ತಲಪಾಡಿ: ತಲಪಾಡಿಯ ಖ್ಯಾತ ಬಾಣಸಿಗ, ಕಬ್ಬಡ್ಡಿ ಪಟು , ಸಹಾಯಕ ಅರ್ಚಕ ಶ್ರೀಹರಿ ಭಟ್ (53) ಹೃದಯಾಘಾತಕ್ಕೊಳಗಾಗಿ ಭಾನುವಾರ ಸಂಜೆ ನಿಧನ ಹೊಂದಿದ್ದಾರೆ.ಉತ್ತಮ ಕಬ್ಬಡ್ಡಿ ಪಟುವಾಗಿದ್ದ ಅವರು ಖ್ಯಾತ ಪಾಕತಜ್ಞರೂ ಹೌದು. ಉಳ್ಳಾಲ ಭಾಗದ ದೇವಸ್ಥಾನಗಳಲ್ಲಿ ಸೇರಿದಂತೆ ಕೊಲ್ಯ ಮೂಕಾಂಬಿಕಾ ದೇವಸ್ಥಾನ, ಕುತ್ತಾರು ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಬಾಣಸಿಗರಾಗಿ ಹಲವು ವರ್ಷಗಳ ಕಾಲ ಈ ಹಿಂದೆ ಕಾರ್ಯನಿರ್ವಹಿಸಿದ್ದರು. ದೇವಿಪುರ ತಲಪಾಡಿಯ ದುರ್ಗಾಪರಮೇಶ್ವರಿ ಯುವಕ ಸಂಘ ಸಕ್ರಿಯ, ಅವಿನಾಶಿ ಭಜನಾ ಮಂದಿರ ಸದಸ್ಯರಾಗಿ ಶಿವಳ್ಳಿ ಸ್ಪಂಧನಾ ಮಾಜಿ ಅಧ್ಯಕ್ಷರಾಗಿಯೂ ಸಾಮಾಜಿಕವಾಗಿ ಗುರುತಿಸಿಕೊಂಡಿದ್ದರು. ಅವರು ಪತ್ನಿ ಓರ್ವ ಪುತ್ರಿ ಹಾಗೂ ಓರ್ವ ಪುತ್ರನನ್ನು ಅಗಲಿದ್ದಾರೆ.
Author: UllalaVani
ಉಳ್ಳಾಲ: ಸಾಮಾಜಿಕ ಚಟುವಟಿಕೆಗಳಲ್ಲಿ ಮುಂಚೂಣಿಯಲ್ಲಿರುವ ಕುತ್ತಾರು ದುರ್ಗಾವಾಹಿನಿ ಮಹಿಳಾ ಮಂಡಲ ಇಡೀ ಊರಿಗೆ ಆದರ್ಶವಾಗಿದೆ. 25 ನೇ ವರ್ಷದ ಬೆಳ್ಳಿಹಬ್ಬವನ್ನು ಆಚರಿಸುತ್ತಿರುವ ಸಂಘಟನೆ ಸ್ವಂತ ಕಟ್ಟಡದ ದಶಮಾನೋತ್ಸವವನ್ನು ಆಚರಿಸುತ್ತಿದೆ. ಬೆಳ್ಳಿಹಬ್ಬದ ಪ್ರಯುಕ್ತ 12 ತಿಂಗಳಿಗೆ ವಿವಿಧ 12 ಕಾರ್ಯಕ್ರಮಗಳನ್ನು ಆಯೋಜಿಸಿವ ಮೂಲಕ ಮಾದರಿಯಾಗಿದೆ ಎಂದು ಶ್ರೀ ರಾಜರಾಜೇಶ್ವರಿ ಸಿದ್ಧಿವಿನಾಯಕ ದೇವಸ್ಥಾನ ಕುತ್ತಾರು ಇದರ ಪ್ರ.ಕಾ ಹಾಗೂ ದುರ್ಗಾವಾಹಿನಿ ಮಹಿಳಾ ಮಂಡಲದ ಗೌರವ ಸಲಹೆಗಾರ ಪವಿತ್ರ ಗಟ್ಟಿ ಕುತ್ತಾರ್ ಹೇಳಿದರು.ಅವರು ಕುತ್ತಾರು ದುರ್ಗಾವಾಹಿನಿ ಮಹಿಳಾ ಮಂಡಲದ ಬೆಳ್ಳಿಹಬ್ಬದ ಪ್ರಯುಕ್ತ ಹಮ್ಮಿಕೊಳ್ಳಲಾದ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದರು.10ನೇ ತಿಂಗಳ 10ನೇ ಕಾರ್ಯಕ್ರಮವಾದ ಕ್ರೀಡಾಕೂಟವನ್ನು ಮಹಿಳಾ ಮಂಡಳಿ ಹಮ್ಮಿಕೊಂಡಿದೆ. ನ.24 ರಂದು ಸಾಂಸ್ಕೃತಿಕ ನೃತ್ಯ ಕಾರ್ಯಕ್ರಮವನ್ನು ಆಯೋಜಿಸಿದ್ದು, ಕಾರ್ಯಕ್ರಮದ ಯಶಸ್ಸಿಗಾಗಿ ರಾತ್ರಿ ಹಗಲು ದುಡಿದ ಎಲ್ಲಾ ಮಹಿಳಾ ಕರ‍್ಯಕರ್ತೆಯರಿಗೆ ದೈವ ದೇವರು ಆರೋಗ್ಯ ಸುಖ ಶಾಂತಿ ನೆಮ್ಮದಿಯನ್ನು ಕರುಣಿಸಲಿ ಎಂದು ಹಾರೈಸಿದರು.ಕಾರ್ಯಕ್ರಮ ಉದ್ಘಾಟಿಸಿದ ಕೊಡಿಯಾಲ್‌ಬೈಲ್ ಶಾರದಾ ವಿದ್ಯಾಲಯ ಶಿಶು ಶಿಕ್ಷಣ ವಿಭಾಗ ಮುಖ್ಯಸ್ಥೆ ಉಜ್ವಲ್ ರಾಜೇಶ್…
ಕುತ್ತಾರು : ರಸ್ತೆ ದಾಟುತ್ತಿದ್ದ ಹಿರಿಯ ನಾಗರಿಕ ಪಾದಚಾರಿಗೆ ಮೂವರು ಸಂಚರಿಸುತ್ತಿದ್ದ ಸ್ಕೂಟರ್ ಢಿಕ್ಕಿ ಹೊಡೆದು ಗಂಭೀರ ಗಾಯಗೊಂಡಿರುವ ಘಟನೆ ಕುತ್ತಾರು ವೆಜಿನೇಷನ್ ಹಾಗೂ ಅಪೋಲೋ ಮೆಡಿಕಲ್ ಎದುರುಗಡೆ ಗುರುವಾರ ಸಂಜೆ ವೇಳೆ ಸಂಭವಿಸಿದೆ.ಸಂತೋಷನಗರ ನಿವಾಸಿ ಚಂದ್ರಹಾಸ್ (74) ಗಾಯಗೊಂಡವರು. ಮನೆಗೆ ತೆರಳಲು ರಸ್ತೆ ದಾಟುವ ಸಂದರ್ಭ ಕುತ್ತಾರು ಕಡೆಯಿಂದ ತೊಕ್ಕೊಟ್ಟುವಿನತ್ತ ತೆರಳುತ್ತಿದ್ದ ಮೂವರಿದ್ದ ಸ್ಕೂಟರ್ ಢಿಕ್ಕಿ ಹೊಡೆದಿದೆ. ಘಟನೆಗೆ ಸ್ಕೂಟರ್ ಸವಾರರ ಅತಿ ವೇಗ ಹಾಗೂ ಅಜಾಗರೂಕತೆಯ ಚಾಲನೆಯೇ ಕಾರಣವಾಗಿದೆ. ಮಂಗಳೂರು ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುತ್ತಾರು: ಬೈಕ್ , ರಿಕ್ಷಾ ಹಾಗೂ ಕಾರಿನ ನಡುವೆ ಸಂಭವಿಸಿದ ಸರಣಿ ಅಪಘಾತದಲ್ಲಿ ಬೈಕ್ ಸವಾರ ಗಾಯಗೊಂಡ ಘಟನೆ ತೊಕ್ಕೊಟ್ಟು ಸಮೀಪದ ಚೆಂಬುಗುಡ್ಡೆ ಮೆಸ್ಕಾಂ ಎದುರುಗಡೆ ಗುರುವಾರ ತಡರಾತ್ರಿ ವೇಳೆ ಸಂಭವಿಸಿದೆ.ಉಳ್ಳಾಲ ನಿವಾಸಿ ಗುರುಪ್ರಸಾದ್ (25) ಗಾಯಗೊಂಡವರು. ತೊಕ್ಕೊಟ್ಟುವಿನಿಂದ ಕುತ್ತಾರು ಕಡೆಯತ್ತ ನಾರಾಯಣ ರಾವ್ ಎಂಬವರು ಚಲಾಯಿಸುತ್ತಿದ್ದ ರಿಕ್ಷಾ, ಹಿಂಬದಿಯಲ್ಲಿದ್ದ ಬೈಕ್ ಅದನ್ನು ಓವರ್ ಟೇಕ್ ಮಾಡುತ್ತಿದ್ದಂತೆ ಎದುರಿನಿಂದ ಬಂದ ಸ್ವಿಫ್ಟ್ ಕಾರು ಬೈಕಿಗೆ ಢಿಕ್ಕಿ ಹೊಡೆದಿದೆ. ಪರಿಣಾಮ ಬೈಕ್ ಹಿಂಬದಿಯಲ್ಲಿದ್ದ ರಿಕ್ಷಾಗೂ ಢಿಕ್ಕಿ ಹೊಡೆದಿದೆ. ಬೈಕ್ ನ ಎದುರು ಮತ್ತು ಹಿಂಭಾಗ ಎರಡೂ ಕಡೆಗಳಲ್ಲಿ ನುಜ್ಜುಗುಜ್ಜಾಗಿದ್ದು, ಕಾರಿನ ಮುಂಭಾಗ ಸಂಪೂರ್ಣ ನುಜ್ಜುಗುಜ್ಜಾಗಿದೆ. ಗಾಯಾಳುವನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಬೈಕ್ ಸವಾರನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಉಳ್ಳಾಲ: ನಾಟೆಕಲ್ ಕಣಚೂರ್ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಶಿಶು ಚಿಕಿತ್ಸಾ ವಿಭಾಗವು ಶಿಶು ಗ್ಯಾಸ್ಟ್ರೋಂಟರೋಲಜಿಯ ನಿರಂತರ ವೈದ್ಯಕೀಯ ಶಿಕ್ಷಣ ಕರ‍್ಯಗಾರ- 2024 ಕರಾವಳಿ ಶಿಶು ಗ್ಯಾಸ್ಟ್ರೋಂಟರೋಲಜಿಯ ಪ್ರಸ್ತುತ ಸ್ಥಿತಿಯ ಕುರಿತು ಒಂದು ದಿನದ ಕಾರ್ಯಗಾರವನ್ನು ಅ.26 ರ ಶನಿವಾರ ಕಣಚೂರು ವೈದ್ಯಕೀಯ ಕಾಲೇಜಿನ ಮೂರನೇ ಮಹಡಿಯ ಆಡಿಟೋರಿಯಂನಲ್ಲಿ ನಡೆಯಲಿದೆ ಎಂದು ಕಣಚೂರ್ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಮಕ್ಕಳ ತಜ್ಞ ಹಾಗೂ ನವಜಾತ ಶಿಶು ಗ್ಯಾಸ್ಟ್ರೋಎಂಟರೋಲಜಿಸ್ಟ್ ಡಾ. ಗೌತಮ್ ಪೈ ತಿಳಿಸಿದ್ದಾರೆ. ಗುರುವಾರ ತೊಕ್ಕೊಟ್ಟು ಪ್ರೆಸ್ ಕ್ಲಬ್ ನಲ್ಲಿ ನಡೆಸಿದ ಸುದ್ದಿ ಗೋಷ್ಠಿ ಯಲ್ಲಿ ಮಾಹಿತಿ ನೀಡಿದ ಅವರು ಈ ಕಾರ್ಯಕ್ರಮದ ನೇತೃತ್ವವನ್ನು ಕಣಚೂರು ವೈದ್ಯಕೀಯ ಸಂಸ್ಥೆಯ ಅಧ್ಯಕ್ಷ ರಾದ ಡಾ. ಯು.ಕೆ. ಮೋನು ಮತ್ತು ನಿರ್ದೇಶಕರಾದ ಅಬ್ದುರಹಿಮಾನ್ ವಹಿಸಲಿದ್ದಾರೆ ಎಂದರು.ಕರ‍್ಯಗಾರದಲ್ಲಿ ಮಕ್ಕಳ ಯಕೃತ್ ಕುರಿತಾದ ವಿವಿಧ ರೀತಿಯ ಕಾಯಿಲೆಗೆ ಸಂಬಂಧಿಸಿದ ಪ್ರಮುಖ ವಿಷಯಗಳನ್ನು ಚರ್ಚಿಸಲಾಗುತ್ತಿದ್ದು, ಇದರಲ್ಲಿ ಶಿಶು ಗ್ಯಾಸ್ಟ್ರೋಂಟರೋಲಜಿಯ ಕಡೆಗೆ ವೈದ್ಯಕೀಯ ಕ್ಷೇತ್ರದಲ್ಲಿರುವ ನಿರ್ಲಕ್ಷ್ಯತೆಯನ್ನು ಪರಿಹರಿಸುವ ಪ್ರಯತ್ನವನ್ನು ಈ ಕಾರ್ಯಗಾರದ ಮೂಲಕ…
ಉಳ್ಳಾಲ : ತುಳುನಾಡಿನಲ್ಲಿ ದೈವಾರಾಧನೆಗೆ ಪ್ರಾಮುಖ್ಯತೆ ಹೆಚ್ಚಿದ್ದು, ಕೌಟುಂಬಿಕ ಭದ್ರತೆ, ಸಾಮಾಜಿಕ ನ್ಯಾಯಕ್ಕಾಗಿ ದೈವಾರಾಧನೆಯ ಪರಿಕಲ್ಪನೆ ಜನರ ಮನದಲ್ಲಿ ದಟ್ಟವಾಗಿದೆ. ಇಂತಹ ನಂಬಿಕೆಯನ್ನಿಟ್ಟುಕೊಂಡು ಅನಾದಿ ಕಾಲದಿಂದ ಆಚರಿಸಿಕೊಂಡು ಬಂದಿರುವ ಶ್ರೀ ಕೊಟ್ಟಾರ ಸ್ಥಾನ, ಮಲರಾಯ ದೈವಸ್ಥಾನದ ಭಂಡಾರಮನೆ ದೈವಚಿತ್ತದಂತೆ ಮುಂದಿನ ಬಂಡಿಯ ಮೊದಲು ನಿರ್ಮಾಣವಾಗಲಿ ಎಂದು ಬ್ರಹ್ಮಶ್ರೀ ಉಚ್ಚಿಲತ್ತಾಯ ನೀಲೇಶ್ವರ ಪದ್ಮನಾಭ ತಂತ್ರಿಗಳು ಅಭಿಪ್ರಾಯ ಪಟ್ಟರು.ಉಳ್ಳಾಲ ಬಂಡಿಕೊಟ್ಯದ ಶ್ರೀ ಕ್ಷೇತ್ರ ಕೊಟ್ಟಾರ ಸ್ಥಾನ,ಶ್ರೀ ಮಲರಾಯ ದೈವಸ್ಥಾನದಲ್ಲಿ ದೈವದ ಅಪ್ಪಣೆಯಂತೆ 2025 ರ ಬಂಡಿ ಉತ್ಸವದ ಒಳಗಾಗಿ ಸುಮಾರು 1.25 ಕೋಟಿ ವೆಚ್ಚದಲ್ಲಿ ಮಲರಾಯ ಮತ್ತು ಪರಿವಾರ ದೈವಗಳ ನೂತನ ಭಂಡಾರ ಮನೆ ನಿರ್ಮಾಣವಾಗಲಿದ್ದು ,ಗುರುವಾರದಂದು ಭಂಡಾರ ಮನೆ ಕಾಮಗಾರಿಗೆ ಬ್ರಹ್ಮಶ್ರೀ ಉಚ್ಚಿಲತ್ತಾಯ ನೀಲೇಶ್ವರ ಪದ್ಮನಾಭ ತಂತ್ರಿಗಳ ಉಪಸ್ಥಿತಿಯಲ್ಲಿ ಶಿಲಾನ್ಯಾಸ ಕಾರ್ಯಕ್ರಮ ನಡೆಯಿತು.ಭಾರತೀಯ ಸಂಸ್ಕೃತಿಯು ಧರ್ಮದ ಆಧಾರದಲ್ಲೇ ಇದೆಯೇ ಹೊರತು ಮತದ ಆಧಾರದಲ್ಲಿಲ್ಲ. ಧರ್ಮದ ಸೂಕ್ಷ್ಮತೆಯನ್ನು ಅರಿತು ಜೀವನದಲ್ಲಿ ಅವುಗಳನ್ನು ಅಳವಡಿಸಿಕೊಳ್ಳಬೇಕು. ಪುರಾತನ ಕಾಲದಿಂದಲೇ ಈ ಮಣ್ಣಿನಲ್ಲಿ ದೈವಗಳ ಆರಾಧನೆಗೆ ಹೆಚ್ಚಿನ ಪ್ರಾಮುಖ್ಯತೆ…
ಉಳ್ಳಾಲ: ಶಾಲಾ ಮಕ್ಕಳನ್ನು ಕೊಂಡೊಯ್ಯುವ ರಿಕ್ಷಾ ಮತ್ತು ಪಿಕಪ್ ನಡುವೆ ಸಂಭವಿಸಿದ ಅಪಘಾತದಲ್ಲಿ 11ರ ಹರೆಯದ ನಾಲ್ಕನೇ ತರಗತಿ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಬೆಳ್ಮ ಗ್ರಾಮದ ಕಲ್ಲಪಾದೆ ಎಂಬಲ್ಲಿ ಇಂದು ಸಂಭವಿಸಿದೆ. ಬಡಕಬೈಲು ಮಹಮ್ಮದ್ ಬಿ ಮೋನು ಮತ್ತು ಮುನ್ಝಿಯಾ ದಂಪತಿ ಪುತ್ರಿ ಆಯಿಷಾ ವಹಿಬಾ (11) ಮೃತ ವಿದ್ಯಾರ್ಥಿನಿ. ಮದಕ ಭಾಗದಿಂದ ದೇರಳಕಟ್ಟೆ ನೇತಾಜಿ ಶಾಲೆಗೆ ಮಕ್ಕಳನ್ನು ಕರೆತರುವ ರಿಕ್ಷಾ ಕಲ್ಲಪಾದೆ ತಲುಪುತ್ತಿದ್ದಂತೆ ಎದುರಿನಿಂದ ಅತಿ ವೇಗ ಹಾಗೂ ಅಜಾಗರೂಕತೆಯಿಂದ ಬಂದ ಪಿಕಪ್ ವಾಹನ ಢಿಕ್ಕಿ ಹೊಡೆದಿದೆ. ಪರಿಣಾಮ ಆಯಿಷಾ ಗಂಭೀರವಾಗಿ ಗಾಯಗೊಂಡು, ಆಸ್ಪತ್ರೆಗೆ ಸಾಗಿಸುವ ದಾರಿಮಧ್ಯೆ ಮೃತಪಟ್ಟಿದ್ದಾಳೆ. ರಿಕ್ಷಾದಲ್ಲಿದ್ದ ಇತರೆ ನಾಲ್ವರು ವಿದ್ಯಾರ್ಥಿಗಳು ಅಲ್ಪಸ್ವಲ್ಪ ಗಾಯಗೊಂಡಿದ್ದಾರೆ. ರಿಕ್ಷಾ ಚಾಲಕನಿಗೂ ಗಾಯವಾಗಿದೆ. ಗಾಯಾಳುಗಳನ್ನು ದೇರಳಕಟ್ಟೆ ಕೆ.ಎಸ್.ಹೆಗ್ಡೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ವಿದ್ಯಾರ್ಥಿನಿ ಅಪಘಾತದಲ್ಲಿ ಮೃತಪಟ್ಟ ಹಿನ್ನೆಲೆಯಲ್ಲಿ ದೇರಳಕಟ್ಟೆ ನೇತಾಜಿ ಸುಭಾಷ್ ಚಂದ್ರ ಬೋಸ್ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ರಜೆ ಸಾರಲಾಗಿದೆ.
ಉಳ್ಳಾಲ: ಹಣದ ಆಸೆಯಿಂದ ಹೆಣ ಸುಡುವವರಿಬ್ಬರ ಗಲಾಟೆ ತಾರಕಕ್ಕೇರಿತ್ತು, ಉಳ್ಳಾಲ ಭಾಗದಲ್ಲಿ ಹಿಂದು ಅಂತಿಮ ಸಂಸ್ಕಾರ ನಡೆಸಲು ಆರ್ಥಿಕವಾಗಿ ದುರ್ಬಲರಿಗೆ ವಿಧಿಯೇ ಇಲ್ಲ ಅಂದಾಗ ಎಲ್ಲರಿಗೆ ಎದುರಾಗಿ ನಿಂತು ಧೈರ್ಯ ತೋರಿ ಉಚಿತ ಅಂತಿಮ ಸಂಸ್ಕಾರ ನಡೆಸಿದವರು ಬಾಬು ಪಿಲಾರ್. 2024ರ ಅ.20ಕ್ಕೆ ಜೀವನದುದ್ದಕ್ಕೂ ಸೇವೆ ನಡೆಸಿದ 4,500 ಮೃತದೇಹಗಳಾಗಿದೆ ಅನ್ನುವುದು ಅವರು ಬರೆದಿಟ್ಟ ಕ್ಯಾಲೆಂಡರಿನಲ್ಲಿ ದಾಖಲಾಗಿದೆ. ಶ್ರೇಷ್ಟ ಮಾನವೀಯತೆ ಮೈಗೂಡಿಸಿದ ಸರಳ ವ್ಯಕ್ತಿತ್ವದ ವ್ಯಕ್ತಿ ಬಾಬು ಪಿಲಾರ್ ಅವರಿಗೆ ಇಂದು ಉಳ್ಳಾಲ ಪ್ರೆಸ್ ಕ್ಲಬ್ ವತಿಯಿಂದ ತಿಂಗಳ ಅತಿಥಿ ಕಾರ್ಯಕ್ರಮದಲ್ಲಿ ಗೌರವಿಸಲಾಯಿತು.ಅಸೈಗೋಳಿ ಅಭಯಾಶ್ರಮದ ಸ್ಥಾಪಕಾಧ್ಯಕ್ಷ ಶ್ರೀನಾಥ್ ಹೆಗ್ಡೆ ಗೌರವಿಸಿದರು. ಅಭಿನಂದನೆ ಸ್ವೀಕರಿಸಿ ಮಾತನಾಡಿ, ಎಸ್ ಎಸ್ ಎಲ್ ಸಿ ನಂತರ ಪೈಂಟಿಂಗ್ ವೃತ್ತಿ ಆರಂಭಿಸಿದವರು, ಅನಿವಾರ್ಯವಾಗಿ ಪೈಂಟಿಂಗ್ ನಲ್ಲಿ ಹೊಸಮನೆಗಳೆರಡರ ನಾಮಫಲಕಗಳನ್ನು ಬರೆಯಲು ಗುತ್ತಿಗೆದಾರರು ಸೂಚಿಸಿದಂತೆ ಬರೆದ ಬರವಣಿಗೆ ಅವರ ವೃತ್ತಿ ಜೀವನ ಬದಲಾಯಿಸಿತು. ಬಟ್ಟೆ ಬ್ಯಾನರ್ ಬರೆಯುವ ಕಾಯಕವನ್ನು ಮುಂದುವರಿಸಿದ ಬಾಬಣ್ಣ ತೊಕ್ಕೊಟ್ಟುವಿನಲ್ಲಿ ಗೋಡೆಯಲ್ಲಿ ಬಟ್ಟೆಗಳನ್ನು ನೇತುಹಾಕುತ್ತಾ 2ಮೀ…
ತೊಕ್ಕೊಟ್ಟು: ಕಲ್ಲಿದ್ದಲು ಬಳಸುತ್ತಿರುವ ಫಿಶ್ ಮಿಲ್‌ಗಳಿಂದಾಗಿ ಕೋಟೆಪುರ, ಮುಳಿಹಿತ್ಲು ಭಾಗದಲ್ಲಿ ವ್ಯಾಪಕವಾಗಿ ಆರೋಗ್ಯ ಸಮಸ್ಯೆಗಳು ಕಾಣಿಸುತ್ತಿದ್ದು, ಸಿಆರ್ ಝೆಡ್ ಕಾನೂನು ಉಲ್ಲಂಘಿಸಿ ನಿರ್ಮಿಸಲಾಗಿರುವ ಕಟ್ಟಡಗಳಿಂದಾಗಿ ನದಿಯೇ ಮುಚ್ಚಿಹೋಗಿ ಕೋಟೆಪುರ-ಮುಳಿಹಿತ್ಲು ನಡುವೆ ದೋಣಿ ಸಂಪರ್ಕವೇ ಇರದಂತಹ ಸ್ಥಿತಿ ನಿರ್ಮಾಣವಾಗಲಿದೆ. ಜಿಲ್ಲಾಡಳಿತ ಕಾನೂನು ಕ್ರಮ ಕೈಗೊಳ್ಳದೇ ಇದ್ದಲ್ಲಿ ಪರಿಸರ ಇಲಾಖೆಯಿಂದ ಹಿಡಿದು ಸ್ಥಳೀಯಾಡಳಿತ, ಜಿಲ್ಲಾಡಳಿತದ ವಿರುದ್ಧ ಪೋಸ್ಟಲ್, ಕರಪತ್ರ, ಸಾಮಾಜಿಕ ಜಾಲತಾಣಗಳ ಮೂಲಕ ಚಳವಳಿಯನ್ನು ನಿರಂತರವಾಗಿ ನಡೆಸಲಿದ್ದೇವೆ ಎಂದು ಡಿವೈಎಫ್ ಐ ಜಿಲ್ಲಾಧ್ಯಕ್ಷ ಬಿ.ಕೆ.ಇಮ್ತಿಯಾಝ್ ಹೇಳಿದ್ದಾರೆ. ತೊಕ್ಕೊಟ್ಟು ಸೇವಾಸೌಧದಲ್ಲಿರುವ ಉಳ್ಳಾಲ ಪ್ರೆಸ್ ಕ್ಲಬ್ ನಲ್ಲಿ ಆಯೋಜಿಸಿದ ಸುದ್ಧಿಗೊಷ್ಠಿಯಲ್ಲಿಸ ಮಾತನಾಡಿದ ಅವರು ಕಲ್ಲಿದ್ದಲು ಬಳಕೆಯಿಂದಾಗಿ ದೀರ್ಘಕಾಲದ ಶ್ವಾಸಕೋಶದ ಕಾಯಿಲೆ, ರಕ್ತದೊತ್ತಡ ಹೃದ್ರೋಗ , ತುರಿಕೆ ಅಲರ್ಜಿ, ಚರ್ಮ ಕೆಂಪಾಗುವ ರೋಗ ಸಾಧ್ಯತೆಗಳಿವೆ ಅನ್ನುವುದು ಮಾಹಿತಿ ಹಕ್ಕಿನಡಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಪಡೆದ ವರದಿಯಿಂದ ಬಹಿರಂಗವಾಗಿದೆ. ಯುನೈಟೆಡ್ ಮೆರೈನ್ ಮತ್ತು ಇಂಡೋ ಫಿಶ್ ಮಿಲ್ ಕಲ್ಲಿದ್ದಲು ಬಳಸುವ ಮೂಲಕ ಸ್ಥಳೀಯರ ಆರೋಗ್ಯದೊಂದಿಗೆ ಚೆಲ್ಲಾಟವಾಡುತ್ತಿದೆ. ಪೊಲೀಸ್…
ಉಳ್ಳಾಲ: ಆಲ್ ಇಂಡಿಯಾ ಕೆಥೋಲಿಕ್ ಸಭಾ ದ ಕರ್ನಾಟಕ ಪ್ರಾಂತ ಅಧ್ಯಕ್ಷರಾಗಿ ಆಯ್ಕೆಯಾದ ಆಲ್ವಿನ್ ಡಿಸೋಜ ಇವರನ್ನು ಉಳ್ಳಾಲ ಬ್ಲಾಕ್ ಕಾಂಗ್ರೆಸ್ ವತಿಯಿಂದ ತೊಕ್ಕೊಟ್ಟು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಅಭಿನಂದಿಸಲಾಯಿತು.ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿದ್ದುಕೊಂಡು ಮೈನಾರಿಟಿ ಘಟಕವನ್ನು ಯಶಸ್ವಿಯಾಗಿ ನಿಭಾಯಿಸುವಲ್ಲಿ ಆಲ್ವಿನ್ ಫಾತ್ರ ಮಹತ್ವದ್ದು, ಇದೀಗ ಚುನಾವಣೆ ಮೂಲಕ ಕೆಥೋಲಿಕ್ ಸಭಾದ ಉನ್ನತ ಹುದ್ದೆಯನ್ನು ಅಲಂಕರಿಸಿರುವ ಅವರ ಸೇವಾ ಅವಧಿಯಲ್ಲಿ ಉತ್ತಮ ಕಾರ್ಯಗಳು ನಡೆಯಲಿ ಹಾಗೂ ಇನ್ನಷ್ಟು ಉನ್ನತ ಹುದ್ದೆಗಳು ಅವರ ಪಾಲಿಗೆ ಒದಗಿ ಬರಲಿ ಎಂದರು.ಈ ಸಂದರ್ಭ ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಶೆಟ್ಟಿ ಬೋಳಿಯಾರ್ , ತಾ.ಪಂ ಮಾಜಿ ಅಧ್ಯಕ್ಷ ಮಹಮ್ಮದ್ ಮೋನು ಮಲಾರ್, ಕೆಥೋಲಿಕ್ ಮಹಾಸಭಾ ಅಧ್ಯಕ್ಷ ಆಲ್ವಿನ್ ಡಿಸೋಜ, ಕ್ಷೇತ್ರ ವಕ್ತಾರ ಅಶ್ರಫ್ ಕೆ.ಸಿ.ರೋಡ್, ಉಳ್ಳಾಲ ನಗರಸಭೆ ಮಾಜಿ ಅಧ್ಯಕ್ಷ ದಿನೇಶ್ ರೈ, ಮಹಿಳಾ ಕಾಂಗ್ರೆಸ್ ಕ್ಷೇತ್ರ ಅಧ್ಯಕ್ಷೆ ಚಂದ್ರಿಕಾ ರೈ, ಮುನ್ನೂರು ಗ್ರಾ.ಪಂ ಮಾಜಿ ಅಧ್ಯಕ್ಷ ವಿಲ್ಫೆçಡ್ ಡಿಸೋಜ, ಬ್ಲಾಕ್ ರ‍್ಯದರ್ಶಿ ಮನ್ಸೂರ್…

