ಮಂಗಳೂರು: ಹವಾಮಾನ ಇಲಾಖೆಯು ಭಾರೀ ಮಳೆಯ ಮುನ್ಸೂಚನೆ ನೀಡಿರುವ ಕಾರಣ ದ.ಕ.ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢ ಹಾಗೂ ಪಿಯು ಕಾಲೇಜುಗಳಿಗೆ ಜು.3ರ ಶುಕ್ರವಾರ ರಜೆ ಘೋಷಿಸಲಾಗಿದೆ ಎಂದು ದ.ಕ.ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ತಿಳಿಸಿದ್ದಾರೆ.
Author: UllalaVani
ಕಾಸರಗೋಡು: ಕೆಎಸ್ಸಾರ್ಟೀಸಿ ‘ಪ್ರಿಯದರ್ಶಿನಿ’ ಯೋಜನೆಯಡಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಸೌಲಭ್ಯ ಜಾರಿಯಾದ ಬಳಿಕ ಖಾಸಗಿ ಬಸ್ ಉದ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿರುವ ಹಿನ್ನೆಲೆಯಲ್ಲಿ, ಉದ್ಯಮವನ್ನು ಸಂರಕ್ಷಿಸುವಂತೆ ಆಗ್ರಹಿಸಿ ಜುಲೈ 6ರಂದು ಕಾಸರಗೋಡು ಜಿಲ್ಲೆಯಲ್ಲಿ ಖಾಸಗಿ ಬಸ್‌ಗಳು ಸಂಚಾರ ಸ್ಥಗಿತಗೊಳಿಸಲಿವೆ. ಕೇರಳ ಪ್ರೈವೇಟ್ ಬಸ್ ಆಪರೇಟರ್ಸ್ ಫೆಡರೇಷನ್‌ನ ಕಾಸರಗೋಡು ಜಿಲ್ಲಾ ಘಟಕ ಹಾಗೂ ಸಂಯುಕ್ತ ಟ್ರೇಡ್ ಯೂನಿಯನ್ ನೇತೃತ್ವದಲ್ಲಿ ಈ ಮುಷ್ಕರಕ್ಕೆ ಕರೆ ನೀಡಲಾಗಿದೆ. ಮುಷ್ಕರದ ಅಂಗವಾಗಿ ಬೆಳಿಗ್ಗೆ 10 ಗಂಟೆಗೆ ಬಸ್ ಮಾಲೀಕರು ಮತ್ತು ಸಿಬ್ಬಂದಿ ಕಲೆಕ್ಟರೇಟ್‌ಗೆ ಮೆರವಣಿಗೆ ನಡೆಸಿ, ಬಳಿಕ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಿದ್ದಾರೆ.ಮಹಿಳೆಯರು ಉಚಿತವಾಗಿ ಕೆಎಸ್ಸಾರ್ಟೀಸಿ ಬಸ್‌ಗಳಲ್ಲಿ ಪ್ರಯಾಣಿಸುತ್ತಿರುವುದರಿಂದ ಖಾಸಗಿ ಬಸ್‌ಗಳಲ್ಲಿ ಪ್ರಯಾಣಿಕರ ಸಂಖ್ಯೆ ಗಣನೀಯವಾಗಿ ಇಳಿಕೆಯಾಗಿದೆ. ಇದರ ಪರಿಣಾಮ ದಿನನಿತ್ಯದ ಆದಾಯ ಅರ್ಧಕ್ಕಿಂತಲೂ ಹೆಚ್ಚು ಕುಸಿದಿದ್ದು, ಜಿಲ್ಲೆಯ ಹಲವು ಮಾರ್ಗಗಳಲ್ಲಿ ಈಗಾಗಲೇ ಖಾಸಗಿ ಬಸ್ ಸಂಚಾರ ಸ್ಥಗಿತಗೊಂಡಿದೆ ಎಂದು ಸಂಘಟನೆ ತಿಳಿಸಿದೆ. ಇದೇ ಪರಿಸ್ಥಿತಿ ಮುಂದುವರಿದರೆ ಇನ್ನೂ 200ಕ್ಕೂ ಹೆಚ್ಚು ಖಾಸಗಿ ಬಸ್‌ಗಳ ಸಂಚಾರ ಸ್ಥಗಿತಗೊಳ್ಳುವ…
ಕುಲಶೇಖರ, ಜು. 2: ಹಿಂದೂ ಸೇವಾ ಸಮಿತಿ ಟ್ರಸ್ಟ್ (ರಿ), ಕುಲಶೇಖರ ಹಾಗೂ ಹಿಂದೂ ಸೇವಾ ಸಮಿತಿ ಮಾತೃ ಮಂಡಳಿ ಇವರ ಸಂಯುಕ್ತ ಆಶ್ರಯದಲ್ಲಿ, ಸಾವಯವ ಕೃಷಿಕ ಗ್ರಾಹಕ ಬಳಗ (ರಿ), ಮಂಗಳೂರು ಇವರ ಸಹಯೋಗದೊಂದಿಗೆ ಸಾರ್ವಜನಿಕರಿಗಾಗಿ ವಿಶೇಷ ಮಾಹಿತಿ ಕಾರ್ಯಾಗಾರವನ್ನು ಆಯೋಜಿಸಲಾಗಿದೆ. ಜುಲೈ 5ರಂದು (ಭಾನುವಾರ) ಮಧ್ಯಾಹ್ನ 2.30ರಿಂದ 4.30ರವರೆಗೆ ಕುಲಶೇಖರ ಪೋಸ್ಟ್ ಆಫೀಸ್ ಎದುರಿನ ಓಂ ಶ್ರೀ ಶಕ್ತಿ ಗಣಪತಿ ಮಂದಿರದಲ್ಲಿ ಕಾರ್ಯಾಗಾರ ನಡೆಯಲಿದೆ. ಕಾರ್ಯಾಗಾರದಲ್ಲಿ “ತಾರಸಿ ಕೈತೋಟ” ಹಾಗೂ “ವ್ಯಸ್ತ ಜೀವನ – ಸ್ವಸ್ಥ ಭೋಜನ” ವಿಷಯಗಳ ಕುರಿತು ತಜ್ಞರಿಂದ ಉಪಯುಕ್ತ ಮಾಹಿತಿ, ಪ್ರಾಯೋಗಿಕ ಪ್ರದರ್ಶನ ಹಾಗೂ ಮಾರ್ಗದರ್ಶನ ನೀಡಲಾಗುವುದು. ಸಾವಯವ ಕೃಷಿ, ಮನೆ ಮೇಲ್ಛಾವಣಿಯಲ್ಲಿ ಕೈತೋಟ ನಿರ್ಮಾಣ, ಆರೋಗ್ಯಕರ ಆಹಾರ ಪದ್ಧತಿ ಹಾಗೂ ಸ್ವಾವಲಂಬಿ ಜೀವನಶೈಲಿಗೆ ಸಂಬಂಧಿಸಿದ ವಿಷಯಗಳನ್ನು ಕಾರ್ಯಾಗಾರದಲ್ಲಿ ವಿವರಿಸಲಾಗುವುದು. ಆಸಕ್ತ ಸಾರ್ವಜನಿಕರು ಉಚಿತವಾಗಿ ನಡೆಯುವ ಈ ಮಾಹಿತಿ ಕಾರ್ಯಾಗಾರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಇದರ ಸದುಪಯೋಗ ಪಡೆದುಕೊಳ್ಳುವಂತೆ ಹಿಂದೂ ಸೇವಾ ಸಮಿತಿ ಟ್ರಸ್ಟ್…
ಕೊಣಾಜೆ, : ಯುವ ಮಿತ್ರ ಬಳಗ (ರಿ.) ಕೊಣಾಜೆ ವತಿಯಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ.80ಕ್ಕಿಂತ ಹೆಚ್ಚು ಅಂಕ ಗಳಿಸಿದ ಪ್ರತಿಭಾವಂತ ವಿದ್ಯಾರ್ಥಿಗಳ ಸನ್ಮಾನ ಸಮಾರಂಭ ಹಾಗೂ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ ಇತ್ತೀಚೆಗೆ ಕೊಣಾಜೆ ಸರಕಾರಿ ಪ್ರೌಢಶಾಲೆಯಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ನಿಟ್ಟೆ ಯೂನಿವರ್ಸಿಟಿಯ ಉಪನ್ಯಾಸಕರು ಹಾಗೂ ಯುವ ಮಿತ್ರ ಬಳಗದ ಕೋಶಾಧಿಕಾರಿಯಾದ ಶ್ರೀ ರಿಯಾಜ್ ಅಬ್ದುಲ್ ಅವರು ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣದ ಅವಕಾಶಗಳು, ವೃತ್ತಿ ಆಯ್ಕೆ, ವ್ಯಕ್ತಿತ್ವ ವಿಕಸನ ಹಾಗೂ ಜೀವನದಲ್ಲಿ ಯಶಸ್ಸು ಸಾಧಿಸುವ ಮಾರ್ಗಗಳ ಕುರಿತು ಉಪಯುಕ್ತ ಮಾಹಿತಿ ನೀಡಿದರು. ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಅಭಿನಂದಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಯುವ ಮಿತ್ರ ಬಳಗದ ಅಧ್ಯಕ್ಷ ಮಹಮ್ಮದ್ ನಝೀರ್ ಅವರು ಮಾತನಾಡಿ, ವಿದ್ಯಾರ್ಥಿಗಳು ದುಶ್ಚಟಗಳು, ಮಾದಕ ವಸ್ತುಗಳ ವ್ಯಸನ ಹಾಗೂ ಸಮಾಜದ ದುಷ್ಪರಿಣಾಮಗಳಿಂದ ದೂರವಿದ್ದು ಶಿಕ್ಷಣದ ಮೂಲಕ ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಕರೆ ನೀಡಿದರು. ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ಖಾದರ್ ಕೋಡಿಜಾಲ್ ಅವರು ಯುವ…
ಮಂಗಳೂರು: ಖ್ಯಾತ ಸಮಾಜ ಸೇವಕಿ ಮೀರಾ ಪಡಿಯಾರ್ ಅವರ ಸಾರಥ್ಯದಲ್ಲಿ ಹಿರಿಯ ನಾಗರಿಕರಿಗೆಂದೇ ವಿಶೇಷವಾಗಿ “ಹಾಡಾಡೋಣ ಬನ್ನಿ” ಎಂಬ ಕೆರೋಕೆ ಕಾರ್ಯಕ್ರಮ ನಡೆಯಲಿದೆ. “ನಾದಸಂಗಮ” ಸಂಸ್ಥೆಯ ವತಿಯಿಂದ ಜುಲೈ 11ರಂದು ಶನಿವಾರ ಬೆಳಗ್ಗೆ 9:30 ರಿಂದ ಸಂಜೆ 5:30ರ ವರೆಗೆ ಬೋಳೂರಿನ ಜಾರಂದಾಯ ದೈವಸ್ಥಾನದ ಹತ್ತಿರ ಇರುವ ಕೆರೋಕೆ ಕ್ಲಬ್ ನಲ್ಲಿ ಈ ಕಾರ್ಯಕ್ರಮ ನಡೆಯಲಿದೆ. ಮೀರಾ ಪಡಿಯಾರ್ ಅವರ ಸಾರಥ್ಯದ “ನಾದಸಂಗಮ” ಸಂಸ್ಥೆಯು ಸತತವಾಗಿ, ಸಂಗೀತಾಸಕ್ತರಿಗಾಗಿ, ವಿವಿಧ ರೀತಿಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಲೇ ಬಂದಿದೆ. ಖ್ಯಾತ ಗಾಯಕ ಎಸ್ಪಿಬಿ ಅವರ ಪುಣ್ಯ ಸ್ಮರಣೆಯಂದು ಸತತ 12 ಗಂಟೆಗಳ ಕಾಲ ವಿಶೇಷ ಸಂಗೀತ ಕಾರ್ಯಕ್ರಮ ನಡೆಸಿ ಕೊಟ್ಟಿತ್ತು. ಆನಂತರದ ದಿನಗಳಲ್ಲಿ ಪಿಬಿ ಶ್ರೀನಿವಾಸ್-ರಾಜಕುಮಾರ್ ಜೋಡಿಯ ವಿಶೇಷ ಹಾಡುಗಳ ಗಾಯನ ಕಾರ್ಯಕ್ರಮವನ್ನು ವಿವಿಧ ಗಾಯಕರ ಮೂಲಕ ನೆನಪಿಸುವ ಕಾರ್ಯಕ್ರಮವನ್ನು ಆಯೋಜಿಸಿದ್ದರು. ಈ ಕಾರ್ಯಕ್ರಮಗಳ ಯಶಸ್ಸಿನಿಂದ ಉತ್ತೇಜಿತರಾಗಿ ಪಿ ಸುಶೀಲ-ಎಸ್ ಜಾನಕಿ ಇವರಿಬ್ಬರ ಯಶಸ್ವಿ ಹಾಗೂ ಸುಮಧುರ ಹಾಡುಗಳನ್ನು ನೆನಪಿಸುವ ಮತ್ತೊಂದು ಸಂಗೀತಸಂಜೆ ಕಾರ್ಯಕ್ರಮವನ್ನು ಆಯೋಜಿಸಿತ್ತು.…
ಉಳ್ಳಾಲ: ಉಳ್ಳಾಲ ಪೆರ್ರಿ ಬೀಚ್ ಸಮುದ್ರ ತೀರದ ದಡದಲ್ಲಿ ಅಪರಿಚಿತ ಗಂಡಸಿನ ಮೃತದೇಹ ಪತ್ತೆಯಾಗಿದೆ. ಈ ಸಂಬಂಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಅಸ್ವಾಭಾವಿಕ ಸಾವು (ಯುಡಿಆರ್) ಪ್ರಕರಣ ದಾಖಲಾಗಿದ್ದು, ಮೃತದೇಹವನ್ನು ಮಂಗಳೂರಿನ ಜಿಲ್ಲಾ ಸರ್ಕಾರಿ ವೆನ್ಲಾಕ್ ಆಸ್ಪತ್ರೆಯ ಶವಗಾರದಲ್ಲಿ ಇರಿಸಲಾಗಿದೆ. ಮೃತ ವ್ಯಕ್ತಿಯ ಬಗ್ಗೆ ಮಾಹಿತಿ ಹೊಂದಿರುವವರು ಅಥವಾ ಅವರ ವಾರಸುದಾರರು ಇದ್ದಲ್ಲಿ ತಕ್ಷಣ ಉಳ್ಳಾಲ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಪೊಲೀಸರು ಮನವಿ ಮಾಡಿದ್ದಾರೆ. ಸಂಪರ್ಕ ಸಂಖ್ಯೆ:📞 9480802342📞 9480802315
ಕೊಣಾಜೆ: ಮಂಗಳೂರು ವಿಶ್ವವಿದ್ಯಾನಿಲಯದ ಎಸ್ ವಿ ಪಿ ಕನ್ನಡ ಅಧ್ಯಯನ ಸಂಸ್ಥೆಯ ನೂತನ ಅಧ್ಯಕ್ಷರಾಗಿ ಡಾ.ಧನಂಜಯ ಕುಂಬ್ಳೆ ಅವರು ನೇಮಕಗೊಂಡಿದ್ದಾರೆ. ಕಳೆದ ಒಂದು ವರ್ಷದಿಂದ ಎಸ್ ವಿ ಪಿ ಕನ್ನಡ ಅಧ್ಯಯನ ಸಂಸ್ಥೆಯ ಅಧ್ಯಕ್ಷರಾಗಿದ್ದ ಹಿರಿಯ ಪ್ರಾಧ್ಯಾಪಕ ಪ್ರೊ.ನಾಗಪ್ಪ ಗೌಡ ಅವರು ಮಂಗಳವಾರ ಸೇವೆಯಿಂದ ನಿವೃತ್ತಿ ಹೊಂದಿದ್ದು, ಇವರ ಸ್ಥಾನಕ್ಕೆ ಮಂಗಳೂರು ವಿವಿಯ ಕನ್ನಡ ವಿಭಾಗದಲ್ಲಿ ಸಹ ಪ್ರಾಧ್ಯಾಪಕರಾಗಿರುವ ಡಾ.ಧನಂಜಯ ಕುಂಬ್ಳೆ ಅವರನ್ನು ವಿವಿಯು ನೇಮಕಗೊಳಿಸಿ ಆದೇಶ ನೀಡಿತ್ತು. ಮಂಗಳವಾರದಂದು ಪ್ರೊ.ನಾಗಪ್ಪ ಗೌಡ ಅವರು ವಿಭಾಗದ ದಾಖಲೆ ಪತ್ರಗಳನ್ನು ನೀಡುವ ಮೂಲಕ ಅಧಿಕಾರವನ್ನು ಹಸ್ತಾಂತರಿಸಿದರು.ಮಂಗಳೂರು ವಿಶ್ವವಿದ್ಯಾಲಯದ ಎಸ್‌ಎಸ್‌ಪಿ ಕನ್ನಡ ಅಧ್ಯಯನ ಸಂಸ್ಥೆಯಲ್ಲಿ ಪ್ರಾಧ್ಯಾಪಕರಾಗಿರುವ ಇವರು, ಡಾ.ದಯಾನಂದ ಪೈ ಸತೀಶ್ ಪೈ ಯಕ್ಷಗಾನ ಅಧ್ಯಯನ ಕೇಂದ್ರದ ನಿರ್ದೇಶಕರಾಗಿ, ಕನಕದಾಸ ಅಧ್ಯಯನ ಕೇಂದ್ರ, ತುಳು ಅಧ್ಯಯನ ಪೀಠ, ಎನ್ ಜಿ ಪಾವಂಜೆ ಅಧ್ಯಯನ ಪೀಠ, ರಾಣಿ ಅಬ್ಬಕ್ಕ ಅಧ್ಯಯನ ಪೀಠಗಳ ಸಂಯೋಜಕರಾಗಿ ಹಾಗೂ ಪ್ರಸಾರಾಂಗದ ಉಪನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ದ.ಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು…
ಉಳ್ಳಾಲ: ಕರೆಬೈಲ್ ಗುಡ್ಡದಲ್ಲಿ ಬುಧವಾರ ಬೆಳಗ್ಗೆ, ಕಂಪೌÀಡ್ ಗೋಡೆ ಕುಸಿತದಿಂದ ಮನೆಯೊಂದು ಸಂಪೂರ್ಣ ಧರಾಶಾಹಿಯಾಗಿದ್ದು ಅದೃಷ್ಟವಶಾತ್ ಮನಮಂದಿ ಬೇರೆ ಕಡೆಗೆ ಸ್ಥಳಾಂತರಗೊÂಡಿದ್ದರಿÀದ ಪ್ರಾಣಾಪಯದಿಂದ ಪಾರಾಗಿದ್ದು ಸಂತ್ರಸ್ತ ಕುಟುಂಬಕ್ಕ ಸೂಕ್ತ ಪರಿಹಾರ ಕೊಡುವ ನಿಟ್ಟಿನಲ್ಲಿ ಜಿಲ್ಲಾಡಳಿತದ ಜೊತೆಗೆ ಚರ್ಚಿಸುತ್ತೇನೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ಹೇಳಿದರು. ಕಳೆದ ಎರಡು ದಿನಗಳಿಂದ ಸುರಿದ ಭಾರೀ ಮಳಗೆ ತೊಕ್ಕೊಟ್ಟು ಕರೆಬೈಲ್ ಗುಡ್ಡದಲ್ಲಿ ಕಂಪೌÀಡ್ ಕುಸಿದು ಮನ ಧರಾಶಾಹಿಯಾದ ಸ್ಥಳಕ್ಕೆ ಅಧಿಕಾರಿಗಳೊಂದಿಗೆ ಬುಧವಾರ ಸಂಜೆ ಭೇಟಿ ನೀಡಿದ ಅವರು ಸಂತ್ರಸ್ತ ಕುಟುಂಬಸ್ಥರು ಹಾಗೂ ಇನ್ನು ಅಪಾಯಕಾರಿಯಾಗಿ ಇರುವ ಮನೆ ಮಂದಿಯ ಜೊತೆಗೆ ಮಾತನಾಡಿ ಧರಾಶಾಹಿಯಾದ ಮನೆಯ ಕುಟುಂಬಸ್ಥರು ಕಳೆದ ವರ್ಷದಿಂದ ತಡೆಗೋಡೆ ವಾಲಿರುವ ಬಗ್ಗೆ ಮನೆ ಮಾಲೀಕರಿಗೆ ಎಚ್ಚರಿಸುತ್ತಾ ಬಂದಿದ್ದು ಈ ಬಾರಿ ಅಪಾಯದ ಮುನ್ಸೂಚನೆ ಅರಿತು ಬೇರೆ ಕಡೆಗೆ ಸ್ಥಳಾಂತರಗೊಡಿದ್ದರಿ೦ದ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಭಾಗದಲ್ಲಿ ಸಾಮನ್ಯ ಜನರು ಬದುಕುತ್ತಿದ್ದು ಜೀವನವನ್ನು ಬಹಳ ಕಷ್ಟಪಟ್ಟು ಸಾಗಿಸುವರು. ಇಂದು ನಡೆದ…
ಮಂಗಳೂರು: ಮಂಗಳವಾರ ಬೆಳಗ್ಗಿನಿಂದ ನಾಪತ್ತೆಯಾಗಿದ್ದ ಕೊಣಾಜೆ ಉರುಮಣೆ ನಿವಾಸಿ ಮುಹಮ್ಮದ್ ಅಶ್ರಫ್ ಮಾಲಿಕಿ (45) ಎಂಬವರ ಮೃತದೇಹ ಗುರುಪುರ ಹೊಳೆಯಲ್ಲಿ ಬುಧವಾರ ಸಂಜೆ ಪತ್ತೆಯಾಗಿದೆ. ಇತ್ತೀಚೆಗಷ್ಟೇ ಹೊಸ ಮನೆ ನಿರ್ಮಾಣ ಮಾಡಿದ್ದ ಅಶ್ರಫ್ ಅವರು ಕೆಲಸ ಕಳೆದುಕೊಂಡು ಕೆಲದಿನಗಳಿಂದ ಮನೆಯಲ್ಲೇ ಇದ್ದರು ಎನ್ನಲಾಗಿದೆ. ಮಂಗಳವಾರ ಬೆಳಗ್ಗೆ ಮನೆಯಿಂದ ಹೊರಟಿದ್ದ ಅಶ್ರಫ್ ಅವರು ರಾತ್ರಿಯಾದರೂ ಮನೆಗೆ ಬಾರದಿದ್ದ ಕಾರಣ ಕೊಣಾಜೆ ಪೊಲೀಸ್ ಠಾಣೆಗೆ ದೂರು ನೀಡಲಾಗಿತ್ತು. ಇಂದು ಬೆಳಗ್ಗೆ ದ್ವಿಚಕ್ರ ವಾಹನವೊಂದು ಗುರುಪುರ ಸೇತುವೆ ಸಮೀಪ ಇರುವುದನ್ನು ಗಮನಿಸಿದ ಸಾರ್ವಜನಿಕರು, ಅದರ ಫೋಟೊ ಸಹಿತ ವಾಹನದ ವಿವರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ಇದನ್ನು ಕಂಡು ಮನೆಮಂದಿ ಬೆಳಗ್ಗೆ ಸ್ಥಳಕ್ಕೆ ಆಗಮಿಸಿದ್ದರು. ನದಿಯಲ್ಲಿ ಹುಡುಕಾಟ ನಡೆಸಿದಾಗ ಸಂಜೆಯ ವೇಳೆ ಅವರ ಮೃತದೇಹ ಪತ್ತೆಯಾಗಿದೆ.ಈ ಬಗ್ಗೆ ಬಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರು: ತಡೆಗೋಡೆ ಕುಸಿದು ಬಿದ್ದು ದುರಂತದಲ್ಲಿ ಮೃತಪಟ್ಟ ಕುಟುಂಬದ ಸದಸ್ಯರಿಗೆ ತಲಾ ಐದು ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್‌ಗಳನ್ನು ಆರೋಗ್ಯ ಸಚಿವ ಯು.ಟಿ. ಖಾದರ್ ವಿತರಿಸಿದರು. ಈ ಸಂದರ್ಭ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ., ಜಿಪಂ ಸಿಇಒ ವಿನಾಯಕ ನರ್ವಾಡೆ ಕಾರ್ಬಾರಿ, ಮಂಗಳೂರು ಉಪವಿಭಾಗಾಧಿಕಾರಿ ಮೀನಾಕ್ಷಿ ಆರ್ಯ, ಎಸ್ಪಿ ಡಾ. ಅರುಣ್, ಮುಡಾ ಅಧ್ಯಕ್ಷಸದಾಶಿವ ಉಳ್ಳಾಲ್ ಮತ್ತಿತರರು ಉಪಸ್ಥಿತರಿದ್ದರು. ದುರಂತದಲ್ಲಿ ಗಾಯಗೊಂಡವರ ಸಂಪೂರ್ಣ ಚಿಕಿತ್ಸಾ ವೆಚ್ಚವನ್ನು ಸರಕಾರವೇ ಭರಿಸಲಿದೆ ಎಂದು ಸಚಿವ ಖಾದರ್ ತಿಳಿಸಿದ್ದಾರೆ.

