Author: UllalaVani

Kannada News From Coastal Karnataka

ಅಡುಗೆ ಅನಿಲವು ಇಂದು ಪ್ರತಿಯೊಂದು ಕುಟುಂಬದ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಆದರೆ ಕೆಲವು ಗ್ಯಾಸ್ ಏಜೆನ್ಸಿಗಳಲ್ಲಿ ನಡೆಯುತ್ತಿದೆ ಎನ್ನಲಾದ ಅಕ್ರಮಗಳು ಮತ್ತು ಕೃತಕ ಕೊರತೆಯ ಸೃಷ್ಟಿಯಿಂದ ಸಾಮಾನ್ಯ ಗ್ರಾಹಕರು ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ. ಗ್ರಾಹಕರು ಬುಕ್ಕಿಂಗ್ ಮಾಡಿದ ತಕ್ಷಣ OTP ಕೇಳಿಸಿಕೊಂಡರೂ, ಗ್ಯಾಸ್ ಸಿಲಿಂಡರ್ ನಾಲ್ಕು ಅಥವಾ ಅದಕ್ಕಿಂತ ಹೆಚ್ಚು ದಿನಗಳ ನಂತರ ತಲುಪುತ್ತಿದೆ ಎಂಬ ದೂರುಗಳು ಹೆಚ್ಚಾಗಿವೆ. ಅನೇಕ ಕಡೆಗಳಲ್ಲಿ ಗ್ಯಾಸ್ ಏಜೆನ್ಸಿಯ ಡೆಲಿವರಿ ಸಿಬ್ಬಂದಿ ಹಾಗೂ ಲಾರಿ ಚಾಲಕರು ಸೇರಿ ಕೃತಕ ಅಭಾವ ಸೃಷ್ಟಿಸಿ, ಗ್ರಾಹಕರನ್ನು ಸಂಕಷ್ಟಕ್ಕೆ ಸಿಲುಕಿಸುತ್ತಿದ್ದಾರೆ ಎಂಬ ಆರೋಪಗಳು ಕೇಳಿಬರುತ್ತಿವೆ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಸಮಗ್ರ ತನಿಖೆ ನಡೆಸುವುದು ಅಗತ್ಯವಾಗಿದೆ. ಒಂದು ಕುಟುಂಬಕ್ಕೆ 30 ದಿನಕ್ಕೆ ಕೇವಲ ಒಂದು ಸಿಲಿಂಡರ್ ಮಾತ್ರ ಸಾಕಾಗುವುದಿಲ್ಲ. ವಿಶೇಷವಾಗಿ ಹೆಚ್ಚು ಸದಸ್ಯರಿರುವ ಕುಟುಂಬಗಳು, ಬಾಡಿಗೆ ಮನೆಗಳು ಹಾಗೂ ಅಪಾರ್ಟ್‌ಮೆಂಟ್‌ಗಳಲ್ಲಿ ವಾಸಿಸುವವರು ಕಟ್ಟಿಗೆ ಒಲೆ ಬಳಸುವ ಅವಕಾಶವೇ ಇಲ್ಲ. ಇಂತಹ ಪರಿಸ್ಥಿತಿಯಲ್ಲಿ ಅಡುಗೆ ಅನಿಲದ ಲಭ್ಯತೆ ಅತ್ಯಗತ್ಯ ಸೇವೆಯಾಗಿದೆ.…

Read More

ಮಂಗಳೂರು, ಜೂ. 26 : ನಗರದಲ್ಲಿ ಡ್ರಗ್ ಸರಬರಾಜು ಮಾಡುತ್ತಿದ್ದ ಆರೋಪಿ  ಓರ್ವನನ್ನು ಸಿಸಿಬಿ ಪೊಲೀಸರು ಕಾರ್ಯಚರಣೆ ನಡೆಸಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.  ಆರೋಪಿಯು , ಸುರತ್ಕಲ್ ನಿವಾಸಿಯಾಗಿದ್ದು, ಹಾಲಿ ವಾಸ , ಕುಳಾಯಿಗುಡ್ಡೆ ಅಣ್ಣಪ್ಪ ಸ್ವಾಮಿ ಅಲಿಯಾಸ್‌ ಮನು( 26 ) ಎಂದು ಗುರುತಿಸಲಾಗಿದೆ. ನಿಷೇಧಿತ ಮಾದಕವಸ್ತು ಎಂಡಿಎಂಎ ಖರೀದಿಸಿ ಮಂಗಳೂರು ನಗರಕ್ಕೆ ತಂದು ಕುಳಾಯಿ ಗುಡ್ಡೆ ಪರಿಸರದಲ್ಲಿರುವ ಮನೆಯಿಂದ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿರುವ ಬಗ್ಗೆ ಮಾಹಿತಿ ಪಡೆದು ಜೂನ್‌ 25 ರಂದು ಸಿಸಿಬಿ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದಾರೆ. ಬಳಿಕ   ಬಂಧಿತ ಆರೋಪಿಯಿಂದ ಸುಮಾರು 1,50,000 ಮೌಲ್ಯದ 15 ಗ್ರಾಂ ಎಂಡಿಎಂಎ ಹಾಗೂ ಮೊಬೈಲ್ ಫೋನ್, ಜಿಪ್ ಲಾಕ್ ಕವರ್, ಡಿಜಿಟಲ್ ತೂಕಮಾಪನವನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ- 2,10,500 ರೂ ಅಂದಾಜಿಸಲಾಗಿದೆ. ಈ ಕುರಿತು ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಆರೋಪಿ ಅಣ್ಣಪ್ಪ ಸ್ವಾಮಿ ವಿರುದ್ಧ ಈ ಹಿಂದೆ ಪಣಂಬೂರು, ಬಜಪೆ ಠಾಣೆಗಳಲ್ಲಿ ಎನ್.ಡಿ.ಪಿ. ಎಸ್ ಪ್ರಕರಣ, ಸುರತ್ಕಲ್ ಪೊಲೀಸ್ ಠಾಣೆಯಲ್ಲಿ…

Read More

ಮಂಗಳೂರು: ಪ್ರತಿಷ್ಠಿತ ಮಂಗಳೂರು ವಿಶ್ವವಿದ್ಯಾನಿಲಯದ ಬ್ರಹ್ಮಶ್ರೀ ನಾರಾಯಣ ಗುರು ಅಧ್ಯಯನ ಪೀಠದ ನೂತನ ಸದಸ್ಯರಾಗಿ ಹಿರಿಯ ವಕೀಲರು ಹಾಗೂ ಬಿಜೆಪಿ ಹಿರಿಯ ಮುಖಂಡರಾದ ಮೋಹನರಾಜ್ ಕೆ.ಆರ್. ಅವರು ನೇಮಕಗೊಂಡಿದ್ದಾರೆ. ಕಾನೂನು ಕ್ಷೇತ್ರದಲ್ಲಿ ಅನುಭವ ಹೊಂದಿರುವ ಮೋಹನರಾಜ್ ಕೆ.ಆರ್. ಅವರು ಹಲವು ವರ್ಷಗಳಿಂದ ಸಾಮಾಜಿಕ, ಶೈಕ್ಷಣಿಕ ಹಾಗೂ ಸಾರ್ವಜನಿಕ ಸೇವಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ಸಂಘಟನೆ ಹಾಗೂ ಸಮಾಜಮುಖಿ ಕಾರ್ಯಗಳ ಮೂಲಕ ಜನಸಾಮಾನ್ಯರ ವಿಶ್ವಾಸ ಗಳಿಸಿರುವ ಅವರು, ಇದೀಗ ಬ್ರಹ್ಮಶ್ರೀ ನಾರಾಯಣ ಗುರು ಅಧ್ಯಯನ ಪೀಠದ ಸದಸ್ಯರಾಗಿ ಆಯ್ಕೆಯಾಗಿರುವುದು ಅವರ ಸಾರ್ವಜನಿಕ ಸೇವೆಗೆ ಸಂದ ಗೌರವವಾಗಿದೆ.ನಾರಾಯಣ ಗುರುಗಳ ತತ್ವ, ಆದರ್ಶ ಹಾಗೂ ಸಾಮಾಜಿಕ ಸಮಾನತೆಯ ಮೌಲ್ಯಗಳನ್ನು ಅಧ್ಯಯನ, ಸಂಶೋಧನೆ ಮತ್ತು ಸಮಾಜದಲ್ಲಿ ಪ್ರಸಾರ ಮಾಡುವ ಕಾರ್ಯದಲ್ಲಿ ಅವರ ಅನುಭವ ಮತ್ತು ಮಾರ್ಗದರ್ಶನ ಮಹತ್ವದ ಪಾತ್ರ ವಹಿಸಲಿದೆ ಎಂದು ವಿವಿಧ ಗಣ್ಯರು ಅಭಿಪ್ರಾಯಪಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಮೋಹನರಾಜ್ ಕೆ.ಆರ್. ಅವರಿಗೆ ರಾಜಕೀಯ, ಸಾಮಾಜಿಕ ಹಾಗೂ ಶೈಕ್ಷಣಿಕ ವಲಯದ ಗಣ್ಯರು, ಸ್ನೇಹಿತರು ಮತ್ತು ಅಭಿಮಾನಿಗಳು ಹೃತ್ಪೂರ್ವಕ…

Read More

ಉಳ್ಳಾಲ: ಪ್ರತಿಷ್ಠಿತ ಮಂಗಳೂರು ವಿಶ್ವವಿದ್ಯಾನಿಲಯದ ಬ್ರಹ್ಮಶ್ರೀ ನಾರಾಯಣ ಗುರು ಅಧ್ಯಯನ ಪೀಠದ ನೂತನ ಸದಸ್ಯರಾಗಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರು, ನಿವೃತ್ತ ಮುಖ್ಯೋಪಾಧ್ಯಾಯರು ಹಾಗೂ ಭಗತ್ ಸಿಂಗ್ ಸೇವಾ ಪ್ರತಿಷ್ಠಾನದ ಗೌರವ ಸಲಹೆಗಾರರಾದ ಆನಂದ ಕೆ. ಅಸೈಗೋಳಿ ಅವರು ನೇಮಕಗೊಂಡಿದ್ದಾರೆ. ಮಂಗಳೂರು ವಿಶ್ವವಿದ್ಯಾನಿಲಯದ ಬ್ರಹ್ಮಶ್ರೀ ನಾರಾಯಣ ಗುರು ಅಧ್ಯಯನ ಪೀಠವು ನಾರಾಯಣ ಗುರುಗಳ ಸಮಾನತೆ, ಸಾಮಾಜಿಕ ಸೌಹಾರ್ದತೆ ಹಾಗೂ ಮಾನವೀಯ ಮೌಲ್ಯಗಳ ಕುರಿತ ಅಧ್ಯಯನ, ಸಂಶೋಧನೆ ಮತ್ತು ಜಾಗೃತಿ ಕಾರ್ಯಕ್ರಮಗಳನ್ನು ಉತ್ತೇಜಿಸುವ ಉದ್ದೇಶದಿಂದ ಕಾರ್ಯನಿರ್ವಹಿಸುತ್ತಿದೆ. ಶಿಕ್ಷಣ ಕ್ಷೇತ್ರದಲ್ಲಿ ಹಲವು ದಶಕಗಳ ಸೇವೆ ಸಲ್ಲಿಸಿರುವ ಆನಂದ ಕೆ. ಅಸೈಗೋಳಿ ಅವರು ಸಾಮಾಜಿಕ, ಶೈಕ್ಷಣಿಕ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳ ಮೂಲಕ ವಿಶಿಷ್ಟ ಗುರುತನ್ನು ಪಡೆದಿದ್ದಾರೆ. ಅವರ ನೇಮಕವು ಶಿಕ್ಷಣ ಕ್ಷೇತ್ರದ ಜೊತೆಗೆ ಸಮಾಜಮುಖಿ ಚಟುವಟಿಕೆಗಳಿಗೆ ಮತ್ತಷ್ಟು ಬಲ ತುಂಬಲಿದೆ ಎಂದು ವಿವಿಧ ಗಣ್ಯರು ಹಾಗೂ ಅಭಿಮಾನಿಗಳು ಅಭಿಪ್ರಾಯಪಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ಆತ್ಮೀಯರು, ಶಿಷ್ಯರು, ಸ್ನೇಹಿತರು ಹಾಗೂ ವಿವಿಧ ಸಂಘ-ಸಂಸ್ಥೆಗಳ ಪ್ರತಿನಿಧಿಗಳು ಆನಂದ ಕೆ.…

Read More

ಮಂಗಳೂರು, ಜೂನ್ 26: ಕರ್ನಾಟಕ ರಾಜ್ಯ ಸರ್ಕಾರಿ ಕಂದಾಯ ಇಲಾಖೆ ಗ್ರಾಮ ಸಹಾಯಕರ ಸಂಘ (ರಿ.) ದಕ್ಷಿಣ ಕನ್ನಡ ಜಿಲ್ಲಾ ಘಟಕದ ನೂತನ ಅಧ್ಯಕ್ಷರಾಗಿ ಶ್ರೀಯುತ ಮೈಕಲ್ ಡಿಸೋಜಾ ಆಯ್ಕೆಯಾಗಿದ್ದಾರೆ. ಮೈಕಲ್ ಡಿಸೋಜಾ ಅವರು ಗ್ರಾಮ ಸಹಾಯಕರ ವಿವಿಧ ನ್ಯಾಯಸಮ್ಮತ ಬೇಡಿಕೆಗಳ ಈಡೇರಿಕೆಗೆ ಹಲವು ವರ್ಷಗಳಿಂದ ನಿರಂತರವಾಗಿ ಹೋರಾಟ ನಡೆಸುತ್ತಾ ಬಂದಿದ್ದು, ಸಂಘದ ಸದಸ್ಯರ ಧ್ವನಿಯಾಗಿ ಕಾರ್ಯನಿರ್ವಹಿಸಿದ್ದಾರೆ. ಗ್ರಾಮ ಸಹಾಯಕರ ಸೇವಾ ಭದ್ರತೆ, ವೇತನ ಪರಿಷ್ಕರಣೆ, ಖಾಯಂ ನೇಮಕಾತಿ, ಸೇವಾ ಸೌಲಭ್ಯಗಳ ವಿಸ್ತರಣೆ ಸೇರಿದಂತೆ ಹಲವು ಪ್ರಮುಖ ಬೇಡಿಕೆಗಳ ಕುರಿತು ಸರ್ಕಾರದ ಗಮನ ಸೆಳೆಯುವ ನಿಟ್ಟಿನಲ್ಲಿ ವಿವಿಧ ಹಂತಗಳಲ್ಲಿ ಹೋರಾಟ, ಮನವಿ ಹಾಗೂ ಸಂಘಟನಾ ಚಟುವಟಿಕೆಗಳನ್ನು ಮುನ್ನಡೆಸುವಲ್ಲಿ ಅವರು ಪ್ರಮುಖ ಪಾತ್ರವಹಿಸಿದ್ದಾರೆ. ಸಂಘಟನಾ ಕೌಶಲ್ಯ, ಸದಸ್ಯರನ್ನು ಒಗ್ಗೂಡಿಸುವ ನಾಯಕತ್ವ ಹಾಗೂ ಕಾರ್ಮಿಕರ ಹಿತಾಸಕ್ತಿಗಾಗಿ ತೋರಿದ ಬದ್ಧತೆಯನ್ನು ಪರಿಗಣಿಸಿ ಅವರನ್ನು ಜಿಲ್ಲಾ ಅಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ ಎಂದು ಸಂಘದ ಮುಖಂಡರು ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರು ಮೈಕಲ್ ಡಿಸೋಜಾ…

Read More

ಮಂಗಳೂರು, ಜೂ. 26: ರಾಜ್ಯದ ಜ್ವಲಂತ ಸಮಸ್ಯೆಗಳ ಪರಿಹಾರಕ್ಕೆ ಆಗ್ರಹಿಸಿ ಬಿಜೆಪಿ ಹೋರಾಟ ನಡೆಸಿ ಭ್ರಷ್ಟ ಕಾಂಗ್ರೆಸ್ ಸರಕಾರದ ಮುಖವಾಡವನ್ನು ಬಿಚ್ಚಿಡುವ ಕೆಲಸವನ್ನು ನಮ್ಮೆಲ್ಲ ಮುಖಂಡರ, ಕಾರ್ಯಕರ್ತರ ನೇತೃತ್ವದಲ್ಲಿ ಆಗಬೇಕಿದೆ ಎಂದು ಶಾಸಕ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ತಿಳಿಸಿದ್ದಾರೆ. ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿರುವ ಅವರು ಇಂದು ಧರ್ಮಸ್ಥಳದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು. ಪಕ್ಷದ ಸಂಘಟನೆ, ಲಕ್ಷಾಂತರ ಕಾರ್ಯಕರ್ತರ ಶಕ್ತಿಯ ಬಗ್ಗೆ ನನಗೆ ವಿಶ್ವಾಸವಿದೆ. ಜನವಿರೋಧಿ, ಬಡವರ ವಿರೋಧಿ, ರೈತರ ವಿರೋಧಿ, ಯುವಕರ ವಿರೋಧಿ ದುಷ್ಟ ಕಾಂಗ್ರೆಸ್ ಸರಕಾರವನ್ನು ಮುಂಬರುವ ದಿನಗಳಲ್ಲಿ ಬುಡಸಮೇತ ಕಿತ್ತು ಹಾಕುವ ಕೆಲಸವು ನಮ್ಮೆಲ್ಲ ಕಾರ್ಯಕರ್ತರ ಶ್ರಮದಿಂದ ಆಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.ಕೆ.ಎಸ್.ಈಶ್ವರಪ್ಪ ಅವರ ಹೇಳಿಕೆ ಸಂಬಂಧ ಅನೇಕ ಶಾಸಕರು ದೂರವಾಣಿ ಕರೆ ಮಾಡಿದ್ದಾರೆ. ಹಿಂದಿನ ಸಿದ್ದರಾಮಯ್ಯನವರ ಸರಕಾರ 5 ವರ್ಷ ಕಾಲ ಆಡಳಿತ ನಡೆಸಿತ್ತು. ಆಗ ರಾಜ್ಯದಲ್ಲಿ 18ಕ್ಕೂ ಹೆಚ್ಚು ಹಿಂದೂ ಕಾರ್ಯಕರ್ತರ ಬರ್ಬರ ಹತ್ಯೆ ಆಗಿತ್ತೆಂಬುದನ್ನು ಈಶ್ವರಪ್ಪ ಅವರು…

Read More

ಮಂಗಳೂರು, ಜೂ. 26: ಮಂಗಳೂರಿನ ಮಾಜಿ ಮೇಯರ್ ಮತ್ತು ಹಿರಿಯ ರಾಜಕಾರಣಿ ಹಿಲ್ಡಾ ಆಳ್ವ ಅವರು ಗುರುವಾರ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.  ಅವರು ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು, ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಅವರು ಕೊನೆಯುಸಿರೆಳೆದಿದ್ದಾರೆ.ಮಂಗಳೂರಿನ ಪ್ರಗತಿಪರ ನಾಯಕಿಯಾಗಿದ್ದ ಹಿಲ್ಡಾ ಆಳ್ವ, ಮೇಯರ್ ಆಗಿದ್ದ ಅವಧಿಯಲ್ಲಿ ನಗರದ ಮೂಲಸೌಕರ್ಯ ಅಭಿವೃದ್ಧಿ ಮತ್ತು ಮಹಿಳಾ ಸಬಲೀಕರಣಕ್ಕಾಗಿ ಶ್ರಮಿಸಿದ್ದರು. ಜನಪರ ಆಡಳಿತದ ಮೂಲಕ ಅವರು ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾಗಿದ್ದರು.ಹಿಲ್ಡಾ ಆಳ್ವ ಅವರ ನಿಧನಕ್ಕೆ ಜಿಲ್ಲೆಯ ಪ್ರಮುಖ ರಾಜಕೀಯ ನಾಯಕರು, ಜನಪ್ರತಿನಿಧಿಗಳು ಮತ್ತು ಗಣ್ಯರು ತೀವ್ರ ಸಂತಾಪ ಸೂಚಿಸಿದ್ದಾರೆ.

Read More

ದೇಶದ ಪ್ರಜಾಪ್ರಭುತ್ವವನ್ನು ಹರಣ ಮಾಡಿದ ರಾಷ್ಟ್ರೀಯ ತುರ್ತುಪರಿಸ್ಥಿತಿ ಬಗ್ಗೆ 9 ನೇ ತರಗತಿಯ ಸಿ.ಬಿ.ಎಸ್.ಸಿ. ಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ, ಸಮಾಜವನ್ನು ಅರಿತುಕೊಳ್ಳಿ ಭಾಗದಡಿ ಪಾಠವಾಗಿ ಸೇರ್ಪಡೆಗೊಳಿಸಿರುವುದು ಸ್ವಾಗತಾರ್ಹ. ಅಂದಿನ ಪ್ರಧಾನ ಮಂತ್ರಿ ಇಂದಿರಾಗಾಂಧಿ ಅಧಿಕಾರದ ಲಾಲಸೆಗೆ ದೇಶದ ಸಂವಿಧಾನದ ಅಶಯವನ್ನೇ ದಿಕ್ಕರಿಸಿದ ಘೋರ ಕೃತ್ಯ ಇದಾಗಿದೆ ಎಂದು ಭಾರತೀಯ ಜನತಾ ಪಾರ್ಟಿಯ ಜಿಲ್ಲಾ ವಕ್ತಾರರಾದ ಜೀವನ್ ಕುಮಾರ್ ತೊಕ್ಕೊಟು ಅಭಿಪ್ರಾಯ ವ್ಯಕ್ತಪಡಿಸಿದರು.ತುರ್ತುಪರಿಸ್ಥಿತಿ ದೇಶದ ಸಂವಿಧಾನಕ್ಕೆ ಮಾಡಿದ ನೇರ ದಾಳಿಯಾಗಿದೆ. ರಾಜಕೀಯ ನಾಯಕರ, ಪತ್ರಕರ್ತರ, ಸಾಮಾಜಿಕ ನಾಯಕರನ್ನು ವಿನಾ ಕಾರಣ ಬಂದಿಸಲಾಗಿತ್ತು. ಇದರ ವಿರುದ್ಧ ದೇಶಾದ್ಯಂತ ನಡೆದ ಹೋರಾಟ ದೇಶದ ಎರಡನೇ ಸ್ವಾತಂತ್ರ್ಯ ಹೋರಾಟವಾಗಿದೆ. ಕಾಂಗ್ರೆಸ್ ಸರ್ಕಾರ ನಕಲಿ ಇತಿಹಾಸವನ್ನು ಸೃಷ್ಟಿಸಿ ಜನರ ಹಾದಿ ತಪ್ಪಿಸಿತ್ತು. ಯುವ ಪೀಳಿಗೆಗೆ ನೈಜ ಚರಿತ್ರೆಯ ‌ಅರಿವು ಆಗಬೇಕಿದೆ ಎಂದು ಅವರು ಪತ್ರಿಕಾ ಪ್ರಕಟಣೆ ಯಲ್ಲಿ ತಿಳಿಸಿದ್ದಾರೆ.

Read More

ಮಂಗಳೂರು, ಜೂ. 26 : ಮಂಗಳೂರು ನಗರವು ತನ್ನ ಇತಿಹಾಸದಲ್ಲೇ ಅತ್ಯಂತ ಅದ್ಧೂರಿ ಕಾರ್ಪೊರೇಟ್ ಸಮಾರಂಭವೊಂದಕ್ಕೆ ಸಾಕ್ಷಿಯಾಯಿತು. ಅಡ್ಯಾರ್ ಗಾರ್ಡನ್‌ನಲ್ಲಿ ‘ರೋಹನ್ ಕಾರ್ಪೊರೇಶನ್’ ಆಯೋಜಿಸಿದ್ದ “ಆನ್ ಈವ್ನಿಂಗ್ ವಿತ್ ಶಾರುಖ್ ಖಾನ್” ಕಾರ್ಯಕ್ರಮದಲ್ಲಿ ಬಾಲಿವುಡ್ ಐಕಾನ್ ಶಾರುಖ್ ಖಾನ್ ವಿಶೇಷ ಅತಿಥಿಯಾಗಿ ಭಾಗವಹಿಸಿದ್ದರು. ಈ ಭವ್ಯ ಸಮಾರಂಭದಲ್ಲಿ ಗಣ್ಯರು, ಉದ್ಯಮ ಕ್ಷೇತ್ರದ ದಿಗ್ಗಜರು, ಉದ್ಯಮಿಗಳು, ವಿಐಪಿಗಳು ಮತ್ತು ಆಹ್ವಾನಿತರು ಪಾಲ್ಗೊಂಡಿದ್ದರು. ಇದು ನಗರದಲ್ಲಿ ಆಯೋಜಿಸಲಾದ ಅತ್ಯಂತ ಪ್ರತಿಷ್ಠಿತ ಕಾರ್ಯಕ್ರಮಗಳಲ್ಲಿ ಒಂದಾಗಿ ಗುರುತಿಸಿಕೊಂಡಿತು.ಸಂಜೆ 5 ಗಂಟೆಗೆ ಪ್ರಾರಂಭವಾದ ಈ ಕಾರ್ಯಕ್ರಮ ರಾತ್ರಿ 9 ಗಂಟೆಯವರೆಗೆ ನಡೆಯಿತು. ಮನರಂಜನೆ, ಸಂಸ್ಕೃತಿ, ಉದ್ಯಮಶೀಲತೆ ಮತ್ತು ಸಮುದಾಯದ ಒಗ್ಗಟ್ಟಿನ ಸಂಕೇತವಾಗಿ ಈ ವೇದಿಕೆ ಕಂಗೊಳಿಸಿತು. ಕಟ್ಟುನಿಟ್ಟಾದ ಪ್ರವೇಶ ಪತ್ರಗಳ ಮೂಲಕ ಅತಿಥಿಗಳನ್ನು ಆಹ್ವಾನಿಸಲಾಗಿತ್ತು.ಕರಾವಳಿಯ ಪ್ರತಿಷ್ಠಿತ ಕಲಾವಿದರು ಮತ್ತು ಸಂಸ್ಥೆಗಳಿಂದ ಪ್ರಸ್ತುತಪಡಿಸಲಾದ ಆಕರ್ಷಕ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಸಮಾರಂಭಕ್ಕೆ ಚಾಲನೆ ದೊರೆಯಿತು. ‘ಇಂಡಿಯನ್ ಐಡಲ್’ ವಿಜೇತ ಸಲ್ಮಾನ್ ಅಲಿ ಅವರ ವಿದ್ಯುನ್ಮಾನ ಪ್ರದರ್ಶನವು ಪ್ರೇಕ್ಷಕರನ್ನು ಮಂತ್ರಮುಗ್ಧರನ್ನಾಗಿಸುವ ಜೊತೆಗೆ ಕಾರ್ಯಕ್ರಮದ ಮೆರಗನ್ನು ಇನ್ನಷ್ಟು…

Read More

ಮಂಗಳೂರು: ಉರ್ವಾದ ಸಂತ ಅಲೋಶಿಯಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಶಾಲೆಯ ಮುಖ್ಯ ಶಿಕ್ಷಕರಾದ ಅಲೋಶಿಯಸ್ ಡಿಸೋಜ, “ದೈನಂದಿನ ಜೀವನದಲ್ಲಿ ಯೋಗಾಭ್ಯಾಸವನ್ನು ಅಳವಡಿಸಿಕೊಂಡು ಆರೋಗ್ಯಯುತ ಜೀವನಶೈಲಿಯನ್ನು ರೂಢಿಸಿಕೊಳ್ಳಬೇಕು. ಯೋಗವು ದೈಹಿಕ ಹಾಗೂ ಮಾನಸಿಕ ಆರೋಗ್ಯವನ್ನು ವೃದ್ಧಿಸುವ ಅತ್ಯುತ್ತಮ ಸಾಧನವಾಗಿದೆ” ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಕಾರ್ಯಕ್ರಮದಲ್ಲಿ ಹಿರಿಯ ದೈಹಿಕ ಶಿಕ್ಷಣ ಶಿಕ್ಷಕರಾದ ಪ್ರಮೊದ್ ಅರಿಗ, ಹಿರಿಯ ಶಿಕ್ಷಕಿ ಲವೀನ ಡಿಕುನ್ನ, ಶಾಲಾ ನಾಯಕ ಹರ್ಷವರ್ಧನ್, ಉಪನಾಯಕಿ ಜೇನ್ ಹಾಗೂ ವಿದ್ಯಾರ್ಥಿ ಮಂತ್ರಿಮಂಡಳಿಯ ಸದಸ್ಯರು ಉಪಸ್ಥಿತರಿದ್ದರು. ಬಳಿಕ ವಿದ್ಯಾರ್ಥಿಗಳಿಂದ ಆಕರ್ಷಕ ಯೋಗಾಸನಗಳ ಪ್ರದರ್ಶನ ನಡೆಯಿತು. ಸಮೂಹ ಗೀತೆಯ ಮೂಲಕ ಯೋಗದ ಮಹತ್ವವನ್ನು ಮನದಟ್ಟಾಗಿಸಲಾಯಿತು. 9ನೇ ತರಗತಿಯ ವಿದ್ಯಾರ್ಥಿನಿ ಆಜ್ಞಾ ಯೋಗದ ಪ್ರಾಮುಖ್ಯತೆಯ ಕುರಿತು ಮಾತನಾಡಿದರು. ದೈಹಿಕ ಶಿಕ್ಷಣ ಶಿಕ್ಷಕರಾದ ಸುಧಾಕರ್ ಹಾಗೂ ಹರಿಣಾಕ್ಷಿ ಅವರ ನೇತೃತ್ವದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. 9ನೇ ತರಗತಿಯ ವಿದ್ಯಾರ್ಥಿ ಮಯಾಂಕ್ ಕಾರ್ಯಕ್ರಮ ನಿರೂಪಿಸಿದರು. ರಾಷ್ಟ್ರಗೀತೆಯೊಂದಿಗೆ ಕಾರ್ಯಕ್ರಮ ಮುಕ್ತಾಯಗೊಂಡಿತು.

Read More