ಉಡುಪಿ, ಆಗಸ್ಟ್ 07: ಇತ್ತೀಚೆಗೆ ಕರಾವಳಿಯ ಕಡಲತಡಿಯಲ್ಲಿ ನಡೆದ ಶೂಟೌಟ್ನಲ್ಲಿ ಓರ್ವ ಉದ್ಯಮಿ ಕೊಲೆಯಾಗಿದ್ದರು. ಇದೀಗ ಉಡುಪಿ ಜಿಲ್ಲೆಯಲ್ಲಿ ಮತ್ತೊಂದು ಶೂಟೌಟ್ ಘಟನೆ ನಡೆದಿದ್ದು, ಜನರು ಬೆಚ್ಚಿಬಿದ್ದಿದ್ದಾರೆ. ಉದ್ಯಮಿ ಹಾಗೂ ಸ್ಥಳೀಯ ಕಾಂಗ್ರೆಸ್ ಮುಖಂಡ ಡೇವಿಡ್ ಡಿಸೋಜಾರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ (death) ಮಾಡಿದ್ದಾರೆ. ಶಿರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೃತ್ಯ ಸಂಭವಿಸಿದೆ. ಗುಂಡಿಕ್ಕಿ ಕಾಂಗ್ರೆಸ್ ಮುಖಂಡನ ಹತ್ಯೆ ಕೊಲೆಯಾದ ಡೇವಿಡ್ ಡಿಸೋಜಾ ಮುದರಂಗಡಿ ಗ್ರಾಮ ಪಂಚಾಯತಿಯ ಮಾಜಿ ಅಧ್ಯಕ್ಷರಾಗಿದ್ದರು. ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ತಕ್ಷಣವೇ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಶೂಟೌಟ್‌ಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ ಇನ್ನು ವೈಯಕ್ತಿಕ ದ್ವೇಷ ಸೇರಿದಂತೆ ವಿವಿಧ ಆಯಾಮಗಳಲ್ಲಿ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಹತ್ಯೆಗೈದು ತಲೆಮರೆಸಿಕೊಂಡಿರುವ ಹಂತಕರ ಪತ್ತೆಗಾಗಿ ಪೊಲೀಸರು ವಿಶೇಷ ಕಾರ್ಯಾಚರಣೆ ಆರಂಭಿಸಿದ್ದು, ಬಂಧನಕ್ಕೆ ಬಲೆ ಬೀಸಿದ್ದಾರೆ. ಹಣಕಾಸಿನ ವೈಷಮ್ಯಕ್ಕೆ ಉದ್ಯಮಿ ಐವನ್ ರೀಚರ್ಡ್ ಮಸ್ಕರೇನಸ್ ಗುಂಡಿಕ್ಕಿ ಹತ್ಯೆ ಇನ್ನು ಇತ್ತೀಚೆಗೆ ಉಡುಪಿ ಜಿಲ್ಲೆಯ ಕುಂದಾಪುರದ ಹೋಲಿ ರೋಜಾರಿಯೋ ಚರ್ಚ್ ರಸ್ತೆಯಲ್ಲಿ ಉದ್ಯಮಿ ಐವನ್…
Author: UllalaVani
ಉಡುಪಿ,ಆ. 07 : ಮಣಿಪಾಲದ ವಿದ್ಯಾರತ್ನ ನಗರದಲ್ಲಿರುವ ಕೆಫೆಗೆ ಮಣಿಪಾಲ ಪೊಲೀಸರು ದಾಳಿ ನಡೆಸಿ, ನಿಷೇಧಿತ ಹುಕ್ಕಾ ಸೇವನೆ ಮಾಡುತ್ತಿದ್ದ 8 ಮಂದಿ ಯುವಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯ ವಿದ್ಯಾರತ್ನ ನಗರದ ಡಿಸಿ ಆಫೀಸ್ ರಸ್ತೆಯಲ್ಲಿರುವ ಕಟ್ಟಡದ ಮೊದಲ ಮಹಡಿಯಲ್ಲಿರುವ ಕೆಫೆಯಲ್ಲಿ ಅಕ್ರಮವಾಗಿ ಹುಕ್ಕಾ ನೀಡಲಾಗುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ಆಗಸ್ಟ್ 6 ರಂದು ಸಹಾಯಕ ಸಬ್-ಇನ್ಸ್ಪೆಕ್ಟರ್ ವಾಮನ್ ನೇತೃತ್ವದ ಪೊಲೀಸ್ ತಂಡ ದಾಳಿ ನಡೆಸಿದರು. ಹೆಡ್ ಕಾನ್‌ಸ್ಟೆಬಲ್‌ಗಳಾದ ಸುರೇಶ್ ಶೆಟ್ಟಿ ಮತ್ತು ಚೇತನ್ ಕುಮಾರ್ ಹಾಗೂ ಪೊಲೀಸ್ ಕಾನ್‌ಸ್ಟೆಬಲ್‌ಗಳಾದ ರವಿರಾಜ್ ಮತ್ತು ಉಮೇಶ್ ಅವರ ಸಹಾಯದಿಂದ ಕಾರ್ಯಾಚರಣೆ ನಡೆಸಿದರು.ತಪಾಸಣೆಯ ಸಮಯದಲ್ಲಿ, ಕೆಫೆಯೊಳಗೆ ಕುಳಿತಿದ್ದ ಎಂಟು ಯುವಕರು ಹುಕ್ಕಾ ಧೂಮಪಾನ ಮಾಡುತ್ತಿರುವುದು ಪತ್ತೆಯಾಗಿದೆ . ಅವರನ್ನು ಕುಂದಾಪುರದ ಎಸ್. ರಿಯಾಜ್, ಬೈಂದೂರಿನ ಜೀಶನ್ ಅಬ್ದುಲ್ ಜಾಹಿರ್, ಗಂಗೊಳ್ಳಿಯ ಮೊಹಮ್ಮದ್ ಸಮೀರ್, ಉಡುಪಿಯ ಮೊಹಮ್ಮದ್ ಸವಾದ್, ಉಡುಪಿಯ ಕೃಷ್ಣ, ಉಡುಪಿಯ ಚಿರಾಗ್, ಕಾಪುವಿನ ತಾರಾನಾಥ್ ಮತ್ತು ಉಡುಪಿಯ…
ಕೊಣಾಜೆ, ಆ.7: ಬ್ರಹ್ಮ ಶ್ರೀ ನಾರಾಯಣ ಗುರು ಸೇವಾ ಸಂಘ (ರಿ.), ಗ್ರಾಮ ಚಾವಡಿ ಕೊಣಾಜೆಯ ಗುರು ಸಾನಿಧ್ಯದಲ್ಲಿ ಇಂದು ವಾರದ ಗುರುಪೂಜೆಯ ಸಂದರ್ಭದಲ್ಲಿ ಬ್ರಹ್ಮ ಶ್ರೀ ನಾರಾಯಣ ಗುರುಗಳ ಜನ್ಮ ದಿನೋತ್ಸವದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಲಾಯಿತು. ಸಂಘದ ಅಧ್ಯಕ್ಷರಾದ ವಿಜೇತ್ ಪಜೀರು ಅವರು ಗುರು ಹಿರಿಯರು, ಕಿರಿಯರು ಹಾಗೂ ಮಾತೆಯರ ಸಮ್ಮುಖದಲ್ಲಿ 2026ರ ಆಗಸ್ಟ್ 28ರಂದು (ಶುಕ್ರವಾರ) ನಡೆಯಲಿರುವ ಬ್ರಹ್ಮ ಶ್ರೀ ನಾರಾಯಣ ಗುರುಗಳ ಜನ್ಮ ದಿನೋತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಅನಾವರಣಗೊಳಿಸಿದರು. ಈ ಸಂದರ್ಭದಲ್ಲಿ ಸಂಘದ ಪದಾಧಿಕಾರಿಗಳು, ಸದಸ್ಯರು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದು, ಜನ್ಮ ದಿನೋತ್ಸವವನ್ನು ಅರ್ಥಪೂರ್ಣವಾಗಿ ಮತ್ತು ವಿಜೃಂಭಣೆಯಿಂದ ಆಚರಿಸಲು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವ ಕುರಿತು ಚರ್ಚಿಸಲಾಯಿತು.
ಹಿಂದು ಜಾಗರಣ ವೇದಿಕೆ ಉಳ್ಳಾಲ ತಾಲೂಕು, ಮಂಗಳೂರು ಗ್ರಾಮಾಂತರ ಜಿಲ್ಲೆಯ ಆಶ್ರಯದಲ್ಲಿ ಭಾರತದ 79ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ “ಅಖಂಡ ಭಾರತ ಸಂಕಲ್ಪ ದಿನ”ವನ್ನು ಆಗಸ್ಟ್ 9ರಂದು ವಿವಿಧ ಕಾರ್ಯಕ್ರಮಗಳೊಂದಿಗೆ ಆಚರಿಸಲಾಗುತ್ತಿದೆ. ಈ ಅಂಗವಾಗಿ ಆಗಸ್ಟ್ 9ರಂದು ಮಧ್ಯಾಹ್ನ 3.30ಕ್ಕೆ ತಲಪಾಡಿ ಶ್ರೀ ದುರ್ಗಾಪರಮೇಶ್ವರಿ ದ್ವಾರದಿಂದ ದೇವಿಪುರ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದವರೆಗೆ ಬೃಹತ್ ವಾಹನ ಜಾಥಾ ಆಯೋಜಿಸಲಾಗಿದೆ. 1947ರ ಆಗಸ್ಟ್ 14ರ ಮಧ್ಯರಾತ್ರಿ ದೇಶ ವಿಭಜನೆಯ ಕರಾಳ ಘಟನೆಯನ್ನು ಸ್ಮರಿಸುತ್ತಾ, ಅಖಂಡ ಭಾರತದ ಸಂಕಲ್ಪ ಹಾಗೂ ರಾಷ್ಟ್ರಭಕ್ತಿಯ ಜಾಗೃತಿ ಮೂಡಿಸುವ ಉದ್ದೇಶದಿಂದ ಈ ಜಾಥಾ ನಡೆಯಲಿದೆ ಎಂದು ಸಂಘಟಕರು ತಿಳಿಸಿದ್ದಾರೆ. ಬಳಿಕ ಸಂಜೆ 6 ಗಂಟೆಗೆ ದೇವಿಪುರ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವಠಾರದಲ್ಲಿ ಸಭಾ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಿವೃತ್ತ ಉಪ ಪೊಲೀಸ್ ನಿರೀಕ್ಷಕರಾದ ಶ್ರೀ ಗುರುವ ಮೂಲ್ಯ (ನಾರ್ಲ ಪಡೀಲ್) ವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಹಿಂದು ಜಾಗರಣ ವೇದಿಕೆ ಕರ್ನಾಟಕ ದಕ್ಷಿಣ ಪ್ರಾಂತದ ಸಹ ಸಂಯೋಜಕರಾದ ಶ್ರೀ ಸತೀಶ್ ದಾವಣಗೆರೆ ಅವರು…
ಯುವತಿಯರೇ, ಬದುಕು ಅಂದರೆ ಮುಖಕ್ಕೆ ಹಚ್ಚುವ ಅಲಂಕಾರ, ತಳುಕು-ಬಳುಕು ಅಥವಾ ವೈಯ್ಯಾರ ಮಾತುಗಳಲ್ಲ. ನಿಮ್ಮ ಬದುಕು ನಿಮ್ಮ ತಂದೆ-ತಾಯಿಯರ ಕನಸು, ನಿಮ್ಮ ಸ್ವಾಭಿಮಾನ ಮತ್ತು ನಿಮ್ಮ ಭವಿಷ್ಯ. ನಿಮ್ಮ ಜೀವನದ ಮೌಲ್ಯವನ್ನು ಯಾವುದೇ ಕ್ಷಣಿಕ ನೋವು ಅಥವಾ ವೈಫಲ್ಯದಿಂದ ಅಳೆಯಬೇಡಿ. ಪ್ರೀತಿ ಮತ್ತು ಪ್ರೇಮ ಮಾನವ ಜೀವನದ ಸಹಜ ಭಾವನೆಗಳು. ಆದರೆ ಅವುಗಳಲ್ಲೇ ಜೀವನ ಮುಗಿಯುವುದಿಲ್ಲ. ಭಾವನೆಗಳನ್ನು ಮೀರಿ ಧೈರ್ಯದಿಂದ ನಿಲ್ಲುವುದು, ಸಂಕಷ್ಟಗಳನ್ನು ಎದುರಿಸಿ ಮುಂದೆ ಸಾಗುವುದು ಮತ್ತು ಜೀವನವನ್ನು ಕಟ್ಟಿಕೊಳ್ಳುವುದೇ ನಿಜವಾದ ಗೆಲುವು. ಪ್ರತಿಯೊಬ್ಬ ಯುವತಿಯೂ ಮಾನಸಿಕ ಆರೋಗ್ಯಕ್ಕೆ ಆದ್ಯತೆ ನೀಡಬೇಕು. ಆತ್ಮವಿಶ್ವಾಸ, ಧೈರ್ಯ, ಶ್ರದ್ಧೆ ಮತ್ತು ಮಾನಸಿಕ ಸ್ಥೈರ್ಯವೇ ಜೀವನದ ದೊಡ್ಡ ಸಂಪತ್ತು. ದೇವರಲ್ಲಿ ನಂಬಿಕೆ ಇರುವುದು ಒಳ್ಳೆಯದು; ಆದರೆ ನಿಮ್ಮ ಜೀವನವನ್ನು ಬದಲಾಯಿಸುವ ಶಕ್ತಿ ನಿಮ್ಮೊಳಗೇ ಇದೆ. ಅನೇಕ ಸಂದರ್ಭಗಳಲ್ಲಿ ನೀವೇ ನಿಮ್ಮ ಜೀವನದ ದೇವರಾಗಬೇಕು. ಹೆಣ್ಣನ್ನು ಪ್ರಕೃತಿಗೆ ಮತ್ತು ಭೂಮಿಗೆ ಹೋಲಿಸಿರುವುದು ಆಕೆಯ ಸೃಜನಶೀಲತೆ, ಸಹನೆ ಮತ್ತು ಜೀವದಾಯಕ ಶಕ್ತಿಯ ಕಾರಣದಿಂದ. ಸಮಾಜವು ಮಹಿಳೆಗೆ ದೇವರಿಗಿಂತಲೂ…
ಉಡುಪಿ: ಮಲ್ಪೆ ಕಲ್ಮಾಡಿಯ ಯುವತಿಯೊರ್ವಳು ನೇಣಿಗೆ ಶರಣಾದ ಘಟನೆ ಇತ್ತಿಚೆಗೆ ನಡೆದಿದೆ. ಹೊಟೇಲ್‌ನ ಉದ್ಯೋಗಿ, ಮಾಡೆಲಿಂಗ್‌ನಲ್ಲಿ ಆಸಕ್ತಿ ಹೊಂದಿದ್ದ ಕೃತಿ ಬಂಗೇರ(27) ಆತ್ಮಹತ್ಯೆ ಮಾಡಿಕೊಂಡ ಯುವತಿ.ತನ್ನ ತಾಯಿ ಮತ್ತು ಸಹೋದರಿಯೊಂದಿಗೆ ಕಲ್ಮಾಡಿಯ ಮನೆಯಲ್ಲಿ ವಾಸವಾಗಿದ್ದ ಕೃತಿ ಮನೆಯ ಕೊಠಡಿಯಲ್ಲಿ ಚೂಡಿದಾರದ ಶಾಲಿನಲ್ಲಿ ಕುತ್ತಿಗೆ ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈಕೆ ಕಳೆದ ಕೆಲವು ದಿನಗಳಲ್ಲಿ ಒತ್ತಡ ರೀತಿಯಲ್ಲಿ ವರ್ತಿಸುತ್ತಿದ್ದಳು ಎಂದು ಮನೆಯವರು ತಿಳಿಸಿದ್ದಾರೆ. ಸಹೋದರಿ ನೀಡಿದ ದೂರಿನಂತೆ ಮಲ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರು: ಮಂಗಳೂರು ವಿಶ್ವವಿದ್ಯಾಲಯದ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ನಿವೃತ್ತ ಪ್ರೊಫೆಸರ್, ಮೈಸೂರು ಕಲ್ಯಾಣಗಿರಿ ನಿವಾಸಿ ಡಾ.ವಹೀದಾ ಸುಲ್ತಾನಾ (70) ಹೃದಯಾಘಾತದಿಂದ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಗುರುವಾರ ಅಪರಾಹ್ನ ನಿಧನರಾದರು. ಅವರು ಸುಮಾರು 3 ದಶಕಗಳ ಕಾಲ ಮಂಗಳೂರು ವಿಶ್ವವಿದ್ಯಾನಿಲಯದ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ಪ್ರಾಧ್ಯಾಪಕರಾಗಿದ್ದು, ವಿಭಾಗ ಮುಖ್ಯಸ್ಥರಾಗಿ ನಿವೃತ್ತಿ ಹೊಂದಿದ್ದರು. ಅವರು ಪತಿ, ಇಬ್ಬರು ಸಹೋದರರು, ಮೂವರು ಸಹೋದರಿಯರನ್ನು ಅಗಲಿದ್ದಾರೆ. ಅವರು ಮಂಗಳೂರು ವಿವಿ ಮಹಿಳಾ ಹಾಸ್ಟೆಲ್ ವಾರ್ಡನ್ ಆಗಿ, ಅಲ್ಪಸಂಖ್ಯಾತರು, ಇತರ ಒಬಿಸಿ ವಿದ್ಯಾರ್ಥಿಗಳ ಐಎಎಸ್ ಕೆಎಎಸ್ ಕೋಚಿಂಗ್ ಕೋಆರ್ಡಿನೇಟರ್ ಆಗಿ ಸೇವೆ ಸಲ್ಲಿಸಿದ್ದರು. ಮಾಧ್ಯಮ, ಆರೋಗ್ಯ, ತಂತ್ರಜ್ಞಾನ, ಮಹಿಳಾ ವಿಚಾರಗಳು ಸೇರಿದಂತೆ ಹಲವು ವಿಷಯಗಳಲ್ಲಿ ಅವರು ಲೇಖನಗಳನ್ನು ಬರೆದಿರುವುದಲ್ಲದೆ, ರಾಷ್ಟ್ರೀಯ, ಅಂತಾರಾಷ್ಟ್ರೀಯ ನಿಯತಕಾಲಿಕಗಳಲ್ಲಿ ಸಂಶೋಧನಾ ಪ್ರಬಂಧಗಳನ್ನು ಪ್ರಸ್ತುತಪಡಿಸಿದ್ದಾರೆ. ಬಾಂಗ್ಲಾದೇಶ, ಮಲೇಶ್ಯ, ಶ್ರೀಲಂಕಾ, ಹಾಂಗ್ ಕಾಂಗ್ ಗಳಲ್ಲಿ ನಡೆದ ಅಂತಾರಾಷ್ಟ್ರೀಯ ಸಮ್ಮೇಳನಗಳಲ್ಲಿ ಭಾಗಿಯಾಗಿ ಪ್ರಬಂಧಗಳನ್ನು ಮಂಡಿಸಿದ್ದಾರೆ. ಕಾರ್ಪೊರೇಟ್ ಕಮ್ಯುನಿಕೇಶನ್ಸ್, ಮಹಿಳೆ ಮತ್ತು ಮೀಡಿಯಾ, ಆರೋಗ್ಯ…
ನವದೆಹಲಿ, ಆಗಸ್ಟ್ 6: ಕರ್ನಾಟಕದಲ್ಲಿ ಅಡಿಕೆ ಬೆಳೆಯುವ ಪ್ರದೇಶ ಕಳೆದ ಐದು ವರ್ಷಗಳಲ್ಲಿ ಗಣನೀಯವಾಗಿ ವಿಸ್ತರಣೆಯಾಗಿದೆ. ಆದರೆ, ಇದೇ ಅವಧಿಯಲ್ಲಿ ಅಡಿಕೆ ಉತ್ಪಾದಕತೆ (Arecanut Productivity) ತೀವ್ರವಾಗಿ ಕುಸಿದಿರುವುದು ಕೇಂದ್ರ ಸರ್ಕಾರ ಲೋಕಸಭೆಯಲ್ಲಿ (Lok Sabha) ಮಂಡಿಸಿರುವ ಅಂಕಿಅಂಶಗಳಿಂದ ಬಹಿರಂಗವಾಗಿದೆ. 2021-22ರಲ್ಲಿ ರಾಜ್ಯದಲ್ಲಿ 6,03,121 ಹೆಕ್ಟೇರ್ ಪ್ರದೇಶದಲ್ಲಿ ಅಡಿಕೆ ಬೆಳೆಯಲಾಗುತ್ತಿತ್ತು. 2025-26ರ ಎರಡನೇ ಮುಂಗಡ ಅಂದಾಜಿನ ಪ್ರಕಾರ ಈ ಪ್ರದೇಶ 7,98,677 ಹೆಕ್ಟೇರ್‌ಗೆ ಏರಿಕೆಯಾಗಿದೆ. ಅಂದರೆ ಸುಮಾರು 1,95,500 ಹೆಕ್ಟೇರ್ ಅಥವಾ ಶೇ 32ಕ್ಕೂ ಹೆಚ್ಚು ವಿಸ್ತರಣೆಯಾಗಿದೆ. ಆದರೆ, ಇದೇ ಅವಧಿಯಲ್ಲಿ ಪ್ರತಿ ಹೆಕ್ಟೇರ್‌ಗೆ ಸರಾಸರಿ ಉತ್ಪಾದಕತೆ 2.24 ಟನ್‌ನಿಂದ 1.42 ಟನ್‌ಗೆ ಇಳಿಕೆಯಾಗಿದೆ. ಇದು ಸುಮಾರು ಶೇ 37ರಷ್ಟು ಕುಸಿತವಾಗಿದೆ. 5 ವರ್ಷಗಳ ಹಿಂದಿಗಿಂತ ಶೇ 16 ರಷ್ಟು ಕುಸಿದ ಅಡಿಕೆ ಉತ್ಪಾದನೆ ಉತ್ಪಾದಕತೆ ಕುಸಿದ ಪರಿಣಾಮ ಅಡಿಕೆ ಉತ್ಪಾದನೆಯಲ್ಲೂ ಇಳಿಕೆ ಕಂಡುಬಂದಿದೆ. 2021-22ರಲ್ಲಿ ಕರ್ನಾಟಕದಲ್ಲಿ 13.5 ಲಕ್ಷ ಟನ್ ಅಡಿಕೆ ಉತ್ಪಾದನೆಯಾಗಿತ್ತು. ಮುಂದಿನ ವರ್ಷ ಉತ್ಪಾದನೆ 10.2 ಲಕ್ಷ ಟನ್‌ಗೆ ಕುಸಿದಿತ್ತು. ಬಳಿಕ ನಿಧಾನವಾಗಿ ಚೇತರಿಸಿಕೊಂಡು…
ಮಂಗಳೂರು, ಆ. 6: ದಕ್ಷಿಣ ಕನ್ನಡ ಜಿಲ್ಲೆಯ ಐತಿಹಾಸಿಕ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಿಯಲ್ಲಿ ಇದೀಗ ಮತ್ತೊಂದು ಹೊಸ ವಿವಾದ ತಲೆದೋರಿದೆ. ದೇವಸ್ಥಾನಕ್ಕೆ ಸೇರಿದ ಅಂದಾಜು 30 ಕೋಟಿ ರೂಪಾಯಿ ಮೌಲ್ಯದ 3 ಎಕರೆ ಜಾಗದಲ್ಲಿ ಸಾರ್ವಜನಿಕ ರಸ್ತೆ ನಿರ್ಮಿಸಲು ಮುಂದಾಗಿರುವುದು ಭಕ್ತರ ಹಾಗೂ ಆಡಳಿತ ಮಂಡಳಿಯ ನಡುವೆ ಪರ-ವಿರೋಧದ ತೀವ್ರ ಚರ್ಚೆಗೆ ಕಾರಣವಾಗಿದೆ. ಪುತ್ತೂರು ಕಾಂಗ್ರೆಸ್ ಶಾಸಕ ಅಶೋಕ್ ಕುಮಾರ್ ರೈ ಅವರ ನೇತೃತ್ವದಲ್ಲಿ ಕ್ಷೇತ್ರ ಅಭಿವೃದ್ಧಿಗೆ ಹಲವು ಯೋಜನೆಗಳನ್ನು ರೂಪಿಸಲಾಗುತ್ತಿದೆ. ಆದರೆ, ಈ ಯೋಜನೆಯ ಭಾಗವಾಗಿ ವರ್ಷಗಳ ಇತಿಹಾಸ ಹೊಂದಿದ್ದ ‘ನಟರಾಜ ವೇದಿಕೆ’ಯನ್ನು ನೆಲಸಮಗೊಳಿಸಿ, ಅದೇ ಜಾಗದಲ್ಲಿ ಸಾರ್ವಜನಿಕ ರಸ್ತೆ ನಿರ್ಮಿಸಲು ತೀರ್ಮಾನಿಸಿರುವುದು ಭಕ್ತರ ಕೆಂಗಣ್ಣಿಗೆ ಗುರಿಯಾಗಿದೆ. ಧಾರ್ಮಿಕ ದತ್ತಿ (ಮುಜರಾಯಿ) ವ್ಯಾಪ್ತಿಗೆ ಬರುವ ದೇವಸ್ಥಾನಗಳಲ್ಲಿ ಯಾವುದೇ ಕಾಮಗಾರಿ ನಡೆಸಬೇಕಿದ್ದರೂ ಅಧಿಕೃತ ಟೆಂಡರ್ ಪ್ರಕ್ರಿಯೆ ನಡೆಯಬೇಕು. ಆದರೆ, ಇಲ್ಲಿ ಯಾವುದೇ ಟೆಂಡರ್ ಕರೆಯದೆ ಏಕಾಧಿಪತ್ಯದ ರೀತಿಯಲ್ಲಿ ಕಾಮಗಾರಿ ನಡೆಸಲಾಗುತ್ತಿದೆ ಎಂದು ಭಕ್ತರು ಗಂಭೀರ ಆರೋಪ ಮಾಡಿದ್ದಾರೆ. ಕೋಟ್ಯಾಂತರ ರೂಪಾಯಿ…
ಬೆಂಗಳೂರು, ಆಗಸ್ಟ್ 06: ಮಕ್ಕಳಲ್ಲಿ ಹೃದಯಾಘಾತದ ಅಪಾಯ ಹೆಚ್ಚಳವಾಗುತ್ತಿರುವ ಬಗ್ಗೆ ಹುಬ್ಬಳ್ಳಿಯ ಕಿಮ್ಸ್ ಸಂಸ್ಥೆಯು ದೇಶದಲ್ಲೇ ಮೊತ್ತ ಮೊದಲ ಬಾರಿಗೆ ಮಹತ್ವದ ಅಧ್ಯಯನ ನಡೆಸಿದೆ. ಡಾ. ರಾಮ್ ಕವಲಗುಡ್ಡ ನೇತೃತ್ವದಲ್ಲಿ ನಡೆದ ಈ ಸಂಶೋಧನೆಯು ಕರ್ನಾಟಕ ಸೇರಿದಂತೆ 13 ರಾಜ್ಯಗಳ ಮಕ್ಕಳಿಗೆ ಸಂಬಂಧಿಸಿದಂತೆ ಆತಂಕಕಾರಿ ಸಂಗತಿಗಳನ್ನು ಬಹಿರಂಗಪಡಿಸಿದೆ. 8 ರಿಂದ 18 ವರ್ಷ ವಯಸ್ಸಿನ 347 ಮಕ್ಕಳನ್ನು ಈ ಅಧ್ಯಯನಕ್ಕೆ ಒಳಪಡಿಸಲಾಗಿತ್ತು. ಇದರಲ್ಲಿ ಶೇಕಡಾ 70ರಷ್ಟು ಮಕ್ಕಳಲ್ಲಿ ಹೃದಯಾಘಾತಕ್ಕೆ ಕಾರಣವಾಗಬಹುದಾದ ಅಪಾಯಕಾರಿ ಅಂಶಗಳು ಪತ್ತೆಯಾಗಿವೆ. ಅದರಲ್ಲಿ ಶೇಕಡಾ 17ರಷ್ಟು ಮಕ್ಕಳಲ್ಲಿ ಹೃದಯದ ಅಪಧಮನಿಗಳ ಒಳಪದರವಾದ ಎಂಡೋಥೀಲಿಯಂ ಹಾನಿಯಾಗಿರುವುದು ಕಂಡುಬಂದಿದೆ. ಮಕ್ಕಳಲ್ಲಿ ಹೆಚ್ಚುತ್ತಿರುವ ಬೊಜ್ಜುತನ, ದೈಹಿಕ ಚಟುವಟಿಕೆಯ ಕೊರತೆ, ಅತಿಯಾದ ಜಂಕ್ ಫುಡ್ ಸೇವನೆ, ಕೋಲ್ಡ್ ಡ್ರಿಂಕ್ಸ್, ಹೆಚ್ಚು ಸಕ್ಕರೆ ಮತ್ತು ಉಪ್ಪಿನ ಆಹಾರ ಸೇವನೆ ಇವೇಲ್ಲವೂ ಈ ಅಪಾಯಕ್ಕೆ ಪ್ರಮುಖ ಕಾರಣಗಳಾಗಿವೆ ಎಂದು ಅಧ್ಯಯನ ವರದಿ ಹೇಳುತ್ತದೆ. ಸೂಕ್ತ ಚಿಕಿತ್ಸೆ ಮತ್ತು ಜೀವನಶೈಲಿ ಬದಲಾವಣೆ ಮಾಡಿಕೊಳ್ಳದಿದ್ದರೆ, ಈ ಮಕ್ಕಳಿಗೆ ಮುಂದಿನ 10-15 ವರ್ಷಗಳಲ್ಲಿ…

