Author: UllalaVani

Kannada News From Coastal Karnataka

ಉಳ್ಳಾಲ: ಯುವ ಲೇಖಕಿ, ವಾಗ್ಮಿ, ಕಾನೂನು ವಿದ್ಯಾರ್ಥಿನಿ ಹಾಗು ಅಂತಾರಾಷ್ಟ್ರೀಯ , ರಾಷ್ಟ್ರೀಯ, ರಾಜ್ಯ ಹಾಗೂ ಇತರ ಮಟ್ಟದಲ್ಲಿ ಸಾಧನೆ ಮಾಡಿದ ಕು| ರೆಶೆಲ್ ಬ್ರೆಟ್ನಿ ಫೆರ್ನಾಂಡಿಸ್ ತಮ್ಮ 21ನೇ ವಯಸ್ಸಿನಲ್ಲಿಯೇ ಅವರ ಎರಡನೇ ಪುಸ್ತಕ ‘ಭಾರತ್ @ 2047’ ಪ್ರಕಟಣೆಗೊಂಡಿದೆ.ಭಾರತದ ಸ್ವಾತಂತ್ರ್ಯದ 100ನೇ ವರ್ಷ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ, ದೇಶದ ಅಭಿವೃದ್ಧಿಯಲ್ಲಿ ಯುವಕರ ಪಾತ್ರ ಎಷ್ಟು ಮುಖ್ಯ ಎಂಬ ವಿಚಾರಗಳನ್ನು ವಿವಿಧ ಕ್ಷೇತ್ರದಲ್ಲಿ ರೆಶೆಲ್ ಅವರ ಈ ಪುಸ್ತಕದಲ್ಲಿ ಪ್ರಕಟಿಸಲಾಗಿದೆ. ತನೀಶಾ ಪ್ರಕಾಶನ ದೆಹಲಿ ಪ್ರಕಟಿಸಿರುವ ಈ ಪುಸ್ತಕದಲ್ಲಿ ಯುವಶಕ್ತಿಯ ಆಲೋಚನೆಗಳು ಪ್ರಕಟಗೊಂಡಿವೆ. ಪುಸ್ತಕವು 376 ಪುಟಗಳನ್ನು ಹೊಂದಿದೆ.ಪುಸ್ತಕ ರೆಶೆಲ್ ತಮ್ಮ ಅಜ್ಜ ಎಸ್‌ಜಿಟಿ ಅಲೆಕ್ಸ್ ಮೋನಿಸ್ ಮೂಡುಬಿದಿರೆ ಇವರಿಗೆ ಅರ್ಪಿಸಿದ್ದಾರೆ. ಅಲೆಕ್ಸ್ ಮೋನಿಸ್ ಭಾರತೀಯ ವಾಯುಪಡೆಯಲ್ಲಿ ೩೬ ಸೇವೆ ಸಲ್ಲಿಸಿದ್ದರು. 2ನೇ ಜಾಗತಿಕ ಯುದ್ಧದ ಕೊನೆಯ ಹಂತ, ಇಂಡೋ ಚೀನಾ ಸಂಘರ್ಷ 1962 , ಇಂಡೋ ಪಾಕ್ ಸಂಘರ್ಷ 1965, 1971 ರ ಯುದ್ಧ ಸಹಿತ ಸೇನೆಯಲ್ಲಿ ವಿವಿಧ ಹುದ್ದೆಗಳನ್ನು…

Read More

ಉಳ್ಳಾಲ: ಟಾರ್ಗೆಟ್ ಇಲ್ಯಾಸ್ ಕೊಲೆ ಪ್ರಕರಣದ ಆರೋಪಿಯನ್ನು ಅಟ್ಟಾಡಿಸಿ ತಲವಾರಿನಿಂದ ಕಡಿದು ಹತ್ಯೆ ನಡೆಸಿರುವ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ರಾ.ಹೆ.676ರ ಕಲ್ಲಾಪು ವಿ.ಕೆ.ಫರ್ನಿಚರ್ ಕಟ್ಟಡದ ಹಿಂಭಾಗದಲ್ಲಿ ತಡರಾತ್ರಿ ವೇಳೆ ನಡೆದಿದೆ. ಉಳ್ಳಾಲ ಕಡಪ್ಪುರ ನಿವಾಸಿ ಸಮೀರ್ (35) ಹತ್ಯೆಯಾದವರು. ರಾತ್ರಿ 10ರ ಸುಮಾರಿಗೆ ತಾಯಿ ಜೊತೆಗೆ ಕಲ್ಲಾಪುವಿನ ರೆಸ್ಟೋರೆಂಟ್ ಒಂದಕ್ಕೆ ಊಟಕ್ಕೆಂದು ಬಂದ ಸಂದರ್ಭ ಹಿಂಬದಿಯಿಂದ ಕಾರಿನಲ್ಲಿ ಹಿಂಬಾಲಿಸಿದ್ದ ತಂಡ ಸಮೀರ್ ಇಳಿಯುತ್ತಿದ್ದಂತೆ ತಲವಾರಿನಿಂದ ಕಡಿದು ಕೊಲೆಗೆ ಯತ್ನಿಸಿದೆ. ಅಪಾಯವನ್ನು ಅರಿತ ಸಮೀರ್ ತಕ್ಷಣ ಸ್ಥಳದಿಂದ ಓಡಲು ಯತ್ನಿಸಿ, ಈ ವೇಳೆ ಅಟ್ಟಾಡಿಸಿದ ಐದು ಮಂದಿಯ ತಂಡ ಕಲ್ಲಾಪು ಜಂಕ್ಷನ್ನಿನಿಂದ 500 ಮೀ ದೂರದಲ್ಲಿರುವ ವಿ.ಕೆ.ಫರ್ನಿಚರ್ ಹಿಂಭಾಗದವರೆಗೂ ಅಟ್ಟಾಡಿಸಿ, ಅಲ್ಲಿ ತಲವಾರಿನಿಂದ ಕಡಿದು ಹತ್ಯೆ ನಡೆಸಿದೆ. 2018 ರಲ್ಲಿ ರೌಡಿಶೀಟರ್ ಟಾರ್ಗೆಟ್ ಇಲ್ಯಾಸ್ ನನ್ನು ಜೆಪ್ಪುವಿನ ಫ್ಲಾಟ್‍ವೊಂದರಲ್ಲಿ ದಾವುದ್, ಶಮೀರ್, ರಿಯಾಝ್, ನಮೀರ್ , ಅಬ್ದುಲ್ ಖಾದರ್, ಉಮ್ಮರ್ ನವಾಫ್, ಮೊಹಮ್ಮದ್ ನಝೀರ್, ನೌಷಾದ್, ಅಝ್ಗರ್ ಆಲಿ ಎಂಬವರು…

Read More

UN networks ಉಳ್ಳಾಲ: ಬಡ ರಿಕ್ಷಾ ಚಾಲಕರ ಹೊಟ್ಟೆಗೆ ಅಧಿಕಾರಿಗಳು ಹೊಡೆಯುವ ಸಂದರ್ಭ, ಮನವಿಗೆ ಸ್ಪಂಧಿಸಿದವರು ಯು.ಟಿ ಖಾದರ್ . ಹಾಗಾಗಿ ಈ ಬಾರಿಯ ಗ್ರಾಮಾಂತರ ರಿಕ್ಷಾ ಚಾಲಕರು ಯು.ಟಿ . ಖಾದರ್ ಅವರ ಮೇಲಿನ ಅಪಪ್ರಚಾರಗಳಿಗೆ ಕಿವಿಗೊಡದೆ ಸಂಪೂರ್ಣವಾಗಿ ಬೆಂಬಲಿಸಿ ಮತ್ತೆ ಶಾಸಕರನ್ನಾಗಿ ಆಯ್ಕೆ ಮಾಡಲು ಪಣತೊಟ್ಟಿದ್ದೇವೆ ಎಂದು ಗ್ರಾಮಾಂತರ ರಿಕ್ಷಾ ಚಾಲಕ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಪ್ರಸಾದ್ ಕುರ್ನಾಡು ಹೇಳಿದ್ದಾರೆ.ನಗರಕ್ಕೆ ಪ್ರವೇಶಿಸುವಾಗ ದೊಡ್ಡ ಮೊತ್ತದ ದಂಡ ವಿಧಿಸುತ್ತಿದ್ದರು. ಈ ಸಂದರ್ಭ ಪ್ರಥಮವಾಗಿ ಸಮಸ್ಯೆಯಯನ್ನು ಆಲಿಸಿ ಪರಿಹಾರವನ್ನು ಒದಗಿಸಿಕೊಟ್ಟವರು ಶಾಸಕ ಯು.ಟಿ ಖಾದರ್. ಜಾತ್ಯಾತೀತ , ಪಕ್ಷಾತೀತವಾಗಿ , ಧರ್ಮಾತೀತವಾಗಿ ಎಲ್ಲಾ ರಿಕ್ಷಾ ಚಾಲಕರು ಖಾದರ್ ಅವರನ್ನು ಬೆಂಬಲಿಸುವುದು ರಿಕ್ಷಾ ಚಾಲಕರ ಕರ್ತವ್ಯವಾಗಿದೆ.ಎಲ್ಲಾ ಪಾರ್ಕುಗಳಲ್ಲಿಯೂ ತಂಗುದಾಣವನ್ನು ನಿರ್ಮಿಸಿದವರು ಶಾಸಕರು. ಕಷ್ಟಗಳಿಗೆ ನೇರವಾಗಿ ಸ್ಪಂಧಿಸಿದವರು ,ಕೊರೊನಾ ಸಂದರ್ಭದಲ್ಲಿ ಗ್ರಾಮಾಂತರ ರಿಕ್ಷಾ ಚಾಲಕರಿಗೆ ಕಿಟ್ ಕೊಟ್ಟು ಸಹಾಯ ಮಾಡಿದವರು. ಬಡವರಿಗೆ ಸಿಗುವ ಏಕೈಕ ನಾಯಕನನ್ನು ಗೆಲ್ಲಿಸುವ ಜವಾಬ್ದಾರಿ ರಿಕ್ಷಾ ಚಾಲಕರದ್ದಾಗಿದೆ. ಅಪಪ್ರಚಾರಗಳಿಗೆ ಕಿವಿಗೊಡದೆ…

Read More

The Best Casino Games The slot machine is among the most popular games at casinos. There are a variety of kinds of slots, but the most popular ones are blackjack, video poker, and roulette. It is a simple game to learn and requires little skills. This is the simplest way to empty your bank account and you don’t require any prior experience to be able to win. You can also play progressive jackpots which make it more thrilling. Baccarat: This is the most played casino game. It’s simple to play and learn, and a great way for you to win…

Read More

UN networks ಉಳ್ಳಾಲ: ಫಾದರ್ ಮುಲ್ಲರ್ ಸೇವಾ ಸಂಸ್ಥೆಯ ಘಟಕ ಫಾದರ್ ಮುಲ್ಲರ್ ಹೋಮಿಯೋಪತಿ ವೈದ್ಯಕೀಯ ಮಹಾವಿದ್ಯಾಲಯದ ಹೋಮಿಯೋಪತಿ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳ 33ನೇ ಪದವಿ ಪ್ರಧಾನ ಸಮಾರಂಭ ಎ.29 ರಂದು ಬೆಳಿಗ್ಗೆ 10ಕ್ಕೆ ಕಂಕನಾಡಿಯ ಫಾದರ್ ಮುಲ್ಲರ್ಸ್ ಕನ್ವೆನ್ಷನ್ ಸೆಂಟರಿನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಫಾದರ್ ಮುಲ್ಲರ್ ಸೇವಾ ಸಂಸ್ಥೆಗಳ ನಿರ್ದೇಶಕ ಫಾ. ರಿಚರ್ಡ್ ಅಲೋಶಿಯಸ್ ಕುವೆಲ್ಲೋ ಹೇಳಿದರು. ಅವರು ದೇರಳಕಟ್ಟೆಯ ಫಾದರ್ ಮುಲ್ಲರ್ಸ್ ಹೋಮಿಯೋಪತಿ ಕಾಲೇಜು ಮತ್ತು ಆಸ್ಪತ್ರೆ ಕಾನ್ಫರೆನ್ಸ್ ಹಾಲ್ ನಲ್ಲಿ ಇಂದು ನಡೆಸಿದ ಸುದ್ಧಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.ಸಮಾರಂಭದ ಅಧ್ಯಕ್ಷತೆಯನ್ನು ಮಂಗಳೂರು ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಹಾಗೂ ಫಾದರ್ ಮುಲ್ಲರ್ ಸೇವಾ ಸಂಸ್ಥೆಗಳ ಅಧ್ಯಕ್ಷ ಡಾ. ಪೀಟರ್ ಪೌಲ್ ಸಲ್ದಾನ್ಹ ವಹಿಸಲಿದ್ದಾರೆ. ವಿನಾಯಕ ಮಿಷನ್ ರಿಸರ್ಚ್ ಫೌಂಡೇಶನ್ , ಸ್ವಾಯುತ್ತೆಗೊಳ್ಳಲಿರುವ ವಿಶ್ವವಿದ್ಯಾನಿಲಯ ಸೇಲಂ, ತಮಿಳುನಾಡು ಇದರ ಉಪಕುಲಪತಿ ಡಾ. ಪಿ.ಕೆ. ಸುಧೀರ್ ಪದವೀಧರರನ್ನು ಸನ್ಮಾನಿಸಲಿದ್ದಾರೆ ಎಂದರು.ಆಡಳಿತಾಧಿಕಾರಿ ರೋಶನ್ ಕ್ರಾಸ್ತ ಮಾತನಾಡಿ ಸಮಾರಂಭದಲ್ಲಿ 97 ಹೋಮಿಯೋಪತಿ ಪದವಿ ಹಾಗೂ 18 ಸ್ನಾತಕೋತ್ತರ…

Read More

UN networks ಉಳ್ಳಾಲ: 10 ವರ್ಷಗಳ ಹಿಂದಿನ ಉತ್ತರಪ್ರದೇಶದ ಸ್ಥಿತಿ ಮಂಗಳೂರು (ಉಳ್ಳಾಲ) ವಿಧಾನಸಭಾ ಕ್ಷೇತ್ರದಲ್ಲಿ ಸದ್ಯ ನಿರ್ಮಾಣವಾಗಿದೆ. ಅಭ್ಯರ್ಥಿಯೊಬ್ಬರಿಗೆ ಜೀವಬೆದರಿಕೆಯೊಡ್ಡಿ ನಾಮಪತ್ರ ಹಿಂಪಡೆಯುವಂತೆ ಮಾಡಿದ ಕಾಂಗ್ರೆಸ್ ಹಿಂಬಾಲಕರ ವಿರುದ್ಧ ಚುನಾವಣಾ ಆಯೋಗ ಕಾನೂನು ಕ್ರಮಕೈಗೊಂಡು ಉಳ್ಳಾಲದ ಮತದಾರರಲ್ಲಿ ಧೈರ್ಯ ತುಂಬಿಸುವ ಕಾರ್ಯವನ್ನು ಮಾಡಬೇಕಿದೆ ಎಂದು ಬಿಜೆಪಿ ಮಂಗಳೂರು ಮಂಡಲ ಅಧ್ಯಕ್ಷ ಚಂದ್ರಹಾಸ್ ಪಂಡಿತ್ ಹೌಸ್ ಹೇಳಿದರು.ಪಂಡಿತ್ ಹೌಸ್ ನ ಬಿಜೆಪಿ ಚುನಾವಣಾ ಕಾರ್ಯಾಲಯದಲ್ಲಿ ಮಂಗಳವಾರ ಹಮ್ಮಿಕೊಂಡ ಸುದ್ಧಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.ಮಂಗಳೂರು (ಉಳ್ಳಾಲ) ವಿಧಾನಸಭಾ ಕ್ಷೇತ್ರದಲ್ಲಿ ಸಂವಿಧಾನಕ್ಕೆ ಕುತ್ತು ಬರುವ ರೀತಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ವರ್ತಿಸಿದ್ದಾರೆ. ಇದರಿಂದ ಕ್ಷೇತ್ರದ ಮತದಾರರು ಭಯದಿಂದ ಪ್ರಜಾಪ್ರಭುತ್ವದ ಉತ್ಸವ ಮತದಾನದಲ್ಲಿ ಭಾಗವಹಿಸುವ ವಾತಾವರಣ ನಿರ್ಮಾಣವಾಗಿದೆ. ತಪ್ಪಿತಸ್ಥರ ವಿರುದ್ಧ ತಕ್ಷಣವೇ ಚುನಾವಣಾ ಆಯೋಗ ಸುಮೋಟೊ ಕ್ರಮಕೈಗೊಳ್ಳಬೇಕು. ಇದರಿಂದ ಮತದಾರರಲ್ಲಿ ಧೈರ್ಯ ತುಂಬಲು ಸಾಧ್ಯ. ಮೊದಲ ಹಂತದ ಚುನಾವಣಾ ಪ್ರಚಾರ ಇಂದಿಗೆ ಮುಕ್ತಾಯಗೊಂಡಿದೆ. ಬಿಜೆಪಿಗೆ ಕ್ಷೇತ್ರದ ಉದ್ದಕ್ಕೂ ಅಭೂತಪೂರ್ವ ಬೆಂಬಲ ದೊರೆತಿದೆ. ಅಂಬ್ಲಮೊಗರು ಗ್ರಾಮದಲ್ಲಿ ಕಾಂಗ್ರೆಸ್ ಮುಖಂಡರು ಬಿಜೆಪಿಗೆ…

Read More

UN networks ಉಳ್ಳಾಲ: ಉಳ್ಳಾಲ ದರ್ಗಾಕ್ಕೆ ಬಂದಿದ್ದ ವ್ಯಕ್ತಿಯೋರ್ವರು ಸಮುದ್ರದಲ್ಲಿ ಮಕ್ಕಳೊಂದಿಗೆ ನೀರಾಟಕ್ಕಿಳಿದ ವೇಳೆ ನೀರುಪಾಲಾಗಿ ಮೃತಪಟ್ಟಿದ್ದು ,ಆತನ ಮಗನನ್ನ ಸ್ಥಳೀಯ ಈಜುಗಾರರು ರಕ್ಷಿಸಿದ್ದಾರೆ.ಗಂಜಿಮಠ ಮಳಲಿ ನಿವಾಸಿ ಖಾಲಿದ್(51) ಸಮುದ್ರ ಪಾಲಾದ ವ್ಯಕ್ತಿ.ಖಾಲಿದ್ ಅವರು ತನ್ನ ಪತ್ನಿ,ಮಗ,ಸಂಬಂಧಿ ಮಕ್ಕಳ ಜೊತೆ ಉಳ್ಳಾಲ ದರ್ಗಾಕ್ಕೆ ಭೇಟಿ ನೀಡಿದ್ದರು.ದರ್ಗಾ ಭೇಟಿ‌‌ ಬಳಿಕ ಉಳ್ಳಾಲ ಬೀಚ್ ಗೆ ತೆರಳಿದ್ದರು.ಈ ವೇಳೆ ಖಾಲಿದ್ ಮಗನೊಂದಿಗೆ ನೀರಾಟವಾಡುತ್ತಿದ್ದ ವೇಳೆ ಅಬ್ಬರದ ಅಲೆಯು ಖಾಲಿದನ್ನು ನೀರು ಪಾಲಾಗಿಸಿದೆ.ಸ್ಥಳದಲ್ಲಿದ್ದ ಈಜುಗಾರರು ಖಾಲಿದ್ ಅವರ ಮಗನನ್ನು ರಕ್ಷಿಸಿ ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.ಸಂಜೆ ವೇಳೆ ಖಾಲಿದ್ ಅವರ ಮೃತದೇಹ ಸಮುದ್ರ ತೀರದಲ್ಲಿ ಸಿಕ್ಕಿದ್ದು ಉಳ್ಳಾಲ ಠಾಣಾ ಪೊಲೀಸರು ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ರಕ್ಷಣೆಗಿಳಿದವನ ಪಸ್೯ ನಾಪತ್ತೆ !ಖಾಲಿದ್ ಮುಳುಗುತ್ತಿದ್ದಂತೆ ಕುಟುಂಬಸ್ಥರು ರಕ್ಷಣೆಗಾಗಿ ಬೊಬ್ಬಿರಿದಿದ್ದು, ಈ ವೇಳೆ ಸಮೀಪದಲ್ಲೇ ಇದ್ದ ಕೋಡಿ ನಿವಾಸಿಗಳಾದಜಬ್ಬಾರ್, ಅಶ್ರಫ್, ಇಮ್ತಿಯಾಝ್, ಮಹಮ್ಮದ್ ಎಂಬವರು ಧಾವಿಸಿ ಖಾಲಿದ್ ಅವರ ಪುತ್ರನನ್ನು ರಕ್ಷಿಸುವಲ್ಲಿ ಯಶಸ್ವಿಯಾದರು. ಆದರೆ ಖಾಲಿದ್ ಅವರನ್ನು ಸಮುದ್ರ…

Read More

UN networks ಉಳ್ಳಾಲ: ಕಾಂಗ್ರೆಸ್ ಪಕ್ಷ ಸಿದ್ಧಾಂತವನ್ನು ಒಪ್ಪಿಕೊಂಡು ಬಿಜೆಪಿ ಸೇರಿದಂತೆ ವಿವಿಧ ಪಕ್ಷಗಳಿಂದ ಮುಖಂಡರು, ಕಾರ್ಯಕರ್ತರು ಕಾಂಗ್ರೆಸ್‍ಗೆ ಸೇರ್ಪಡೆಯಾಗುತ್ತಿದ್ದು, ಪಕ್ಷಕ್ಕೆ ಸೇರಿದ ಸರ್ವರನ್ನು ಸಮಾನತೆ ಮತ್ತು ಗೌರವದಿಂದ ಕಾಣಲಾಗುವುದು ಎಂದು ಮಂಗಳೂರು ವಿಧಾನಸಭಾ ಕ್ಷೇತ್ರದ ಶಾಸಕ ಯು.ಟಿ.ಖಾದರ್ ಅಭಿಪ್ರಾಯಪಟ್ಟರು. ಅವರು ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯ ಬೀರಿ, ಕೋಟೆಕಾರು, ಉಳ್ಳಾಲ ನಗರಸಭಾ ವ್ಯಾಪ್ತಿಯ ಮುಕ್ಕಚ್ಚೇರಿ, ಕೋಟೆಪುರ, ತೊಕ್ಕೊಟ್ಟು ಪೆರ್ಮನ್ನೂರು, ಚೇಳೂರು ವ್ಯಾಪ್ತಿಯ ಕೋಟೆಕಣಿ, ಮೇರೆಮಜಲು ಗ್ರಾಮ, ನರಿಂಗಾನ ಗ್ರಾಮದ ವಿದ್ಯಾನಗರ, ಸೋಮೇಶ್ವರ ಪುರಸಭೆ ವ್ಯಾಪ್ತಿಯ ಮುಂಡೋಳಿ, ಮುನ್ನೂರು ಗ್ರಾಮದ ಪಂಜಂದಾಯ ದೈವಸ್ಥಾನ ವ್ಯಾಪ್ತಿಯಲಲಿ ಮತಯಾಚೆನ ನೆರವೇರಿಸಿ ಮಾತನಾಡಿದರು.ಮಂಗಳೂರು ವಿಧಾನಸಬಾ ಕ್ಷೇತ್ರ ವ್ಯಾಪ್ತಿಯಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ನಗರ ಪ್ರದೇಶದ ಸವಲತ್ತನ್ನು ಕೊಡುವಲ್ಲಿ ಮೂಲಭೂತ ಸೌಕರ್ಯ ಅಭಿವೃದ್ಧಿ ಮಾಡಿದ್ದು, ಕುಡಿಯುವ ನೀರಿನ ಯೋಜನೆ ಮಹತ್ವದ ಕಾಮಗಾರಿ ರ್ಪೂಗೊಂಡಿದ್ದು, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕೆವೇ ತಿಂಗಳುಗಳಲ್ಲಿ ಈ ಯೋಜನೆಯನ್ನು ಪೂರ್ಣಗೊಳಿಸುವ ಯೋಜನೆಯನ್ನು ಹಾಕಿಕೊಂಡಿದ್ದು, ಇದರೊಂದಿಗೆ ಉಳಿದಿರು ಮೂಲಭೂತ ಸೌಕರ್ಯವನ್ನು ಆಭಿವೃದ್ಧಿ ಪಡಿಸಲಾಗುವುದು ಎಂದರು.ಈ ಸಂದರ್ಭದಲ್ಲಿ…

Read More

UN networks ಮಂಗಳೂರು: ಅಪರೂಪದ ಪ್ರಕರಣವೊಂದರಲ್ಲಿ ಪುತ್ರಿಯರೇ ತಮ್ಮ ತಂದೆಯ ಮೇಲೆ ಮಾಡಿದ ಅತ್ಯಾಚಾರ ಆರೋಪದ ಪೈಕಿ ಒಂದು ಪ್ರಕರಣ ನಗರದ ಪೋಕ್ಸೋ ನ್ಯಾಯಾಲಯದಲ್ಲಿ ಇನ್ನೊಂದು ಪ್ರಕರಣದಲ್ಲಿ ಆರೋಪಿಯನ್ನು ಖುಲಾಸೆಗೊಳಿಸಿ ಮಾನ್ಯ ನ್ಯಾಯಾಲಯ ಆದೇಶ ಹೊರಡಿಸಿದೆ . ಇದೊಂದು ವಿಶೇಷ ಪ್ರಕರಣವಾಗಿದ್ದು, 2021ರ ಜೂನ್ ತಿಂಗಳಿನಲ್ಲಿ ಕಾಟಿಪಳ್ಳದ ನಿವಾಸಿಯಾದ ಅಬ್ದುಲ್ ಹಕೀಂ (48) ಎಂಬವರ ಮೇಲೆ ಅವರ ಇಬ್ಬರು ಹೆಣ್ಣು ಮಕ್ಕಳು ತಾವು ಅಪ್ರಾಪ್ತರಾಗಿ ಇದ್ದ ಸಂದರ್ಭದಲ್ಲಿ ನಮ್ಮ ತಂದೆ ನಮ್ಮ ಮೇಲೆ ಅತ್ಯಾಚಾರ ಎಸಗಿದ್ದಾರೆಂದು ಆರೋಪ ಮಾಡಿದ್ದರು. ಪ್ರಕರಣದ ಕುರಿತು ಮಂಗಳೂರಿನ ಮಹಿಳಾ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣಗಳು ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದವು. ಈ ಪೈಕಿ, ಆರೋಪಿಯ ಕಿರಿಯ ಮಗಳು ನನ್ನ ತಂದೆಯು ಸತತ ಮೂರು ವರ್ಷಗಳಿಂದ ಅತ್ಯಾಚಾರ ಮಾಡಿದ್ದಾರೆಂದು ಆರೋಪಿಸಿದ್ದಳು ಈ ಪ್ರಕರಣವನ್ನು ನ್ಯಾಯಾಲಯ ಕಳೆದ ಎರಡು ತಿಂಗಳಿನ ಹಿಂದೆ ಆರೋಪಿಯನ್ನು ಖುಲಾಸೆಗೊಳಿಸಿದೆ. ಹಿರಿಯ ಮಗಳು ತಂದೆ ವಿರುದ್ಧ ದಾಖಲಿಸಿದ ಅತ್ಯಾಚಾರ ಪ್ರಕರಣದ ವಿಚಾರಣೆಯನ್ನು ಕೈಗೆತ್ತಿಕೊಂಡ ಮಂಗಳೂರಿನ ಹೆಚ್ಚುವರಿ…

Read More

UN networks ಉಳ್ಳಾಲ: ಮುಂಬೈ ಉತ್ತರ ಕ್ಷೇತ್ರ ಸಂಸದೆ , ಬಿಜೆಪಿ ಯುವಮೋರ್ಚಾ  ರಾಷ್ಟ್ರೀಯ ಉಪಾಧ್ಯಕ್ಷೆ ಹಾಗೂ ಕೇಂದ್ರದ ಪ್ರಭಾವಿ ಬಿಜೆಪಿ ನಾಯಕ ದಿ. ಪ್ರಮೋದ್ ಮಹಾಜನ್ ಅವರ ಪುತ್ರಿ ಪೂನಂ ಮಹಾಜನ್ ಎ.25 ಕ್ಕೆ ಉಳ್ಳಾಲ ವಿಧಾನಸಭಾ ಕ್ಷೇತ್ರಕ್ಕೆ ಭೇಟಿ ನೀಡಿ, ಬಿಜೆಪಿ ಅಭ್ಯರ್ಥಿ ಸತೀಶ್ ಕುಂಪಲ ಪರವಾಗಿ ಪ್ರಚಾರದಲ್ಲಿ ಭಾಗವಹಿಸಲಿದ್ದಾರೆ.ಮುಡಿಪುವಿನ ಕಾಯರ್‍ಗೋಳಿ ಕ್ರಾಸ್‍ನಿಂದ ಮುಡಿಪು ಜಂಕ್ಷನ್ನಿನವರೆಗೆ ಸಂಜೆ 5 ಕ್ಕೆ  ಬೃಹತ್ ರೋಡ್ ಷೋ ನಡೆಯಲಿದ್ದು,  ಬಳಿಕ ಮುಡಿಪುವಿನಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

Read More