ಸುಳ್ಯ, ಜೂ. 30 ; ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ಯು.ಟಿ. ಖಾದರ್ ಅವರಿಗೆ ಸುಳ್ಯದಲ್ಲಿ ಸಾರ್ವಜನಿಕ ಅಭಿನಂದನಾ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮವು ಜುಲೈ 6 ರಂದು ಸುಳ್ಯದ ಜಾನಕಿ ವೆಂಕಟರಮಣ ಗೌಡ ಸಭಾಭವನದಲ್ಲಿ ನಡೆಯಲಿದ್ದು, ಸಮಿತಿಯ ಸಂಚಾಲಕ ಭರತ್ ಮುಂಡೋಡಿ ಅವರ ಪ್ರಕಾರ, ಇದು ಸಂಪೂರ್ಣವಾಗಿ ರಾಜಕೀಯ ರಹಿತ ಕಾರ್ಯಕ್ರಮವಾಗಿದೆ. ಅಂದು ಬೆಳಿಗ್ಗೆ 10 ಗಂಟೆಗೆ ಜ್ಯೋತಿ ವೃತ್ತದಿಂದ ಮೆರವಣಿಗೆ ಆರಂಭವಾಗಲಿದ್ದು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕಿ ಭಾಗೀರಥಿ ಮುರುಳ್ಯ ವಹಿಸಲಿದ್ದಾರೆ ಮತ್ತು ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್‌ನ ಡಾ. ಕೆ.ವಿ. ಚಿದಾನಂದ ಅವರು ಉದ್ಘಾಟಿಸಲಿದ್ದಾರೆ.ಸಮಾರಂಭದಲ್ಲಿ ಮೂರು ಧರ್ಮಗಳ ಧಾರ್ಮಿಕ ಗುರುಗಳು ಉಪಸ್ಥಿತರಿರಲಿದ್ದು, ಸಾರ್ವಜನಿಕರು ಸಚಿವರಿಗೆ ತಮ್ಮ ಮನವಿಗಳನ್ನು ಸಲ್ಲಿಸಲು ಪ್ರತ್ಯೇಕ ಕೌಂಟರ್ ವ್ಯವಸ್ಥೆಯನ್ನು ಸಹ ಮಾಡಲಾಗಿದೆ.
Author: UllalaVani
ಭಾರತದ ಚುನಾವಣಾ ಆಯೋಗವು ರಾಜ್ಯದಲ್ಲಿ ಇಂದಿನಿಂದ 1 ತಿಂಗಳ ಕಾಲ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ(ಎಸ್‌ಐಆರ್) ಮಾಡಲಿದೆ. ಈಗಾಗಲೇ ಮ್ಯಾಪಿಂಗ್ ಮುಕ್ತಾಯವಾಗಿದ್ದು, ಚುನಾವಣಾಧಿಕಾರಿಗಳು, ಬಿಎಲ್‌ಓಗಳು ಮನೆ ಮನೆಗೆ ಭೇಟಿ ನೀಡಲಿದ್ದಾರೆ. ರಾಜ್ಯದಲ್ಲಿ 91.61% ಮ್ಯಾಪಿಂಗ್ ಆಗಿದ್ದು, 5,54,32,314 ಮತದಾರರ ಪೈಕಿ 5,07,79,810 ಮತದಾರರ ಮ್ಯಾಪಿಂಗ್ ನಡೆದಿದೆ. 46,52,504 ಮತದಾರರು ಮ್ಯಾಪಿಂಗ್ ಆಗಬೇಕಿದೆ. ಈ 5.55 ಕೋಟಿ ಮತದಾರರ ಪೈಕಿ ಅಸಲಿ ಯಾರು? ನಕಲಿ ಯಾರು? ಎಂಬುದನ್ನು ಪರಿಶೀಲನೆ ನಡೆಸಲಾಗುತ್ತಿದೆ.ನಕಲಿ, ಅನರ್ಹ ಮತದಾರರನ್ನು ಪಟ್ಟಿಯಿಂದ ತೆಗೆದುಹಾಕಬೇಕಿದೆ. ಮತದಾರರು ಅರ್ಜಿಯನ್ನ ತುಂಬಿ ಅರ್ಜಿಗೆ ಸಹಿ ಮಾಡಿ ಕೆಲವು ದಾಖಲೆಗಳನ್ನು ಸಲ್ಲಿಸಬೇಕಿದೆ. ಮತದಾರರ ಪಟ್ಟಿಯಲ್ಲಿರುವ ಹೆಸರುಗಳ ಪರಿಶೀಲನೆ, ತಿದ್ದುಪಡಿ, ಹೊಸ ಹೆಸರು ಸೇರ್ಪಡೆ ಮೃತಪಟ್ಟವರು, ಸ್ಥಳಾಂತರಗೊಂಡವರ ಹೆಸರುಗಳನ್ನು ಪಟ್ಟಿಯಿಂದ ತೆಗೆದುಹಾಕಲಿದ್ದಾರೆ.ಬಿಎಲ್‌ಓಗಳು ಮನೆಗೆ ಭೇಟಿ ನೀಡಿ ಎಸ್‌ಐಆರ್ ಅರ್ಜಿ ನೀಡಲಿದ್ದಾರೆ. ಎಸ್‌ಐಆರ್ ಅರ್ಜಿಗೆ ಮಾಹಿತಿ ನೀಡಿ ಮತದಾರರು ಸಹಿ ಮಾಡಬೇಕು. ಎಸ್‌ಐಆರ್‌ನಲ್ಲಿ ಭಾಗಿಯಾಗಿ ಮಾಹಿತಿ ನೀಡಿದರೆ ಮಾತ್ರ ಮತದಾನದ ಹಕ್ಕು, ಇಲ್ಲದೇ ಹೋದರೆ ಮತದಾನದಿಂದ ವಂಚಿತರಾಗುವ ಸಾಧ್ಯತೆ…
ಬೀರಿ: ಕೋಟೆಕಾರು ಬೀರಿ ಜಂಕ್ಷನ್ ಹೆದ್ದಾರಿ ಬದಿಯಲ್ಲೇ ಇರುವ ತರಕಾರಿ ಅಂಗಡಿ ಮೇಲೆ ಬೃಹತ್ ಗಾತ್ರದ ಆಲದ ಮರದ ಕೊಂಬೆಯೊಂದು ತುಂಡಾಗಿ ಬಿದ್ದಿದ್ದು, ಅಂಗಡಿಗೆ ಹಾಗೂ ಅಂಗಡಿಯಲ್ಲಿದ್ದವರು ಪವಾಡಸದೃಶ ರೀತಿಯಲ್ಲಿ ಪಾರಾಗಿದ್ದಾರೆ.ಘಟನೆಯಿಂದ ವಿದ್ಯುತ್ ತಂತಿ ಮೇಲೆ ಮರದ ಕೊಂಬೆಗಳು ಬಿದ್ದಿರುವುದರಿಂದ ತಂತಿ ಬೀರಿ ಮಾಡೂರು ರಸ್ತೆಗೆ ಬಿದ್ದು, ವಾಹನ ಸಂಚಾರಕ್ಕೆ ಅಡಚಣೆಯುಂಟಾಗಿದೆ. ರಸ್ತೆಯುದ್ದಕ್ಕೂ ಕೆಲಸಕಾಲ ವಾಹನ ಸಂಚಾರಕ್ಕೆ ಅಡ್ಡಿಯುಂಟಾಯಿತು. ಸ್ಥಳೀಯ ರಿಕ್ಷಾ ಚಾಲಕರು ವಾಹನ ಹಾಗೂ ಮರದ ಕೊಂಬೆಗಳನ್ನು ತೆರವುಗೊಳಿಸುವಲ್ಲಿ ಸಹಕರಿಸಿದರೆ, ಮೆಸ್ಕಾಂ ಸಿಬ್ಬಂದಿ ವಿದ್ಯುತ್ ತಂತಿ ತೆರವು ಕಾರ್ಯಾಚರಣೆಗೆ ಇಳಿದಿದ್ದಾರೆ. ಸಂಜೆ ವೇಳೆ ಅರ್ಧ ಗಂಟೆ ಕಾಲ ಸುರಿದ ಭಾರೀ ಗಾಳಿ ಹಾಗೂ ಮಳಳೆಯಿಂದಾಗಿ ಅನಾಹುತ ಸಂಭವಿಸಿದೆ.
ತೊಕ್ಕೊಟ್ಟು: ಜ್ಯೂನಿಯರ್ ಎಸ್.ಪಿ ಬಾಲಸುಬ್ರಹ್ಮಣ್ಯರೆಂದೇ ಖ್ಯಾತಿ ಪಡೆದಿದ್ದು, 40 ವರ್ಷಗಳಿಂದ ಹಾಡುಗಾರಿಕೆಯನ್ನೇ ಜೀವನವನ್ನಾಗಿಸಿದ್ದ, ತುಳು , ಕೊಂಕಣಿ ಸೇರಿದಂತೆ ಬಹುಭಾಷಾ ನಾಟಕಗಳಿಗೆ ಹಾಡುಗಳನ್ನು ಹಾಡಿರುವ ತೊಕ್ಕೊಟ್ಟು ಕಾಪಿಕಾಡು ನಿವಾಸಿ ಚಂದ್ರಹಾಸ್ ಸುವರ್ಣ ತೊಕ್ಕೊಟ್ಟು (64) ಅಲ್ಪಕಾಲದ ಅಸೌಖ್ಯದಿಂದ ಇಂದು ತೊಕ್ಕೊಟ್ಟುವಿನ ಸ್ವಗೃಹದಲ್ಲಿ ನಿಧನಹೊಂದಿದರು.1980ರಿಂದ ಕೆ.ಎನ್ ಟೈಲರ್, ವಿಜಯ ಕುಮಾರ್ ಕೊಡಿಯಾಲ್ ಬೈಲ್ ಅವರ ನಾಟಕಗಳಿಗೆ ಹಿನ್ನೆಲೆ ಗಾಯಕರಾಗಿದ್ದ ಚಂದ್ರಹಾಸ್ ಸುವರ್ಣ ಅವರು ಜಿಲ್ಲೆಯ ಚಾನೆಲ್ ಗಳಲಿ ನಡೆಯುತ್ತಿದ್ದ ಸುರ್ ಸಂಗಮ್ ಕಾರ್ಯಕ್ರಮದಲ್ಲಿ ಗಾಯಕರಾಗಿದ್ದರು. ಮಾಂಡ್ ಸೊ ಬಾಣ್ ಕೊಂಕಣಿ ಸೋದ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಗಳಿಸಿದ್ದರು. ಅಝೀಝ್ ಬೈಕಂಪಾಡಿಯವರ ಅಹಮದಾಕೊ ಚಿರಿ ,ವಿಜಯ ಸತೀಶ್ ಆರ್ಕೆಸ್ಟ್ರಾ ತಂಡ, ವೇವ್ಸ್ ಕೊಂಕಣಿ ಬ್ಯಾಂಡ್ , ಮಚ್ಛೇಂದ್ರನಾಥ್ ಪಾಂಡೇಶ್ವರ ತಂಡ ಹಾಗೂ ಮುಂಬೈನ ಹಲವು ನಾಟಕಗಳಿಗೂ ಹಾಡುಗಳನ್ನು ಹಾಡಿದ್ದಾರೆ. 80ರ ಅವಧಿಯಲ್ಲಿ ಗ್ಯಾಸ್ ಲೈಟ್ ಇಟ್ಟುಕೊಂಡು ನಡೆಯುತ್ತಿದ್ದ ನಾಟಕಗಳಲ್ಲಿ ಎರಡೇ ಮೈಕುಗಳಿದ್ದ ಸಂದರ್ಭದಲ್ಲಿ ಹಾಡನ್ನು ಆರಂಭಿಸಿದವರು. ಎಸ್.ಪಿ ಬಾಲಸುಬ್ರಹ್ಮಣ್ಯಂ ಸ್ವರ ಹೋಲಿಕೆ ಇದ್ದುದರಿಂದಾಗಿ, ಜ್ಯೂನಿಯರ್…
ಉಳ್ಳಾಲ: ಉಳ್ಳಾಲ ತಾಲೂಕಿನ ಇರಾ ಗ್ರಾಮದ ಬಾಳೆಪುಣಿ ನೂರುಲ್ ಇಸ್ಲಾಂ ಹೈಯರ್ ಸೆಕೆಂಡರಿ ಮದ್ರಸದಲ್ಲಿ ವಿದ್ಯಾರ್ಥಿಗಳಿಗೆ ಸಮವಸ್ತ್ರ ಹಾಗೂ ಗುರುತಿನ ಚೀಟಿ (ID ಕಾರ್ಡ್) ವಿತರಣಾ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಲಾಯಿತು. ಈ ಕಾರ್ಯಕ್ರಮಕ್ಕೆ ಶೈಖುನಾ ಬಾಳೆಪುಣಿ ಉಸ್ತಾದ್ ನೇತೃತ್ವ ವಹಿಸಿ, ದುಆ ನೆರವೇರಿಸಿ ವಿದ್ಯಾರ್ಥಿಗಳಿಗೆ ಅಮೂಲ್ಯವಾದ ಉಪದೇಶ ಹಾಗೂ ಮಾರ್ಗದರ್ಶನ ನೀಡಿದರು. ಈ ಕಾರ್ಯಕ್ರಮದಲ್ಲಿ ಜಮಾಅತ್‌ನ ಪದಾಧಿಕಾರಿಗಳು ಹಾಗೂ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು. ಬಳಿಕ ವಿದ್ಯಾರ್ಥಿಗಳ SBS ಮುಹಾಳರ ನಡೆಯಿತು. ನಂತರ ವಿದ್ಯಾರ್ಥಿಗಳ ಅಸೆಂಬ್ಲಿ ನಡೆಸಲಾಯಿತು. ಈ ಕಾರ್ಯಕ್ರಮವನ್ನು ಯಶಸ್ವಿಯಾಗಿ ಬಾಳೆಪುಣಿ ಸದರ್ ಉಸ್ತಾದ್ ಹಾರಿಸ್ ಹನೀಫಿ ಮತ್ತು ಮುಅಲ್ಲಿಮರು ನಡೆಸಿದರು.
ಬೀರಿ: ಕೋಟೆಕಾರ್ ಇದರ ಶ್ರೀ ಗಣೇಶ ಭಜನಾ ಮಂದಿರ ಬೀರಿ ಇಲ್ಲಿನ ಸಾರ್ವಜನಿಕ ಶ್ರೀ ಗಣೇಶ ಸೇವಾ ಸಮಿತಿಯ ಭಾನುವಾರ ನಡೆದ ಮಹಾಸಭೆಯಲ್ಲಿ ನೂತನ ಪಧಾದಿಕಾರಿಗಳ ಆಯ್ಕೆ ನಡೆಯಿತು. ಮಹಾಪೋಷಕರಾಗಿ ರಾಮಣ್ಣ ಪಿ ಶೆಟ್ಟಿ ಮುಂಬೈ, ಗೌರವಾಧ್ಯಕ್ಷರಾಗಿ ನಾರಾಯಣ ಕುಂಪಲ, ಅಧ್ಯಕ್ಷರಾಗಿ ರಾಜೀವಿ ಕೆಂಪುಮಣ್ಣು, ಕಾರ್ಯದರ್ಶಿಯಾಗಿ ನಿಖಿಲ್ ರಾಜ್ ಕೊಲ್ಯ ಕೋಶಾಧಿಕಾರಿಯಾಗಿ ಶ್ರೀಕಾಂತ್ ಕೋಟೆಕಾರ್, ಉಪಾಧ್ಯಕ್ಷರಾಗಿ ಆಶಿಕ್ ಗೋಪಾಲಕೃಷ್ಣ, ವರಲಕ್ಷ್ಮಿ ನಾಯಕ್, ಜೊತೆ ಕಾರ್ಯದರ್ಶಿಯಾಗಿ ಮಿಥುನ್ ಮಾಡೂರುಚಂದ್ರಕಲಾ ಬೀರಿ, ಜೊತೆ ಕೋಶಾಧಿಕಾರಿಯಾಗಿ ಅಮಿತ್ ಸಂಕೊಳಿಗೆ , ಮಂದಿರ ನಿರ್ವಾಹಕರಾಗಿ ದಯಾನಂದ ಬೀರಿ, ಭಜನಾ ಸಂಚಾಲಕರಾಗಿ ವಿಘ್ನೇಶ್ ಆಚಾರ್ಯ ಕೋಟೆಕಾರ್, ಕಾರ್ಯಕಾರಿಣಿ ಸದಸ್ಯರಾಗಿ ರಾಘವ ಸಿ ಉಚ್ಚಿಲ, ಸಂಪತ್ ಉಚ್ಚಿಲ್, ಮುರುಳಿ ಮೋಹನ್ ಉಚ್ಚಿಲ, ಲತೀಶ್ ಸಂಕೊಳಿಗೆ, ಸುರೇಖಾ ಜಯಪ್ರಕಾಶ್ಆಂತರಿಕ ಲೆಕ್ಕ ಪರಿಶೋಧಕರಾಗಿ ಸುರೇಶ್ ಉಚ್ಚಿಲ್ ಆಯ್ಕೆಯಾದರು.
ಪೋಲಿಯೊ ಲಸಿಕೆ ಕಾರ್ಯಕ್ರಮ ಕುಂಪಲದ ಕೇಸರಿ ಸಭಾಂಗಣದಲ್ಲಿ ನಡೆಯಿತು. ಕೇಸರಿ ಮಿತ್ರ ವ್ರಂದಾ ಸೇವಾ ಟ್ರಸ್ಟಿನ ಅಧ್ಯಕ್ಷರಾದ ಸುಧಾಕರ್ ಕುಂಪಲ ಮಗುವಿಗೆ ಲಸಿಕೆ ಹಾಕುವ ಮೂಲಕ ಚಾಲನೆ ನೀಡಿದರು. ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಆಶಾ ಕಾರ್ಯಕರ್ತೆಯರು ಹಾಗೂ ಕೇಸರಿ ಸದಸ್ಯರು ಉಪಸ್ಥಿತರಿದ್ದರು
ಕೊಣಾಜೆ : ಕೊಣಾಜೆಯ ನಿವಾಸಿ ಮುಹಮ್ಮದ್ ಕೊಣಾಜೆ(60) ಅವರು ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದು, ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಸೋಮವಾರ ನಿಧನರಾದರು. ಮೃತರು ಶಹೀರ್ ಹುಸೈನ್, ಸಲ್ಮಾನ್ ಹಾಗೂ ಮೂವರು ಪುತ್ರಿಯರ ತಂದೆಯಾಗಿದ್ದು, ಕಿನ್ಯ ರೇಂಜ್ ಮದ್ರಸಾ ಮ್ಯಾನೇಜ್‌ಮೆಂಟ್ ಅಸೋಸಿಯೇಷನ್ ಅಧ್ಯಕ್ಷ ಇಬ್ರಾಹಿಂ ಕೊಣಾಜೆ ಅವರ ಹಿರಿಯ ಸಹೋದರ ಹಾಗೂ ದಿ| ಪುತ್ತಬ್ಬ ಕೋಡಿಜಾಲ್ ಅವರ ಹಿರಿಯ ಪುತ್ರರಾಗಿದ್ದರು. ಅಲ್ಲದೆ, ಫರಂಗಿಪೇಟೆಯ ಅಲಂಕಾರ್ ಬೀಡಿ ಸಂಸ್ಥೆಯ ಮಾಲಕರಾಗಿದ್ದ ದಿ| ಮುಹಮ್ಮದ್ ಹಾಜಿ ಅವರ ಪುತ್ರಿಯ ಪತಿಯಾಗಿದ್ದರು. ಅವರ ನಿಧನಕ್ಕೆ ಕುಟುಂಬಸ್ಥರು, ಬಂಧು-ಬಳಗ ಹಾಗೂ ಸ್ಥಳೀಯರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಮಂಗಳೂರು: ಬಂಟರ ಯಾನೆ ನಾಡವರ ಮಾತೃ ಸಂಘ, ಶ್ರೀ ಸಿದ್ಧಿ ವಿನಾಯಕ ಪ್ರತಿಷ್ಠಾನ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಆಶ್ರಯದಲ್ಲಿ ಬಂಟ್ಸ್ ಹಾಸ್ಟೆಲ್ ನಲ್ಲಿ ಸೆಪ್ಟಂಬರ್ 14 ರಿಂದ 16 ರ ವರೆಗೆ ನಡೆಯಲಿರುವ 20ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಸಂಚಾಲಕರಾಗಿ ಉದ್ಯಮಿ, ಸಮಾಜಸೇವಕರಾದ ಜಯಶೀಲ ಅಡ್ಯಾಂತಾಯ ಅಡ್ಯಾರ್ ಗುತ್ತು ಆಯ್ಕೆಯಾದರು. ಶ್ರೀ ಗಣೇಶೋತ್ಸವದ ಪೂರ್ವಭಾವಿ ಸಭೆ ಬಂಟ್ಸ್ ಹಾಸ್ಟೇಲ್ ನ ಅಮೃತೋತ್ಸವ ಕಟ್ಟಡದಲ್ಲಿ ಟ್ರಸ್ಟ್ ನ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸಂಚಾಲಕರ ಆಯ್ಕೆ ಪ್ರಕ್ರಿಯೆ ನಡೆಯಿತು.ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಕೆ ಅಜಿತ್ ಕುಮಾರ್ ರೈ ಮಾಲಾಡಿ, ಪ್ರಧಾನ ಕಾರ್ಯದರ್ಶಿ ಎಮ್ ಕರುಣಾಕರ ಶೆಟ್ಟಿ, ಕೋಶಾಧಿಕಾರಿ ಸಿಎ ರಾಮ್ ಮೋಹನ್ ರೈ, ಸಿದ್ಧಿವಿನಾಯಕ ಪ್ರತಿಷ್ಠಾನದ ಟ್ರಸ್ಟಿಗಳಾದ ಕೃಷ್ಣಪ್ರಸಾದ್ ರೈ, ಕಾರ್ಯಕಾರಿ ಸಮಿತಿ ಸದಸ್ಯರಾದ ಎಮ್ ಸುಂದರ ಶೆಟ್ಟಿ, ವಸಂತ ಶೆಟ್ಟಿ ಜೆಪ್ಪು, ಪದವು ಮೇಗಿನಮನೆ ಉಮೇಶ್…
ಉಳ್ಳಾಲ: ಭಾರತೀಯ ತೀಯಾ ಸಮಾಜ ಉಳ್ಳಾಲ ವಲಯದ ವತಿಯಿಂದ, ಉಳ್ಳಾಲ ಶ್ರೀ ಚೀರುಂಭ ಭಗವತಿ ಕ್ಷೇತ್ರಕ್ಕೆ ಒಳಪಟ್ಟ ನಾಲ್ಕು ಊರಿಯಗಳಾದ ಉಳ್ಳಾಲ,ಕೋಟೆಕಾರ್-ಉಚ್ಚಿಲ-ತಲಪಾಡಿ,ಬೆಲ್ಮ-ಮಂಜನಾಡಿ ಹಾಗೂ ನಂದ್ಯಾ-ಮಣೇಲಿ ವ್ಯಾಪ್ತಿಯ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಗಳಲ್ಲಿ ಶೇ.85ಕ್ಕಿಂತ ಹೆಚ್ಚು ಅಂಕಗಳಿಸಿದ ತೀಯಾ ಸಮಾಜದ ಪ್ರತಿಭಾನ್ವಿತ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ವಿದ್ಯಾರ್ಥಿವೇತನ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಜುಲೈ 5ರ ಭಾನುವಾರ ಬೆಳಿಗ್ಗೆ 9 ಗಂಟೆಗೆ ಕೊಲ್ಯದ ಸೌಭಾಗ್ಯ ಸಭಾಭವನದಲ್ಲಿ ನಡೆಯಲಿದೆ ಎಂದು ಉಳ್ಳಾಲ ವಲಯ ಭಾರತೀಯ ತೀಯ ಸಮಾಜದ ಪ್ರಧಾನ ಕಾರ್ಯದರ್ಶಿ ಸುಕೇಶ್ ಮಂಜನಾಡಿ ತಿಳಿಸಿದರು. ತೊಕ್ಕೊಟ್ಟುವಿನ ಉಳ್ಳಾಲ ಪ್ರೆಸ್ ಕ್ಲಬ್ಬಲ್ಲಿ ಶನಿವಾರದಂದು ನಡೆದ ಪತ್ರಿಕಾಗೋಷ್ಟಿಯನ್ನುದ್ಧೇಶಿಸಿ ಅವರು ಮಾತನಾಡಿದರು.ಕಾರ್ಯಕ್ರಮವು ತೀಯ ಪ್ರತಿಭೆಗಳ ಭರತನಾಟ್ಯ ಪ್ರದರ್ಶನದೊಂದಿಗೆ ಆರಂಭಗೊಳ್ಳಲಿದ್ದು,ಬೆಳಿಗ್ಗೆ 9.30ಕ್ಕೆ ಸಭಾ ಕಾರ್ಯಕ್ರಮ ನಡೆಯಲಿದೆ.ಭಾರತೀಯ ತೀಯ ಸಮಾಜ ಉಳ್ಳಾಲ ವಲಯದ ಅಧ್ಯಕ್ಷರಾದ ಜಯಂತ ಕೊಂಡಾಣ ಅಧ್ಯಕ್ಷತೆ ವಹಿಸಲಿದ್ದು, ಭಾರತೀಯ ತೀಯ ಸಮಾಜ ಕೇಂದ್ರ ಸಮಿತಿಯ ಅಧ್ಯಕ್ಷ ಸದಾಶಿವ ಉಳ್ಳಾಲ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಉಳ್ಳಾಲ ಭಾರತ್ ಪಿಯು ಕಾಲೇಜಿನ…

