Author: UllalaVani

Kannada News From Coastal Karnataka

ಮಂಗಳೂರಿನಲ್ಲಿ ಸ್ವರ್ಣೋದ್ಯಮಿಯ ಚಿನ್ನಾಭರಣಗಳನ್ನು ದರೋಡೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಪ್ರಕರಣದಲ್ಲಿ ಭಾಗಿಯಾಗಿದ್ದ ಒಟ್ಟು 16 ಆರೋಪಿಗಳ ಪೈಕಿ ಮೂವರನ್ನು ಬಂಧಿಸಲಾಗಿದೆ. ಕೇರಳ ರಾಜ್ಯದ ಕಣ್ಣೂರು ಜಿಲ್ಲೆಯ ನಿಮಿಲ್ ಆರ್.ಕೆ (37), ಮಡಿಕೇರಿಯ ಇರ್ಷಾದ್ (40) ಹಾಗು ಮಡಿಕೇರಿಯ ಮುಸ್ತಾಫ (49) ಬಂಧಿತರು. ಜೂ.29ರಂದು ನಸುಕಿನ 2:45 ಗಂಟೆ ವೇಳೆಗೆ ಮಂಗಳೂರಿನ ಬೈಕಂಪಾಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ದರೋಡೆ ನಡೆದಿತ್ತು. ಉದ್ಯಮಿ ವಿಕಾಸ್ ಸುಬ್ಬರಾವ್‌ ಧನವಡೆ ಮಹಾರಾಷ್ಟ್ರದಿಂದ ಕೇರಳದ ಪಯ್ಯನ್ನೂರಿಗೆ ತಮ್ಮ ಕುಟುಂಬದೊಂದಿಗೆ ಸ್ವಿಫ್ಟ್ ಡಿಸೈರ್ ಕಾರಿನಲ್ಲಿ ತೆರಳುತ್ತಿದ್ದ ವೇಳೆ, ಮಂಗಳೂರಿನ ಬೈಕಂಪಾಡಿ ಸಮೀಪ ದರೊ ಮಾಡಲಾಗಿತ್ತು. ಸದ್ಯ ಮೂವರನ್ನು ಬಂಧಿಸಿದ್ದು ಉಳಿದವರಿಗಾಗಿ ಶೋಧ ಮುಂದುವರಿದಿದೆ.

Read More

ಮಂಗಳೂರು, ಜು. 04;ಕಂಟೈನರ್ ಲಾರಿಯೊಂದು ಡಿಕ್ಕಿಯಾಗಿ ಸ್ಕೂಟರ್ ಸವಾರನೋರ್ವ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳೂರು ಉಡುಪಿ ರಸ್ತೆಯ ಕೂಳೂರು ವಿ.ಅರ್.ಎಲ್ ಕಚೇರಿ ಎದುರು ಶುಕ್ರವಾರ ಸಂಜೆ ನಡೆದಿದೆ. ಸದಾನಂದ ಶೆಟ್ಟಿಗಾರ್(46) ಮೃತ ಸ್ಕೂಟರ್ ಸವಾರ.ಮೃತರು ಕೊಟ್ಟಾರ ಕಡೆಯಿಂದ ಉಡುಪಿ ಕಡೆಗೆ ಹೋಗುತ್ತಿರುವಾಗ ಅದೇ ರಸ್ತೆಯಲ್ಲಿ ಬರುತ್ತಿದ್ದ ಚಾಲಕ ಮಹಮ್ಮದ್ ಅಜರುದ್ದೀನ್ ಚಲಾಯಿಸುತ್ತಿದ್ದ ಕಂಟೈನರ್ ಲಾರಿ ಡಿಕ್ಕಿಯಾಗಿದೆ.ಇನ್ನು ಚಾಲಕ ಮಹಮ್ಮದ್ ಅಜರುದ್ದೀನ್ ನಿರ್ಲಕ್ಷ್ಯ ಹಾಗೂ ದುಡುಕುತನದಿಂದ ಲಾರಿ ಚಲಾಯಿಸಿ ಸ್ಕೂಟರ್ ಗೆ ಡಿಕ್ಕಿ ಪಡಿಸಿದ್ದಾರೆ. ಘಟನೆ ವೇಳೆ ಲಾರಿ ಸವಾರನ ಮೇಲೆ ಚಲಿಸಿ ಸ್ಕೂಟರ್ ಚಾಲಕ ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.ಸ್ಥಳಕ್ಕೆ ಸ್ಥಳೀಯ ಪೊಲೀಸರು ಭೇಟಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. 

Read More

ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಹೀಗಾಗಿ ಕರಾವಳಿಗೆ ಭಾಗಕ್ಕೆ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಜೊತೆಗೆ, ಮಳೆಯೊಂದಿಗೆ ಗಂಟೆಗೆ 30-40 ಕಿಮೀ ವೇಗದಲ್ಲಿ ಬಲವಾದ ಗಾಳಿ ಬೀಸಲಿದೆ. ಮುಂಗಾರು ಮಳೆಯ ಅಬ್ಬರ ಜೋರಾಗುವ ಹಿನ್ನೆಲೆ ಕಡಲ ತೀರದ ನಿವಾಸಿಗಳು ಹಾಗೂ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ವಹಿಸಲು ಹವಾಮಾನ ಇಲಾಖೆ ಸೂಚಿಸಿದೆ.ಕರಾವಳಿ ಸೇರಿದಂತೆ ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಜೊತೆಗೆ ಬೆಳಗಾವಿ ಮತ್ತು ಧಾರವಾಡ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಯೆಲ್ಲೋ ಅಲರ್ಟ್ ನೀಡಲಾಗಿದೆ.ಇನ್ನು ಬಾಗಲಕೋಟೆ, ಬೀದರ್, ಗದಗ, ಹಾವೇರಿ, ಕಲ್ಬುರ್ಗಿ, ಕೊಪ್ಪಳ, ರಾಯಚೂರು, ವಿಜಯಾಪುರ ಮತ್ತು ಯಾದಗಿರಿ ಜಿಲ್ಲೆಗಳ ಹಲವು ಸ್ಥಳಗಳಲ್ಲಿ 30-40 ಕಿಮೀ ವೇಗದಲ್ಲಿ ನಿರಂತರ ಗಾಳಿ ಬೀಸುವುದರೊಂದಿಗೆ ಹಗುರದಿಂದ ಸಾಧಾರಣ…

Read More

ಮಂಗಳೂರು, ಜು. 03 : ಮನೆಯೊಂದರಲ್ಲಿ ಕಳ್ಲತನಕ್ಕೆ ಯತ್ನಿಸಿದ ಆರೋಪಿಗಳ ಪೈಕಿ ಓರ್ವನನ್ನು ನಿವಾಸಿಗಳೇ ಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ಶುಕ್ರವಾರ ನಸುಕಿನ ಜಾವ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಬದ್ರಿಯಾ ನಗರದಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಮೂಲಗಳ ಪ್ರಕಾರ, ಶುಕ್ರವಾರ ಬೆಳಗ್ಗೆ ಸುಮಾರು 2:30ರ ಸುಮಾರಿಗೆ ಬದ್ರಿಯಾ ನಗರದ ಹಂಸ ಎಂಬವರ ಮನೆಗೆ ನಾಲ್ವರು ಅಪರಿಚಿತರು ನುಗ್ಗಿದ್ದಾರೆ. ಮನೆಯೊಳಗೆ ಅನುಮಾನಾಸ್ಪದ ಚಲನವಲನಗಳನ್ನು ಗಮನಿಸಿದ ಕುಟುಂಬದವರು ಕೂಡಲೇ ಎಚ್ಚೆತ್ತುಕೊಂಡಿದ್ದಾರೆ. ಕೂಡಲೇ ಕಾರ್ಯಪ್ರವೃತ್ತರಾದ ಅವರು, ಕಳ್ಳತನಕ್ಕೆ ಯತ್ನಿಸುತ್ತಿದ್ದ ನಾಲ್ವರ ಪೈಕಿ ಒಬ್ಬನನ್ನು ಹಿಡಿದಿದ್ದಾರೆ. ಉಳಿದ ಮೂವರು ಸ್ಥಳದಿಂದ ಪರಾರಿಯಾಗಿದ್ದಾರೆ.ಸಾರ್ವಜನಿಕರ ಕೈಗೆ ಸಿಕ್ಕಿಬಿದ್ದ ಆರೋಪಿಯನ್ನು ಬಿಹಾರ ಮೂಲದ ದೀಪ್ ಕುಮಾರ್ ಎಂದು ಗುರುತಿಸಲಾಗಿದೆ. ಸ್ಥಳೀಯರು ಈತನನ್ನು ಸುರತ್ಕಲ್ ಪೊಲೀಸರಿಗೆ ಒಪ್ಪಿಸಿದ್ದು, ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.ಪರಾರಿಯಾದ ಉಳಿದ ಮೂವರು ಆರೋಪಿಗಳಿಗಾಗಿ ಪೊಲೀಸರು ತೀವ್ರ ಶೋಧ ನಡೆಸುತ್ತಿದ್ದು, ಈ ಬಗ್ಗೆ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

Read More

ಮಂಗಳೂರು ನಗರದ ಸುರತ್ಕಲ್ ಸಮೀಪದ ಬಾಳ ಗ್ರಾಮದ ಒಟ್ಟೆಕಾಯರ್ ಪ್ರದೇಶದಲ್ಲಿ ಗೋಡೌನ್ ನಿರ್ಮಾಣಕ್ಕಾಗಿ ಗುಡ್ಡವನ್ನು ಅಗೆದ ಪರಿಣಾಮ ಭೂ ಕುಸಿತ ಸಂಭವಿಸಿರುವುದು ಅತ್ಯಂತ ಗಂಭೀರ ಮತ್ತು ಆತಂಕಕಾರಿ ಬೆಳವಣಿಗೆಯಾಗಿದೆ. ಈ ಪ್ರದೇಶದಲ್ಲಿ ಮಳೆಗಾಲದ ಸಂದರ್ಭದಲ್ಲಿ ಮತ್ತಷ್ಟು ಗುಡ್ಡ ಕುಸಿತ ಸಂಭವಿಸುವ ಅಪಾಯವಿದ್ದು, ಸಂಬಂಧಪಟ್ಟ ಇಲಾಖೆಗಳು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ (DDMA) ತಕ್ಷಣ ಸ್ಥಳ ಪರಿಶೀಲನೆ ನಡೆಸಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವುದು ಅತ್ಯಗತ್ಯವಾಗಿದೆ. ಒಟ್ಟೆಕಾಯರ್ ಪ್ರದೇಶದ ಮೂಲಕ ISPRL ಪಾದೂರು ಕಚ್ಚಾ ತೈಲ (Crude Oil) ಪೈಪ್‌ಲೈನ್ ಹಾದು ಹೋಗುತ್ತಿರುವುದರಿಂದ ಯಾವುದೇ ಭೂಕುಸಿತ ಅಥವಾ ನೆಲಜಾರುವಿಕೆ ಸಂಭವಿಸಿದರೆ ಅದರ ಪರಿಣಾಮ ಸಾಮಾನ್ಯ ಆಸ್ತಿ ಹಾನಿಗೆ ಮಾತ್ರ ಸೀಮಿತವಾಗದೆ, ರಾಷ್ಟ್ರೀಯ ಮಹತ್ವದ ಮೂಲಸೌಕರ್ಯಕ್ಕೂ ಅಪಾಯ ಉಂಟಾಗುವ ಸಾಧ್ಯತೆಯನ್ನು ನಿರ್ಲಕ್ಷಿಸಲು ಸಾಧ್ಯವಿಲ್ಲ. ಈ ಪ್ರದೇಶದಲ್ಲಿ ಸುಮಾರು 80 ಮನೆಗಳಿದ್ದು, ಇದು ಒಂದು ದ್ವೀಪದಂತಿರುವ ಭೌಗೋಳಿಕ ಪರಿಸ್ಥಿತಿಯನ್ನು ಹೊಂದಿದೆ. ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆ ಅಥವಾ ದಾರಿ ಭೂಕುಸಿತದಿಂದ…

Read More

ದೇಶದಲ್ಲಿ ನಕಲಿ ಔಷಧ ತಯಾರಿಕಾ ದಂಧೆಗೆ ಸಂಬಂಧಿಸಿದ ತನಿಖೆಯಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ ನಡೆದಿದೆ. ₹3 ಕೋಟಿ ಲಂಚ ಪಡೆದ ಆರೋಪದ ಹಿನ್ನೆಲೆಯಲ್ಲಿ ನಾಗರಿಕ ವಾಯುಯಾನ ಭದ್ರತಾ ಸಂಸ್ಥೆ (BCAS)ಯಲ್ಲಿ ಕೇಂದ್ರ ನಿಯೋಜನೆಯಲ್ಲಿದ್ದ ಹಿರಿಯ ಐಪಿಎಸ್ ಅಧಿಕಾರಿ ದೀಪಕ್ ಗಹ್ಲಾವತ್ ಅವರನ್ನು ಸಿಬಿಐ ಬಂಧಿಸಿದೆ. ಹರಿಯಾಣ ಕೇಡರ್‌ನ 2012ರ ಬ್ಯಾಚ್‌ನ ಐಪಿಎಸ್ ಅಧಿಕಾರಿಯಾಗಿರುವ ದೀಪಕ್ ಗಹ್ಲಾವತ್, ಆರೋಪಿತ ಘಟನೆ ನಡೆದ ಸಂದರ್ಭದಲ್ಲಿ ಬಿಸಿಎಎಸ್‌ನ ಪ್ರಾದೇಶಿಕ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ನಕಲಿ ಔಷಧ ದಂಧೆಗೆ ಸಂಬಂಧಿಸಿದ ಸಿಬಿಐ ತನಿಖೆಯಲ್ಲಿ ತಮ್ಮ ಪ್ರಭಾವ ಬಳಸಿ ಅನುಕೂಲಕರ ಫಲಿತಾಂಶ ದೊರಕುವಂತೆ ಮಾಡುತ್ತೇನೆ ಎಂದು ಪುದುಚೇರಿಯ ಉದ್ಯಮಿಯೊಬ್ಬರಿಗೆ ಭರವಸೆ ನೀಡಿ, ಅದರ ಪ್ರತಿಫಲವಾಗಿ ₹3 ಕೋಟಿ ಲಂಚ ಸ್ವೀಕರಿಸಿದ್ದಾರೆ ಎಂದು ಆರೋಪಿಸಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿ ಸಿಬಿಐ ಅಧಿಕಾರಿಗಳು ಗಹ್ಲಾವತ್ ಅವರಿಗೆ ಸೇರಿದ ಹಲವು ಸ್ಥಳಗಳಲ್ಲಿ ಶೋಧ ನಡೆಸಿದ್ದು, ಡಿಜಿಟಲ್ ಸಾಧನಗಳು, ಹಾರ್ಡ್ ಡಿಸ್ಕ್‌ಗಳು ಹಾಗೂ ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಬಂಧನವು ಜೂನ್ 8ರಂದು ದಾಖಲಾದ ಎಫ್‌ಐಆರ್…

Read More

ಮಂಗಳೂರು, ಜುಲೈ 3; ಸಾಮಾಜಿಕ, ಶೈಕ್ಷಣಿಕ ಹಾಗೂ ರಾಜಕೀಯ ಕ್ಷೇತ್ರಗಳಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡಿರುವ ಮಾಜಿ ತಾಲೂಕು ಪಂಚಾಯತ್ ಉಪಾಧ್ಯಕ್ಷ ಪ್ರಕಾಶ್ ಶೆಟ್ಟಿ ಅಸೈಗೋಳಿ ಅವರು ಮತ್ತೆ ಸಕ್ರಿಯ ರಾಜಕಾರಣಕ್ಕೆ ಮರಳಿದ್ದು, ಜನತಾದಳ (ಜಾತ್ಯತೀತ) ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಗೊಂಡಿದ್ದಾರೆ. ಜಿಲ್ಲಾ ಅಧ್ಯಕ್ಷರಾದ ಜಾಕೆ ಮಾಧವ ಗೌಡ ಅವರ ನಿರ್ದೇಶನದಂತೆ ಗುರುವಾರ ನಡೆದ ಕಾರ್ಯಕ್ರಮದಲ್ಲಿ ಜೆಡಿಎಸ್ ರಾಜ್ಯ ಮೀನುಗಾರರ ಘಟಕದ ಅಧ್ಯಕ್ಷ ರತ್ನಾಕರ ಸುವರ್ಣ, ಜಿಲ್ಲಾ ಕಾರ್ಯಾಧ್ಯಕ್ಷರಾದ ಇಕ್ಬಾಲ್ ಅಹಮ್ಮದ್ ಮುಲ್ಕಿ ಹಾಗೂ ವಸಂತ್ ಪೂಜಾರಿ ಅವರ ಉಪಸ್ಥಿತಿಯಲ್ಲಿ ಜಿಲ್ಲಾ ಮಹಾಪ್ರಧಾನ ಕಾರ್ಯದರ್ಶಿ ಯೋಗಿಶ್ ಶೆಟ್ಟಿ ಜಪ್ಪು ಅವರು ಪಕ್ಷದ ಶಾಲು ಹೊದಿಸಿ ಪ್ರಕಾಶ್ ಶೆಟ್ಟಿ ಅಸೈಗೋಳಿ ಅವರನ್ನು ಪಕ್ಷಕ್ಕೆ ಆತ್ಮೀಯವಾಗಿ ಬರಮಾಡಿಕೊಂಡರು. ಪ್ರಕಾಶ್ ಶೆಟ್ಟಿ ಅಸೈಗೋಳಿ ಅವರು ವಿದ್ಯಾರ್ಥಿ ಜೀವನದಿಂದಲೇ ನಾಯಕತ್ವದ ಗುಣಗಳನ್ನು ಬೆಳೆಸಿಕೊಂಡಿದ್ದು, ಮಂಗಳೂರು ಸರ್ಕಾರಿ ಕಾಲೇಜಿನ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಹಾಗೂ ಸರ್ವ ಕಾಲೇಜು ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಯಶಸ್ವಿಯಾಗಿ ಕಾರ್ಯನಿರ್ವಹಿಸಿದ್ದರು. ಬಳಿಕ ಸಾರ್ವಜನಿಕ ಸೇವೆಯಲ್ಲಿ ತೊಡಗಿ ತಾಲೂಕು ಪಂಚಾಯತ್…

Read More

ಪುತ್ತೂರು, ಜು.3: ಪುತ್ತೂರು ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಸಮೀಪ ಯುವತಿಗೆ ಕಿರುಕುಳ ನೀಡಲಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಗುರುವಾರ ಮಧ್ಯಾಹ್ನ ಮಾತಿನ ಚಕಮಕಿ ಮತ್ತು ತಳ್ಳಾಟ ನಡೆದ ಘಟನೆ ವರದಿಯಾಗಿದೆ. ಘಟನಾ ಸ್ಥಳದಲ್ಲಿ ಕೆಲವರು ಜಮಾಯಿಸಿ ಪರಸ್ಪರ ವಾಗ್ವಾದ ನಡೆಸಿದ್ದು, ಬಳಿಕ ತಳ್ಳಾಟ-ನೂಕಾಟವೂ ನಡೆದಿದೆ ಎನ್ನಲಾಗಿದೆ. ವಿಷಯ ತಿಳಿದ ಪೊಲೀಸರು ಸ್ಥಳಕ್ಕೆ ಧಾವಿಸುವಷ್ಟರಲ್ಲಿ ಘಟನೆಗೆ ಸಂಬಂಧಿಸಿದವರು ಅಲ್ಲಿಂದ ತೆರಳಿದ್ದರು ಎಂದು ತಿಳಿದು ಬಂದಿದೆ.

Read More

ಬಂಟ್ವಾಳ, ಜು. 02 : ಬಂಟ್ವಾಳ ತಾಲೂಕಿನ ಕೊಳ್ನಾಡು ಗ್ರಾಮದ ಸೆರ್ಕಳ ಕುದ್ಕಾರ್‌ನಲ್ಲಿ ಜುಲೈ 2 ರ ಬೆಳಿಗ್ಗೆ ನಾಗರಹಾವು ಕಚ್ಚಿ 50 ವರ್ಷದ ಆಟೋರಿಕ್ಷಾ ಚಾಲಕ ಸಾವನ್ನಪ್ಪಿದ್ದಾನೆ. ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ವ್ಯಕ್ತಿ ಕೊನೆಯುಸಿರೆಳೆದಿದ್ದಾರೆ.  ಮೃತನನ್ನು ಸೆರ್ಕಳ ಕುಡ್ಕರ್ ನಿವಾಸಿ ಸುಲೈಮಾನ್ ಅವರ ಪುತ್ರ ಹಸೈನಾರ್ ಎಂದು ಗುರುತಿಸಲಾಗಿದೆ. ಗುರುವಾರ ಬೆಳಿಗ್ಗೆ ಹಸೈನಾರ್ ತಮ್ಮ ಮನೆಯ ಬಳಿ ಇರಿಸಲಾಗಿದ್ದ ಹುಲ್ಲು ಕಡಿಯುವ ಯಂತ್ರವನ್ನು ಎತ್ತಲು ಪ್ರಯತ್ನಿಸಿದಾಗ ಈ ಘಟನೆ ಸಂಭವಿಸಿದೆ.ಯಂತ್ರದ ಬಳಿ ಆಶ್ರಯ ಪಡೆದಿದ್ದ ನಾಗರಹಾವು ಅವರನ್ನು ಕಚ್ಚಿದೆ ಘಟನೆಯ ಬಗ್ಗೆ ಮಾಹಿತಿ ಪಡೆದ ಸ್ಥಳೀಯರು ತಕ್ಷಣ ತೀವ್ರ ಅಸ್ವಸ್ಥರಾಗಿದ್ದ ಹಸೈನಾರ್ ಅವರನ್ನು ಕಲ್ಲಡ್ಕದ ಖಾಸಗಿ ಆಸ್ಪತ್ರೆಗೆ ದಾಖಲಿಸಿದರು. ಆದರೆ, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಕಂಕನಾಡಿಯ ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲಿ, ಮಾರ್ಗಮಧ್ಯೆ ಅವರು ಮೃತಪಟ್ಟರು.ಮಾಹಿತಿ ಬಂದ ತಕ್ಷಣ, ಸ್ಥಳೀಯ ಹಾವು ರಕ್ಷಕ ಹೈದರ್ ಸ್ಥಳಕ್ಕೆ ಆಗಮಿಸಿ ಹುಲ್ಲು ಕಡಿಯುವ ಯಂತ್ರದ ಬಳಿ ಅಡಗಿಕೊಂಡಿದ್ದ ನಾಗರಹಾವನ್ನು ಯಶಸ್ವಿಯಾಗಿ ಸೆರೆಹಿಡಿದಿದ್ದಾರೆ.

Read More

ಮಂಗಳೂರು/ಉಡುಪಿ, ಜು. 02: ದಕ್ಷಿಣ ಕನ್ನಡ (ದ.ಕ) ಮತ್ತು ಉಡುಪಿ ಜಿಲ್ಲೆಗಳಿಗೆ ಭಾರತ ಹವಾಮಾನ ಇಲಾಖೆ (ಐಎಂಡಿ) ರೆಡ್ ಅಲರ್ಟ್ ನೀಡಿದ್ದರೂ, ಗುರುವಾರ ಮಳೆ ನಿರೀಕ್ಷೆಗಿಂತ ಕಡಿಮೆಯಾಗಿತ್ತು, ಹಲವಾರು ಪ್ರದೇಶಗಳಲ್ಲಿ ಹಗಲಿನಲ್ಲಿ ಸ್ವಲ್ಪ ಮಳೆ ಮತ್ತು ಬಿಸಿಲು ಮಾತ್ರ ಕಂಡುಬಂದಿತು.  ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸುವುದು ಸೇರಿದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಅಧಿಕಾರಿಗಳು ತೆಗೆದುಕೊಂಡಿದ್ದರೂ, ಹವಾಮಾನ ತಜ್ಞರು ಜುಲೈ 4 ರಿಂದ 10 ರವರೆಗೆ ಮತ್ತೆ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದ್ದು, ಜಿಲ್ಲಾಡಳಿತಗಳು ಹೆಚ್ಚಿನ ಎಚ್ಚರಿಕೆ ವಹಿಸುವಂತೆ ಸೂಚಿಸಿದೆ.ಆರೆಂಜ್‌ ಅಲರ್ಟ್‌ ಇರುವುದರಿಂದ ಜಿಲ್ಲೆಯಾದ್ಯಂತ ಎಲ್ಲಾ ಅಂಗನವಾಡಿಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆಗಳು ಮತ್ತು ಪಿಯು ಕಾಲೇಜುಗಳಿಗೆ ಜುಲೈ 3 ಶುಕ್ರವಾರ ರಜೆ ಘೋಷಿಸಲಾಗಿದೆ.ದಕ್ಷಿಣ ಕನ್ನಡದಲ್ಲಿ, ರೆಡ್ ಅಲರ್ಟ್ ಜಾರಿಯಲ್ಲಿದ್ದರೂ, ಗುರುವಾರ ದಿನದ ಹೆಚ್ಚಿನ ಸಮಯ ಮಳೆ ಸಾಧಾರಣವಾಗಿತ್ತು. ಭಾರೀ ಮಳೆಯ ಮುನ್ಸೂಚನೆಯ ವಿರುದ್ಧ ಮುನ್ನೆಚ್ಚರಿಕೆಯಾಗಿ, ಜಿಲ್ಲೆಯಾದ್ಯಂತ ಎಲ್ಲಾ ಅಂಗನವಾಡಿಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆಗಳು ಮತ್ತು ಪಿಯು ಕಾಲೇಜುಗಳಿಗೆ ಗುರುವಾರ ರಜೆ ಘೋಷಿಸಲಾಗಿದೆ.ಜಿಲ್ಲೆಯ ಕೆಲವು ಸ್ಥಳಗಳಲ್ಲಿ ಬೆಳಗಿನ…

Read More