ಉಳ್ಳಾಲ: ಶಾಂತಿ ಎಜುಕೇಶನಲ್ ಟ್ರಸ್ಟ್ (ರಿ) ಇದರ ಆಶ್ರಯದಲ್ಲಿ ಹಿರಾ ಶಿಕ್ಷಣ ಸಂಸ್ಥೆ ಗಳ ರಜತ ಮಹೋತ್ಸವ ಆಚರಣೆ ಪ್ರಯುಕ್ತ ಮಜ್ಲಿಸ್-ಎ-ಅನ್ಸಾರ್-ಎ-ತ’ಲೀಮ್ ಹಿತೈಷಿ ಗಳ ಶೈಕ್ಷಣಿಕ ಸಭೆಯು ಹಿರಾ ಕಾಲೇಜು ಸಭಾಂಗಣದಲ್ಲಿ ನಡೆಯಿತು.ಯೆನೆಪೋಯ ಪರಿಗಣಿತ ವಿಶ್ವವಿದ್ಯಾಲಯದ ಕುಲಪತಿ,ಡಾ. ವೈ. ಅಬ್ದುಲ್ಲಾ ಕುಂಞಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ, ಶಿಕ್ಷಣ ಕೇಂದ್ರ ಆರಂಭಿಸುವುದು ಮುಖ್ಯ ಅಲ್ಲ, ಜನರ ಮೇಲೆ ವಿಶ್ವಾಸ ಗಳಿಸುವುದು ಮುಖ್ಯ ಆಗಿರುತ್ತದೆ. ವಿದ್ಯಾರ್ಥಿಗಳಿಗೆ ಶಿಕ್ಷಣ ಒದಗಿಸುವ ಜವಾಬ್ದಾರಿ ಶಿಕ್ಷಕರದ್ದು ಎಂದು ಲೆಕ್ಕಾಚಾರ ಮಾಡಿ ಅವರ ಪಾಲಿಗೆ ಪೋಷಕರು ಬಿಡಬಾರದು.ಶಿಕ್ಷಕರ ಜೊತೆ ಪೋಷಕರು ಕೈಜೋಡಿಸಿದರೆ ಮಾತ್ರ ಶೈಕ್ಷಣಿಕ ಕ್ಷೇತ್ರ ಅಭಿವೃದ್ಧಿ ಕಾಣಲು ಸಾಧ್ಯ ಎಂದರು.ಯೂನಿಟಿ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ಸ್ ನಾ ಅಧ್ಯಕ್ಷ ಡಾ. ಹಬೀಬ್ ರಹ್ಮಾನ್ ಮಾತನಾಡಿ, ಶೈಕ್ಷಣಿಕ ಕ್ಷೇತ್ರದಲ್ಲಿ ಹಿರಾ ಶಿಕ್ಷಣ ಸಂಸ್ಥೆ ಅಭಿವೃದ್ಧಿಯ ಹೆಜ್ಜೆ ಇಟ್ಟಿದ್ದು, ಉತ್ತಮ ಸಾಧನೆ ಮಾಡಿದೆ. ಇಲ್ಲಿ ಕಲಿತ ಬಹಳಷ್ಟು ವಿದ್ಯಾರ್ಥಿನಿ ಯರು ವಿವಿಧ ಕ್ಷೇತ್ರಗಳಲ್ಲಿ ಗುರುತಿಸಿ ಕೊಂಡಿದ್ದಾರೆ. ಶೈಕ್ಷಣಿಕ ಕ್ಷೇತ್ರದಲ್ಲಿ ವಿದ್ಯಾರ್ಥಿನಿಯರು ಬೆಳೆದರೆ…
Author: UllalaVani
ಮಂಗಳೂರು: ನಗರ ಹೊರವಲಯದ ಕುಡುಪು ಬಳಿ ಎ.27ರಂದು ನಡೆದ ಕೇರಳದ ವಯನಾಡಿನ ಮುಹಮ್ಮದ್ ಅಶ್ರಫ್ ಗುಂಪು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಪ್ರಮುಖ ಆರೋಪಿ ಸಚಿನ್ ಟಿ. (26) ಮತ್ತು ಮಂಜುನಾಥ್ (32) ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಮಂಗಳೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಲಯ ವಜಾಗೊಳಿಸಿದೆ.ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಧೀಶ ಜಗದೀಶ್ ವಿ.ಎನ್. ಅಪರಾಧದ ಸ್ವರೂಪ ಮತ್ತು ತೀವ್ರತೆಯ ಕಾರಣದಿಂದಾಗಿ ಜಾಮೀನು ಅರ್ಜಿಯನ್ನು ವಜಾಗೊಳಿಸಿದ್ದಾರೆ ಎಂದು ತಿಳಿದು ಬಂದಿದೆ.
ಮಂಗಳೂರು : ರಾಜ್ಯಾದ್ಯಂತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ವಿದ್ಯಾರ್ಥಿಗಳಿಗೆ ಸರಕಾರ ನೀಡುವ ಉಚಿತ ಶೂ ಮತ್ತು ಸಾಕ್ಸ್‌ಗಳ ಗುಣಮಟ್ಟದ ಬಗ್ಗೆ ವಿದ್ಯಾರ್ಥಿಗಳ ಪೋಷಕರು ಮತ್ತು ಶಿಕ್ಷಕರು ಕಳವಳ ವ್ಯಕ್ತಪಡಿಸಿದ್ದಾರೆ.ಕರ್ನಾಟಕದಲ್ಲಿ ಸುಮಾರು 40 ಲಕ್ಷ ವಿದ್ಯಾರ್ಥಿಗಳಿಗೆ ಶೂ ಮತ್ತು ಸಾಕ್ಸ್‌ಗಳನ್ನು ವಿತರಿಲಾಗುತ್ತಿದೆ. ಈ ವರ್ಷ ಈ ಉದ್ದೇಶಕ್ಕಾಗಿ 111 ಕೋಟಿ ರೂ.ಗಳನ್ನು ಮೀಸಲಿಡಲಾಗಿದೆ. ಶಾಲಾಭಿವೃದ್ಧಿ ಮತ್ತು ಮೇಲ್ವೀಚಾರಣಾ ಸಮಿತಿಯು ಶೂ ಮತ್ತು ಸಾಕ್ಸ್‌ಗಳ ಒದಗಿಸುವ ಜವಾಬ್ದಾರಿಯನ್ನು ಹೊಂದಿದೆ. 1 ರಿಂದ 5 ನೇ ತರಗತಿಳ ಮಕ್ಕಳಿಗೆ ಪ್ರತಿ ಸೆಟ್‌ಗೆ 265 ರೂ., 6 ರಿಂದ 8 ನೇ ತರಗತಿಗಳಿಗೆ 295 ರೂ. ಮತ್ತು 9 ರಿಂದ 10 ನೇ ತರಗತಿಗಳಿಗೆ ವಿತರಿಸಲಾಗುವ ಶೂ , ಸಾಕ್ಸ್‌ಗಳ 325 ರೂ.ಗಳ ಬಜೆಟ್ ನಿಗದಿಪಡಿಸಲಾಗಿದೆ. ಕರಾವಳಿ, ಮಲೆನಾಡು, ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ನಾಲ್ಕು ತಿಂಗಳ ಕಾಲ ಮಳೆ ಇರುವ ಕಾರಣಕ್ಕಾಗಿ ಶೂಗಳ ಬದಲಿಗೆ ಚಪ್ಪಲಿ ಗಳನ್ನು ವಿತರಿಸಲಾಗುತ್ತದೆ. ವಿದ್ಯಾರ್ಥಿಗಳ ಹಾಜರಾತಿಯನ್ನು ಉತ್ತೇಜಿಸಲು ಶಿಕ್ಷಣ ಇಲಾಖೆ 2015-16…
ಕುಂಪಲ: ಬೈಕ್ ಢಿಕ್ಕಿ ಹೊಡೆದು ಗಂಭೀರ ಗಾಯಗೋಂಡು ಆಸ್ಪತ್ರೆಯಲ್ಲಿದ್ದ ಪಾದಚಾರಿ ಕುಂಪಲ ಚೇತನ ನಗರ ನಿವಾಸಿ ಲೋಕೇಶ್ (48) ಚಿಕಿತ್ಸೆ ಫಲಕಾರಿಯಾಗದೆ ಇಂದು ಸಾವನ್ನಪ್ಪಿದ್ದಾರೆ.ತೊಕ್ಕೊಟ್ಟು ಸಮೀಪದ ಕಾಪಿಕಾಡು ಎಂಬಲ್ಲಿ ಘಟನೆ ನಡೆದಿದೆ. ತೊಕ್ಕೊಟ್ಟಿನ ವಾಣಿಜ್ಯ ಸಂಕೀರ್ಣವೊಂದರಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸ ನಿರ್ವಹಿಸುತ್ತಿದ್ದ ಲೋಕೇಶ್ ಅವರು ಆ.15 ರ ಸಂಜೆ ರಾತ್ರಿ ಪಾಳಿ ಕೆಲಸಕ್ಕೆ ತೆರಳುವಾಗ ಕಾಪಿಕಾಡು ಎಂಬಲ್ಲಿ ಹೆದ್ದಾರಿ ರಸ್ತೆ ದಾಟುತ್ತಿದ್ದ ವೇಳೆ ಮೋಟಾರ್ ಬೈಕ್ ಒಂದು ಢಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು.ಲೋಕೇಶ್ ಅವರು ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಸಂಜೆ ಮೃತಪಟ್ಟಿದ್ದಾರೆ. ಘಟನೆ ಕುರಿತಂತೆ ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಮೃತ ಲೋಕೇಶ್ ಅವರು ಪತ್ನಿ, ಪುತ್ರಿಯನ್ನು ಅಗಲಿದ್ದಾರೆ.
ಉಳ್ಳಾಲ: ಪಿಲಾರು ಲಕ್ಷ್ಮೀಗುಡ್ಡೆ ನಿವಾಸಿ ರೋಹಿತಾಶ್ವ (40) ಇವರು ಅಸೌಖ್ಯದಿಂದ ಸ್ವಗೃಹದಲ್ಲಿ ನಿಧನ ಹೊಂದಿದರು.ಪಿಲಾರು ನಾಗಬ್ರಹ್ಮ ಕ್ಷೇತ್ರದಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡಿದ್ದ ಇವರು, ಎಟಿಎಂ ತಾಂತ್ರಿಕ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದರು.ಅವಿವಾಹಿತರಾಗಿರುವ ಇವರು ಇಬ್ಬರು ಸಹೋದರರು, ಮೂವರು ಸಹೋದರಿಯರು ತಾಯಿ ಹಾಗೂ ಬಂಧು ಮಿತ್ರರರನ್ನು ಅಗಲಿದ್ದಾರೆ
ಮಂಗಳೂರು: ಸಾರ್ವಜನಿಕ ಸಮಾರಂಭಗಳಲ್ಲಿ ಧ್ವನಿವರ್ಧಕಗಳ ಬಳಕೆಗೆ ಷರತ್ತು ವಿಧಿಸಿರುವುದನ್ನು ಖಂಡಿಸಿ, ಸಾರ್ವಜನಿಕ ಕಾರ್ಯಕ್ರಮಗಳನ್ನು ಬಹಿಷ್ಕರಿಸುವ ಸಂಘಟನೆಗಳ ನಿರ್ಧಾರದ ಕುರಿತಂತೆ ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ಪ್ರತಿಕ್ರಿಯಿಸಿದ್ದು ಬಹಿಷ್ಕಾರ ಸೇರಿದಂತೆ ಎಲ್ಲಾ ನಿರ್ಧಾರಗಳನ್ನು ತೆಗೆದುಕೊಳ್ಳಲು ಅವರು ಸ್ವತಂತ್ರರಾಗಿದ್ದಾರೆ. ಆದರೆ ಕಾನೂನು ಸ್ಪಷ್ಟವಾಗಿದ್ದು, ಡಿಜೆಗಳಿಗೆ ಅವಕಾಶ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ ಆದಾಗ್ಯೂ ಸಾರ್ವಜನಿಕರು, ಹಿರಿಯ ನಾಗರಿಕರು ರೋಗಿಗಳು ಮತ್ತು ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆಯಾಗದಂತೆ ಆಚರಣೆಗಳು ನಡೆಯುವಂತೆ ನೋಡಿಕೊಳ್ಳಲು ಅದಕ್ಕೆ ತಕ್ಕಂತೆ ಹೊಂದಿಕೊಳ್ಳುವ ಕೆಲವು ವ್ಯವಸ್ಥೆಗಳನ್ನು ಮಾಡುತ್ತೇವೆ ಎಂದು ಭರವಸೆ ನೀಡಿದ್ದಾರೆ.ಗಣೇಶ ಹಬ್ಬದ ಆಯೋಜಕರ ಸಭೆ ಇಂದು ನಡೆಯಲಿದ್ದು ಈ ಸಭೆಯಲ್ಲಿ ಡಿಸಿಪಿ, ಹೆಚ್ಚುವರಿ ಎಸ್ಪಿ ಡಿಕೆ ಮತ್ತು ಎಸಿಪಿಗಳು ಭಾಗವಹಿಸಲಿದ್ದು ಇಲ್ಲಿ ಮಾರ್ಗಸೂಚಿಗಳನ್ನು ಅಂತಿಮಗೊಳಿಸಲಾಗುತ್ತದೆ ಎಂದು ತಿಳಿಸಿದ್ದಾರೆ. ನಿಯಮಗಳಿವೆ ನಿಜ, ಆದರೆ ನಿಯಮಗಳಿಗೆ ಕೆಲವು ವಿನಾಯಿತಿಗಳನ್ನು ಸಮರ್ಥನೀಯ ಕಾರಣಗಳಿಗಾಗಿ ನೀಡಬಹುದು. ಆದರೆ ವಿನಾಯಿತಿಗಳೇ ನಿಯಮಗಳಾಗಲು ಸಾಧ್ಯವಿಲ್ಲ ಎಂದು ಕಮೀಷನರ್ ಸುಧೀರ್ ರೆಡ್ಡಿ ತಿಳಿಸಿದ್ದಾರೆ. ಧ್ವನಿವರ್ಧಕ ನೀಡದಿರಲು ನಿರ್ಧಾರ : ಸಾರ್ವಜನಿಕ ಸಮಾರಂಭಗಳಲ್ಲಿ ಧ್ವನಿವರ್ಧಕಗಳ…
ಉಳ್ಳಾಲ : ಕಥೋಲಿಕ್ ಸಭಾ ಮಂಗಳೂರು ಪ್ರದೇಶ್(ರಿ) ದಕ್ಷಿಣ ವಲಯ ಹಾಗೂ ಪೆರ್ಮನ್ನೂರು ಘಟಕ, ಫಾದರ್ ಮುಲ್ಲರ್ ಆಸ್ಪತ್ರೆ ಮಂಗಳೂರು, ಎಸ್.ಎಸ್ ವಿ.ಪಿ ಯೂತ್ ವಿಂಗ್, ಲಯನ್ಸ್ ಮತ್ತು ಲಿಯೋ ಕ್ಲಬ್ ಸಹಭಾಗಿತ್ವ ದಲ್ಲಿ ರಕ್ತದಾನ ಶಿಬಿರ ತೊಕ್ಕೋಟ್ಟು ಸೆಂಟ್ ಸೆಬಾಸ್ಟಿಯನ್ ಶಾಲಾ ವಠಾರದಲ್ಲಿ ನಡೆಯಿತು. ಪೆರ್ಮನ್ನೂರು ಸೆಂಟ್ ಸೆಬಾಸ್ಟಿಯನ್ ಚಚ್೯ ನ ಧರ್ಮಗುರು ಸಿಪ್ರಿಯಾನ್ ಪಿಂಟೋ ರಕ್ತದಾನ ಶಿಬಿರಕ್ಕೆ ಚಾಲನೆ ನೀಡಿದರು.ಬಳಿಕ ಮಾತನಾಡಿದ ಅವರು ದಾನದಲ್ಲಿ ಮಹಾ ದಾನ ರಕ್ತದಾನ. ರಕ್ತದಾನ ಮಾಡುವ ಮೂಲಕ ನಮ್ಮ ಅರೋಗ್ಯ ವೃದ್ಧಿಸುದರ ಜೊತೆಗೆ ಹಲವು ಜೀವಗಳನ್ನು ಉಳಿಸಲು ಸಾಧ್ಯ. ಈ ನಿಟ್ಟಿನಲ್ಲಿ ಎಲ್ಲರೂ ರಕ್ತದಾನ ಮಾಡುವ ಮೂಲಕ ಇತರಿಗೆ ಮಾದರಿಯಾಗಬೇಕು ಎಂದು ಹೇಳಿದರು. ಕ್ರೈಸ್ತ ಒಕ್ಕೂಟ ರಾಜ್ಯಾಧ್ಯಕ್ಷ ಆಲ್ವಿನ್ ಡಿಸೋಜ ಪನೀರ್ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ ಕಳೆದ ಐದಾರು ವರ್ಷಗಳಿಂದ ಕಥೋಲಿಕ್ ಸಭಾ ಮಂಗಳೂರು ಪ್ರದೇಶ್ ದಕ್ಷಿಣ ವಲಯದ ರಕ್ತನಿಧಿ ವಿಭಾಗವು ರಕ್ತದ ಮಹತ್ವವನ್ನು ಅರಿತು ನಿರಂತರವಾಗಿ ರಕ್ತದಾನಶಿಬಿರ ಅಯೋಜಿಸುವ ಮೂಲಕ…
ಮಂಗಳೂರು : ನಗರದ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ದೇರಳಕಟ್ಟೆ ಪರಿಸರದ ಮುತ್ತೂಟ್ ಫೈನಾನ್ಸ್ ಬ್ಯಾಂಕ್ ಕಳ್ಳತನಕ್ಕೆ ಪ್ರಯತ್ನ ನಡೆಸಿದ ಪ್ರಕರಣದಲ್ಲಿ ದಸ್ತಗಿರಿಯಾಗದೇ ತಲೆಮರೆಸಿಕೊಂಡಿರುವ ಪ್ರಮುಖ ಆರೋಪಿಯನ್ನು ಪತ್ತೆ ಹಚ್ಚುವಲ್ಲಿ ಸಿಸಿಬಿ ಪೊಲೀಸರು ಯಶಸ್ವಿಯಾಗಿರುತ್ತಾರೆ. ಮಾರ್ಚ್ 29 ರಂದು ರಾತ್ರಿ ಸಮಯ ದೇರಳಕಟ್ಟೆ ಪರಿಸರದಲ್ಲಿರುವ ಹೆಚ್.ಎಮ್ ಕಾಂಪ್ಲೆಕ್ಸ್ ನ ಮುತ್ತೂಟ್ ಫೈನಾನ್ಸ್ ಕಚೇರಿಯ ಮುಂದಿನ ಬಾಗಿಲಿನ ಸೈರನ್ ಹೂಟರ್ ನ ಕೇಬಲ್ ಅನ್ನು ತುಂಡು ಮಾಡಿ ಫೈನಾನ್ಸ್ ಕಂಪನಿಯಲ್ಲಿ ಕಳವು ಮಾಡಲು ಪ್ರಯತ್ನ ಮಾಡಿರುವುದಾಗಿ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಮೊ ನಂ: 42/2025 ಕಲಂ: 331[40], 305, 62, 13 ಬಿಎನ್‌ಎಸ್ ರಂತೆ ಪ್ರಕರಣ ದಾಖಲಾರುತ್ತದೆ. ಈ ಕಳ್ಳತನ ಪ್ರಕರಣದಲ್ಲಿ ಈಗಾಗಲೇ ಕೇರಳ ಇಡುಕ್ಕಿ ಮೂಲದ ಮುರಳಿ ಮತ್ತು ಕಾಂಞಿಗಾಡ್ ನ ಆರ್ಷದ್ ಎಂಬಾತರು ದಸ್ತಗಿರಿಯಾಗಿರುತ್ತಾರೆ. ಈ ಪ್ರಕರಣದಲ್ಲಿ ಪತ್ತೆಯಾಗದೇ ತಲೆಮರೆಸಿಕೊಂಡಿದ್ದ ಹಾಗೂ ಈ ಹಿಂದೆ ನಡೆದ ರಾಜಧಾನಿ ಜುವೆಲ್ಲರಿ ಶಾಪ್ ಕಳ್ಳತನ ಹಾಗೂ ಕೇರಳ ರಾಜ್ಯದ ವಿಜಯ ಬ್ಯಾಂಕ್ ಕಳ್ಳತನದ ಮುಖ್ಯ…
ಮಂಗಳೂರು : ಮಾಜಿ ಪ್ರಧಾನಿ ರಾಜೀವ್ ಗಾಂಧಿ ಮತ್ತು ಕರ್ನಾಟಕದ ಮಾಜಿ ಮುಖ್ಯಮಂತ್ರಿ ದೇವರಾಜ್ ಅರಸ್ ಅವರ ಜನ್ಮ ದಿನಾಚರಣೆಯ ಅಂಗವಾಗಿ ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾಧ್ಯಕ್ಷ ಇಬ್ರಾಹಿಂ ನವಾಜ್ ಅವರ ನೇತೃತ್ವದಲ್ಲಿ ಜಿಲ್ಲಾ ವೆನ್ಲಾಕ್ ಆಸ್ಪತ್ರೆಯಲ್ಲಿ ಆಹಾರ ವಿತರಣೆ ಕಾರ್ಯಕ್ರಮವನ್ನು ಆಯೋಜಿಸಿತ್ತು. ಸಮಿತಿಯ ಸ್ವಯಂಸೇವಕರು 400 ಕ್ಕೂ ಹೆಚ್ಚು ಜನರಿಗೆ ಉಚಿತ ಊಟ ವಿತರಿಸಿದರು. ಇದೇ ವೇಳೆ ರೋಗಿಗಳು ಮತ್ತು ಅವರ ಕುಟುಂಬಗಳಿಗೆ ಬೆಂಬಲ ಮತ್ತು ಸಹಾನುಭೂತಿಯನ್ನು ವ್ಯಕ್ತಪಡಿಸಿದರು. ಈ ಕಾರ್ಯಕ್ರಮವು ರಾಜೀವ್ ಗಾಂಧಿ ಮತ್ತು ದೇವರಾಜ್ ಅರಸ್ ಅವರು ಪ್ರತಿಪಾದಿಸಿದ ಸಾಮಾಜಿಕ ನ್ಯಾಯ, ಮತ್ತು ಸಮಾಜಕ್ಕೆ ನೀಡುವ ಸೇವೆಯ ಮೌಲ್ಯಗಳನ್ನು ಪ್ರತಿಬಿಂಬಿಸುತ್ತದೆ. ಯುವ ಕಾಂಗ್ರೆಸ್ ಸಮಿತಿಯು ಸಮುದಾಯದೊಂದಿಗೆ ನಿಂತು ಅಗತ್ಯವಿರುವವರಿಗೆ ಆರೈಕೆ ಮಾಡುವ ಅವರ ದೃಷ್ಟಿಕೋನವನ್ನು ಮುಂದುವರಿಸುವ ತನ್ನ ಬದ್ಧತೆಯನ್ನು ಪುನರುಚ್ಚರಿಸಿದರು. ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷ ಸುನೀತ್ ಡಿಸಾ ಕುಲಶೇಖರ್, ದೀಕ್ಷಿತ್ ಅತ್ತಾವರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸೌಹಾನ್ ಎಸ್.ಕೆ., ಮಂಗಳೂರು ದಕ್ಷಿಣ…
ಕಾಸರಗೋಡು : ಮದ್ರಸಕ್ಕೆ ತೆರಳುತ್ತಿದ್ದ ಎಂಟು ವರ್ಷದ ಬಾಲಕನ ಮೇಲೆ ಬೀದಿ ನಾಯಿ ದಾಳಿ ನಡೆಸಿದ ಘಟನೆ ಕಾಸರಗೋಡಿನ ಮಂಜೇಶ್ವರದಲ್ಲಿ ನಡೆದಿದೆ. ಮಂಜೇಶ್ವರದ ರಶೀದ್ ಅವರ ಪುತ್ರ ಅಬೂಬಕ್ಕರ್ ರಫಾನ್ ಗಾಯಗೊಂಡ ಬಾಲಕ. ಬೆಳಿಗ್ಗೆ ಮದ್ರಸಕ್ಕೆ ನಡೆದುಕೊಂಡು ಹೋಗುತ್ತಿದ್ದಾಗ ನಾಯಿ ಅಟ್ಟಾಡಿಸಿ ದಾಳಿ ನಡೆಸಿದೆ ಎನ್ನಲಾಗಿದೆ. ಬಾಲಕನ ಬೊಬ್ಬೆ ಕೇಳಿ ಸ್ಥಳೀಯರು ದಾವಿಸಿ ಬರುತ್ತಿದ್ದಂತೆ ನಾಯಿ ತಪ್ಪಿಸಿಕೊಂಡಿದೆ. ಗಾಯಗೊಂಡ ಬಾಲಕನನ್ನು ಕಾಸರಗೋಡಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

