ವಿಟ್ಲ: ಸಾಲೆತ್ತೂರು ಗ್ರಾಮದ ಕಟ್ಟತ್ತಿಲ ಕೋಡಿ ಹೊಳೆಯಲ್ಲಿ ಡ್ರೆಜ್ಜಿಂಗ್ ಯಂತ್ರ ಬಳಸಿ ಮರಳು ತೆಗೆಯುತ್ತಿದ್ದಲ್ಲಿಗೆ ವಿಟ್ಲ ಪೊಲೀಸ್ ದಾಳಿ ವಿವಿಧ ವಸ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಆಧುನಿಕ ತಂತ್ರಜ್ಞಾನ ಬಳಸಿಕೊಂಡು ಮರಳು ತೆಗೆಯುತ್ತಿದ್ದರೂ, ಸಾಲೆತ್ತೂರು ಗ್ರಾಮ ಪಂಚಾಯತ್ ಮೌನ ವಹಿಸಿತ್ತು. ಈ ಬಗ್ಗೆ ಪೊಲೀಸರಿಗೆ ಸಿಕ್ಕ ಖಚಿತ ಮಾಹಿತಿ ಮೇರೆಗೆ ವಿಟ್ಲ ಉಪನಿರೀಕ್ಷಕ ರತ್ನ ಕುಮಾರ್ ನೇತೃತ್ವದ ಪೊಲೀಸ್ ತಂಡ ದಾಳಿಯನ್ನು ನಡೆಸಿದೆ. ಈ ಸಂದರ್ಭ ನದಿಯ ಬದಿಯಲ್ಲಿ ತೆಗೆದು ಹಾಕಿದ ಮರಳಿನ ರಾಶಿ ಹಾಗೂ ಮರಳು ತೆಗೆಯಲು ಬಳಸಿದ ಯಂತ್ರವನ್ನು ವಶಕ್ಕೆ ಪಡೆದುಕೊಂಡು ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
Author: UllalaVani
ಉಪ್ಪಿನಂಗಡಿ : ಇಲ್ಲಿನ 34ನೇ ನೆಕ್ಕಿಲಾಡಿ ಗ್ರಾಮದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಹಾವೇರಿ ಮೂಲದ ಮಹಿಳೆಯೋರ್ವಳು ನಾಪತ್ತೆಯಾಗಿರುವ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಸಂಕ್ರಿಕೊಪ್ಪ ನಿವಾಸಿ ಭೀಮಪ್ಪ ಎಂಬವರ ಪತ್ನಿ ರೇಷ್ಮಾ ಮಲಲಿ ಭಜಂತ್ರಿ (26) ಎಂಬಾಕೆ ನಾಪತ್ತೆಯಾದ ಮಹಿಳೆಯಾಗಿದ್ದು ಆಕೆ ಪತಿಯೊಂದಿಗೆ 34 ನೇ ನೆಕ್ಕಿಲಾಡಿ ಎಂಬಲ್ಲಿನ ಬಾಡಿಗೆ ಮನೆಯಲ್ಲಿ ವಾಸವಿದ್ದು, ಭೀಮಪ್ಪ ನಾಗರ ಪಂಚಮಿಯ ಹಬ್ಬಕ್ಕಾಗಿ ಜು.26 ರಂದು ಹಾವೇರಿಗೆ ಹೋಗಿ ಜು.30 ರಂದು ಹಿಂತಿರುಗಿ ಬರುವಾಗ ಮನೆಯಲ್ಲಿದ್ದ ಪತ್ನಿ ನಾಪತ್ತೆಯಾಗಿದ್ದಾಳೆಂದು, ಎಲ್ಲೆಡೆ ಹುಡುಕಾಡಿದರೂ ಪತ್ತೆಯಾಗಿಲ್ಲವೆಂದು ಉಪ್ಪಿನಂಗಡಿ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಮಂಗಳೂರು : ಮಂಗಳೂರಿನ ಭರತನಾಟ್ಯ ಕಲಾವಿದೆಯಾದ ರೆಮೋನಾ ಎವೆಟ್ ಪಿರೇರಾ ಅವರು 7 ದಿನಗಳ ಕಾಲ ನಿರಂತರ ಭರತನಾಟ್ಯ ಪ್ರದರ್ಶನ ನೀಡಿ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ದಾಖಲಿಸಿದ ಹಿನ್ನೆಲೆಯಲ್ಲಿ, ರೋಹನ್ ಕಾರ್ಪೋರೇಶನ್ ಸಂಸ್ಥೆ ಅವರ ಸಾಧನೆಯನ್ನು ಗುರುತಿಸಿ ಶುಕ್ರವಾರ ವಿಶೇಷವಾಗಿ ಸನ್ಮಾನಿಸಿದೆ.ಈ ಸನ್ಮಾನ ಕಾರ್ಯಕ್ರಮವು ಮಂಗಳೂರಿನ ಬಿಜೈ ಮುಖ್ಯ ರಸ್ತೆಯ ರೋಹನ್ ಸಿಟಿಯಲ್ಲಿರುವ ಕಚೇರಿಯಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಸಂಸ್ಥೆಯ ಸ್ಥಾಪಕರಾದ ಡಾ.ರೋಹನ್ ಮೊಂತೇರೊರವರು ರೆಮೋನಾ ಪಿರೇರಾ ಅವರಿಗೆ ಪ್ರಶಸ್ತಿ ಪತ್ರ ಹಾಗೂ ಸ್ಮರಣಿಕೆ ನೀಡಿ ಗೌರವಿಸಿದರು. ಸ್ಥಳೀಯ ಪ್ರತಿಭೆಗಳನ್ನು ಪ್ರೋತ್ಸಾಹಿಸುವ ಹಾಗೂ ಮಂಗಳೂರಿನ ಕಲೆ, ಸಂಸ್ಕೃತಿಯನ್ನು ಜಾಗತಿಕ ಮಟ್ಟದಲ್ಲಿ ಬೆಳಕಿಗೆ ತರುವ ಉದ್ದೇಶದಿಂದ ಈ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.“ರೆಮೋನಾ ಅವರ ಸಾಧನೆ ಮಂಗಳೂರು ಮಾತ್ರವಲ್ಲ, ಇಡೀ ದೇಶಕ್ಕೆ ಹೆಮ್ಮೆ ತಂದಿದೆ. ಇವರು ಇಂದಿನ ಯುವ ಸಮುದಾಯಕ್ಕೆ ಸ್ಪೂರ್ತಿ” ಎಂದು ಡಾ.ರೋಹನ್ ಮೊಂತೇರೊ ಹೇಳಿದರು.ಅದ್ವಿತೀಯ ಸಾಧನೆಗಾಗಿ ಸಂಸ್ಥೆಯ ವತಿಯಿಂದ ಭವಿಷ್ಯದಲ್ಲಿಯೂ ಇಂತಹ ಪ್ರತಿಭೆಗಳಿಗೆ ವೇದಿಕೆ ನೀಡಲಾಗುವುದು ಎಂದು ಈ ಸಂದರ್ಭದಲ್ಲಿ…
ಕೋಟೆಕಾರು: ಹಲಸು ಹಣ್ಣು ಮಾತ್ರವಲ್ಲ, ಅದು ಬಾಂಧವ್ಯ ಬೆಸೆಯುವ ಕೊಂಡಿಯಂತೆ ಮನಸ್ಸು ಒಂದು ಗೂಡಿಸುವ ಕಾರ್ಯ ಮಾಡುತ್ತಿದೆ ಎಂದು ಪತ್ರಕರ್ತ ವಾಲ್ಟರ್ ನಂದಳಿಕೆ ಹೇಳಿದರು. ಕೋಟೆಕಾರು ವ್ಯವಸಾಯ ಸೇವಾ ಸಹಕಾರ ಸಂಘದ ವತಿಯಿಂದ ಉಳ್ಳಾಲ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವದಲ್ಲಿ ಕೋಟೆಕಾರು ಬೀರಿ ಜಂಕ್ಷನ್ ನಲ್ಲಿರುವ ಕೆ. ಸುಬ್ಬಣ್ಣಯ್ಯ ಸ್ಮಾರಕ ಕೋಟೆಕಾರು ಸಹಕಾರ ಸೌಧದಲ್ಲಿ ಮೂರು ದಿನಗಳ ಕಾಲ ನಡೆಯಲಿರುವ ಹಲಸು ಮೇಳ, ಗ್ರಾಮ ಸಂಪರ್ಕ ಅಭಿಯಾನ, ಹಡಿಲು ಭೂಮಿ ಕೃಷಿಗೆ ಚಾಲನೆ, ಮಹಿಳಾ ಸ್ವಾವಲಂಬಿ ಉದ್ಯೋಗ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ನಾವು ಪ್ರಕೃತಿಯನ್ನು ರಕ್ಷಿಸಬೇಕು. ನಮ್ಮ ಆಹಾರ ಪದಾರ್ಥಗಳ ಸೇವನೆ ಮೇಲೆ ಒಂದು ಶಿಸ್ತು ಇರಬೇಕು. ಯಾಕೆಂದರೆ ಪ್ರಕೃತಿ ಯಾವತ್ತೂ ನಮಗೆ ಒಳ್ಳೆಯದನ್ನೇ ಬಯಸುತ್ತದೆ. ಹಸುಗಳಿಗೆ ಹಲಸಿದ ತಂಗಳನ್ನ ಕೊಟ್ಟರೂ ಆ ಗೋ ಮಾತೆ ನಮಗೆ ದೇವರಿಗೆ ನೈವೇದ್ಯ ಮಾಡುವ ಹಾಲನ್ನು ಕೊಡುತ್ತದೆ. ಕೃತಜ್ಞತೆ ಭಾವನೆ ನಮ್ಮಲ್ಲಿರಬೇಕು ಎಂದರು. ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್…
ಮಂಗಳೂರು : ಉತ್ತಮ ಶಿಕ್ಷಣ, ಉದ್ಯೋಗ ಹೊಂದಿರುವ ಮಾನವ ಸಂಪನ್ಮೂಲ ದೇಶದ ಸಂಪತ್ತು. ಶಿಕ್ಷಣ ವ್ಯಕ್ತಿಯ ಭವಿಷ್ಯವನ್ನು ರೂಪಿಸುವಲ್ಲಿ ಪ್ರಮುಖ ಪಾತ್ರವಹಿಸುತ್ತದೆ. ಸರಕಾರ ಎಲ್ಲರ ಸಹಕಾರದೊಂದಿಗೆ ಎಲ್ಲರಿಗೂ ಉತ್ತಮ ಉದ್ಯೋಗ ನೀಡುವ ಗುರಿ ಹೊಂದಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಹಾಗೂ ದ.ಕ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಅವರು ಶುಕ್ರವಾರ ಆಳ್ವಾಸ್ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಹಮ್ಮಿಕೊಂಡ 15 ನೇ ಆವೃತ್ತಿಯ ಉದ್ಯೋಗ ಮೇಳ ‘ಆಳ್ವಾಸ್ ಪ್ರಗತಿಗೆ ಚಾಲನೆ ನೀಡಿ ಮಾತನಾಡಿದರು. ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಂಗಳೂರು ವಿಶ್ವ ವಿದ್ಯಾನಿಲಯದ ಕುಲಪತಿ ಪ್ರೊ.ಪಿ. ಎಲ್.ಧರ್ಮ ಮಾತನಾಡುತ್ತಾ ಕಂಪೆನಿಗಳು ವಿದ್ಯಾರ್ಥಿಗಳಿಗೆ ಅವರ ಸಾಮರ್ಥ್ಯ ವನ್ನು ಗುರುತಿಸಿ ಅವರಿಗೆ ಉದ್ಯೋಗ ನೀಡುವಂತಾಗಬೇಕು ಅಂತಹ ಸಾಮರ್ಥ್ಯ ವಿದ್ಯಾರ್ಥಿಗಳು ಹೊಂದುವಂತಾಗಬೇಕು ಎಂದರು. ಶಾಸಕರಾದ ಉಮಾನಾಥ ಕೋಟ್ಯಾನ್ ಅಧ್ಯಕ್ಷತೆ ವಹಿಸಿ ಮಾತನಾಡುತ್ತಾ ಉದ್ಯೋಗ ಮೇಳ ವಿದ್ಯಾರ್ಥಿ ಗಳ ಭವಿಷ್ಯ ರೂಪಿಸುವಲ್ಲಿ ಮಹತ್ವದ ವಹಿಸುತ್ತದೆ. ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಲು ಕರೆ ನೀಡಿದರು.…
ಬಂಟ್ವಾಳ : ಮಣಿನಾಲ್ಕೂರು ಗ್ರಾಮದ ಪೂಂಜೂರು ಎಂಬಲ್ಲಿ ನಡೆದಿದ್ದ ಒಣ ಅಡಿಕೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಸೊತ್ತುಗಳ ಸಹಿತ ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಸುಳ್ಯ ತಾಲೂಕಿನ ಪೈಚಾರು ನಿವಾಸಿ ಸತೀಶ್ (29) ಎಂದು ತಿಳಿದುಬಂದಿದೆ. ಮಣಿನಾಲ್ಕೂರು ಗ್ರಾಮದ ಪೂಂಜೂರು ಎಂಬಲ್ಲಿ ಜುಲೈ 3 ರಿಂದ 22 ರ ಅವಧಿಯಲ್ಲಿ ಸುಮಾರು 45 ಪ್ಲಾಸ್ಟಿಕ್ ಚೀಲದಲ್ಲಿದ್ದ 2.20 ಲಕ್ಷ ರೂ. ಮೌಲ್ಯದ ಒಣ ಅಡಿಕೆ ಕಳವಾಗಿರುವ ಬಗ್ಗೆ ಜುಲೈ 23 ರಂದು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಕಳವು ಪ್ರಕರಣದ ಪತ್ತೆ ಕಾರ್ಯಕ್ಕಾಗಿ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ಇನ್ಸ್ ಪೆಕ್ಟರ್ ಶಿವಕುಮಾರ ಬಿ ಅವರ ನೇತೃತ್ವದಲ್ಲಿ ತಂಡ ರಚಿಸಿ ಕಾರ್ಯಾಚರಣೆ ನಡೆಸಿದ ಪೊಲೀಸರು ಜುಲೈ 28 ರಂದು ಆರೋಪಿ ಸತೀಶ್ ಎಂಬಾತನನ್ನು ಬಂಧಿಸಿದ್ದಾರೆ.ಬಂಧಿತ ಆರೋಪಿಯಿಂದ ಕಳವುಗೈದ 74 ಸಾವಿರ ರೂ. ಮೌಲ್ಯದ 15 ಚೀಲ ಒಣ ಅಡಿಕೆ, ಕಳವುಗೈದ ಅಡಿಕೆಯನ್ನು ಮಾರಾಟ ಮಾಡಿದ 70…
ಮಂಗಳೂರು : ಮಂಗಳೂರಿನಲ್ಲಿ ಶೀಘ್ರ ರಾಷ್ಟ್ರೀಯ ತನಿಖಾ ದಳ (ಎನ್‌ಐಎ)ದ ಕಚೇರಿ ಸ್ಥಾಪಿಸ ಬೇಕೆಂದು ಕೋರಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ದ.ಕ. ಸಂಸದ ಬ್ರಿಜೇಶ್ ಚೌಟ ಮನವಿ ಸಲ್ಲಿಸಿದ್ದಾರೆ. ಹೊಸದಿಲ್ಲಿಯಲ್ಲಿ ಗುರುವಾರ ಬೆಳಗ್ಗೆ ಗೃಹ ಸಚಿವರ ಕಚೇರಿಯಲ್ಲಿ ಅಮಿತ್ ಶಾರನ್ನು ಚೌಟ ಭೇಟಿಯಾಗಿ ಮಾತುಕತೆ ನಡೆಸಿದರು. ಮಂಗಳೂರಿನಲ್ಲಿ ಸಮಗ್ರ ಗುಪ್ತಚರ ಸಮನ್ವಯ ಮತ್ತು ಕಾರ್ಯಾಚರಣೆಯ ಸಾಮರ್ಥ್ಯದೊಂದಿಗೆ ಶಾಶ್ವತವಾದ ಸಂಪೂರ್ಣ ಸುಸಜ್ಜಿತ ಎನ್‌ಐಎ ಕಚೇರಿಯನ್ನು ಸ್ಥಾಪಿಸಲು ವಿನಂತಿಸಿದ್ದು ಇದರಿಂದ ಇಡೀ ದಕ್ಷಿಣ ಭಾರತಕ್ಕೆ ಒಂದು ದೃಢ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವುದಕ್ಕೆ ಸಹಕಾರಿಯಾಗುತ್ತದೆ. ಈ ನಿಟ್ಟಿನಲ್ಲಿ ಮಂಗಳೂರಿನಲ್ಲಿ ಎನ್‌ಐಎ ಕಚೇರಿ ಸ್ಥಾಪಿಸುವ ಕರಾವಳಿಗರ ಬೇಡಿಕೆಯನ್ನು ಆದಷ್ಟು ಬೇಗ ಕಾರ್ಯರೂಪಕ್ಕೆ ತರಬೇಕೆಂದು ಎಂದು ಬ್ರಿಜೇಶ್ ಚೌಟ ಅವರು ಗೃಹ ಸಚಿವ ಅಮಿತ್ ಶಾ ಅವರಲ್ಲಿ ವಿನಂತಿಸಿದ್ದಾರೆ. ಜಿಲ್ಲೆಯಲ್ಲಿ ಭಯೋತ್ಪಾದನೆಗೆ ಸಂಬಂಧಿಸಿದ ಬಂಧನಗಳು ಮತ್ತು ಚಟುವಟಿಕೆಗಳು ಕಳೆದ 10 ವರ್ಷಗಳಲ್ಲಿ ಹೆಚ್ಚಾಗಿದೆ. ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ನಿಷೇಧಿತ ಪಿಎಫ್‌ಐ…
ಮಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ದುರಾಡಳಿತದಿಂದಾಗಿ ಕರ್ನಾಟಕವು ಭಯೋತ್ಪಾದಕರು ಮತ್ತು ಸಮಾಜಘಾತುಕ ಶಕ್ತಿಗಳ ಸುರಕ್ಷಿತ ತಾಣವಾಗಿ ಮಾರ್ಪಾಡಾಗುತ್ತಿದೆ ಎಂದು ದಕ್ಷಿಣ ಕನ್ನಡ ಸಂಸದ ಬ್ರಿಜೇಶ್ ಚೌಟ ಆರೋಪಿಸಿದ್ದಾರೆ. ಮೈಸೂರು ಸಮೀಪ ಬೃಹತ್ ಡ್ರಗ್ಸ್ ಕಾರ್ಖಾನೆ ಪತ್ತೆ ಮತ್ತು ಬೆಂಗಳೂರಿನಲ್ಲಿ ಅಲ್-ಖೈದಾ ನಂಟು ಹೊಂದಿರುವ ಆರೋಪದಲ್ಲಿ ಮಹಿಳೆಯೊಬ್ಬರ ಬಂಧನವಾಗಿರುವ ಕುರಿತು ಹೇಳಿಕೆ ನೀಡಿರುವ ಸಂಸದರು. ಇಂತಹ ಘಟನೆಗಳು ರಾಜ್ಯದ ಅಂತರಿಕ ಭದ್ರತೆಯ ಸಂಪೂರ್ಣ ವೈಫಲ್ಯಕ್ಕೆ ಸಾಕ್ಷಿಯಾಗಿದೆ ಎಂದು ಹೇಳಿದ್ದಾರೆ. ಸಿಎಂ ತವರು ಜಿಲ್ಲೆ ಮೈಸೂರಿನಲ್ಲೇ ಮೆಫೆಡ್ರೋನ್ (ಎಂಡಿ) ತಯಾರಿಸಿ ಸರಬರಾಜು ಮಾಡುತ್ತಿರುವ ಬೃಹತ್ ಡ್ರಗ್ಸ್ ಕಾರ್ಖಾನೆಯನ್ನು ಮುಂಬೈ ಪೊಲೀಸರು ಪತ್ತೆ ಹಚ್ಚಿದ್ದಾರೆ ಎಂದರೆ, ರಾಜ್ಯದ ಗೃಹ ಹಾಗೂ ಗುಪ್ತಚರ ಇಲಾಖೆ ಎಷ್ಟರ ಮಟ್ಟಿಗೆ ನಿಷ್ಕ್ರಿಯವಾಗಿದೆ ಎಂಬುದಕ್ಕೆ ಇದಕ್ಕಿಂತ ದೊಡ್ಡ ಉದಾಹರಣೆ ಬೇಕಿಲ್ಲ ಎಂದು ತಿಳಿಸಿದ್ದಾರೆ. ಸುಮಾರು 381 ಕೋಟಿ ರೂಪಾಯಿ ಮೌಲ್ಯದ ಮಾದಕ ವಸ್ತುವನ್ನು ವಶಪಡಿಸಿಕೊಂಡಿರುವ ಮುಂಬೈನ ಸಕಿನಾಕಾ ಪೊಲೀಸ್ ಠಾಣೆಯ ಆಂಟಿ-ನಾರ್ಕೋಟಿಕ್ ಸೆಲ್ ಇದು ಕರ್ನಾಟಕದ ಇತಿಹಾಸದಲ್ಲಿಯೇ…
ಬಂಟ್ವಾಳ : ಕಳೆದ 4 ದಿನಗಳ ಹಿಂದೆ ನಾಪತ್ತೆಯಾಗಿದ್ದ ಕಡೇಶಿವಾಲಯ ನಿವಾಸಿ ಹೇಮಂತ್ ಆಚಾರ್ಯ(21)ಎಂಬಾತನ ಮೃತದೇಹವು ನೇತ್ರಾವತಿ ನದಿಯಲ್ಲಿ ಪತ್ತೆಯಾಗಿದೆ. ಕಂಕನಾಡಿ ಪೊಲೀಸ್ ಠಾಣೆ ವ್ಯಾಪ್ತಿಯ ಬಜಾಲ್ ಮುಗೇರು ಬಳಿ ನೇತ್ರಾವತಿ ನದಿಯ ಮಧ್ಯದಲ್ಲಿ ಅವರ ದೇಹ ತೇಲುತ್ತಿರುವುದು ಪತ್ತೆಯಾಗಿದೆ. ಜು 27 ರಂದು ಹೇಮಂತ್ ನಾಪತ್ತೆಯಾಗಿದ್ದು, ಈ ಕುರಿತಾಗಿ ಜು.28 ರಂದು ಗ್ರಾಮಾಂತರ ಠಾಣೆಗೆ ದೂರು ನೀಡಲಾಗಿತ್ತು. ಜು.29 ರಂದು ಹೇಮಂತ್ ನ ದ್ವಿಚಕ್ರ ವಾಹನ ಜಕ್ರಿಬೆಟ್ಟುವಿನಲ್ಲಿ ಪತ್ತೆಯಾಗಿದ್ದು, ಅದರಲ್ಲಿ ಮೊಬೈಲ್ ಬಿಟ್ಟು ಹೋಗಿದ್ದಾನೆ ಎಂದು ತಿಳಿದುಬಂದಿದೆ. ನೇತ್ರಾವತಿ ನದಿಯ ಬದಿಯಲ್ಲಿ ವಾಹನ ಇಟ್ಟು ನಾಪತ್ತೆಯಾಗಿದ್ದ ಹಿನ್ನೆಲೆ ಜು.29ರಂದು ಸ್ಥಳೀಯ ಮುಳುಗು ತಜ್ಞ ನಿಸಾರ್ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ನಗರ, ಗ್ರಾಮಾಂತರ ಪೊಲೀಸರ ತಂಡ ಹುಡುಕಾಟ ನಡೆಸಿದೆ. ಜು.30ರಂದು ಅಗ್ನಿಶಾಮಕದಳ ಶೋಧಕಾರ್ಯ ನಡೆಸಿದ್ದು, ಯಾವುದೇ ಸುಳಿವು ಪತ್ತೆಯಾಗಿರಲಿಲ್ಲ. ಜು. 31ರಂದು ಕಡೇಶಿವಾಲಯ ಗ್ರಾಮ ಪಂಚಾಯತ್ ಸದಸ್ಯರಾದ ಸಂಪತ್ ಸುವರ್ಣ ಹಾಗೂ ಈಶ್ವರ್ ಮಲ್ಪೆ ನೇತೃತ್ವದ ಹೆಚ್ಚುವರಿ ತಂಡಗಳು,…
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಕೃಷ್ಣಾಪುರ ಶಾಖೆಯ ಪ್ರಥಮ ವಾರ್ಷಿಕೋತ್ಸವದ ಪ್ರಯುಕ್ತ ಉಚಿತ ವೈದ್ಯಕೀಯ ಮತ್ತು ನೇತ್ರ ತಪಾಸಣಾ ಶಿಬಿರವು ಯುವಕ ಮಂಡಲ (ರಿ.), ಯುವತಿ ಮಂಡಲ (ರಿ.) ವನಿತಾ ಸೇವಾ ಸಮಾಜ (ರಿ.), ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ (ರಿ.) ಕೃಷ್ಣಾಪುರ-ಕಾಟಿಪಳ್ಳ ಇವರುಗಳ ಸಂಯುಕ್ತ ಆಶ್ರಯದಲ್ಲಿ ಯುವಕ ಮಂಡಲ (ರಿ.) 5ನೇ ವಿಭಾಗ ಕೃಷ್ಣಾಪುರ ಇಲ್ಲಿ ಜರುಗಿತು . ಈ ಕಾರ್ಯಕ್ರಮವನ್ನು ಮಹಾನಗರ ಪಾಲಿಕೆಯ ನಿಕಟಪೂರ್ವ ಸದಸ್ಯರಾದ ಶ್ರೀಮತಿ ಲಕ್ಷ್ಮೀ ಶೇಖರ್ ದೇವಾಡಿಗರವರು ಉದ್ಘಾಟಿಸಿ ಮಾತನಾಡಿ, “ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಬ್ಯಾಂಕಿಂಗ್ ವ್ಯವಹಾರದ ಜೊತೆಗೆ ವೈದ್ಯಕೀಯ, ಶೈಕ್ಷಣಿಕ, ಸಾಮಾಜಿಕ ಕಾರ್ಯಕ್ರಮಗಳನ್ನು ನಿರಂತರವಾಗಿ ಆಯೋಜನೆ ಮಾಡಿಕೊಂಡು ಬರುತ್ತಿದೆ. ವಿಶೇಷವಾಗಿ ಸಂಸ್ಥೆಯಲ್ಲಿ ಮಹಿಳೆಯರಿಗೆ ಹೆಚ್ಚಿನ ಉದ್ಯೋಗ ಅವಕಾಶವನ್ನು ನೀಡಿರುವುದು ಶ್ಲಾಘನೀಯ. ಹೆಣ್ಣುಮಕ್ಕಳು ಕುಟುಂಬ ಸಾಗಿಸಲು ಆರ್ಥಿಕ ಶಕ್ತಿಯಾಗಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ನಿಂತಿದೆ” ಎಂದು ಹೇಳಿದರು.ಕಾರ್ಯಕ್ರಮದ ಮುಖ್ಯ ಅತಿಥಿಯಾದ ಕೃಷ್ಣಾಪುರ ಯುವಕ ಮಂಡಲ (ರಿ.) ಇಲ್ಲಿನ ಗೌರವಾಧ್ಯಕ್ಷರಾದ…

