ತೊಕ್ಕೊಟ್ಟು: ದ.ಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ತೊಕ್ಕೊಟ್ಟಿನ ಶ್ರೀ ಸಾಯಿ ಪರಿವಾರ್ ಟ್ರಸ್ಟ್ ಸಹಕಾರದಲ್ಲಿ, ಜೀವನ್ ಎಂ. ಶೆಟ್ಟಿ, ನರೇಶ್ ಚೌಟ ಮುಳಿಹಿತ್ಲು ನಿರ್ಮಾಣದಲ್ಲಿ ಕು.ಪೂಜಾ ಸನಿಲ್ ರವರ ಕಂಠ ಸಿರಿಯಲ್ಲಿ ಹಾಡಲಾದ ಬುರ್ದುಗೋಳಿ ಕೊರಗಜ್ಜನ ಕುರಿತಾದ ಭಕ್ತಿ ಸುಗಿಪು ಮಾಯೊದ ತುಡರ್ ಧ್ವನಿ ಸುರುಳಿ ಕಲ್ಲಾಪು ಬುರ್ದುಗೋಳಿ ಶ್ರೀ ಗುಳಿಗ ಕೊರಗಜ್ಜ ಉದ್ಬವ ಶಿಲೆಯ ಪ್ರಧಾನ ಸ್ಥಳದಲ್ಲಿ ದೈವ ಸೇವಕ ಮಾಯಿಲ ಕುತ್ತಾರ್ ಬಿಡುಗಡೆಗೊಳಿಸಿದರು.ಈ ಸಂದರ್ಭ ಬುರ್ದುಗೋಳಿ ಕ್ಷೇತ್ರದ ಅಧ್ಯಕ್ಷ ವಿಶ್ವನಾಥ ನಾಯಕ್, ಟೈಗರ್ ಕ್ಯಾಂಪ್ ನ ರಾಜ, ಧ್ವನಿ ಸುರುಳಿಯ ನಿರ್ಮಾಪಕರಾದ ಜೀವನ್ ಎಂ ಶೆಟ್ಟಿ, ನರೇಶ್ ಚೌಟ ಮುಳಿಹಿತ್ಲು, ಸಾಯಿ ಪರಿವಾರ್ ನ ಪುರುಷೋತ್ತಮ ಕಲ್ಲಾಪು, ರಜನೀಶ್ ನಾಯಕ್, ಬುರ್ದುಗೋಳಿ ಕ್ಷೇತ್ರದ ಪ್ರಶಾಂತ್ ಕಾಯಂಗಳ ಮುಂತಾದವರಿದ್ದರು. ಪ್ರವೀಣ್ ಎಸ್ ಕುಂಪಲ ನಿರೂಪಿಸಿದರು.ಗಾಯಕಿ ಪೂಜಾ ಸನಿಲ್ ವಂದಿಸಿದರು.
Author: UllalaVani
ಕುತ್ತಾರು: ವಿಧಾನಪರಿಷತ್ ಸದಸ್ಯ ಬಿಜೆಪಿ ಮುಖಂಡ ಎನ್. ರವಿಕುಮಾರ್ ಅವರು ಕುತ್ತಾರು ದೆಕ್ಕಾಡಿನಲ್ಲಿರುವ ಪ್ರಸಿದ್ಧ ಕೊರಗಜ್ಜ ಕ್ಷೇತ್ರಕ್ಕೆ ಭೇಟಿ ನೀಡಿ ಕೊರಗಜ್ಜನ ಆಶೀರ್ವಾದ ಪಡೆದರು.ಭೇಟಿ ವೇಳೆ ಸ್ಥಳೀಯ ಭಕ್ತರು ಮತ್ತು ಕ್ಷೇತ್ರದ ಆಡಳಿತಗಾರರೊಂದಿಗೆ ಮಾತನಾಡಿ, ಕ್ಷೇತ್ರದ ಇತಿಹಾಸ ಹಾಗೂ ಮಹತ್ವದ ಕುರಿತು ಮಾಹಿತಿಯನ್ನು ತಿಳಿದುಕೊಂಡರು. ಕ್ಷೇತ್ರದ ಪಾವಿತ್ರ‍್ಯತೆ ಮತ್ತು ಸಂಸ್ಕೃತಿಯನ್ನು ಸಂರಕ್ಷಿಸಲು ದೈವಸ್ಥಾನ ಆಡಳಿತ ಮಾಡುತ್ತಿರುವ ಪ್ರಯತ್ನಗಳನ್ನು ಅವರು ಶ್ಲಾಘಿಸಿದರು.ತುಳುನಾಡಿನ ಸಂಸ್ಕೃತಿಯ ಅವಿಭಾಜ್ಯ ಅಂಗವಾದ ಕೋರಗಜ್ಜ ಕ್ಷೇತ್ರವು ಇಡೀ ಪ್ರಾಂತ್ಯದ ಭಕ್ತರ ಮನದಲ್ಲಿ ವಿಶಿಷ್ಟ ಸ್ಥಾನ ಪಡೆದಿದೆ. ಆಧ್ಯಾತ್ಮಿಕ ಚೈತನ್ಯದ ಕೇಂದ್ರವಾಗಿರುವ ಈ ಕ್ಷೇತ್ರವು ದಕ್ಷಿಣ ಕನ್ನಡದ ಪ್ರಮುಖ ಆರಾಧನಾ ಕೇಂದ್ರವಾಗಿದೆ ಎಂದರು.ಈ ಸಂದರ್ಭದಲ್ಲಿ ಹಲವು ಸ್ಥಳೀಯ ನಾಯಕರು, ಪಕ್ಷದ ಸದಸ್ಯರು ಮತ್ತು ಬೆಂಬಲಿಗರು ರವಿಕುಮಾರ್ ಅವರನ್ನು ಆತ್ಮೀಯವಾಗಿ ಸ್ವಾಗತಿಸಿದರು. ಈ ಭೇಟಿ, ಸ್ಥಳೀಯ ಸಮುದಾಯದೊಂದಿಗೆ ಸಂಬಂಧವನ್ನು ಬೆಸೆಯುವ ಮತ್ತು ಸಂಸ್ಕೃತಿಯ ವೈವಿಧ್ಯತೆಯನ್ನು ಉತ್ತೇಜಿಸುವ ದೃಷ್ಟಿಯಿಂದ ಮಹತ್ವವನ್ನು ಹೊಂದಿತ್ತು ಎಂದರು.ಈ ಸಂದರ್ಭ ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ, ಜಿಲ್ಲಾ ಪ್ರಧಾನ…
ಮುಡಿಪು: ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಉಳ್ಳಾಲ ತಾಲೂಕು ಘಟಕ, ವೀರರಾಣಿ ಅಬ್ಬಕ್ಕ ರಾಷ್ಟ್ರೀಯ ಪ್ರತಿಷ್ಠಾನ ಮಂಗಳೂರು, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಮಂಗಳೂರು ದಕ್ಷಿಣ ವಲಯ ಶ್ರೀ ರಾಮಕೃಷ್ಣ ಅನುದಾನಿತ ಪ್ರೌಢಶಾಲೆ ಪಾವೂರು ಹರೇಕಳ ಸಂಯುಕ್ತ ಆಶ್ರಯದಲ್ಲಿ ಉಳ್ಳಾಲ ತಾಲೂಕು ಪ್ರಥಮ ವಿದ್ಯಾರ್ಥಿ ಸಾಹಿತ್ಯ ಸಮ್ಮೇಳನವನ್ನು ಡಿ. 28 ರಂದು ಹರೇಕಳ ಶ್ರೀರಾಮಕೃಷ್ಣ ಪ್ರೌಢಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದೆಸಮ್ಮೇಳನ ಅಧ್ಯಕ್ಷರಾಗಿ ಶ್ರೀ ರಾಮಕೃಷ್ಣ ಅನುದಾನಿತ ಪ್ರೌಢಶಾಲೆ ಹರೇಕಳ ಕುಮಾರಿ ಫಾತಿಮತ್ ರಫೀದ ಇವರನ್ನು ಆರಿಸಲಾಗಿದೆ.ಬೆಳಗ್ಗೆ 9-30 ಹರೇಕಳ ಗ್ರಾಮ ಪಂಚಾಯತ್ ಆವರಣದಿಂದ ಜಾನಪದ ದಿಬ್ಬಣ ನಡೆಯಲಿದ್ದು ಇದರ ಉದ್ಘಾಟನೆ , ಗುಲಾಬಿ ಅಧ್ಯಕ್ಷರು ಹರೇಕಳ ಗ್ರಾಮ ಪಂಚಾಯತ್ ಇವರು ನೆರವೇರಿಸಲಿದ್ದಾರೆ. ಅಕ್ಷರ ಸಂತ ಹರೇಕಳ ಹಾಜಬ್ಬ , ಪದ್ಮ ಶ್ರೀ ಪುರಸ್ಕೃತರು ಭಾಗವಹಿಸಲಿದ್ದಾರೆ.ಸಮ್ಮೇಳನದಉದ್ಘಾಟಕರಾಗಿ ಯು ಟಿ ಖಾದರ್ ಸಭಾಧ್ಯಕ್ಷರು ಕರ್ನಾಟಕ ವಿಧಾನಸಭೆ ಪ್ರಧಾನ ಅಭ್ಯಾಗತರಾಗಿ, ಡಾ. ಎಂ. ಪಿ. ಶ್ರೀನಾಥಅಧ್ಯಕ್ಷರು ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು , ಮುಖ್ಯ…
This content is password-protected. To view it, please enter the password below. Password:
ಮಂಗಳೂರು: 2019ರಿಂದ ಆಯೋಜಿಸಿಕೊಂಡು ಬಂದಿರುವ ಆಶಾ ಪ್ರಕಾಶ್ ಶೆಟ್ಟಿ ಸಹಾಯ ಹಸ್ತ ಯೋಜನೆಯ “ನೆರವು” ಸಹಾಯಹಸ್ತ ಪ್ರದಾನ ಕಾರ್ಯಕ್ರಮ ಬುಧವಾರ ಸಂಜೆ ಗೋಲ್ಡ್ ಫಿಂಚ್ ಸಿಟಿಯಲ್ಲಿ ನಡೆಯಿತು.ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಲಾಯಿತು.ಬಳಿಕ ಮಾತಾಡಿದ ಎಂ.ಆರ್.ಜಿ.ಗ್ರೂಪ್ ಚೇರ್ಮನ್ ಡಾ.ಕೆ.ಪ್ರಕಾಶ್ ಶೆಟ್ಟಿ ಅವರು, “ನನ್ನ 60ನೇ ವರ್ಷದ ಹುಟ್ಟುಹಬ್ಬದ ಸಂದರ್ಭದಲ್ಲಿ ಸಮಾಜಕ್ಕೆ ನನ್ನಿಂದ ಕಿಂಚಿತ್ತು ನೆರವು ನೀಡುವ ಉದ್ದೇಶದಿಂದ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಅಂದಿನಿಂದ ಸತತವಾಗಿ ಈ ಕಾರ್ಯಕ್ರಮ ನಡೆಸಿಕೊಂಡು ಬರಲಾಗುತ್ತಿದೆ. ಇಂದು ನನ್ನ ಬಾಳಿನಲ್ಲಿ ಅತ್ಯಂತ ಖುಷಿಯ ದಿನ. ನನ್ನ ಈ ಕಾರ್ಯಕ್ಕೆ ನನ್ನ ಪತ್ನಿ ಮಗ ಸೊಸೆ ಸಹಿತ ಕುಟುಂಬದ ಸದಸ್ಯರು ಸಹಕಾರ ನೀಡುತ್ತಿದ್ದಾರೆ. ಮೊದಲ ವರ್ಷದಲ್ಲಿ 1 ಕೋಟಿ 25 ಲಕ್ಷ ರೂ. ನೆರವು ನೀಡಿದ್ದು ಅದು ಇಂದು 6 ಕೋಟಿ ರೂ. ಗಡಿಯನ್ನು ದಾಟಿದೆ. ಇಂದು ಇಲ್ಲಿ ಸಮಾರಂಭ ನಡೆಸಿ ನೆರವು ನೀಡುವ ಉದ್ದೇಶ ಇಷ್ಟೇ. ಇಂತಹ ಕಾರ್ಯಕ್ರಮ ಇಂದು ಸಹಾಯ ಪಡೆದ ಕೈಗಳಿಗೆ ಸ್ಫೂರ್ತಿಯಾಗಬೇಕು.…
ಉಳ್ಳಾಲ: ಮಂಗಳೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅಭಿವೃದ್ಧಿಯ ನಿಟ್ಟಿನಲ್ಲಿ ಮುಂದಿನ 30 ವರ್ಷಗಳ ದೂರದೃಷ್ಟಿಯನ್ನಿಟ್ಟುಕೊಂಡು ನಿರಂತರ ವಿದ್ಯುತ್ ನೀಡುವ ಯೋಜನೆ ರೂಪಿಸುತ್ತಿದ್ದು, ಇತರ ಜಿಲ್ಲೆ, ರಾಜ್ಯದವರು ಯಾವುದೇ ಭಾಗದಲ್ಲೂ ಬಂಡವಾಳ ಹಾಕುವ ಸಂದರ್ಭ ವಿದ್ಯುತ್‌ನ ಸಮಸ್ಯೆ ಈ ಪ್ರದೇಶದಲ್ಲಿ ಉದ್ಭವಿಸದ ರೀತಿಯಲ್ಲಿ ಅನುದಾನವನ್ನು ತರಲಾಗಿದೆ ಎಂದು ವಿಧಾನಭಾಧ್ಯಕ್ಷ ಯು.ಟಿ. ಖಾದರ್ ಹೇಳಿದರು.ಮೆಸ್ಕಾಂ ವತಿಯಿಂದ ಸುಮಾರು 9 ಕೋಟಿ ರೂ. ವೆಚ್ಚದಲ್ಲಿ ಕೋಟೆಕಾರ್ ಗ್ರಾಮದಲ್ಲಿ ನಿರ್ಮಾಣಗೊಂಡಿರುವ 33/11ಕೆವಿ ಸಾಮರ್ಥ್ಯದ ಉಪಕೇಂದ್ರ ಮಂಗಳವಾರ ಪರೀಕ್ಷಾರ್ಥ ಚಾಲನೆ ನೀಡಿ ಮಾತನಾಡಿದರು.ಮುಂದಕ್ಕೆ ಉಳ್ಳಾಲ ನಗರ, ಕೋಟೆಕಾರ್, ಕೊಣಾಜೆ, ಬೆಲ್ಮ, ಬೋಳಿಯಾರ್, ಕಿನ್ಯದಲ್ಲಿ ಸೆಕ್ಷನ್ ಕಚೇರಿ ನಿರ್ಮಾಣದ ಜೊತೆಗೆ ವಿದ್ಯುತ್ ಸಾಮರ್ಥ್ಯ ಹೆಚ್ಚಿಸುವ ಕಾರ್ಯ ಆಗಲಿದೆ. ಇದರಿಂದಾಗಿ ಉಳ್ಳಾಲ ತಾಲೂಕಿನಾದ್ಯಂತ ವಿದ್ಯುತ್ ಸಮಸ್ಯೆಗೆ ಶಾಶ್ವತ ಪರಿಹಾರ ಸಿಗಲಿದೆ. ಈ ಯೋಜನೆಯಿಂದ ಪ್ರಸ್ತುತ ಕಿನ್ಯಾ, ತಲಪಾಡಿ ಮತ್ತು ಮಾಡೂರು ಪ್ರದೇಶಗಳಿಗೆ 110ಕೆವಿ ವಿದ್ಯುತ್ ಕೊಣಾಜೆ ಉಪಕೇಂದ್ರದಿAದ ಮತ್ತು ಕೋಟೆಕಾರ್, ಸೋಮೇಶ್ವರ ಪುದೇಶಗಳಿಗೆ 33 ಕೆವಿ ವಿದ್ಯುತ್ ತೊಕೊಟ್ಟು ಉಪಕೇಂದ್ರದಿAದ ಸರಬರಾಜು…
ಮಂಗಳೂರು: ಮೂರನೇ ಆವೃತ್ತಿಯ ಮಂಗಳೂರು ಬೀಚ್ ಫೆಸ್ಟಿವಲ್, ಮಂಗಳೂರು ಟ್ರಯಾಥ್ಲನ್-2025 ಇದರ ಉದ್ಘಾಟನಾ ಸಮಾರಂಭ ಶನಿವಾರ ಸಂಜೆ ನಗರದ ಓಷನ್ ಪರ್ಲ್ ಹೋಟೆಲ್ ನಲ್ಲಿ ಜರುಗಿತು.ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಲಾಯಿತು. ಬಳಿಕ ಮಾತಾಡಿದ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು, “ದಕ್ಷಿಣ ಕನ್ನಡ ಎಲ್ಲ ರೀತಿಯಲ್ಲಿ ಮುಂದೆ ಇರುವ ಜಿಲ್ಲೆ. ಇಲ್ಲಿ ಎಲ್ಲ ಜಾತಿ ಭಾಷೆ ಮತದ ಜನರು ಒಗ್ಗಟ್ಟಾಗಿ ಬದುಕುತ್ತಿದ್ದಾರೆ. ಇಲ್ಲಿ ಸಂಸ್ಕೃತಿ ಮತ್ತು ಕ್ರೀಡೆಯ ಬಗ್ಗೆ ಮಹತ್ವವನ್ನು ಸಾರುವ ಇಂತಹ ಕಾರ್ಯಕ್ರಮ ಆಯೋಜನೆ ಮಾಡುತ್ತಿರುವುದು ಸಂತಸದ ವಿಚಾರ. ಒಂದು ಒಳ್ಳೆಯ ಕಾರ್ಯಕ್ಕಾಗಿ ಇಂತಹ ಕಾರ್ಯ ಮಾಡುತ್ತಿರುವ ತಪಸ್ಯ ಫೌಂಡೇಶನ್ ಶ್ರಮ ಶ್ಲಾಘನೀಯವಾದುದು. ಕಾರ್ಯಕ್ರಮ ಯಶಸ್ವಿಗೊಳಿಸಲು ನಾವೆಲ್ಲರೂ ಒಂದಾಗಿ ದುಡಿಯಬೇಕು. ಜಿಲ್ಲಾಡಳಿತ ಇಂತಹ ಕಾರ್ಯಕ್ರಮಕ್ಕೆ ಎಲ್ಲ ರೀತಿಯ ಸಹಕಾರ ನೀಡಲಿದೆ” ಎಂದರು.ಬಳಿಕ ಮಾತಾಡಿದ ದಕ್ಷಿಣ ಕನ್ನಡ ಜಿಲ್ಲಾ ಸಂಸದ ಕ್ಯಾಪ್ಟನ್ ಬೃಜೇಶ್ ಚೌಟ ಅವರು, “ಸಾಮಾಜಿಕ ಕಳಕಳಿಯ ಉದ್ದೇಶದಿಂದ ನಡೆಸುತ್ತಿರುವ ಇಂತಹ ಕಾರ್ಯಕ್ರಮ ಯಶಸ್ವಿಯಾಗಲಿ. ಇಂತಹ ಕಾರ್ಯಕ್ರಮದಲ್ಲಿ…
ನಂದಿನಿ ನದಿಯ ಹಿನ್ನೀರಿನ ತಟದಲ್ಲಿ ರೋಹನ್ ಎಸ್ಟೇಟ್ ಮುಕ್ಕ ಬಡಾವಣೆ ನಿರ್ಮಾಣವಾಗಿದೆ. ಪರಿಸರದ ಶ್ರೀಮಂತಿಕೆಯ ಜತೆಗೆ ಅತ್ಯಂತ ಸುರಕ್ಷಿತ ಹಾಗೂ ಆಕರ್ಷಕವಾಗಿ ಬಡಾವಣೆಯು ಮೂಡಿ ಬಂದಿದೆ. ಪ್ರಕೃತಿ ಜತೆಗೆ ಮಿಳಿತವಾದ ಆರಾಮದಾಯಕ ಬದುಕಿಗಾಗಿ ಈ ಬಡಾವಣೆಯನ್ನು ವಿನ್ಯಾಸಗೊಳಿಸಲಾಗಿದೆ. ಇದೊಂದು ಪರಿಪೂರ್ಣವಾದ ರೆಸಾರ್ಟ್ ಮಾದರಿಯ ಬಡಾವಣೆಯಾಗಿ ರೂಪುಗೊಂಡಿದೆ. ರೆಸಾರ್ಟ್ ಮಾದರಿಯ ಐಶಾರಾಮಿ ಬಡಾವಣೆ ರೋಹನ್ ಎಸ್ಟೇಟ್ ಮುಕ್ಕ. ಇದು ರೆಸಾರ್ಟ್ ಅಲ್ಲ. ರೆಸಾರ್ಟ್ ಶೈಲಿಯ ವಸತಿ ಬಡಾವಣೆ. ಶ್ರೀಮಂತಿಕೆ, ಐಶಾರಾಮಿ ಮಾದರಿ ಎಂಬಂತೆ ಪ್ರಕೃತಿಯ ಮಡಿಲಿನಲ್ಲಿ ತಲೆ ಎತ್ತಿ
ಮಂಗಳೂರು: ಪ್ರತೀ ವರ್ಷ ಆಯೋಜಿಸಿಕೊಂಡು ಬಂದಿರುವ ಆಶಾ ಪ್ರಕಾಶ್ ಶೆಟ್ಟಿ ಸಹಾಯ ಹಸ್ತ ಯೋಜನೆಯ “ನೆರವು” ಸಹಾಯಹಸ್ತ ಪ್ರದಾನ ಕಾರ್ಯಕ್ರಮ ಡಿ. 25ರಂದು ಮಧ್ಯಾಹ್ನ ಗಂಟೆ 3.30ಕ್ಕೆ ಮಂಗಳೂರಿನ ಗೋಲ್ಡ್ ಫಿಂಚ್ ಸಿಟಿಯಲ್ಲಿ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಬೆಂಗಳೂರಿನ ಅದಮ್ಯ ಚೇತನ ಫೌಂಡೇಶನ್ನಿನ ಅಧ್ಯಕ್ಷರು ಹಾಗು ಸಹ- ಸಂಸ್ಥಾಪಕರೂ ಆಗಿರುವ ಡಾ. ತೇಜಸ್ವಿನಿ ಅನಂತಕುಮಾರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಮೂಡಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷರಾದ ಡಾ.ಎಂ. ಮೋಹನ ಆಳ್ವ, ಕಾಪು ವಿಧನಾಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಎಂ.ಆರ್.ಜಿ.ಗ್ರೂಪ್ ನ ಆಡಳಿತ ನಿರ್ದೇಶಕರಾದ ಗೌರವ್ ಪಿ. ಶೆಟ್ಟಿ ಮತ್ತು ಉಪಸ್ಥಿತರಿರಲಿದ್ದಾರೆ“ ಎಂದು ಎಂ.ಆರ್.ಜಿ.ಗ್ರೂಪ್ ಚೇರ್ಮನ್ ಡಾ. ಕೆ.ಪ್ರಕಾಶ್ ಶೆಟ್ಟಿ ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದರು.“ಈ ವರ್ಷ ಒಟ್ಟು 3,000 ಕುಟುಂಬಗಳಿಗೆ 6 ಕೋಟಿ ರೂಪಾಯಿಗೂ ಮಿಕ್ಕಿ ನೆರವನ್ನು ವಿತರಿಸಲಾಗುತ್ತಿದೆ. ಇದರಿಂದ ಸುಮಾರು ಹದಿನೈದು ಸಾವಿರ ಮಂದಿಗೆ ಪ್ರಯೋಜನವಾಗಲಿದೆ. ಫಲಾನುಭವಿಗಳ ಆಯ್ಕೆಯಲ್ಲಿ ಒಂದು ನಿಗದಿತ ಮಾನದಂಡವನ್ನು ಅನುಸರಿಸಲಾಗಿದೆ. ಅರ್ಜಿಗಳನ್ನು ಪರಿಶೀಲಿಸಿ, ಅವಶ್ಯ…
ಉಳ್ಳಾಲ: ಯುವಸಮುದಾಯ ಸೆಲ್ಫೀ ತೆಗೆದುಕೊಂಡು ಸ್ವಾರ್ಥಯುತ ಮನೋಭಾವದೊಂದಿಗೆ ಜೀವಿಸುತ್ತಿದ್ದಾರೆ, ಅದನ್ನು ಬದಲಾಯಿಸಲು ಎಳೆಯ ಹರೆಯದಲ್ಲೇ ಸಮಾಜದ ಆಗುಹೋಗುಗಳ ತಿಳುವಳಿಕೆ, ವೆನ್ಲಾಕ್ ಆಸ್ಪತ್ರೆಯಲ್ಲಿರುವ ರೋಗಿಗಳ ದರ್ಶನ ಮಾಡಿಸಿದಾಗ ಉತ್ತಮ ವ್ಯಕ್ತಿತ್ವ ರೂಪಿಸಲು ಸಾಧ್ಯವಾಗುವುದು ಎಂದು ವಿಧಾನಸಭಾ ಅಧ್ಯಕ್ಷ ಯು.ಟಿ.ಖಾದರ್ ಹೇಳಿದರು.ಅವರು ಉಳ್ಳಾಲ ಅಲೇಕಳದ ಮದನಿ ಎಜ್ಯುಕೇಷನಲ್ ಅಸೋಸಿಯೇಷನ್ ಇದರ 50ನೇ ವರ್ಷದ ಸುವರ್ಣ ಸಂಭ್ರಮಾಚರಣೆ ಪ್ರಯುಕ್ತ ಹಮ್ಮಿಕೊಳ್ಳಲಾದ ನೂತನ ಕಾಲೇಜು ಮತ್ತು ವೈಜ್ಞಾನಿಕ ಪ್ರಯೋಗಾಲಯ ಕಟ್ಟಡದ ಶಿಲನ್ಯಾಸ ನೆರವೇರಿಸಿ ಮಾತನಾಡಿದರು.ಕಷ್ಟಕರ ವಿಚಾರಗಳು ಮನಸ್ಸಿಗೆ ಪರಿಚಯವಾದಾಗ ಮಕ್ಕಳು ಎಂದಿಗೂ ದಾರಿತಪ್ಪಲು ಸಾಧ್ಯವಿಲ್ಲ. ವೆನ್ಲಾಕ್ ಆಸ್ಪತ್ರೆ, ಬಡ ವರ್ಗದವರ ಕಷ್ಟಗಳನ್ನು ಹೇಳಿಕೊಟ್ಟು ಅದನ್ನು ತಿಳಿಸಿದಲ್ಲಿ ಉತ್ತಮ ವ್ಯಕ್ತಿತ್ವ ರೂಪಿಸಲು ಸಾಧ್ಯ. ಮದನಿ ಎಜ್ಯುಕೇಷನಲ್ ಅಸೋಸಿಯೇಷನ್ ಮತ್ತು ಅಲ್ಯುಮ್ನಿ ಅಸೋಸಿಯೇಷನ್ ಮಹತ್ವದ ಸಮಾಜಮುಖಿ ಕಾರ್ಯಕ್ಕೆ ಮುಂದಾಗಿರುವ ಕಾರ್ಯ ಶ್ಲಾಘನೀಯ. ತನ್ನ ಕಡೆಯಿಂದ ರೂ.25 ಲಕ್ಷ ರೂ ವೆಚ್ಚದ ಸಹಾಯವನ್ನು ನಡೆಸುವಲ್ಲಿ ಶ್ರಮವಹಿಸುತ್ತೇನೆ ಎಂದ ಅವರು ಬಡವರು ಬಡವರಾಗಿಯೇ ಸಾಯದೇ, ಸ್ಥಿತಿವಂತರಾಗಿಯೇ ಬಾಳುವವರಾಗಿರಿ ಎಂದರು.ಸುವರ್ಣ ಮಹೋತ್ಸವದ ಲಾಂಛನವನ್ನು ವಿಧಾನಪರಿಷತ್…

