ಅಡ್ಯಾರು: ಕಾಲೇಜು ಬಸ್ಸಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ನಿರ್ವಾಹಕ ಕರ್ತವ್ಯದಲ್ಲಿದ್ದಾಗಲೇ ಕುಸಿದುಬಿದ್ದು ಸಾವನ್ನಪ್ಪಿರುವ ಘಟನೆ ಅಡ್ಯಾರ್ ಸಮೀಪ ಇಂದು ಬೆಳಗ್ಗಿನ ವೇಳೆ ಸಂಭವಿಸಿದೆ.ಕುತ್ತಾರು ನಿವಾಸಿ ಸಂತೋಷ್ (40) ಮೃತರು. ನಿಟ್ಟೆ ಪರಿಗಣಿಸಲ್ಪಟ್ಟ ವಿಶ್ವವಿದ್ಯಾನಿಲಯಕ್ಕೆ ಸೇರಿದ ಬಸ್ಸಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಅವರು ಬೆಳಗ್ಗಿನ ವೇಳೆ ಶಾಲಾ ವಿದ್ಯಾರ್ಥಿಗಳನ್ನು ಶಾಲೆಗೆ ಕರೆತರಲು ತೆರಳುವ ಟ್ರಿಪ್ ನಲ್ಲಿ ಕಾರ್ಯನಿರ್ವಹಿಸುತ್ತಿದ್ದಾಗ ಘಟನೆ ನಡೆದಿದೆ. ಬಸ್ಸೊಳಗಡೆ ಶಾಲಾ ವಿದ್ಯಾರ್ಥಿಗಳನ್ನು ಹತ್ತಿಸುವ ಸಂದರ್ಭದಲ್ಲಿ ಏಕಾಏಕಿ ಕುಸಿದುಬಿದ್ದಿದ್ದಾರೆ. ತಕ್ಷಣ ಸ್ಥಳೀಯರು ಸೇರಿಕೊಂಡು ಆಸ್ಪತ್ರೆ ಸೇರಿಸುವ ಪ್ರಯತ್ನ ಮಾಡಿದರಾದರೂ, ದಾರಿಮಧ್ಯೆ ಸಾವನ್ನಪ್ಪಿದ್ದಾರೆ. ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆಂದು ಮೇಲ್ನೋಟಕ್ಕೆ ತಿಳಿದುಬಂದಿದೆ. ಮೃತರು ಹಲವು ವರ್ಷಗಳಿಂದ ನಿಟ್ಟೆ ಸಂಸ್ಥೆಯಲ್ಲಿ ಉದ್ಯೋಗಿಯಾಗಿದ್ದರು. ಪತ್ನಿ ಹಾಗೂ ಮಕ್ಕಳನ್ನು ಅಗಲಿದ್ದಾರೆ. ನಿಟ್ಟೆ ಸಂಸ್ಥೆ ಹಲವು ವರ್ಷಗಳಿಂದ ಸರಕಾರಿ ಶಾಲೆ, ಆಶ್ರಮಗಳಿಂದ ಕಲಿಯುವ ವಿದ್ಯಾರ್ಥಿಗಳನ್ನು ಶಾಲೆಗೆ ಕರೆತರುವ ಪ್ರಯತ್ನವನ್ನು ಹಲವು ವರ್ಷಗಳಿಂದ ಮಾಡುತ್ತಾ ಬಂದಿದ್ದಾರೆ. ಇದೇ ಟ್ರಿಪ್ ನಲ್ಲಿ ಸಂತೋಷ್ ಕರ್ತವ್ಯ ನಿರ್ವಹಿಸುತ್ತಿದ್ದರು.
Author: UllalaVani
ಉಳ್ಳಾಲ: ಮರಗಳನ್ನು ನೆಡುವುದು ಪರಿಸರ ಮತ್ತು ಸಮಾಜಕ್ಕೆ ಬಹಳ ಮುಖ್ಯವಾದ ಕೆಲಸ. ಮರಗಳು ಗಾಳಿಯನ್ನು ಶುದ್ಧೀಕರಿಸುತ್ತವೆ. ಹವಾಮಾನವನ್ನು ನಿಯಂತ್ರಿಸುತ್ತವೆ. ಮಣ್ಣಿನ ಸವೆತವನ್ನು ತಡೆಯುತ್ತವೆ ಮತ್ತು ಪ್ರಾಣಿಗಳಿಗೆ ಅವಾಸಸ್ಥಾನವನ್ನು ಒದಗಿಸುತ್ತವೆ. ಹೆಚ್ಚು ಮರಗಳನ್ನು ನೆಡುವುದರಿಂದ, ಪರಿಸರವನ್ನು ರಕ್ಷಿಸಬಹುದು ಮತ್ತು ಉತ್ತಮ ಭವಿಷ್ಯವನ್ನು ರೂಪಿಸಬಹುದು ಎಂದು ಮಾಜಿ ಶಾಸಕ ಕೆ ಜಯರಾಮ ಶೆಟ್ಟಿ ಹೇಳಿದರು. ಇತ್ತೀಚೆಗೆ ಉಳ್ಳಾಲ ವೀರರಾಣಿ ಅಬ್ಬಕ್ಕ ಉತ್ಸವ ಸಮಿತಿ ವತಿಯಿಂದ ದೇರಳಕಟ್ಟೆಯಲ್ಲಿ ನಡೆದ ವನಮಹೋತ್ಸವ ಕಾರ್ಯಕ್ರಮವನ್ನು ಉದ್ಧಾಟಿಸಿ ಮಾತನಾಡಿದರು. ಲಯನ್ಸ್ ಅಂತರಾಷ್ಟ್ರೀಯ 317(ಡಿ) ಸಂಸ್ಥೆಯ ಜಿಲ್ಲಾ ಸಂಯೋಜಕರಾದ ಮಾಧವ ಉಳ್ಳಾಲ್ ಮಾತನಾಡಿ ಈ ವರ್ಷದಲ್ಲಿ ಸುಮಾರು 20 ಸಾವಿರ ಮರಗಳನ್ನು ನೆಡುವ ಕಾರ್ಯಕ್ರಮಗಳನ್ನು ಲಯನ್ಸ್ ಕ್ಲಬ್ ನಾಲ್ಕು ಜಿಲ್ಲೆಗಳಲ್ಲಿ ಹಮ್ಮಿಕೊಂಡಿದೆ ಎಂದರು. ಈ ಸಂದರ್ಭದಲ್ಲಿ ಮೂಡಾ ಅಧ್ಯಕ್ಷ ಸದಾಶಿವ ಉಳ್ಳಾಲ್, ಅಬ್ಬಕ್ಕ ಉತ್ಸವ ಸಮಿತಿಯ ಅಧ್ಯಕ್ಷ ದಿನಕರ ಉಳ್ಳಾಲ್, ಡಾ.ಜಿ.ಆರ್ ಶೆಟ್ಟಿ, ಡಾ.ಸಾಯಿಗೀತಾ ಹೆಗ್ಡೆ, ಗೀತಾ ಆರ್ ಶೆಟ್ಟಿ, ಶ್ಯಾಮಲ ಶೆಟ್ಟಿ, ಅಬ್ಬಕ್ಕ ಉತ್ಸವ ಸಮಿತಿಯ ಗೌರವ…
ಸಮಾಜದಲ್ಲಿರುವ ಅತ್ಯಂತ ಬಡವರಿಂದ ಸಿರಿವಂತರವರೆಗೆ ಹುಟ್ಟಿನಿಂದ ಸಾವಿನವರೆಗೂ ದರ್ಜಿಗಳ ಅವಶ್ಯಕತೆ ಇದೆ, ಜಾತಿ, ಧರ್ಮದ ಹಂಗಿಲ್ಲದ ಇದೊಂದು ಪವಿತ್ರ ಉದ್ಯೋಗ ಎಂದು ಮೈಸೂರು ಇಲೆಕ್ಟ್ರಿಕಲ್ ಇಂಡಸ್ಟ್ರೀಸ್ ಲಿಮಿಟೆಡ್ ಇದರ ಮಾಜಿ ಅಧ್ಯಕ್ಷ ಸಂತೋಷ್ ಕುಮಾರ್ ರೈ ಬೋಳಿಯಾರ್ ಅಭಿಪ್ರಾಯಪಟ್ಟರು. ಅವರು ಕರ್ನಾಟಕ ರಾಜ್ಯ ಟೈಲರ್ಸ್ ಅಸೋಸಿಯೇಷನ್ ಉಳ್ಳಾಲ ಕ್ಷೇತ್ರ ಸಮಿತಿಯ 26ನೇ ವರ್ಷಾಚರಣೆ ಪ್ರಯುಕ್ತ ಭಾನುವಾರ ಪಜೀರ್ ಗೋವನಿತಾಶ್ರಯದಲ್ಲಿ ನಡೆದ ಗೋಶಾಲೆಯ ಗೋವುಗಳಿಗೆ ಗೋಗ್ರಾಸ, ಅಸಹಾಯಕ ವೃತ್ತಿ ಬಾಂಧವರಿಗೆ ಸಹಾಯಹಸ್ತ ಮತ್ತು ಹಿರಿಯ ವೃತ್ತಿ ಬಾಂಧವರಿಗೆ ಗೌರವ ಸನ್ಮಾನ ಕಾರ್ಯಕ್ರಮ ಹಾಗೂ ವಾರ್ಷಿಕ ಮಹಾಸಭೆಯಲ್ಲಿ ಭಾಗವಹಿಸಿ ಮಾತನಾಡಿದರು. ಕೆಎಸ್ ಟಿಎ ಜಿಲ್ಲಾಧ್ಯಕ್ಷೆ ವಿದ್ಯಾ ಶೆಟ್ಟಿ ಮಾತನಾಡಿ, ಟೈಲರ್ಸ್ ಅಸೋಸಿಯೇಷನ್ ನಿಂದಾಗಿ ಹೆಣ್ಮಕ್ಕಳು ಮನೆಯಿಂದ ಹೊರಗೆ ಬರುವಂತಾಗಿದೆ. ಪರಸ್ಪರ ಪ್ರೀತಿಯ ವಾತಾವರಣ ಲಭಿಸುವಂತೆ ಮಾಡುವ ಸಂಘಟನೆಯನ್ನು ಪ್ರತಿಯೊಬ್ಬ ದರ್ಜಿಯೂ ಪ್ರೀತಿಸಬೇಕು ಎಂದು ತಿಳಿಸಿದರು. ಈ ಸಂದರ್ಭ ಪೊಲದವರ ಯಾನೆ ಗಟ್ಟಿಯವರ ಸಮಾಜ ಸೇವಾ ಸಂಘದ ಅಧ್ಯಕ್ಷ ಜನಾರ್ದನ ಗಟ್ಟಿ ಕನ್ನಿಮನೆ, ಹಿರಿಯ ದರ್ಜಿಗಳಾದ…
ಉಳ್ಳಾಲ : ಸ್ಕಿಡ್ ಆಗಿ ನಿಯಂತ್ರಣ ತಪ್ಪಿದ ಸ್ಕೂಟರೊಂದು ರಸ್ತೆ ಬದಿಯ ಮನೆಯ ಆವರಣ ಗೋಡೆಗೆ ಢಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡ ಸವಾರ ದಾರುಣವಾಗಿ ಮೃತಪಟ್ಟ ಘಟನೆ ಮಂಗಳವಾರ ರಾತ್ರಿ ಸೋಮೇಶ್ವರ ಪುರಸಭಾ ವ್ಯಾಪ್ತಿಯ ಅಂಬಿಕಾ ರಸ್ತೆ ಎಂಬಲ್ಲಿ ನಡೆದಿದೆ.ಸೋಮೇಶ್ವರ ಪುರಸಭಾ ವ್ಯಾಪ್ತಿಯ ಪಿಲಾರು ಮಹಾಲಕ್ಷ್ಮೀ ಮಂದಿರ ಬಳಿಯ ನಿವಾಸಿ ರಾಘವೇಂದ್ರ ಸಾಲ್ಯಾನ್ (44)ಯಾನೆ ರಘು ಮೃತ ದುರ್ದೈವಿ. ಖಾಸಗಿ ಕಂಪನಿಯೊಂದರಲ್ಲಿ ಇಲೆಕ್ಟ್ರಿಕಲ್ ಗುತ್ತಿಗೆದಾರರಾಗಿದ್ದ ರಾಘವೇಂದ್ರ ಅವರು ಮಂಗಳವಾರ ರಾತ್ರಿ ಕೆಲಸ ಮುಗಿಸಿ ಮನೆಗೆ ಹಿಂದಿರುಗುತ್ತಿದ್ದ ವೇಳೆ ಅಂಬಿಕಾ ರಸ್ತೆಯ ನಿರ್ಮಲಾ ಟ್ರಾವೆಲ್ಸ್ ಗ್ಯಾರೇಜ್ ಬಳಿ ರಸ್ತೆ ಅಪಘಾತ ನಡೆದಿದೆ. ಅಂಬುಲೆನ್ಸ್ ತುರ್ತು ವಾಹನವು ಸ್ಥಳಕ್ಕೆ ಬರಲು ತಡವಾದ ಕಾರಣ ಸ್ಥಳೀಯ ಯುವಕರು ಆಟೋ ರಿಕ್ಷಾದಲ್ಲಿ ಗಾಯಾಳು ರಾಘವೇಂದ್ರ ಅವರನ್ನು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದರೂ ದಾರಿ ಮಧ್ಯದಲ್ಲೇ ಮೃತಪಟ್ಟಿದ್ದಾರೆ.ಮಂಗಳೂರು ದಕ್ಷಿಣ ಸಂಚಾರಿ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿದ್ದಾರೆ.ಮೃತ ರಾಘವೇಂದ್ರ ಅವರು ತಾಯಿ,…
ಬಂಟ್ವಾಳ : ಮನೆ, ದೇವಸ್ಥಾನ, ಅಂಗಡಿ ಹೀಗೆ ಬೇರೆ ಬೇರೆ ವಾಣಿಜ್ಯ ಕೇಂದ್ರಗಳಿಂದ ಕಳ್ಳತನ ನಡೆಯುವುದು ಕೇಳಿದ್ದೇವೆ. ಆದರೆ ಇದೀಗ ರುದ್ರಭೂಮಿಯನ್ನು ಬಿಡದ ಕಳ್ಳರು ಲಕ್ಷಾಂತರ ರೂ. ಮೌಲ್ಯದ ಸೊತ್ತುಗಳನ್ನು ಕಳವು ಮಾಡಿದ ಬಗ್ಗೆ ಅಮ್ಟಾಡಿ ಗ್ರಾ.ಪಂ.ಅಧ್ಯಕ್ಷ ವಿಜಯ್ ಅವರು ತಿಳಿಸಿದ್ದಾರೆ. ಅಮ್ಟಾಡಿ ಗ್ರಾಮದ ದೇವಿನಗರ ಎಂಬಲ್ಲಿರುವ ಸಾರ್ವಜನಿಕ ಹಿಂದೂ ರುದ್ರಭೂಮಿಯಲ್ಲಿ ಹೆಣ ಸುಡುವ ಸಿಲಿಕಾನ್ ಚೇಂಬರ್, ಹಿತ್ತಾಳೆಯ ನೀರಿನನಲ್ಲಿ, ಕಬ್ಬಿಣದ ಏಣಿ, ಕಬ್ಬಿಣದ ಗೇಟ್ ಹಾಗೂ ಇನ್ನಿತರ ಸುಮಾರು 4 ಲಕ್ಷ ಮೌಲ್ಯದ ಸೊತ್ತುಗಳನ್ನು ಕಳವು ಮಾಡಿದ್ದಾರೆ ಎಂದು ತಿಳಿಸಿದ್ದಾರೆ. ಅಗಸ್ಟ್ 11 ರಂದು ಸ್ಥಳೀಯ ನಿವಾಸಿ ಐತ್ತಪ್ಪ ಪೂಜಾರಿ ಎಂಬವರ ಮೃತದೇಹದ ದಹನ ಮಾಡಲು ರುದ್ರಭೂಮಿಗೆ ತೆರಳಿದಾಗ ಕಳವು ಮಾಡಿದ ಬಗ್ಗೆ ಬೆಳಕಿಗೆ ಬಂದಿದೆ. ಕಳ್ಳತನ ಪ್ರಕರಣದ ಕುರಿತು ಅಮ್ಟಾಡಿ ಗ್ರಾಮ ಪಂಚಾಯತ್ ನ ವತಿಯಿಂದ ಇಂದು ಬಂಟ್ವಾಳ ನಗರ ಪೋಲೀಸ್ ಠಾಣೆಗೆ ದೂರು ನೀಡುತ್ತೇವೆ ಎಂದು ವಿಜಯ್ ಅವರು ತಿಳಿಸಿದ್ದಾರೆ. ಅಮ್ಟಾಡಿ ಗ್ರಾಮದಲ್ಲಿ ಕೆಲವು ದಿನಗಳಿಂದ ಕಳ್ಳರ…
ಮಂಗಳೂರು : ಮಂಗಳೂರಿನ ವಾಮಂಜೂರಿನಲ್ಲಿರುವ ಮಾನಸ ವಾಟರ್ ಪಾರ್ಕ್ ನಲ್ಲಿ 79ನೇ ಸ್ವಾತಂತ್ರ‍್ಯ ದಿನಾಚರಣೆಯ ಪ್ರಯುಕ್ತ ಆ.15ರಿಂದ 17ರವರೆಗೆ ಫ್ರೀಡಂ ಫೆಸ್ಟ್-2025 ಅನ್ನು ಆಯೋಜಿಸಲಾಗಿದೆ. ಪ್ರವಾಸಿಗರಿಗೆ ಹಲವು ವಿಶೇಷ ಕೊಡುಗೆಗಳನ್ನು ನೀಡುವ ಮೂಲಕ ಮಾನಸ ವಾಟರ್ ಪಾರ್ಕ್ ಪ್ರವಾಸಿಗರನ್ನು ತನ್ನತ್ತ ಆಕಷಿಸುತ್ತಿದ್ದು, ಇದೀಗ ಫ್ರೀಡಂ ಫೆಸ್ಟ್-2025 ಅನ್ನು ಆಯೋಜಿಸಿ ವಿಶೇಷ ಆಫರ್‌ಗಳನ್ನು ನೀಡುತ್ತಿದೆ. ಫ್ರೀಡಂ ಫೆಸ್ಟ್-2025ರಲ್ಲಿ ಪಾರ್ಕ್ ಎಂಟ್ರಿ ಕೇವಲ 299 ರೂ. ಗಳ ಇದ್ದು, ಈ ಆಫರ್ ಆ.15, 16, 17ರಂದು ಮಾನಸ ವಾಟರ್ ಪಾರ್ಕ್ ನಲ್ಲಿ ಸಿಗಲಿದೆ. ಈಗಾಗಲೇ ಮಾನಸ ವಾಟರ್ ಪಾರ್ಕ್ ನಲ್ಲಿ ವಿವಿಧ ಪ್ರಕಾರಗಳ ನೀರಾಟಗಳ ಮೂಲಕ ಜನರನ್ನು ಮನರಂಜಿಸುವಲ್ಲಿ ಯಶಸ್ವಿಯಾಗಿದೆ. ವಾಟರ್ ರೈಡ್, ಮ್ಯೂಸಿಕಲ್ ಫೌಂಟೇನ್, ರೈನ್ ಡ್ಯಾನ್ಸ್, ವೇವ್ ಪೂಲ್, ಸ್ಲೈಡ್ಸ್, ಸ್ಕೈ ಸೈಕ್ಲಿಂಗ್ ಸೇರಿದಂತೆ ವಿವಿಧ ಪ್ರಕಾರಗಳ ನೀರಾಟಗಳು ಪ್ರವಾಸಿಗರ ಮನಸೂರೆಗೊಂಡಿದೆ.ಈ ಬಾರಿಯ 79ನೇ ಸ್ವಾತಂತ್ರ‍್ಯ ದಿನಾಚರಣೆಯ ಪ್ರಯುಕ್ತ ಆ.15ರಿಂದ 17ರವರೆಗೆ ಫ್ರೀಡಂ ಫೆಸ್ಟ್-2025 ಅನ್ನು ಆಯೋಜಿಸಿ ಜನರನ್ನು ಮನರಂಜಿಸಲಿದೆ. ಹೆಚ್ಚಿನ ಮಾಹಿತಿಗಾಗಿ…
ಕಾಸರಗೋಡು : ಗಡಿನಾಡಿನ ಪತ್ರಕರ್ತ, ಲೇಖಕ ರವಿ ನಾಯ್ಕಾಪು ಅವರಿಗೆ ‘ಗಡಿನಾಡ ಸಾಹಿತ್ಯ ಭೂಷಣ ಪ್ರಶಸ್ತಿ ಪ್ರದಾನ ಮಾಡಲಾಯಿತು.ಬೆಂಗಳೂರಿನ ತಾಯಿಬೇರು ಸಾಮಾಜಿಕ ಮತ್ತು ಸಾಂಸ್ಕೃತಿಕ ಯುವ ವೇದಿಕೆ ನೀಡುವ ಪ್ರತಿಷ್ಠಿತ ಪ್ರಶಸ್ತಿಯನ್ನು ಇತ್ತೀಚಿಗೆ ಬೆಂಗಳೂರಿನ ರಾಜರಾಜೇಶ್ವರಿ ನಗರದ ಕೆ.ಕೆ. ಸಭಾಂಗಣದಲ್ಲಿ ಕರ್ನಾಟಕ ಸರಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಜರುಗಿದ ದೇಸಿ ಸಂಸ್ಕೃತಿ ಸೌರಭ ಸಮಾರಂಭದಲ್ಲಿ ಪ್ರದಾನ ಮಾಡಲಾಯಿತು.ಕರ್ನಾಟಕ ಸರಕಾರದ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿ ಅಧ್ಯಕ್ಷ ಡಾ. ಗೋವಿಂದ ಸ್ವಾಮಿ ಪ್ರಶಸ್ತಿ ಪ್ರದಾನ ಮಾಡಿದರು. ಕೆ.ಕೆ. ಸಮೂಹ ಶಿಕ್ಷಣ ಸಂಸ್ಥೆ ಸಂಸ್ಥಾಪಕ ಕೆ. ಕುಂಬಣ್ಣ ಅಧ್ಯಕ್ಷತೆ ವಹಿಸಿದ್ದರು. ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಸಾಹಿತಿ, ಪ್ರಾಧ್ಯಾಪಕ ಡಾ. ಎಚ್. ಲಕ್ಷ್ಮೀನಾರಾಯಣ ಸ್ವಾಮಿ, ನಿರೂಪಕಿ ಸೌಮ್ಯಾ ಗೌಡ, ವಿದುಷಿ ಪದ್ಮಜಾ ಜಯರಾಮ್ ಮುಖ್ಯ ಅತಿಥಿಗಳಾಗಿದ್ದರು. ತಾಯಿಬೇರು ಸಾಮಾಜಿಕ ಮತ್ತು ಸಾಂಸ್ಕೃತಿಕ ಯುವ ವೇದಿಕೆ ಕಾವ್ಯದರ್ಶಿ ಡಾ. ಕೆ.ಎನ್. ನಾಗೇಶ್ ಪ್ರಶಸ್ತಿ ವಿಜೇತರ ಪರಿಚಯಮಾಡಿದರು. ಸಂಘಟನೆ ಅಧ್ಯಕ್ಷ ಎ.…
ಮೂಡಿಗೆರೆ : ಚಿಕ್ಕಮಗಳೂರು ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಗಡಿ ಭಾಗವಾದ ಚಾರ್ಮಾಡಿ ಘಾಟಿಯಲ್ಲಿ ಯುವಕನೋರ್ವ ಪ್ರಪಾತಕ್ಕೆ ಬಿದ್ದು ಗಂಭೀರವಾಗಿ ಗಾಯಗೊಂಡಿರುವ ಘಟನೆ ಸೋಮವಾರ ವರದಿಯಾಗಿದೆ. ಚಕ್‌ಮಕ್ಕಿ ಗ್ರಾಮದ ನಿವಾಸಿ ಮುಝಮ್ಮಿಲ್ (21) ಗಾಯಗೊಂಡ ಯುವಕ ಎಂದು ಗುರುತಿಸಲಾಗಿದೆ. ಮೂತ್ರವಿಸರ್ಜನೆಗಾಗಿ ಪ್ರಪಾತದ ಅಂಚಿನತ್ತ ಹೋದಾಗ ಯುವಕ ಕಾಲು ಜಾರಿ ಸುಮಾರು 30 ಅಡಿ ಆಳಕ್ಕೆ ಬಿದ್ದಿದ್ದು, ತಕ್ಷಣ ಹೈವೇ ಪಟ್ರೊಲ್ ಸಹಾಯಕ್ಕೆ ಧಾವಿಸಿ ಆತನನ್ನು ಎತ್ತಿ ಪ್ರಾಥಮಿಕ ಚಿಕಿತ್ಸೆ ನೀಡಿ ಬಳಿಕ ಮಂಗಳೂರು ಆಸ್ಪತ್ರೆಗೆ ರವಾನಿಸಿದ್ದಾರೆ ಎಂದು ತಿಳಿದು ಬಂದಿದೆ. ಈ ಸಂಬಂಧ ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಳ್ಳಾಲ: ಹದಗೆಟ್ಟ ತೊಕ್ಕೊಟ್ಟು ಕುತ್ತಾರ್ ರಸ್ತೆಯ ದುರಸ್ತಿಗಾಗಿ ಆಗ್ರಹಿಸಿ ಡಿವೈಎಫ್ಐ ಉಳ್ಳಾಲ ತಾಲೂಕು ಸಮಿತಿ ನೇತೃತ್ವದಲ್ಲಿ ಬಬ್ಬುಕಟ್ಟೆ ಬಳಿ ಸೋಮವಾರ ಸಂಜೆ ಪ್ರತಿಭಟನೆ ನಡೆಯಿತು. ಪ್ರತಿಭಟನೆಯನ್ನು ಉದ್ದೇಶಿಸಿ ಡಿವೈಎಫ್ಐ ಜಿಲ್ಲಾಧ್ಯಕ್ಷ ಬಿಕೆ ಇಮ್ತಿಯಾಝ್ ಮಾತನಾಡಿ, ವರ್ಷದ ಹಿಂದೆ ಹಾಕಲಾಗಿದ್ದ ಡಾಂಬರು ಒಂದೇ ಮಳೆಗೆ ಹಾಳಾಗಿದೆ. ಗುತ್ತಿಗೆದಾರರು ಭ್ರಷ್ಟಾಚಾರ ಮಾಡಿ ರಸ್ತೆಯ ಕೆಲಸವನ್ನು ಹಾಳು ಮಾಡಿದ್ದಾರೆ. ಈ ರಸ್ತೆಯಲ್ಲಿ ಸಂಚರಿಸುವಾಗ ವಾಹನ ಸವಾರರು ತಮ್ಮ ಜೀವವನ್ನು ಕೈಯಲ್ಲಿ ಹಿಡಿದು ಕೊಂಡು ಹೋಗುವ ಪರಿಸ್ಥಿತಿ ನಿರ್ಮಾಣ ಆಗಿದೆ. ಈ ಹದಗೆಟ್ಟ ರಸ್ತೆಯನ್ನು ಶೀಘ್ರ ಸರಿಪಡಿಸದೇ ಇದ್ದಲ್ಲಿ ಮುಂದಿನ ದಿನಗಳಲ್ಲಿ ಸರಣಿ ಹೋರಾಟಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು. ಡಿವೈಎಫ್ಐ ಉಳ್ಳಾಲ ತಾಲೂಕು ಅಧ್ಯಕ್ಷ ಅಡ್ವೊಕೇಟ್ ನಿತಿನ್ ಕುತ್ತಾರ್ ಮಾತನಾಡಿದರು. ಪ್ರತಿಭಟನೆಯಲ್ಲಿ ಡಿವೈಎಫ್ಐ ಉಳ್ಳಾಲ ತಾಲೂಕು ಕೋಶಾಧಿಕಾರಿ ಅಶ್ಫಾಕ್ ಅಳೇಕಲ, ಉಪಾಧ್ಯಕ್ಷ ಅಶ್ರಫ್ ಹರೇಕಳ ರಝಾಕ್ ಮುಡಿಪು, ರಾಣಿ ಅಬ್ಬಕ್ಕ ಬಸ್ ನೌಕರರ ಸಂಘದ ಅಧ್ಯಕ್ಷ ಅಲ್ತಾಫ್ ಮುಡಿಪು, ಕಾರ್ಯದರ್ಶಿ ಜಗದೀಶ್, ಕಾರ್ಮಿಕ ಮುಖಂಡರಾದ ಜನಾರ್ಧನ…
ಮಂಗಳೂರು : ದೇಶದಲ್ಲಿ 70 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಉಚಿತ ಚಿಕಿತ್ಸೆ ನೀಡುವ ಕೇಂದ್ರ ಸರಕಾರದ ಮಹತ್ವಕಾಂಕ್ಷಿ ಆಯುಷ್ಮಾನ್ ಯೋಜನೆಗೆ ಕರ್ನಾಟಕ ಸರಕಾರವು ತನ್ನ ಪಾಲು ನೀಡದ ಕಾರಣ ದಿಂದಾಗಿ ರಾಜ್ಯದಲ್ಲಿ ಈ ಯೋಜನೆ ಅನುಷ್ಠಾನ ಪ್ರಕ್ರಿಯೆ ಸ್ಥಗಿತಗೊಂಡಿದ್ದು, ಅಗತ್ಯ ಕ್ರಮ ಕೈಗೊಳ್ಳಬೇಕೆಂದು ದಕ್ಷಿಣ ಕನ್ನಡ ಸಂಸದ ಬ್ರಿಜೇಶ್ ಚೌಟ ಸೋಮವಾರ ಲೋಕಸಭೆಯಲ್ಲಿ ಸರಕಾರದ ಗಮನ ಸೆಳೆದು ಆಗ್ರಹಿಸಿದ್ದಾರೆ. ಈ ಬಗ್ಗೆ ನಿಯಮ 377ರ ಅಡಿಯಲ್ಲಿ ಲೋಕಸಭೆಯಲ್ಲಿ ಈ ಗಂಭೀರ ವಿಷಯವನ್ನು ಎತ್ತಿರುವ ಸಂಸದರು, ದೇಶಾದ್ಯಂತ 70 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಉಚಿತ ಆರೋಗ್ಯ ಸೇವೆ ಒದಗಿಸಲು ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಕಳೆದ ವರ್ಷ ‘ಆಯುಷ್ಮಾನ್ ಭಾರತ್ ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆ’ ಜಾರಿಗೆ ತಂದಿದೆ. ಆದರೆ ಕರ್ನಾಟಕದಲ್ಲಿರುವ ಹಿರಿಯ ನಾಗರಿಕರಿಗೆ ಈ ಯೋಜನೆಯ ಫಲಾನುಭವ ಪಡೆಯುವುದಕ್ಕೆ ಸಾಧ್ಯವಾಗುತ್ತಿಲ್ಲ. ಈ ಯೋಜನೆಗೆ ರಾಜ್ಯ ಸರಕಾರದ ತನ್ನ ಪಾಲಿನ ಶೇ.40 ರಷ್ಟು ಪಾಲನ್ನು ನೀಡಲು ನಿರಾಕರಿಸಿದೆ.…

