ಮಂಗಳೂರು: ಕರಾವಳಿ ನಗರ ಮಂಗಳೂರಿಗೆ ಮತ್ತೊಂದು ಗೌರವ ಸಿಕ್ಕಿದೆ. ವಿಶ್ವದ ಅತ್ಯಂತ ಸುರಕ್ಷಿತ ನಗರಗಳ ಪಟ್ಟಿಯಲ್ಲಿ ಮಂಗಳೂರು 49ನೇ ಸ್ಥಾನ ಪಡೆದು, ಭಾರತದಲ್ಲಿ ಮೊದಲ ಸ್ಥಾನದಲ್ಲಿದೆ. ಈ ಮಾನ್ಯತೆ ‘ನಂಬಿಯೋ’ (Numbeo) ಎಂಬ ಸ್ವತಂತ್ರ ಜಾಗತಿಕ ಡೇಟಾಬೇಸ್ ಸಂಸ್ಥೆಯು 2025ರ ಮಧ್ಯವರ್ಷದ ಮಾಹಿತಿಯನ್ನು ಆಧರಿಸಿ ನೀಡಿದೆ. ವಿಶ್ವದಾದ್ಯಾಂತ 393 ನಗರಗಳನ್ನು ಒಳಗೊಂಡ ಈ ಪಟ್ಟಿಯಲ್ಲಿ ಭಾರತದಿಂದ 23 ನಗರಗಳು ಸೇರಿಕೊಂಡಿವೆ. ಇವುಗಳ ಪೈಕಿ ಮಂಗಳೂರು 74.2 ಅಂಕಗಳ ಸುರಕ್ಷತಾ ಸೂಚ್ಯಂಕದೊಂದಿಗೆ ಅಗ್ರಸ್ಥಾನದಲ್ಲಿದೆ. ನಂತರದ ಸ್ಥಾನಗಳಲ್ಲಿ ವಡೋದರಾ (85ನೇ) ಮತ್ತು ಅಹ್ಮದಾಬಾದ್ (93ನೇ) ಸ್ಥಾನದಲ್ಲಿವೆ. ಮಂಗಳೂರಿನ ಈ ಸಾಧನೆ ನಗರ ನಿವಾಸಿಗಳ ಜೊತೆಗೆ ದೇಶದ ಜನತೆಗೂ ಹೆಮ್ಮೆ ತಂದಿದೆ.
Author: UllalaVani
ವಾಹನ ಸವಾರರು, ಸಾರ್ವಜನಿಕರ ಸಹಕಾರ ಕೋರಿದ ಹೆದ್ದಾರಿ ಪ್ರಾಧಿಕಾರ ಮಂಗಳೂರು: ರಾ.ಹೆ 66 ರಲ್ಲಿ ಸುರತ್ಕಲ್ – ನಂತೂರು ನಡುವಿನ ಹೆದ್ದಾರಿ ದುರಸ್ತಿ ಕಾಮಗಾರಿ ಇಂದಿನಿಂದ(ಆ.7)ಆಗಸ್ಟ್ 13ರವರೆಗೆ ಕೈಗೆತ್ತಿಕೊಳ್ಳುವುದರಿಂದ ವಾಹನ ಸವಾರರು ಹಾಗೂ ಸಾರ್ವಜನಿಕರು ಸಹಕರಿಸಬೇಕು ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಪ್ರಕಟಣೆಯಲ್ಲಿ ತಿಳಿಸಿದೆ. ಹೆದ್ದಾರಿ ರಿಪೇರಿ ಸಂಬಂಧ ಗುಂಡಿಗಳನ್ನು ಮುಚ್ಚುವುದು, ತೇಪೆ ಕಾರ್ಯ ಚರಂಡಿ ಸ್ವಚ್ಛಗೊಳಿಸುವುದು ಮುಂತಾದ ಕೆಲಸ ನಡೆಯಲಿದೆ. ಈ ರಿಪೇರಿ ಕೆಲಸವು ವಾಹನಗಳ ದಟ್ಟಣೆ ಇಲ್ಲದ ಸಮಯ( ಪೀಕ್ ಅವರ್ಸ್ ಹೊರತುಪಡಿಸಿ) ಪ್ರತಿದಿನ ಬೆಳಗ್ಗೆ 11ರಿಂದ ಮಧ್ಯಾಹ್ನ 3:00 ರವರೆಗೆ ಹಾಗೂ ರಾತ್ರಿ ವೇಳೆ ನಡೆಸಲಾಗುತ್ತದೆ. ಈ ಅವಧಿಯಲ್ಲಿ ಸಂಚಾರ ದಟ್ಟಣೆ ಸಮಸ್ಯೆ ಮತ್ತು ತಾತ್ಕಾಲಿಕ ಮಾರ್ಗ ಬದಲಿಸುವ ಸಾಧ್ಯತೆ ಇದೆ. ಸಂಚಾರ ಸುಗಮ ನಿರ್ವಹಣೆಗೆ ಸಹಾಯವಾಗುವಂತೆ ಸ್ಥಳದಲ್ಲಿ ಸಂಚಾರ ಸಿಬ್ಬಂದಿಯನ್ನು ನಿಯೋಜಿಸಲಾಗುವುದು. ಈ ವೇಳೆ ವಾಹನಗಳ ಸುಗಮ ಸಂಚಾರಕ್ಕೆ ಅಡ್ಡಿ ಎದುರಾಗುವ ಸಾಧ್ಯತೆ ಇದ್ದು ವಾಹನ ಸವಾರರು ಹಾಗೂ ಸಾರ್ವಜನಿಕರು ಸಹಕರಿಸಬೇಕು.ಅಲ್ಲದೇ ಕಾಮಗಾರಿ ಸ್ಥಳದಲ್ಲಿ ಸುರಕ್ಷತಾ…
ದೇರಳಕಟ್ಟೆ: ಬಾಯಿ ಆರೋಗ್ಯ ಪ್ರಚಾರ ಮತ್ತು ಸೇವೆಗಳಿಗೆ ನೀಡಿದ ಅತ್ಯುತ್ತಮ ಕೊಡುಗೆಗಾಗಿ ಭಾರತ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಎಬಿ ಶೆಟ್ಟಿ ಸ್ಮಾರಕ ದಂತ ವಿಜ್ಞಾನ ಸಂಸ್ಥೆಗೆ ವಿಶೇಷ ಮನ್ನಣೆ ಪ್ರಶಸ್ತಿ ನೀಡಿದೆ. ಈ ಪ್ರಶಸ್ತಿಯನ್ನು ಎಬಿ ಶೆಟ್ಟಿ ಸ್ಮಾರಕ ದಂತ ವಿಜ್ಞಾನ ಸಂಸ್ಥೆಯ ಪ್ರಾಂಶುಪಾಲ ಪ್ರೊ.ಡಾ. ಮಿತ್ರ ಎನ್. ಹೆಗ್ಡೆ ಅವರು ಬುಧವಾರ ಸ್ವೀಕರಿಸಿದರು. ಭಾರತ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಆರೋಗ್ಯ ಸೇವೆಗಳ ನಿರ್ದೇಶಕಿ ಡಾ. ಸುನೀತಾ ಶರ್ಮಾ ಪ್ರಶಸ್ತಿ ಪ್ರದಾನ ಮಾಡಿದರು. ಹೆಚ್ಚುವರಿ ಉಪ ಮಹಾನಿರ್ದೇಶಕರು ಮತ್ತು ನಿರ್ದೇಶಕಿ (ತುರ್ತು ವೈದ್ಯಕೀಯ ಪರಿಹಾರ) ಡಾ. ಎಲ್. ಸ್ವಸ್ತಿಚರಣ್ ಮತ್ತು ಸಾಮಾನ್ಯ ಆರೋಗ್ಯ ಸೇವೆಗಳ ಹೆಚ್ಚುವರಿ ನಿರ್ದೇಶಕ ಡಾ. ಆರ್. ಪಿ. ಜೋಶಿ ಉಪಸ್ಥಿತರಿದ್ದರು.
ಮಂಗಳೂರು: ಮೂಲತಃ ಪುತ್ತೂರಿನ ಯುವತಿ, ಮಂಗಳೂರಿನ ಪಶುವೈದ್ಯರಾಗಿ ಸೇವೆ ಸಲ್ಲಿಸುತ್ತಿದ್ದ ಯುವತಿ ಮಂಗಳೂರಿನ ತಮ್ಮ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ರಾತ್ರಿ ಸಂಭವಿಸಿದೆ.ಪುತ್ತೂರು ಬಪ್ಪಳಿಗೆ ನಿವಾಸಿ ಚಾಟರ್ಡ್ ಅಕೌಂಟೆಂಟ್ ಗಣೇಶ್ ಜೋಶಿ ಅವರ ಪುತ್ರಿ ಕೀರ್ತನಾ ಜೋಶಿ (27) ಮೃತ ದುರ್ದೈವಿ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಕೀರ್ತನಾ ಜೋಶಿ ಅವರ ಮೃತದೇಹವನ್ನು ಪುತ್ತೂರಿನ ಮನೆಗೆ ತಂದು, ಅಂತ್ಯಸಂಸ್ಕಾರ ನೆರವೇರಿಸಲಾಯಿತು.ಪಶುವೈದ್ಯಕೀಯದಲ್ಲಿ ಎಂ.ಡಿ. ಶಿಕ್ಷಣ ಪೂರೈಸಿರುವ ಡಾ| ಕೀರ್ತನಾ ಜೋಶಿ ಅವರು ಪುತ್ತೂರು, ಕೊಯಿಲ ಹಾಗೂ ಮಂಗಳೂರಿನಲ್ಲಿ ಖಾಸಗಿಯಾಗಿ ಪಶುವೈದ್ಯೆಯಾಗಿ ಕಾರ್ಯನಿರ್ವಹಿಸಿದ್ದರು. ಅವರು ಸೋಮವಾರ ತಡರಾತ್ರಿ ಸ್ವಗೃಹದಲ್ಲಿ ನೇಣಿಗೆ ಕೊರಳೊಡ್ಡಿದ್ದಾರೆ ಎಂದು ತಿಳಿದುಬಂದಿದೆ. ಮೃತರು ತಂದೆ ಗಣೇಶ್ ಜೋಶಿ, ತಾಯಿ ವೀಣಾ ಜೋಶಿ, ಸಹೋದರಿ ಡಾ. ಮೇಘನಾ ಜೋಶಿ ಅವರನ್ನು ಅಗಲಿದ್ದಾರೆ.
ಕೊಣಾಜೆ: ಬೋಳಿಯಾರು ಗ್ರಾಮದ , ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಅಂಗನವಾಡಿಯ ಗೋಡೆ ಬಿರುಕು ಬಿಟ್ಟು ಅಪಾಯಕಾರಿಯಾಗಿದ್ದು ಕೂಡಲೇ ಅವ್ಯವಸ್ಥೆಯನ್ನು ಸರಿಪಡಿಸುವಂತೆ ಡಿವೈಎಫ್‌ಐ ಪದಾಧಿಕಾರಿಗಳು ಬೋಳಿಯಾರ್ ಗ್ರಾಮ ಪಂಚಾಯತ್ ಗೆ ಮನವಿ ಸಲ್ಲಿಸಿತ್ತು ಹಾಗೂ ಕ್ಷೇತ್ರ ಶಿಕ್ಷಣ ಇಲಾಖೆಯೆ ಗಮನಕ್ಕೂ ತಂದಿತ್ತು. ಇದೀಗ ಮಂಗಳೂರು ಕ್ಷೇತ್ರ ಶಿಕ್ಷಣಾಧಿಕಾರಿ ಈಶ್ವರ್ ಅವರು ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಪರಿಶೀಲನೆ ನಡೆಸಿದ ಶಿಕ್ಷಣಾಧಿಕಾರಿ ಈಶ್ವರ್ ಅವರು, ಶಾಲೆಯ ಅವ್ಯವಸ್ಥೆಯನ್ನು ಸರಿಪಡಿಸಲು ಇಂದೇ ವರದಿ ಸಲ್ಲಿಸುವುದಾಗಿ ಭರವಸೆ ನೀಡಿದ್ದಾರೆ. ಈ ಸಂದರ್ಭದಲ್ಲಿ ಬೋಳಿಯಾರ್ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸುಧಾರಾಣಿ ಕೂಡಾ ಉಪಸ್ಥಿತರಿದ್ದು ಶಾಲೆ ಹಾಗೂ ಅಂಗನವಾಡಿಯ ಅವ್ಯವಸ್ಥೆಯನ್ನು ಪರಿಶೀಲಿಸಿದರು. ಕೇವಲ ಹತ್ತು ಹದಿನೈದು ವರ್ಷಗಳ ಹಿಂದೆಯಷ್ಟೆ ನಿರ್ಮಾಣವಾದ ಶಾಲೆ ಮತ್ತು ಅಂಗನವಾಡಿ ಕಟ್ಟಡವು ಬಿರುಕುಬಿಟ್ಟಿದ್ದು, ಭ್ರಷ್ಟಾಚಾರದ ಕಾರಣಕ್ಕಾಗಿ ಆಗಿದೆ. ಈ ಬಗ್ಗೆ ಕೂಡಾ ಇಲಾಖೆ ತನಿಖೆ ನಡೆಸಬೇಕು ಎಂದು ಡಿವೈಎಫ್‌ಐ ಸಂಘಟನೆಯು ಶಿಕ್ಷಣಾಧಿಕಾರಿಗೆ ಆಗ್ರಹಿಸಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳು…
ಮಂಗಳೂರು : ಬಸವಣ್ಣನವರ ತತ್ವಗಳನ್ನು ಆಧರಿಸಿದ ಸಾಮಾಜಿಕ, ಧಾರ್ಮಿಕ ಮತ್ತು ಸಾಂಸ್ಕೃತಿಕ ನೆಲೆಗಟ್ಟಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಬೆಂಗಳೂರಿನ ಪ್ರತಿಷ್ಠಿತ ಬಸವ ಪರಿಷತ್‌ನಿಂದ ನೀಡಲಾಗುವ ಈ ಬಾರಿಯ ಬಸವ ಪುರಸ್ಕಾರ್ -2025 ಪ್ರಶಸ್ತಿಗೆ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿ. ಬೆಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಇದರ ಅಧ್ಯಕ್ಷರಾದ ಸಹಕಾರ ರತ್ನ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಆಯ್ಕೆಯಾಗಿದ್ದಾರೆ. ಡಾ.ಎಂ.ಎನ್.ರಾಜೇಂದ್ರ ಕುಮಾರ್ ಸಹಕಾರ ಹಾಗೂ ಮಹಿಳಾ ಸಬಲೀಕರಣದಲ್ಲಿ ಅಪೂರ್ವ ಸಾಧನೆಯನ್ನು ಗುರುತಿಸಿ ಬಸವ ಪುರಸ್ಕಾರ್ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಮೈಸೂರು ಸುತ್ತೂರು ಕ್ಷೇತ್ರದ ಪರಮ ಪೂಜ್ಯ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳ ದಿವ್ಯ ಸಾನ್ನಿದ್ಯದಲ್ಲಿ ಆಗಸ್ಟ್ 9 ರಂದು ಬೆಂಗಳೂರಿನ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಆವರಣದ ಕೊಂಡಜ್ಜಿ ಬಸವ ಸಭಾಂಗಣದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ಸಹಕಾರ ಕ್ಷೇತ್ರದಲ್ಲಿ ಕಳೆದ ನಾಲ್ಕು ದಶಕಗಳ ಕಾಲ ತನ್ನನ್ನು ತೊಡಗಿಸಿಕೊಂಡಿರುವ ರಾಜೇಂದ್ರ ಕುಮಾರ್ ಅವರು ರಾಜ್ಯದಲ್ಲಿ ಒಬ್ಬ ಸಮರ್ಥ ಸಹಕಾರಿ ನಾಯಕರಾಗಿ…
ಮಂಗಳೂರು: ಅಕ್ರಮವಾಗಿ ಪಿಸ್ತೂಲ್ ಮತ್ತು ಸಜೀವ ಗುಂಡುಗಳನ್ನು ಹೊಂದಿದ್ದ ಆರೋಪದ ಮೇರೆಗೆ ಇಬ್ಬರು ಆರೋಪಿಗಳನ್ನು ಕಂಕನಾಡಿ ನಗರ ಠಾಣೆಯ ಪೊಲೀಸರು ಸೋಮವಾರ ಬಂಧಿಸಿದ್ದಾರೆ.ನಗರದ ಪಂಪ್‌ವೆಲ್‌ನ ತೌಸಿಫ್ ಅಹ್ಮದ್ (38) ಮತ್ತು ಕೆ.ಸಿ.ರೋಡ್‌ನ ಅಬ್ದುಲ್ ಖಾದರ್(41) ಬಂಧಿತ ಆರೋಪಿಗಳಾಗಿದ್ದಾರೆ. ಕಂಕನಾಡಿ ನಗರ ಠಾಣೆಯ ಎಸ್ಸೈ ಶಿವಕುಮಾರ್ ಸಿಬ್ಬಂದಿಯ ಜೊತೆಗೂಡಿ ಸೋಮವಾರ ಅಪರಾಹ್ನ ರೌಂಡ್ಸ್ ಕರ್ತವ್ಯ ನಡೆಸುತ್ತಾ ಜೆಪ್ಪಿನಮೊಗರಿನಿಂದ ಕಲ್ಲಾಪು ಕಡೆಗೆ ಹೋಗುತ್ತಿದ್ದಾಗ ಕಡೆಕಾರ್ ಕ್ರಾಸ್ ಬಳಿ ನಿಂತಿದ್ದ ಇಬ್ಬರು ಪೊಲೀಸ್ ವಾಹನವನ್ನು ಕಂಡು ಓಡಿ ಹೋಗಲೆತ್ನಿಸಿದರು ಎನ್ನಲಾಗಿದೆ. ತಕ್ಷಣ ಇಬ್ಬರನ್ನು ವಶಕ್ಕೆ ಪಡೆದು ವಿಚಾರಿಸಿದಾಗ ಯಾವುದೇ ಪರವಾನಿಗೆ ಇಲ್ಲದೆ ಅಕ್ರಮವಾಗಿ ಪಿಸ್ತೂಲ್ ಹಾಗೂ 6 ಸಜೀವ ಗುಂಡುಗಳನ್ನು ಹೊಂದಿರುವುದು ಕಂಡುಬಂದಿದೆ. ಈ ವೇಳೆಗೆ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.”,
ಉಳ್ಳಾಲ: ಬಹುಗ್ರಾಮ ಕುಡಿಯುವ ನೀರು ಸರಬರಾಜು ಯೋಜನೆ ಗೆ ನಗರ ಸಭೆ 14 ಲಕ್ಷ ನೀಡುವ ವಿಚಾರದಲ್ಲಿ ವ್ಯಾಪಕ ಆಕ್ಷೇಪ ಉಳ್ಳಾಲ ನಗರ ಸಭೆ ಸಾಮಾನ್ಯ ಸಭೆಯಲ್ಲಿ ನಡೆಯಿತು.ನಗರಸಭೆ ಅಧ್ಯಕ್ಷೆ ಶಶಿಕಲಾ ಅವರ ಅಧ್ಯಕ್ಷತೆಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಮಾತನಾಡಿದ ದಿನಕರ್ ಉಳ್ಳಾಲ ಉಳ್ಳಾಲ ತಾಲೂಕಿನ ಪಜೀರ್ ಗ್ರಾಮದಲ್ಲಿ ಬಹು ನೀರಾವರಿ ಕುಡಿಯುವ ನೀರಿನ ಶುದ್ಧೀಕರಣ ಘಟಕ ನಿರ್ಮಾಣ ಆಗಿದೆ. ಅಂದಾಜು 200 ಕೋಟಿ ವೆಚ್ಚದಲ್ಲಿ ಈ ಕಾಮಗಾರಿ ನಡೆಯುತ್ತಿದೆ. ಇದಕ್ಕೆ ನಗರಸಭೆ 14 ಲಕ್ಷ ಯಾಕಾಗಿ ನೀಡಬೇಕು ? ಈ ನೀರು ಉಳ್ಳಾಲಕ್ಕೆ ಬರುತ್ತದೆ ಯೇ , ಈ ಯೋಜನೆ ಗೆ14 ಲಕ್ಷ ನೀಡಬೇಕು ಎಂದು ಸಭೆಯಲ್ಲಿ ನಿರ್ಣಯ ಆಗಿದೆಯೇ ಎಂದು ಪ್ರಶ್ನಿಸಿದರು.ಪೌರಾಯುಕ್ತ ನವೀನ್ ಹೆಗ್ಡೆ ಮಾತನಾಡಿ, ಬಹುಗ್ರಾಮ ಕುಡಿಯುವ ನೀರಿನ ಯೋಜನೆ ತಾಲೂಕಿಗೆ ಸಂಬಂಧ ಪಟ್ಟದ್ದು. ಈ ನೀರು ಉಳ್ಳಾಲಕ್ಕೂ ಬರುತ್ತದೆ. ಇದರ ವೆಚ್ಚ ತಾಲೂಕು ವ್ಯಾಪ್ತಿಯ ಗ್ರಾ.ಪಂ. ಹಾಗೂ ನಗರಸಭೆ ಹಂಚಬೇಕು. ಹಣ ನೀಡುವ ಬಗ್ಗೆ ಸಭೆ…
ಉಳ್ಳಾಲ: ಇಲ್ಲಿನ ಪೊಲೀಸ್ ಕಾನ್ಸ್ಟೇಬಲ್ ಲಕ್ಷ್ಮೀ.ಜಿ.ಆರ್. ಅವರಿಗೆ ಕಾರಿನಲ್ಲಿ ಬಂದ ವ್ಯಕ್ತಿಯೊಬ್ಬ ಜೀವ ಬೆದರಿಕೆ ಹಾಕಿದ ಘಟನೆ ಉಳ್ಳಾಲ ಠಾಣೆ ಬಳಿ ನಡೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಸೋಮೇಶ್ವರ ನಿವಾಸಿ ಸುಕೇಶ್ ಎಂಬಾತನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.ಈತ ಕಾರಿನಲ್ಲಿ ಠಾಣೆಯ ಆವರಣಕ್ಕೆ ಬಂದಿದ್ದ ಈ ವೇಳೆ ಇನ್ಸ್ಪೆಕ್ಟರ್ ಕಾರು ನಿಲ್ಲಿಸುವಂತೆ ಸೂಚನೆ ನೀಡಿದ್ದರು. ಇದರ ಬಳಿಕ ಪೊಲೀಸ್ ಕಾನ್ಸ್ಟೇಬಲ್ ಲಕ್ಷ್ಮೀ.ಜಿ.ಆರ್. ಬಳಿ ತೆರಳಿದ್ದು, ಈ ವೇಳೆ ಆತ ಸಿಬ್ಬಂದಿ ಗೆ ಅವಾಚ್ಯ ಶಬ್ದಗಳಿಂದ ಬೈದು ಏಕವಚನದಲ್ಲಿ ನಿಂದಿಸಿದ್ದಾನೆ ಎಂದು ಆರೋಪಿಸಲಾಗಿದೆ. ಬಳಿಕ ಹಲ್ಲೆಗೆ ಯತ್ನಿಸಿ ಅವರ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾನೆ ಎಂದು ಪ್ರಕರಣದಲ್ಲಿ ದಾಖಲಿಸಲಾಗಿದೆ.
ಬೆಳ್ಮ : ತುಳುನಾಡಿನಲ್ಲಿ ಆಟಿ ತಿಂಗಳಲ್ಲಿ ವಿಪರೀತ ಮಳೆ ಮತ್ತು ಬಿಸಿಲಿನಿಂದ ಮೂರು ನಾಲ್ಕು ದಿವಸ ಮನೆಯಿಂದ ಹೊರಗೆ ಬಾರದೆ ಸರಿಯಾಗಿ ಊಟ ಮಾಡದೆ ಅವಿಭಕ್ತ ಕುಟುಂಬದೊAದಿಗೆ ಇದ್ದ ಸಮಯವನ್ನು ನೆನಪಿಸುವಂತಹ ಕಾರ್ಯಕ್ರಮವನ್ನು ಇವತ್ತು ಉಳ್ಳಾಲದ ವೀರರಾಣಿ ಅಬ್ಬಕ್ಕ ಉತ್ಸವ ಸಮಿತಿಯು ಯಾವುದೇ ವಿಜೃಂಭಣೆ ಇಲ್ಲದೆ ಸೇವಾಶ್ರಮದಲ್ಲಿ ನಡೆಸುತ್ತಿರುವುದು ಶ್ಲಾಘನೀಯ ಎಂದು ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸದಾಶಿವ ಉಳ್ಳಾಲ್ ತಿಳಿಸಿದರು.ಅವರು ಉಳ್ಳಾಲ ವೀರರಾಣಿ ಅಬ್ಬಕ್ಕ ಉತ್ಸವ ಸಮಿತಿ ವತಿಯಿಂದ ದೇರಳಕಟ್ಟೆ ಬೆಳ್ಮ ಸೇವಾಭಾವ ಚಾರಿಟೇಬಲ್ ಟ್ರಸ್ಟ್ (ಸೇವಾಶ್ರಮ) ದಲ್ಲಿ ಆಚರಿಸಲಾದ ತುಳುವೆರೆ ಆಟಿ ಒಂದು ನೆನಪು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.ಸಂಪನ್ಮೂಲ ವ್ಯಕ್ತಿಯಾದ ನಿಟ್ಟೆ ವಿಶ್ವವಿದ್ಯಾನಿಲಯದ ಮಾನವಿಕ ವಿಭಾಗದ ಪ್ರಭಾರ ಮುಖ್ಯಸ್ಥರಾದ ಡಾ.ಸಾಯಿಗೀತಾ ಹೆಗ್ಡೆ ತುಳುವರಿಗೆ ಪ್ರತಿ ತಿಂಗಳು ಕೂಡಾ ವಿಶೇಷ. ಆರೋಗ್ಯವನ್ನು ದೃಷ್ಠಿಯಲ್ಲಿಟ್ಟುಕೊಂಡೇ ತುಳುವರ ಆಹಾರವನ್ನು ರೂಪಿಸಲಾಗಿದೆ. ಉಷ್ಣದ ಸಮಯದಲ್ಲಿ ಮೈಯನ್ನು ತಂಪುಗೊಳಿಸುವ, ಶೀತ ಸಮಯದಲ್ಲಿ ಉಷ್ಣದ ಆಹಾರವನ್ನು ದೇಹಕ್ಕೆ ಉಷ್ಣವಾಗುವ ಆಹಾರವಸ್ತುಗಳೊಂದಿಗೆ ತಂಪುಗೊಳಿಸುವ ಆಹಾರ ಪದಾರ್ಥಗಳನ್ನು ಸೇರಿಸಿ ಉಣ್ಣುವ…

