Author: UllalaVani

Kannada News From Coastal Karnataka

UN networks ಉಳ್ಳಾಲ: ಕೆಟ್ಟು ನಿಂತ ಲಾರಿಗೆ ಎರಡು ಸ್ಕೂಟರ್ ಗಳು ಢಿಕ್ಕಿ ಹೊಡೆದು ಒಂದು ಸ್ಕೂಟರಿನಲ್ಲಿದ್ದ ಸವಾರ ಸಾವನ್ನಪ್ಪಿ ಸಹಸವಾರ ಗಂಭೀರ ಗಾಯಗೊಂಡು, ಇನ್ನೊಂದು ಸ್ಕೂಟರಿನಲ್ಲಿದ್ದ ಸವಾರ ಗಾಯಗೊಂಡ ಘಟನೆ ನೇತ್ರಾವತಿ ಸೇತುವೆಯಲ್ಲಿ ಇಂದು ನಸುಕಿನ ಜಾವ ಸಂಭವಿಸಿದೆ. ಅಂಗರಗುಂಡಿ ನಿವಾಸಿ ಮೊಹಮ್ಮದ್ ನೌಫಾಲ್ (26) ಸಾವನ್ನಪ್ಪಿ ದವರು. ಸಹಸವಾರ ಉಮ್ಮರ್ ಫಾರುಕ್ ಎಂಬವರು ಗಾಯಗೊಂಡಿರುವುದಾಗಿ ತಿಳಿದುಬಂದಿದೆ. ಇನ್ನೊಂದು ಸ್ಕೂಟರಿನಲ್ಲಿದ್ದ ಗಾಯಾಳುಗಳ ವಿವರ ತಿಳಿದುಬಂದಿಲ್ಲ. ಇಬ್ಬರೂ ಕಲ್ಲಾಪು ಗ್ಲೋಬಲ್ ಮಾರುಕಟ್ಟೆಗೆ ತರಕಾರಿ ವ್ಯಾಪಾರದ ಹಿನ್ನೆಲೆಯಲ್ಲಿ ಪಂಪ್ವೆಲ್ ಕಡೆಯಿಂದ ತೊಕ್ಕೊಟ್ಟು ಕಡೆಗೆ ತೆರಳುತ್ತಿದ್ದ ಸಂದರ್ಭ ಘಟನೆ ಸಂಭವಿಸಿದೆ. ಒಂದು ಸ್ಕೂಟರ್ ಢಿಕ್ಕಿ ಹೊಡೆದ ಕೆಲವೇ ನಿಮಿಷಗಳಲ್ಲಿ ಇನ್ನೊಂದು ಸ್ಕೂಟರ್ ಕೂಡ ಢಿಕ್ಕಿ ಹೊಡೆದಿದೆ.ನೇತ್ರಾವತಿ ಸೇತುವೆಯಲ್ಲಿ ಕೆಟ್ಟು ನಿಂತಿದ್ದ ಟಿಂಬರ್ ಲಾರಿ ಹಿಂಭಾಗಕ್ಕೆ ಎರಡೂ ಸ್ಕೂಟರ್ ಗಳು ಢಿಕ್ಕಿ ಹೊಡೆದಿದೆ. ಮಂಗಳೂರು ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯವರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Read More

UN networks ಉಳ್ಳಾಲ: ಅಭಿವೃದ್ಧಿಯ ಹರಿಕಾರ, ರೈತ ನಾಯಕ, ಜನಪರ ಯೋಜನೆಗಳನ್ನು ರಾಜ್ಯಕ್ಕೆ ನೀಡಿದ ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರವರ ಜನ್ಮ ದಿನಾಚರಣೆಯ ಪ್ರಯುಕ್ತ ಉಚಿತ ಆರೋಗ್ಯ ತಪಾಸಣಾ ಶಿಬಿರಬಿ.ಎಸ್.ಯಡಿಯೂರಪ್ಪರವರ ಜನ್ಮ ದಿನಾಚರಣೆಯ ಪ್ರಯುಕ್ತ ಉಚಿತ ಆರೋಗ್ಯ ತಪಾಸಣಾ ಶಿಬಿರ ಫೆ. 27ರಂದು ಸೋಮವಾರ ಬೆಳಿಗ್ಗೆ ಗಂಟೆ 600 ರಿಂದ ಮಧ್ಯಾಹ್ನ ಗಂಟೆ 1.00 ರವರೆಗೆ  ಉಳ್ಳಾಲ ತಾಲೂಕಿನ ಜನಸೇವಾ ಯುವಕ ಮಂಡಲ ಅಂಬ್ಲಮೊಗರು ಪರಿಸರದಲ್ಲಿ ನಡೆಯಲಿದೆ ಎಂದು ಕರ್ನಾಟಕ ರಾಜ್ಯ ಅಲೆಮಾರಿ, ಅರೆ ಅಲೆಮಾರಿ ಅಭಿವೃದ್ಧಿ ನಿಗಮದ ಮಾಜಿ ನಿಕಟಪೂರ್ವ ಅಧ್ಯಕ್ಷ ಕೆ. ರವೀಂದ್ರ ಶೆಟ್ಟಿ ಉಳಿದೊಟ್ಟು ತಿಳಿಸಿದರು.ತೊಕ್ಕೊಟ್ಟಿನ ಸೇವಾಸೌಧದಲ್ಲಿರುವ ಉಳ್ಳಾಲ ಪ್ರೆಸ್ ಕ್ಲಬ್‍ನಲ್ಲಿ ಮಾಹಿತಿ ನೀಡಿದ ಅವರು ಜಸ್ಟೀಸ್  ಕೆ. ಎಸ್, ಹೆಗ್ಡೆ ಚಾರಿಟೇಬಲ್ ಆಸ್ಪತ್ರೆ, ದೇರಳಟ್ಟೆಯ ತಜ್ಞ ವೈದ್ಯರುಗಳ ನೇತೃತ್ವದಲ್ಲಿ ಶಿಬಿರವನ್ನು ಆಯೋಜಿಸಿದ್ದು, ಸಾಮಾನ್ಯ, ವೈದ್ಯಕೀಯ ವಿಭಾಗ, ಕಿವಿ-ಮೂಗು-ಗಂಟಲು ವಿಭಾಗ, ಕಣ್ಣಿನ ತಪಾಸಣೆ, , ಚರ್ಮ ವಿಭಾಗ, ಎಲುಬು ಮತ್ತು ಕೀಲು ವಿಭಾಗದ ನುರಿತ ವೈದ್ಯರುಗಳಿಂದ ಉಚಿತ ತಪಾಸಣೆ…

Read More

UN networks ಉಳ್ಳಾಲ:  ಉಳ್ಳಾಲ ನಗರಸಭೆಯಲ್ಲಿ ಕಳೆದ ಎರಡೂವರೆ ವರ್ಷದಿಂದ ಬಹುಮತವಿಲ್ಲದ ಕಾಂಗ್ರೆಸ್ ಪಕ್ಷ ದುರಾಡಳಿತ ಮತ್ತು ಅವ್ಯವಹಾರಗಳಿಗೆ ಪ್ರಸಿದ್ಧಿಯನ್ನು ಪಡೆದಿದ್ದು, ದೇಶದಲ್ಲಿ ಮತ್ತು ರಾಜ್ಯದಲ್ಲಿ ಬದ್ಧ ವೈರಿಯಾಗಿರುವ ಬಿಜೆಪಿ ಉಳ್ಳಾಲ ನಗರಸಭೆಯಲ್ಲಿ ಮಾತ್ರ ಕಾಂಗ್ರೆಸ್‍ನೊಂದಿಗೆ ಒಳ ಒಪ್ಪಂದ ಮಾಡಿಕೊಂಡು ಕಾಂಗ್ರೆಸ್ ಆಡಳಿತದ ಅವ್ಯವಹಾರಕ್ಕೆ ಬೆಂಬಲ ನೀಡುತ್ತಿದೆ ಎಂದು ಜಾತ್ಯಾತೀತ ಜನತಾದಳದ ರಾಜ್ಯ ವಕ್ತಾರ ಹಾಗೂ ಉಳ್ಳಾಲ ನಗರಸಭೆಯ ಸದಸ್ಯ ದಿನಕರ ಉಳ್ಳಾಲ್ ಆರೋಪಿಸಿದ್ದಾರೆ.  ತೊಕ್ಕೊಟ್ಟು ಸೇವಾ ಸೌಧದಲ್ಲಿರುವ ಉಳ್ಳಾಲ ಪ್ರೆಸ್‍ಕ್ಲಬ್‍ನಲ್ಲಿ ನಡದ ಸುದ್ಧಿಗೋಷ್ಠಿಯಲ್ಲಿ ಮಾತನಾಡಿ ಕಳೆದ ಎರಡೂವರೆ ವರ್ಷದಲ್ಲಿ ಮೂರು ಬಾರಿ ಬಜೆಟ್ ಮಂಡನೆ ಮಾಡಿದರೂ ಕುಡಿಯುವ ನೀರು, ಚರಂಡಿ, ರಸ್ತೆ, ದಾರಿದೀಪ, ಘನತ್ಯಾಜ್ಯದ ಬಗ್ಗ ಯಾವುದೇ ಪರಿಣಾಮಕಾರಿ ಕೆಲಸ ಆಗಿಲ್ಲ. ಬಹುಮತವಿಲ್ಲದಿದ್ದರೂ ಬಿಜೆಪಿಯವರೊಂದಿಗೆ ಒಳ ಒಪ್ಪಂದ ಮಾಡಿಕೊಂಡು ಸ್ಥಾಯಿ ಸಮಿತಿ ಆಯ್ಕೆ ಸಂದರ್ಭದಲ್ಲಿ ಬಿಜೆಪಿ ಸದಸ್ಯರನ್ನು ತಟಸ್ಥರಾಗುವಂತೆ ಮಾಡಿ ಕಾನೂನಿಗೆ ವಿರುದ್ಧವಾಗಿ ಕಾಂಗ್ರೆಸ್ ಆಯ್ಕೆ ಪ್ರಕ್ರಿಯೆ ನಡೆಸಿದ್ದು, ಇದೀಗ ಜನವಿರೋ„ ಬಡ ಜನರಿಗೆ ಪ್ರಯೋಜನವಲ್ಲದ ಬಜೆಟ್ ಮಂಡನೆ ಮಾಡಿದ್ದು,…

Read More

UN networks ಉಳ್ಳಾಲ: ಭಾರತದ ಪ್ರತಿಯೊಂದು ಮಾತೃಭಾಷೆ ಅದರದೇ ಆದ ಸಂಸ್ಕøತಿ ಪರಂಪರೆಯನ್ನು ಹೊಂದಿದ್ದು, ಯುವ ಸಮುದಾಯ ಈ ಮಾತೃಭಾಷೆಯನ್ನು ಉಳಿಸಿ ಬೆಳೆಸುವುದರೊಂದಿಗೆ ನಮ್ಮ ವೈವಿಧಯಮಯ ಸಂಸ್ಕøತಿಯ ಉಳಿವಿಗೆ ತಮ್ಮ ಕೊಡುಗೆಯನ್ನು ನೀಡಬೇಕು ಎಂದು ಮಂಗಳೂರು ಆಕಾಶವಾಣಿಯ ಕಾರ್ಯಕ್ರಮ ಮುಖ್ಯಸ್ಥ ಟಿ.ಕೆ. ಉಣ್ಣಿಕೃಷ್ಣನ್ ಅಭಿಪ್ರಾಯಪಟ್ಟರು. ನಿಟ್ಟೆ ವಿಶ್ವವಿದ್ಯಾನಿಲಯದ ಆಶ್ರಯದಲ್ಲಿ ನಿಟ್ಟೆ ಪಾನೀರು ಕ್ಯಾಂಪಸ್‍ನಲ್ಲಿ ನಡೆದ ಅಂತರಾಷ್ಟ್ರೀಯ ಮಾತೃಭಾಷಾ ದಿನಾಚರಣೆಗೆ ಚಾಲನೆ ನೀಡಿ ಮಾತನಾಡಿ ವಿಶ್ವದಾದ್ಯಂತ ಸಾವಿರಾರು ಮಾತೃಭಾಷೆಗಳು ಇಂದಿಗೂ ತನ್ನದೇ ಆದ ಸಂಸ್ಕøತಿಯನ್ನು ಉಳಿಸಿಕೊಂಡು ಬೆಳೆಸಿಕೊಂಡು ಬರುತ್ತಿದೆ. ಮಾತೃಭಾಷೆಯ ಮೂಲಕ ನಾವು ಸಂವಹನ ನಡೆಸುವಾಗ ನಮ್ಮಲ್ಲಿ ಬಾಂಧವ್ಯ ಹೆಚ್ಚಾಗುತ್ತದೆ. ಈ ನಿಟ್ಟಿನಲ್ಲಿ ನಮ್ಮ ಮಾತೃಭಾಷೆಯನ್ನು ಉಳಿಸುವ ಕಾರ್ಯ ಇಂದಿನ ಯುವ ಸಮುದಾಯದಿಂದ ಆಗಬೇಕು ಈ ವೈವಿದ್ಯಮಯ ಪರಂಪರೆಯನ್ನು ಮುನ್ನಡೆಸುವ ಕಾರ್ಯವನ್ನು ನಡೆಸುತ್ತಿರುವ ನಿಟ್ಟೆ ವಿಶ್ವವಿದ್ಯಾನಿಲಯದ ಕಾರ್ಯ ಶ್ಲಾಘನೀಯ ಎಂದರು.ನಿಟ್ಟೆ ವಿಶ್ವವಿದ್ಯಾನಿಲಯದ ಕುಲಪತಿ  ಪೆÇ್ರ| ಡಾ| ಸತೀಶ್ ಕುಮಾರ್ ಭಂಡಾರಿ ಅಧ್ಯಕ್ಷತೆ ವಹಿಸಿ ಮಾತನಾಡಿ ನಿಟ್ಟೆ ವಿಶ್ವವಿದ್ಯಾನಿಲಯವು ಮಾತೃಭಾಷೆಗಳಿಗೆ, ಸ್ಥಳೀಯ ಭಾಷೆಗಳ ಅಭಿವೃದ್ಧಿಗೆ…

Read More

UN networks ಉಳ್ಳಾಲ:  ಕೇರಳ ಕರ್ನಾಟಕ ಗಡಿಭಾಗದಲ್ಲಿರುವ‌ ಕುಂಬಳೆ ಸೀಮೆಗೆ ಸೇರಿದ ವರ್ಕಾಡಿ-ನರಿಂಗಾನ ಗ್ರಾಮದ ಶಾಂತಿಪಳಿಕೆ ಶ್ರೀ ಮಹಾಮ್ಮಾಯ ದೇವಸ್ಥಾನದ ಪುನರ್ ಪ್ರತಿಷ್ಠಾ  ಬ್ರಹ್ಮಕಲಶೋತ್ಸವ ಫೆ. 23ರಿಂದ 27ರವರೆಗೆ ನಡೆಯಲಿದೆ ಎಂದು ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ಜಯಪ್ರಕಾಶ್ ಶೆಟ್ಟಿ  ಭಂಡಾರಮನೆ ಹೇಳಿದರು.ಶ್ರೀಕ್ಷೇತ್ರದ ವಠಾರದಲ್ಲಿ ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಫೆ. 23ರಂದು ಸಂಜೆ 3:00 ಗಂಟೆಗೆ ಮುಡಿಪು ಶ್ರೀ ಮುಡಿಪಿನ್ನಾರ್ ದೈವಸ್ಥಾನದಿಂದ ಹಸಿರು ಹೊರೆಕಾಣಿಕೆ ಮೆರವಣಿಗೆ ಹೊರಡಲಿದ್ದು ಪುಣ್ಯಕೋಟಿ ನಗರ, ಕೈರಂಗಳ, ಮೋಂಟುಗೋಳಿ ಮಾರ್ಗವಾಗಿ ತೌಡುಗೋಳಿ ಕ್ರಾಸ್ ನಿಂದ ತೌಡುಗೋಳಿ, ಕೂಟತ್ತಜೆ, ಪಾವುಲ, ಸಾರಂಗಪಾಣಿ ದೇವಸ್ಥಾನದಿಂದ ಹೊರಟು ಸುಂಕದಕಟ್ಟೆ, ಬೇಕರಿ ಜಂಕ್ಷನ್ ಕಾವೀ ಸುಬ್ರಹ್ಮಣ್ಯ ದೇವಸ್ಥಾನ ದಾರಿಯಾಗಿ ತೌಡುಗೋಳಿಗೆ, ತಲಪಾಡಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಿಂದ ಹೊರಟು ನೆತ್ತಿಲ ಶ್ರೀ ಕೃಷ್ಣ ಮಂದಿರ ದಾರಿಯಾಗಿ ದೇವಂದಪಡ್ಪು ಶ್ರೀ ಮಹಾವಿಷ್ಣು ದೇವಸ್ಥಾನ ದಾರಿಯಾಗಿ ತೌಡುಗೋಳಿಯಿಂದ ಶ್ರೀ ಕ್ಷೇತ್ರಕ್ಕೆ ತಲುಪಲಿದೆ  ಎಂದರು.  ಅದೇ ದಿನ ಸಂಜೆ 6.00ಗಂಟೆಗೆ, ಫೆ. 24, 25, 26ರಂದು 7.00…

Read More

UN networks ಉಳ್ಳಾಲ : ನೀರಿಲ್ಲದೇ ಸಂಕಷ್ಟ ಅನುಭವಿಸುತ್ತಿರುವ ತಲಪಾಡಿ ಗ್ರಾಮಕ್ಕೆ ಕೂಡಲೇ ಕುಡಿಯುವ ನೀರು ಪೂರೈಕೆ ಆರಂಭಿಸುವಂತೆ ಒತ್ತಾಯಿಸಿ ತಲಪಾಡಿ ವಲಯ ಕಾಂಗ್ರೆಸ್ ಸಮಿತಿಯ ವತಿಯಿಂದ ಇಂದು ಉಳ್ಳಾಲ ತಹಶೀಲ್ದಾರ್ ಮತ್ತು ತಲಪಾಡಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ಗ್ರಾಮದ ಕೆಲವೆಡೆಗೆ ಬಟ್ಟಪಾಡಿ ಪ್ರದೇಶದಿಂದ ನೀರಿನ ಪೈಪ್ ಲೈನ್ ಇದ್ದರೂ ನೀರು ಸರಬರಾಜು ಆಗುತ್ತಿಲ್ಲ. ಪೈಪ್ ಲೈನ್ ಇಲ್ಲದಿರುವ ಕೆಸಿ ರೋಡ್, ಪಳ್ಳ, ಪೂಮಣ್ಣು, ಕೆಸಿ ನಗರ, ಶಾಂತಿ ನಗರ ಮುಂತಾದ ಪ್ರದೇಶಗಳಲ್ಲಿ ನೀರಿನ ಅಭಾವ ಜೋರಾಗಿದ್ದು ಟ್ಯಾಂಕರ್ ಮೂಲಕ ನೀರು ಸರಬರಾಜು ಆರಂಭಿಸಿಲ್ಲ. ಆದ್ದರಿಂದ ಕೂಡಲೇ ಪೈಪ್ ಲೈನ್ ಇರುವ ಕಡೆ ಪೈಪ್ ಲೈನ್ ಮೂಲಕ ಹಾಗೂ ಪೈಪ್ ಲೈನ್ ಇಲ್ಲದ ಕಡೆ ಕೂಡಲೇ ಟ್ಯಾಂಕರ್ ಮೂಲಕ ನೀರು ಸರಬರಾಜು ಆರಂಭಿಸಬೇಕೆಂದು ಮನವಿಯಲ್ಲಿ ಒತ್ತಾಯಿಸಲಾಗಿದೆ. ಈ ಸಂದರ್ಭದಲ್ಲಿ ವಲಯ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಟಿ. ಎ. ಟಿ ಅಬ್ದುಲ್ ಖಾದರ್, ಜಿಲ್ಲಾ ಕಾಂಗ್ರೆಸ್ ಸಮಿತಿ ಸದಸ್ಯ ಬಿಎಸ್…

Read More

UN NEWS NETWORKSಉಳ್ಳಾಲ: ಶಾಸಕರ ವಿಶೇಷ ಕಾಳಜಿಯಿಂದ ನರಿಂಗಾನ ಗ್ರಾಮ ಉದ್ದಕ್ಕೂ ಅಭಿವೃದ್ಧಿ ಕಾಮಗಾರಿಗಳು ಭರದಿಂದ ಸಾಗುತ್ತಿದ್ದು, ಅದರ ಭಾಗವಾಗಿ ನಿಡ್ಮಾಡ್ ರಸ್ತೆಯ ಕಾಂಕ್ರೀಟಿಕರಣಕ್ಕೆ ಅನುದಾನ ಒದಗಿಸಿರುವ ಶಾಸಕರ ನಡೆಗೆ ಗ್ರಾಮಸ್ಥರ ಅಭಿನಂದನೆ ಎಂದು ನರಿಂಗಾನ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶೈಲಜಾ ಶೆಟ್ಟಿ ಮೋರ್ಲ ಹೇಳಿದ್ದಾರೆ.ನರಿಂಗಾನ ಗ್ರಾ.ಪಂ ವ್ಯಾಪ್ತಿಯ ನಿಡ್ಮಾಡ್ ನ 180 ಮೀ ರಸ್ತೆಯುದ್ದಕ್ಕೆ ಕಾಂಕ್ರೀಟಿಕರಣ ಕಾಮಗಾರಿಗೆ ಶಿಲನ್ಯಾಸ ನೆರವೇರಿಸಿ ಮಾತನಾಡಿದರು. ನಿಡ್ಮಾಡ್ ಪ್ರದೇಶದ ಜನರ ಸಮಸ್ಯೆ ಕುರಿತು ಶಾಸಕರ ಗಮನ ಸೆಳೆದಾಗ ತಕ್ಷಣವೇ ಸ್ಪಂಧಿಸಿದ್ದು, ರಸ್ತೆಯ ಜೊತೆಗೆ ಮಸೀದಿಯ ಅಂಗಳಕ್ಕೆ ಇಂಟರ್ ಲಾಕ್ ವ್ಯವಸ್ಥೆಯನ್ನು ಶಾಸಕರು ಕಲ್ಪಿಸಿದ್ದಾರೆ ಎಂದರು.ಗ್ರಾ.ಪಂ ಉಪಾಧ್ಯಕ್ಷ ನವಾಝ್ ಕಲ್ಲರಕೋಡಿ ಮಾತನಾಡಿ, ಪ್ರತಿ ವಾರ್ಡಿನಲ್ಲಿ ತ್ವರಿತಗತಿಯಲ್ಲಿ ಕಾಮಗಾರಿ ನಡೆಯುತ್ತಿದೆ, ಇಟ್ಟಿರುವ ಅನುದಾನದ ಕಾಮಗಾರಿಯನ್ನು ಶೀಘ್ರವೇ ಮುಗಿಸುವಂತೆ ಶಾಸಕರು ಸೂಚಿಸಿದ್ದಾರೆ. ಗ್ರಾಮದ ನೀರಿನ ಸಮಸ್ಯೆ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಮೂಲಕ ಶೀಘ್ರವೇ ಸ್ಪಂಧನೆ ಸಿಗಲಿದೆ ಎಂದರು.ಈ ಸಂದರ್ಭ ಮುಡಿಪು ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜಲೀಲ್…

Read More

UN NEWS NETWORKS ಉಳ್ಳಾಲ: ಆರ್ಥಪೆಡಿಕ್ ಕ್ಷೇತ್ರದಲ್ಲಿ ಜೈವಿಕ ತಂತ್ರಜ್ಞಾನದ ಅನ್ವೇಷಣೆಗಳು ಪರಿಣಾಮಕಾರಿಯಾಗಿ ಆಗಿದ್ದು, ಶಸ್ತ್ರಚಿಕಿತ್ಸಕರ ಕೊಡುಗೆಯೂ ಕ್ಷೇತ್ರದಲ್ಲಿ ಅಪಾರವಾಗಿರುವುದರಿಂದ ರೋಗಿಗಳಿಗೆ ಉತ್ತಮ ಸೇವೆಯನ್ನು ಒದಗಿಸಲು ಸಾಧ್ಯವಾಗಿದೆ ಎಂದು ನಿಟ್ಟೆ ಪರಿಗಣಿತ ವಿಶ್ವವಿದ್ಯಾನಿಲಯದ ಉಪಕುಲಾಧಿಪತಿ ಡಾ| ಎಂ.ಶಾಂತಾರಾಮ್ ಶೆಟ್ಟಿ ಅಭಿಪ್ರಾಯಟ್ಟರು. ಕೆನರಾ ಆರ್ಥಪೆಡಿಕ್ ಸೊಸೈಟಿ ಹಾಗೂ ಕೆ.ಎಸ್ ಹೆಗ್ಡೆ ವೈದ್ಯಕೀಯ ಅಕಾಡೆಮಿ ಆಶ್ರಯದಲ್ಲಿ ಮೂರು ದಿನಗಳ ಕಾಲ ನಡೆಯಲಿರುವ 12ನೇ ವರ್ಷದ ಡಾ| ಎಂ. ಸುಧಾಕರ್ ಶೆಟ್ಟಿ ಸ್ಮರಣಾರ್ಥ 40ನೇ ಮಂಗಳೂರು ಆರ್ಥಪೆಡಿಕ್ ಕೋರ್ಸ್ ಇದರ ದೇರಳಕಟ್ಟೆ ಎ.ಬಿ ಶೆಟ್ಟಿ ದಂತ ಮಹಾವಿದ್ಯಾಲಯದ ಆವಿಷ್ಕಾರ್ ಸಭಾಂಗಣದಲ್ಲಿ ನಡೆದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.ಆರ್ಥಪೆಡಿಕ್ ಕ್ಷೇತ್ರದಲ್ಲೇ ಮೊದಲ ಬಾರಿಗೆ ಮಂಗಳೂರು ಆರ್ಥಪೆಡಿಕ್ ತರಬೇತಿಯನ್ನು ಆರಂಭಿಸಲಾಯಿತು. ಇದೀಗ ಕ್ಷೇತ್ರ ಬಹಳಷ್ಟು ಮುಂದುವರಿದು ದೇಶ ವಿದೇಶಗಳಲ್ಲೂ ಸಮನಾಂತರ ತರಬೇತಿಗಳು ನಡೆಯುತ್ತಿವೆ. ತರಬೇತಿ ಕಾರ್ಯಗಾರಗಳಿಂದ ಪರಸ್ಪರ ಜ್ಞಾನ ವಿನಿಮಯದ ಜೊತೆಗೆ ಎಲ್ಲರಲ್ಲೂ ಜ್ಞಾನ ವೃದ್ಧಿಸಲು ಸಾಧ್ಯವಾಗಿದೆ ಎಂದರು.ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಕುಲಾಧಿಪತಿ ಎನ್. ವಿನಯ ಹೆಗ್ಡೆ ಉದ್ಘಾಟಿಸಿದರು.…

Read More

UN NEWS NETWORKS ಉಳ್ಳಾಲ: ಮಹಾಶಿವರಾತ್ರಿಯ ಸೂರ್ಯಾಸ್ತದ ನಂತರ ಜಾಗರಣದ ಸಂಧಿಕಾಲದಲ್ಲಿ ಸೋಮೇಶ್ವರ ದೇವಸ್ಥಾನದ ಬಳಿ ಇರುವ ರುದ್ರಪಾದೆಯಲ್ಲಿ ಲೋಕಕಲ್ಯಾಣಕ್ಕಾಗಿ ಅಗ್ನಿಹೋತ್ರ ಮತ್ತು ಭಸ್ಮ ತಯಾರಿ ಯಜ್ಞವು ಕರಾವಳಿ ಕಲ್ಯಾಣ ಪರಿಷತ್, ಕರ್ನಾಟಕ ಸೋಮೇಶ್ವರ ಶಕ್ತಿ ಕೇಂದ್ರದ ನೇತೃತ್ವದಲ್ಲಿ ಜರಗಲಿದೆ ಎಂದು ಪರಿಷತ್ ನ ಪದ್ಮನಾಭ ವರ್ಕಾಡಿ ತಿಳಿಸಿದ್ದಾರೆ. ತೊಕ್ಕೊಟ್ಟು ಸೇವಾಸೌಧದಲ್ಲಿರುವ ಉಳ್ಳಾಲ ಪ್ರೆಸ್‍ಕ್ಲಬ್ ನಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.ವೈದಿಕರಿಲ್ಲದೆ ನಡೆಯುವ ಅಗ್ನಿಹೋತ್ರ ಮತ್ತು ಗೋವಿನ ಸೆಗಣಿಯಿಂದ ಭಸ್ಮ ತಯಾರಿ ಯಜ್ಞದಲ್ಲಿ ಎಲ್ಲರೂ ಭಾಗಿಯಾಗಿ, ಅವರವರೇ ಹೋಮವನ್ನು ನೆರವೇರಿಸಬಹುದು. ತುಳಸಿ, ಗಂಧ, ಬಿಲ್ವಪತ್ರೆ ವಸ್ತುಗಳನ್ನು ಯಜ್ಞದಲ್ಲಿ ಉಪಯೋಗಿಸಲಾಗುವುದು. ದೇಶೀ ತಳಿಯ ಗೋವಿನ ಬೆರಣಿಯನ್ನು ಭಕ್ತರು ತಂದು ಯಜ್ಞಕ್ಕೆ ಸ್ವತ: ಅರ್ಪಿಸಬಹುದು. ಯಾವುದೇ ಕಾಣಿಕೆ, ಹರಕೆಯಿಲ್ಲದೆ ನಡೆಯುವಂತಹ ಕಾರ್ಯಕ್ರಮ ಇದಾಗಿದ್ದು, ಜನರ ಉಪಸ್ಥಿತಿಯೇ ಪ್ರóಧಾನವಾಗಿದೆ. ಶಿವರಾತ್ರಿ ಜಾಗರಣದ ಮಹತ್ವವನ್ನು ಜನರಿಗೆ ಮನದಟ್ಟು ಮಾಡುವ ಸಲುವಾಗಿ ಮತ್ತು ಮನುಷ್ಯನಿಗೆ ವಿಷಪ್ರಾಷಣವಾದ ಸಂದರ್ಭ ಭಸ್ಮದಿಂದ ಗುಣಪಡಿಸಿರುವ ವಿಚಾರ ಪುರಾಣ ಕಥೆಗಳಲ್ಲಿದೆ. ಅನಾರೋಗ್ಯ ಕಾಡದಂತೆ ಯಜ್ಞದಲ್ಲಿ…

Read More

UN NEWS NETWORKSಉಳ್ಳಾಲ: ಇರಾ ಗ್ರಾಮ ಪಂಚಾಯತ್ 2022-23ನೇ ಸಾಲಿನ ದ್ವಿತೀಯ ಹಂತದ ಗ್ರಾಮ ಸಭೆಯು ಮಲೆಯಾಳಿ ಬಿಲ್ಲವ ಸೇವಾ ಸಂಘ ಇರಾ – ಕಲ್ಲಾಡಿ ಸಭಾಭವನದಲ್ಲಿ ನಡೆಯಿತು. ಗ್ರಾಮಸಭೆಯ ಅಧ್ಯಕ್ಷತೆಯನ್ನು ಇರಾ ಗ್ರಾಮ ಪಂಚಾಯತ್ ಅಧ್ಯಕ್ಷೆ ಆಗ್ನೇಸ್ ಡಿಸೋಜ ವಹಿಸಿದ್ದರು. ನೋಡೆಲ್ ಅಧಿಕಾರಿಯಾಗಿ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ಸುನೀತ ಕುಮಾರಿ ಕಾರ್ಯನಿರ್ವಹಿಸಿದರು.ಸಭೆಯಲ್ಲಿ ಉಪಾಧ್ಯಕ್ಷ ಮೊಯಿದಿನ್ ಕುಂಞÂ, ಮಾಜಿ ಅಧ್ಯಕ್ಷ ಹಾಗೂ ಹಾಲಿ ಸದಸ್ಯ ಅಬ್ದುಲ್ ರಝಾಕ್ ಕುಕ್ಕಾಜೆ, ಸದಸ್ಯರಾದ ನಿರ್ಮಲ, ರೇಣುಕಾ, ನಳಿನಾಕ್ಷಿ, ಮಹಮ್ಮದ್, ಚಂದ್ರಪ್ರಭಾ, ಕೆ.ಪ್ರತಾಪ್ ಚಂದ್ರ, ಯಾಕೂಬ್, ಬಾನುರೇಖಾ.ವೈ. ಶೆಟ್ಟಿ, ರಮೇಶ್. ಎಸ್.ಪೂಜಾರಿ,ಅಬ್ದುಲ್ ಹಮೀದ್, ವಾಣಿಶ್ರೀ, ಪುಷ್ಪಲತಾ.ಸಿ.ಕರ್ಕೇರಾ, ಬಂಟ್ವಾಳ ತಾಲ್ಲೂಕು ಪಂಚಾಯತ್ ಮಾಜಿ ಅಧ್ಯಕ್ಷ ಚಂದ್ರಹಾಸ ಕರ್ಕೇರಾ, ಉಪಸ್ಥಿತರಿದ್ದರು.ಕೃಷಿ ಇಲಾಖೆ, ಕಂದಾಯ ಇಲಾಖೆ, ಪಶುಸಂಗೋಪನೆ ಇಲಾಖೆ, ಶಿಶು ಅಭಿವೃದ್ಧಿ ಇಲಾಖೆ, ಆರೋಗ್ಯ ಇಲಾಖೆಯ ಅಧಿಕಾರಿಗಳು ತಮ್ಮ ಇಲಾಖೆಯಿಂದ ಸಿಗುವ ಸವಲತ್ತುಗಳ ಬಗ್ಗೆ ಸವಿಸ್ತಾರವಾಗಿ ಹೇಳಿದರು.ಪಂಚಾಯತ್ ಪ್ರಭಾರ ಅಧಿಕಾರಿ ಶ್ರೀಕಾಂತ್ ಸ್ವಾಗತಿಸಿದರು. ಕಾರ್ಯದರ್ಶಿ ದಿನೇಶ್ ಕುಮಾರ್ ವಂದಿಸಿದರು.ಈ…

Read More