ತೊಕ್ಕೊಟ್ಟು: ಕಲ್ಲಿದ್ದಲು ಬಳಸುತ್ತಿರುವ ಫಿಶ್ ಮಿಲ್‌ಗಳಿಂದಾಗಿ ಕೋಟೆಪುರ, ಮುಳಿಹಿತ್ಲು ಭಾಗದಲ್ಲಿ ವ್ಯಾಪಕವಾಗಿ ಆರೋಗ್ಯ ಸಮಸ್ಯೆಗಳು ಕಾಣಿಸುತ್ತಿದ್ದು, ಸಿಆರ್ ಝೆಡ್ ಕಾನೂನು ಉಲ್ಲಂಘಿಸಿ ನಿರ್ಮಿಸಲಾಗಿರುವ ಕಟ್ಟಡಗಳಿಂದಾಗಿ ನದಿಯೇ ಮುಚ್ಚಿಹೋಗಿ ಕೋಟೆಪುರ-ಮುಳಿಹಿತ್ಲು ನಡುವೆ ದೋಣಿ ಸಂಪರ್ಕವೇ ಇರದಂತಹ ಸ್ಥಿತಿ ನಿರ್ಮಾಣವಾಗಲಿದೆ. ಜಿಲ್ಲಾಡಳಿತ ಕಾನೂನು ಕ್ರಮ ಕೈಗೊಳ್ಳದೇ ಇದ್ದಲ್ಲಿ ಪರಿಸರ ಇಲಾಖೆಯಿಂದ ಹಿಡಿದು ಸ್ಥಳೀಯಾಡಳಿತ, ಜಿಲ್ಲಾಡಳಿತದ ವಿರುದ್ಧ ಪೋಸ್ಟಲ್, ಕರಪತ್ರ, ಸಾಮಾಜಿಕ ಜಾಲತಾಣಗಳ ಮೂಲಕ ಚಳವಳಿಯನ್ನು ನಿರಂತರವಾಗಿ ನಡೆಸಲಿದ್ದೇವೆ ಎಂದು ಡಿವೈಎಫ್ ಐ ಜಿಲ್ಲಾಧ್ಯಕ್ಷ ಬಿ.ಕೆ.ಇಮ್ತಿಯಾಝ್ ಹೇಳಿದ್ದಾರೆ. ತೊಕ್ಕೊಟ್ಟು ಸೇವಾಸೌಧದಲ್ಲಿರುವ ಉಳ್ಳಾಲ ಪ್ರೆಸ್ ಕ್ಲಬ್ ನಲ್ಲಿ ಆಯೋಜಿಸಿದ ಸುದ್ಧಿಗೊಷ್ಠಿಯಲ್ಲಿಸ ಮಾತನಾಡಿದ ಅವರು ಕಲ್ಲಿದ್ದಲು ಬಳಕೆಯಿಂದಾಗಿ ದೀರ್ಘಕಾಲದ ಶ್ವಾಸಕೋಶದ ಕಾಯಿಲೆ, ರಕ್ತದೊತ್ತಡ ಹೃದ್ರೋಗ , ತುರಿಕೆ ಅಲರ್ಜಿ, ಚರ್ಮ ಕೆಂಪಾಗುವ ರೋಗ ಸಾಧ್ಯತೆಗಳಿವೆ ಅನ್ನುವುದು ಮಾಹಿತಿ ಹಕ್ಕಿನಡಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಪಡೆದ ವರದಿಯಿಂದ ಬಹಿರಂಗವಾಗಿದೆ. ಯುನೈಟೆಡ್ ಮೆರೈನ್ ಮತ್ತು ಇಂಡೋ ಫಿಶ್ ಮಿಲ್ ಕಲ್ಲಿದ್ದಲು ಬಳಸುವ ಮೂಲಕ ಸ್ಥಳೀಯರ ಆರೋಗ್ಯದೊಂದಿಗೆ ಚೆಲ್ಲಾಟವಾಡುತ್ತಿದೆ. ಪೊಲೀಸ್…
Author: UllalaVani
ಉಳ್ಳಾಲ: ಆಲ್ ಇಂಡಿಯಾ ಕೆಥೋಲಿಕ್ ಸಭಾ ದ ಕರ್ನಾಟಕ ಪ್ರಾಂತ ಅಧ್ಯಕ್ಷರಾಗಿ ಆಯ್ಕೆಯಾದ ಆಲ್ವಿನ್ ಡಿಸೋಜ ಇವರನ್ನು ಉಳ್ಳಾಲ ಬ್ಲಾಕ್ ಕಾಂಗ್ರೆಸ್ ವತಿಯಿಂದ ತೊಕ್ಕೊಟ್ಟು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಅಭಿನಂದಿಸಲಾಯಿತು.ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿದ್ದುಕೊಂಡು ಮೈನಾರಿಟಿ ಘಟಕವನ್ನು ಯಶಸ್ವಿಯಾಗಿ ನಿಭಾಯಿಸುವಲ್ಲಿ ಆಲ್ವಿನ್ ಫಾತ್ರ ಮಹತ್ವದ್ದು, ಇದೀಗ ಚುನಾವಣೆ ಮೂಲಕ ಕೆಥೋಲಿಕ್ ಸಭಾದ ಉನ್ನತ ಹುದ್ದೆಯನ್ನು ಅಲಂಕರಿಸಿರುವ ಅವರ ಸೇವಾ ಅವಧಿಯಲ್ಲಿ ಉತ್ತಮ ಕಾರ್ಯಗಳು ನಡೆಯಲಿ ಹಾಗೂ ಇನ್ನಷ್ಟು ಉನ್ನತ ಹುದ್ದೆಗಳು ಅವರ ಪಾಲಿಗೆ ಒದಗಿ ಬರಲಿ ಎಂದರು.ಈ ಸಂದರ್ಭ ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಶೆಟ್ಟಿ ಬೋಳಿಯಾರ್ , ತಾ.ಪಂ ಮಾಜಿ ಅಧ್ಯಕ್ಷ ಮಹಮ್ಮದ್ ಮೋನು ಮಲಾರ್, ಕೆಥೋಲಿಕ್ ಮಹಾಸಭಾ ಅಧ್ಯಕ್ಷ ಆಲ್ವಿನ್ ಡಿಸೋಜ, ಕ್ಷೇತ್ರ ವಕ್ತಾರ ಅಶ್ರಫ್ ಕೆ.ಸಿ.ರೋಡ್, ಉಳ್ಳಾಲ ನಗರಸಭೆ ಮಾಜಿ ಅಧ್ಯಕ್ಷ ದಿನೇಶ್ ರೈ, ಮಹಿಳಾ ಕಾಂಗ್ರೆಸ್ ಕ್ಷೇತ್ರ ಅಧ್ಯಕ್ಷೆ ಚಂದ್ರಿಕಾ ರೈ, ಮುನ್ನೂರು ಗ್ರಾ.ಪಂ ಮಾಜಿ ಅಧ್ಯಕ್ಷ ವಿಲ್ಫೆçಡ್ ಡಿಸೋಜ, ಬ್ಲಾಕ್ ರ‍್ಯದರ್ಶಿ ಮನ್ಸೂರ್…
ದುಬೈ: ಡಾ ತುಂಬೆ ಮೊಯ್ದಿನ್ ರವರ ನೇತೃತ್ವದ ಗಲ್ಫ್ ಮೆಡಿಕಲ್ ಯುನಿವರ್ಸಿಟಿಯ ಪದವಿ ಪ್ರಧಾನ ಕಾರ್ಯಕ್ರಮ ಇತ್ತೀಚೆಗೆ ದುಬಾಯಿಯ ಅಲ್ ಜುರ್ಫ್ ಕ್ಯಾಂಪಸ್ಸಿನಲ್ಲಿ ಜರಗಿತು .ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಉತ್ತೀರ್ಣ ರಾದ 700 ಮಂದಿ ವಿದ್ಯಾರ್ಥಿಗಳು ವೈಟ್ ಕೋಟ್ ಸಮಾರಂಭದಲ್ಲಿ ಅತಿಥಿಗಳಿಂದ ಪದವಿ ಸರ್ಟಿಫಿಕೇಟ್ ಪಡೆದು ಕೊಂಡರು .ನೂರಾ ಎರಡು ವಿವಿಧ ದೇಶಗಳ 5000 ಕ್ಕೂ ಮಿಕ್ಕಿದ ವಿದ್ಯಾರ್ಥಿಗಳು ಗಲ್ಫ್ ಮೆಡಿಕಲ್ ಯುನಿವರ್ಸಿಟಿಯಲ್ಲಿ ವಿದ್ಯಾರ್ಜನೆ ಮಾಡುತ್ತಿದ್ದು .ಬೇರೆ ಬೇರೆ ವಿಭಾಗಗಳಲ್ಲಿ ವೈದ್ಯಕೀಯ ಶಿಕ್ಷಣ ಪಡೆಯುತ್ತಿದ್ದು .ಅತ್ಯಂತ ಗುಣಮಟ್ಟದ ಶಿಕ್ಷಣವನ್ನು ನೀಡಲಾಗುತ್ತಿದೆ ಎಂದು ತುಂಬೆ ಸಮೂಹ ಸಂಸ್ಥೆಯ ಸ್ಥಾಪಕರಾದ ಡಾ .ತುಂಬೆ ಮೊಯಿದೀನ್ ಈ ಸಂದರ್ಭದಲ್ಲಿ ತಿಳಿಸಿದರುಸಮಾರಂಭದಲ್ಲಿ ಸಂಸ್ಥೆಯ ಉಪಕುಲಪತಿ ಹೊಸಾಮ್ ಹಾಮ್ ಡಿ , ಪದವಿ ಪಡೆದ ವಿದ್ಯಾರ್ಥಿಗಳ ಪೋಷಕರು ಸೇರಿದಂತೆ ಹಲವಾರು ಗಣ್ಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು .
ಉಳ್ಳಾಲ: ಸಣ್ಣ ಮಗುವಿಗೂ ಗೊತ್ತಿರುವ ವಿಚಾರ ಬಿಜೆಪಿ ಶಾಸಕ ವೇದವ್ಯಾಸ್ ಕಾಮತ್ ಗೆ ಗೊತ್ತಿಲ್ಲ. ಸಾಮಾನ್ಯ ಜ್ಞಾನವಿಲ್ಲದ ಶಾಸಕರು ರೈಲ್ವೇ ಪ್ರಕರಣವನ್ನು ರಾಜಕೀಯವಾಗಿ ಬಳಸಲು ಮುಂದಾಗಿರುವುದು ಹಾಸ್ಯಾಸ್ಪದ. ರೈಲ್ವೇ ಇಲಾಖೆ ಹಾಗೂ ರೈಲ್ವೇ ಪೊಲೀಸರು ಕೇಂದ್ರ ಸರಕಾರದ ನಿಯಂತ್ರಣದಲ್ಲಿದ್ದರೂ, ಪ್ರಕರಣವನ್ನು ರಾಜ್ಯ ಸರಕಾರದ ಮೇಲೆ ಗೂಬೆ ಕೂರಿಸುತ್ತಿರುವುದು ಸಮಂಜಸವಲ್ಲ ಎಂದು ಮುಡಾ ಅಧ್ಯಕ್ಷ ಸದಾಶಿವ ಉಳ್ಳಾಲ್ ಹೇಳಿದ್ದಾರೆ.ತೊಕ್ಕೊಟ್ಟುವಿನಲ್ಲಿರುವ ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ನಡೆಸಿದ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು ತೊಕ್ಕೊಟ್ಟು ರೈಲ್ವೇ ಪ್ರಕರಣದಲ್ಲಿ ಶಾಸಕ ವೇದವ್ಯಾಸ ಕಾಮತ್ ರಾಜ್ಯ ಸರಕಾರವನ್ನು ಬೊಟ್ಟು ಮಾಡುತ್ತಿದ್ದಾರೆ. ಕೇಂದ್ರದಲ್ಲಿರುವುದು ಬಿಜೆಪಿ ನೇತೃತ್ವದ ಸರಕಾರ, ಆ ಸರಕಾರದಡಿಯಲ್ಲಿ ಬರುವ ರೈಲ್ವೇ ಇಲಾಖೆ ಹಾಗೂ ರೈಲ್ವೇ ಪೊಲೀಸರು ಪ್ರಕರಣದ ಜವಾಬ್ದಾರಿಯನ್ನು ಹೊಂದಿರುವವರು. ಮಕ್ಕಳಿಗಿರುವ ಜ್ಞಾನ ಶಾಸಕರಿಗೆ ಇಲ್ಲದಾಗಿ ಹೋಗಿದೆ. ಒಬ್ಬ ಶಾಸಕನಿಗೆ ಮಹತ್ತರ ಜವಾಬ್ದಾಯಿರುತ್ತದೆ, ಕೂಲಂಕುಷವಾಗಿ ವಿಚಾರಗಳನ್ನು ತಿಳಿದು ಮಾತನಾಡಬೇಕಿದೆ. ಶಾಸಕ ಕಾಮತ್ ಹೇಳಿಕೆಯನ್ನು ಖಂಡಿಸುವುದರ ಜೊತೆಗೆ ಪ್ರಕರಣದ ತನಿಖೆಯನ್ನು ಸಮಗ್ರವಾಗಿ ನಡೆಸುವಂತೆ ಕೇಂದ್ರ ಸರಕಾರಕ್ಕೆ ಸೂಚಿಸುತ್ತೇನೆ ಎಂದರು.ಬ್ಲಾಕ್…
ಉಳ್ಳಾಲ: ವಿಧಾನಪರಿಷತ್ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಪ್ರಾಧಿಕಾರದ ಕ್ಷೇತ್ರದ ಉಪಚುನಾವಣೆಯಲ್ಲಿ ವಿಧಾನಸಭಾ ಅಧ್ಯಕ್ಷ ಯು.ಟಿ ಕಾಂಗ್ರೆಸ್ ಪಕ್ಷದ ಉಳ್ಳಾಲ ನಗರಸಭೆ ಕೌನ್ಸಿಲರ್ ಗಳ ಜತೆಗೂಡಿ ಉಳ್ಳಾಲ ನಗರಸಭೆಯಲ್ಲಿ ಮತ ಚಲಾಯಿಸಿದರು. ಚುನಾವಣಾ ಕಣದಲ್ಲಿ ಕಿಶೋರ್ ಬಿ.ಆರ್. (ಭಾರತೀಯ ಜನತಾ ಪಾರ್ಟಿ), ರಾಜು ಪೂಜಾರಿ (ಭಾರತೀಯ ರಾಷ್ಟ್ರೀಯ ಕಾಂಗ್ರೆಸ್), ಅನ್ವರ್ ಸಾದತ್ ಎಸ್. (ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ), ಮತ್ತು ದಿನಕರ ಉಳ್ಳಾಲ (ಪಕ್ಷೇತರ) ಸ್ಪರ್ಧಿಸುತ್ತಿದ್ದಾರೆ.ಉಳ್ಳಾಲ ತಾಲೂಕಿನಲ್ಲಿ 20 ಮತಗಟ್ಟೆಗಳಿದ್ದು, ಉಳ್ಳಾಲ ನಗರಸಭೆ, ಸೋಮೇಶ್ವರ ಪುರಸಭೆ, ಕೋಟೆಕಾರು ಪ.ಪಂ ಸೇರಿದಂತೆ 17 ಗ್ರಾಮ ಪಂಚಾಯತ್ ಗಳಲ್ಲಿ ಮತದಾನ ನಡೆಯುತ್ತಿದೆ.ಒಟ್ಟು 427 ಸದಸ್ಯರು ಮತದಾನದಲ್ಲಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ 11 ಗಂಟೆಯವರೆಗೆ 427 ಮಂದಿ ಮತದಾನದಲ್ಲಿ ಭಾಗಿಯಾಗಿದ್ದು , ಶೇ.47.47ಮತದಾನ ನಡೆದಿದೆ.
ತೊಕ್ಕೊಟ್ಟು: ರೈಲ್ವೇ ಹಳಿಯ ಎರಡೂ ಬದಿಗಳಲ್ಲಿ ಆಗಂತುಕರಿಬ್ಬರು ಜಲ್ಲಿಕಲ್ಲುಗಳನ್ನಿಟ್ಟ ಪರಿಣಾಮ ಎರಡು ರೈಲುಗಳು ಚಲಿಸುವ ಸಂದರ್ಭ ದೊಡ್ಡ ಸದ್ದು ಸ್ಥಳೀಯರಿಗೆ ಕೇಳಿಬಂದಿದ್ದು, ಸ್ಥಳೀಯರು ರೈಲ್ವೇ ಹಳಿಯತ್ತ ದೌಡಾಯಿಸಿದ್ದಾರೆ.ತಡರಾತ್ರಿ ೮.೦೫ ರ ಸುಮಾರಿಗೆ ಕೊರಗಜ್ಜನ ಅಗೆಲು ಮುಗಿಸಿ ವಾಪಸ್ಸಾಗುತ್ತಿದ್ದ ತೊಕ್ಕೊಟ್ಟು ಓವರ್ ಬ್ರಿಡ್ಜ್ ನಿವಾಸಿ ಮಹಿಳೆಯರು ಹಳಿಯಲ್ಲಿ ಇಬ್ಬರು ಆಗಂತುಕರನ್ನು ಕಂಡಿದ್ದರು. ಅಲ್ಲಿಂದ ಮನೆಗೆ ತಲುಪುವಷ್ಟರಲ್ಲಿ ರೈಲೊಂದು ಕೇರಳ ಕಡೆಗೆ ತೆರಳಿತ್ತು. ಈ ವೇಳೆ ದೊಡ್ಡ ಸದ್ದು ಆವರಿಸಿತ್ತು. ಅದನ್ನು ಸ್ಥಳೀಯರು ಅಷ್ಟು ಗಂಭೀರವಾಗಿ ಪರಿಗಣಿಸಿರಲಿಲ್ಲ. ಬಳಿಕ ಇನ್ನೊಂದು ರೈಲು ಚಲಿಸುವಾಗ ಮತ್ತೊಮ್ಮೆ ದೊಡ್ಡ ಸದ್ದು ಆವರಿಸಿತ್ತು. ಪರಿಣಾಮ ಸ್ಥಳೀಯ ಕೆಲವು ಮನೆಗಳಲ್ಲಿಯೂ ಕಂಪನವುAಟಾಗಿತ್ತು. ತಕ್ಷಣವೇ ರೈಲು ಅಪಘಾತವೆಂದು ಭಾವಿಸಿ ಹಳಿಯತ್ತ ದೌಡಾಯಿಸಿದಾಗ ಹಳಿ ಮೇಲಿರಿಸಲಾದ ಜಲ್ಲಿಕಲ್ಲುಗಳು ತುಂಡಾಗಿರುವುದು ಅಲ್ಪಸ್ವಲ್ಪ ಕಂಡುಬAದಿದೆ. ೪೦ ವರ್ಷಗಳಿಂದ ತೊಕ್ಕೊಟ್ಟು ಪರಿಸರದಲ್ಲಿ ನೆಲೆಸಿದ್ದೇವೆ. ಆದರೆ ರೈಲು ದಾಟುವಾಗ ಕಂಪನದ ಅನುಭವ ಇದೇ ಮೊದಲ ಬಾರಿಗೆ ಆಗಿದೆ ಅನ್ನುವ ಅಭಿಪ್ರಾಯವನ್ನು ಸ್ಥಳೀಯ ಮಹಿಳೆ ವ್ಯಕ್ತಪಡಿಸಿದ್ದಾರೆ. ಈ ಕುರಿತು ರೈಲ್ವೇ…
ದೇರಳಕಟ್ಟೆ : ಮಳೆ ನೀರು ಹರಿಯಲು ನಡೆಸಿದ ಅಗೆತದಿಂದಾಗಿ ಬೆಳ್ಮ ಗ್ರಾಮ ಪಂಚಾಯತ್ ಸದಸ್ಯೆಯೊಬ್ಬರ ಮನೆಯ ಅಂಗಳ ಕುಸಿತಗೊಂಡು, ಇದೀಗ ಮನೆಯೂ ಕುಸಿಯುವ ಹಂತದಲ್ಲಿದೆ. ಜಿಲ್ಲಾಡಳಿತ ತಕ್ಷಣವೇ ಕ್ರಮಕೈಗೊಳ್ಳುವಂತೆ ಹಾಗೂ ಪ್ರಾಕೃತಿಕ ವಿಕೋಪದಡಿ ಅನುದಾನ ಬಿಡುಗಡೆಗೊಳಿಸುವಂತೆ ಪಂ. ಸದಸ್ಯೆ ಮನವಿಯನ್ನು ಮೂರು ತಿಂಗಳಿನಿAದ ಮಾಡುತ್ತಾ ಬಂದರೂ ಈವರೆಗೆ ಪರಿಹಾರ ಸಿಕ್ಕಿಲ್ಲ.ಬೆಳ್ಮ ಗ್ರಾಮದ ದೇರಳಕಟ್ಟೆಯಿಂದ ಕಾನಕೆರೆ ಸಂಪರ್ಕಿಸುವ ಇಳಿಜಾರು ಪ್ರದೇಶದಲ್ಲಿ ಇರುವ ಬೆಳ್ಮ ಗ್ರಾ.ಪಂ ಸದಸ್ಯೆ ಪುಷ್ಪಲತಾ ರೈ ಎಂಬವರ ಮನೆ ಅಪಾಯದಂಚಿನಲ್ಲಿ ಸಿಲುಕಿದೆ. ಬೆಳ್ಮ ಗ್ರಾಮದ ದೇರಳಕಟ್ಟೆಯಿಂದ ಕಾನಕೆರೆಯನ್ನು ಸಂಪರ್ಕಿಸುವ ರಸ್ತೆ ಇಳಿಜಾರು ಪ್ರದೇಶದಲ್ಲಿದ್ದು, ಮಳೆಗಾಲ ಆರಂಭದಲ್ಲಿ ಮಳೆ ನೀರು ಹರಿದು ಹೋಗಲು ಲೋಕೋಪಯೋಗಿ ಇಲಾಖೆ ಚರಂಡಿ ನಿರ್ಮಿಸಿತ್ತು. ಈ ಚರಂಡಿ ನಿರ್ಮಾಣದ ಸಂದರ್ಭದಲ್ಲಿ ಮಣ್ಣು ಅಗೆತದಿಂದ ಈ ಕುಸಿತ ಆರಂಭಗೊAಡಿದ್ದು, ಪ್ರತೀ ಬಾರಿ ಮಳೆ ಬಂದಾಗಲೂ ಹಂತ ಹಂತವಾಗಿ ಮಣ್ಣು ಕುಸಿದು ಇದೀಗ ಮನೆ ಕುಸಿಯುವ ಭೀತಿಯಲ್ಲಿದೆ.
ನಾಟೆಕಲ್ : ಬೆಂಗಳೂರಿನ ವೈಟ್ ಫೀಲ್ಡ್ ಕೆಟಿಪಿಓದಲ್ಲಿ ಇತ್ತೀಚೆಗೆ ಆಯೋಜಿಸಿಲಾದ ಎಲ್ಡಾçಕ್ ಇಂಡಿಯಾ ಕೆ-12 ಎಕ್ಸ್ಪೋ, 2024 ದಲ್ಲಿ ನಾಟೆಕಲ್ ಕಣಚೂರು ಪಬ್ಲಿಕ್ ಸ್ಕೂಲ್ ` ಜೀವನ ಕೌಶಲ್ಯಗಳು ಮತ್ತು ಚಟುವಟಿಕೆ ಆಧಾರಿತ ಕಲಿಕೆ ‘ ವಿಷಯದಲ್ಲಿ ಉತ್ತಮ ಶಾಲೆ ಪ್ರಶಸ್ತಿಯನ್ನು ಪಡೆದುಕೊಂಡಿದೆ.ಎರಡು ದಿನಗಳ ಎಕ್ಸ್ ಪೋದಲ್ಲಿ ದಕ್ಷಿಣ ಭಾರತದ ಪ್ರಮುಖ ಶಾಲೆಗಳ ಪ್ರಾಂಶುಪಾಲರು , ನಿರ್ದೇಶಕರು, ಉದ್ಯಮಿಗಳು , ಪ್ರಸಿದ್ಧ ಚಿಂತಕರುಗಳು, ಕಾರ್ಪೋರೇಟ್ ಕಾರ್ಯನಿರ್ವಾಹಕರು, ಸರ್ಕಾರದ ಅಧಿಕಾರಿಗಳು, ಸಲಹೆಗಾರರು ಭಾಗಿಯಾಗಿದ್ದು, ಅವರ ಜೊತೆಗೆ ಮುಖಾಮುಖಿ ಸಂವಹನ ಹಾಗೂ ಚರ್ಚೆಗಳಿಗೆ ವೇದಿಕೆಯನ್ನು ಒದಗಿಸಿತ್ತು. ಕಣಚೂರು ಪಬ್ಲಿಕ್ ಸ್ಕೂಲ್ ಪ್ರಾಂಶುಪಾಲರಾದ ಕ್ಯಾರೆನ್ ಡಿಸೋಜ ಪ್ರಶಸ್ತಿಯನ್ನು ಆಯೋಜಕರಿಂದ ಪಡೆದುಕೊಂಡರು.
ಉಳ್ಳಾಲ: ಮನೆ ಅಂಗಳದಲ್ಲಿ ನಿಲ್ಲಿಸಿಡಲಾಗಿದ್ದ ಪೆಟ್ರೋಲ್ ಸ್ಕೂಟರ್ ಬೆಂಕಿಗೆ ಆಹುತಿಯಾದ ಘಟನೆ ಕುಂಪಲ ಸಮೀಪದ ವಿದ್ಯಾನಗರ ಎಂಬಲ್ಲಿ ತಡರಾತ್ರಿ ಸಂಭವಿಸಿದೆ.ಐಟಿಐ ವಿದ್ಯಾರ್ಥಿ ರಾಕೇಶ್ ಎಂಬವರಿಗೆ ಸೇರಿದ ಸ್ಕೂಟರ್ ಬೆಂಕಿಗೆ ಆಹುತಿಯಾಗಿದೆ. ಎರಡು ತಿಂಗಳ ಹಿಂದಷ್ಟೇ ಟಿವಿಎಸ್ ಎಂಟಾರ್ಕ್ ಸ್ಕೂಟರನ್ನು ರಾಕೇಶ್ ಖರೀದಿಸಿದ್ದು, ಮೊದಲ ತಿಂಗಳ ಸಾಲದ ಕಂತನ್ನು ಕಟ್ಟಿದ್ದರು. ತಡರಾತ್ರಿ ೧೨.೩೦ರ ಸುಮಾರಿಗೆ ಇದ್ದಕ್ಕಿಂತೆ ಸ್ಕೂಟರ್ ಗೆ ಬೆಂಕಿ ಆವರಿಸಿ, ಬೆಂಕಿಯ ಕೆನ್ನಾಲೆ ಮನೆಯ ಕಿಟಕಿ, ತಾರಸಿಗೂ ತಗಲಿದೆ. ಮನೆಮಂದಿ ಎಚ್ಚೆತ್ತು ತಕ್ಷಣವೇ ಬೆಂಕಿ ನಂದಿಸಲು ಮುಂದಾಗಿದ್ದರಿAದಾಗಿ ಸಂಭಾವ್ಯ ಅನಾಹುತ ತಪ್ಪಿದೆ. ಬೆಂಕಿಯಿAದಾಗಿ ಮನೆಗೂ ಹಾನಿಯಾಗಿದೆ. ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಶಾರ್ಟ್ ಸರ್ಕ್ಯುಟ್ ನಿಂದ ಘಟನೆ ಸಂಭವಿಸಿರುವ ಶಂಕೆಯಿದೆ.
ಉಳ್ಳಾಲ: ಮನೆ ಅಂಗಳದಲ್ಲಿ ನಿಲ್ಲಿಸಿಡಲಾಗಿದ್ದ ಪೆಟ್ರೋಲ್ ಸ್ಕೂಟರ್ ಬೆಂಕಿಗೆ ಆಹುತಿಯಾದ ಘಟನೆ ಕುಂಪಲ ಸಮೀಪದ ವಿದ್ಯಾನಗರ ಎಂಬಲ್ಲಿ ತಡರಾತ್ರಿ ಸಂಭವಿಸಿದೆ. ಐಟಿಐ ವಿದ್ಯಾರ್ಥಿ ರಾಕೇಶ್ ಎಂಬವರಿಗೆ ಸೇರಿದ ಸ್ಕೂಟರ್ ಬೆಂಕಿಗೆ ಆಹುತಿಯಾಗಿದೆ. ಎರಡು ತಿಂಗಳ ಹಿಂದಷ್ಟೇ ಟಿವಿಎಸ್ ಎಂಟಾರ್ಕ್ ಸ್ಕೂಟರನ್ನು ರಾಕೇಶ್ ಖರೀದಿಸಿದ್ದು, ಮೊದಲ ತಿಂಗಳ ಸಾಲದ ಕಂತನ್ನು ಕಟ್ಟಿದ್ದರು. ತಡರಾತ್ರಿ ೧೨.೩೦ರ ಸುಮಾರಿಗೆ ಇದ್ದಕ್ಕಿಂತೆ ಸ್ಕೂಟರ್ ಗೆ ಬೆಂಕಿ ಆವರಿಸಿ, ಬೆಂಕಿಯ ಕೆನ್ನಾಲೆ ಮನೆಯ ಕಿಟಕಿ, ತಾರಸಿಗೂ ತಗಲಿದೆ. ಮನೆಮಂದಿ ಎಚ್ಚೆತ್ತು ತಕ್ಷಣವೇ ಬೆಂಕಿ ನಂದಿಸಲು ಮುಂದಾಗಿದ್ದರಿAದಾಗಿ ಸಂಭಾವ್ಯ ಅನಾಹುತ ತಪ್ಪಿದೆ. ಬೆಂಕಿಯಿAದಾಗಿ ಮನೆಗೂ ಹಾನಿಯಾಗಿದೆ. ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಶಾರ್ಟ್ ಸರ್ಕ್ಯುಟ್ ನಿಂದ ಘಟನೆ ಸಂಭವಿಸಿರುವ ಶಂಕೆಯಿದೆ.

