ತೊಕ್ಕೊಟ್ಟು: ಸಾಂವಿಧಾನಿಕವಾಗಿ ವಾಕ್ ಸ್ವಾತಂತ್ರ್ಯವನ್ನು ಪ್ರತಿಪಾದಿಸಿ ಧರ್ಮದ ವಿಚಾರಧಾರೆಗಳ ಕುರಿತು ಹಿಂದೂ ಸಮಾಜಕ್ಕೆ ಹೇಳಿರುವ ಉಪನ್ಯಾಸಕನ ವಿರುದ್ಧ ಪ್ರಕರಣ ದಾಖಲಿಸುವ ರಾಜ್ಯ ಸರಕಾರ ಅಸಾಂವಿಧಾನಿಕವಾಗಿ ಧರ್ಮವನ್ನು ಹಿಯ್ಯಾಳಿಸುವವರ ವಿರುದ್ಧ ಕಠಿಣ ಕ್ರಮ ಜರುಗಿಸದೇ ಇರುವುದು ತಾರತಮ್ಯವಲ್ಲವೇ ಎಂದು ವಿಶ್ವ ಹಿಂದೂ ಪರಿಷತ್ ಜಿಲ್ಲಾ ಸಹ ಕಾರ್ಯದರ್ಶಿ ಶಿವಾನಂದ ಮೆಂಡನ್ ಆಕ್ರೋಶ ವ್ಯಕ್ತಪಡಿಸಿದರು. ಸಾಹಿತಿ ಹಾಗೂ ಉಪನ್ಯಾಸಕ ಡಾ.ಅರುಣ್ ಉಳ್ಳಾಲ್ ಮಾಡಿದ ಹಿಂದೂ ಧರ್ಮ ಜಾಗೃತಿಯ ಬಾಷಣದ ವಿರುದ್ಧ ದಾಖಲಾಗಿರುವ ಸುಮೊಟೊ ಕೇಸನ್ನು ಹಿಂಪಡೆಯಲು ಆಗ್ರಹಿಸಿ ವಿಶ್ವ ಹಿಂದೂ ಪರಿಷತ್ ,ಬಜರಂಗದಳ ಉಳ್ಳಾಲ ಪ್ರಖಂಡದ ವತಿಯಿಂದ ತೊಕ್ಕೊಟ್ಟು ಜಂಕ್ಷನ್ ನಲ್ಲಿ ಮಂಗಳವಾರ ಸಂಜೆ ನಡೆದ ಪ್ರತಿಭಟನಾ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು.ಕಿನ್ಯಾದಲ್ಲಿ ಜರಗಿದ ನವ ದಂಪತಿ ಸಮಾವೇಶದಲ್ಲಿ ನವ ವಿವಾಹಿತರಾಗಿ ಭಾಗವಹಿಸಿದ್ದ ಉಪನ್ಯಾಸಕ ಅರುಣ್ ಉಳ್ಳಾಲ್, ಹಿಂದೂಗಳು ಹಿಂದೂಗಳ ಸಭಾಂಗಣಗಳಲ್ಲೇ ಮದುವೆಯಾಗಿ ಎಂದು ಸಮಾಜಕ್ಕೆ ಕಿವಿಮಾತು ಹೇಳಿದ್ದಾರೆಯೇ ಹೊರತು ಯಾವುದೇ ಧರ್ಮವನ್ನ ಅಣಕಿಸಿ ,ನಿಂದಿಸಿಲ್ಲ. ಧರ್ಮದ ಬಗ್ಗೆ ಜಾಗೃತಿ ಮಾತುಗಳನ್ನಾಡಲೂ ಇಲ್ಲಿ ವಾಕ್ ಸ್ವಾತಂತ್ರ‍್ಯ…
Author: UllalaVani
ಮುಡಿಪು: ಮಂಗಳೂರು ಬಲ್ಮಠ ಸರ್ಕಾರಿ ಪದವಿ ಪೂರ್ವ ಬಾಲಕಿಯರ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರವು ಉಳ್ಳಾಲ ತಾಲೂಕು ಮುಡಿಪು ಶ್ರೀ ಭಾರತೀ ಅನುದಾನಿತ ಶಾಲೆಯಲ್ಲಿ ಇತ್ತೀಚೆಗೆ ನಡೆಯಿತು.ಶಿಬಿರದ ಧ್ವಜಾರೋಹಣ ನೆರವೇರಿಸಿದ ಶಾಲೆಯ ಸಂಚಾಲಕ ಕೆ.ಸುಬ್ರಹ್ಮಣ್ಯ ಭಟ್ ಮಾತನಾಡಿ, ಗ್ರಾಮಾಂತರ ಪ್ರದೇಶದಲ್ಲಿ ಶಿಬಿರ ಆಯೋಜಿಸುವುದರಿಂದ ನಗರ ಪ್ರದೇಶದ ವಿದ್ಯಾರ್ಥಿಗಳು ಗ್ರಾಮೀಣ ಬದುಕಿನ ಸೊಗಸು ಅರಿತುಕೊಳ್ಳಬಹುದು ಎಂದು ಅಭಿಪ್ರಾಯಪಟ್ಟರು.ಶಿಬಿರ ಉದ್ಘಾಟಿಸಿದ ಭಾರತೀ ಶಾಲೆಯ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ನಿಶ್ಚಲ್ ಜಿ.ಶೆಟ್ಟಿ ಮಾತನಾಡಿ, ಶಿಬಿರದಲ್ಲಿ ಭಾಗವಹಿಸುವ ವಿದ್ಯಾರ್ಥಿಗಳು ಶಿಸ್ತು, ಸಮಯಪ್ರಜ್ಞೆ ಹಾಗೂ ಸೇವಾ ಮನೋಭಾವ ಬೆಳೆಸಿಕೊಳ್ಳಬೇಕು. ಜೊತೆಗೆ ತಂದೆ, ತಾಯಿ, ಗುರುಹಿರಿಯರು, ದೇಶ ಮತ್ತು ಸಮಾಜವನ್ನು ಪ್ರೀತಿಸುವ ಮನೋಭಾವ ರೂಢಿಸಿಕೊಳ್ಳಬೇಕು ಎಂದು ಕರೆ ನೀಡಿದರು.ಶಾಲೆಯ ಮುಖ್ಯೋಪಾಧ್ಯಾಯ ರಾಮಕೃಷ್ಣ ಭಟ್ ಕೆ. ಶುಭ ಹಾರೈಸಿದರು. ಅಧ್ಯಕ್ಷತೆ ವಹಿಸಿದ್ದ ಬಲ್ಮಠ ಕಾಲೇಜು ಪ್ರಾಂಶುಪಾಲೆ ವನಿತಾ ದೇವಾಡಿಗ ಮಾತನಾಡಿ, ಶಿಬಿರದಲ್ಲಿ ಸಕ್ರಿಯವಾಗಿ ಭಾಗವಹಿಸುವಂತೆ ವಿದ್ಯಾರ್ಥಿಗಳಿಗೆ ಕರೆ ನೀಡಿದರು.ಶ್ರೀ ಭಾರತೀ ಶಾಲೆ ಹಳೆ ವಿದ್ಯಾರ್ಥಿ ಪೂವಪ್ಪ,…
ನಾಟೆಕಲ್ : ಬಸ್ -ಕಾರು ನಡುವೆ ಮುಖಾಮುಖಿ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ನಾಲ್ವರು ಗಾಯಗೊಂಡಿರುವ ಘಟನೆ ಕಲ್ಕಟ್ಟ ಸಮೀಪದ ತಿರುವಿನಲ್ಲಿ ಇಂದು ಸಂಜೆ ವೇಳೆ ಸಂಭವಿಸಿದೆ.ಆಸೀಫ್ ಕಲ್ಕಟ್ಟ ಇವರ ಬಲಗೈ, ಭುಜದ ಮೂಲೆಗಳು ಮುರಿತಕ್ಕೊಳಗಾಗಿದ್ದರೆ, ಅರಾಫತ್ ಇನೋಳಿ ಎಂಬವರ ಕಾಲಿನ ಮೂಳೆಗಳು ಮುರಿತಕ್ಕೊಳಗಾಗಿದೆ. ಉಳಿದಂತೆ ಚಾಲಕ ಅಝ್ಮಾನ್, ಹ್ಯಾರೀಸ್ ಕಲ್ಕಟ್ಟ ಗಾಯಗೊಂಡಿದ್ದಾರೆ. ಮುಡಿಪುವಿನಿಂದ ಮಂಗಳೂರಿಗೆ ತೆರಳುವ ಎನ್ .ಎಸ್ ಟ್ರಾವೆಲ್ಸ್ ಬಸ್ಸು ವಿರುದ್ಧ ಧಿಕ್ಕಿನಿಂದ ಬಂದಿದ್ದು, ಎದುರಿನಿಂದ ನಾಟೆಕಲ್ ನಿಂದ ಕಲ್ಕಟ್ಟ ಕಡೆಗೆ ತೆರಳುತ್ತಿದ್ದ ಕಾರಿಗೆ ಢಿಕ್ಕಿ ಹೊಡೆದಿದೆ. ನಾಲ್ವರನ್ನು ಕದ್ರಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಖಾಸಗಿ ಬಸ್ಸುಗಳ ಪೈಪೋಟಿಯಿಂದ ವಾಹನ ಸವಾರರು ಪ್ರಾಣ ತೆತ್ತಬೇಕಾಗಿದೆ. ಬಸ್ಸು ಚಾಲಕರ ವೇಗಕ್ಕೆ ಕಡಿವಾಣ ಹಾಕಬೇಕು ಹಾಗೂ ಟೈಮಿಂಗ್ ವಿಚಾರವನ್ನು ಖಾಸಗಿ ಬಸ್ ಮಾಲಕರ ಸಂಘ ಹಾಗೂ ಸಂಚಾರಿ ಪೊಲೀಸರು ಸೇರಿಕೊಂಡು ಪರಿಷ್ಕರಿಸಬೇಕು ಅನ್ನುವ ಆಗ್ರಹ ಕೇಳಿಬಂದಿದೆ. ಇನ್ನೊಂದೆಡೆ ಕಲ್ಕಟ್ಟ ತಿರುವು ಪ್ರದೇಶ ಅಪಘಾತ ವಲಯ , ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕು ಅನ್ನುವ ಆಗ್ರಹಕೇಳಿಬಂದಿದೆ.…
ಅಧ್ಯಕ್ಷರಾಗಿ ಕೆ.ಟಿ.ಸುವರ್ಣ ಉಪಾಧ್ಯಕ್ಷರಾಗಿ ಎ.ಜೆ.ಶೇಖರ್ ತೊಕ್ಕೊಟ್ಟು: ತೊಕ್ಕೊಟ್ಟಿನಲ್ಲಿ ಹೊಸದಾಗಿ ಪ್ರಾರಂಭವಾಗುವ ಸಹ್ಯಾದ್ರಿ ಸಹಕಾರಿ ಸೊಸೈಟಿ ಆಡಳಿತ ಮಂಡಳಿಯ ಪದಾಧಿಕಾರಿಗಳ ಆಯ್ಕೆ ಇಂದು ಸಹಕಾರಿ ಸಂಘಗಳ ಜಿಲ್ಲಾ ನೋಂದಾವಣಾಧಿಕಾರಿ ಶಿವಲಿಂಗಯ್ಯ ಚುನಾವಣಾ ಅಧಿಕಾರಿಯಾಗಿ ಭಾಗವಹಿಸಿ ನಡೆಸಿಕೊಟ್ಟರು.ಸೊಸೈಟಿ ಅಧ್ಯಕ್ಷರಾಗಿ ಕೆ.ಟಿ ಸುವರ್ಣ,ಉಪಾಧ್ಯಕ್ಷರಾಗಿ ಎ.ಜೆ. ಶೇಖರ್ ಆಯ್ಕೆಗೊಂಡರೆ. ನಿರ್ದೇಶರಾಗಿ ಸತೀಶ್ ಕರ್ಕೇರ, ಬಾಬು ಶಾಸ್ತ, ಬಿ.ಡಿ.ಗೋಪಾಲ, ದಿನೇಶ್ ಅತ್ತಾವರ, ಆನಂದ ಕೆ, ಶಿವಪ್ರಸಾದ್, ಮಾಧವ ಪೂಜಾರಿ, ಯತೀಶ್ ಹೊಸಗದ್ದೆ ಮತ್ತು ಶ್ರೀಮತಿ ದಿವ್ಯ ನವೀನ್ ಸುವರ್ಣ, ನಿಶಾ ವಿನೋದ್ ಕುಮಾರ್ ನಿರ್ದೇಶಕರಾಗಿ ಆಯ್ಕೆಯಾದರು.ಈ ಸಂದರ್ಭದಲ್ಲಿ ಚುನಾವಣಾ ಅಧಿಕಾರಿಯಾಗಿ ಆಖ ಕಚೇರಿಯ ಶ್ರೀಯುತ ಚುನಾವಣಾ ಪ್ರಕ್ರಿಯೆಯನ್ನು ನಡೆಸಿಕೊಟ್ಟರು.
ಉಳ್ಳಾಲ: ಕುತ್ತಾರು ಅಜ್ಜನ ಕಟ್ಟೆಗೆ ಬಂದಾಗ ನೆಮ್ಮದಿಯಿದೆ, ನಂಬಿಕೆಯೂ ಇರುವುದರಿಂದ ಮಂಗಳೂರು ವ್ಯಾಪ್ತಿಗೆ ಬರುವಾಗ ಈ ಭಾಗಕ್ಕೆ ಭೇಟಿ ನೀಡುತ್ತಲಿರುವೆೆಂದು ಹ್ಯಾಟ್ರಿಕ್ ಹೀರೋ ಡಾ| ಶಿವರಾಜ್ ಕುಮಾರ್ ಹೇಳಿದ್ದಾರೆ..ಕುತ್ತಾರು ದೆಕ್ಕಾಡು ಕೊರಗಜ್ಜನ ಆದಿಸ್ಥಳಕ್ಕೆ ಪತ್ನಿ ಸಮೇತರಾಗಿ ಭೇಟಿ ನೀಡಿ ಅಜ್ಜನ ಕಟ್ಟೆಯಲ್ಲಿ ಪ್ರಾರ್ಥನೆ ಸಲ್ಲಿಸಿ ಬಳಿಕ ಮಾಧ್ಯಮದ ಜತೆಗೆ ಮಾತನಾಡಿದರು. ಶೃಂಗೇರಿ ಮಠ, ಶ್ರೀ ಕೃಷ್ಣ ಮಠ, ಕುದ್ರೋಳಿ ಗೋಕರ್ಣನಾಥೇಶ್ವರ, ವನದೇವತೆ, ಕೊರಗಜ್ಜನ ಕ್ಷೇತ್ರಕ್ಕೆ ಸಂದರ್ಶನಗೈಯ್ಯುತ್ತಾ ಬಂದಿದ್ದೇನೆ. ಎಲ್ಲಾ ಸಾನಿಧ್ಯಕ್ಕೆ ಭೇಟಿಕೊಟ್ಟಾಗ ನೆಮ್ಮದಿಯಿರುತ್ತದೆ. ನಂಬಿಕೆಯೂ ಬಲವಾಗಿರುವುದರಿಂದ ಜೀವನ ಚೆನ್ನಾಗಿರಲಿ ಅನ್ನುವ ಭರವಸೆಯ ಜೊತೆಗೆ ಸಂದರ್ಶನಗೈದಿರುವೆ. ನ.15 ರ ಆಸುಪಾಸಿನಲ್ಲಿ ಅರ್ಜುನ್ ಜನ್ಯ ನಿರ್ದೇಶಿಸಿದ ರಿಯಲ್ ಸ್ಟಾರ್ ಉಪೇಂದ್ರ , ರಾಜ್ ಬಿ ಶೆಟ್ಟಿ ಸಹಿತ ತಾನು ನಟಿಸಿದ ಫಾರ್ಟಿಫೈವ್ ಚಿತ್ರ ತೆರೆಕಾಣಲಿದೆ. ಇನ್ನೊಂದು ಚಿತ್ರದ ಮಾತುಕತೆ ಇದ್ದು, ಶೀಘ್ರವೇ ಪ್ರಾಜೆಕ್ಟ್ ಆರಂಭವಾಗಲಿದೆ ಎಂದರು.ಈ ಸಂದರ್ಭ ಗೀತಾ ಶಿವರಾಜ್ ಕುಮಾರ್ , ಸಿನೆಮಾ ನಿರ್ಮಾಪಕ ಶ್ರೀಕಾಂತ್, ರಾಜೇಶ್ ಭಟ್, ಶ್ರೀ ಪಂಜಂದಾಯ ಬಂಟ…
ಕೊಲ್ಯ : ಇಲ್ಲಿನ ಕುಜುಮಗದ್ದೆ ಸಮೀಪ ಮಹಿಳೆಯೊಬ್ಬರು ಬಾವಿಗೆ ಬಿದ್ದು ಸಾವನ್ನಪ್ಪಿರುವ ಘಟನೆ ಇಂದು ಬೆಳಿಗ್ಗೆ ಬೆಳಕಿಗೆ ಬಂದಿದೆ.ಕುಜುಮಗದ್ದೆ ನಿವಾಸಿ ವಾರಿಜಾ (೪೫) ಸಾವನ್ನಪ್ಪಿದವರು. ಓರ್ವ ಪುತ್ರನ ಜತೆಗೆ ನೆಲೆಸಿದ್ದ ಅವರು ಮನೆ ಸಮೀಪದ ಬಾವಿಗೆ ಕಾಲುಜಾರಿ ಬಿದ್ದಿರುವ ಶಂಕೆಯಿದೆ. ಉಳ್ಳಾಲ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಮಾಡೂರು : ಅವಿವಾಹಿತರೊಬ್ಬರು ಬಾಡಿಗೆ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋಟೆಕಾರು ಪ.ಪಂ ವ್ಯಾಪ್ತಿಯ ಮಾಡೂರು ಸಮೀಪ ನಡೆದಿದೆ.ಬಾಡಿಗೆ ಮನೆಯ ನಿವಾಸಿ ಹರೀಶ್ (೩೫) ಆತ್ಮಹತ್ಯೆ ನಡೆಸಿದವರು. ಮರ ಹಾಗೂ ಚಿನ್ನದ ಕೆಲಸ ನಿರ್ವಹಿಸುತ್ತಿದ್ದ ಅವರು ಮನೆಯಲ್ಲಿ ಒಂಟಿಯಾಗಿದ್ದರು. ಅವಿವಾಹಿತರಾಗಿರುವ ಇವರು ಮೂರು ವರ್ಷಗಳಿಂದ ಮಾಡೂರು ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು. ಇಂದು ಬೆಳಿಗ್ಗೆ ನೇಣುಬಿಗಿದ ಸ್ಥಿತಿಯಲ್ಲಿ ಹರೀಶ್ ಪತ್ತೆಯಾಗಿದ್ದಾರೆ. ಮೃತರ ಸಂಬAಧಿಕರು ಮಡ್ಯಾರು ಸಮೀಪ ವಾಸಿಸುತ್ತಿದ್ದರು. ಸ್ಥಳೀಯವಾಗಿ ಹೆಚ್ಚು ಮಾತನಾಡದ ವ್ಯಕ್ತಿತ್ವದ ಹರೀಶ್ , ಖಿನ್ನತೆಯಿಂದ ಕೃತ್ಯ ಎಸಗಿರುವ ಶಂಕೆಯಿದೆ. ಉಳ್ಳಾಲ ಪೊಲೀಸರು ಸ್ಥಳಕ್ಕಾಗಮಿಸಿ ಮೃತದೇಹವನ್ನು ಶವಮಹಜರಿಗೆ ಕಳುಹಿಸಿದ್ದಾರೆ.
ಉಳ್ಳಾಲ : ಯು.ಆರ್ ಫೌಂಡೇಶನ್(ರಿ) ವತಿಯಿಂದ ಮಂಗಳೂರು ವಿಶ್ವವಿದ್ಯಾನಿಲಯದ ಉಪಕುಲಪತಿ ಡಾ.ಪಿ.ಎಲ್ ಧರ್ಮರವರಿಗೆ ಅಭಿನಂದನಾ ಕಾರ್ಯಕ್ರಮ ದೇರಳಕಟ್ಟೆಯ ಯು.ಆರ್ ಕಾಂಪೌಂಡ್ ನಲ್ಲಿ ನಡೆಯಿತು. ಯು.ಆರ್ ಫೌಂಡೇಶನ್(ರಿ) ಅಧ್ಯಕ್ಷ ಉಸ್ಮಾನ್.ಎ.ಎಂ, ಜಿ.ಎ ಚಾರಿಟೇಬಲ್ ಟ್ರಸ್ಟ್(ರಿ) ಅಧ್ಯಕ್ಷ ಜಿ.ಎ ರಫೀಕ್, ಎ.ಎಂ ಫ್ಯಾಮಿಲಿಯ ಹಿರಿಯರಾದ ಶರೀಫ್ ಮಲಾರ್, ಪಂಜಿಮೊಗರು ರಿಫಾಯಿಯ್ಯಾ ಮದರಸ ಅಧ್ಯಾಪಕ ರಿಯಾಝ್ ಮದನಿ ಬಂಟ್ವಾಳ, ಎಸ್ ಸಿ ಡಿಸಿಸಿ ಬ್ಯಾಂಕ್ ವ್ಯವಸ್ಥಾಪಕ ಹೈದರ್ ಅಲಿ ಎ.ಎಂ, ಮದನಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಅಬ್ದುಲ್ ಅಝೀಝ್, ಹನೀಝ್ ಪಕಲಡ್ಕ, ಎಂ.ಎಸ್ ಝೈನುದ್ದೀನ್ ಪುತ್ತಿಗೆ,ಇಬ್ರಾಹಿಂ ಮೊಂಟೆಪದವು, ಅಬ್ದುಲ್ ಅಝೀಝ್ ಕಟ್ಟೆ, ಜಿ.ಎಂ ಇಮ್ರಾನ್ ಬಾಂಬಿಲ, ಫಯಾಝ್ ಜಿ.ಎ, ಯು.ಆರ್ ಫೌಂಡೇಶನ್ ನ ಸದಸ್ಯರಾದ ಸಫ್ವಾನ್ ಯು.ಆರ್, ಇರ್ಷಾದ್ ಯು.ಆರ್ ಉಪಸ್ಥಿತರಿದ್ದರು.
ಉಳ್ಳಾಲ: ತಲಪಾಡಿಯ ಕೆ.ಆರ್ ಕನಕದಾಸ್ ಅವರಿಗೆ ಸೇರಿದ ಸ್ತ್ರೀ ಶಕ್ತಿ ಲಾಟರಿ ಏಜೆನ್ಸಿಯಿಂದ ಪಡೆದ ಟಿಕೇಟಿಗೆ ಓಣಂ ಬಂಪರ್ ಡ್ರಾ ಇದರ ಎರಡನೇ ಬಹುಮಾನ ರೂ. 1 ಕೋಟಿ ಒಲಿದಿದೆ. ಲಾಟರಿ ಒಂಟಿ ಮಹಿಳೆಗೆ ಒಲಿದಿರುವುದರಿಂದ ಹೆಸರು ಮತ್ತು ಊರು ಹೇಳಲು ಇಚ್ಛಿಸಿಲ್ಲ ಎಂದು ಲಾಟರಿ ಅಂಗಡಿ ಮಾಲೀಕ ಕನಕದಾಸ್ ತಿಳಿಸಿದ್ದಾರೆ. ಇದು ಕನಕದಾಸ್ ಅವರ ಅಂಗಡಿಯಿಂದ ಟಿಕೇಟ್ ಪಡೆದ 6 ನೇಯ ಬಂಪರ್ ಪ್ರಶಸ್ತಿಯಾಗಿದೆ.ಕಳೆದ ೩೦ ವರ್ಷಗಳಲ್ಲಿ ಕನಕದಾಸ್ ಅವರ ಅಂಗಡಿಯಿಂದ ಟಿಕೇಟ್ ಪಡೆದ 6 ಮಂದಿ ಲಾಟರಿ ಗೆಲುವು ಸಾಧಿಸಿದ್ದು, 4 ಮಂದಿಗೆ ರೂ.1 ಕೋಟಿ ಒಲಿದಿದ್ದರೆ, 75 ಲಕ್ಷ ರೂ. ಮತ್ತು 80 ಲಕ್ಷ ರೂ. ಇಬ್ಬರಿಗೆ ಒಲಿದಿದೆ. 2024ರ ಲಾಟರಿ ಪಡೆದ ಮಹಿಳೆ ಸ್ತ್ರೀ ಶಕ್ತಿ ಲಾಟರಿ ಅಂಗಡಿಯ ಸಿಬ್ಬಂದಿ ಗಾಯತ್ರಿ ಎಂಬವರಿಂದ ಟಿಕೇಟನ್ನು ಪಡೆದುಕೊಂಡಿದ್ದರು. ಅದಕ್ಕಾಗಿ ಲಾಟರಿ ಹೊಡೆಯುತ್ತಲೇ ಮಹಿಳೆ ಅಂಗಡಿ ಸಿಬ್ಬಂದಿ ಗಾಯತ್ರಿ ಅವರಿಗೆ ಕೃತಜ್ಞತೆಗಳನ್ನು ಸಲ್ಲಿಸಿದ್ದಾರೆ. ಹಲವು ವರ್ಷಗಳ ಹಿಂದೆ ಒಂದು…
ಮುಡಿಪು : ರಾಜಕೀಯ ರಹಿತವಾಗಿ ಆರೋಗ್ಯಯುತ ಕಾರ್ಯದಲ್ಲಿ ಕಲ್ಲೂರು ಎಜ್ಯುಕೇಷನ್ ಟ್ರಸ್ಟ್ ಆಯೋಜಿಸುತ್ತಿದ್ದು, ವಿದ್ಯಾರ್ಥಿಗಳಲ್ಲಿ ರಕ್ತದಾನದ ಜಾಗೃತಿ ಮೂಡಿಸಲು ನಿರಂತರ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುತ್ತಿದೆ. ರಕ್ತದಾನ ಎಂಬುದು ಶ್ರೇಷ್ಟದಾನ ಅನ್ನುವುದನ್ನು ಮನವರಿಕೆ ಮಾಡಿಕೊಂಡು ವಿದ್ಯಾರ್ಥಿಗಳು ಮಹತ್ಕಾರ್ಯದಲ್ಲಿ ಭಾಗವಹಿಸಿರಿ ಎಂದು ಕಲ್ಲೂರು ಎಜ್ಯುಕೇಷನ್ ಟ್ರಸ್ಟ್ ಅಧ್ಯಕ್ಷ ಇಬ್ರಾಹಿಂ ಕಲ್ಲೂರು ಹೇಳಿದ್ದಾರೆ.ಅವರು ಕಾಲೇಜು ಶಿಕ್ಷಣ ಇಲಾಖೆ, ಮುಡಿಪು ಸರ್ಕಾರಿ ಪ್ರಥಮ ದರ್ಜೆ ಕಾಲೇಜು , ಕಲ್ಲೂರು ಎಜ್ಯುಕೇಷನ್ ಟ್ರಸ್ಟ್ ಕಾರವಾರ ಇದರ ಆಶ್ರಯದಲ್ಲಿ ಯೂತ್ ರೆಡ್ ಕ್ರಾಸ್ , ಎನ್ ಎಸ್ ಎಸ್ ರೇಂಜರ್ಸ್- ರೋರ‍್ಸ್ ಘಟಕ ಹಿರಿಯ ವಿದ್ಯಾರ್ಥಿ ಸಂಘ ಇದರ ಆಶ್ರಯದಲ್ಲಿ ಮುಡಿಪು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಭಾಂಗಣದಲ್ಲಿ ಜರಗಿದ ಬೃಹತ್ ರಕ್ತದಾನ ಶಿಬಿರ ಹಾಗೂ ಮಾಹಿತಿ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದರು.ವೆನ್ಲಾಕ್ ಆಸ್ಪತ್ರೆಯಲ್ಲಿ ಬಡವರಿಗೆ ರಕ್ತದ ಕೊರತೆಯಾಗುತ್ತಿದೆ ಅನ್ನುವ ಕೂಗು ಇದೆ. ಅದನ್ನು ಹೋಗಲಾಡಿಸುವ ಸಲುವಾಗಿ ಕಲ್ಲೂರು ಟ್ರಸ್ಟ್ ನಿರಂತರವಾಗಿ ವಿವಿಧ ಸಂಘಟನೆಗಳ ಜಂಟಿಯಾಗಿ ರಕ್ತದಾನ ಶಿಬಿರವನ್ನು ಆಯೋಜಿಸಲಿದೆ ಎಂದರು.ಸಾಹಿತಿ…

