Author: UllalaVani

Kannada News From Coastal Karnataka

ವಾದಿತ್ವೈಬ, ಕಿನ್ಯಾ, ಜು. 1: ಸಮಸ್ತ ನ್ಯಾಷನಲ್ ಎಜುಕೇಶನ್ ಕೌನ್ಸಿಲ್ (SNEC) ವತಿಯಿಂದ 2025-26ನೇ ಶೈಕ್ಷಣಿಕ ಸಾಲಿನ ಸೆಮಿಸ್ಟರ್ ಪರೀಕ್ಷೆಯಲ್ಲಿ ವಾದಿತ್ವೈಬ, ಕಿನ್ಯಾದ ಶಂಸುಲ್ ಉಲಮಾ ದಾರುಸ್ಸಲಾಂ ಇಸ್ಲಾಮಿಕ್ ಅಕಾಡೆಮಿಯ ವಿದ್ಯಾರ್ಥಿಗಳು ರಾಜ್ಯಮಟ್ಟದಲ್ಲಿ ಅತ್ಯುತ್ತಮ ಸಾಧನೆ ಮಾಡಿ ಸಂಸ್ಥೆಗೆ ಕೀರ್ತಿ ತಂದಿದ್ದಾರೆ. HS2 ವಿಭಾಗದಲ್ಲಿ ವಿದ್ಯಾರ್ಥಿ ಮುಹಮ್ಮದ್ ಇಶಾದ್ ಪ್ರಥಮ ರ‍್ಯಾಂಕ್ ಗಳಿಸಿದ್ದು, ಅಹ್ಮದ್ ತಾಹಿರ್ ಇ.ಕೆ. ನಾಲ್ಕನೇ ರ‍್ಯಾಂಕ್ ಹಾಗೂ ಮುಹಮ್ಮದ್ ಇಶಾಂ ಬಿ.ಎಸ್. ಹತ್ತನೇ ರ‍್ಯಾಂಕ್ ಪಡೆದು ಗಮನಾರ್ಹ ಸಾಧನೆ ಮಾಡಿದ್ದಾರೆ. ಇದೇ ವೇಳೆ HS1 ವಿಭಾಗದಲ್ಲಿ ಹಾಫಿಜ್ ಅಬ್ಬಾಸ್ ಮೂರನೇ ರ‍್ಯಾಂಕ್ ಗಳಿಸುವ ಮೂಲಕ ಸಂಸ್ಥೆಯ ಶೈಕ್ಷಣಿಕ ಮೇಲುಗೈಯನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ. ವಿದ್ಯಾರ್ಥಿಗಳ ಈ ಯಶಸ್ಸಿಗೆ ಅವರ ನಿರಂತರ ಪರಿಶ್ರಮ, ಶಿಕ್ಷಕರ ಸಮರ್ಪಕ ಮಾರ್ಗದರ್ಶನ ಹಾಗೂ ಪೋಷಕರ ಪ್ರೋತ್ಸಾಹವೇ ಪ್ರಮುಖ ಕಾರಣವಾಗಿದೆ ಎಂದು ಸಂಸ್ಥೆಯ ಆಡಳಿತ ಮಂಡಳಿ ತಿಳಿಸಿದೆ. ವಿದ್ಯಾರ್ಥಿಗಳ ಸಾಧನೆಯು ಸಂಸ್ಥೆಯ ಗುಣಮಟ್ಟದ ಶಿಕ್ಷಣ ಮತ್ತು ಶೈಕ್ಷಣಿಕ ಶ್ರೇಷ್ಠತೆಯ ಪ್ರತೀಕವಾಗಿದೆ ಎಂದು ಅವರು ಅಭಿಪ್ರಾಯಪಟ್ಟರು. ಈ…

Read More

ಉಡುಪಿ, ಜು.01: ಮಾಜಿ ಸಚಿವ ಮತ್ತು ಬಿಜೆಪಿ ನಾಯಕ ಪ್ರಮೋದ್ ಮಧ್ವರಾಜ್ ಅವರ ಮಾಜಿ ಆಪ್ತ ಸಹಾಯಕ ಸಂದೀಪ್ ಸಾಲಿಯನ್ (40) ಗೋವಾದ ಕಲ್ಲಂಗೂಟ್‌  ಬೀಚ್ ಬಳಿಯ ಅತಿಥಿ ಗೃಹದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದಾರೆ. ಸಂದೀಪ್ ಉಡುಪಿ ಜಿಲ್ಲೆಯ ಮಲ್ಪೆ ಮೂಲದವರು. ಸಂದೀಪ್ ಹಲವು ವರ್ಷಗಳ ಹಿಂದೆ ಪ್ರಮೋದ್ ಮಧ್ವರಾಜ್ ಅವರ ಆಪ್ತ  ಸಹಾಯಕ  ಕೆಲಸವನ್ನು ತೊರೆದಿದ್ದರು. ಪ್ರಸ್ತುತ ಅವರು ಪ್ರವಾಸೋದ್ಯಮ ವ್ಯವಹಾರದಲ್ಲಿ ತೊಡಗಿಸಿಕೊಂಡಿದ್ದರು ಮತ್ತು ಮಲ್ಪೆಯಲ್ಲಿ ಪ್ರವಾಸಿ ದೋಣಿಯನ್ನು ಹೊಂದಿದ್ದರು ಎಂದು ವರದಿಯಾಗಿದೆ.ಅವರು ಮೂರು ದಿನಗಳ ಹಿಂದೆ ಪ್ರವಾಸಕ್ಕೆಂದು ಗೋವಾಕ್ಕೆ ತೆರಳಿದ್ದರು. ಅವರ ಹಠಾತ್ ಸಾವು ಹೃದಯಾಘಾತದಿಂದ ಉಂಟಾಗಿದೆಯೇ ಅಥವಾ ಕೊಲೆ ನಡೆದಿವೆಯೇ ಎಂಬ ಬಗ್ಗೆ ಸಂಶಯ ವ್ಯಕ್ತವಾಗಿದ್ದು, ಕಳವಳ ವ್ಯಕ್ತವಾಗಿದೆ.ಸಾವಿಗೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ. 

Read More

ಉಳ್ಳಾಲ,ಜು.01: ಚೆಂಬುಗುಡ್ಡೆ ಕೆರೆಬೈಲ್‌ನಲ್ಲಿ ಖಾಸಗಿ ಜಾಗದಲ್ಲಿ ನಿರ್ಮಿಸಲಾಗಿದ್ದ ಕಾಂಪೌಂಡ್ ಗೋಡೆ ಏಕಾಏಕಿ ಕುಸಿದ ಪರಿಣಾಮ ಒಂದು ಮನೆ ಸಂಪೂರ್ಣ ನೆಲಸಮವಾಗಿದ್ದು, ಸುತ್ತಮುತ್ತಲಿನ ಹಲವಾರು ಮನೆಗಳು ಅಪಾಯದ ಅಂಚಿನಲ್ಲಿರುವ ಘಟನೆ ತೀವ್ರ ಆತಂಕಕ್ಕೆ ಕಾರಣವಾಗಿದೆ. ಘಟನೆಯಲ್ಲಿ ಅದೃಷ್ಟವಶಾತ್ ಪ್ರಾಣಾಪಾಯ ತಪ್ಪಿದ್ದರೂ, ಮಾನವ ಜೀವಕ್ಕೆ ಗಂಭೀರ ಅಪಾಯ ಉಂಟುಮಾಡಿದ ಈ ಪ್ರಕರಣವನ್ನು ಸಾಮಾನ್ಯ ಅಪಘಾತವೆಂದು ಪರಿಗಣಿಸದೆ, ಸಂಬಂಧಪಟ್ಟವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕೆಂಬ ಒತ್ತಾಯ ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ. ಸ್ಥಳೀಯರು ಮತ್ತು ಸಾರ್ವಜನಿಕರು ಆರೋಪಿಸಿರುವಂತೆ, ಸುರಕ್ಷತಾ ಕ್ರಮಗಳನ್ನು ಪಾಲಿಸದೆ ಹಾಗೂ ಅಗತ್ಯ ಮುನ್ನೆಚ್ಚರಿಕೆ ವಹಿಸದೇ ಕೈಗೊಂಡ ಕಾಮಗಾರಿ ಅಥವಾ ನಿರ್ಲಕ್ಷ್ಯದಿಂದ ಈ ದುರಂತ ಸಂಭವಿಸಿದ್ದರೆ, ಅದರ ಸಂಪೂರ್ಣ ಹೊಣೆಗಾರಿಕೆಯನ್ನು ಸಂಬಂಧಪಟ್ಟ ಮಾಲೀಕರು, ಗುತ್ತಿಗೆದಾರರು ಮತ್ತು ಜವಾಬ್ದಾರರು ಹೊರಬೇಕಾಗುತ್ತದೆ. ಈ ಪ್ರಕರಣದಲ್ಲಿ ವಿಪತ್ತು ನಿರ್ವಹಣಾ ಕಾಯ್ದೆ, 2005ರ ಅನ್ವಯ ಜಿಲ್ಲಾಡಳಿತವು ಅಪಾಯದ ಪರಿಸ್ಥಿತಿಯನ್ನು ನಿಯಂತ್ರಿಸಲು ಮತ್ತು ಸಾರ್ವಜನಿಕರ ಸುರಕ್ಷತೆಯನ್ನು ಖಚಿತಪಡಿಸುವ ಅಧಿಕಾರ ಹೊಂದಿದೆ. ಮಾನವ ನಿರ್ಲಕ್ಷ್ಯದಿಂದ ಉಂಟಾಗುವ ಗಂಭೀರ ಹಾನಿಯೂ ವಿಪತ್ತು ನಿರ್ವಹಣೆಯ ವ್ಯಾಪ್ತಿಗೆ…

Read More

ನರಿಂಗಾನ: ಮೂಗಿನ ಅಲರ್ಜಿ, ಸೈನಸೈಟಿಸ್ ಹಾಗೂ ಸಂಬಂಧಿತ ಸಮಸ್ಯೆಗಳಿಂದ ಬಳಲುತ್ತಿರುವ ಸಾರ್ವಜನಿಕರಿಗಾಗಿ ಯೆನೆಪೋಯ ಆಯುರ್ವೇದ ಆಸ್ಪತ್ರೆಯಲ್ಲಿ ಉಚಿತ ಮೂಗಿನ ಅಲರ್ಜಿ ಮತ್ತು ಸೈನಸೈಟಿಸ್ ಚಿಕಿತ್ಸಾ ಶಿಬಿರವನ್ನು ಆಯೋಜಿಸಲಾಗಿದೆ. ಶಿಬಿರವು ಜುಲೈ 2 ಹಾಗೂ ಜುಲೈ 4, 2026ರಂದು ಬೆಳಿಗ್ಗೆ 9.00ರಿಂದ ಸಂಜೆ 4.00ರವರೆಗೆ ನಡೆಯಲಿದೆ. ಯೆನೆಪೋಯದ ಆಯುರ್ವೇದ ಸೇವೆಗಳಲ್ಲಿ ಪಂಚಕರ್ಮ ಸೇರಿದಂತೆ ವಿವಿಧ ಚಿಕಿತ್ಸೆಗಳು ಲಭ್ಯವಿವೆ. ಆಗಾಗ್ಗೆ ಸೀನು ಬರುವುದು, ಮೂಗು ಕಟ್ಟಿಕೊಳ್ಳುವುದು, ಮೂಗಿನಿಂದ ನೀರು ಹರಿಯುವುದು, ಸೈನಸ್ ಸಮಸ್ಯೆ ಹಾಗೂ ಅದರಿಂದ ಉಂಟಾಗುವ ತಲೆನೋವಿನಿಂದ ಬಳಲುತ್ತಿರುವವರು ಈ ಶಿಬಿರದಲ್ಲಿ ಭಾಗವಹಿಸಿ ತಜ್ಞ ಆಯುರ್ವೇದ ವೈದ್ಯರಿಂದ ಸಲಹೆ ಮತ್ತು ಚಿಕಿತ್ಸೆಯನ್ನು ಪಡೆಯಬಹುದು. ಶಿಬಿರದಲ್ಲಿ ಪಂಚಕರ್ಮ (ನಸ್ಯ) ಚಿಕಿತ್ಸೆ ಹಾಗೂ ಒಂದು ವಾರದ ಔಷಧಿಗಳನ್ನು ಸಂಪೂರ್ಣ ಉಚಿತವಾಗಿ ನೀಡಲಾಗುತ್ತದೆ. ಸಾರ್ವಜನಿಕರು ಈ ವಿಶೇಷ ಆರೋಗ್ಯ ಶಿಬಿರದ ಸದುಪಯೋಗ ಪಡೆದು ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳುವಂತೆ ಆಸ್ಪತ್ರೆಯ ಪ್ರಕಟಣೆ ತಿಳಿಸಿದೆ. ಸ್ಥಳ: ಯೆನೆಪೋಯ ಆಯುರ್ವೇದ ಆಸ್ಪತ್ರೆ,ನರಿಂಗಾನದಿನಾಂಕ: 02-07-2026 ಹಾಗೂ 04-07-2026ಸಮಯ: ಬೆಳಿಗ್ಗೆ 9.00 ರಿಂದ ಸಂಜೆ…

Read More

ಕಂಕನಾಡಿ ಜು.01: ಮಂಗಳವಾರ ರಾತ್ರಿಯಿಂದ ಸುರಿಯುತ್ತಿರುವ ಭಾರೀ ಮಳೆಗೆ ಮಂಗಳೂರಿನ  ಕಂಕನಾಡಿ ಸಮೀಪದ ನಾಗುರಿ ಸಮೀಪ ತಡೆಗೋಡೆ ಕುಸಿದು ಮನೆ ಮೇಲ್ಛಾವಣಿಗೆ ಬಿದ್ದ  ಪರಿಣಾಮ ಓರ್ವ ಮಹಿಳೆ ಇಬ್ಬರು ಮಕ್ಕಳು ಸೇರಿದಂತೆ  ಮೂವರು ಸಾವನ್ನಪ್ಪಿದ ಘಟನೆ ನಡೆದ ಹಿನ್ನಲೆಯಲ್ಲಿ ದೆಹಲಿ ಪ್ರವಾಸದಲ್ಲಿರುವ ಆರೋಗ್ಯ ಸಚಿವ ಯು ಟಿ ಖಾದರ್ ಅವರು ತಮ್ಮ ದೆಹಲಿ ಭೇಟಿಯನ್ನು ಮೊಟಕುಗೊಳಿಸಿದ್ದಾರೆ. ಘಟನೆಯ ಮಾಹಿತಿ ತಿಳಿದ ತಕ್ಷಣ ಜಿಲ್ಲಾಧಿಕಾರಿಗಳನ್ನು ಸಂಪರ್ಕಿಸಿದ ಸಚಿವರು, ತ್ವರಿತ ಪರಿಹಾರ ಕ್ರಮಗಳಿಗೆ ಸೂಚಿಸಿದರು. ಗಾಯಾಳುಗಳಿಗೆ ಸರಕಾರದ ವತಿಯಿಂದಲೇ ಆಸ್ಪತ್ರೆಯಲ್ಲಿ ಚಿಕಿತ್ಸಾ ವೆಚ್ಚ ಭರಿಸಲು ಹಾಗೂ ಮೃತರ ಕುಟುಂಬದವರಿಗೆ ಇಂದೇ ಪರಿಹಾರ ಮೊತ್ತ ನೀಡಲು ಅವರು ನಿರ್ದೇಶಿಸಿದ್ದಾರೆ. ಸಚಿವರು ಇಂದು ಮಧ್ಯಾಹ್ನ ಮಂಗಳೂರು ತಲುಪಲಿದ್ದಾರೆ.

Read More

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳ ಅಪಾಯದ ಕುರಿತು ಪದೇಪದೇ ಎಚ್ಚರಿಕೆಗಳು ಬಂದಿದ್ದರೂ, ಅವುಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವಲ್ಲಿ ಆಡಳಿತದ ವೈಫಲ್ಯ ಮತ್ತೆ ಮೂರು ಅಮೂಲ್ಯ ಜೀವಗಳನ್ನು ಬಲಿತೆಗೆದುಕೊಂಡಿದೆ ಎಂಬ ಪ್ರಶ್ನೆ ಇಂದು ಸಾರ್ವಜನಿಕ ವಲಯದಲ್ಲಿ ತೀವ್ರವಾಗಿ ಕೇಳಿಬರುತ್ತಿದೆ. ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ (DDMA) ಈಗಾಗಲೇ ಉಳ್ಳಾಲ–ಮಂಜನಾಡಿ ಪ್ರದೇಶದಲ್ಲಿ ಸಂಭವಿಸಿದ ದುರಂತವನ್ನು ಉಲ್ಲೇಖಿಸಿ, ಗುಡ್ಡ ಕುಸಿತದ ಅಪಾಯ ಇರುವ ಪ್ರದೇಶಗಳಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಎಚ್ಚರಿಕೆ ನೀಡಿತ್ತು. ಅಪಾಯದ ಪ್ರದೇಶಗಳನ್ನು ಗುರುತಿಸುವುದು, ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸುವುದು, ನಿರಂತರ ನಿಗಾ ವಹಿಸುವುದು ಹಾಗೂ ತಡೆಗೋಡೆ ಸೇರಿದಂತೆ ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಲಾಗಿತ್ತು. ಆದರೆ, ಈ ಎಚ್ಚರಿಕೆಗಳು ಕೇವಲ ದಾಖಲೆಗಳಿಗೆ ಮಾತ್ರ ಸೀಮಿತವಾಗಿವೆಯೇ ಎಂಬ ಅನುಮಾನ ಮೂಡಿಸುವ ರೀತಿಯಲ್ಲಿ, ಬುಧವಾರ ನಗರದ ನಾಗೋರಿ ಪ್ರದೇಶದಲ್ಲಿರುವ ಕನ್ಸನಾಡಿ ಪೊಲೀಸ್ ಠಾಣೆಯ ಹಿಂಭಾಗದ ವಸತಿ ಪ್ರದೇಶದಲ್ಲಿ ಗುಡ್ಡ ಕುಸಿದು ಮೂವರು ಮೃತಪಟ್ಟಿರುವ ದುರಂತ ಸಂಭವಿಸಿದೆ. ಈ ದುರಂತವು ಪ್ರಕೃತಿಯ ಆಕ್ರೋಶ ಮಾತ್ರವಲ್ಲ,…

Read More

ಉಳ್ಳಾಲ ನುಸ್ರತುಲ್ ಮಸಾಕೀನ್ ಚಾರಿಟೇಬಲ್ ಟ್ರಸ್ಟ್ ಹಾಗೂ ಮದನಿ ಎಜುಕೇಶನ್ ಅಸೋಸಿಯೇಷನ್ ಇವುಗಳ ಸಂಯುಕ್ತ ಆಶ್ರಯದಲ್ಲಿ ಶಾಲಾ ಮಕ್ಕಳಿಗೆ ಉಚಿತ ಸಮವಸ್ತ್ರ ವಿತರಣೆ ಕಾರ್ಯಕ್ರಮ ಅಳೇಕಲದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ನುಸ್ರತುಲ್ ಮಸಾಕೀನ್ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ತ್ವಾಹಾ ಹಾಜಿ ವಹಿಸಿದ್ದರುಈ ಸಂದರ್ಭದಲ್ಲಿ ನುಸ್ರತುಲ್ ಮಸಾಕೀನ್ ಚಾರಿಟೇಬಲ್ ಟ್ರಸ್ಟ್ ಕಾರ್ಯದರ್ಶಿ , ಮದನಿ ವಿದ್ಯಾಸಂಸ್ಥೆಯ ಸಂಚಾಲಕ ಮೊಹಮ್ಮದ್, ಮದನಿ ವಿದ್ಯಾಸಂಸ್ಥೆಯ ಜಂಟಿ ಕಾರ್ಯದರ್ಶಿ ಯು.ಎನ್. ಇಕ್ಬಾಲ್, ಮದನಿ ವಿದ್ಯಾಸಂಸ್ಥೆಯ ಸಮಿತಿ ಸದಸ್ಯ ಯು.ಎ. ಫಾರೂಕ್, ಸಹ ಶಿಕ್ಷಕ ಪ್ರಜ್ಞ, ದೈಹಿಕ ಶಿಕ್ಷಣ ಶಿಕ್ಷಕ ಮೊನಪ್ಪ , ಇಮ್ತಿಯಾಝ್ ಉಪಸ್ಥಿತರಿದ್ದರು.

Read More

ಮಂಗಳೂರು, ಜೂ. 30 : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ ಹವಾಮಾನದಿಂದಾಗಿ ಮೀನುಗಾರಿಕಾ ಬೋಟ್ ಮುಳುಗಡೆಯಾಗಿದ್ದು, ಅದರಲ್ಲಿದ್ದ ಆರು ಮಂದಿ ಮೀನುಗಾರರನ್ನು ಭಾರತೀಯ ಕೋಸ್ಟ್ ಗಾರ್ಡ್ ಸಿಬ್ಬಂದಿ ರಕ್ಷಿಸಿದ್ದಾರೆ. ಮಂಗಳೂರಿನ ಆಳ ಸಮುದ್ರದಲ್ಲಿ ‘ಐಎಫ್‌ಬಿ ಮಂಜುಮಾತಾ’ ಎಂಬ ಹೆಸರಿನ ದೋಣಿಯಲ್ಲಿ ಆರು ಜನ ಮೀನುಗಾರರು ಎಂದಿನಂತೆ ಮೀನುಗಾರಿಕೆಯಲ್ಲಿ ತೊಡಗಿದ್ದರು. ಆದರೆ, ಇದ್ದಕ್ಕಿದ್ದಂತೆ ಸಮುದ್ರ ಭೀಕರವಾಗಿ ಪ್ರಕ್ಷುಬ್ಧಗೊಂಡಿದ್ದು, ದೈತ್ಯ ಅಲೆಗಳ ಹೊಡೆತಕ್ಕೆ ಸಿಲುಕಿ ಬೋಟ್ ಒಳಗಡೆ ಭಾರಿ ಪ್ರಮಾಣದಲ್ಲಿ ನೀರು ಒಳನುಗ್ಗಲಾರಂಭಿಸಿದೆ. ನೀರಿನ ಒತ್ತಡ ಹೆಚ್ಚಾಗುತ್ತಿದ್ದಂತೆ ಬೋಟ್ ಸಮುದ್ರದಲ್ಲಿ ಮುಳುಗಲು ಪ್ರಾರಂಭವಾಗಿದೆ.ಮೀನುಗಾರರು ಅಪಾಯದಲ್ಲಿರುವ ಮಾಹಿತಿ ಸಿಗುತ್ತಿದ್ದಂತೆ ಕಾರ್ಯಪ್ರವೃತ್ತರಾದ ಭಾರತೀಯ ಕೋಸ್ಟ್ ಗಾರ್ಡ್ ಸಿಬ್ಬಂದಿ, ತಕ್ಷಣವೇ ಕಡಲ ಕಾವಲು ಪಡೆಯ ಅತ್ಯಾಧುನಿಕ ಹಡಗು ‘ಐಸಿಜಿಎಸ್ ಸಚೇತ್’ ಮೂಲಕ ಸ್ಥಳಕ್ಕೆ ಧಾವಿಸಿದರು. ಸಮುದ್ರದಲ್ಲಿ ಅಲೆಗಳ ಅಬ್ಬರ ಜೋರಾಗಿದ್ದರಿಂದ ದೋಣಿಯ ಹತ್ತಿರ ಹೋಗುವುದು ಸವಾಲಾಗಿತ್ತು. ಈ ಸಂದರ್ಭದಲ್ಲಿ ಕೋಸ್ಟ್ ಗಾರ್ಡ್ ಸಿಬ್ಬಂದಿ ಅತ್ಯಾಧುನಿಕ ತಂತ್ರಜ್ಞಾನವಾದ ರಿಮೋಟ್-ಆಪರೇಟೆಡ್ ಲೈಫ್‌ಬಾಯ್‌ಗಳನ್ನು ಬಳಸಿದರು. ಮುಳುಗುತ್ತಿದ್ದ ಬೋಟ್‌ನಲ್ಲಿದ್ದ ಮೀನುಗಾರರ ಬಳಿಗೆ ಈ ರಿಮೋಟ್…

Read More

ಮಂಗಳೂರು, ಜೂನ್ 30: ತುಳುವ ಭಾಷೆ, ಸಂಸ್ಕೃತಿ ಹಾಗೂ ತುಳುವ ನಾಗರಿಕತೆಯ ವೈಭವವನ್ನು ಮರುಸ್ಥಾಪಿಸುವ ಧ್ಯೇಯದೊಂದಿಗೆ ಕಾರ್ಯನಿರ್ವಹಿಸುತ್ತಿರುವ ತುಳುವ ಮಹಾಸಭೆ ಇಂಟರ್ನ್ಯಾಷನಲ್ ಸಂಘಟನೆಯ ತಾಲೂಕು ಮಟ್ಟದ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಕಾಪು, ಬ್ರಹ್ಮಾವರ ಹಾಗೂ ಉಳ್ಳಾಲ ತಾಲೂಕುಗಳ ಸಂಚಾಲಕರನ್ನು ಮರುನೇಮಕ ಮಾಡಲಾಗಿದೆ. ಕಾಪು ತಾಲೂಕು ಸಂಚಾಲಕರಾಗಿ ಡಾ. ನಿರಂಜನ್ ಶೆಟ್ಟಿ, ಬ್ರಹ್ಮಾವರ ತಾಲೂಕು ಸಂಚಾಲಕಿಯಾಗಿ ಆಶಾ ಎ. ಹೆಗ್ಡೆ ಹಾಗೂ ಉಳ್ಳಾಲ ತಾಲೂಕು ಸಂಚಾಲಕರಾಗಿ ಪವನ್ ರಾಜ್ ಕೊಲ್ಯ ಅವರನ್ನು ಮರುನೇಮಕಗೊಳಿಸಲಾಗಿದೆ. ಕಳೆದ ಅವಧಿಯಲ್ಲಿ ಸಂಘಟನೆಯ ಸದಸ್ಯತ್ವ ಅಭಿಯಾನ, ತುಳು ಭಾಷೆ ಮತ್ತು ಸಂಸ್ಕೃತಿಯ ಸಂರಕ್ಷಣೆ, ಸಾಮಾಜಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳ ಯಶಸ್ವಿ ಅನುಷ್ಠಾನ ಸೇರಿದಂತೆ ವಿವಿಧ ಸಂಘಟನಾ ಚಟುವಟಿಕೆಗಳಲ್ಲಿ ಸಲ್ಲಿಸಿದ ಸೇವೆಯನ್ನು ಪರಿಗಣಿಸಿ ಈ ಮರುನೇಮಕ ಮಾಡಲಾಗಿದೆ ಎಂದು ಸಂಘಟನೆಯು ತಿಳಿಸಿದೆ. 2028ರಲ್ಲಿ ಶತಮಾನೋತ್ಸವವನ್ನು ಆಚರಿಸಲಿರುವ ಐತಿಹಾಸಿಕ ತುಳುವ ಮಹಾಸಭೆಯ ಉದ್ದೇಶಗಳನ್ನು ಜನಸಾಮಾನ್ಯರಿಗೆ ತಲುಪಿಸುವುದು, ತುಳುವ ಭಾಷೆಗೆ ಸಂವಿಧಾನಾತ್ಮಕ ಮಾನ್ಯತೆ ದೊರಕಿಸುವ ನಿಟ್ಟಿನಲ್ಲಿ ಜನಜಾಗೃತಿ ಮೂಡಿಸುವುದು ಹಾಗೂ ತುಳುವ…

Read More

ಸುಳ್ಯ, ಜೂ. 30 ; ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ಯು.ಟಿ. ಖಾದರ್ ಅವರಿಗೆ ಸುಳ್ಯದಲ್ಲಿ ಸಾರ್ವಜನಿಕ ಅಭಿನಂದನಾ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮವು ಜುಲೈ 6 ರಂದು ಸುಳ್ಯದ ಜಾನಕಿ ವೆಂಕಟರಮಣ ಗೌಡ ಸಭಾಭವನದಲ್ಲಿ ನಡೆಯಲಿದ್ದು, ಸಮಿತಿಯ ಸಂಚಾಲಕ ಭರತ್ ಮುಂಡೋಡಿ ಅವರ ಪ್ರಕಾರ, ಇದು ಸಂಪೂರ್ಣವಾಗಿ ರಾಜಕೀಯ ರಹಿತ ಕಾರ್ಯಕ್ರಮವಾಗಿದೆ. ಅಂದು ಬೆಳಿಗ್ಗೆ 10 ಗಂಟೆಗೆ ಜ್ಯೋತಿ ವೃತ್ತದಿಂದ ಮೆರವಣಿಗೆ ಆರಂಭವಾಗಲಿದ್ದು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕಿ ಭಾಗೀರಥಿ ಮುರುಳ್ಯ ವಹಿಸಲಿದ್ದಾರೆ ಮತ್ತು ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್‌ನ ಡಾ. ಕೆ.ವಿ. ಚಿದಾನಂದ ಅವರು ಉದ್ಘಾಟಿಸಲಿದ್ದಾರೆ.ಸಮಾರಂಭದಲ್ಲಿ ಮೂರು ಧರ್ಮಗಳ ಧಾರ್ಮಿಕ ಗುರುಗಳು ಉಪಸ್ಥಿತರಿರಲಿದ್ದು, ಸಾರ್ವಜನಿಕರು ಸಚಿವರಿಗೆ ತಮ್ಮ ಮನವಿಗಳನ್ನು ಸಲ್ಲಿಸಲು ಪ್ರತ್ಯೇಕ ಕೌಂಟರ್ ವ್ಯವಸ್ಥೆಯನ್ನು ಸಹ ಮಾಡಲಾಗಿದೆ.

Read More