಗಿದ್ದಾನೆ. ಪರಿಣಾಮವಾಗಿ, ಚಾಲಕನಿಲ್ಲದ ಬಸ್ ಇಳಿಜಾರಿನಲ್ಲಿ ಹಿಂದಕ್ಕೆ ಉರುಳಿ, ನಿಲ್ಲಿಸಿದ್ದ ಆಟೋರಿಕ್ಷಾ ಮತ್ತು ಬಸ್‌ಗಾಗಿ ಕಾಯುತ್ತಿದ್ದ ಇಬ್ಬರು ಪಾದಚಾರಿಗಳಿಗೆ ಡಿಕ್ಕಿ ಹೊಡೆದಿದೆ. ಸಾಮಾಜಿಕ ಜಾಲತಾಣ ಮತ್ತು ಕೆಲವು ಮಾಧ್ಯಮಗಳಲ್ಲಿ ಕಳಪೆ ವಾಹನ ನಿರ್ವಹಣೆಯ ಬಗ್ಗೆ ಹರಿದಾಡುತ್ತಿದ್ದ ವದಂತಿಗಳಿಗೆ ಸ್ಪಷ್ಟನೆ ನೀಡಿರುವ ಕೆಎಸ್‌ಆರ್‌ಟಿಸಿ, ವಾಹನಕ್ಕೆ ಬ್ರೇಕ್ ವೈಫಲ್ಯ ಅಥವಾ…

Read More

ಮಂಗಳೂರು : ಭಾರತ ಸರಕಾರದ ಮಹತ್ವಾಕಾಂಕ್ಷೆಯ ಅಟಲ್ ಪಿಂಚಣಿ ಯೋಜನೆಯನ್ನು ಸಹಕಾರಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಸಮರ್ಪಕವಾಗಿ ಅನುಷ್ಠಾನಕ್ಕೆ ತಂದಿರುವ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ( ಎಸ್‌ಸಿಡಿಸಿಸಿ ಬ್ಯಾಂಕ್) 2024-25ನೇ ಸಾಲಿನಲ್ಲೂ ರಾಷ್ಟ್ರೀಯ ಪ್ರಶಸ್ತಿಗೆ ಪಾತ್ರವಾಗಿದ್ದು , ಈ ಪ್ರಶಸ್ತಿಯನ್ನು ಬ್ಯಾಂಕ್ ಸತತ ನಾಲ್ಕನೇ ಬಾರಿಗೆ ಮುಡಿಗೇರಿಸಿಕೊಂಡಿದೆ. ಇತ್ತೀಚೆಗೆ ನಡೆದ ಎಪಿವೈ ಪ್ರಶಸ್ತಿ ವಿತರಣಾ ಸಮಾರಂಭದಲ್ಲಿ ಎಸ್ ಸಿಡಿಸಿಸಿ ಬ್ಯಾಂಕಿನ ಮಹಾಪ್ರಬಂಧಕರಾದ ಸುನಿಲ್ ಕುಮಾರ್ ಹೊಳ್ಳ ಹಾಗೂ ಸಹಾಯಕ ಮಹಾಪ್ರಬಂಧಕರಾದ ರಾಜೇಶ್ ಶೆಟ್ಟಿ ಅವರು ಪಿಂಚಣಿ ನಿಧಿ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರದ ಸದಸ್ಯೆ ಮಮತಾ ಶಂಕರ್ ಅವರಿಂದ ಸ್ವೀಕರಿಸಿದ್ದರು. ಭಾರತ ಸರಕಾರದ ಹಣಕಾಸು ಸೇವೆಗಳ ಜಂಟಿ ಕಾರ್ಯದರ್ಶಿ ಪ್ರಶಾಂತ್ ಕುಮಾರ್ ಗೋಯಲ್ , ಪಿಂಚಣಿ ನಿಧಿ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರದ ಮುಖ್ಯಸ್ಥ ಎಸ್.ರಾಮನ್, ಮುಖ್ಯ ಮಹಾಪ್ರಬಂಧಕರಾದ ಪ್ರವೇಶ್ ಕುಮಾರ್ ಸಮಾರಂಭದಲ್ಲಿ ಭಾಗವಹಿಸಿದ್ದರು. ಈ ಪ್ರಶಸ್ತಿಯನ್ನು ಶುಕ್ರವಾರ ಬ್ಯಾಂಕಿನ ಅಧ್ಯಕ್ಷ ಸಹಕಾರ ರತ್ನ ಡಾ.ಎಂ.ಎನ್. ರಾಜೇಂದ್ರ ಕುಮಾರ್‌ರಿಗೆ…

Read More

ಉಳ್ಳಾಲ : ಮರಣವನ್ನು ಪ್ರಾಮಾಣಿಕವಾಗಿ ಎದುರಿಸುವ ಮನೋಬಲವೇ ಮಾನವನ ಸತ್ಯ ಪರೀಕ್ಷೆ. ರಹಸ್ಯಗಳನ್ನು ಬೇಧಿಸಿ ಅರಿಯುವುದೇ ವಿಜ್ಞಾನ, ಆದರೆ ಅದರ ಪಾರಮಾರ್ಥಿಕ ವ್ಯವಸ್ಥೆಯನ್ನು ನಿರ್ಮಿಸಿರುವುದು ದೇವರು. ಬ್ರಹ್ಮಾಂಡದ ಸೂಕ್ಷ್ಮ ನಿಯಮಗಳನ್ನು ರೂಪಿಸಿದ ಶಕ್ತಿ ದೇವರದೇ. ಭಾರತವು ಹಿಂದೂ ಧರ್ಮದ ಆಳವಾದ ತತ್ವಗಳಿಂದ ಜಗತ್ತಿಗೆ ಗುರುವಾಗಿದ್ದ ದೇಶ. ಈ ಧರ್ಮವು ಮನುಕುಲಕ್ಕೆ ಜ್ಞಾನ, ಶಕ್ತಿ ಮತ್ತು ಆಧ್ಯಾತ್ಮಿಕ ದಾರಿ ತೋರಿಸಿತು. ಎಲ್ಲರಿಗೂ ಶಕ್ತಿ ನೀಡುವ, ಸತ್ಯದತ್ತ ಸಾಗುವ ಪ್ರೇರಣೆಯಾದ ಕೇಂದ್ರವೇ ಧರ್ಮ. ಅದನ್ನು ಉಳಿಸುವ ಕಾರ್ಯದಲ್ಲಿ ತೊಡಗಿಸಿಕೊಂಡಿರುವ ಕುತ್ತಾರು ಕ್ಷೇತ್ರದ ಕಾರ್ಯ ಶ್ಲಾಘನೀಯ ಎಂದು ಮಾಜಿ ಶಾಸಕ ಕೆ.ಜಯರಾಮ ಶೆಟ್ಟಿ ಕುತ್ತಾರಗುತ್ತು ಹೇಳಿದರು. ಅವರು ಕುತ್ತಾರು ಶ್ರೀ ರಾಜರಾಜೇಶ್ವರಿ ಸಿದ್ಧಿವಿನಾಯಕ ದೇವಸ್ಥಾನ ಶ್ರೀ ಕ್ಷೇತ್ರ ಕುತ್ತಾರು ಇಲ್ಲಿ ಜರಗಿದ 39 ನೇ ವರ್ಷದ ಸಾರ್ವಜನಿಕ ಕುತ್ತಾರು ಗಣೇಶೋತ್ಸವದ ಪ್ರಯುಕ್ತ ಶ್ರೀ ರಾಜರಾಜೇಶ್ವರಿ ವೇದಿಕೆಯಲ್ಲಿ ಜರಗಿದ ಧಾರ್ಮಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.ಮಂಗಳೂರು ಮಂಡಲ ಬಿಜೆಪಿ ನಿಕಟಪೂರ್ವ ಅಧ್ಯಕ್ಷ ಚಂದ್ರಹಾಸ್‌ ಪಂಡಿತ್‌ ಹೌಸ್‌ ಮಾತನಾಡಿ, ದೇವಾಲಯವು…

Read More

ಕೋಟೆಕಾರು : ಕೋಟೆಕಾರು ವ್ಯವಸಾಯ ಸೇವಾ ಸಹಕಾರ ಸಂಘ, ಮಾಧ್ಯಮ ಕೇಂದ್ರ ತೊಕ್ಕೊಟ್ಟು, ಉಳ್ಳಾಲ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ, ದ.ಕ. ಜಿಲ್ಲಾ ಪದವಿಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘ ಇವರ ನೇತೃತ್ವದಲ್ಲಿ ಕೃಷಿ ಇಲಾಖೆ ಮಂಗಳೂರು, ಶ್ರೀ ಬಾಲಾಂಜನೇಯ ವ್ಯಾಯಾಮ ಶಾಲೆ ಪಿಲಾರು ಸಹಯೋಗದೊಂದಿಗೆ ಕೃಷಿ ವಿಜ್ಞಾನ ಕೇಂದ್ರ ಮಂಗಳೂರು ಇವರ ತಾಂತ್ರಿಕ ಮಾರ್ಗದರ್ಶನದೊಂದಿಗೆ ಗ್ರಾಮ ಸಂಪರ್ಕ ಅಭಿಯಾನದ ಅಂಗವಾಗಿ ಕೃಷಿಯೆಡೆಗೆ ವಿದ್ಯಾರ್ಥಿ ಸಮೂಹ ಹಾಗೂ ಯುವಜನತೆಯ ನಡೆ – ಕೃಷಿ ಅಧ್ಯಯನ ಹಾಗೂ ಚಟುವಟಿಕೆಗಳಿಗೆ ಚಾಲನೆ ಕಾರ್ಯಕ್ರಮ ಆ.30ರಂದು ಬೆಳಗ್ಗೆ 9ರಿಂದ ಸೋಮೇಶ್ವರ ಗ್ರಾಮದ ಪಿಲಾರು ಬೈಲು ಗದ್ದೆಯಲ್ಲಿ ನಡೆಯಲಿದೆ. ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷ ಯು.ಟಿ.ಖಾದರ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಕೋಟೆಕಾರು ವ್ಯವಸಾಯ ಸೇವಾ ಸಹಕಾರ ಸಂಘದ ಅಧ್ಯಕ್ಷರಾದ ಕೃಷ್ಣ ಶೆಟ್ಟಿ ಕೆಳಗಿನ ಕೋಟೆಕಾರುಗುತ್ತು ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ದ.ಕ. ಜಿಲ್ಲಾಧಿಕಾರಿ ದರ್ಶನ್‌ ಕೆ.ವಿ., ಜಿಲ್ಲಾ ಪಂಚಾಯತ್‌ ಮುಖ್ಯಾಧಿಕಾರಿ ನರ್ವಾಡೆ ವಿನಾಯಕ, ಜಂಟಿ ಕೃಷಿ ನಿರ್ದೇಶಕ ಡಾ| ಹೊನ್ನಪ್ಪ ಗೋವಿಂದ…

Read More

ಮಂಗಳೂರು : ಬಂಟರ ಯಾನೆ ನಾಡವರ ಮಾತೃ ಸಂಘ ಶ್ರೀ ಸಿದ್ಧಿವಿನಾಯಕ ಪ್ರತಿಷ್ಠಾನ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಆಶ್ರಯದಲ್ಲಿ ಬಂಟ್ಸ್ ಹಾಸ್ಟೆಲ್ ನ ಓಂಕಾರ ನಗರದಲ್ಲಿ ನಡೆದ ಸಾರ್ವಜನಿಕ ಗಣೇಶೋತ್ಸವ ಎರಡನೇ ದಿನದ ಧಾರ್ಮಿಕ ಸಭೆಯನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ. ಅವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಬಳಿಕ ಮಾತಾಡಿದ ಅವರು, “ನಾನು ಮೊದಲ ಬಾರಿ ಇಲ್ಲಿಗೆ ಆಗಮಿಸಿದ್ದೇನೆ. ಬಹಳ ವಿಜೃಂಭಣೆಯಿಂದ ಗಣೇಶೋತ್ಸವ ಆಚರಿಸುತ್ತಿದ್ದೀರಿ. ಗಣೇಶ ಚತುರ್ಥಿಯ ಶುಭ ಸಂದರ್ಭದಲ್ಲಿ ಇಡೀ ಲೋಕಕ್ಕೆ ಒಳ್ಳೆಯದಾಗಲಿ. ಬಂಟರ ಯಾನೆ ನಾಡವರ ಮಾತೃ ಸಂಘ ನಡೆಸುತ್ತಿರುವ ಈ ಕಾರ್ಯಕ್ರಮ ಲೋಕಕ್ಕೆ ಮಾದರಿಯಾದುದು. ನಮ್ಮೆಲ್ಲರ ಮೇಲೆ ಗಣೇಶನ ಕೃಪೆ ಸದಾ ಇರಲಿ” ಎಂದರು. ನಿವೃತ್ತ ಐಎಎಸ್ ಅಧಿಕಾರಿ ಟಿ.ಶ್ಯಾಮ ಭಟ್ ಮಾತನಾಡಿ, “ಈ ಜಗತ್ತು ಸರ್ವೋಚ್ಛ ಶಕ್ತಿಯಿಂದ ಮುನ್ನಡೆಯಲ್ಪಡುತ್ತಿದೆ. ಬಾಲ ಗಂಗಾಧರ್ ತಿಲಕ್ ಸ್ಥಾಪಿಸಿರುವ ಗಣೇಶೋತ್ಸವ ನಿಜ ಅರ್ಥದಲ್ಲಿ ಇಡೀ ಸಮಾಜದ ಉತ್ಸವವಾಗಿದೆ. ಇದರಲ್ಲಿ ಎಲ್ಲಾ ಜಾತಿ ಧರ್ಮದ ಜನರು ಪಾಲ್ಗೊಳ್ಳುತ್ತಿರುವುದು…

Read More

ಪುತ್ತೂರು : ಸಾರ್ವಜನಿಕರೊಬ್ಬರಿಂದ ಲಂಚ ಸ್ವೀಕಾರ ಮಾಡುತ್ತಿದ್ದ ವೇಳೆ ದಾಳಿ ನಡೆಸಿದ ಲೋಕಾಯುಕ್ತ ಅಧಿಕಾರಿಗಳು ಲಂಚದ ಹಣದ ಸಮೇತ ಆರೋಪಿಯನ್ನು ಬಂಧಿಸಿದ ಘಟನೆ ಪುತ್ತೂರು ತಾಲೂಕು ಆಡಳಿತ ಸೌಧದಲ್ಲಿರುವ ತಹಶೀಲ್ದಾರ್ ಕಚೇರಿಯ ಭೂ ಸುಧಾರಣಾ ಶಾಖೆಯಲ್ಲಿ ಗುರುವಾರ ಸಂಜೆ ನಡೆದಿದೆ. ಪುತ್ತೂರು ತಾಲೂಕಿನ ಆಡಳಿತ ಸೌಧದಲ್ಲಿರುವ ತಹಶೀಲ್ದಾರ್ ಕಚೇರಿಯ ಭೂ ಸುಧಾರಣಾ ಶಾಖೆಯ ಎಫ್.ಡಿ.ಎ ಸುನೀಲ್ ಎಂಬಾತ ದೂರುದಾರರಿಂದ 12,000 ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಮಂಗಳೂರು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಸುನೀಲ್ ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಈ ಪ್ರಕರಣದಲ್ಲಿ ಮತ್ತೊಬ್ಬ ಆರೋಪಿ ಪುತ್ತೂರು ತಹಶೀಲ್ದಾರ್ ಪರಾರಿಯಾಗಿದ್ದು, ಆತನಿಗಾಗಿ ಬಲೆ ಬೀಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Read More

ಉಡುಪಿ : ಸಮುದ್ರದ ಪ್ರಕ್ಷುಬ್ಧತೆಯಿಂದಾಗಿ ಮೀನುಗಾರಿಕಾ ದೋಣಿ ಮಗುಚಿ ಬಿದ್ದ ಘಟನೆ ಮಲ್ಪೆಯ ತೊಟ್ಟಂ ಬೀಚ್ ಬಳಿ ಆಗಸ್ಟ್ 29 ರಂದು ನಡೆದಿದೆ. ಸಮುದ್ರಕ್ಕೆ ಇಳಿದಿದ್ದ ನಾಲ್ವರು ಮೀನುಗಾರರು ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ತೊಟ್ಟಂ ವಾರ್ಡ್ ಪುರಸಭೆ ಸದಸ್ಯ ಯೋಗೇಶ್ ಅವರು ತಕ್ಷಣ ವೃತ್ತಿಪರ ಸಮಾಜ ಸೇವಕ ಈಶ್ವರ್ ಮಲ್ಪೆ ಮತ್ತು ಅವರ ತಂಡಕ್ಕೆ ಮಾಹಿತಿ ನೀಡಿದ್ದಾರೆ. ತಕ್ಷಣ ಕಾರ್ಯಪ್ರವೃತ್ತರಾದ ಈಶ್ವರ್ ಅವರು, ಸ್ಥಳೀಯರಾದ ಪ್ರವೀಣ್ ಮತ್ತು ಉದಯ್ ಅವರೊಂದಿಗೆ ಲೈಫ್ ಜಾಕೆಟ್‌ಗಳನ್ನು ತೆಗೆದುಕೊಂಡು ಸ್ಥಳಕ್ಕೆ ಧಾವಿಸಿ, ನಾಲ್ವರು ಮೀನುಗಾರರನ್ನು ರಕ್ಷಿಸುವಲ್ಲಿ ಯಶಸ್ವಿಯಾದರು. “ಮಲ್ಪೆಯಲ್ಲಿ ಸಮುದ್ರವು ಅತ್ಯಂತ ಅನಿರೀಕ್ಷಿತ ಮತ್ತು ಪ್ರಕ್ಷುಬ್ಧವಾಗಿದೆ. ಈಜಲು ತಿಳಿದಿದ್ದರೂ ಯಾರೂ ಕೂಡ ನೀರಿಗೆ ಇಳಿಯಬಾರದು. ಸಮುದ್ರದ ಅಲೆಗಳು ಯಾವುದೇ ಮುನ್ಸೂಚನೆಯಿಲ್ಲದೆ ಇದ್ದಕ್ಕಿದ್ದಂತೆ ಏರಬಹುದು. ಮೀನುಗಾರರು ಸಮುದ್ರಕ್ಕೆ ಹೋಗುವಾಗ ಕಡ್ಡಾಯವಾಗಿ ಲೈಫ್ ಜಾಕೆಟ್‌ಗಳನ್ನು ಧರಿಸಬೇಕು” ಎಂದು ಈಶ್ವರ್ ಮಲ್ಪೆ ತಿಳಿಸಿದರು.

Read More

ಮಂಗಳೂರು : ತಲಪಾಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಆರು ಮಂದಿ ಮೃತಪಟ್ಟಿದ್ದು, ಈ ಘಟನೆಗೆ ಕರ್ನಾಟಕ ವಿಧಾನ ಸಭಾ ಸಭಾಧ್ಯಕ್ಷ ಯು.ಟಿ.ಖಾದರ್ ಸಂತಾಪ ವ್ಯಕ್ತಪಡಿಸಿದ್ದಾರೆ. ಮೃತಪಟ್ಟವರ ಕುಟುಂಬಸ್ಥರಿಗೆ ಸಾಂತ್ವನ ತಿಳಿಸಿರುವ ಅವರು ಆಸ್ಪತ್ರೆಗೆ ಧಾವಿಸಿ ಬಂದು ಆಸ್ಪತ್ರೆಯ ವೈದ್ಯರೊಂದಿಗೆ ಮಾತುಕತೆ ನಡೆಸಿ ಆದಷ್ಟು ಬೇಗನೇ ಪೋಸ್ಟ್ ಮಾರ್ಟಂ ಹಾಗೂ ಇತರ ಕಾರ್ಯಗಳನ್ನು ಪೂರೈಸಿ ಸಂಬಂಧಪಟ್ಟ ಕುಟುಂಬದವರಿಗೆ ಮೃತದೇಹಗಳನ್ನು ಹಸ್ತಾಂತರಿಸುವ ಕುರಿತು ಸೂಚನೆ ನೀಡಿದರು. ಅಪಘಾತದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳನ್ನು ಭೇಟಿ ಮಾಡಿ ಮಾತುಕತೆ ನಡೆಸಿದ ಸಭಾಧ್ಯಕ್ಷ ಯು.ಟಿ.ಖಾದರ್ ಕುಟುಂಬಸ್ಥರಿಗೆ ಧೈರ್ಯ ತುಂಬಿದ್ದಾರೆ. ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿರವರೊಂದಿಗೂ ದೂರವಾಣಿ ಮೂಲಕ ಮಾತುಕತೆ ನಡೆಸಿದ ಸಭಾಧ್ಯಕ್ಷ ಯು.ಟಿ.ಖಾದರ್ ಘಟನೆಯ ಬಗ್ಗೆ ಕೂಲಂಕುಷ ತನಿಖೆ ನಡೆಸುವಂತೆ ಸೂಚನೆ ನೀಡಿ ಹಾಗೂ ಮೃತರ ಕುಟುಂಬಕ್ಕೆ ಕೆಎಸ್ಸಾರ್ಟಿಸಿ ವತಿಯಿಂದ ಪರಿಹಾರ ಒದಗಿಸಬೇಕೆಂದು ಸಭಾಧ್ಯಕ್ಷ ಯು.ಟಿ.ಖಾದರ್ ಒತ್ತಾಯಿಸಿದ್ದಾರೆ.

Read More