Author: UllalaVani

Kannada News From Coastal Karnataka

ಮಾಸ್ಕೋ :  ತಾಂತ್ರಿಕ ದೋಷದಿಂದ ರಷ್ಯಾದ ವಿಮಾನ ಪೂರ್ವ ಅಮುರ್ ಪ್ರದೇಶದಲ್ಲಿ ಪತನಗೊಂಡಿದ್ದು, 48 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.ಸೈಬೀರಿಯಾ ಮೂಲದ ಅಂಗಾರ ಎಂಬ ವಿಮಾನಯಾನ ಸಂಸ್ಥೆಯಿಂದ ನಿರ್ವಹಿಸಲ್ಪಡುತ್ತಿದ್ದ ಎಎನ್-24 ಸಂಖ್ಯೆಯ ವಿಮಾನ ಚೀನಾದ ಗಡಿಯಲ್ಲಿರುವ ಅಮುರ್ ಪ್ರದೇಶದ ಟಿಂಡಾ ಪಟ್ಟಣದ ಬಳಿ ರಾಡಾರ್‌ನಿಂದ ಸಂಪರ್ಕ ಕಳೆದುಕೊಂಡಿತು. ಇದಾದ ಕೆಲವೇ ಕ್ಷಣಗಳಲ್ಲಿ ವಿಮಾನ ಪತನಗೊಂಡಿರುವುದಾಗಿ ತಿಳಿದುಬಂದಿದೆ.ಪ್ರಯಾಣಿಕ ವಿಮಾನದಲ್ಲಿ (ಪ್ಯಾಸೆಂಜರ್ ಫ್ಲೈಟ್) 6 ಮಕ್ಕಳು ಮತ್ತು ಆರು ಸಿಬ್ಬಂದಿ ಸೇರಿ 49 ಮಂದಿ ಇದ್ದರು ಅಂತ ಪ್ರಾದೇಶಿಕ ಗವರ್ನರ್ ವಾಸಿಲಿ ಓರ್ಲೋವ್ ತಿಳಸಿದ್ದಾರೆ.ವಿಮಾನದಲ್ಲಿದ್ದ ಎಲ್ಲಾ 50 ಮಂದಿ ಸಾವನ್ನಪ್ಪಿರುವುದಾಗಿ ರಷ್ಯಾದ ಸುದ್ದಿ ಸಂಸ್ಥೆ ತಿಳಿಸಿದೆ. ಆದರೆ ಅಧಿಕೃತವಾಗಿ ಸಾವನ್ನಪ್ಪಿರುವುದು ಬಹಿರಂಗವಾಗಿಲ್ಲ. ಈ ನಡುವೆ ಹೆಲಿಕಾಪ್ಟರ್‌ನ ಅವಶೇಷಗಳನ್ನು ರಕ್ಷಣಾ ಹೆಲಿಕಾಪ್ಟರ್‌ಗಳು ಪತ್ತೆಹಚ್ಚಿರುವುದಾಗಿ ರಷ್ಯಾದ ತುರ್ತು ಸಚಿವಾಲಯ ಹೇಳಿದೆ.

Read More

ಮಂಗಳೂರು: ಬಂಟ್ವಾಳ ತಾಲೂಕಿನ ಕಲ್ಪನೆಯ ಕಾಗುಡ್ಡೆ ಎಂಬಲ್ಲಿ ಅಬ್ದುಲ್ ರಹ್ಮಾನ್ ಅವರನ್ನು ಮೇ 27ರಂದು ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಠಾಣೆಯ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.ಬಂಧಿತ ಆರೋಪಿಯನ್ನು ಪುದು ಗ್ರಾಮದ ಸಚಿನ್ ಯಾನೆ ಸಚ್ಚು ರೊಟ್ಟಿಗುಡ್ಡೆ (32) ಎಂದು ಗುರುತಿಸಲಾಗಿದೆ. ಆರೋಪಿಯನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿ, ಹೆಚ್ಚಿನ ವಿಚಾರಣೆಗೆ ಮತ್ತೆ ಪೊಲೀಸ್ ಕಸ್ಟಡಿಗೆ ಪಡೆದುಕೊಂಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೂ 12 ಮಂದಿಯನ್ನು ಪೊಲೀಸರು ಬಂಧಿಸಿದ್ದು, ತನಿಖೆ ಮುಂದುವರಿದಿದೆ.

Read More

ಹೊಸದಿಲ್ಲಿ: ಮಂಗಳೂರಿನ ಹಳೆ ಬಂದರಿನಲ್ಲಿ ನಿರ್ಮಿಸಲು ಉದ್ದೇಶಿಸಿರುವ ಪ್ರತ್ಯೇಕ ಲಕ್ಷದ್ವೀಪ ಜೆಟ್ಟಿ ನಿರ್ಮಾಣ ಯೋಜನೆ ಮಂಜೂರಾತಿ ಪಡೆದು ಮೂರು ವರ್ಷ ಕಳೆದಿದೆ. ಇನ್ನು ಕೂಡ ಪರಿಸರ ಇಲಾಖೆ ಸಹಿತ ರಾಜ್ಯ ಸರಕಾರದ ಅಗತ್ಯ ಅನುಮತಿ ಬಾಕಿಯಿದೆ. ಈ ವಿಳಂಬ ನೀತಿಯಿಂದ ಮಹತ್ವದ ಯೋಜನೆ ಅನುಷ್ಠಾನ ಸಾಧ್ಯವಾಗಿಲ್ಲ ಎಂದು ಸಂಸದ ಬ್ರಿಜೇಶ್ ಚೌಟ ಹೇಳಿದ್ದಾರೆ.ಶುಕ್ರವಾರ ಲೋಕಸಭೆಯಲ್ಲಿ ಈ ವಿಷಯ ಪ್ರಸ್ತಾಪಿಸಿದ ಅವರು ಬಂದರು ಸಚಿವ ಸರ್ಬಾನಂದ ಸೋನೋವಾಲ್‌ರ ಗಮನಸೆಳೆದಿದ್ದಾರೆ.  ಸಂಸತ್ತಿನಲ್ಲಿ ನಿಯಮ 377ರಡಿ ವಿಷಯ ಪ್ರಸ್ತಾಪಿಸಿರುವ ಬ್ರಿಜೇಶ್ ಚೌಟ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ ಸಾಗರಮಾಲಾ-1 ಯೋಜನೆಯಡಿ ಮಂಗಳೂರಿನಿಂದ ಲಕ್ಷದ್ವೀಪಕ್ಕೆ ಸರಕು ಸಾಗಣೆ ಹಾಗೂ ವ್ಯಾಪಾರ-ವಹಿವಾಟು ವೃದ್ಧಿಸುವ ಉದ್ದೇಶದಿಂದ ಮಂಗಳೂರಿನ ಹಳೆ ಬಂದರಿ ನಲ್ಲಿ ಪ್ರತ್ಯೇಕ ಲಕ್ಷದ್ವೀಪ ಜೆಟ್ಟಿ ನಿರ್ಮಾಣ ಯೋಜನೆಯನ್ನು 2022 ಘೋಷಣೆ ಮಾಡಲಾಗಿತ್ತು. 2023ರಲ್ಲಿ ಟೆಂಡರ್ ಪ್ರಕ್ರಿಯೆ ಕೂಡ ನಡೆದಿತ್ತು. ಆ ಬಳಿಕ ಈ ಯೋಜನೆ ಅನುಷ್ಠಾನಕ್ಕೆ ಬರುವಲ್ಲಿ ಯಾವುದೇ ಆಡಳಿತಾತ್ಮಕ ಕ್ರಮಗಳಾಗಿಲ್ಲ ಎಂದು ಹೇಳಿದ್ದಾರೆ.  …

Read More

ಮಂಗಳೂರು: ದ.ಕ.ಜಿಲ್ಲೆಯಲ್ಲಿ ನಾನ್-ಸಿಆರ್‌ಝಡ್ ಪ್ರದೇಶದಲ್ಲಿ ಗುರುತಿಸಿ ಮಂಜೂರಾಗಿರುವ 15 ಮರಳು ಬ್ಲಾಕ್‌ಗಳಲ್ಲಿನ ಮರಳು ದಾಸ್ತಾನನ್ನು ಸಾರ್ವಜನಿಕರಿಗೆ, ಅಭಿವೃದ್ಧಿ ಕಾಮಗಾರಿಗಳಿಗೆ ಡಿಕೆ ಸ್ಯಾಂಡ್ ಬಝಾರ್ ಆ್ಯಪ್ ಮೂಲಕ ಪೂರೈಸಲು ಮರಳು ಉಸ್ತುವಾರಿಯ ಜಿಲ್ಲಾ ಸಮಿತಿಯಲ್ಲಿ ತೀರ್ಮಾನಿಸಲಾಗಿದೆ.ಮರಳನ್ನು ಸಾಗಾಟ ಮಾಡಲು ಇಚ್ಚಿಸುವವರು ತಮ್ಮ ವಾಹನವನ್ನು ಜಿಲ್ಲಾ ವ್ಯಾಪ್ತಿಯಲ್ಲಿ ಅಭಿವೃದ್ಧಿಪಡಿಸಿ ರುವ DK SAND BAZAAR APPನಲ್ಲಿ ನೋಂದಾಯಿಸಬಹುದು.15 ಮರಳು ಬ್ಲಾಕ್‌ಗಳಲ್ಲಿ 3,30,405 ಮೆ.ಟನ್ ಪರಿಸರ ವಿಮೋಚನಾ ಪತ್ರದಲ್ಲಿ ಮರಳು ಗಣಿಗಾರಿಕೆ ಮಾಡಲು ಲಭ್ಯವಿದ್ದು, ಪರಿಸರ ವಿಮೋಚನಾ ಪತ್ರದನ್ವಯ ಪ್ರತಿ ವರ್ಷ ಜೂನ್‌ 5ರಿಂದ ಅಕ್ಟೋಬರ್ 15ರವರೆಗೆ ಮರಳು ಗಣಿ ಗುತ್ತಿಗೆ ಪ್ರದೇಶದಲ್ಲಿ ಮರಳು ಗಣಿಗಾರಿಕೆ ನಿಷೇಧವಿರುತ್ತದೆ. ಅದರಂತೆ ಜಿಲ್ಲೆಯಲ್ಲಿ ಗಣಿ ಗುತ್ತಿಗೆ ಪ್ರದೇಶದಲ್ಲಿ ಮರಳುಗಾರಿಕೆ ನಿಷೇಧವಿರುತ್ತದೆ. ಮರಳು ದಾಸ್ತಾನು ಕೇಂದ್ರಗಳಲ್ಲಿ ಲಭ್ಯವಿರುವ ಒಟ್ಟು 27,550 ಮೆ.ಟನ್‌ಗಳಲ್ಲಿ ಮಾರ್ಚ್ 2025ರಿಂದ ಇಲ್ಲಿಯವರೆಗೆ 12,126 ಮೆ.ಟನ್ ಅನ್ನು ಬುಕಿಂಗ್ ಆಪ್ ಮುಖಾಂತರ ವಿತರಿಸಲಾಗಿದೆ.          ಮರಳು ಗಣಿ ಗುತ್ತಿಗೆ ದಾಸ್ತಾನು ಕೇಂದ್ರದಲ್ಲಿ ಲಭ್ಯವಿರುವ…

Read More

ವಕೀಲೆ, ಸಾಹಿತಿ ರಾಜಶ್ರೀ ಜಯರಾಜ್ ಪೂಜಾರಿ ನಿಧನಮಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ ರಾಜಶ್ರೀ ಜಯರಾಜ್ ಪೂಜಾರಿ (ವ.25)ಯವರು ಇಂದು ಕೊನೆಯುಸಿರೆಳೆದಿದ್ದಾರೆ.ಇವರು ಹಲವು ಸಮಯಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು ಎಂದು ತಿಳಿದುಬಂದಿದೆ. ಆದರೆ ಇಂದು ಅವರ ಆರೋಗ್ಯದಲ್ಲಿ ಏರುಪೇರಾದ ಕಾರಣ ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ದಾರಿ ಮಧ್ಯದಲ್ಲೇ ಪ್ರಾಣಬಿಟ್ಟಿದ್ದಾರೆ. ಎಲ್ಲರೊಂದಿಗೆ ಉತ್ತಮ ಬಾಂಧವ್ಯವನ್ನು ಇಟ್ಟುಕೊಂಡು, ನಗುಮೊಗದಿಂದ ಎಲ್ಲರಿಗೂ ಚಿರಪರಿಚಿತರಾಗಿರುವ, ಹವ್ಯಾಸದಲ್ಲಿ ಕವಯಿತ್ರಿ, ಬರಹಗಾರ್ತಿ, ಲೇಖಕಿ, ಯುವಸಾಹಿತಿ, ವಾಗ್ಮಿ, ನಿರೂಪಕಿ, ಕಥಾವಾಚಕಿ, ಹಿನ್ನೆಲೆ ಧ್ವನಿ ಕಲಾವಿದೆ, ಯೋಗಪಟು, ರಂಗಭೂಮಿ ಕಲಾವಿದೆ, ಹವ್ಯಾಸಿ ಪ್ರವಾಸಿ, ಪುಸ್ತಕ ಪ್ರೇಮಿಯಾಗಿ ಹೀಗೆ ಹತ್ತು ಹಲವು ವಿಭಿನ್ನ ಕ್ಷೇತ್ರದಲ್ಲಿ ತನ್ನನ್ನು ತಾನು ತೊಡಗಿಸಿಕೊಂಡು ವೃತ್ತಿಯಲ್ಲಿ ವಕೀಲೆಯಾಗಿರುವ ಸಾಹಿತ್ಯ ಮತ್ತು ಇತರೆ ಕ್ಷೇತ್ರದಲ್ಲಿ ಅಭೂತಪೂರ್ವ ಸಾಧನೆಯನ್ನು ಮಾಡಿದಾಕೆ.ಸರೋಜಿನಿ ಮತ್ತು ಶ ಜಯರಾಜ್ ದಂಪತಿಗಳಿಗೆ ಜನವರಿ 16, 2000 ದಲ್ಲಿ ಬಂಟ್ವಾಳದಲ್ಲಿ ಜನಿಸಿ, ಅಲ್ಲಿಯೇ ತನ್ನ ಪ್ರಾಥಮಿಕ 4 ನೇ ತರಗತಿಯವರೆಗೆ ಶಿಕ್ಷಣವನ್ನು ಪಡೆದು, ಮುಂದೆ ಮಂಗಳೂರಿನ ಎಕ್ಕಾರಿನ ಸಮೀಪದ ಪೆರ್ಮುದೆಯಲ್ಲಿ ವಾಸವಿರುವ ಇವರು ನಂತರ…

Read More

ಕೇರಳದ ಮಾಜಿ ಮುಖ್ಯಮಂತ್ರಿ, ಸಿಪಿಐಎಂ ಪಕ್ಷದ ಪೊಲಿಟ್ ಬ್ಯುರೊ ಮಾಜಿ ಸದಸ್ಯ, ಪುನ್ನಪ್ರ ವಯಲಾರ್ ಸಹಿತ ಹಲವು ಚಾರಿತ್ರಿಕ ಹೋರಾಟಗಳನ್ನು ಮುನ್ನಡಿಸಿದ ಧೀಮಂತ ಕಮ್ಯುನಿಸ್ಟ್ ನಾಯಕ ವಿ ಎಸ್ ಅಚ್ಯುತಾನಂದನ್ ಅವರಿಗೆ ಸಿಪಿಐಎಂ ದ.ಕ. ಜಿಲ್ಲಾ ಸಮಿತಿ ವತಿಯಿಂದ, ಜಿಲ್ಲಾ ಕಚೇರಿ ಎಕೆಜಿ ಭವನದಲ್ಲಿ ಶ್ರದ್ದಾಂಜಲಿ ಸಭೆ ನಡೆಸಲಾಯಿತು. ಸಿಪಿಐಎಂ ದ.ಕ. ಜಿಲ್ಲಾ ಕಾರ್ಯದರ್ಶಿ ಮುನೀರ್ ಕಾಟಿಪಳ್ಳ, ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯರಾದ ವಸಂತ ಆಚಾರಿ, ಸುನಿಲ್ ಕುಮಾರ್ ಬಜಾಲ್, ಹಿರಿಯ ಮುಖಂಡ ವಾಸುದೇವ ಉಚ್ಚಿಲ್ ಶ್ರದ್ದಾಂಜಲಿ ನುಡಿಗಳನ್ನು ಆಡಿದರು, ವಿ ಎಸ್ ಅಚ್ಯುತಾನಂದನ್ ರ ಮಹತ್ವದ ಕೊಡುಗೆಗಳನ್ನು ಸ್ಮರಿಸಿದರು. ಮಾಜಿ ಕಾರ್ಪೊರೇಟರ್ ಗಳಾದ ಜಯಂತಿ ಬಿ ಶೆಟ್ಟಿ, ದಯಾನಂದ ಶೆಟ್ಟಿ, ಮುಂದಾಳುಗಳಾದ ಸುಕುಮಾರ್ ತೊಕ್ಕೊಟ್ಟು, ಜೆ ಬಾಲಕೃಷ್ಣ ಶೆಟ್ಟಿ, ಯೋಗೀಶ್ ಜಪ್ಪಿನಮೊಗರು, ವಸಂತಿ ಕುಪ್ಪೆಪದವು, ಶೇಖರ್ ಕುಂದರ್, ಕೃಷ್ಣಪ್ಪ ಸಾಲಿಯಾನ್, ಮಹಾಬಲ ದೆಪ್ಪಲಿಮಾರ್, ಪ್ರಮೀಳಾ ಕೆ, ಅಸುಂತಾ ಡಿ ಸೋಜ, ಪ್ರಮೀಳಾ ದೇವಾಡಿಗ, ನೋಣಯ್ಯ ಗೌಡ, ರವಿಚಂದ್ರ ಕೊಂಚಾಡಿ ಮತ್ತಿತರರು…

Read More

ದೇಶದ ಪುರೋಗಾಮಿ ಮಹಿಳಾ ಚಳವಳಿಯಾದ ಜನವಾದಿ ಮಹಿಳಾ ಸಂಘಟನೆಯ ಒಂಬತ್ತನೆಯ ದ.ಕ. ಜಿಲ್ಲಾ ಸಮ್ಮೇಳನವು ಜುಲೈ 27 ರಂದು ಮಂಗಳೂರು ನಗರದ ಬಲ್ಮಠದಲ್ಲಿರುವ ಬಿಷಪ್ ಜತ್ತನ್ನ ಸಭಾಂಗಣದಲ್ಲಿ ನಿರ್ಮಿಸಿರುವ ನಾಡೋಜ ಸಾರಾ ಅಬೂಬಕ್ಕರ್ ವೇದಿಕೆಯಲ್ಲಿ ನಡೆಯಲಿದೆ. ಅಂದು ಬೆಳಿಗ್ಗೆ 10:00 ಗಂಟೆಗೆ ಸಮ್ಮೇಳನವನ್ನು ಲೇಖಕಿ, ಪ್ರಾಧ್ಯಾಪಕಿ ಡಾ‌. ಸಬಿತಾ ಬನ್ನಾಡಿ ಉದ್ಘಾಟಿಸಲಿದ್ದಾರೆ. ಸ್ವಾಗತ ಸಮಿತಿಯ ಗೌರವಾಧ್ಯಕ್ಷರಾದ ಖ್ಯಾತ ರಂಗ ಕಲಾವಿದೆ ಗೀತಾ ಸುರತ್ಕಲ್ ಸ್ವಾಗತ ಭಾಷಣ ಮಾಡಲಿದ್ದಾರೆ.‌ ಬರಹಗಾರರು, ಚಿಂತಕರು ಆಗಿರುವ ಚಂದ್ರಕಲಾ ನಂದಾವರ, ಜನವಾದಿ ಮಹಿಳಾ ಸಂಘಟನೆಯ ರಾಜ್ಯ ಕಾರ್ಯದರ್ಶಿ ದೇವಿ, ಉಪಾಧ್ಯಕ್ಷೆ ಕೆ ಎಸ್ ಲಕ್ಷ್ಮಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ಸ್ವಾಗತ ಸಮಿತಿ ಅಧ್ಯಕ್ಷರಾದ ಫ್ಲೇವಿ ಕ್ರಾಸ್ತಾ ಅತ್ತಾವರರವರು ವಹಿಸಲಿದ್ದಾರೆ. ಉದ್ಘಾಟನಾ ಗೋಷ್ಟಿಯ ತರುವಾಯ ಪ್ರತಿನಿಧಿ ಅಧಿವೇಶನ ಜರುಗಲಿದ್ದು, ಜಿಲ್ಲೆಯಲ್ಲಿ ಮಹಿಳೆಯರು ಎದುರಿಸುತ್ತಿರುವ ಜ್ವಲಂತ ಸಮಸ್ಯೆಗಳ ಕುರಿತು ಗಂಭೀರವಾದ ಚರ್ಚೆ ನಡೆದು, ಮುಂಬರುವ ದಿನಗಳಲ್ಲಿ ಕರಾವಳಿ ಜಿಲ್ಲೆಯಲ್ಲಿ ಬಲಿಷ್ಠವಾದ ಮಹಿಳಾ ಚಳುವಳಿಯನ್ನು ಕಟ್ಟಲು ನೂತನ‌…

Read More

ಉಳ್ಳಾಲ: ತಾಲೂಕು ರಚನೆಯಾದ ಬಳಿಕ ತಾಲ್ಲೂಕಿನ ವಿವಿಧೆಡೆ ಪಿನ್ ಕೋಡ್ ಸಮಸ್ಯೆಗಳು ಉಂಟಾಗಿದ್ದು ಇವುಗಳನ್ನು ಸರಿಪಡಿಸುವಂತೆ ಒತ್ತಾಯಿಸಿ ಇಂದು ಡಿವೈಎಫ್ಐ ಮೊಂಟೆಪದವು ಘಟಕ ಉಳ್ಳಾಲ ತಾಲೂಕು ತಹಶೀಲ್ದಾರರಿಗೆ ಮನವಿ ಸಲ್ಲಿಸಲಾಯಿತು. ನರಿಂಗಾನ ಗ್ರಾಮಕ್ಕೆ ಒಳಪಟ್ಟ ಪಿನ್ ಕೋಡ್ ಸಮಸ್ಯೆಗಳು ಕಳೆದ ಕೆಲವು ವರ್ಷಗಳಿಂದ ಕಾಡುತ್ತಿದ್ದು, ಉಳ್ಳಾಲ ತಾಲೂಕು ರಚನೆಯಾದ ಬಳಿಕ ಪ್ರಸ್ತುತ ಇರುವ ಪಿನ್ ಕೋಡ್ ಸರಿಯಾಗಿ ಕೆಲಸ ಮಾಡುತ್ತಿಲ್ಲ. ಅಂಚೆ ಮೂಲಕ ಅಥವಾ ಬೇರೆ ರೀತಿಯ ಪತ್ರ ರವಾನೆ ಹಾಗೂ ಇತರೆ ವಹಿವಾಟುಗಳಿಗೆ ಸದರಿ ಪಿನ್ ಕೋಡ್ ಬಳಸಿದರೆ ಯಥಾತ್ ಪ್ರದೇಶ ಅಥವಾ ವಿಳಾಸ ಹೊರತು ಪಡಿಸಿ ಬೇರೆ ಬೇರೆ ಪ್ರದೇಶಗಳಿಗೆ / ಅಂಚೆ ಕಛೇರಿಗಳಿಗೆ (ಇತರ ಪಿನ್ ಕೋಡ್ ವ್ಯಾಪ್ತಿಗಳಿಗೆ) ಹೋಗಿ ತುಂಬಾ ತಡವಾಗಿ ಬರುತ್ತಿರುತ್ತವೆ. ಅಲ್ಲದೇ ಸ್ಥಳೀಯ ಅಂಚೆಪೇದೆಗಳನ್ನು ನಿರಂತರ ಸಂಪರ್ಕಿಸಬೇಕಾದ ಪರಿಸ್ಥಿತಿಯೂ ಉಂಟಾಗುತ್ತದೆ. ಇದರಿಂದ ಈ ಪ್ರದೇಶದ ಜನರಿಗೆ ಅಂಚೆ ವ್ಯವಸ್ಥೆಯು ಇದ್ದೂ ಇಲ್ಲದಂತಾಗಿರುತ್ತದೆ ಎಂದು ಡಿವೈಎಫ್ಐ ಆರೋಪಿಸಿದೆ. ಅಲ್ಲದೇ ಇಲ್ಲಿ ಸ್ಥಳೀಯವಾಗಿ ಆಧಾರ್ ಆಧುನೀಕರಿಸಲು…

Read More

ಮಂಗಳೂರು : ಕುತ್ತಾರು ಸಮೀಪ ಹೊರರಾಜ್ಯದ ಯುವತಿಗೆ ಅತ್ಯಾಚಾರವೆಸಗಿದ ಪ್ರಕರಣಕ್ಕೆ ಸಂಬಂಧಿಸಿ ಜೈಲುಪಾಲಾಗಿದ್ದ ಆರೋಪಿಯಿಂದ ಸಹಖೈದಿಗಳು ಹಫ್ತಾ ವಸೂಲಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿನಾಲ್ವರು ಸಹ ಕೈದಿಗಳ ವಿರುದ್ಧ ಕೆ-ಕೋಕಾ (ಕರ್ನಾಟಕ ಕಂಟ್ರೋಲ್ ಆಫ್ ಆರ್ಗನೈಸ್ಡ್ ಆ್ಯಕ್ಟ್) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ. ಉಳ್ಳಾಲ ಠಾಣಾ ವ್ಯಾಪ್ತಿಯಲ್ಲಿ ಎ.18 ರಂದು ನಡೆದಿದ್ದ ಹೊರರಾಜ್ಯದ ಯುವತಿಯ ಸಾಮೂಹಿಕ ಅತ್ಯಾಚಾರದಲ್ಲಿ ಕುಂಪಲ ನಿವಾಸಿ ಮಿಥುನ್‌ ಸೇರಿದಂತೆ ಮೂವರ ಬಂಧನವಾಗಿತ್ತು. ಜೈಲುಪಾಲಾಗಿದ್ದ ಮಿಥುನ್ ಎಂಬಾತನಿಗೆ ಸಹ ಕೈದಿಗಳಾದ ಧನು ಯಾನೆ ಧನುಷ್ ಭಂಡಾರಿ, ಸಚಿನ್ ತಲಪಾಡಿ, ದಿಲೇಶ್ ಬಂಗೇರ ಯಾನೆ ದಿಲ್ಲು, ಲಾಯಿ ವೇಗಸ್ ಎಂಬವರು ಜು.9ರಂದು ಸಂಜೆ 5ಕ್ಕೆ ಜೈಲು ಸಿಬ್ಬಂದಿಯ ಕಣ್ತಪ್ಪಿಸಿ ಹಲ್ಲೆ ನಡೆಸಿ 50 ಸಾವಿರ ರೂ. ನೀಡುವಂತೆ ಒತ್ತಾಯಿಸಿದ್ದರು. ಅಲ್ಲದೆ ಜೈಲು ಅಧಿಕಾರಿಗಳಿಗೆ ಹೇಳಿದರೆ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದರು. ಹಾಗಾಗಿ ಮಿಥುನ್ ಪ್ರಾಣಭಯದಿಂದ ದೂರು ನೀಡದೆ ಹಲ್ಲೆ ನಡೆಸಿದ್ದ ಕೈದಿ…

Read More

ಮಂಗಳೂರು: ನಗರದ ಖಾಸಗಿ ಬಸ್ ಮತ್ತು ಬಸ್ ನಿಲ್ದಾಣಗಳಲ್ಲಿ ಹಾಗೂ ಇತರ ಜನಸಂದಣಿಗಳಿರುವ ಪ್ರದೇಶಗಳಲ್ಲಿ ಪಿಕ್ ಪಾಕೆಟ್ ಪ್ರಕರಣಗಳು ಹೆಚ್ಚಾಗುತ್ತಿವೆ. ಇದರಿಂದ ಬಸ್ ನೌಕರರ ಮೇಲೆ ಪ್ರಯಾಣಿ ಕರು ಅನುಮಾನ ಮೂಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಬಸ್ ನೌಕರರ ಭದ್ರತೆಯ ಉದ್ದೇಶದಿಂದ ಪೊಲೀಸ್ ಇಲಾಖೆ ಇದನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ರಾಣಿ ಅಬ್ಬಕ್ಕ ಖಾಸಗಿ ಬಸ್ ನೌಕರರ ಸಂಘವು ಬುಧವಾರ ಮಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಮನವಿ ಸಲ್ಲಿಸಿದೆ. ಪಿಕ್‌ಪಾಕೆಟ್ ತಡೆಗಟ್ಟುವ ನಿಟ್ಟಿನಲ್ಲಿ ಬಸ್ ನಿಲ್ದಾಣಗಳಲ್ಲಿ ಸಿಸಿಟಿವಿ ಕ್ಯಾಮರಾ ವ್ಯವಸ್ಥೆ ಬಲಪಡಿಸುವುದು, ಪೊಲೀಸರ ಪೇಟ್ರೋಲಿಂಗ್ ಹೆಚ್ಚಿಸುವುದು ಹಾಗೂ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವಂತಹ ಕ್ರಮಗಳನ್ನು ಕೈಗೊಳ್ಳಲು ಸಂಘ ಆಗ್ರಹಿಸಿದೆ. ಈ ಸಂದರ್ಭ ಸಂಘದ ಅಧ್ಯಕ್ಷ ಉಸ್ಮಾನ್ ಅಲ್ತಾಫ್, ಜೊತೆ ಕಾರ್ಯದರ್ಶಿ ಡೆರಿಕ್ ಕ್ಯೂವೆಲ್ಲೋ, ರವೀಂದ್ರ ರವಿ, ಸದಸ್ಯರಾದ ರಫೀಕ್, ಕಿರಣ್ ಡಿಸೋಜ, ವಿಜಯ್, ರೋಹನ್ ನಿಯೋಗದಲ್ಲಿದ್ದರು.

Read More