Author: UllalaVani

Kannada News From Coastal Karnataka

ಉಳ್ಳಾಲ: ಉಳ್ಳಾಲ ತಾಲೂಕಿನಲ್ಲಿ ಅನೇಕ ಸಂಘ-ಸಂಸ್ಥೆಗಳು ಕಾರ್ಯನಿರ್ವಹಿಸುತ್ತಿವೆ. ಆದರೆ ಸಮಾಜದ ಪ್ರತಿಯೊಂದು ಮನೆ-ಮನವನ್ನೂ ತಲುಪಿ ಮಹಿಳೆಯರನ್ನು ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕವಾಗಿ ಸಬಲಗೊಳಿಸುವ ಕಾರ್ಯದಲ್ಲಿ ಮಹಿಳಾ ಮಂಡಳಿಗಳು ಇನ್ನಷ್ಟು ಸಂಘಟಿತವಾಗಿ ಕೆಲಸ ಮಾಡಬೇಕಾಗಿದೆ ಎಂದು ಉಳ್ಳಾಲ ತಾಲೂಕು ಮಹಿಳಾ ಮಂಡಳಿಗಳ ಒಕ್ಕೂಟದ ಅಧ್ಯಕ್ಷೆ ದೇವಕಿ ಆರ್‌ ಉಳ್ಳಾಲ್‌ ಅಭಿಪ್ರಾಯಪಟ್ಟರು. ಉಳ್ಳಾಲ ತಾಲೂಕು ಮಹಿಳಾ ಮಂಡಳಿಗಳ ಒಕ್ಕೂಟದ ಆಶ್ರಯದಲ್ಲಿ ಉಳ್ಳಾಲ ಸಮುದಾಯ ಭವನದಲ್ಲಿ ಉಳ್ಳಾಲ ತಾಲೂಕು ಮಹಿಳಾ ಮಂಡಳಿಗಳ ಒಕ್ಕೂಟದ ವಾರ್ಷಿಕ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರುಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆ ಧನಲಕ್ಷ್ಮೀ ಗಟ್ಟಿ ಮಾತನಾಡಿ, ಉಳ್ಳಾಲ ತಾಲೂಕಿನಲ್ಲಿ ಅನೇಕ ಸಂಘಟನೆಗಳು ಕಾರ್ಯನಿರ್ವಹಿಸುತ್ತಿದ್ದು, ಸಮಾಜದ ಪ್ರತಿಯೊಂದು ಮನೆ-ಮನವನ್ನೂ ತಲುಪಬೇಕಾದರೆ ಮಹಿಳೆಯರು ಒಗ್ಗಟ್ಟಾಗಿ ಕಾರ್ಯನಿರ್ವಹಿಸಬೇಕು.ಸ್ವಸಹಾಯ ಸಂಘಗಳನ್ನು ಮುನ್ನಡೆಸುವುದು ಇಂದಿನ ದಿನಗಳಲ್ಲಿ ಸವಾಲಿನ ಕೆಲಸವಾಗಿದೆ. ಸದಸ್ಯರನ್ನು ಒಗ್ಗೂಡಿಸುವುದು, ಸಂಘದ ಚಟುವಟಿಕೆಗಳನ್ನು ನಿರಂತರವಾಗಿ ನಡೆಸುವುದು ಹಾಗೂ ಮಹಿಳೆಯರನ್ನು ಆರ್ಥಿಕವಾಗಿ ಸಬಲಗೊಳಿಸುವ ನಿಟ್ಟಿನಲ್ಲಿ ಹಲವು ಅಡಚಣೆಗಳಿದ್ದರೂ, ಒಗ್ಗಟ್ಟು ಮತ್ತು ಸೇವಾ ಮನೋಭಾವದಿಂದ ಕಾರ್ಯನಿರ್ವಹಿಸಿದರೆ ಯಶಸ್ಸು ಸಾಧ್ಯ ಎಂದರು. ಉಳ್ಳಾಲ…

Read More

ಕೊಣಾಜೆ; ಸಂಸಾರದ ಸೌಖ್ಯವನ್ನು ಬಯಸುವುದರೊಂದಿಗೆ ಪಾರಂಪರಿಕ ಮೌಲ್ಯ, ಆಧುನಿಕತ ಚಿಂತನೆಗಳನ್ನೊಳಗೊಂಡ ವಿಜಯಲಕ್ಷ್ಮೀ ಪಿ. ರೈ ಅವರ ಕವನ ಸಂಕಲನವು ಸಮಾಜದಲ್ಲಿ ಕೌಟುಂಬಿಕ ಜವಬ್ಧಾರಿ ಮತ್ತು ಈ ಕುರಿತು ಅರಿವನ್ನು ವಿಸ್ತರಿಸುವ ಮಹತ್ವದ ಕೃತಿಯಾಗಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷರಾದ ಡಾ.ಎಂ.ಮೋಹನ್ ಆಳ್ವ ಅವರು ಹೇಳಿದರು. ಅವರು ವಿಜಯಲಕ್ಷ್ಮೀ ಪ್ರಸಾದ್ ರೈ ಕಳ್ಳಿಮಾರ್ ಅವರು ರಚಿಸಿದ “ಭಾವಬಿಂಬ” ಕವನ ಸಂಕಲನವನ್ನು ಶುಕ್ರವಾರ ಅಡ್ಯಾರ್ ಗಾರ್ಡನ್ ನಲ್ಲಿ ಕಾರ್ಯಕ್ರಮದಲ್ಲಿ ಲೋಕಾರ್ಪಣೆಗೊಳಿಸಿ ಮಾತನಾಡಿದರು.ಸಂಸಾರದಲ್ಲಿ ಹೆಣ್ಣೇ ಕೇಂದ್ರ ಬಿಂದು. ಕುಟುಂಬವನ್ನು ಮುನ್ನಡೆಸುವ ಯಜಮಾನಿಯಾಗಿ ಜೊತೆಗೆ ಸಂಸಾರದ ವಿವಿದ ಪಾತ್ರಗಳೊಂದಿಗೆ ಕುಟುಂಬವನ್ನು ಸಮಭಾವದಲ್ಲಿ ಸರಿದೂಗಿಸಿ ಮುನ್ನಡೆಸುವಲ್ಲಿ ಆಕೆಯದ್ದು ಪ್ರಥಮ ಮತ್ತು ಪ್ರದಾನ ಪಾತ್ರ. ಕುಟುಂಬ ಸುಖದ ಸಂಪತ್ತಿಗೆ ಯ ಜೊತೆಗೆ ಅಲ್ಲಿ ನೋವು, ದುಃಖ, ಅವಮಾನಗಳೂ ಸಹಜ ಎಂಬಂತೆ ಆಗುತ್ತಿರುತ್ತದೆ. ಆದರೆ ಕುಟುಂಬ ಆಕ್ರೋಶಗೊಂಡು ಕುಟುಂಬದ ವಿಘಟನೆಗೆ ದಾರಿ ಮಾಡಕೊಡಬಾರದೆಂಬ ಎಚ್ಚರಿಕೆಯ ಸಂದೇಶಗಳು ಈ ಕವನ ಸಂಕಲನದಲ್ಲಿದೆ. ಒಟ್ಟಿನಲ್ಲಿ ವ್ಯಕ್ತಿ, ವ್ಯಕ್ತಿಯಿಂದ ಕುಟುಂಬ , ಕುಟುಂಬದಿಂದ ಸಮಾಜದ…

Read More

ಮಂಗಳೂರು : ಕರ್ನಾಟಕ ಕಬಡ್ಡಿ ಪ್ರೀಮಿಯರ್ ಲೀಗ್ (KKPL)ಗೆ ಕರಾವಳಿಯ ಪ್ರತಿನಿಧಿಯಾಗಿ ಕಣಕ್ಕಿಳಿಯಲಿರುವ ‘ಮಂಗಳೂರು’ ತಂಡದ ಅಧಿಕೃತ ಹೆಸರು ಮತ್ತು ಲೋಗೋವನ್ನು ಮಾಜಿ ಶಾಸಕ ಮೊಹಿಯುದ್ದೀನ್ ಬಾವಾ ಅವರು ಶನಿವಾರ ನಗರದ ಖಾಸಗಿ ಹೋಟೆಲ್‌ನಲ್ಲಿ ಅನಾವರಣಗೊಳಿಸಿದರು. ಈ ವೇಳೆ ಮಾತನಾಡಿದ ಅವರು, ಕರಾವಳಿ ಭಾಗದಲ್ಲಿ ಅಪಾರ ಕಬಡ್ಡಿ ಪ್ರತಿಭೆಗಳಿದ್ದು, ಅವರಿಗೆ ರಾಜ್ಯ ಹಾಗೂ ರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಳ್ಳಲು ವೇದಿಕೆ ಕಲ್ಪಿಸುವ ಉದ್ದೇಶದಿಂದ ಮಂಗಳೂರು ತಂಡವನ್ನು ಖರೀದಿಸಲಾಗಿದೆ ಎಂದು ಹೇಳಿದರು. ಗ್ರಾಮೀಣ ಕ್ರೀಡೆಯಾದ ಕಬಡ್ಡಿಯನ್ನು ಮತ್ತಷ್ಟು ಜನಪ್ರಿಯಗೊಳಿಸಿ, ಯುವ ಆಟಗಾರರಿಗೆ ಹೊಸ ಅವಕಾಶಗಳನ್ನು ಸೃಷ್ಟಿಸುವ ಸಂಕಲ್ಪದೊಂದಿಗೆ ತಂಡವನ್ನು ರೂಪಿಸಲಾಗಿದೆ ಎಂದರು.ಮಂಗಳೂರು ತಂಡವು ಕೇವಲ ಪಂದ್ಯಾವಳಿಯಲ್ಲಿ ಭಾಗವಹಿಸುವುದಷ್ಟೇ ಅಲ್ಲ, ಪ್ರಶಸ್ತಿ ಗೆಲ್ಲುವ ಗುರಿಯೊಂದಿಗೆ ಬಲಿಷ್ಠ ತಂಡವನ್ನು ಕಟ್ಟುತ್ತಿದೆ. ಮುಖ್ಯ ಕೋಚ್ ಹಬೀಬ್ ಮಾಣಿ ಅವರ ಮಾರ್ಗದರ್ಶನದಲ್ಲಿ ಹಾಗೂ ಬ್ರಾಂಡ್ ಅಂಬಾಸಿಡರ್‌ಗಳಾದ ಬೋಜ್ ರಾಜ್ ವಾಮಂಜೂರು ಮತ್ತು ದೇವದಾಸ್ ಕಾಪಿಕಾಡ್ ಅವರ ಬೆಂಬಲದೊಂದಿಗೆ ತಂಡ ಸಿದ್ಧತೆ ಆರಂಭಿಸಿದೆ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಸುದೇಶ್ ಭಂಡಾರಿ, ಇಮ್ತಿಯಾಜ್, ನಿಶಾನ್,…

Read More

ಉಪ್ಪಿನಂಗಡಿ, ಜು. 04 : ಪೊಲೀಸ್ ಠಾಣಾ ವ್ಯಾಪ್ತಿಯ ಶಿರಾಡಿ ಗ್ರಾಮದ ಗುಂಡ್ಯ ಸಮೀಪ ಕಂಟೈನರ್‌ವೊಂದು ಕಾರಿಗೆ ಢಿಕ್ಕಿ ಹೊಡೆದ ಪರಿಣಾಮ ಕಾರು ಜಖಂಗೊಂಡ ಘಟನೆ ನಡೆದಿದೆ. ಬೇಲೂರು ತಾಲೂಕಿನ ಸೋಂಪುರ ನಿವಾಸಿ ಹರ್ಷ ಟಿ. ಅವರು ಮಂಗಳೂರಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ತಮ್ಮ ಮಗಳನ್ನು ಕರೆತರಲು ಕಾರಿನಲ್ಲಿ ತೆರಳುತ್ತಿದ್ದ ವೇಳೆ, ಗುಂಡ್ಯದ ತಿರುವು ರಸ್ತೆಯಲ್ಲಿ ಕಂಟೈನರ್ ಚಾಲಕ ಸಂಚಾರಿ ನಿಯಮ ಉಲ್ಲಂಘಿಸಿ ನಿರ್ಲಕ್ಷ್ಯದಿಂದ ವಾಹನ ಚಲಾಯಿಸಿ ಕಾರಿಗೆ ಡಿಕ್ಕಿ ಹೊಡೆದಿದ್ದಾನೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.ಅಪಘಾತದ ಪರಿಣಾಮ ಕಾರು ಹಾನಿಗೊಳಗಾಗಿದ್ದು, ಕಾರಿನಲ್ಲಿದ್ದ ಹರ್ಷ ಟಿ. ಅವರು ಯಾವುದೇ ಗಾಯಗಳಿಲ್ಲದೆ ಅಪಾಯದಿಂದ ಪಾರಾಗಿದ್ದಾರೆ. ಈ ಕುರಿತು ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Read More

ಜೈಪುರ, ಜು. 04 : ರಾಜಸ್ಥಾನದ ಜೋಧ್‌ಪುರ ವಿಮಾನ ನಿಲ್ದಾಣದಲ್ಲಿ 480 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ನೂತನ ಟರ್ಮಿನಲ್ ಕಟ್ಟಡವನ್ನು ಪ್ರಧಾನಿ ನರೇಂದ್ರ ಮೋದಿ ಶನಿವಾರ ಉದ್ಘಾಟಿಸಿದರು. ಇದೇ ವೇಳೆ ಮುಂದಿನ ಹತ್ತು ವರ್ಷಗಳ ಅವಧಿಗೆ 28,840 ಕೋಟಿ ರೂ. ಅನುದಾನ ಹೊಂದಿರುವ ಪರಿಷ್ಕೃತ ಉಡಾನ್ ಯೋಜನೆಗೂ ಅಧಿಕೃತ ಚಾಲನೆ ನೀಡಿದರು. ಪ್ರಧಾನಿ ಮೋದಿ ರಿಮೋಟ್ ಬಟನ್ ಒತ್ತುವ ಮೂಲಕ ನೂತನ ಟರ್ಮಿನಲ್ ಕಟ್ಟಡದ ಉದ್ಘಾಟನಾ ಫಲಕವನ್ನು ಅನಾವರಣಗೊಳಿಸಿದರು. ನಂತರ ಅವರು ಟರ್ಮಿನಲ್ ಕಟ್ಟಡದ ವಿವಿಧ ವಿಭಾಗಗಳಿಗೆ ಭೇಟಿ ನೀಡಿ, ಪ್ರಯಾಣಿಕರಿಗಾಗಿ ಕಲ್ಪಿಸಲಾಗಿರುವ ಆಧುನಿಕ ಸೌಲಭ್ಯಗಳನ್ನು ಪರಿಶೀಲಿಸಿದರು.ಸುಮಾರು 480 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿರುವ ಈ ನೂತನ ಟರ್ಮಿನಲ್ ಕಟ್ಟಡವು 23 ಸಾವಿರ ಚದರ ಮೀಟರ್‌ಗಿಂತಲೂ ಹೆಚ್ಚಿನ ವಿಸ್ತೀರ್ಣ ಹೊಂದಿದೆ. ವರ್ಷಕ್ಕೆ 20 ಲಕ್ಷ ಪ್ರಯಾಣಿಕರನ್ನು ನಿರ್ವಹಿಸುವ ಸಾಮರ್ಥ್ಯವನ್ನು ಈ ಟರ್ಮಿನಲ್ ಹೊಂದಿದ್ದು, ಭವಿಷ್ಯದ ಪ್ರಯಾಣಿಕರ ಸಂಖ್ಯೆಯನ್ನು ಗಮನದಲ್ಲಿಟ್ಟುಕೊಂಡು ನಿರ್ಮಿಸಲಾಗಿದೆ. ಪ್ರಯಾಣಿಕರಿಗೆ ಸುಗಮ ಮತ್ತು ಆರಾಮದಾಯಕ ಸೇವೆ ಒದಗಿಸುವ ಉದ್ದೇಶದಿಂದ ಟರ್ಮಿನಲ್‌ನಲ್ಲಿ ಅತ್ಯಾಧುನಿಕ…

Read More

ಮೂಡುಬಿದಿರೆ, ಜು. 04 : ಗುರುವಾರದಿಂದ ನಾಪತ್ತೆಯಾಗಿದ್ದ ಅಲಂಗಾರು ಆಶ್ರಯ ಕಾಲನಿ ಸಮೀಪದ ಬಂಗೇರಬೆಟ್ಟು ನಿವಾಸಿ ಕಾರ್ತಿಕ್ ಶೆಟ್ಟಿ (34) ಎಂಬವರ ಮೃತದೇಹವು ಶನಿವಾರ ಬೆಳಗ್ಗೆ ಮನೆಯ ಸಮೀಪ ಶನಿವಾರ ಬೆಳಗ್ಗೆ ಮನೆಯ ಸಮೀಪದ ಶೆಡ್ ಹೊರಗೆ ಪತ್ತೆಯಾಗಿದೆ. ಕಾರ್ತಿಕ್ ಅವಿವಾಹಿತರಾಗಿದ್ದು, ಹಿಟಾಚಿ ಹಾಗೂ ಜೆಸಿಬಿ ಗುತ್ತಿಗೆದಾರರಾಗಿ ಕಾರ್ಯನಿರ್ವಹಿಸುತ್ತಿದ್ದರು. ಮಾಹಿತಿ ತಿಳಿದು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಪ್ರಾಥಮಿಕವಾಗಿ ಹೃದಯಾಘಾತದಿಂದ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದ್ದು, ಮರಣೋತ್ತರ ಪರೀಕ್ಷೆಯ ವರದಿ ಬಳಿಕ ನಿಖರ ಕಾರಣ ತಿಳಿದುಬರಲಿದೆ.

Read More

ಉಡುಪಿ, ಜು. 04 : ಸಮುದ್ರದಲ್ಲಿ ನೀರು ತುಂಬಿಕೊಂಡು ಅಪಘಾತಕ್ಕೀಡಾಗಿದ್ದ ಮಲ್ಪೆ ನೋಂದಣಿಯ ‘ಮಂಜು ಮಾತಾ’ ಎಂಬ ಗಿಲ್‌ನೆಟ್ ಮೀನುಗಾರಿಕಾ ದೋಣಿ, ಶುಕ್ರವಾರ ಸಂಜೆ ಉಚ್ಚಿಲ ಕಡಲತೀರಕ್ಕೆ ಕೊಚ್ಚಿಕೊಂಡು ಬಂದಿದೆ. ಈ ದೋಣಿಯು ಜೂನ್ 29 ರಂದು ಬೆಳಿಗ್ಗೆ ಮಲ್ಪೆ ಮೀನುಗಾರಿಕಾ ಬಂದರಿನಿಂದ ಮೀನುಗಾರಿಕೆಗಾಗಿ ಸಮುದ್ರಕ್ಕೆ ತೆರಳಿತ್ತು. ಅದೇ ದಿನ ಮಧ್ಯಾಹ್ನ ದೋಣಿಯ ತಳಭಾಗದಲ್ಲಿ ಸೋರಿಕೆ ಕಂಡುಬಂದು ನೀರು ಒಳಗೆ ನುಗ್ಗತೊಡಗಿತು. ಪರಿಸ್ಥಿತಿ ಕೈಮೀರುತ್ತಿದ್ದಂತೆ, ಮೀನುಗಾರರು ಭಾರತೀಯ ಕರಾವಳಿ ಕಾವಲು ಪಡೆಗೆ ಮಾಹಿತಿ ನೀಡಿದ್ದರು. ಕೂಡಲೇ ಸ್ಥಳಕ್ಕೆ ಧಾವಿಸಿದ ಕರಾವಳಿ ಕಾವಲು ಪಡೆಯ ಸಿಬ್ಬಂದಿ, ದೋಣಿಯಲ್ಲಿದ್ದ ಆರೂ ಜನ ಮೀನುಗಾರರನ್ನು ಸುರಕ್ಷಿತವಾಗಿ ರಕ್ಷಿಸಿದ್ದರು. ಆದರೆ, ದೋಣಿಯನ್ನು ಮೇಲೆತ್ತಲು ಸಾಧ್ಯವಾಗದ ಕಾರಣ, ರಕ್ಷಣಾ ಕಾರ್ಯಾಚರಣೆಯ ನಂತರ ಅದನ್ನು ಸಮುದ್ರದಲ್ಲಿಯೇ ಬಿಡಲಾಗಿತ್ತು.ನಂತರ, ನವ ಮಂಗಳೂರು ಬಂದರು ಪ್ರಾಧಿಕಾರದಲ್ಲಿ ಕರಾವಳಿ ಭದ್ರತಾ ಪೊಲೀಸ್ ಠಾಣೆ, ಮೀನುಗಾರಿಕಾ ಇಲಾಖೆ, ವಲಸೆ ಇಲಾಖೆ ಮತ್ತು ಸ್ಥಳೀಯ ಪೊಲೀಸರು ಮೀನುಗಾರರನ್ನು ವಶಕ್ಕೆ ಪಡೆದು ದಾಖಲೆಗಳನ್ನು ಪರಿಶೀಲಿಸಿದರು. ಈ ಪೈಕಿ ನಾಲ್ವರು ತಮಿಳುನಾಡು…

Read More

ವಿಟ್ಲ, ಜು. 04 : ಅಕ್ರಮ ಕೆಂಪುಕಲ್ಲು ಹಾಗೂ ಮಣ್ಣು ಗಣಿಗಾರಿಕೆ ನಡೆಯುತ್ತಿದ್ದ ಸ್ಥಳಕ್ಕೆ ವಿಟ್ಲ ಠಾಣಾ ಪೊಲೀಸರು ದಾಳಿ ನಡೆಸಿ ವಾಹನ ಹಾಗೂ ಯಂತ್ರೋಪಕರಣಗಳನ್ನು ವಶಕ್ಕೆ ಪಡೆದ ಘಟನೆ ಜುಲೈ 2ರಂದು ಬಂಟ್ವಾಳ ಕರೋಪಾಡಿ ಗ್ರಾಮದ ಮುಗುಳಿ ಎಂಬಲ್ಲಿ ನಡೆದಿದೆ. ವಿಟ್ಲ ಠಾಣಾ ಪೊಲೀಸ್ ಉಪನಿರೀಕ್ಷಕರಾದ ರಾಮಕೃಷ್ಣರವರಿಗೆ ಜುಲೈ 2 ರ ಸಂಜೆ ಅಕ್ರಮ ಗಣಿಗಾರಿಕೆ ಬಗ್ಗೆ ಮಾಹಿತಿ ಬಂದ ಮೇರೆಗೆ, ಠಾಣಾ ಸಿಬ್ಬಂದಿಗಳೊಂದಿಗೆ ಬಂಟ್ವಾಳ ಕರೋಪಾಡಿ ಗ್ರಾಮದ ಮುಗುಳಿ ಎಂಬಲ್ಲಿಗೆ ತೆರಳುತ್ತಾರೆ. ಈ ವೇಳೆ ಪೊಲೀಸ್ ವಾಹನವನ್ನು ನೋಡಿ ಕೆಂಪು ಕಲ್ಲು ಗಣಿಗಾರಿಕೆ ಮಾಡುತ್ತಿದ್ದವರು ಅಲ್ಲಿಂದ ಪರಾರಿಯಾಗಿದ್ದಾರೆ.ಘಟನಾ ಸ್ಥಳವನ್ನು ಪರಿಶೀಲಿಸಿದಾಗ ಅಕ್ರಮ ಕೆಂಪು ಕಲ್ಲು ಗಣಿಗಾರಿಕೆ ಮಾಡುತ್ತಿರುವುದು ಕಂಡುಬಂದಿದ್ದು, ಕೃತ್ಯಕ್ಕೆ ಬಳಸಿದ ಯಂತ್ರೋಪಕರಣಗಳು ಸ್ಥಳದಲ್ಲಿರುತ್ತದೆ. ಈ ಸ್ಥಳದ ಸಮೀಪದಲ್ಲೇ ಅಕ್ರಮವಾಗಿ ಮಣ್ಣು ಗಣಿಗಾರಿಕೆ ನಡೆಸುತ್ತಿರುವುದು ಹಾಗೂ ಮಣ್ಣು ಗಣಿಗಾರಿಕೆಯ ಮಣ್ಣನ್ನು ತುಂಬಿಸಿಕೊಂಡು ಹೋಗುವ ಲಾರಿಗಳ ತೂಕ ಮಾಡಲು ವೇ ಬ್ರಿಡ್ಜ್ ಮತ್ತು ಕಟ್ಟಡ ಮಾಡಿರುವುದು ಹಾಗೂ ಯಂತ್ರೋಪಕರಣಗಳು ಪತ್ತೆಯಾಗಿರುತ್ತದೆ. ಈ…

Read More

ಬೆಂಗಳೂರು : ಆಹಾರ ಪ್ರಿಯರ ನೆಚ್ಚಿನ ಖಾದ್ಯಗಳಾದ ಶವರ್ಮಾ ಮತ್ತು ಕಬಾಬ್‌ಗಳಲ್ಲಿ ಕ್ಯಾನ್ಸರ್‌ಕಾರಕ ರಾಸಾಯನಿಕ ಹಾಗೂ ಕೃತಕ ಬಣ್ಣಗಳ ಅಂಶ ಪತ್ತೆಯಾಗಿರುವುದು ಆತಂಕಕ್ಕೆ ಕಾರಣವಾಗಿದೆ. ಕರ್ನಾಟಕ ಆಹಾರ ಸುರಕ್ಷತಾ ಮತ್ತು ಗುಣಮಟ್ಟ ಇಲಾಖೆಯು ಬೆಂಗಳೂರಿನ ವಿವಿಧ ಭಾಗಗಳಲ್ಲಿ ನಡೆಸಿದ ದಿಢೀರ್ ತಪಾಸಣೆ ವೇಳೆ ಈ ಮಾಹಿತಿ ಬೆಳಕಿಗೆ ಬಂದಿದೆ. ಯುವಜನತೆಯಲ್ಲಿ ಜನಪ್ರಿಯವಾಗಿರುವ ಶವರ್ಮಾ ಮತ್ತು ಚಿಕನ್ ಕಬಾಬ್‌ಗಳ ಗುಣಮಟ್ಟ ಪರಿಶೀಲಿಸಲು ವಿಶೇಷ ಕಾರ್ಯಾಚರಣೆ ಕೈಗೊಳ್ಳಲಾಗಿತ್ತು. ಈ ವೇಳೆ ನಗರದ 39 ಪ್ರಮುಖ ಹೋಟೆಲ್‌ಗಳು, ಆಹಾರ ಮಳಿಗೆಗಳು ಹಾಗೂ ರಸ್ತೆಬದಿ ಅಂಗಡಿಗಳಿಂದ ಶವರ್ಮಾ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲಾಗಿತ್ತು. ಒಟ್ಟು 32 ಶವರ್ಮಾ ಮಾದರಿಗಳ ಲ್ಯಾಬ್ ವರದಿ ಲಭ್ಯವಾಗಿದ್ದು, ಅವುಗಳಲ್ಲಿ 24 ಮಾದರಿಗಳು ಮಾತ್ರ ಸುರಕ್ಷಿತ ಎಂದು ದೃಢಪಟ್ಟಿದೆ. ಉಳಿದ 8 ಮಾದರಿಗಳು ಮಾನವ ಆರೋಗ್ಯಕ್ಕೆ ಹಾನಿಕಾರಕವಾಗಿರುವುದಾಗಿ ವರದಿ ತಿಳಿಸಿದೆ. ಇದರ ಜೊತೆಗೆ ನಗರದ 16 ಕಡೆಗಳಿಂದ ಚಿಕನ್ ಕಬಾಬ್ ಮಾದರಿಗಳನ್ನು ಸಂಗ್ರಹಿಸಲಾಗಿತ್ತು. ಪರೀಕ್ಷಾ ವರದಿ ಪ್ರಕಾರ 14 ಮಾದರಿಗಳು ಸುರಕ್ಷಿತವಾಗಿದ್ದರೆ, 2 ಮಾದರಿಗಳು…

Read More

ಬೆಂಗಳೂರು, ಜು. 04:ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ರಮದಲ್ಲಿ ಬಿಎಲ್‌ಒಗಳು (ಬೂತ್ ಮಟ್ಟದ ಅಧಿಕಾರಿಗಳು) ನಿಯಮಾವಳಿಗಳನ್ನು ಗಾಳಿಗೆ ತೂರಿ ಕಚೇರಿ ಹಾಗೂ ಇತರೆಡೆ ಕುಳಿತು ಫಾರಂ ವಿತರಿಸುತ್ತಿದ್ದಾರೆ ಎಂಬ ಗಂಭೀರ ದೂರುಗಳು ಕೇಳಿ ಬಂದಿವೆ. ಇದರ ಬೆನ್ನಲ್ಲೇ, ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಐಎಎಸ್ ಕಠಿಣ ಕ್ರಮಕ್ಕೆ ಮುಂದಾಗಿದ್ದಾರೆ. ಜುಲೈ 2 ರಂದು ಬಂದಿರುವ ದೂರುಗಳನ್ನು ಆಧರಿಸಿ ಜುಲೈ 3 ರಾಜ್ಯದ ಎಲ್ಲಾ ಜಿಲ್ಲಾ ಚುನಾವಣಾಧಿಕಾರಿಗಳು, ಡೆಪ್ಯುಟಿ ಕಮಿಷನರ್‌ಗಳು ಹಾಗೂ ಜಿಬಿಎ ಮುಖ್ಯ ಆಯುಕ್ತರಿಗೆ ಅಧಿಕೃತ ಸುತ್ತೋಲೆ ರವಾನಿಸಿರುವ ಸಿಇಒ, ಭಾರತೀಯ ಚುನಾವಣಾ ಆಯೋಗದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಖಡಕ್ ಸೂಚನೆ ನೀಡಿದ್ದಾರೆ.ಭಾರತೀಯ ಚುನಾವಣಾ ಆಯೋಗದ ನಿರ್ದೇಶನ ಹಾಗೂ ವೇಳಾಪಟ್ಟಿಯ ಪ್ರಕಾರ ಕರ್ನಾಟಕದಲ್ಲಿ ಜೂನ್ 30 ರಿಂದಲೇ ಮತದಾರರಿಗೆ ಎನ್ಯೂಮರೇಶನ್ ಫಾರಂಗಳನ್ನು ವಿತರಿಸುವ ಪ್ರಕ್ರಿಯೆ ಆರಂಭವಾಗಿದೆ. ಆದರೆ, ಬಿಎಲ್‌ಒಗಳು ಮನೆ ಮನೆಗೆ ಭೇಟಿ ನೀಡಿ ಫಾರಂ ಹಂಚುವ ಬದಲು, ಕಚೇರಿಗಳಲ್ಲೇ ಕುಳಿತು ವಿತರಿಸುತ್ತಿದ್ದಾರೆ ಎಂಬ ದೂರುಗಳು…

Read More