ಮಂಗಳೂರು, ಜು. 08 : ಮಹಾನಗರ ಪಾಲಿಕೆಯ ಸಿಬ್ಬಂದಿಗಳು, ಅಧಿಕಾರಿಗಳು ಎಸ್ಐಆರ್ ಕರ್ತವ್ಯಕ್ಕೆ ನೇಮಕಗೊಂಡಿರುವುದರಿಂದ ಇನ್ನು “ಒಂದು ತಿಂಗಳು ಜನನ ಮತ್ತು ಮರಣಗಳ ನೋಂದಣಿ ಘಟಕದಲ್ಲಿ ಅರ್ಜಿ ಸ್ವೀಕಾರ ಬಂದ್” ಎಂದು ಬೋರ್ಡ್ ಹಾಕಲಾಗಿದೆ. ಇದರಿಂದ ಸಾರ್ವಜನಿಕರು ತುರ್ತಾಗಿ ಜನನ , ಮರಣ ಪತ್ರ ಪಡೆಯಲು ಸಾಧ್ಯವಾಗದೇ ಕಂಗೆಟ್ಟಿದ್ದಾರೆ. ಮನಪಾ ಆಡಳಿತ ತಕ್ಷಣ ಈ ಸಮಸ್ಯೆ ಬಗೆಹರಿಸಬೇಕು ಎಂದು ಶಾಸಕ ವೇದವ್ಯಾಸ ಕಾಮತ್ ಆಗ್ರಹಿಸಿದರು. ಆಡಳಿತಾಧಿಕಾರಿ ಮೂಲಕ ಪಾಲಿಕೆಯಲ್ಲಿ ಆಡಳಿತ ನಡೆಸುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ಪ್ರಕಾರ ಇನ್ನು ಒಂದು ತಿಂಗಳು ಮಂಗಳೂರಿನಲ್ಲಿ ಜನನ ಮರಣಗಳು ಇರುವುದೇ ಇಲ್ಲವೇ? ಶಾಲಾ ಮಕ್ಕಳ ದಾಖಲಾತಿಗೆ ಜನನ ಪ್ರಮಾಣ ಪತ್ರ ಅಗತ್ಯವಾಗಿ ಬೇಕಿರುವ ಪೋಷಕರು ಏನು ಮಾಡಬೇಕು? ಪಾಸ್ ಪೋರ್ಟ್ ಮಾಡಿಸಿಕೊಳ್ಳವವರು ಏನು ಮಾಡಬೇಕು? ಸಾರ್ವಜನಿಕರು ಕಂಗಾಲಾಗಿ ಬೇರೆ ದಾರಿ ಕಾಣದೇ, ಸಾರ್ವಜನಿಕರು ನಾವು ಶಾಸಕರಿಗೆ ದೂರು ಕೊಡುತ್ತೇವೆ ಎಂದಿದ್ದಕ್ಕೆ, ನಿನ್ನೆಯಿಂದ ಅರ್ಜಿ ತೆಗೆದುಕೊಳ್ಳಲು ಆರಂಭಿಸಿದ್ದಾರೆ. ಆದರೆ ಪ್ರಮಾಣ ಪತ್ರಕ್ಕೆ ಅರ್ಜೆಂಟ್ ಮಾಡುವ ಹಾಗಿಲ್ಲ, ಎಂದು…
Author: UllalaVani
ಕೊಲ್ಕತ್ತಾ, ಜು. 08 ; ಪಶ್ಚಿಮ ಬಂಗಾಳದ ಬರುಯಿಪುರ್ ನಲ್ಲಿ 12 ವರ್ಷದ ಬಾಲಕಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಪ್ರಮುಖ ಆರೋಪಿಯೋರ್ವ ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನಿಸಿದ್ದು, ಈ ಸಂದರ್ಭ ಪೊಲೀಸ್ ಎನ್‌ಕೌಂಟರ್‌ನಲ್ಲಿ ಹತ್ಯೆ ಮಾಡಿದ ಘಟನೆ ಬುಧವಾರ ಮುಂಜಾನೆ ನಡೆದಿದೆ. ಆರೋಪಿ ಪ್ರಬಾಶ್ ಮಂಡಲ್ ನನ್ನು ಸ್ಥಳಮಜರು ನಡೆಸಲು ಘಟನಾ ಸ್ಥಳಕ್ಕೆ ಕರೆದೊಯ್ಯುವಾಗ ಪೊಲೀಸ್ ವಶದಿಂದ ಪರಾರಿಯಾಗಲು ಯತ್ನಿಸಿದ್ದಾನೆ. ಜೊತೆಗ ಆತ ಆತ ಪೊಲೀಸ್ ಸಿಬ್ಬಂದಿಯೊಬ್ಬರ ಬಂದೂಕನ್ನು ಕಸಿದುಕೊಂಡು ಪರಾರಿಯಾಗಲು ಯತ್ನಿಸಿದ. ಹಾಗೂ ಆರೋಪಿಯು ಪರಾರಿಯಾಗುವ ವೇಳೆ ಪೊಲೀಸರ ಮೇಲೆಯೇ ಗುಂಡಿನ ದಾಳಿ ನಡೆಸಿದ್ದಾನೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.ಇದರಿಂದ ಆತ್ಮರಕ್ಷಣೆಗಾಗಿ ಪೊಲೀಸರು ಪ್ರತಿದಾಳಿ ನಡೆಸಿದ್ದು, ಗುಂಡಿನ ಚಕಮಕಿಯಲ್ಲಿ ಆರೋಪಿ ಗಂಭೀರವಾಗಿ ಗಾಯಗೊಂಡಿದ್ದ. ತಕ್ಷಣವೇ ಆತನನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ.ಆರೋಪಿ ಪ್ರಬಾಶ್ ಮಂಡಲ್ 12 ವರ್ಷದ ಬಾಲಕಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಪ್ರಮುಖ ಆರೋಪಿಯಾಗಿದ್ದ. ಅಪರಾಧ ನಡೆಯುವ ಮುನ್ನ ಬಾಲಕಿಯೊಂದಿಗೆ ಆರೋಪಿಯು ಕಾಣಿಸಿಕೊಂಡಿದ್ದು, ಈ…
ಉಳ್ಳಾಲ, ಜು. 8: ಮಹಾತ್ಮ ಗಾಂಧಿ ಕಿನ್ಯಾ ಗ್ರಾಮ ಪಂಚಾಯತ್‌ನ ಪಂಚಾಯತ್ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿ ವರ್ಗಾವಣೆಯಾಗುತ್ತಿರುವ ವಾಣಿಶ್ರೀ ಅವರಿಗೆ ಪಂಚಾಯತ್ ವತಿಯಿಂದ ಬೀಳ್ಕೊಡುಗೆ ಸಮಾರಂಭವನ್ನು ಆಯೋಜಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಆಡಳಿತಾಧಿಕಾರಿ ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿ, ವಾಣಿಶ್ರೀ ಅವರು ತಮ್ಮ ಸೇವಾ ಅವಧಿಯಲ್ಲಿ ಗ್ರಾಮ ಪಂಚಾಯತ್‌ನ ಅಭಿವೃದ್ಧಿ, ಆಡಳಿತ ಹಾಗೂ ಸಾರ್ವಜನಿಕ ಸೇವೆಯಲ್ಲಿ ಸಲ್ಲಿಸಿದ ಪ್ರಾಮಾಣಿಕ ಕಾರ್ಯ ಶ್ಲಾಘನೀಯವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಪಂಚಾಯತ್ ಸಿಬ್ಬಂದಿ ವರ್ಗದ ಪರವಾಗಿ, “ನಿಮ್ಮ ಸೇವೆ, ಸಹಕಾರ ಮತ್ತು ಶ್ರಮವು ನಮ್ಮ ಗ್ರಾಮ ಪಂಚಾಯತ್‌ಗೆ ಸದಾ ಸ್ಮರಣೀಯ. ನಿಮ್ಮ ಮುಂದಿನ ಜೀವನ ಸುಖ, ಶಾಂತಿ ಹಾಗೂ ಸಫಲತೆಯಿಂದ ಕೂಡಿರಲಿ” ಎಂದು ಶುಭ ಹಾರೈಸಲಾಯಿತು. ಕಾರ್ಯಕ್ರಮದಲ್ಲಿ ಆಡಳಿತಾಧಿಕಾರಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹಾಗೂ ಪಂಚಾಯತ್ ಸಿಬ್ಬಂದಿ ವರ್ಗ ಉಪಸ್ಥಿತರಿದ್ದು, ವಾಣಿಶ್ರೀ ಅವರನ್ನು ಸನ್ಮಾನಿಸಿ ಗೌರವಪೂರ್ವಕವಾಗಿ ಬೀಳ್ಕೊಡಲಾಯಿತು.
ಬೆಂಗಳೂರು, ಜು. 8: ವಿವಿಧ ಕಾರಣಗಳಿಂದ ರದ್ದಾಗಿ ಎಪಿಎಲ್ ಕಾರ್ಡ್‌ಗಳಾಗಿ ಪರಿವರ್ತನೆಗೊಂಡಿದ್ದ ಅರ್ಹ ಫಲಾನುಭವಿಗಳ ಬಿಪಿಎಲ್ ಪಡಿತರ ಚೀಟಿಗಳನ್ನು ಮತ್ತೆ ಪಡೆಯಲು ರಾಜ್ಯ ಸರ್ಕಾರ ಅವಕಾಶ ಕಲ್ಪಿಸಿದೆ. ಈ ಸಂಬಂಧ ಆಹಾರ ಇಲಾಖೆ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳುವಂತೆ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾ ಘಟಕದ ಅಧ್ಯಕ್ಷ ಸಿ.ಎಸ್. ಚಂದ್ರಭೂಪಾಲ ಸೂಚಿಸಿದ್ದಾರೆ. ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಅನ್ನಭಾಗ್ಯ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಬಿಪಿಎಲ್ ಕಾರ್ಡ್ ಮರು ಸಕ್ರಿಯಗೊಳಿಸಲು ಸರ್ಕಾರ ಈ ಹಿಂದೆ ನಿಗದಿಪಡಿಸಿದ್ದ 45 ದಿನಗಳ ಕಾಲಮಿತಿಯನ್ನು ರದ್ದುಪಡಿಸಲಾಗಿದೆ ಎಂದು ತಿಳಿಸಿದರು. ಇದರಿಂದ ಅರ್ಹ ಫಲಾನುಭವಿಗಳು ಇನ್ನು ಮುಂದೆ ಯಾವುದೇ ಗಡುವಿನ ಆತಂಕವಿಲ್ಲದೆ ತಮ್ಮ ವ್ಯಾಪ್ತಿಯ ತಹಶೀಲ್ದಾರ್ ಕಚೇರಿಗೆ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಿ ಬಿಪಿಎಲ್ ಕಾರ್ಡ್‌ಗಳನ್ನು ಮರು ಸಕ್ರಿಯಗೊಳಿಸಿಕೊಳ್ಳಬಹುದು ಎಂದು ಹೇಳಿದರು. ಈ ಕ್ರಮದಿಂದ ನಿಜವಾದ ಅರ್ಹ ಕುಟುಂಬಗಳಿಗೆ ಆಹಾರ ಭದ್ರತಾ ಯೋಜನೆಗಳು ಹಾಗೂ ಸರ್ಕಾರದ ವಿವಿಧ ಕಲ್ಯಾಣ ಯೋಜನೆಗಳ ಪ್ರಯೋಜನ ಮತ್ತೆ…
ಮಂಗಳೂರು: ಶಾಲೆಯಲ್ಲಿ ಎಲ್‌ಕೆಜಿ ವಿದ್ಯಾರ್ಥಿನಿಗೆ ದೈಹಿಕ ಶಿಕ್ಷೆ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಶಿಕ್ಷಕಿ ವಿರುದ್ಧ ದಾಖಲಾದ ಕ್ರಿಮಿನಲ್ ಪ್ರಕರಣವನ್ನು ಈ ಹಂತದಲ್ಲಿ ರದ್ದುಪಡಿಸಲು ಸಾಧ್ಯವಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ. ಪ್ರಕರಣದ ತನಿಖೆ ಹಾಗೂ ನ್ಯಾಯಾಂಗ ಪ್ರಕ್ರಿಯೆ ಮುಂದುವರಿಯಬೇಕು ಎಂದು ನ್ಯಾಯಾಲಯ ಸ್ಪಷ್ಟಪಡಿಸಿರುವುದು ಮಕ್ಕಳ ಹಕ್ಕುಗಳ ರಕ್ಷಣೆಗೆ ಮಹತ್ವದ ಸಂದೇಶವೆಂದು ಪರಿಗಣಿಸಲಾಗಿದೆ. ಪ್ರಕರಣದ ವಿವರಗಳ ಪ್ರಕಾರ, ಸುರತ್ಕಲ್‌ನ ಖಾಸಗಿ ಶಾಲೆಯೊಂದರಲ್ಲಿ ಎಲ್‌ಕೆಜಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಗೆ ತರಗತಿ ವೇಳೆ ಶಿಕ್ಷಕಿ ಆಶಾ ಕಾಸ್ತ ಅವರು ಕೋಲಿನಿಂದ ಹೊಡೆದಿದ್ದಾರೆ ಎಂದು ಮಗುವಿನ ತಾಯಿ ಪ್ರತೀನಾ ಅವರು ಸುರತ್ಕಲ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಆರಂಭದಲ್ಲಿ ಶಾಲಾ ಆಡಳಿತ ಮಂಡಳಿ ಮತ್ತು ಮುಖ್ಯೋಪಾಧ್ಯಾಯರು ಮಧ್ಯಸ್ಥಿಕೆ ವಹಿಸಿ ವಿಷಯವನ್ನು ಬಗೆಹರಿಸಿರುವುದಾಗಿ ಹೇಳಲಾಗಿದ್ದರೂ, ಬಳಿಕ ಮತ್ತೆ ಮಗುವಿಗೆ ದೈಹಿಕ ಶಿಕ್ಷೆ ನೀಡಲಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಈ ಹಿನ್ನೆಲೆಯಲ್ಲಿ ಶಿಕ್ಷಕಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮಗುವಿನ ತಾಯಿ ಶಫ್ರೀನಾ ದೂರು ಸಲ್ಲಿಸಿದ್ದರು. ದೂರಿನ…
ಕೇರಳದ ವಯನಾಡಿನಲ್ಲಿ ಸುರಂಗ ರಸ್ತೆ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದ ಸ್ಥಳದಲ್ಲಿ ಸಂಭವಿಸಿದ ಭೀಕರ ಗುಡ್ಡ ಕುಸಿತ ದುರಂತದಲ್ಲಿ ಮೂವರು ಕಾರ್ಮಿಕರು ಮೃತಪಟ್ಟಿದ್ದು, ನಾಪತ್ತೆಯಾಗಿರುವ ಐವರಿಗಾಗಿ ರಕ್ಷಣಾ ಸಿಬ್ಬಂದಿ ತೀವ್ರ ಶೋಧ ಕಾರ್ಯ ನಡೆಸುತ್ತಿದ್ದಾರೆ. ಬೆಳಗ್ಗೆಯಿಂದಲೇ ನಿರಂತರ ಮಳೆಯ ನಡುವೆಯೂ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಆದರೆ ಮಳೆ ಹಾಗೂ ಮಣ್ಣು ನಿರಂತರವಾಗಿ ಕುಸಿಯುತ್ತಿರುವ ಕಾರಣ ಶೋಧ ಕಾರ್ಯಕ್ಕೆ ತೀವ್ರ ಅಡ್ಡಿಯಾಗಿದ್ದು, ರಕ್ಷಣಾ ಸಿಬ್ಬಂದಿ ಎಚ್ಚರಿಕೆಯಿಂದ ಕಾರ್ಯಾಚರಣೆ ನಡೆಸುತ್ತಿದ್ದಾರೆ. ದುರಂತದಲ್ಲಿ ಮೃತಪಟ್ಟ ಮೂವರು ಕಾರ್ಮಿಕರ ಮೃತದೇಹಗಳನ್ನು ಮಣ್ಣಿನಡಿಯಿಂದ ಹೊರತೆಗೆದಿದ್ದು, ಉಳಿದ ನಾಪತ್ತೆಯಾದವರ ಪತ್ತೆಗಾಗಿ ಜೆಸಿಬಿ ಸೇರಿದಂತೆ ವಿಶೇಷ ಯಂತ್ರೋಪಕರಣಗಳ ನೆರವಿನಿಂದ ಶೋಧ ಕಾರ್ಯ ಮುಂದುವರಿದಿದೆ. ಈ ನಡುವೆ ಕೇರಳದ ಮುಖ್ಯಮಂತ್ರಿ ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿಯ ಪರಿಶೀಲನೆ ನಡೆಸಿ, ರಕ್ಷಣಾ ಕಾರ್ಯವನ್ನು ಮತ್ತಷ್ಟು ವೇಗಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಸರ್ಕಾರದಿಂದ ಅಗತ್ಯ ಎಲ್ಲಾ ನೆರವು ಒದಗಿಸಲಾಗುವುದು ಎಂದು ಅವರು ಭರವಸೆ ನೀಡಿದ್ದಾರೆ.
ವಿಟ್ಲ, ಜು. 08: 3 ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಕಳ್ಳತನ ಪ್ರಕರಣದ ಆರೋಪಿಯೋರ್ವನನ್ನು ವಿಟ್ಲ ಠಾಣಾ ಪೊಲೀಸರು ಜು. 6ರಂದು ದಸ್ತಗಿರಿ ಮಾಡಿದ್ದಾರೆ. ಬೆಳ್ತಂಗಡಿ ನಿವಾಸಿ ರಾಜೇಶ್ (41) ದಸ್ತಗಿರಿ ಮಾಡಲಾದ ಆರೋಪಿ.ವಿಟ್ಲ ಪೊಲೀಸ್ ಠಾಣಾ ಅ.ಕ್ರ ನಂ: 204/2018 Se. 379 IPC ಐಪಿಸಿ ಪ್ರಕರಣದ ಆರೋಪಿಯಾಗಿರುವ ಈತನು ನ್ಯಾಯಾಲಯಕ್ಕೆ ವಿಚಾರಣೆ ಹಾಜರಾಗದೇ ೦೩ ವರ್ಷದಿಂದ ತಲೆಮರೆಸಿಕೊಂಡಿದ್ದ.ಆರೋಪಿಯನ್ನು ವಿಟ್ಲ ಠಾಣಾ ಸಿಬ್ಬಂದಿಗಳಾದ ASI ಜಯರಾಮ, CPC ವೆಂಕಪ್ಪ ಹಾಗೂ CPC ಶಿವಾನಂದ ಅವರು ಜು.6 ರಂದು ಮಂಗಳೂರಿನಲ್ಲಿ ದಸ್ತಗಿರಿ ಮಾಡಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿರುತ್ತದೆ.
ಉಳ್ಳಾಲ: ಬಿಜೆಪಿ ಹಿರಿಯ ಮುಖಂಡ, ಜನಸಂಘದ ಸಕ್ರಿಯ ಕಾರ್ಯಕರ್ತ ಹಾಗೂ ಹಿಂದೂ ಧಾರ್ಮಿಕ ಮತ್ತು ಸಾಮಾಜಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಸಂಜೀವ ಶೆಟ್ಟಿ ಅಂಬ್ಲಮೊಗರು (70) ಅವರು ನಿಧನರಾದರು. ಸಂಜೀವ ಶೆಟ್ಟಿ ಅವರು ಅಂಬ್ಲಮೊಗರು ಗ್ರಾಮ ಪಂಚಾಯತ್‌ನ ಮಾಜಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಲ್ಲದೆ, ಮಂಗಳೂರು ಭೂ ನ್ಯಾಯ ಮಂಡಳಿಯ ಮಾಜಿ ಸದಸ್ಯರಾಗಿಯೂ ಕಾರ್ಯನಿರ್ವಹಿಸಿದ್ದರು. ಸಾರ್ವಜನಿಕ ಬದುಕಿನಲ್ಲಿ ಸರಳತೆ, ಸಂಘಟನಾ ನಿಷ್ಠೆ ಮತ್ತು ಸಮಾಜಮುಖಿ ಸೇವೆಯ ಮೂಲಕ ಜನಮನ್ನಣೆ ಗಳಿಸಿದ್ದ ಅವರು, ಬಿಜೆಪಿ ಸಂಘಟನೆಯ ಬಲವರ್ಧನೆಗೆ ಹಾಗೂ ವಿವಿಧ ಸಾಮಾಜಿಕ ಮತ್ತು ಧಾರ್ಮಿಕ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಗಮನಾರ್ಹ ಸೇವೆ ಸಲ್ಲಿಸಿದ್ದರು. ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆಯೇ ಬಿಜೆಪಿ ಮುಖಂಡರು, ಕಾರ್ಯಕರ್ತರು, ಸಮಾಜದ ಗಣ್ಯರು ಹಾಗೂ ಸಾರ್ವಜನಿಕರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಅವರ ಅಗಲಿಕೆಯಿಂದ ಸಂಘಟನೆ ಹಾಗೂ ಸಮಾಜಕ್ಕೆ ತುಂಬಲಾರದ ನಷ್ಟ ಉಂಟಾಗಿದೆ ಎಂದು ಶೋಕ ವ್ಯಕ್ತಪಡಿಸಿದ್ದಾರೆ. ಬಿಜೆಪಿ ಮಂಗಳೂರು ಮಂಡಲ ಪದಾಧಿಕಾರಿಗಳ ಸಭೆ ರದ್ದುಬಿಜೆಪಿ ಹಿರಿಯ ಮುಖಂಡ ಹಾಗೂ ಅಂಬ್ಲಮೊಗರು ಗ್ರಾಮ…
ತಿರುವನಂತಪುರಂ,ಜು. 07 : 2 ವರ್ಷಗಳ ಹಿಂದೆ ಕೇರಳದ ವಯನಾಡಿನ ಚೂರಲ್ಮಲದಲ್ಲಿ ಸಂಭವಿಸಿದ್ದ ಭೂಕುಸಿತ ನೂರಾರು ಜನರ ಜೀವವನ್ನ ಆಹುತಿ ಪಡೆದುಕೊಂಡಿತ್ತು. ಇದೀಗ ಮತ್ತೆ ಅಂತಹದ್ದೇ ದುರಂತ ವಯನಾಡಿನಲ್ಲಿ ಸಂಭವಿಸಿದೆ. ವಯನಾಡಿನ ಮೆಪ್ಪಾಡಿಯಲ್ಲಿ ಭಾರೀ ಮಳೆಯಿಂದಾಗಿ ಭೂಕುಸಿತ ಉಂಟಾಗಿದೆ. ವಯನಾಡಿನ ಸುರಂಗ ನಿರ್ಮಾಣ ಪ್ರದೇಶದ ಮೀನಾಕ್ಷಿ ಸೇತುವೆ ಬಳಿ ಭೂಕುಸಿತ ಸಂಭವಿಸಿದೆ. ಇದರಿಂದ ಇಬ್ಬರು ಕಾರ್ಮಿಕರು ಜೀವಂತ ಸಮಾಧಿಯಾಗಿದ್ದಾರೆ. ಸುಮಾರು 20 ಮಂದಿ ಅವಶೇಷಗಳ ಅಡಿಯಲ್ಲೇ ಸಿಲುಕಿಕೊಂಡಿದ್ದು, 30 ಮಂದಿ ನಾಪತ್ತೆಯಾಗಿದ್ದಾರೆ. ಇದರಿಂದ ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ.ಘಟನೆಯಲ್ಲಿ ಗಾಯಗೊಂಡಿದ್ದ 6 ಮಂದಿಯನ್ನ ಸ್ಥಳೀಯರು ರಕ್ಷಣೆ ಮಾಡಿದ್ದು, ಮೆಪ್ಪಾಡಿಯ ಡಾ. ಮೂಪೆನ್ಸ್ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸುತ್ತಿದ್ದಾರೆ. ಗಾಯಗೊಂಡವರನ್ನ ಹೀರಾ ಸುರೇಶ್, ದಿಲೀಪ್, ಸೂರಜ್, ಸಂಜಯ್ ಥಾಪುರ್, ರಜನೀಶ್ ಮತ್ತು ತನ್ಮಯ್ ಘೋಷ್ ಎಂದು ಗುರುತಿಸಲಾಗಿದೆ. ಒಬ್ಬರ ಸ್ಥಿತಿ ಗಂಭೀರವಾಗಿದೆ. ಭೂಕುಸಿತ ದುರಂತದ ಬಗ್ಗೆ ಮಾಹಿತಿ ಪಡೆದ ಸಿಎಂ ವಿ.ಡಿ ಸತೀಶನ್, ಇಬ್ಬರು ಸಚಿವರು ಕೂಡಲೇ…
ಉಳ್ಳಾಲ: ಶರವು ನಿವಾಸಿ, ದಿವಂಗತ ಜನಾರ್ದನ ಗಟ್ಟಿ ಹಾಗೂ ದಿವಂಗತ ಗಿರಿಜಾ ಗಟ್ಟಿ ದಂಪತಿಯ ಪುತ್ರ ಹಾಗೂ ಸೋಮೇಶ್ವರ ಗ್ರಾಮ ಪಂಚಾಯತ್ ಮಾಜಿ ಸದಸ್ಯೆ ಶ್ವೇತ ಗಟ್ಟಿ ಅವರ ಪತಿ ಕಿಶೋರ್ ಗಟ್ಟಿ (50) ಅವರು ಅಲ್ಪಕಾಲದ ಅಸೌಖ್ಯದಿಂದ ಮಂಗಳವಾರ ನಿಧನ ಹೊಂದಿದರು. ಕಿಶೋರ್ ಗಟ್ಟಿ ಅವರು ಏನೆಪೋಯ ಸಂಸ್ಥೆಯ ಮಾಜಿ ಉದ್ಯೋಗಿಯಾಗಿದ್ದು, ಸೋಮೇಶ್ವರ ವಲಯ-1 ಕಾಂಗ್ರೆಸ್ ಅಧ್ಯಕ್ಷರಾಗಿ ಹಾಗೂ ಪಕ್ಷದ ಸಕ್ರಿಯ ಕಾರ್ಯಕರ್ತರಾಗಿ ಸೇವೆ ಸಲ್ಲಿಸಿದ್ದರು. ರಾಜಕೀಯ ಕ್ಷೇತ್ರದ ಜೊತೆಗೆ ವಿವಿಧ ಸಾಮಾಜಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಜನಸೇವೆ ಮಾಡುತ್ತಿದ್ದರು. ಮೃತರು ಪತ್ನಿ ಸೇರಿದಂತೆ ಕುಟುಂಬದ ಸದಸ್ಯರು ಹಾಗೂ ಅಪಾರ ಬಂಧು-ಬಳಗ ಮತ್ತು ಸ್ನೇಹಿತರನ್ನು ಅಗಲಿದ್ದಾರೆ. ಅವರ ಅಂತಿಮ ವಿಧಿ ವಿಧಾನಗಳು ಬುಧವಾರ ಬೆಳಿಗ್ಗೆ ಕುತ್ತಾರು ಮುಂಡೋಳಿ ಮನೆಯಿಂದ ನೆರವೇರಲಿವೆ.

