ಮಂಗಳೂರು,ಜು. 23 :ಶ್ರೀನಿವಾಸ ವಿಶ್ವವಿದ್ಯಾಲಯ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಆಂಡ್ ಟೆಕ್ನಾಲಾಜಿಯಲ್ಲಿ ವಿದ್ಯಾರ್ಥಿಗಳ ತಾಂತ್ರಿಕ ಪ್ರತಿಭೆ ಮತ್ತು ನವೋದ್ಯಮ ಸಾಮರ್ಥ್ಯಕ್ಕೆ ಮತ್ತೊಂದು ಮಹತ್ವದ ಸಾಕ್ಷಿಯಾಗಿ, ಕೃತಕ ಬುದ್ಧಿಮತ್ತೆ ಆಧಾರಿತ ಸ್ವಯಂಚಾಲಿತ ವಿದ್ಯುತ್ ವಾಹನ, ಹಾಗೂ ಎಐ ರಿಸೆಪ್ಷನ್ ರೋಬೋಟ್ ಗಳನ್ನು ಗುರುವಾರ, ಜುಲೈ 23ರಂದು ಮುಕ್ಕ ಕ್ಯಾಂಪಸ್‌ನಲ್ಲಿ ಯಶಸ್ವಿಯಾಗಿ ಪ್ರದರ್ಶಿಸಲಾಯಿತು. ವಿಶ್ವವಿದ್ಯಾಲಯದ ಆಡಳಿತ ಮಂಡಳಿಯ ಆರ್ಥಿಕ ಸಹಕಾರದೊಂದಿಗೆ, ಇಂಜಿನಿಯರಿಂಗ್ ವಿದ್ಯಾರ್ಥಿಗಳು ಅಧ್ಯಾಪಕರ ಮಾರ್ಗದರ್ಶನದಲ್ಲಿ ಈ ಅತ್ಯಾಧುನಿಕ ತಂತ್ರಜ್ಞಾನ ಯೋಜನೆಗಳನ್ನು ಯಶಸ್ವಿಯಾಗಿ ಅಭಿವೃದ್ಧಿಪಡಿಸಿದ್ದಾರೆ. ಇವು ವಿಶ್ವವಿದ್ಯಾಲಯದ ಸಂಶೋಧನಾ ಮನೋಭಾವ, ನವೀನ ತಂತ್ರಜ್ಞಾನ, ಸುಸ್ಥಿರ ಅಭಿವೃದ್ಧಿ ಹಾಗೂ ಉದ್ಯಮಾಭಿಮುಖ ಇಂಜಿನಿಯರಿಂಗ್ ಶಿಕ್ಷಣದ ಬದ್ಧತೆಯನ್ನು ಪ್ರತಿಬಿಂಬಿಸುತ್ತವೆ. ಈ ಸಂಶೋಧನೆಗಳು ಶ್ರೀನಿವಾಸ ವಿಶ್ವವಿದ್ಯಾಲಯದ “ಸಂಶೋಧನೆ, ನವೋದ್ಯಮ ಮತ್ತು ತಂತ್ರಜ್ಞಾನಾಧಾರಿತ ಶಿಕ್ಷಣ” ಎಂಬ ಧ್ಯೇಯವನ್ನು ಮತ್ತಷ್ಟು ಬಲಪಡಿಸುವುದರ ಜೊತೆಗೆ, ವಿದ್ಯಾರ್ಥಿಗಳನ್ನು ಭವಿಷ್ಯದ ಜಾಗತಿಕ ತಾಂತ್ರಿಕ ಸವಾಲುಗಳನ್ನು ಎದುರಿಸಲು ಸಜ್ಜುಗೊಳಿಸುವ ಮಹತ್ವದ ಹೆಜ್ಜೆಯಾಗಿದೆ.ಎಐ ಆಧಾರಿತ ಸ್ವಯಂಚಾಲಿತ ವಿದ್ಯುತ್ ವಾಹನ “ಶ್ರೀ ವಾಹನ್”ಕೃತಕ ಬುದ್ದಿಮತ್ತೆ ತಂತ್ರಜ್ಞಾನದ ಮೂಲಕ ಅಭಿವೃದ್ಧಿಪಡಿಸಲಾದ ಎಐ ಆಧಾರಿತ…
Author: UllalaVani
ಕೊಲಂಬೊ,ಜು. 23 : ಶ್ರೀಲಂಕಾ ಜಲಪ್ರದೇಶಕ್ಕೆ ಅಕ್ರಮವಾಗಿ ಪ್ರವೇಶಿಸಿ ಮೀನುಗಾರಿಕೆ ನಡೆಸಿದ ಆರೋಪದ ಮೇಲೆ 9 ಭಾರತೀಯ ಮೀನುಗಾರರನ್ನು ಶ್ರೀಲಂಕಾ ನೌಕಾಪಡೆ ಬಂಧಿಸಿದೆ. ಅವರ ಟ್ರಾಲರ್ ದೋಣಿಯನ್ನೂ ವಶಕ್ಕೆ ಪಡೆದುಕೊಂಡಿದೆ. ಮೀನುಗಾರರು ಅಂತಾರಾಷ್ಟ್ರೀಯ ಸಮುದ್ರ ಗಡಿ ರೇಖೆ ದಾಟಿ ತಲೈಮನ್ನಾರ್ ಉತ್ತರ ಭಾಗದ ಶ್ರೀಲಂಕಾ ಜಲಪ್ರದೇಶದಲ್ಲಿ ಮೀನುಗಾರಿಕೆ ಮಾಡುತ್ತಿದ್ದರು. ಈ ವೇಳೆ ಬುಧವಾರ ಸಂಜೆ ನಡೆಸಿದ ಕಾರ್ಯಾಚರಣೆಯಲ್ಲಿ ಅವರನ್ನು ಬಂಧಿಸಲಾಗಿದೆ ಎಂದು ಶ್ರೀಲಂಕಾ ನೌಕಾಪಡೆ ಮಾಹಿತಿ ನೀಡಿದೆ.ಕಾರ್ಯಾಚರಣೆ ವೇಳೆ 50ಕ್ಕೂ ಹೆಚ್ಚು ಭಾರತೀಯ ಟ್ರಾಲರ್‌ಗಳು ಇರಾನತಿವು ದಕ್ಷಿಣ ಭಾಗದ ಶ್ರೀಲಂಕಾ ಜಲಪ್ರದೇಶದಲ್ಲಿ ಮೀನುಗಾರಿಕೆ ನಡೆಸುತ್ತಿರುವುದು ಪತ್ತೆಯಾಗಿದೆ ಎಂದು ನೌಕಾಪಡೆ ತಿಳಿಸಿದೆ.ಬಂಧಿತ 9 ಮೀನುಗಾರರು ಹಾಗೂ ವಶಪಡಿಸಿಕೊಂಡ ಟ್ರಾಲರ್‌ನ್ನು ಮನ್ನಾರ್ ಮೀನುಗಾರಿಕೆ ಇಲಾಖೆಯ ಅಧಿಕಾರಿಗಳಿಗೆ ಮುಂದಿನ ಕಾನೂನು ಕ್ರಮಕ್ಕಾಗಿ ಹಸ್ತಾಂತರಿಸಲಾಗಿದೆ.
ಬೆಂಗಳೂರು, ಜುಲೈ 23: ಹೋಟೆಲ್, ಪಬ್, ಬಾರ್, ಕ್ಲಬ್, ರೆಸ್ಟೋರೆಂಟ್‌ಗಳು ಹಾಗೂ ರಸ್ತೆ ಬದಿಯ ಆಹಾರ ಮಳಿಗೆಗಳಲ್ಲಿ ಬಳಸಲಾಗುತ್ತಿರುವ ಕರಿದ ಅಡುಗೆ ಎಣ್ಣೆಯ ಗುಣಮಟ್ಟದ ಬಗ್ಗೆ ಆಹಾರ ಸುರಕ್ಷತಾ ಇಲಾಖೆ ಆತಂಕ ವ್ಯಕ್ತಪಡಿಸಿದೆ. ಇಲಾಖೆಯು ಬೆಂಗಳೂರಿನಲ್ಲಿ ನಡೆಸಿದ ತಪಾಸಣೆಯಲ್ಲಿ 40ಕ್ಕೂ ಹೆಚ್ಚು ಕಡೆ ಬಳಸುತ್ತಿದ್ದ ಅಡುಗೆ ಎಣ್ಣೆ ಸುರಕ್ಷಿತ ಗುಣಮಟ್ಟ ಹೊಂದಿರಲಿಲ್ಲ ಎಂಬುದು ಪ್ರಯೋಗಾಲಯ ಪರೀಕ್ಷೆಯಲ್ಲಿ ಬೆಳಕಿಗೆ ಬಂದಿದೆ. ಅಡುಗೆ ಎಣ್ಣೆಯಲ್ಲಿ ಅಪಾಯಕಾರಿ ಟ್ರಾನ್ಸ್ ಫ್ಯಾಟ್ ಪತ್ತೆಯಾಗಿದೆ. 40ಕ್ಕೂ ಹೆಚ್ಚು ಹೋಟೆಲ್ ಮಾಲೀಕರಿಗೆ ನೋಟಿಸ್ ಅಧಿಕಾರಿಗಳ ಮಾಹಿತಿ ಪ್ರಕಾರ, ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ವಿವಿಧ ಆಹಾರ ಮಳಿಗೆಗಳಿಂದ ಬಳಸಿದ ಅಡುಗೆ ಎಣ್ಣೆಯ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆಗೆ ಒಳಪಡಿಸಲಾಗಿತ್ತು. ಪರೀಕ್ಷೆಯಲ್ಲಿ ಹಲವು ಮಾದರಿಗಳಲ್ಲಿ ಆರೋಗ್ಯಕ್ಕೆ ಹಾನಿಕಾರಕ ಮಟ್ಟದಲ್ಲಿ ಟ್ರಾನ್ಸ್ ಫ್ಯಾಟ್ ಇರುವ ಅಂಶ ಪತ್ತೆಯಾಗಿದೆ. ಇದರ ಹಿನ್ನೆಲೆಯಲ್ಲಿ 40ಕ್ಕೂ ಹೆಚ್ಚು ಮಾಲೀಕರಿಗೆ ನೋಟಿಸ್ ಜಾರಿಗೊಳಿಸಲಾಗಿದ್ದು, ಒಟ್ಟು 28.91 ಲಕ್ಷ ರೂ. ದಂಡ ವಿಧಿಸಲಾಗಿದೆ. ಹೃದಯ ಸಂಬಂಧಿ ಕಾಯಿಲೆಗಳು, ಕ್ಯಾನ್ಸರ್‌ಗೆ ದಾರಿ ತಜ್ಞರ ಪ್ರಕಾರ, ಟ್ರಾನ್ಸ್ ಫ್ಯಾಟ್…
ಕುತ್ತಾರು, ಜು. 23: ಶೃತಿ ಲಯ ಕಲಾ ಕೇಂದ್ರ ಕುತ್ತಾರು ಮುಂದಾಳತ್ವದಲ್ಲಿ, ಕುತ್ತಾರು ಶ್ರೀ ರಾಜರಾಜೇಶ್ವರಿ ಸಿದ್ದಿವಿನಾಯಕ ದೇವಸ್ಥಾನದ ಸಭಾಂಗಣದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ನಡೆಯಲಿರುವ ನಾಲ್ಕನೇ ವರ್ಷದ “ಕುತ್ತಾರು ಮುದ್ದುಕೃಷ್ಣ” ಸ್ಪರ್ಧಾ ಕಾರ್ಯಕ್ರಮದ ಯಶಸ್ವಿ ಆಯೋಜನೆಗಾಗಿ ಶ್ರೀಕೃಷ್ಣ ಸಾಂಸ್ಕೃತಿಕ ಮಹೋತ್ಸವ ಸಮಿತಿಯನ್ನು ಹರೀಶ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ರಚಿಸಲಾಯಿತು. ಸಮಿತಿಯ ಅಧ್ಯಕ್ಷರಾಗಿ ರವಿ ರೈ ಫಜೀರು ಅವರನ್ನು ಆಯ್ಕೆ ಮಾಡಲಾಯಿತು. ಗೌರವ ಅಧ್ಯಕ್ಷರಾಗಿ ಪ್ರಕಾಶ್ ಸಿಂಪೋನಿ, ಗೌರವ ಸಲಹೆಗಾರರಾಗಿ ನರೇಶ್ ಕುಮಾರ್ ಬಬ್ಬುಕಟ್ಟೆ, ನಿರ್ದೇಶಕರಾಗಿ ಭಾಸ್ಕರ್ ಕುತ್ತಾರ್, ಪ್ರಧಾನ ಕಾರ್ಯದರ್ಶಿಯಾಗಿ ತ್ಯಾಗಮ್ ಹರೇಕಳ, ಕೋಶಾಧಿಕಾರಿಯಾಗಿ ನವೀನ್ ಕುತ್ತಾರ್ ಆಯ್ಕೆಯಾದರು. ಉಪಾಧ್ಯಕ್ಷರಾಗಿ ಭೋಜಾನಂದ ಬಾಳೆಪುಣಿ, ಶಿವಕುಮಾರ್ ಟಿ. ಹರೇಕಳ, ಶ್ರೀದೇವಿ ರೈ ಬರಿಕೆ, ಭಾರತಿ ಶೆಟ್ಟಿ ಬಿಕರ್ನಕಟ್ಟೆ, ಸದಾನಂದ ಬಾಳೆಪುಣಿ, ಚಂದ್ರಕಲಾ ಟೀಚರ್, ಪೂಜಾ ಶೆಟ್ಟಿ, ನಾಗವೇಣಿ ಶೆಟ್ಟಿ ಅಸೈಗೋಳಿ, ರಶ್ಮಿ, ಸೋನಿ ರೈ ಹಾಗೂ ಚಂದ್ರಕಲಾ ಶೆಟ್ಟಿ ಅವರನ್ನು ಆಯ್ಕೆ ಮಾಡಲಾಯಿತು. ಜೊತೆ ಕಾರ್ಯದರ್ಶಿಯಾಗಿ ಅಭಿಷೇಕ್ ಬೇಕಲ್, ಸಂಘಟನಾ ಕಾರ್ಯದರ್ಶಿಯಾಗಿ…
ಮೂಡುಬಿದಿರೆ, ಜು. 23 :ಮೂಡುಬಿದಿರೆ ಪಟ್ಟಣದ ರತನ್ ಗ್ಯಾರೇಜ್ ಬಳಿ ಬುಧವಾರ ಸಂಜೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ನಿವೃತ್ತ ಶಿಕ್ಷಕರೊಬ್ಬರು ಸಾವನ್ನಪ್ಪಿದ್ದಾರೆ. ಮೃತರನ್ನು ವೇಣುಗೋಪಾಲ್ ಕಾಲೋನಿಯ ನಿವಾಸಿ ಜಿ.ಕೆ. ಭಟ್ (ಗೋಪಾಲ್ ಕೃಷ್ಣ ಭಟ್) ಎಂದು ಗುರುತಿಸಲಾಗಿದೆ.ಪ್ರತ್ಯಕ್ಷದರ್ಶಿಗಳ ಪ್ರಕಾರ, ಭಟ್ ಇತರ ಪ್ರಯಾಣಿಕರೊಂದಿಗೆ ಮೂಡುಬಿದಿರೆಯ ಕಡೆಗೆ ಆಟೋರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದಾಗ, ಚಾಲಕ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹಠಾತ್ತನೆ ಬ್ರೇಕ್ ಹಾಕಿದ್ದಾನೆ ಎಂದು ವರದಿಯಾಗಿದೆ. ಹಠಾತ್ ಬ್ರೇಕ್ ಹಾಕಿದ್ದರಿಂದ ಆಟೋರಿಕ್ಷಾ ಪಲ್ಟಿಯಾಗಿದೆ.ಪರಿಣಾಮ ಭಟ್ ವಾಹನದಿಂದ ಹೊರಗೆ ಎಸೆಯಲ್ಪಟ್ಟರು, ಅವರಿಗೆ ಗಂಭೀರ ಗಾಯಗಳಾಗಿದ್ದವು. ಅವರನ್ನು ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಆದರೆ ವೈದ್ಯಕೀಯ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟರು. ಭಟ್ ನಿವೃತ್ತ ಶಿಕ್ಷಕ ಮತ್ತು ಹಿರಿಯ ಆರ್‌ಎಸ್‌ಎಸ್ ಕಾರ್ಯಕರ್ತರಾಗಿದ್ದರು. ಅವರು ಪತ್ನಿ ಮತ್ತು ಮಗಳನ್ನು ಅಗಲಿದ್ದಾರೆ.ಆಟೋರಿಕ್ಷಾವನ್ನು ಮರಿಯಾಡಿ ನಿವಾಸಿ ಅಹ್ಮದ್ ಚಲಾಯಿಸುತ್ತಿದ್ದರು. ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.
ಸುಳ್ಯ: ಕೌಟುಂಬಿಕ ಕಿರುಕುಳ ಹಾಗೂ ಮನಸ್ತಾಪದ ಆರೋಪ ಹಿನ್ನೆಲೆಯಲ್ಲಿ ವಿವಾಹಿತೆಯೊಬ್ಬಳು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಪ್ರಕರಣದಲ್ಲಿ ಕೊಲೆ ಮಾಡಿರುವ ದೂರಿನ ಮೇರೆಗೆ, ಆಕೆಯ ಮಾವ, ಅತ್ತೆ ಹಾಗೂ ನಾದಿನಿ ಸೇರಿ ಮೂವರು ಆರೋಪಿಗಳನ್ನು ಸುಳ್ಯ ಠಾಣೆ ಪೊಲೀಸರು ಬುಧವಾರ ಬಂಧಿಸಿದ್ದಾರೆ. ಪುತ್ತೂರು ತಾಲೂಕಿನ ಕೆದಂಬಾಡಿ ನಿವಾಸಿ ಜುಬೈದಾ (43) ಎಂಬುವರ ಮಗಳು ಫಾತಿಮತ್ ನಿಶಾನ ಮೃತರು. ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತಳ ಮಾವ ಸಿ.ಪಿ. ಅಲವಿ (54), ಅತ್ತೆ ಅಯಿಷಾ ಸಿ.ಎ. ಹಾಗೂ ನಾದಿನಿ ಫಸಿಲಾ ಸಿ.ಎ. (29) ಎಂಬುವರನ್ನು ಪೊಲೀಸರು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ. ಪ್ರಕರಣದ ಹಿನ್ನೆಲೆ: ನಾಲ್ಕು ವರ್ಷಗಳ ಹಿಂದೆ ಫಾತಿಮತ್ ನಿಶಾನ ಅವರ ವಿವಾಹ ನೆರವೇರಿತ್ತು. ಜುಲೈ 18, 2026ರಂದು ರಾತ್ರಿ ನಿಶಾನ ಅವರು ತಮ್ಮ ತಾಯಿ ಜುಬೈದಾ ಅವರಿಗೆ ಫೋನ್ ಮಾಡಿ ಮಾತನಾಡುವಾಗ, ಗಂಡನ ಮನೆಯಲ್ಲಿ ಮಾವ ಅಲವಿ, ಅತ್ತೆ ಆಯಿಷಾ ಹಾಗೂ ನಾದಿನಿ ಫಸೀಲಾ ತನಗೆ ಮಾನಸಿಕ ಮತ್ತು ದೈಹಿಕವಾಗಿ ತೀವ್ರ ಕಿರುಕುಳ ನೀಡುತ್ತಿದ್ದಾರೆಂದು ಅಳಲು ತೋಡಿಕೊಂಡಿದ್ದರು. ತಾಯಿ-ಮಗಳ ಸಂಭಾಷಣೆ ನಡೆಯುತ್ತಿದ್ದಂತೆಯೇ…
ಬಂಟ್ವಾಳ, ಜು. 23 ; ಬರಿಮಾರು ಸಮೀಪದ ಕಲ್ಲೆಟ್ಟಿ ಶ್ರೀ ಕನಲ್ತಾಯ ದೈವಸ್ಥಾನದ ಬಳಿ ಬುಧವಾರ ಸಂಜೆ ಚಲಿಸುತ್ತಿದ್ದ ಶಾಲಾ ಬಸ್ ಮೇಲೆ ಬೃಹತ್ ಮರವೊಂದು ಉರುಳಿ ಬಿದ್ದ ಪರಿಣಾಮ ಯುಕೆಜಿ ವಿದ್ಯಾರ್ಥಿನಿಯೊಬ್ಬಳು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಮೃತ ವಿದ್ಯಾರ್ಥಿನಿಯನ್ನು ಕಲ್ಲಡ್ಕದ ಶ್ರೀ ರಾಮ ಶಾಲೆಯ ವಿದ್ಯಾರ್ಥಿನಿ ಪೆರ್ನೆ ನಿವಾಸಿ ಚಂದ್ರಶೇಖರ್ ಅವರ ಪುತ್ರಿ ಚಿರನ್ವಿ (5) ಎಂದು ಗುರುತಿಸಲಾಗಿದೆ. ಪ್ರಾಥಮಿಕ ವರದಿಗಳ ಪ್ರಕಾರ, ಇತರ ನಾಲ್ಕು ಮಕ್ಕಳು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.ಶಾಲಾ ಸಮಯದ ನಂತರ ವಿದ್ಯಾರ್ಥಿಗಳನ್ನು ಮನೆಗೆ ಕರೆದೊಯ್ಯುತ್ತಿದ್ದಾಗ ಈ ದುರಂತ ಸಂಭವಿಸಿದೆ. ಬಲವಾದ ಗಾಳಿ ಮತ್ತು ಭಾರೀ ಮಳೆಯಿಂದಾಗಿ ರಸ್ತೆ ಬದಿಯ ಬೃಹತ್ ಮರವು ಇದ್ದಕ್ಕಿದ್ದಂತೆ ಬಸ್ ಮೇಲೆ ಬಿದ್ದು, ಅದರ ಮುಂಭಾಗ ಸಂಪೂರ್ಣವಾಗಿ ಜಖಂ ಆಗಿದೆ.ಘಟನೆ ಸಂಭವಿಸಿದ ತಕ್ಷಣ, ಸ್ಥಳೀಯರು ಸ್ಥಳಕ್ಕೆ ಧಾವಿಸಿ, ರಕ್ಷಣಾ ಕಾರ್ಯಾಚರಣೆಯನ್ನು ಆರಂಭಿಸಿ, ಮಕ್ಕಳನ್ನು ನಜ್ಜುಗುಜ್ಜಾದ ವಾಹನದಿಂದ ಹೊರತೆಗೆಯಲಾಗಿದೆ. ತೀವ್ರವಾಗಿ ಗಾಯಗೊಂಡ ಚಿರನ್ವಿಯನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಚಿಕಿತ್ಸೆಗೆ ಸ್ಪಂದಿಸದೆ ಬಾಲಕಿ ಕೊನೆಯುಸಿರೆಳೆದಿದ್ದಾಳೆ. ಗಾಯಗೊಂಡ…
ಮಂಗಳೂರು : ತ್ಯಾಖಾ ಅಹ್ಮದ್ ಮುಸ್ಲಿಯಾರ್ ಅವರ ನಿಧನದಿಂದ ತೆರವಾದ ದಕ್ಷಿಣ ಕನ್ನಡ ಜಿಲ್ಲಾ ಖಾಝಿ ಹುದ್ದೆಗೆ ಪಾಣಕ್ಕಾಡ್ ಸೈಯ್ಯದ್ ನಾಸರ್ ಅಬ್ದುಲ್ ಹಯ್ ಶಿಹಾಬುದ್ದೀನ್ ತಂಙಳ್ ಅವರು ಬುಧವಾರ ಅಧಿಕಾರ ಸ್ವೀಕರಿಸಿದರು. ಕೇರಳದ ಮಲಪ್ಪುರಂ ಜಿಲ್ಲೆಯ ಪೂವಾಡ್ ಮೂಲದ ತಂಜಳ್ ಅವರು ಧಾರ್ಮಿಕ ಶಿಕ್ಷಣ ಕ್ಷೇತ್ರದಲ್ಲಿ ದೀರ್ಘ ಅನುಭವ ಹೊಂದಿದ್ದು, ಹಲವು ಮಸೀದಿಗಳು ಹಾಗೂ ಶಿಕ್ಷಣ ಸಂಸ್ಥೆಗಳಲ್ಲಿ ಖತೀಬ್, ಮುದರ್ರಿಸ್ ಮತ್ತು ಖಾಝಿಯಾಗಿ ಸೇವೆ ಸಲ್ಲಿಸಿದ್ದಾರೆ. 2009ರಿಂದ ಕಲ್ಲಿಕೋಟೆಯ ಗ್ರಾಂಡ್ ಖಾಝಿಯಾಗಿ ಕಾರ್ಯನಿರ್ವಹಿಸುತ್ತಿರುವ ಅವರು, ಪ್ರಸ್ತುತ ಕಲ್ಲಿಕೋಟೆ, ಮಲಪ್ಪುರಂ, ಪಾಲಕ್ಕಾಡ್ ಹಾಗೂ ತ್ರಿಶೂರ್ ಜಿಲ್ಲೆಗಳ 370ಕ್ಕೂ ಹೆಚ್ಚು ಮೊಹಲ್ಲಾಗಳ ಖಾಝಿಯಾಗಿದ್ದಾರೆ. ವಯನಾಡಿನ ಇಮಾಮ್ ಗಝಾಲಿ ಅಕಾಡೆಮಿ ಹಾಗೂ ರಶೀದಿಯಾ ಅರಬಿಕ್ ಕಾಲೇಜಿನ ಪ್ರಾಂಶುಪಾಲರಾಗಿರುವ ತಂಜಳ್ ಅವರು, ಸುನ್ನಿ ಮಹಲ್ಸ್ ಫೆಡರೇಶನ್, ಜಿಲ್ಲಾ ಮಸ್ಲಹತ್ ಸಮಿತಿ ಸೇರಿದಂತೆ ಹಲವು ಧಾರ್ಮಿಕ ಹಾಗೂ ಸಾಮಾಜಿಕ ಸಂಘಟನೆಗಳಲ್ಲಿ ಪ್ರಮುಖ ಜವಾಬ್ದಾರಿಗಳನ್ನು ನಿರ್ವಹಿಸುತ್ತಿದ್ದಾರೆ. ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಸಯ್ಯದುಲ್ ಉಮ್ಮ ಸ್ವಾಧಿಕ್ ಅಲಿ ಶಿಹಾಬ್ ತಂಜಳ್, ಸಮಸ್ತ…
ಚಿಕ್ಕಬಳ್ಳಾಪುರ, ಜು. 22 : ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂಪೂರ್ಣ ಜವಾಬ್ದಾರಿ ಹೊರಬೇಕು ಎಂದು ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಆಗ್ರಹಿಸಿದರು. ಚಿಕ್ಕಬಳ್ಳಾಪುರ ಜಿಲ್ಲಾ ಪ್ರವಾಸದ ವೇಳೆ ಜಿಲ್ಲಾ ಯೂತ್ ಕಾಂಗ್ರೆಸ್ ವತಿಯಿಂದ ಹಮ್ಮಿಕೊಂಡಿದ್ದ ʼನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ’ ಪ್ರತಿಭಟನೆಯಲ್ಲಿ ಅವರು ಭಾಗವಹಿಸಿ ಮಾತನಾಡಿದ ಅವರು, ಪ್ರಶ್ನೆಪತ್ರಿಕೆಗಳು ಸೋರಿಕೆಯಾಗುತ್ತವೆ ಎಂದರೆ ಏನರ್ಥ? ಇದರಿಂದ ವಿದ್ಯಾರ್ಥಿಗಳ ಭವಿಷ್ಯ ಹಾಳಾಗುತ್ತದೆ ಎಂಬ ಅರಿವಿಲ್ಲವೇ? ಇದನ್ನು ಪ್ರಶ್ನಿಸುವುದು ನಮ್ಮ ಹಕ್ಕು ಎಂದು ಎಂದು ಆಕ್ರೋಶ ಹೊರಹಾಕಿದ್ದಾರೆ. ನಿನ್ನೆ ನವದೆಹಲಿಯಲ್ಲಿ ಶಾಂತಿಯುತವಾಗಿ ಪ್ರತಿಭಟಿಸುತ್ತಿದ್ದ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಸೇರಿದಂತೆ ಇತರೆ ಕಾಂಗ್ರೆಸ್ ಮುಖಂಡರನ್ನು ಬಂಧಿಸಿದ್ದಾರೆ. ವಿದ್ಯಾರ್ಥಿಗಳ ಪರವಾಗಿ ನಿಂತು ಪ್ರಶ್ನಿಸುವವರನ್ನೇ ಬಂಧಿಸುವುದು ಎಷ್ಟರ ಮಟ್ಟಿಗೆ ಸರಿ ಎಂದು ಪ್ರಶ್ನಿಸಿದರು.ಮೊದಲು CET ಪರೀಕ್ಷೆಯನ್ನು ರಾಜ್ಯ ಸರ್ಕಾರವೇ ನಡೆಸುತ್ತಿತ್ತು. ಆ ಸಮಯದಲ್ಲಿ ಯಾವುದೇ ಸಮಸ್ಯೆಯಾಗದಂತೆ ಪರೀಕ್ಷೆ ನಡೆಯುತ್ತಿತ್ತು. ನಾನು ಉನ್ನತ ಶಿಕ್ಷಣ ಸಚಿವನಾಗಿದ್ದಾಗಲೂ ಅನೇಕ ವಿದ್ಯಾರ್ಥಿಗಳು…
ಮಂಗಳೂರು, ಜು.22: ದೆಹಲಿಯಲ್ಲಿ ‘ಸಂಸತ್ ಮಾರ್ಚ್’ ನಡೆಸುತ್ತಿದ್ದ ಶಾಂತಿಯುತ ವಿದ್ಯಾರ್ಥಿಗಳ ಮೇಲೆ ಪೊಲೀಸರು ಲಾಠಿಚಾರ್ಜ್ ನಡೆಸಿ ಕಣ್ಣೀರಿನ ಅನಿಲ ಪ್ರಯೋಗ ಮಾಡಿರುವ ಘಟನೆಗೆ ಅಖಿಲ ಭಾರತ ಕ್ರೈಸ್ತ ಒಕ್ಕೂಟ (AICU) ಕರ್ನಾಟಕ ರಾಜ್ಯ ಘಟಕ ತೀವ್ರ ಖಂಡನೆ ವ್ಯಕ್ತಪಡಿಸಿದೆ. ಎಐಸಿಯು ಕರ್ನಾಟಕ ರಾಜ್ಯದ ಅಧ್ಯಕ್ಷ ಅಲ್ವಿನ್ ಡಿ’ಸೋಜಾ, ಪಾನೀರ್ ಅವರು ಪ್ರಕಟಣೆ ನೀಡಿ, ಶಿಕ್ಷಣ ವ್ಯವಸ್ಥೆಯಲ್ಲಿ ಅಗತ್ಯ ಸುಧಾರಣೆಗಳನ್ನು ಒತ್ತಾಯಿಸಿ ಪ್ರಜಾಪ್ರಭುತ್ವದ ರೀತಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಬಲಪ್ರಯೋಗ ನಡೆಸಿರುವುದು ಪ್ರಜಾಪ್ರಭುತ್ವದ ಮೌಲ್ಯಗಳಿಗೆ ವಿರುದ್ಧವಾದ ಕ್ರಮ ಎಂದು ಹೇಳಿದ್ದಾರೆ. ದೇಶದ ಭವಿಷ್ಯವಾಗಿರುವ ವಿದ್ಯಾರ್ಥಿಗಳು ತಮ್ಮ ನ್ಯಾಯಸಮ್ಮತ ಬೇಡಿಕೆಗಳನ್ನು ಶಾಂತಿಯುತವಾಗಿ ಮುಂದಿಟ್ಟಿರುವಾಗ, ಅವರ ಧ್ವನಿಯನ್ನು ಸಂವಾದದ ಮೂಲಕ ಆಲಿಸುವ ಬದಲು ಬಲಪ್ರಯೋಗದಿಂದ ಹತ್ತಿಕ್ಕಿರುವುದು ಅತ್ಯಂತ ದುಃಖಕರ ಬೆಳವಣಿಗೆಯಾಗಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಘಟನೆಯಲ್ಲಿ ಗಾಯಗೊಂಡ ಹಾಗೂ ದಮನಕ್ಕೆ ಒಳಗಾದ ಎಲ್ಲಾ ವಿದ್ಯಾರ್ಥಿಗಳೊಂದಿಗೆ ಎಐಸಿಯು ಕರ್ನಾಟಕ ಸಂಪೂರ್ಣ ಐಕ್ಯತೆ ವ್ಯಕ್ತಪಡಿಸುತ್ತಿದ್ದು, ಪಾರದರ್ಶಕ ಹಾಗೂ ನ್ಯಾಯಯುತ ಶಿಕ್ಷಣ ವ್ಯವಸ್ಥೆಗಾಗಿ ವಿದ್ಯಾರ್ಥಿಗಳು ನಡೆಸುತ್ತಿರುವ ಹೋರಾಟಕ್ಕೆ ತಮ್ಮ…

